ಬ್ರೆಸಿಲಿಯಾ: ಬ್ರೆಜಿಲ್‌ನ (Brazil) ಅಮೆಜಾನ್ (Amazon) ಪ್ರದೇಶದಲ್ಲಿ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದ್ದು (Plane Crash), ಒಂದು ಮಗು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.
ವಾಯುವ್ಯ ರಾಜ್ಯವಾದ ಎಕರೆ (Acre) ಸರ್ಕಾರದ ಹೇಳಿಕೆಯ ಪ್ರಕಾರ, ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಎಕರೆ ರಾಜ್ಯದ ರಾಜಧಾನಿ ರಿಯೊ ಬ್ರಾಂಕೊದಲ್ಲಿನ (Rio Branco) ಮುಖ್ಯ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿದೆ. ಇದನ್ನೂ ಓದಿ: ಶ್ರೀಲಂಕಾ ನೌಕಾಪಡೆಯಿಂದ 37 ಭಾರತೀಯ ಮೀನುಗಾರರ ಬಂಧನ – 5 ದೋಣಿಗಳು ವಶ
ಘಟನೆಯಲ್ಲಿ ಒಂಬತ್ತು ವಯಸ್ಕರು ಮತ್ತು ಒಂದು ಮಗು ಸೇರಿದಂತೆ ಒಟ್ಟು ಹತ್ತು ಪ್ರಯಾಣಿಕರು ಮತ್ತು ಪೈಲಟ್ ಹಾಗೂ ಸಹ ಪೈಲಟ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ತಿಳಿಸಿದೆ. ಇದನ್ನೂ ಓದಿ: ಹಾಟ್‍ಟಬ್‍ನಲ್ಲಿ ನಟ ಶವವಾಗಿ ಪತ್ತೆ
ಬ್ರೆಜಿಲ್‌ನ ಪೆರು ಮತ್ತು ಬೊಲಿವಿಯಾದ ಗಡಿಯ ಸಮೀಪವಿರುವ ದೂರದ ಪ್ರದೇಶದಲ್ಲಿ ವಿಮಾನ ಪತನವಾಗಿದ್ದು, ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಅನೇಕ ಪ್ರಯಾಣಿಕರು ವೈದ್ಯಕೀಯ ಆರೈಕೆಯ ನಂತರ ನೆರೆಯ ಅಮೆಜಾನಾಸ್ ರಾಜ್ಯಕ್ಕೆ ಮರಳುತ್ತಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಇದನ್ನೂ ಓದಿ: ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಅವಘಡ – 32 ಮಂದಿ ಸಜೀವ ದಹನ
ನವದೆಹಲಿ: ಸೆಪ್ಟೆಂಬರ್ 8-10 ರಂದು ದೆಹಲಿಯಲ್ಲಿ (Delhi) ವಾಣಿಜ್ಯ ಸೇವೆಗಳನ್ನು ನಿಲ್ಲಿಸಿರುವುದರಿಂದ ಕ್ಲೌಡ್ ಕಿಚನ್‌ಗಳು, ಹೋಟೆಲ್‌ಗಳು ಬಂದ್ ಇರಲಿದ್ದು ಆನ್‌ಲೈನ್ ಫುಡ್ ಡೆಲಿವರಿ (Food Delivery) ಇರುವುದಿಲ್ಲ. ಇದರ ಜೊತೆಗೆ ಅಮೆಜಾನ್, ಫ್ಲಿಪ್‌ಕಾರ್ಟ್‌ನಂತಹ ಹೋಂ ಡೆಲಿವರಿ (Home Delivery) ಸರ್ವಿಸ್‌ಗಳನ್ನೂ ಅನುಮತಿಸಲಾಗುವುದಿಲ್ಲ ಎಂದು ವಿಶೇಷ ಪೊಲೀಸ್ ಆಯುಕ್ತ ಎಸ್‌ಎಸ್ ಯಾದವ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ನಗರದಲ್ಲಿ 3 ದಿನ ಲಾಕ್‌ಡೌನ್ ಊಹಾಪೋಹವನ್ನು ತಳ್ಳಿಹಾಕಿದ್ದಾರೆ. ಜಿ20 ಶೃಂಗಸಭೆಯ ಸಮಯದಲ್ಲಿ ಯಾವುದೇ ಲಾಕ್‌ಡೌನ್ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೆಪ್ಟೆಂಬರ್ 7ರ ಮಧ್ಯರಾತ್ರಿಯಿಂದ ಸೆಪ್ಟೆಂಬರ್ 10 ರ ಮಧ್ಯರಾತ್ರಿಯವರೆಗೆ ದೆಹಲಿಗೆ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗುವುದು ಎಂದು ತಿಳಿಸಿದರು.
ದೆಹಲಿ ಸರ್ಕಾರವು ರಾಷ್ಟ್ರ ರಾಜಧಾನಿಯಲ್ಲಿ ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 10 ರವರೆಗೆ ಸಾರ್ವಜನಿಕ ರಜೆಯನ್ನು ಘೋಷಿಸಿದೆ. ನಗರದಲ್ಲಿನ ಅಂಗಡಿಗಳು, ವ್ಯಾಪಾರಗಳು ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಸೆಪ್ಟೆಂಬರ್ 8, 9 ಮತ್ತು 10 ರಂದು ತಮ್ಮ ಉದ್ಯೋಗಿಗಳು ಮತ್ತು ಕಾರ್ಮಿಕರಿಗೆ ವೇತನ ಸಹಿತ ರಜೆಯನ್ನು ನೀಡುವಂತೆ ಸರ್ಕಾರ ನಿರ್ದೇಶಿಸಿದೆ. ಇದನ್ನೂ ಓದಿ: ಜಿ20 ಸಭೆ – ಭದ್ರತೆಗಾಗಿ ದೆಹಲಿಯಲ್ಲಿ ಹಲವು ಮೆಟ್ರೋ ನಿಲ್ದಾಣಗಳು ಬಂದ್
ನವದೆಹಲಿ: ಇಲ್ಲಿ ನಡೆದ ಅಮೆಜಾನ್ (Amazon) ಕಂಪನಿಯ ಸೀನಿಯರ್ ಮ್ಯಾನೇಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಸತ್ಯ ಬಯಲಾಗಿದೆ. ಫಿಲ್ಮಿ ಡೈಲಾಗ್ ಹೇಳ್ಕೊಂಡು, ಇನ್‌ಸ್ಟಾಗ್ರಾಮ್‌ನಲ್ಲಿ ಗನ್ ಹಿಡಿದುಕೊಂಡು ಫೋಸ್ ಕೊಡುತ್ತಾ ಏನೂ ಗೊತ್ತೇಯಿಲ್ಲ ಎನ್ನುವವರಂತೆ ತಿರುಗುತ್ತಿದ್ದ 18 ವರ್ಷದ ಯುವಕನ ಗ್ಯಾಂಗ್ ಈ ಹತ್ಯೆ ಮಾಡಿದೆ ಎಂಬುದು ತನಿಖೆಯಲ್ಲಿ ಗೊತ್ತಾಗಿದೆ.
ಇನ್‌ಸ್ಟಾಗ್ರಾಮ್ (Instagram) ಖಾತೆಯಲ್ಲಿ 2 ಸಾವಿರ ಫಾಲೋವರ್ಸ್ಗಳನ್ನ ಹೊಂದಿರುವ 18ರ ಯುವಕ ಮೊಹಮ್ಮದ್ ಸಮೀರ್ ಅಲಿಯಾಸ್ ಮಾಯಾ, ನಾನು ಕುಖ್ಯಾತಿ, ಸ್ಮಶಾನವೇ ನನ್ನ ವಿಳಾಸ, ಇದು ನನಗೆ ಬದುಕುವ ವಯಸ್ಸು. ಆದ್ರೆ, ನಾನು ಸಾಯಲು ಬಯಸುತ್ತೇನೆ ಎಂದು ಆತ ಬರೆದುಕೊಂಡಿದ್ದಾನೆ. ಇದನ್ನೂ ಓದಿ: ಅಮೆಜಾನ್ ಸೀನಿಯರ್ ಮ್ಯಾನೇಜರ್‌ಗೆ ಗುಂಡಿಟ್ಟು ಹತ್ಯೆ!
ಬಂದೂಕುಗಳನ್ನ ಹಿಡಿದುಕೊಂಡು ಫೋಟೋ ತೆಗೆಸಿಕೊಂಡು ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದ ಸಮೀರ್, ಬಾಲಿವುಡ್ ಸಿನಿಮಾಗಳಿಂದ ಪ್ರಭಾವಿತನಾಗಿ 12 ಮಂದಿ ಅಪ್ರಾಪ್ತರನ್ನೂ ಸೇರಿಸಿಕೊಂಡು ತನ್ನದೇ ಗ್ಯಾಂಗ್ ಕಟ್ಟಿಕೊಂಡಿದ್ದ. ಅದಕ್ಕೆ `ಮಾಯಾ ಗ್ಯಾಂಗ್’ (Maya Gang) ಎಂದೂ ಹೆಸರಿಟ್ಟಿದ್ದ. ಈ ಪ್ರಕರಣದಲ್ಲಿ ಸಿಕ್ಕಿಕೊಳ್ಳುವುದಕ್ಕೂ ಮುನ್ನವೇ ಹಿಂದೆ ನಾಲ್ಕು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಈಶಾನ್ಯ ದೆಹಲಿಯ ಪೊಲೀಸರೆ ಈ ಗ್ಯಾಂಗ್ ಕಂಡು ಭಯಭೀತರಾಗಿದ್ದರು ಎಂದು ಹೇಳಲಾಗಿದೆ. ಇದೀಗ ಮ್ಯಾನೇಜರ್ ಹತ್ಯೆಗೆ ಸಂಬಂಧಿಸಿದಂತೆ ಮಾಯಾ ಮತ್ತು ಅವನ 18 ವರ್ಷದ ಸಹವರ್ತಿ ಬಿಲಾಲ್ ಗನಿ ಎಂಬಾತನನ್ನ ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಆಸ್ಟ್ರೇಲಿಯಾ ನೀತಿಗೆ ಬೇಸತ್ತು ತಾಯಿ ಆತ್ಮಹತ್ಯೆ – ಮಕ್ಕಳನ್ನು ಭಾರತಕ್ಕೆ ಕರೆತರಲು ದೆಹಲಿಯಲ್ಲಿ ಪ್ರತಿಭಟನೆ
ಏನಿದು ಕೇಸ್?
ಅಮೆಜಾನ್ ಕಂಪನಿಯ ಸೀನಿಯರ್ ಮ್ಯಾನೇಜರ್ ಹರ್ಪ್ರೀತ್ ಗಿಲ್ (36) ಎಂಬಾತನನ್ನ ದುಷ್ಕರ್ಮಿಗಳು ಗುಂಡಿಟ್ಟು ಕೊಲೆಗೈದ ಘಟನೆ ದೆಹಲಿಯಲ್ಲಿ ನಡೆದಿತ್ತು. ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದರು. ಆರೋಪಿಗಳಾದ ಮಾಯಾ, ಗನಿ ಮತ್ತು ಅವರ ಸಹಚರರಾದ ಸೊಹೈಲ್ (23), ಮೊಹಮ್ಮದ್ ಜುನೈದ್ (23) ಮತ್ತು ಅದ್ನಾನ್ (19) ಎರಡು ಸ್ಕೂಟರ್‌ಗಳಲ್ಲಿ ಪಾರ್ಟಿ ಮುಗಿಸಿ ಹಿಂದಿರುಗುತ್ತಿದ್ದರು. ಅದೇ ರಸ್ತೆಯಲ್ಲಿ ಗಿಲ್ ಮತ್ತು ಅವನ ಚಿಕ್ಕಪ್ಪ ಗೋವಿಂದ್ ಬರುತ್ತಿದ್ದರು. ರಸ್ತೆಯಲ್ಲಿ ಇವರಿಬ್ಬರ ವಾಹನಗಳು ಮುಖಾಮುಖಿಯಾದ ನಂತರ ದಾರಿ ಬಿಡುವ ವಿಚಾರಕ್ಕೆ ಜಗಳ ಶುರುವಾಗಿದೆ. ಬಳಿಕ ವಿಕೋಪಕ್ಕೆ ತಿರುಗಿ ಮಾಯಾ ಗ್ಯಾಂಗ್ ಹರ್ಪ್ರೀತ್ ಗಿಲ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗಿಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವನ ಚಿಕ್ಕಪ್ಪ ಗೋವಿಂದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ನಂತರ ಕೆಲವು ಆರೋಪಿಗಳನ್ನ ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಲವರು ಸ್ಕೂಟರ್‌ನಲ್ಲಿ ತೆರಳುವಾಗ ಮುಖ ಮುಚ್ಚಿಕೊಂಡಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರಿಸಿದ್ದಾರೆ.
ನವದೆಹಲಿ: ಅಮೆಜಾನ್ (Amazon) ಕಂಪನಿಯ ಸೀನಿಯರ್ ಮ್ಯಾನೇಜರ್ ನನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಲೆಗೈದ ಘಟನೆ ನವದೆಹಲಿಯಲ್ಲಿ ನಡೆದಿದೆ.
ಘಟನೆಯಲ್ಲಿ ಇನ್ನೊಬ್ಬ ವ್ಯಕ್ತಿಗೆ ಗಾಯಗಳಾಗಿವೆ. ಈ ಘಟನೆ ಮಂಗಳವಾರ ರಾತ್ರಿ 11.37ರ ಸುಮಾರಿಗೆ ನವದೆಹಲಿಯ ಭಜನ್‍ಪುರ ಪ್ರದೇಶದಲ್ಲಿ (Bhajanpura Area) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
#WATCH | Delhi | A 36-year-old man – Harpreet Gill – shot dead in Subhash Vihar, Bhajanpura and another man injured and admitted to a hospital after five youths on two-wheelers opened unprovoked firing at them before fleeing the spot. CCTV footage in the area are being scanned.… pic.twitter.com/EzuzvqX6at
ಮೃತನನ್ನು ಹರ್‌ಪ್ರೀತ್ ಗಿಲ್ (36) ಎಂದು ಗುರುತಿಸಲಾಗಿದ್ದು, ಇವರು ಭಜನ್‍ಪುರ ನಿವಾಸಿ. ಗಿಲ್ ಅಮೆಜಾನ್ ಕಂಪನಿಯಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಘಟನೆ ನಡೆದ ಕೂಡಲೇ ಗಿಲ್ ಅವರನ್ನು ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಗೆ ದಾಖಲಾಯಿಸಿತಾದರೂ ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇನ್ನು ಗಾಯಾಳು ಗೋವಿಂದ್ ಸಿಂಗ್ ಕೂಡ ಭಜನ್ ಪುರ ಪ್ರದೇಶದ ನಿವಾಸಿ. ಸದ್ಯ ಇವರು ಎಲ್‍ಎನ್‍ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಗಿಲ್ ಹಾಗೂ ಸಿಂಗ್ ಇಬ್ಬರೂ ಬೈಕಿನಲ್ಲಿ ಭಜನ್ ಪುರ ಪ್ರದೇಶದ ಸುಭಾಷ್ ವಿಹಾರ್ ಬಳಿ ತೆರಳುತ್ತಿದ್ದರು. ಈ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ಏಕಾಏಕಿ ಗುಂಡು ಹಾರಿಸಿದ್ದಾರೆ. ಪರಿಣಾಮ ಗಿಲ್ ತಲೆಗೆ ಗುಂಡು ತಗುಲಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ನೇಹಿತ ಸಿಂಗ್ ಬಲ ಕಿವಿಗೆ ಗುಂಡು ತಗುಲಿ ಗಾಯಗಳಾಗಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ತಾಲಿಬಾನ್ ಆಡಳಿತಕ್ಕೆ 2 ವರ್ಷ – ಮಹಿಳೆಯರ ಮೇಲೆ ಹೇರಿದ ನಿರ್ಬಂಧಗಳೇನು?
ಗುಂಡು ಹಾರಿ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ಏನು ಎಂಬುದು ತನಿಖೆ ಬಳಿಕವಷ್ಟೇ ತಿಳಿದುಬರಬೇಕಿದೆ.
ವಾಷಿಂಗ್ಟನ್: ತಾಯಿಯ ಅಮೆಜಾನ್ (Amazon) ಖಾತೆಯಿಂದ ಪುಟ್ಟ ಬಾಲಕಿ ಬರೋಬ್ಬರಿ 3 ಸಾವಿರ ಡಾಲರ್(ಅಂದಾಜು 2.47 ಲಕ್ಷ ರೂ.) ಮೌಲ್ಯದ ವಸ್ತುಗಳನ್ನು ಆರ್ಡರ್ (Order) ಮಾಡಿದ ಘಟನೆ ಅಮೇರಿಕದಲ್ಲಿ (America) ನಡೆದಿದೆ.
ಅಮೇರಿಕಾದ ಮ್ಯಾಸಾಚೂಸೆಟ್ಸ್‌ನಲ್ಲಿ ಈ ಘಟನೆ ನಡೆದಿದೆ. ಐದು ವರ್ಷದ ಲೀಲಾ ವರಿಸ್ಕೋ ಎಂಬ ಬಾಲಕಿ ಕಾರಿನಲ್ಲಿ ಮನೆಗೆ ಹೋಗುತ್ತಿದ್ದ ಸಂದರ್ಭ ತನ್ನ ತಾಯಿಯ ಮೊಬೈಲ್‌ನಲ್ಲಿ (Mobile) ಆಟವಾಡುತ್ತಿದ್ದಳು. ಹೀಗೆ ಆಟವಾಡುತ್ತಾ ಅರಿವಿಲ್ಲದೆ ತಾಯಿಯ ಅಮೆಜಾನ್ ಖಾತೆಯಿಂದ 3 ಸಾವಿರ ಡಾಲರ್ ಮೌಲ್ಯದ ವಸ್ತುಗಳನ್ನು ಆರ್ಡರ್ ಮಾಡಿದ್ದಳೆ. ಇದನ್ನೂ ಓದಿ: ರಂಜಾನ್ ಸಂದರ್ಭ ಸಂಗೀತ ನಿಷೇಧ – ಅಫ್ಘಾನಿಸ್ತಾನದ ಮಹಿಳಾ ರೇಡಿಯೋ ಸ್ಟೇಷನ್ ಮುಚ್ಚಿದ ತಾಲಿಬಾನ್
ಈ ಆರ್ಡರ್ 10 ಮೋಟಾರ್ ಸೈಕಲ್‌ಗಳು (Motar Cycle) ಹಾಗೂ 10 ಜೋಡಿ ಕೌಗರ್ಲ್ ಬೂಟುಗಳನ್ನು (Cowgirl Boots) ಒಳಗೊಂಡಿತ್ತು. ಅಮೆಜಾನ್ ಖಾತೆಯಿಂದ ಯಾರು ಆರ್ಡರ್ ಮಾಡಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ತಾಯಿ ಜೆಸ್ಸಿಕಾ ನ್ಯೂನ್ಸ್ ತನ್ನ ಅಮೆಜಾನ್ ಖಾತೆಯ ಹಿಸ್ಟರಿ ಪರಿಶೀಲಿಸಿದ್ದಾರೆ. ಈ ವೇಳೆ ಸತ್ಯಾಂಶ ಹೊರಬಂದಿದೆ. ಇದನ್ನೂ ಓದಿ: ಅಬ್ಬಾ..! ಇದೆಂಥಾ ಮೀನು? – ಡೆಡ್ಲಿ ಫಿಶ್ ಸೇವಿಸಿ ಮಹಿಳೆ ಸಾವು; ಕೋಮಾದಲ್ಲಿ ಪತಿ
ಮಗಳು ಅರಿವಿಲ್ಲದೇ ತನಗೆ ಬೇಕಾದ ಆಟಿಕೆಗಳು ಹಾಗೂ ಬೂಟುಗಳನ್ನು ಆಯ್ಕೆ ಮಾಡಿ ಅಮೆಜಾನ್ ಅಪ್ಲಿಕೇಷನ್‌ನಲ್ಲಿ ‘ಬಯ್ ನೌ’ (Buy Now) ಎಂಬುವುದರ ಮೇಲೆ ಕ್ಲಿಕ್ ಮಾಡಿದ್ದಾಳೆ ಎಂದು ತಾಯಿ ಜೆಸ್ಸಿಕಾ ನ್ಯೂನ್ಸ್ ಸ್ಪಷ್ಟನೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಬೂಟುಗಳು ಹಾಗೂ ಅರ್ಧದಷ್ಟು ಮೋಟಾರ್ ಸೈಕಲ್‌ಗಳನ್ನು ರದ್ದುಗೊಳಿಸಿದ್ದೇನೆ. ಆದರೆ ಉಳಿದ ಐದು ಮೋಟಾರ್ ಸೈಕಲ್‌ಗಳು ಹಾಗೂ ಒಂದು ಜೀಪ್ ಅದಾಗಲೇ ಶಿಪ್ (Ship) ಆಗಿದ್ದರಿಂದ ಅದನ್ನು ರದ್ದುಗೊಳಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಟಲಿಯಲ್ಲಿ ಇಂಗ್ಲಿಷ್ ಭಾಷೆ ಬ್ಯಾನ್ – ಸಂವಹನ ನಡೆಸಿದರೆ ಭಾರೀ ದಂಡ
ವಾಷಿಂಗ್ಟನ್: ಇ-ಕಾಮರ್ಸ್ ದೈತ್ಯ ಅಮೆಜಾನ್ (Amazon) ಈ ವರ್ಷದ 2ನೇ ಸುತ್ತಿನ ಉದ್ಯೋಗಿಗಳ ಕಡಿತವನ್ನು ಘೋಷಿಸಿದೆ. ಕಳೆದ ಬಾರಿ 18,000 ಉದ್ಯೋಗಿಗಳನ್ನು ಕಡಿತಗೊಳಿಸುವುದಾಗಿ ತಿಳಿಸಿದ್ದ ಅಮೆಜಾನ್ ಈ ಬಾರಿ 9,000 ಉದ್ಯೋಗಿಗಳನ್ನು (Employees) ವಜಾಗೊಳಿಸುವುದಾಗಿ (Layoffs) ಹೇಳಿದೆ.
ಅಮೆಜಾನ್ ಸಿಇಒ ಆಂಡಿ ಜಾಸ್ಸಿ ತನ್ನ ಉದ್ಯೋಗಿಗಳಿಗೆ ಪತ್ರ ಬರೆದು, ವಜಾಗೊಳಿಸುತ್ತಿರುವ ಬಗ್ಗೆ ತಿಳಿಸಿದ್ದಾರೆ. ಈ ಮೂಲಕ ಕಳೆದ 3 ತಿಂಗಳುಗಳಿಂದ ಕಂಪನಿ 27,000ಕ್ಕೂ ಅಧಿಕ ಉದ್ಯೋಗಿಗಳನ್ನು ಕಡಿತಗೊಳಿಸುತ್ತಿದೆ. ಇದು ಕಂಪನಿಯ ಇತಿಹಾಸದಲ್ಲೇ ಅತಿ ದೊಡ್ಡ ವಜಾ ಆಗಿದೆ.
ಅನಿಶ್ಚಿತ ಆರ್ಥಿಕತೆ ಹಾಗೂ ಭವಿಷ್ಯದ ಕಾರಣದಿಂದ ಕಂಪನಿ ತನ್ನ ವೆಚ್ಚಗಳನ್ನು ಹೆಚ್ಚು ಸುವ್ಯವಸ್ಥಿತವಾಗಿಡಲು ಯೋಜಿಸುತ್ತಿದೆ. ಇದರ ಪರಿಣಾಮವಾಗಿ ಕಂಪನಿಯ ಕೆಲ ಸ್ಥಾನಗಳನ್ನು ತೆಗೆದುಹಾಕಲಾಗುತ್ತಿದೆ. ಈ ಹಿಂದೆ ಘೋಷಿಸಲಾಗಿದ್ದ 18,000 ಉದ್ಯೋಗಿಗಳ ವಜಾದೊಂದಿಗೆ 9,000 ಉದ್ಯೋಗಿಗಳ ಕಡಿತವನ್ನೂ ಮಾಡಲಾಗುತ್ತಿದೆ ಎಂದು ಆಂಡಿ ಜಾಸ್ಸಿ ತಮ್ಮ ಉದ್ಯೋಗಿಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಐಫೋನ್ ತಯಾರಿಸುವ ಫಾಕ್ಸ್‌ಕಾನ್ ಸೇರಿ 18 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ
ವಜಾಗೊಳ್ಳುತ್ತಿರುವ ಉದ್ಯೋಗಿಗಳಿಗಾಗಿ ಕಂಪನಿ ಪಾವತಿ, ಆರೋಗ್ಯ ವಿಮೆಯ ಪ್ರಯೋಜನ ಹಾಗೂ ಬಾಹ್ಯ ಉದ್ಯೋಗ ನಿಯೋಜನೆಗೆ ಬೆಂಬಲ ಸೇರಿದಂತೆ ಹಲವು ಭರವಸೆಗಳನ್ನೂ ನೀಡಲಾಗಿದೆ. ಆದರೆ ಇತ್ತೀಚೆಗೆ ವಿಶ್ವದ ಜನಪ್ರಿಯ ಬೃಹತ್ ಕಂಪನಿಗಳು ಈ ರೀತಿ ಉದ್ಯೋಗ ಕಡಿತಗಳನ್ನು ನಡೆಸುತ್ತಿರುವುದು ಭಾರೀ ಆತಂಕ ಮೂಡಿಸುತ್ತಿದೆ.
