Tag: amazon jungle

  • ಅಮ್ಮ ಸಾಯುವ ಮುನ್ನ ನಮಗೆ ಈ ಮಾತು ಹೇಳಿದ್ದಳು..; ಅಮೆಜಾನ್‌ ಕಾಡಲ್ಲಿ ಸಿಲುಕಿದ್ದ ಮಕ್ಕಳ ಕರುಣಾಜನಕ ಕಥೆ ತೆರೆದಿಟ್ಟ ರಕ್ಷಣಾ ತಂಡ

    ಅಮ್ಮ ಸಾಯುವ ಮುನ್ನ ನಮಗೆ ಈ ಮಾತು ಹೇಳಿದ್ದಳು..; ಅಮೆಜಾನ್‌ ಕಾಡಲ್ಲಿ ಸಿಲುಕಿದ್ದ ಮಕ್ಕಳ ಕರುಣಾಜನಕ ಕಥೆ ತೆರೆದಿಟ್ಟ ರಕ್ಷಣಾ ತಂಡ

    – ರಕ್ಷಣಾ ತಂಡದವರನ್ನ ಕಂಡೊಡನೆ ಓಡಿ ಬಂದು “ಹಸಿವಾಗ್ತಿದೆ” ಎಂದಿದ್ದ ಮಕ್ಕಳು

    ಬೊಗೋಟಾ: ಅಮೆಜಾನ್‌ ದಟ್ಟ (Amazon Jungle) ಅರಣ್ಯದಲ್ಲಿ ವಿಮಾನ ಪತನವಾಗಿ 40 ದಿನಗಳ ನಂತರ ಜೀವಂತವಾಗಿ ಪತ್ತೆಯಾದ ನಾಲ್ವರು ಮಕ್ಕಳನ್ನು ರಕ್ಷಿಸಿದ ರಕ್ಷಣಾ ತಂಡದ ಸದಸ್ಯರು ಸಂದರ್ಶನ ನೀಡಿದ್ದಾರೆ. ಸಂದರ್ಶನದಲ್ಲಿ ಹಲವು ಸ್ವಾರಸ್ಯಕರ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

    ವಿಮಾನ ಅಪಘಾತದಿಂದಾಗಿ 13, 9, 5 ಮತ್ತು 1 ವರ್ಷದ ನಾಲ್ವರು ಮಕ್ಕಳು ಅಮೆಜಾನ್‌ ಕಾಡಿನಲ್ಲಿ ಸಿಲುಕಿಕೊಂಡಿದ್ದರು. ಒಂದು ತಿಂಗಳಿಗೂ ಹೆಚ್ಚ ದಿನಗಳ ಕಾಲ ಕಾಡಿನಲ್ಲಿ ಸಿಲುಕಿದ್ದ ಮಕ್ಕಳನ್ನು ರಕ್ಷಿಸಲಾಯಿತು. ಆಗ ಮಕ್ಕಳ ಆರೋಗ್ಯ ಸ್ಥಿತಿಗತಿ ಹೇಗಿತ್ತು? ಅವರು ಏನು ಹೇಳಿದರು ಎಂಬ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆ ಮಾತುಗಳು ನಿಜಕ್ಕೂ ಮನಕಲಕುವಂತಿದೆ. ಇದನ್ನೂ ಓದಿ: ರೋಚಕ ಘಟನೆ- ವಿಮಾನ ಪತನವಾಗಿ 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಜೀವಂತವಾಗಿ ಸಿಕ್ಕ 4 ಮಕ್ಕಳು

    ಮಕ್ಕಳ ಕರುಣಾಜನಕ ಸ್ಥಿತಿ ತೆರೆದಿಟ್ಟ ರಕ್ಷಣಾ ತಂಡ
    ಪುಟ್ಟ ಮಗುವನ್ನು ಎತ್ತಿಕೊಂಡಿದ್ದ ಲೆಸ್ಲಿ ನನ್ನನ್ನು ಕಂಡಾಕ್ಷಣ ಓಡಿ ಬಂದಳು. ಬಂದವಳೇ, “ನನಗೆ ಹಸಿವಾಗಿದೆ” ಎಂದಳು. ಇಬ್ಬರು ಹುಡುಗರಲ್ಲಿ ಒಬ್ಬ ಮಲಗಿದ್ದ. ಅವರು ಕೂಡ ಎದ್ದು ಬಂದು “ನಮ್ಮ ತಾಯಿ ಸತ್ತಿದ್ದಾರೆ” ಎಂದರು ಅಂತ ರಕ್ಷಣಾ ತಂಡದ ಸದಸ್ಯರಲ್ಲೊಬ್ಬರಾದ ನಿಕೋಲಸ್ ಒರ್ಡೊನೆಜ್ ಗೋಮ್ಸ್ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡರು.

    ಲೆಸ್ಲಿ ತಾಯಿ 4 ದಿನಗಳ ವರೆಗೆ ಜೀವಂತವಾಗಿದ್ದರು ಎನಿಸುತ್ತದೆ. ಆಕೆ ಸಾಯುವ ಮುನ್ನ, “ಮಕ್ಕಳೇ ನೀವು ಇಲ್ಲಿಂದ ಹೊರಡಿ. ನಿಮ್ಮ ತಂದೆ ಬಳಿಗೆ ಹೋಗಿ. ನಾನು ತೋರಿದ ಪ್ರೀತಿಯನ್ನೇ ಅವರೂ ನಿಮಗೆ ತೋರಿಸುತ್ತಾರೆ” ಎಂದು ಹೇಳಿದ್ದರಂತೆ ಅಂತ ಮತ್ತೊಬ್ಬ ಸದಸ್ಯ ಮ್ಯಾನುಯೆಲ್ ಮಿಲ್ಲರ್ ರಾನೋಕ್ ತಿಳಿಸಿದರು. ಇದನ್ನೂ ಓದಿ: ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೋ ಬೆರ್ಲುಸ್ಕೋನಿ ನಿಧನ

    ಮಕ್ಕಳು ತುಂಬಾ ನಿಶ್ಯಕ್ತರಾಗಿದ್ದರು. ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಟ್ಟಿ ಪದಾರ್ಥ ಸೇವಿಸಲು ಇನ್ನೂ ಅವರಿಂದ ಸಾಧ್ಯವಾಗುತ್ತಿಲ್ಲ. ಮಕ್ಕಳ ಆರೋಗ್ಯ ಸುಧಾರಿಸುತ್ತಿದೆ ಎಂದು ಸದಸ್ಯರು ಮಾಹಿತಿ ನೀಡಿದ್ದಾರೆ.

    ಮಕ್ಕಳು ಪತ್ತೆಯಾಗಿದ್ದು ಹೇಗೆ?
    ಮೇ 1 ರಂದು ವಿಮಾನ ಅಪಘಾತ ಸಂಭವಿಸಿತ್ತು. ಅದಾದ ಎರಡು ವಾರಗಳ ನಂತರ ಶೋಧ ತಂಡವು ಅಮೆಜಾನ್‌ ದಟ್ಟ ಕಾಡಿನಲ್ಲಿ ವಿಮಾನ ಪತ್ತೆ ಹಚ್ಚಿ ಪೈಲಟ್‌ ಸೇರಿದಂತೆ ಮೂವರ ಮೃತದೇಹಗಳನ್ನು ವಶಪಡಿಸಿಕೊಂಡಿತ್ತು. ಆದರೆ ಅವರೊಂದಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 4 ಮಕ್ಕಳು ಮಾತ್ರ ಪತ್ತೆಯಾಗಿರಲಿಲ್ಲ. ಇದನ್ನೂ ಓದಿ: ಜಗತ್ತಿನ ಅತ್ಯಂತ ಬಡರಾಷ್ಟ್ರ ಸೊಮಾಲಿಯಾದಲ್ಲಿ ಬಾಂಬ್ ಸ್ಫೋಟವಾಗಿ 25 ಮಕ್ಕಳು ಸಾವು

    ಮಕ್ಕಳ ಹುಡುಕಾಟದ ವೇಳೆ, ಅವರ ಹೆಜ್ಜೆ ಗುರುತು, ಅರ್ಧ ತಿಂದ ಹಣ್ಣುಗಳು ಸೇರಿ ಹಲವು ಕುರುಹುಗಳು ಪತ್ತೆಯಾಗಿತ್ತು. ಮಕ್ಕಳು ಬದುಕಿರುವ ನಿರೀಕ್ಷೆಯಲ್ಲಿಯೇ ಹುಟುಕಾಟ ತೀವ್ರಗೊಳಿಸಲಾಗಿತ್ತು. ಮಕ್ಕಳು ಹಸಿವಿನಿಂದ ಸಾಯಬಾರದು ಎಂಬ ಕಾರಣಕ್ಕೆ ಆಹಾರ ಪದಾರ್ಥಗಳು ಮತ್ತು ನೀರಿನ ಬಾಟಲಿಗಳನ್ನು ಕೂಡ ಹೆಲಿಕಾಪ್ಟರ್‌ ಮೂಲಕ ಅನೇಕ ಕಡೆ ಹಾಕಲಾಗಿತ್ತು.

