Tag: American Airlines

  • ಟೇಕಾಫ್‌ ವೇಳೆ ಕೈಕೊಟ್ಟ ಲ್ಯಾಂಡಿಂಗ್‌ ಗೇರ್‌ – ಬೋಯಿಂಗ್ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ

    ಟೇಕಾಫ್‌ ವೇಳೆ ಕೈಕೊಟ್ಟ ಲ್ಯಾಂಡಿಂಗ್‌ ಗೇರ್‌ – ಬೋಯಿಂಗ್ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ

    ವಾಷಿಂಗ್ಟನ್‌: ಅಮೆರಿಕದ ಡೆನ್ವರ್ ವಿಮಾನ (American Airlines) ನಿಲ್ದಾಣದಿಂದ (Denver Airport) ಮಿಯಾಮಿಗೆ ತೆರಳಬೇಕಿದ್ದ ಅಮೇರಿಕನ್ ಏರ್‌ಲೈನ್ಸ್‌ನ ಬೋಯಿಂಗ್ 737 MAX 8 ವಿಮಾನದ ಲ್ಯಾಂಡಿಂಗ್ ಗೇರ್ ಕೈಕೊಟ್ಟಿದೆ. ಪೈಲಟ್‌ ಟೇಕಾಫ್‌ ಸ್ಥಗಿತಗೊಳಿಸಿದ್ದು, ಈ ವೇಳೆ ವಿಮಾನದ ಹಿಂಭಾಗದಲ್ಲಿ ದೊಡ್ಡ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.

    ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿಮಾನದ ತುರ್ತು ದ್ವಾರಗಳಿಂದ ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿ ಕೆಳಗೆ ಇಳಿದಿದ್ದಾರೆ. ಸ್ಥಳೀಯ ಕಾಲಮಾನ ಮಧ್ಯಾಹ್ನ 2:45 ಕ್ಕೆ ಈ ಘಟನೆ ಸಂಭವಿಸಿದೆ. ಈ ಅವಘಡದಲ್ಲಿ 6 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಇದರಲ್ಲಿ ಒಬ್ಬನಿಗೆ ಚಿಕಿತ್ಸೆ ಅಗತ್ಯವಿತ್ತು ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಫ್ಯುಯೆಲ್ ಸ್ವಿಚ್ ನಿರ್ವಹಿಸುವಾಗ ಜಾಗ್ರತೆ – ಪೈಲಟ್‍ಗಳಿಗೆ ಆದೇಶಿಸಿದ ಇತಿಹಾದ್ ಏರ್‌ಲೈನ್ಸ್‌

    ಟೆಕಾಫ್‌ ಆಗುವ ಕೆಲವೇ ಕ್ಷಣಗಳ ಮೊದಲು ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಎಚ್ಚೆತ್ತ ಪೈಲಟ್ ವಿಮಾನವನ್ನು ಹಠಾತ್‌ ಆಗಿ ನಿಲ್ಲಿಸಿದ್ದಾರೆ. ಈ ವೇಳೆ ಟೈರ್‌ಗಳು ಮತ್ತು ಬ್ರೇಕಿಂಗ್ ಲ್ಯಾಂಡಿಂಗ್ ಗೇರ್ ಬಳಿ ಬೆಂಕಿ ಕಾಣಿಸಿದೆ. ವಿಮಾನ ಕೆಲ ಸಮಯ ರನ್‌ ವೇಯಲ್ಲೇ ನಿಂತಿದ್ದರಿಂದ 90 ವಿಮಾನಗಳ ಹಾರಾಟ ವಿಳಂಬವಾಗಿದೆ.

    ವಿಮಾನದಲ್ಲಿದ್ದ ಎಲ್ಲಾ 173 ಪ್ರಯಾಣಿಕರು ಮತ್ತು ಆರು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ವಿಮಾನವನ್ನು ರನ್‌ ವೇಯಿಂದ ಸ್ಥಳಾಂತರಿಸಲಾಗಿದೆ. ವಿಮಾನಯಾನ ಸಂಸ್ಥೆಯು ವಿಮಾನದಲ್ಲಿನ ಸಮಸ್ಯೆಯನ್ನು ಗುರುತಿಸಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮುಂಬೈ ಏರ್‌ಪೋರ್ಟ್‌ನಲ್ಲಿ ಆಕಾಸ ಏರ್ ವಿಮಾನಕ್ಕೆ ಟ್ರಕ್‌ ಡಿಕ್ಕಿ

  • 178 ಜನರನ್ನು ಹೊತ್ತೊಯ್ಯುತ್ತಿದ್ದ ಅಮೇರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ – ರೆಕ್ಕೆಯ ಮೇಲೇರಿದ ಪ್ರಯಾಣಿಕರು!

    178 ಜನರನ್ನು ಹೊತ್ತೊಯ್ಯುತ್ತಿದ್ದ ಅಮೇರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ – ರೆಕ್ಕೆಯ ಮೇಲೇರಿದ ಪ್ರಯಾಣಿಕರು!

    ವಾಷಿಂಗ್ಟನ್‌: 178 ಜನರನ್ನು ಹೊತ್ತು ಅಮೆರಿಕದ (America) ಕೊಲೊರಾಡೋ ