Tag: Amba Matha

  • ಕೊರೊನಾ ಆತಂಕ  – ಪ್ರಸಿದ್ಧ  ಅಂಬಾಮಠ ಜಾತ್ರೆ ರದ್ದು

    ಕೊರೊನಾ ಆತಂಕ – ಪ್ರಸಿದ್ಧ ಅಂಬಾಮಠ ಜಾತ್ರೆ ರದ್ದು

    ರಾಯಚೂರು: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ, ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆ ಕಲ್ಯಾಣ ಕರ್ನಾಟಕ ಭಾಗದ ಅತೀ ದೊಡ್ಡ ಜಾತ್ರೆ ರಥೋತ್ಸವವಾದ ಜಿಲ್ಲೆಯ ಸಿಂಧನೂರು ತಾಲೂಕಿನ ಅಂಬಾಮಠ ಜಾತ್ರೆ ರಥೋತ್ಸವ ಸಂಪೂರ್ಣ ರದ್ದುಗೊಳಿಸಲಾಗಿದೆ.

    Amba Matha

    ಸರ್ಕಾರ ಹೊರಡಿಸಿರುವ ಕೊರೊನಾ ನಿಯಮಾವಳಿ ಹಿನ್ನೆಲೆ ಜನವರಿ 17 ರಂದು ನಡೆಯಬೇಕಿದ್ದ ಜಾತ್ರಾ ಮಹೋತ್ಸವವನ್ನು ರದ್ದು ಮಾಡಲಾಗಿದೆ. ಸುಮಾರು 5 ಲಕ್ಷದಷ್ಟು ಭಕ್ತರು ಪ್ರತಿವರ್ಷ ಜಾತ್ರೆಗೆ ಆಗಮಿಸುತ್ತಿದ್ದರು. ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ದೇಶದ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಿದ್ದ ಜಾತ್ರೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಸಾಧುಗಳು ಸೇರುತ್ತಿದ್ದರು. ಇದೀಗ ಕೊರೊನಾ ಹರಡುವಿಕೆ ಸಾಧ್ಯತೆ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಮತ್ತೆ ಕಾಂಗ್ರೆಸ್ ಸೇರಿದ್ರೆ ಆತ್ಮಹತ್ಯೆ ಮಾಡಿಕೊಂಡಂತೆ: ಸಿಪಿವೈ

    Amba Matha

    ಕಳೆದ ಬಾರಿಯೂ ಕೊರೊನಾ ಹಿನ್ನೆಲೆ ಜಾತ್ರೆ ರದ್ದಾಗಿತ್ತು. ತಾಲೂಕಿನ ಭಕ್ತರು, ಸುತ್ತಮುತ್ತಲಿನ ಗ್ರಾಮಸ್ಥರು ಸಹ ಸೇರಿದಂತೆ ಸಿಂಧನೂರು ತಹಶೀಲ್ದಾರ್ ಮಂಜುನಾಥ್ ಗ್ರಾಮಸ್ಥರಿಗೆ ಮನವರಿಕೆ ಮಾಡಿದ್ದಾರೆ. ಕೋವಿಡ್ ಹಿನ್ನೆಲೆ ಜಾತ್ರೆಗೆ ಬರದಂತೆ ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಭಕ್ತರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ ಎಂದ ಮೋದಿ