    ಕೊನೆಗೆ ಅಪಘಾತ ನಡೆದ ಸ್ಥಳದ ಪಶ್ಚಿಮ ದಿಕ್ಕಿನಿಂದ ಸುಮಾರು 5 ಕಿಮೀ ದೂರದಲ್ಲಿ ಮಕ್ಕಳು ಸಿಕ್ಕರು.

  • ರೋಚಕ ಘಟನೆ- ವಿಮಾನ ಪತನವಾಗಿ 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಜೀವಂತವಾಗಿ ಸಿಕ್ಕ 4 ಮಕ್ಕಳು

    ರೋಚಕ ಘಟನೆ- ವಿಮಾನ ಪತನವಾಗಿ 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಜೀವಂತವಾಗಿ ಸಿಕ್ಕ 4 ಮಕ್ಕಳು

    ಬೊಗೋಟಾ: ವಿಮಾನ ಪತನವಾಗಿ (Plane Crash) 40 ದಿನಗಳ ಬಳಿಕ ಅಮೆಜಾನ್ ದಟ್ಟ ಅರಣ್ಯದಿಂದ (Amazon Jungle) ಮಗು ಸೇರಿದಂತೆ 4 ಮಕ್ಕಳನ್ನು (Children) ಜೀವಂತವಾಗಿ ರಕ್ಷಿಸಲಾಗಿದೆ ಎಂದು ಕೊಲಂಬಿಯಾದ (Colombia) ಸೇನಾಪಡೆ ತಿಳಿಸಿದೆ.

    ಏನಿದು ಘಟನೆ?: ಮೇ 1 ರಂದು 7 ಪ್ರಯಾಣಿಕರು ಹಾಗೂ ಒಬ್ಬ ಪೈಲಟ್ ಇದ್ದ ಸೆಸ್ನಾ ಸಿಂಗಲ್ ಎಂಜಿನ್‌ನ ಸಣ್ಣ ವಿಮಾನವೊಂದು ಎಂಜಿನ್ ವೈಫಲ್ಯದಿಂದಾಗಿ ಪತನವಾಗಿತ್ತು. ಘಟನೆಯ ಬಳಿಕ ಬದುಕುಳಿದವರಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಅಪಘಾತವಾಗಿ 2 ವಾರಗಳ ಬಳಿಕ ಅಮೆಜಾನ್ ದಟ್ಟ ಕಾಡಿನಲ್ಲಿ ಪತನವಾಗಿದ್ದ ವಿಮಾನವನ್ನು ಕಂಡುಹಿಡಿಯಲಾಗಿದ್ದು, ಮೂವರು ವಯಸ್ಕರ ಮೃತದೇಹಗಳನ್ನೂ ವಶಪಡಿಸಿಕೊಳ್ಳಲಾಯಿತು. ಆದರೆ ಅವರೊಂದಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 4 ಮಕ್ಕಳ ಪತ್ತೆ ಮಾತ್ರ ಎಲ್ಲಿಯೂ ಸಿಕ್ಕಿರಲಿಲ್ಲ.

    ನಾಪತ್ತೆಯಾಗಿದ್ದವರಲ್ಲಿ 13, 9, 4 ವರ್ಷ ಹಾಗೂ 11 ತಿಂಗಳ ಮಕ್ಕಳು ಸೇರಿದ್ದರು. ಎಲ್ಲ ಮಕ್ಕಳೂ ಒಡಹುಟ್ಟಿದವರಾಗಿದ್ದರು. ಕಾರ್ಯಾಚರಣೆ ವೇಳೆ ಕಾಡಿನಲ್ಲಿ ಮಕ್ಕಳ ಹೆಚ್ಚೆ ಗುರುತು, ಅರ್ಧ ತಿಂದ ಹಣ್ಣುಗಳು ಸೇರಿದಂತೆ ಹಲವು ಕುರುಹುಗಳು ಪತ್ತೆಯಾಗಿತ್ತು. ಹೀಗಾಗಿ ಮಕ್ಕಳು ಬದುಕಿರುವ ನಿರೀಕ್ಷೆಯಲ್ಲಿ ಹುಡುಕಾಟವನ್ನು ತೀವ್ರಗೊಳಿಸಲಾಯಿತು.