2022ರಲ್ಲಿ 11,000 ಉದ್ಯೋಗಿಗಳನ್ನು ವಜಾಗೊಳಿಸಿದ್ದ ಫೇಸ್‌ಬುಕ್ ಕಳೆದ ವಾರವಷ್ಟೇ ಮತ್ತೆ 10,000 ಸಿಬ್ಬಂದಿಯನ್ನು ತೆಗೆದುಹಾಕುವುದಾಗಿ ಹೇಳಿದೆ. ಈ ಮೂಲಕ ಫೇಸ್‌ಬುಕ್ 2ನೇ ಸುತ್ತಿನ ವಜಾಗೆ ಕೈ ಹಾಕಿದ್ದು, ಅಮೆಜಾನ್ ಕೂಡಾ ಇಂತಹದ್ದೇ ತೀರ್ಮಾನಕ್ಕೆ ಬಂದಿದೆ. ಇದನ್ನೂ ಓದಿ: Breaking- ಉರಿಗೌಡ ನಂಜೇಗೌಡ ಬಗ್ಗೆ ಟ್ವೀಟ್: ನಟ ಚೇತನ್ ಬಂಧನ
ಬೆಂಗಳೂರು: ಕದ್ರಿ ದೇವಸ್ಥಾನವೇ (Kadri Temple) ಮಂಗಳೂರು (Mangaluru) ಕುಕ್ಕರ್ ಸ್ಫೋಟ (Cooker Bomb Blast) ಪ್ರಕರಣದ ಆರೋಪಿ ಶಾರೀಕ್‍ನ ಟಾರ್ಗೆಟ್ ಆಗಿತ್ತು ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ.
ಹೌದು. ಮಂಗಳೂರಿನ ಪಂಪ್‍ವೆಲ್, ರೈಲ್ವೇ ನಿಲ್ದಾಣ, ಆರ್‌ಎಸ್‌ಎಸ್ ಕಚೇರಿ ಶಾರೀಕ್‍ನ (Shariq) ಟಾರ್ಗೆಟ್ ಆಗಿರಬಹುದು ಎಂದು ಈ ಮೊದಲು ಅಂದಾಜಿಸಲಾಗಿತ್ತು. ಆದರೆ ಈಗ ಕದ್ರಿ ದೇವಸ್ಥಾನವೇ ಆತನ ಟಾರ್ಗೆಟ್ ಆಗಿತ್ತು ಎಂಬ ವಿಚಾರ ರಾಷ್ಟ್ರೀಯ ತನಿಖಾ ದಳದ (NIA) ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಜಿಲ್ಲಾಧಿಕಾರಿ ಕಚೇರಿಯಲ್ಲೇ ಮಕ್ಕಳ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಎರಡೂವರೆ ತಿಂಗಳ ಚಿಕಿತ್ಸೆಯ ಬಳಿಕ ಶಾರೀಕ್ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ಮಾರ್ಚ್ 6 ರಂದು ಬಿಡುಗಡೆಯಾಗಿದ್ದ. ಸದ್ಯ ಎನ್‍ಐಎ ಕಸ್ಟಡಿಯಲ್ಲಿರುವ ಶಾರೀಕ್‍ನನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಕದ್ರಿ ದೇವಸ್ಥಾನದ ಚಪ್ಪಲಿ ಸ್ಟ್ಯಾಂಡ್‍ನಲ್ಲಿ ಬಾಂಬ್ ಇಡಲು ಪ್ಲಾನ್ ಮಾಡಿದ್ದೆ ಎಂಬ ವಿಚಾರವನ್ನು ಶಾರೀಕ್ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಈಗ ಎನ್‍ಐಎ (NIA) ಅಧಿಕಾರಿಗಳು ಆರೋಪಿಯನ್ನು ಕರೆದೊಯ್ದು ಸ್ಥಳ ಮಹಜರು ಮಾಡಲು ಸಿದ್ದತೆ ನಡೆಸಿದ್ದಾರೆ. ಅದರ ಜೊತೆಯಲ್ಲಿ ಜೈಲಿನಲ್ಲಿರೋ ಮತ್ತಿಬ್ಬರು ಶಂಕಿತ ಉಗ್ರ ಮಾಜ್ ಹಾಗೂ ಯಾಸಿರ್‍ನನ್ನು ಕಸ್ಟಡಿಗೆ ಪಡೆಯುವ ನಿರ್ಧಾರ ಮಾಡಿದ್ದಾರೆ.
ಮಂಗಳೂರು ಪ್ರಕರಣದ ವಿಚಾರಣೆಯ ಬಳಿಕ ಶಾರೀಖ್‍ನನ್ನು ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಸಂಬಂಧ ವಿಚಾರಣೆ ನಡೆಸಲಿದೆ. ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಇದುವರೆಗೂ ಎಂಟು ಜನರನ್ನು ಬಂಧಿಸಿರೋ ಎನ್‍ಐಎ ತಂಡ ವಿಚಾರಣೆ ಪೂರ್ಣಗೊಳಿಸಿ ಚಾರ್ಜ್ ಶೀಟ್ ಸಲ್ಲಿಸಲು ಸಿದ್ದತೆ ನಡೆಸಿದೆ. ವಿಚಾರಣೆ ವೇಳೆ ಬಂಧಿತ ಆರೋಪಿಗಳು ಶಾರೀಖ್ ಕೈವಾಡದ ಬಗ್ಗೆಯೂ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಾರೀಖ್‍ಗೂ ಹಾಗೂ ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಸಂಬಂಧ ವಿಚಾರಣೆ ನಡೆಯಲಿದೆ. ನಂತರ ಮಾಜ್ ಹಾಗೂ ಯಾಸಿರ್‍ನನ್ನು ಭೇಟಿ ಮಾಡಿಸಲು ನಿರ್ಧರಿಸಿದೆ.
ತನಿಖೆಯಲ್ಲಿ ಬೇರೆ ಬೇರೆ ಸ್ನೇಹಿತರ ಹೆಸರು, ವಿಳಾಸ ಬಳಸಿ ಅಮೆಜಾನ್ ಮೂಲಕ ಸ್ಪೋಟಕ ಕಚ್ಚ ವಸ್ತು ಖರೀದಿಸಿದ್ದಾಗಿ ತಿಳಿದು ಬಂದಿದೆ. ಆರೋಪಿ ಬಳಿ ಸಿಕ್ಕ ಪ್ರೇಮ್ ರಾಜ್ ಹೆಸರಿನ ನಕಲಿ ಆಧಾರ್ ಕಾರ್ಡ್ ವಿಳಾಸ ಸಹ ಸ್ಪೋಟಕ ಸಾಮಗ್ರಿ ಖರೀದಿಗೆ ಬಳಕೆ ಮಾಡಿದ್ದ ಎಂದು ಮೂಲಗಳು ತಿಳಿಸಿವೆ.
