Tag: ambi fans

  • ಜೆಡಿಎಸ್ ವಿರುದ್ಧ ಅಂಬಿ ಅಭಿಮಾನಿಯ ಆಕ್ರೋಶ- ವಿಡಿಯೋ ವೈರಲ್

    ಜೆಡಿಎಸ್ ವಿರುದ್ಧ ಅಂಬಿ ಅಭಿಮಾನಿಯ ಆಕ್ರೋಶ- ವಿಡಿಯೋ ವೈರಲ್

    ಮಂಡ್ಯ: ನಟಿ ಸುಮಲತಾ ಗೌಡ್ತಿ ಅಲ್ಲ ಎಂಬ ಎಂಎಲ್‍ಸಿ ಕೆ.ಟಿ ಶ್ರೀಕಂಠೇಗೌಡ ಅವರ ಹೇಳಿಕೆ ಸದ್ಯ ಅಂಬರೀಶ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಜೆಡಿಎಸ್ ಪಕ್ಷದ ವಿರುದ್ಧ ಅಂಬಿ ಅಭಿಮಾನಿಗಳು ತಿರುಗಿಬಿದ್ದಿದ್ದಾರೆ.

    ಜೆಡಿಎಸ್ ಪಕ್ಷ ಹಾಗೂ ಶ್ರೀಕಂಠೇಗೌಡರ ವಿರುದ್ಧ ಈಗಾಗಲೇ ಮಂಡ್ಯದಲ್ಲಿ ಅಂಬಿ ಅಭಿಮಾನಿಗಳು ಕಿಡಿಕಾರುತ್ತಿದ್ದಾರೆ. ಅಲ್ಲದೆ ಕಳೆದ ಎರಡು ದಿನಗಳಿಂದ ಜೆಡಿಎಸ್ ಪಕ್ಷ ಹಾಗೂ ಶ್ರೀಕಂಠೇಗೌಡರ ವಿರುದ್ಧ ಅಂಬಿ ಅಭಿಮಾನಿಗಳು ಹಾಗೂ ಕೆಲ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಕೂಡ ಮಾಡಿದ್ದಾರೆ. ಈ ಪ್ರತಿಭಟನೆ ಹಾಗೂ ಗಲಾಟೆಗಳ ಬೆನ್ನಲ್ಲೇ ಮಂಡ್ಯದಲ್ಲಿ ಅಂಬರೀಶ್ ಅವರ ಅಭಿಮಾನಿಯೋರ್ವ ಜೆಡಿಎಸ್ ಪಕ್ಷ ಹಾಗೂ ಶ್ರೀಕಂಠೇಗೌಡರ ವಿರುದ್ಧ 5 ನಿಮಿಷ 27 ಸೆಕೆಂಡ್ ಮಾತನಾಡಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

    ವಿಡಿಯೋದಲ್ಲಿ ನಾನು ಕೂಡ ಜೆಡಿಎಸ್ ಕಾರ್ಯಕರ್ತ ಎನ್ನುತ್ತ ಕೆ.ಟಿ.ಶ್ರೀಕಂಠೇಗೌಡ, ಎಲ್.ಆರ್ ಶಿವರಾಮೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಅಂಬರೀಶಣ್ಣ ಕರ್ನಾಟಕದ ಜನರ ಮನಸ್ಸಿನಲ್ಲಿದ್ದಾರೆ. ಅವರು ಇಂದು ನಮ್ಮ ಮಧ್ಯೆ ಇಲ್ಲ ಎಂದು ಅವರ ಕುಟುಂಬದ ಬಗ್ಗೆ ಮಾತನಾಡುತ್ತೀರಾ? ಮಂಡ್ಯ ಕ್ಷೇತ್ರದ ಸಂಸದರಾಗಿ ನಿಮಗೆ ನಾಚಿಯಾಗಬೇಕು ಎಂದಿದ್ದಾರೆ.

