Tag: Ambassador

  • ಭಾರತದೊಂದಿಗೆ ಪಾಕ್ ವ್ಯಾಪಾರ ಸ್ಥಗಿತ, ವಾಯುಸೀಮೆ ಬಂದ್

    ಭಾರತದೊಂದಿಗೆ ಪಾಕ್ ವ್ಯಾಪಾರ ಸ್ಥಗಿತ, ವಾಯುಸೀಮೆ ಬಂದ್

    ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಧಿ 370 ರದ್ದು ಮಾಡಿದ ಬೆನ್ನಲ್ಲೇ ಪಾಕಿಸ್ತಾನವು ಭಾರತದೊಂದಿಗೆ ದ್ವಿಪಕ್ಷೀಯ ವ್ಯಾಪಾರ ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿದೆ. ಈಗಾಗಲೇ ಆರ್ಥಿಕತೆ ಕುಸಿದಿದ್ದು ವಿದೇಶಗಳಿಂದ ನೆರವು ಬೇಡುತ್ತಿದೆ. ಈಗ ಭಾರತದ ಜೊತೆ ವ್ಯಾಪಾರವನ್ನು ಸ್ಥಗಿತಗೊಳಿಸುವ ಮೂಲಕ ಪಾಕ್ ತನ್ನ ಆತ್ಮಹತ್ಯೆಗೆ ತಾನೇ ಶರಣಾಗುತ್ತಿದೆ ಎನ್ನುವ ವಿಶ್ಲೇಷಣೆ ಕೇಳಿಬಂದಿದೆ. ಇದನ್ನು ಓದಿ: ಭಾರತದ ರೈತರು ಕೊಟ್ಟ ಶಾಕಿಗೆ ಪಾಕಿನಲ್ಲಿ ಗಗನಕ್ಕೇರಿತು ಟೊಮೆಟೊ ದರ!

    ಪಾಕಿಸ್ತಾನ ಈಗ ಭಾರತದೊಂದಿಗಿನ ರಾಜತಾಂತ್ರಿಕ ಸಂಬಂಧವನ್ನು ಕೆಳಮಟ್ಟಕ್ಕಿಳಿಸುವುದಾಗಿ ಘೋಷಿಸಿದೆ. ಭಾರತದೊಂದಿಗೆ ದ್ವಿಪಕ್ಷೀಯ ವ್ಯಾಪಾರವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಹೇಳಿಕೊಂಡಿದೆ. ಈ ನಿಟ್ಟಿನ ಪಾಕ್ ತನ್ನ ರಾಯಭಾರಿಯನ್ನು ಭಾರತದಿಂದ ವಾಪಸ್ ಕರೆಸಿಕೊಳ್ಳುವುದಾಗಿ ಮತ್ತು ಪಾಕಿಸ್ತಾನದ ಭಾರತೀಯ ರಾಯಭಾರಿಯನ್ನು ಹೊರಹಾಕುವುದಾಗಿ ಘೋಷಿಸಿದೆ. ಈ ಸುದ್ದಿಯನ್ನು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಶಿ ಸ್ಥಳೀಯ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ.

    ಇಸ್ಲಾಮಾಬಾದ್‍ನಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬುಧವಾರ ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಅನೇಕ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಸಮಿತಿಯು ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಇದನ್ನು ಓದಿ: ನೆರೆವೈರಿ ಪಾಕಿಗೆ ಟೊಮೆಟೊ ರಫ್ತು ಮಾಡದಿರಲು ಕೋಲಾರ ರೈತರು ನಿರ್ಧಾರ

    ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧವನ್ನು ಕೆಳಕ್ಕೆ ಇಳಿಸುವುದು, ಭಾರತದೊಂದಿಗೆ ದ್ವಿಪಕ್ಷೀಯ ವ್ಯಾಪಾರವನ್ನು ಸ್ಥಗಿತಗೊಳಿಸುವುದು ಹಾಗೂ ದ್ವಿಪಕ್ಷೀಯ ವ್ಯವಸ್ಥೆಗಳ ಪರಿಶೀಲನೆ ಮಾಡುವ ನಿರ್ಧಾರವನ್ನು ಪಾಕ್ ಕೈಗೊಂಡಿದೆ. ಜೊತೆಗೆ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ್ದ ವಿಷಯವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ದೂರು ನೀಡಲು ಮುಂದಾಗಿದೆ.

    ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯನ್ನು (ಆಗಸ್ಟ್ 14) ಕೆಚ್ಚೆದೆಯ ಕಾಶ್ಮೀರಿಗಳಿಗೆ ಒಗ್ಗಟ್ಟಿಗೆ ಹಾಗೂ ಅವರ ಸ್ವ-ನಿರ್ಣಯದ ಹಕ್ಕಿಗಾಗಿ ಹೋರಾಟ ಮಾಡುವುದಾಗಿ ಪಾಕ್ ಘೋಷಿಸಿದೆ. ಅಷ್ಟೇ ಅಲ್ಲದೆ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು (ಆಗಸ್ಟ್ 15) ಕಪ್ಪು ದಿನವನ್ನಾಗಿ ಆಚರಿಸುವ ನಿರ್ಣಯ ಕೈಗೊಂಡಿದೆ.

    ಎನ್‍ಎಸ್‍ಸಿ ಸಭೆಯಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವರು, ರಕ್ಷಣಾ ಸಚಿವರು, ಆಂತರಿಕ ಸಚಿವರು (ಗೃಹ ಸಚಿವ), ಶಿಕ್ಷಣ ಸಚಿವರು, ಮಾನವ ಹಕ್ಕುಗಳ ಸಚಿವರು, ಕಾನೂನು ಸಚಿವರು, ಐಎಸ್‍ಐ ಮತ್ತು ಸೇನಾ ಸಿಬ್ಬಂದಿ ಭಾಗವಹಿಸಿದ್ದರು ಎಂದು ವರದಿಯಾಗಿದೆ. ಈ ನಿರ್ಧಾರದ ಜೊತೆಗೆ ಭಾರತದ ವಿಮಾನಗಳಿಗೆ ತನ್ನ ವಾಯುಸೀಮೆ ಬಳಸಲು ನಿರ್ಬಂಧ ಹೇರಿದೆ.

    ಭಯೋತ್ಪಾದನಾ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡಿದ ಆರೋಪದಲ್ಲಿ ಬಂಧಿತನಾಗಿದ್ದ ಉಗ್ರ, ಮುಂಬೈ ಸ್ಫೋಟ ಪ್ರಕರಣದ ರೂವಾರಿ ಹಫೀಜ್ ಸಯೀದ್ ತಪ್ಪಿತಸ್ಥನೆಂದು ಪಾಕಿಸ್ತಾನದ ಗುಜ್ರನ್‍ವಾಲಾ ನ್ಯಾಯಾಲಯ ತೀರ್ಪು ನೀಡಿದೆ. ಜೊತೆಗೆ ಈ ಪ್ರಕರಣವನ್ನು ಪಾಕಿಸ್ತಾನದ ಗುಜರಾತ್‍ಗೆ ವರ್ಗಾಯಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಹಫೀಜ್ ಸಯೀದ್‍ನನ್ನು ಪಾಕಿಸ್ತಾನದ ಅಧಿಕಾರಿಗಳು ಜುಲೈ 17ರಂದು ಬಂಧಿಸಿದ್ದರು. ನಂತರ 7 ದಿನಗಳ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳವರೆಗೆ ವಿಸ್ತರಿಸಲಾಗಿತ್ತು ಎಂದು ವರದಿಯಾಗಿದೆ.

  • ಗಾಯದ ನೋವಿನಲ್ಲಿ ಕರ್ತವ್ಯ ಮೆರೆದ ನಟ ದರ್ಶನ್

    ಗಾಯದ ನೋವಿನಲ್ಲಿ ಕರ್ತವ್ಯ ಮೆರೆದ ನಟ ದರ್ಶನ್

    ಬೆಂಗಳೂರು: ಚಾಲೆಂಜಿಂಗ್ ದರ್ಶನ್ ಅವರಿಗೆ ಕಾರ್ ಅಪಘಾತ ಸಂಭವಿಸಿದ್ದು ಈಗ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಗಾಯದ ನೋವಿನಲ್ಲೂ ತಮ್ಮ ಕರ್ತವ್ಯವನ್ನು ನಿಭಾಯಿಸಿದ್ದಾರೆ.

    ದರ್ಶನ್ ಅವರು ಅರಣ್ಯ ಇಲಾಖೆಯ ರಾಯಭಾರಿಯಾಗಿದ್ದಾರೆ. ಆದ ಕಾರಣ ಅವರು ಆಗಾಗ ಅರಣ್ಯಗಳಿಗೆ ಹೋಗಿ ಪ್ರಾಣಿ, ಪಕ್ಷಿ ಮತ್ತು ಪ್ರಕೃತಿಯನ್ನು ವೀಕ್ಷಣೆ ಮಾಡಬೇಕು. ಇದು ಅವರ ಕರ್ತವ್ಯ ಕೂಡ ಆಗಿದೆ. ಆದರೆ ಇತ್ತೀಚೆಗೆ ದರ್ಶನ್ ಅವರಿಗೆ ಕಾರ್ ಅಪಘಾತವಾಗಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದರು. ಆದ್ದರಿಂದ ಅವರು ಅರಣ್ಯವನ್ನು ವೀಕ್ಷಣೆ ಮಾಡಲು ಸಾಧ್ಯವಾಗಲಿಕ್ಕಿಲ್ಲ ಎಂದು ಹೇಳಲಾಗುತ್ತಿತ್ತು.

    ಆದರೆ ನಟ ದರ್ಶನ್ ತಮ್ಮ ಗಾಯದ ನೋವಿನಲ್ಲೂ ಕಾಡಿಗೆ ಹೋಗಿ ವೀಕ್ಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಕೈಯಲ್ಲಿ ಕ್ಯಾಮೆರಾ ಹಿಡಿದು ಪ್ರಕೃತಿಯ ಸೊಬಗನ್ನು ಸೆರೆ ಹಿಡಿದಿದ್ದಾರೆ. ಸಂತಸದಿಂದ ಅರಣ್ಯದಲ್ಲಿ ಸುತ್ತಾಡಿದ್ದಾರೆ. ಅರಣ್ಯದಲ್ಲಿ ಸುತ್ತಾಡುತ್ತಿದ್ದ ಫೋಟೋಗಳನ್ನು ಅವರ ಅಭಿಮಾನಿಗಳು ತೆಗೆದು ಟ್ಟಿಟ್ಟರ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.

    ದರ್ಶನ್ ಅವರ ಫೋಟೋಗಳನ್ನು ನೋಡಿ ಅಭಿಮಾನಿಗಳು ಗಾಯದ ನಡುವೆಯೂ ಡಿ ಬಾಸ್ ಅರಣ್ಯ ರಾಯಭಾರಿಯಾಗಿ ವೀಕ್ಷಣೆ ಮಾಡಲು ಮೂಲಕ ತಮ್ಮ ಕರ್ತವ್ಯವನ್ನು ನಿಭಾಯಿಸಿದ್ದಾರೆ ಎಂದು ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

    ದರ್ಶನ್ ಅವರಿಗೆ ಕಾಡು ಹಾಗೂ ವನ್ಯಜೀವಿಗಳ ಬಗ್ಗೆ ಸಾಕಷ್ಟು ಪ್ರೀತಿ ತೋರಿಸುತ್ತಾರೆ. ಹಾಗಾಗಿ ಅವರನ್ನು ಕರ್ನಾಟಕದಲ್ಲಿ ಅರಣ್ಯ ಇಲಾಖೆಯ ರಾಯಭಾರಿಯಾಗಿ ಆಯ್ಕೆ ಮಾಡಿದ್ದರು. ಅರಣ್ಯ ಇಲಾಖೆಯ ರಾಯಭಾರಿಯಾದ ಕಾರಣ ದರ್ಶನ್ ಅವರು ವನ್ಯಜೀವಿ ಹಾಗೂ ಅರಣ್ಯ ಸಂರಕ್ಷಣೆಯ ಸಂದೇಶ ಸಾರುವ ಕೆಲಸವನ್ನು ಮಾಡಬೇಕು. ಜೊತೆಗೆ ಅರಣ್ಯಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಬೇಕಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://twitter.com/DarshanFc171/status/1058577636111335425

  • ನೇಪಾಳ ರಾಯಭಾರಿಯಾದ ಬಾಲಿವುಡ್ ನಟಿ ಜಯಪ್ರದಾ

    ನೇಪಾಳ ರಾಯಭಾರಿಯಾದ ಬಾಲಿವುಡ್ ನಟಿ ಜಯಪ್ರದಾ

    ನವದೆಹಲಿ: ಮಾಜಿ ಸಂಸತ್ ಸದಸ್ಯೆ ಹಾಗೂ ಬಾಲಿವುಡ್‍ನ ಖ್ಯಾತ ನಟಿ ಜಯಪ್ರದಾ ಅವರನ್ನು ನೇಪಾಳ ಸರ್ಕಾರ ಸೌಹಾರ್ದ ರಾಯಭಾರಿಯನ್ನಾಗಿ ನೇಮಕ ಮಾಡಿಕೊಂಡಿದೆ.

    ಸೌಹಾರ್ದ ರಾಯಭಾರಿಯನ್ನಾಗಿ ನಟಿ ಜಯಪ್ರದಾರವರನ್ನು ಆಯ್ಕೆಮಾಡುವ ಬಗ್ಗೆ ನೇಪಾಳ ಸರ್ಕಾರ ಸಂಸತ್ತಿನಲ್ಲಿ ವಿಚಾರ ಪ್ರಸ್ತಾಪಿಸಿತ್ತು. ಇದಕ್ಕೆ ಎಲ್ಲಾ ಸದಸ್ಯರು ಸರ್ವಾನುಮತದಿಂದ ಆಯ್ಕೆಮಾಡಿ ನೇಪಾಳ ಸರ್ಕಾರದ ಸೌಹಾರ್ದ ರಾಯಭಾರಿಯನ್ನಾಗಿ ನಟಿ ಜಯಪ್ರದಾರವರನ್ನು ಅಂಗೀಕರಸಿದೆ.

    ಜಯಪ್ರದಾ ಅವರು ರಾಯಭಾರಿ ಹುದ್ದೆಗೆ ನಾಮನಿರ್ದೇಶನದಿಂದಾಗಿ ನೆರೆಹೊರೆ ರಾಷ್ಟ್ರಗಳ ನಡುವಿನ ಹಳೆಯ ಸಾಂಸ್ಕೃತಿಕ ಸಂಬಂಧ ಮತ್ತಷ್ಟು ಬಲಗೊಳಿಸುವ ಹಾಗೂ ನೇಪಾಳದ ಪ್ರವಾಸೋದ್ಯಮ ಇಲಾಖೆಯನ್ನು ಭಾರತದಲ್ಲಿ ಉತ್ತೇಜಿಸಲು ನೆರವಾಗಲಿದೆ. ಒಟ್ಟು ನಾಲ್ಕು ವರ್ಷಗಳ ಕಾಲ ಜಯಪ್ರದಾ ಅವರು ನೇಪಾಳದ ರಾಯಭಾರಿಗಳಾಗಲಿದ್ದಾರೆ ಎನ್ನಲಾಗಿದೆ.

    ಆದಾಯ ಮತ್ತು ಉದ್ಯೋಗ ಸೃಷ್ಟಿಯಲ್ಲಿ ನೇಪಾಳಕ್ಕೆ ಪ್ರವಾಸೋದ್ಯಮವೇ ಮೂಲ ಆಧಾರವಾಗಿದೆ. ಅಲ್ಲದೇ ಭಾರತದ ಪ್ರವಾಸಿಗರು ನೇಪಾಳದ ಪ್ರಮುಖ ಗ್ರಾಹಕರಾಗಿದ್ದಾರೆ. ಹೀಗಾಗಿ ಪ್ರವಾಸೋದ್ಯಮವನ್ನು ಸೆಳೆಯುವ ಹಾಗೂ ಪ್ರೋತ್ಸಾಹಿಸುವ ದೃಷ್ಟಿಯಿಂದ ನೇಪಾಳ ಸರ್ಕಾರವು 2020ರ ವರ್ಷವನ್ನು ವಿಸಿಟ್ ನೇಪಾಳ ಇಯರ್ ಎಂಬ ಅಡಿಬರಹದ ಯೋಜನೆಯನ್ನು ಹಮ್ಮಿಕೊಂಡಿದೆ. ಈ ಮೂಲಕ ನೇಪಾಳಕ್ಕೆ ಭೇಟಿ ನೀಡುವ ಪ್ರವಾಸಿಗರನ್ನು ಆಕರ್ಷಿಸುವಂತೆ ಮಾಡಿದೆ. ಈ ಯೋಜನೆ ಮೂಲಕ ಸುಮಾರು 20 ಲಕ್ಷ ಪ್ರವಾಸಿಗರನ್ನು ಸೆಳೆಯುವ ಉದ್ದೇಶವನ್ನು ಪ್ರವಾಸೋದ್ಯಮ ಇಲಾಖೆ ಹೊಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪಾಕ್‍ನಲ್ಲಿ ಅಡುಗೆ ಕೆಲಸ ಮಾಡಿ ಭಾರತದ ರಹಸ್ಯವನ್ನು ಐಎಸ್‍ಐಗೆ ತಿಳಿಸಿದ!

    ಪಾಕ್‍ನಲ್ಲಿ ಅಡುಗೆ ಕೆಲಸ ಮಾಡಿ ಭಾರತದ ರಹಸ್ಯವನ್ನು ಐಎಸ್‍ಐಗೆ ತಿಳಿಸಿದ!

    ಡೆಹ್ರಾಡೂನ್: ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಉತ್ತರಪ್ರದೇಶದ ಭಯೋತ್ಪಾದನ ನಿಗ್ರಹ ದಳ(ಎಟಿಎಸ್) ಬಂಧಿಸಿದೆ.

    ಆರೋಪಿಯನ್ನು ಉತ್ತರಾಖಂಡದ ಪಿತ್ತೋರ್‍ಗಢ ಜಿಲ್ಲೆಯ ಕಿರೊಲಾ ಗ್ರಾಮದ ರಮೇಶ್ ಸಿಂಗ್ ಕನ್ಯಾಲ್ (43) ಎಂದು ಗುರುತಿಸಲಾಗಿದೆ. ಅವನು ಪಾಕಿಸ್ತಾನದ ಇಂಟರ್ ಸರ್ವೀಸ್ ಇಂಟೆಲಿಜೆನ್ಸ್‍ಗೆ (ಐಎಸ್‍ಐ)ಗೆ ರಾಷ್ಟ್ರೀಯ ಭದ್ರತಾ ಮಾಹಿತಿಯನ್ನು ನೀಡುತ್ತಿದ್ದ ಎಂದು ವರದಿಯಾಗಿದೆ.

    ಉತ್ತರ ಪ್ರದೇಶದ ಎಟಿಎಸ್‍ನ ಐದು ಜನರ ತಂಡವು ಆರೋಪಿಯನ್ನು ಆತನ ಮನೆಗೆ ತೆರಳಿ ಬಂಧಿಸಿದೆ. ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್ ಹೆಚ್ಚಿನ ವಿಚಾರಣೆಗೆ ಎಟಿಎಸ್ ಕಸ್ಟಡಿಗೆ ನೀಡಿದೆ.

    ಬೇಹುಗಾರಿಕೆ ನಡೆಸುತ್ತಿದ್ದ ಅನುಮಾನದ ಮೇಲೆ ಆತನನ್ನು ಬಂಧಿಸಲಾಗಿದೆ ಎಂದು ಎಟಿಎಸ್‍ನ ಜನರಲ್ ಇನ್ಸ್ ಪೆಕ್ಟರ್ ಆಸೀಂ ಅರುಣ್ ತಿಳಿಸಿದ್ದಾರೆ. ಈ ಹಿಂದೆ ಪಾಕಿಸ್ತಾನದಲ್ಲಿ ಕೆಲಸ ಮಾಡುತ್ತಿದ್ದ ಭಾರತದ ರಾಯಭಾರಿಯ ನಿವಾಸದಲ್ಲಿ ಅಡುಗೆ ಕೆಲಸಕ್ಕಾಗಿ ಆರೋಪಿಯನ್ನು ನಿಯೋಜಿಸಲಾಗಿತ್ತು. 2015 ರಿಂದ 2017ರ ವರೆಗೆ ಅಲ್ಲಿ ಕೆಲಸ ಮಾಡುತ್ತಿದ್ದಾಗ ಐಎಸ್‍ಐ ಈತನನ್ನು ಸಂಪರ್ಕಿಸಿ ಹಣದ ಆಸೆ ತೋರಿಸಿದೆ. ಈ ಆಸೆಗೆ ಬಲಿಯಾದ ಈತ ಭಾರತದ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಐಎಸ್‍ಐಗೆ ನೀಡುತ್ತಿದ್ದಾನೆ ಎನ್ನುವ ಖಚಿತ ಮಾಹಿತಿ ಪಿತ್ತೋರ್‍ಗಢ ಜಿಲ್ಲಾ ಪೊಲೀಸರಿಗೆ ಸಿಕ್ಕಿತ್ತು.

    ಸೇನೆಯ ಗುಪ್ತಚರ ಇಲಾಖೆ ಈತನ ಚಟುವಟಿಕೆಯ ಮೇಲೆ ಕಣ್ಣಿಟ್ಟ ಬಳಿಕ ಎಟಿಎಸ್‍ಗೆ ತಿಳಿಸಿತ್ತು. ಈಗ ಎಟಿಎಸ್ ರಮೇಶ್ ಸಿಂಗ್ ಕನ್ಯಾಲ್ ಬಳಿಯಿದ್ದ ಪಾಕಿಸ್ತಾನದ ಸಿಮ್ ಕಾರ್ಡ್ ಹಾಗೂ ಮೊಬೈಲ್‍ನ್ನು ವಶಪಡಿಸಿಕೊಂಡಿದೆ.

    ಆರೋಪಿ ಸಹೋದರ ಕೂಡ ಭಾರತೀಯ ಸೇನೆಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಕನ್ಯಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕಾಂಡೋಮ್ ನಂತ್ರ ಈ ಜಾಹೀರಾತಿನಲ್ಲಿ ಕಾಣಿಸಲಿದ್ದಾರೆ ಸನ್ನಿ ಲಿಯೋನ್!

    ಕಾಂಡೋಮ್ ನಂತ್ರ ಈ ಜಾಹೀರಾತಿನಲ್ಲಿ ಕಾಣಿಸಲಿದ್ದಾರೆ ಸನ್ನಿ ಲಿಯೋನ್!

    ಮುಂಬೈ: ನವರಾತ್ರಿ ಕಾಂಡೋಮ್ ಜಾಹೀರಾತು ಬಳಿಕ ಬಾಲಿವುಡ್ ಮಾದಕ ತಾರೆ ಸನ್ನಿ ಲಿಯೋನ್ ತುಪ್ಪದ ಜಾಹೀರಾತಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

    ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುವದಕ್ಕಾಗಿ ಸಾಕಷ್ಟು ಕಂಪನಿಗಳು ಸನ್ನಿ ಲಿಯೋನ್ ಗೆ ಆಫರ್‍ಗಳು ನೀಡುತ್ತವೆ. ಆದರೆ ಸನ್ನಿ ಮಾತ್ರ ಜಾಹೀರಾತುಗಳ ಆಯ್ಕೆ ವಿಷಯದಲ್ಲಿ ತುಂಬಾ ಎಚ್ಚರಿಕೆಯಿಂದ ಇರುತ್ತಾರೆ. ತಮಗೆ ಸೂಕ್ತ ಮತ್ತು ಸರಿ ಅನ್ನಿಸುವಂತಹ ಜಾಹೀರಾತುಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತಾರೆ.

    ಇತ್ತೀಚಿಗೆ ಸನ್ನಿ ರಾಯಭಾರಿಯಾಗಿದ್ದ ಕಾಂಡೋಮ್ ಜಾಹೀರಾತು ಸಾಕಷ್ಟು ವಿವಾದವನ್ನು ಸೃಷ್ಟಿ ಮಾಡಿತ್ತು. ಕಾಂಡೋಮ್ ಜಾಹೀರಾತಿಗೂ ಮೊದಲು ಸನ್ನಿ ಲಿಯೋನ್ ಕಾರ್, ಕೆಲ ಬಟ್ಟೆ ಉತ್ಪನ್ನಗಳ ರಾಯಭಾರಿಯಾಗಿದ್ದರು.

    2016ರಲ್ಲಿ ದೆಹಲಿ ಸರ್ಕಾರ ಸನ್ನಿ ಅವರಿಗೆ ಪಾನ್ ಮಸಾಲ ಮತ್ತು ಗುಟ್ಕಾ ಸೇರಿದಂತಹ ಉತ್ಪನ್ನಗಳಿಗೆ ರಾಯಭಾರಿ ಆಗಬೇಡಿ ಎಂದು ಕೇಳಿಕೊಂಡಿತ್ತು. ದೆಹಲಿ ಸರ್ಕಾರದ ಕೋರಿಕೆಯಂತೆ ಸನ್ನಿ ಇನ್ನು ಮುಂದೆ ಆ ತರಹದ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದರು.

    ಸದ್ಯ ಕೇರಳ, ಪ್ರೀಮಿಯರ್ ಫುಸ್ಟಲ್ ಫ್ರಾಂಚಿಸಿ ಕೋಬ್ರಾ ತಂಡದ ರಾಯಭಾರಿಯಾಗಿಯೂ ಮತ್ತು ಸಹ ಮಾಲೀಕತ್ವವನ್ನು ಸನ್ನಿ ಲಿಯೋನ್ ಹೊಂದಿದ್ದಾರೆ.