    ಮಕ್ಕಳನ್ನು ಪತ್ತೆಹಚ್ಚಲು ಕಾಡಿನಲ್ಲಿ ನಾಯಿಗಳು, 150 ಸೈನಿಕರು ಹುಡುಕಾಟ ನಡೆಸಿದರು. ಸ್ಥಳೀಯ ಬುಡಕಟ್ಟಿನ ಹತ್ತಾರು ಸ್ವಯಂಸೇವಕರೂ ಕಾರ್ಯಾಚರಣೆಯಲ್ಲಿ ಸಹಾಯ ಮಾಡಿದರು. ಬದುಕುಳಿದಿರೋ ಮಕ್ಕಳು ಮುಂದೆ ಸಾಗದಂತೆ ತಡೆಯಲು ಕಾಡಿನಾದ್ಯಂತ ಧ್ವನಿ ಸುರುಳಿಗಳನ್ನು ಪ್ರಸಾರ ಮಾಡಲಾಗಿತ್ತು. ಹಸಿವಿನಿಂದ ಅವರು ಸಾಯಬಾರದು ಎಂಬ ಕಾರಣಕ್ಕೆ ಆಹಾರ, ನೀರಿನ ಬಾಟಲಿಗಳನ್ನು ಹೆಲಿಕಾಪ್ಟರ್ ಮೂಲಕ ಮೇಲಿನಿಂದ ಕಾಡಿನೊಳಗಡೆ ಎಸೆಯಲಾಗಿತ್ತು. ಇದನ್ನೂ ಓದಿ: ಕರಾವಳಿಯಿಂದ 640 ಕಿ.ಮೀ ದೂರದಲ್ಲಿರೋ ಬಿಪರ್ಜೋಯ್ ಚಂಡಮಾರುತ – ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

    40 ದಿನಗಳ ಬಳಿಕ ಕೊನೆಗೂ ನಾಪತ್ತೆಯಾಗಿದ್ದ ಮಕ್ಕಳು ಜೀವಂತವಾಗಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೋ ಪೆಟ್ರೋ, ಇದೊಂದು ವಿಸ್ಮಯಕಾರಿ ಘಟನೆಯಾಗಿದೆ. ಹುಡುಕಾಟದ 40 ದಿನಗಳ ಬಳಿಕ ಸೇನಾಪಡೆ ಹಾಗೂ ಸ್ಥಳೀಯ ಜನರು ಮಕ್ಕಳನ್ನು ಪತ್ತೆ ಮಾಡಿದ್ದಾರೆ. ಕಷ್ಟದ ಪರಿಸ್ಥಿತಿಯಲ್ಲಿಯೂ ಮಕ್ಕಳು ದೈರ್ಯದಿಂದ ಬದುಕುಳಿಯುವ ಮಾರ್ಗಗಳನ್ನು ಕಂಡುಹಿಡಿದಿರುವುದನ್ನು ಇತಿಹಾಸ ನೆನಪಿನಲ್ಲಿಟ್ಟುಕೊಳ್ಳುತ್ತದೆ ಎಂದಿದ್ದಾರೆ.

    ಕೆಲ ದಿನಗಳ ಹಿಂದೆ ಪೆಟ್ರೋ ಟ್ವೀಟ್ ಮಾಡಿ ಮಕ್ಕಳು ಪತ್ತೆಯಾಗಿರುವುದಾಗಿ ಹೇಳಿದ್ದರು. ಮರುದಿನ ತಾವು ತಪ್ಪು ಮಾಹಿತಿ ನೀಡಿರುವುದಾಗಿ ತಿಳಿಸಿ, ಮಕ್ಕಳ ಕುರುಹುಗಳು ಕಾಡಿನಲ್ಲಿ ಪತ್ತೆಯಾಗಿರುವುದಾಗಿ ಸರಿಪಡಿಸಿಕೊಂಡಿದ್ದರು. ಇದನ್ನೂ ಓದಿ: ಉಡುಪಿಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ

  • ಅಮೇಜಾನ್ ಕಾಡಿಗೆ ನುಗ್ಗಲಿದ್ದಾರಂತೆ ನಿರ್ದೇಶಕ ರಾಜಮೌಳಿ

    ಅಮೇಜಾನ್ ಕಾಡಿಗೆ ನುಗ್ಗಲಿದ್ದಾರಂತೆ ನಿರ್ದೇಶಕ ರಾಜಮೌಳಿ

    ನ್ನೂ ಕೂಸೆ ಹುಟ್ಟಿಲ್ಲ ಆಗಲೇ ಕುಲಾಯಿ ಹೊಲೆಸುವಂತಹ ಕೆಲಸಗಳು ರಾಜಮೌಳಿ ಟೀಮ್ ನಿಂದ ಬರುತ್ತಿವೆ. ಆರ್.ಆರ್.ಆರ್ ಸಿನಿಮಾದ ನಂತರ ರಾಜಮೌಳಿ (Rajamouli) ಯಾವ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ ಎನ್ನುವುದಕ್ಕೆ ಉತ್ತರ ಸಿಕ್ಕಿದೆ. ಆ ಕೆಲಸ ಇನ್ನೂ ಶುರುವೇ ಆಗಿಲ್ಲ. ಆಗಲೇ ಆ ಸಿನಿಮಾದ ಚಿತ್ರೀಕರಣ ಎಲ್ಲಿ ನಡೆಯಲಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

    ಜ್ಯೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ಕಾಂಬಿನೇಷನ್ ಸಿನಿಮಾ ಮಾಡಿದ್ದ ರಾಜಮೌಳಿ, ಮುಂದಿನ ಚಿತ್ರಕ್ಕಾಗಿ ಮಹೇಶ್ ಬಾಬು (Mahesh Babu) ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ರಾಮಯಣ ಕಥೆಯಿಂದ ಸ್ಫೂರ್ತಿ ಪಡೆದ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಿದ್ದಾರಂತೆ ನಿರ್ದೇಶಕರು. ಈ ಸಿನಿಮಾವನ್ನು ಅಮೇಜಾನ್ ಕಾಡಿನಲ್ಲಿ ಚಿತ್ರೀಕರಿಸುವ ಪ್ಲ್ಯಾನ್ ಮಾಡಿದ್ದಾರಂತೆ. ಇದನ್ನೂ ಓದಿ:ಕನ್ನಡದ ನಟಿ ವಿಶಾಖ ಸಿಂಗ್‌ಗೆ ಅನಾರೋಗ್ಯ- ಆಸ್ಪತ್ರೆಗೆ ದಾಖಲು

    ಈ ಸಿನಿಮಾದ ಕಥೆಗಾಗಿಯೇ ಆರು ತಿಂಗಳು ಮೀಸಲಿಟ್ಟಿದ್ದಾರಂತೆ ರಾಜಮೌಳಿ. ತಂದೆಯೊಂದಿಗೆ ಸಾಕಷ್ಟು ಚರ್ಚೆ ಕೂಡ ಮಾಡಿದ್ದಾರಂತೆ. ಈ ಸಿನಿಮಾದ ಚಿತ್ರಕಥೆಯನ್ನು ರಾಜಮೌಳಿ ತಂದೆಯೇ ಬರಲಿದ್ದು, ಈ ಬಾರಿ ಚಿತ್ರವನ್ನು ವಿಶ್ವಮಟ್ಟಕ್ಕೆ ತಲುಪಿಸುವ ಪ್ಲ್ಯಾನ್ ಕೂಡ ಮಾಡಲಾಗಿದೆಯಂತೆ. ಪ್ಯಾನ್ ಇಂಡಿಯಾ ಚಿತ್ರಗಳ ಬಗ್ಗೆ ನಂಬಿಕೆಯೇ ಇಲ್ಲದ ಮಹೇಶ್ ಬಾಬು ಮೊದಲ ಬಾರಿಗೆ ಇಂಥದ್ದೊಂದು ಚಿತ್ರ ಮಾಡುತ್ತಿದ್ದಾರೆ.

    ಅಮೇಜಾನ್ (Amazon jungle) ಕಾಡಿನ ಬಗ್ಗೆ ಹೇಳಲೇಬೇಕಿಲ್ಲ. ಅದೊಂದು ದಟ್ಟ ಅರಣ್ಯ. ಅಪಾಯದ ಕಾಡು ಕೂಡ. ಈ ಕಾಡಿಗೆ ಹೋಗಿ ರಾಜಮೌಳಿ ಏನು ಮಾಡುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳದ್ದು. ರಾಜಮೌಳಿ ಅಂದರೆ, ದೊಡ್ಡ ಕನಸುಗಾರು. ಹೊಸ ರೀತಿಯಲ್ಲಿ ಏನಾದರೂ ಯೋಚನೆ ಮಾಡಿರುತ್ತಾರೆ. ಹಾಗಾಗಿ ಅವರ ಮುಂದಿನ ಸಿನಿಮಾ ಕಾಡಿನಲ್ಲಿ ಇರತ್ತಾ? ನಾಡಿನಲ್ಲಿ ಶೂಟ್ ಆಗತ್ತಾ ಕಾದು ನೋಡಬೇಕು.