     

    ಅಲ್ಲದೆ ಅಂಬರೀಶ್ ಅವರ ಬಗ್ಗೆ ಮಾತನಾಡುತ್ತೀರಲ್ಲ, ನೀವು ಮಂಡ್ಯ ಜಿಲ್ಲೆಗೆ ಏನು ಕೊಡುಗೆ ಕೊಟ್ಟಿದ್ದೀರಾ ಎಂದು ಪ್ರಶ್ನಿಸಿದ್ದಾನೆ. ಅಷ್ಟೇ ಅಲ್ಲದೆ ಅನಿತಾ ಕುಮಾರಸ್ವಾಮಿ, ನಿಖಿಲ್, ಪ್ರಜ್ವಲ್ ಸೇರಿದಂತೆ ದೇವೇಗೌಡರ ಕುಟುಂಬದವರ ವಿರುದ್ಧ ಹರಿಹಾಯ್ದಿರುವ ಅಂಬಿ ಅಭಿಮಾನಿ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗೌಡ್ತಿ ಗದ್ದಲ..!

    ಗೌಡ್ತಿ ಗದ್ದಲ..!

    https://www.youtube.com/watch?v=ZqvjmVrlFlk

  • ಅಂಬಿ ಫ್ಯಾನ್ಸ್, ಜೆಡಿಎಸ್ ನಡುವೆ ಗೌಡ್ತಿ ಫೈಟ್!- ವೈರಲ್ ಆಯ್ತು ಸಿಎಂ ತೆಲಗು ಸಂದರ್ಶನ

    ಅಂಬಿ ಫ್ಯಾನ್ಸ್, ಜೆಡಿಎಸ್ ನಡುವೆ ಗೌಡ್ತಿ ಫೈಟ್!- ವೈರಲ್ ಆಯ್ತು ಸಿಎಂ ತೆಲಗು ಸಂದರ್ಶನ

    ಮಂಡ್ಯ: ಸಿಎಂ ಕುಮಾರಸ್ವಾಮಿ ಅವರು ತೆಲಗು ಮಾಧ್ಯಮಕ್ಕೆ ಸಂದರ್ಶನ ನೀಡಿರುವ ವೀಡಿಯೋವನ್ನು ಅಂಬಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿ, ಸುಮಲತಾ ಮಂಡ್ಯದ ಗೌಡ್ತಿ ಅಲ್ಲ ಅನ್ನೊ ಜೆಡಿಎಸ್ ಅವರಿಗೆ ಅನಿತಾ ಕುಮಾರಸ್ವಾಮಿ ಮೂಲತಃ ಎಲ್ಲಿನವರು ಎಂದು ತಿಳಿದಿಲ್ವಾ ಅಂತ ಟಾಂಗ್ ನೀಡಿದ್ದಾರೆ.

    ನಟ ನಿಖಿಲ್ ಕುಮಾರಸ್ವಾಮಿ ಅವರ ಜಾಗ್ವಾರ್ ಸಿನಿಮಾದ ಪ್ರಮೋಷನ್ ಸಂದರ್ಭದಲ್ಲಿ ತೆಲುಗು ಖಾಸಗಿ ವಾಹಿನಿಯೊಂದಕ್ಕೆ ಸಿಎಂ ಕುಮಾರಸ್ವಾಮಿ ಸಂದರ್ಶನ ನೀಡಿದ್ದರು. ಆಗ ನಾನು ಮದುವೆ ಆಗಿರೋದು ಕೋಲಾರದ ತೆಲುಗು ಕುಟುಂಬದ ಹೆಣ್ಣನ್ನ ಎಂದು ಸಿಎಂ ಹೇಳಿಕೆ ನೀಡಿದ್ದರು. ಸುಮಲತಾ ಅವರು ಗೌಡ್ತಿ ಅಲ್ಲ ಎಂಬ ವಿಚಾರದ ಹಿನ್ನೆಲೆಯಲ್ಲಿ ಅಂಬಿ ಅಭಿಮಾನಿಗಳು ಸಿಎಂ ಅವರ ವಿಡಿಯೋವನ್ನು ಶೇರ್ ಮಾಡಿಕೊಳ್ಳುತ್ತಿದ್ದಾರೆ.