ವಾಷಿಂಗ್ಟನ್: ಅಮೆರಿಕದ (US) ದಿ ವಾಲ್ಟ್ ಡಿಸ್ನಿ ಕಂಪನಿ (The Walt Disney Company), ವೆಚ್ಚದಲ್ಲಿ ಉಳಿತಾಯ ಮಾಡುವ ಸಲುವಾಗಿ ಏಕಾಏಕಿ 7 ಸಾವಿರ ಉದ್ಯೋಗಿಗಳನ್ನ ವಜಾಗೊಳಿಸಲು (Layoff) ಮುಂದಾಗಿದೆ. ಕಂಪನಿಗೆ ತಗಲುವ ವೆಚ್ಚ ಕಡಿಮೆ ಮಾಡಲು ಈ ನಿರ್ಧಾರ ಕೈಗೊಂಡಿದೆ.
ವಿಶ್ವದ ದೈತ್ಯ ಟೆಕ್ ಕಂಪನಿಗಳಲ್ಲಿ (Tech Company) ಸರಣಿಯಾಗಿ ಉದ್ಯೋಗಿಗಳನ್ನು (Employees) ಕೆಲಸದಿಂದ ತೆಗೆಯುವ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆ ಡಿಸ್ನಿ ಕೂಡಾ ಈ ನಿರ್ಧಾರ ಕೈಗೊಂಡಿದೆ. 2022ರ ನವೆಂಬರ್‌ನಲ್ಲಿ ಮಾಜಿ ಸಿಇಒ ಬಾಬ್ ಚಾಪೆಕ್ ಅವರಿಂದ ರಾಬರ್ಟ್ ಇಗರ್ (Robert Iger) ಅವರು ನೂತನ ಸಿಇಒ ಆಗಿ ಅಧಿಕಾರ ವಹಿಸಿಕೊಂಡ ನಂತರ ಕಂಪನಿಯ ಆರ್ಥಿಕ ವೆಚ್ಚ ಕಡಿತಗೊಳಿಸಲು ನಿರ್ಧರಿಸಿದ್ದು, ಅದಕ್ಕಾಗಿ ಉದ್ಯೋಗಿಗಳನ್ನ ಕಡಿತಗೊಳಿಸಲು ಮುಂದಾಗಿದ್ದಾರೆ.
ಡಿಸ್ನಿಯು ತನ್ನ ಪ್ರತಿಸ್ಪರ್ಧಿ ನೆಟ್‌ಫ್ಲಿಕ್ಸ್ ನಂತೆಯೇ (Netflix) ಚಂದಾದಾರರ ಬೆಳವಣಿಗೆಯಲ್ಲಿ ನಿಧಾನವಾಗಿದೆ. ಯುಎಸ್ ಮತ್ತು ಕೆನಡಾದಲ್ಲಿ ಕೇವಲ 2 ಲಕ್ಷ ಚಂದಾದಾರರನ್ನು ತಲುಪಿದ್ದು, ಒಟ್ಟು ಬಳಕೆದಾರರ ಸಂಖ್ಯೆ 46.6 ಮಿಲಿಯನ್‌ಗೆ ತಂದಿದೆ. ಹಾಟ್‌ಸ್ಟಾರ್ (Hotstar) ಹೊರತುಪಡಿಸಿ ಸ್ಟ್ರೀಮಿಂಗ್ ಸೇವೆಯು 12 ಲಕ್ಷ ಸದಸ್ಯರ ಸಂಖ್ಯೆಯಷ್ಟು ಹೆಚ್ಚಾಗಿದೆ. ಈ ನಡುವೆ ಇತರ ವೇದಿಕೆಗಳಾದ ಹುಲು ಮತ್ತು ಇಎಸ್‌ಪಿಎನ್ ಪ್ಲಸ್ ಬಳಕೆದಾರರಲ್ಲೂ ಕ್ರಮವಾಗಿ 8 ಮತ್ತು 6 ಲಕ್ಷ ಏರಿಕೆ ಕಂಡಿದೆ. ಇದನ್ನೂ ಓದಿ: 18 ಸಾವಿರಕ್ಕೂ ಅಧಿಕ ಉದ್ಯೋಗಿಗಳನ್ನು ವಜಾಗೊಳಿಸಲಿದೆ amazon
ಡಿಸ್ನಿ ತನ್ನ ತ್ರೈಮಾಸಿಕ ಬೆಳವಣಿಗೆಯನ್ನು ಗಮನಿಸಿದ ನಂತರ ಉದ್ಯೋಗಿಗಳನ್ನು ವಜಾಗೊಳಿಸುವ ನಿರ್ಧಾರ ಕೈಗೊಂಡಿದೆ. ವಿಶ್ವದಾದ್ಯಂತ ನಮ್ಮ ಉದ್ಯೋಗಿಗಳ ಪ್ರತಿಭೆಯ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಕಂಪನಿಯಾದ್ಯಂತ 5.5 ಶತಕೋಟಿ ಡಾಲರ್ ಉಳಿತಾಯದ ಗುರಿ ಹೊಂದಿದ್ದು, ಅದಕ್ಕಾಗಿ ಉದ್ಯೋಗಿಗಳ ಸಂಖ್ಯೆ ಕಡಿಮೆ ಮಾಡಲು ನಿರ್ಧರಿಸಲಾಗಿದೆ ಎಂದು ಸಿಇಒ ಹೇಳಿದ್ದಾರೆ.
ನಿರಂತರವಾಗಿ ಬೆಳವಣಿಗೆಯೊಂದಿಗೆ ಲಾಭದಾಯಕತೆ ಸಾಧಿಸುವುದು ನಮ್ಮ ಗುರಿಯಾಗಿದೆ. ಪ್ರಸ್ತುತ ನಮ್ಮ ಈ ನಿರ್ಧಾರದಿಂದ 2024 ಆರ್ಥಿಕ ವರ್ಷದ ವೇಳೆಗೆ ಡಿಸ್ನಿ ಪ್ಲಸ್ ಗರಿಷ್ಠ ಲಾಭದ ಗುರಿ ತಲುಪುತ್ತದೆ ಎಂದು ಇಗರ್ ಹೇಳಿದ್ದಾರೆ. ಆದರೆ, ಯಾವ ವಿಭಾಗಗಳಿಗೆ ಇದರ ಪರಿಣಾಮ ಬೀರುತ್ತದೆ ಅನ್ನುವ ಬಗ್ಗೆ ಬಹಿರಂಗಪಡಿಸಿಲ್ಲ. ಇದನ್ನೂ ಓದಿ: 1,337 ಕೋಟಿ ಪೈಕಿ ಶೇ.10 ರಷ್ಟು ದಂಡವನ್ನು ಠೇವಣಿ ಇಡಿ – ಗೂಗಲ್‌ಗೆ NCALT ಆದೇಶ
ಈಗಾಗಲೇ ಅಮೆಜಾನ್ 18 ಸಾವಿರ, ಸೇಲ್ಸ್‌ಫೋರ್ಸ್ 8 ಸಾವಿರ, ಮೈಕ್ರೋಸಾಫ್ಟ್ (Microsoft) 10 ಸಾವಿರ ಹಾಗೂ ಗೂಗಲ್ 12 ಸಾವಿರ ಸೇರಿದಂತೆ ವಿವಿಧ ಕಂಪನಿಗಳು ಕಳೆದ ಒಂದು ವಾರದಲ್ಲಿ 50 ಸಾವಿರಕ್ಕೂ ಅಧಿಕ ಉದ್ಯೋಗಿಗಳನ್ನ ಮನೆಗೆ ಕಳುಹಿಸಿದೆ.
Live Tv
[brid partner=56869869 player=32851 video=960834 autoplay=true]
ವಾಷಿಂಗ್ಟನ್: ಇ-ಕಾಮರ್ಸ್ ಕಂಪನಿ ಅಮೆಜಾನ್ (Amazon) ತನ್ನ ಉದ್ಯೋಗಿಗಳಿಗೆ (Employees) ಆಘಾತಕರ ಸುದ್ದಿ ನೀಡಿದೆ. ಕಂಪನಿ ಬರೋಬ್ಬರಿ 18,000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ (Layoff) ತಿಳಿಸಿದೆ.
ಕಂಪನಿ ಕಳೆದ ವರ್ಷ ನವೆಂಬರ್‌ನಲ್ಲಿ ತನ್ನ ಸುಮಾರು 10,000 ಉದ್ಯೋಗಿಗಳನ್ನು ವಜಾ ಮಾಡುವುದಾಗಿ ತಿಳಿಸಿತ್ತು. ಆದರೆ ಈ ಹಿಂದೆ ಯೋಜಿಸಿದಕ್ಕಿಂತಲೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗುತ್ತಿದೆ.
ಅನಿಶ್ಚಿತ ಆರ್ಥಿಕತೆ ಹಾಗೂ ಕೋವಿಡ್ ಸಂದರ್ಭದಲ್ಲಿ ಮಾಡಿಕೊಂಡಿದ್ದ ಅಧಿಕ ನೇಮಕಾತಿ ಅಂಶವನ್ನು ಉಲ್ಲೇಖಿಸಿ ಅಮೆಜಾನ್ ಉದ್ಯೋಗಿಗಳ ವಜಾ ನಿರ್ಧಾರವನ್ನು ಕೈಗೊಂಡಿದೆ. ನವೆಂಬರ್‌ನಲ್ಲಿ ಮಾಡಿಕೊಂಡಿದ್ದ ಕಡತವನ್ನು ಇಂದು ನಾವು ಹಂಚಿಕೊಳ್ಳುತ್ತಿದ್ದೇವೆ, ಕಂಪನಿಯಿಂದ 18,000 ಉದ್ಯೋಗಿಗಳನ್ನು ತೆಗೆದುಹಾಕುತ್ತಿದ್ದೇವೆ ಎಂದು ಸಿಇಒ ಆಂಡಿ ಜಾಸ್ಸಿ ಬುಧವಾರ ತಿಳಿಸಿರುವುದಾಗಿ ವರದಿಯಾಗಿದೆ.
ಉದ್ಯೋಗಿಗಳನ್ನು ತೆಗೆದುಹಾಕುತ್ತಿರುವ ನಿರ್ಧಾರ ಅವರನ್ನು ಕಷ್ಟಕ್ಕೆ ದೂಡುತ್ತದೆ ಎಂಬುದು ನಮಗೆ ತಿಳಿದಿದೆ. ಆದರೆ ನಾವು ಈ ಪ್ರಕ್ರಿಯೆಯನ್ನು ಲಘುವಾಗಿ ತಗೆದುಕೊಳ್ಳುತ್ತಿಲ್ಲ. ನಾವು ವಜಾಗೊಳಿಸುತ್ತಿರುವವರಿಗೆ ಬೆಂಬಲ ನೀಡುವ ಎಲ್ಲಾ ಪ್ರಯತ್ನಗಳನ್ನೂ ಮಾಡುತ್ತಿದ್ದೇವೆ. ಅವರಿಗೆ ಪ್ರತ್ಯೇಕ ಪಾವತಿ, ಆರೋಗ್ಯ ವಿಮೆಯ ಪ್ರಯೋಜನಗಳು, ಬಾಹ್ಯ ಉದ್ಯೋಗ ನಿಯೋಜನೆಗೆ ಬೆಂಬಲ ನೀಡುವ ಪ್ಯಾಕೇಜ್ ಅನ್ನು ಒದಗಿಸುವುದಾಗಿ ಜಾಸ್ಸಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಬಿಎಂಟಿಸಿ ವಜ್ರ ಬಸ್ ಪ್ರಯಾಣಿಕರಿಗೆ ಶಾಕ್ – ದರ ಹೆಚ್ಚಳ
ವಜಾಗೊಳ್ಳುತ್ತಿರುವ ಹೆಚ್ಚಿನ ಉದ್ಯೋಗಿಗಳು ಯುರೋಪ್‌ನವರಾಗಿದ್ದಾರೆ. ಜನವರಿ 18ರಂದು ವಜಾಗೊಳ್ಳುತ್ತಿರುವವರಿಗೆ ಈ ಬಗ್ಗೆ ತಿಳಿಸಲಿದ್ದೇವೆ. ನಮ್ಮ ತಂಡದ ಸದಸ್ಯರೊಬ್ಬರು ಈ ಬಗ್ಗೆ ಮಾಹಿತಿ ಸೋರಿಕೆ ಮಾಡಿರುವುದರಿಂದ ಈ ವಿಚಾರವನ್ನು ಹಠಾತ್ತನೆ ಘೋಷಣೆ ಮಾಡಬೇಕಾಯಿತು ಎಂದು ತಿಳಿಸಿದ್ದಾರೆ.
2020ರ ಆರಂಭದಿಂದ 2022ರ ಆರಂಭದ ನಡುವೆ ಅಮೆಜಾನ್ ತನ್ನ ಉದ್ಯೋಗಿಳನ್ನು ಜಾಗತಿಕವಾಗಿ ದ್ವಿಗುಣಗೊಳಿಸಿತ್ತು. ಕೋವಿಡ್ ಸಂದರ್ಭದಲ್ಲಿ ವಿತರಕರ ಬೇಡಿಕೆ ಹೆಚ್ಚಿದ್ದರಿಂದ ಇದನ್ನು ಪೂರೈಸಲು ಚಿಲ್ಲರೆ ವ್ಯಾಪಾರಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಿಕೊಂಡಿತ್ತು. ಕಂಪನಿ ಸೆಪ್ಟೆಂಬರ್ ಅಂತ್ಯದ ವೇಳೆಗೆ 15.40 ಲಕ್ಷ ಉದ್ಯೋಗಿಗಳನ್ನು ಹೊಂದಿತ್ತು. ಇದನ್ನೂ ಓದಿ: 1,337 ಕೋಟಿ ಪೈಕಿ ಶೇ.10 ರಷ್ಟು ದಂಡವನ್ನು ಠೇವಣಿ ಇಡಿ – ಗೂಗಲ್‌ಗೆ NCALT ಆದೇಶ
Live Tv
[brid partner=56869869 player=32851 video=960834 autoplay=true]
ವಾಷಿಂಗ್ಟನ್: ಆನ್‌ಲೈನ್‌ನಲ್ಲಿ ಶೂಗಳನ್ನು ಕೊಳ್ಳುವಾಗ ಎಲ್ಲರಿಗೂ ಒಂದು ಭಯ ಇರುತ್ತದೆ. ಶೂಗಳು ತಮ್ಮ ಪಾದಕ್ಕೆ ಹೊಂದಿಕೆಯಾಗುತ್ತೋ ಇಲ್ಲವೋ ಎಂದುಕೊಂಡ ಬಳಿಕ ಇಷ್ಟವಾಗದೇ ಹೋದರೆ ಅದನ್ನು ವಾಪಸ್ ಕಳುಹಿಸುವ ಜಂಜಾಟವೂ ಇರುತ್ತೆ. ಆದರೆ ಅಮೆಜಾನ್‌ನ ಹೊಸದೊಂದು ಫೀಚರ್ ಈ ಎಲ್ಲಾ ಸಮಸ್ಯೆಗೂ ಪರಿಹಾರವಾಗಿದೆ.
ಅಮೆಜಾನ್ ಹೊಸದಾಗಿ ಗ್ರಾಹಕರಿಗೆ ಶೂಗಳನ್ನು ವರ್ಚುವಲ್ ಆಗಿ ಟ್ರೈ ಮಾಡುವಂತಹ ಫೀಚರ್ ಅನ್ನು ಪರಿಚಯಿಸಿದೆ. ಇದರ ಮೂಲಕ ಗ್ರಾಹಕರು ಶೂಗಳನ್ನು ಕೊಳ್ಳುವುದಕ್ಕೂ ಮೊದಲು ವರ್ಚುವಲ್ ಆಗಿ ಕಾಲಿನಲ್ಲಿ ಹೇಗೆ ಹೊಂದಿಕೆಯಾಗುತ್ತದೆ ಎಂಬುದನ್ನು ಪರೀಕ್ಷಿಸಬಹುದು. ಈ ಮೂಲಕ ಶೂಗಳನ್ನು ಕೊಳ್ಳುವಾಗ ಒಳ್ಳೆಯ ನಿರ್ಧಾರ ತೆಗೆದುಕೊಳ್ಳಲು ಸಹಾಯವಾಗಲಿದೆ. ಇದನ್ನೂ ಓದಿ: ರಷ್ಯಾದಲ್ಲಿ ಉದ್ಯೋಗಿಗಳ ವಜಾ, ಕೆಲಸವನ್ನು ಸ್ಥಗಿತಗೊಳಿಸಿದ ಐಬಿಎಂ
ಅಮೆಜಾನ್‌ನ ಹೊಸ ವರ್ಚುವಲ್ ಟ್ರೈ-ಆನ್ ಫೀಚರ್ ಸಹಾಯದಿಂದ ಗ್ರಾಹಕರು ತಮ್ಮ ಮೊಬೈಲಿನಲ್ಲಿಯೇ ಶೂ ಪಾದಗಳಲ್ಲಿ ಹೇಗೆ ಕಾಣಿಸುತ್ತದೆ ಎಂಬುದನ್ನು ನೋಡಬಹುದು. ವರ್ಚುವಲ್ ಟ್ರೈ-ಆನ್ ಬಟನ್ ಟ್ಯಾಪ್ ಮಾಡಿದಾಗ ನಿಮ್ಮ ಫೋನ್ ಕ್ಯಾಮೆರಾ ಆನ್ ಆಗುತ್ತದೆ. ಅದನ್ನು ನಿಮ್ಮ ಕಾಲಿಗೆ ಪಾಯಿಂಟ್ ಮಾಡಿದಾಗ ನೀವು ಆಯ್ಕೆ ಮಾಡಿದ ಶೂಗಳು ಸ್ಕ್ರೀನ್‌ನಲ್ಲಿ ಕಾಲುಗಳಲ್ಲಿ ಹೇಗೆ ತೋರುತ್ತದೆ ಎಂಬುದನ್ನು ನೋಡಬಹುದು. ಬಳಕೆದಾರರು ತಮ್ಮ ಪಾದವನ್ನು ಬೇರೆ ಬೇರೆ ಕಡೆಗೆ ತಿರುಗಿಸುವುದರ ಮೂಲಕ ಶೂಗಳು ಬೇರೆ ಬೇರೆ ಆ್ಯಂಗಲ್‌ನಿಂದ ಹೇಗೆ ಕಾಣಿಸುತ್ತವೆ ಎಂಬುದನ್ನೂ ನೋಡಬಹುದು. ಇದನ್ನೂ ಓದಿ: ಮೊಬೈಲ್, ಲ್ಯಾಪ್‌ಟಾಪ್, ಕ್ಯಾಮೆರಾ ಎಲ್ಲದಕ್ಕೂ ಇನ್ಮುಂದೆ ಒಂದೇ ಚಾರ್ಜರ್!
ಸದ್ಯ ಅಮೆಜಾನ್‌ನ ಈ ಹೊಸ ಫೀಚರ್ ಅಮೆರಿಕ ಹಾಗೂ ಕೆನಡಾದಲ್ಲಿ ಮಾತ್ರವೇ ಲಭ್ಯವಿದ್ದು, ಐಒಎಸ್ ಬಳಕೆದಾರರು ಮಾತ್ರವೇ ಇದನ್ನು ಪರಿಶೀಲಿಸಬಹುದು. ಈ ಫೀಚರ್ ಜಾಗತಿಕವಾಗಿ ಲಭ್ಯವಾದಲ್ಲಿ, ಶೂ ಕೊಳ್ಳುವಾಗ ಎಲ್ಲಾ ಗ್ರಾಹಕರು ಎದುರಿಸುವ ಸಮಸ್ಯೆಗಳಿಗೆ ಕಡಿವಾಣ ಬೀಳುತ್ತೋ ಎಂಬುದನ್ನು ಕಾದು ನೋಡಬೇಕಿದೆ.