  • ಅಮೆಜಾನ್ ಕಾಡಿನಲ್ಲಿ ಬೊಲಿವಿಯಾ ವಾಯುಪಡೆ ವಿಮಾನ ಪತನ – 6 ಮಂದಿ ಸಾವು

    ಅಮೆಜಾನ್ ಕಾಡಿನಲ್ಲಿ ಬೊಲಿವಿಯಾ ವಾಯುಪಡೆ ವಿಮಾನ ಪತನ – 6 ಮಂದಿ ಸಾವು

    ವಾಷಿಂಗ್ಟನ್: ಬೊಲಿವಿಯಾದ ವಾಯುಪಡೆಯ ವಿಮಾನ (Bolivian Airforce Plane) ಅಮೆಜಾನ್ ಅರಣ್ಯದಲ್ಲಿ ಪತನವಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ದಕ್ಷಿಣ ಅಮೆರಿಕಾದ ದೇಶ ಬೊಲಿವಿಯಾದ ಈಶಾನ್ಯದಲ್ಲಿರುವ ಬೆನಿ ಪ್ರದೇಶದ ಅಮೆಜಾನ್ ಕಾಡಿನಲ್ಲಿ ಶನಿವಾರ ಈ ದುರಂತ ನಡೆದಿದೆ. ಬೊಲಿವಿಯಾದ ಆರೋಗ್ಯ ಸಚಿವಾಲಯದ ಡೆಂಗ್ಯೂ-ಚಿಕೂನ್‍ಗುನ್ಯಾ ಕಾರ್ಯಕ್ರಮದ ನಾಲ್ವರು ಆರೋಗ್ಯಾಧಿಕಾರಿಗಳನ್ನು ರಿಬೆರಾಲ್ಟಾದಿಂದ ಕೋಬಿಜಾಗೆ ಕರೆದೊಯ್ಯಲಾಗುತ್ತಿತ್ತು. ಮಲೇರಿಯಾ ರೋಗ ಜಾಗೃತಿ ಮೂಡಿಸುವ ಜೊತೆಗೆ, ಮೌಲ್ಯಮಾಪನ ಕಾರ್ಯದಲ್ಲಿ ಇವರೆಲ್ಲ ತೊಡಗಿಸಿಕೊಂಡಿದ್ದರು. ನಾಲ್ವರೂ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿಲ್ಲದ ಪುಂಡರ ಕುಚೇಷ್ಟೆ – ಕಾರಿನಲ್ಲಿ ಹೋಗ್ತಿದ್ದ ದಂಪತಿಗೆ ಅಡ್ಡಗಟ್ಟಿ ಧಮ್ಕಿ

    ವಿಮಾನ ಪತನದಲ್ಲಿ ಇಬ್ಬರು ಸೇನಾ ಪೈಲಟ್‍ಗಳು, ನಾಲ್ವರು ನಾಗರಿಕರು ಮೃತಪಟ್ಟಿದ್ದಾರೆ. ಈ ವಿಮಾನ ಅಮೆಜಾನ್ ಕಾಡಿನ (Amazon Forest) ದಟ್ಟವಾದ ಮರಗಳ ಮಧ್ಯೆ ಪತನವಾಗಿದ್ದು, ತಕ್ಷಣ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ವಿಮಾನ ಪತನವಾದ ಸ್ಥಳದ ಸಮೀಪದಲ್ಲೇ ಇದ್ದ ಅಗುವಾ ಡುಲ್ಸೆ ಎಂಬ ಸಮುದಾಯದ ನಿವಾಸಿಗಳು ವಿಮಾನಕ್ಕೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲು ಪ್ರಯತ್ನ ಪಟ್ಟರೂ ಫಲ ನೀಡಲಿಲ್ಲ ಎಂದು ಬೆನಿ ಪ್ರದೇಶದ ಪೊಲೀಸರು ಮಾಹಿತಿ ನೀಡಿದ್ದಾರೆ. ಸೇನಾ ವಿಮಾನ ಪತನಕ್ಕೆ (Plane Crash) ನೈಜ ಕಾರಣ  ಪತ್ತೆ ಹಚ್ಚಲು ತನಿಖೆ ನಡೆಯುತ್ತಿದೆ.