    ಸುಮಲತಾ ಮಂಡ್ಯ ಗೌಡ್ತಿ ಅಲ್ಲ ಎಂದು ಎಂಎಲ್‍ಸಿ ಶ್ರೀಕಂಠೇಗೌಡ ಹೇಳಿಕೆ ನೀಡಿದ್ದರು. ಅದಕ್ಕೆ ಅಂಬಿ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ. ಸುಮಲತಾ ಅವರು ಮಂಡ್ಯದ ಗೌಡ್ತಿ ಅಲ್ಲ ಅಂದ್ಮೇಲೆ ಅನಿತಾ ಕುಮಾರಸ್ವಾಮಿ ಯಾರು? ಅವರು ತೆಲಗು ಕುಟುಂಬದಿಂದ ಬಂದವರು ಎಂದು ಜೆಡಿಎಸ್‍ಗೆ ಗೊತ್ತಿಲ್ವಾ ಎಂದು ಅಂಬಿ ಅಭಿಮಾನಿಗಳು ಸಿಎಂ ವಿಡಿಯೋ ಆಧಾರವಾಗಿ ಇಟ್ಟುಕೊಂಡು ಜೆಡಿಎಸ್ ಅವರನ್ನು ಟೀಕಿಸುತ್ತಿದ್ದಾರೆ.

    ಸುಮಲತಾ ಅಂಬರೀಶ್ ವಿರುದ್ಧ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಶೆಟ್ಡಹಳ್ಳಿಯಲ್ಲಿ ಅಂಬರೀಶ್ ಅಭಿಮಾನಿಗಳು ರಸ್ತೆತಡೆ ನಡೆಸಿದ್ದಾರೆ. ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ್ದಾರೆ. ಇದರಿಂದ ವಾಹನಗಳ ಸಂಚಾರ ಅಸ್ತವ್ಯಸ್ಥಗೊಂಡಿದ್ದು, ಕೆ.ಟಿ ಶ್ರೀಕಂಠೇಗೌಡ ಭಾವಚಿತ್ರಕ್ಕೆ ಅಭಿಮಾನಿಗಳು ಬೆಂಕಿ ಹಚ್ಚಿದ್ದಾರೆ. ಶ್ರೀಕಂಠೇಗೌಡರು ಕೂಡಲೇ ಕ್ಷಮೆಯಾಚನೆ ಮಾಡಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಲಾಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಮಲತಾರನ್ನು ಚುನಾವಣಾ ಕಣಕ್ಕಿಳಿಸಲು ಪಟ್ಟು ಹಿಡಿದ ಅಂಬಿ ಅಭಿಮಾನಿ ಬಳಗ

    ಸುಮಲತಾರನ್ನು ಚುನಾವಣಾ ಕಣಕ್ಕಿಳಿಸಲು ಪಟ್ಟು ಹಿಡಿದ ಅಂಬಿ ಅಭಿಮಾನಿ ಬಳಗ

    ಮಂಡ್ಯ: ಈ ಬಾರಿ ಮಂಡ್ಯ ಲೋಕಸಭೆ ಚುನಾವಣಾ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡಲೇ ಬೇಕು ಅಂತ ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಇಂದು ಮಂಡ್ಯದಿಂದ ಸಾವಿರಾರು ಅಂಬಿ ಅಭಿಮಾನಿಗಳು ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ.

    ಸ್ಯಾಂಡಲ್‍ವುಡ್ ಕಲಾವಿದರು ಒತ್ತಾಯ ಮಾಡಿದ್ದು ಆಯ್ತು, ಈಗ ಅಂಬರೀಶ್ ಅಭಿಮಾನಿಗಳ ಒತ್ತಾಯ ಶುರುವಾಗಿದೆ. ಹೌದು ಬರುವ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರನ್ನು ಕಣಕ್ಕಿಳಿಸುವಂತೆ ರೆಬೆಲ್ ಸ್ಟಾರ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಈ ಕುರಿತು ಮನವಿ ಮಾಡಿಕೊಳ್ಳಲು ಇಂದು ಮಂಡ್ಯದಿಂದ ಬೆಂಗಳೂರಿನ ಅಂಬರೀಶ್ ಅವರ ನಿವಾಸಕ್ಕೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬರಲಿದ್ದಾರೆ.

    ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ಸಕ್ಕರೆನಾಡಿನಲ್ಲಿ ರಾಜಕೀಯ ಗರಿಗೆದರಿದೆ. ಈ ಬಾರಿ ಲೋಕಸಭಾ ಚುನಾವಣೆಗೆ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡಲೇ ಬೇಕು ಅನ್ನೋ ಒತ್ತಾಯ ತೀವ್ರವಾಗಿ ಕೇಳಿಬರ್ತಿದೆ. ಈ ಬಗ್ಗೆ ಕೆಲ ದಿನಗಳ ಹಿಂದೆ ಸ್ಯಾಂಡಲ್‍ವುಡ್‍ನ ಪ್ರಮುಖರು ಕೂಡ ಸುಮಲತಾ ಅವರನ್ನು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿಕೊಂಡಿದ್ದರು. ಈಗ ಮತ್ತೆ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಂಬಿ ಅಭಿಮಾನಿಗಳಿಂದ ಸುಮಲತಾ ಸ್ಪರ್ಧೆಗೆ ಒತ್ತಾಯ ಕೇಳಿ ಬಂದಿದೆ. ಇಷ್ಟೇ ಅಲ್ಲದೆ ಈಗಾಗಲೇ ಮೈತ್ರಿ ಪಕ್ಷದಿಂದ ಸುಮಲತಾರನ್ನು ಕಣಕ್ಕಿಳಿಸುವ ಉದ್ದೇಶದಿಂದ ಜೆಡಿಎಸ್ ವರಿಷ್ಠ ಹೆಚ್‍ಡಿ ದೇವೇಗೌಡರನ್ನ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿದ್ದಾರೆ. ಹಾಗೆಯೇ ಅಂಬಿ ಅಭಿಮಾನಿಗಳು ಸುಮಲತಾ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡುವಂತೆ ಒತ್ತಾಯ ಮಾಡಲಾಗಿದೆ ಅಂತ ಮಾಹಿತಿ ಮೂಲಗಳು ತಿಳಿಸಿವೆ.

    ಇಂದು ಬೆಳಗ್ಗೆ ಮಂಡ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಅಂಬರೀಶ್ ರವರ ಮನೆಗೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು ಶತಾಯಾ-ಗತಾಯ ಸುಮಲತಾ ಅಂಬರೀಶ್ ರವರ ಮನವೊಲಿಸಿ ಈ ಬಾರಿ ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡಲಿದ್ದಾರೆ. ಬೆಳಗ್ಗೆ ಮಂಡ್ಯ ನಗರದಿಂದ ಎರಡು ಬಸ್ಸುಗಳನ್ನು ಮಾಡಲಾಗಿದ್ದು, ಜಿಲ್ಲಾದ್ಯಂತ ಹಲವಾರು ಬಸ್ ಮೂಲಕ ತೆರಳಲು ಅಭಿಮಾನಿಗಳು ತಯಾರಿ ನಡೆಸಿದ್ದಾರೆ.

    ಮತ್ತೊಂದು ಕಡೆ ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿಯವರನ್ನು ಕಣಕ್ಕಿಳಿಸಲು ಜೆಡಿಎಸ್ ಕೂಡ ತಯಾರಿ ನಡೆಸಿದೆ. ಈ ಹಿನ್ನೆಲೆಯಲ್ಲಿ ನಿಖಿಲ್ ಮಂಡ್ಯದ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ತಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ಈ ಹಿಂದೆ ಕುಮಾರಸ್ವಾಮಿಯವರು ಕೂಡ ಅಭಿಮಾನಿಗಳ ಒತ್ತಾಯ ಇದೆ. ಹೀಗಾಗಿ ನಿಖಿಲ್ ಮಂಡ್ಯದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದರು. ಸದ್ಯ ಮಂಡ್ಯದಲ್ಲಿ ಈ ಬಾರಿ ಯಾರು ಅಭ್ಯರ್ಥಿ ಆಗ್ತಾರೆ ಅನ್ನೋ ಗೊಂದಲ ಶುರುವಾಗಿದ್ದು, ಮೈತ್ರಿ ಪಕ್ಷ ಯಾವ ರೀತಿ ಇದನ್ನ ಸರಿಪಡಿಸಿಕೊಂಡು ಅಭ್ಯರ್ಥಿಯನ್ನ ಕಣಕ್ಕಿಳಿಸುತ್ತೆ ಅಂತ ಕಾದು ನೋಡಬೇಕಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv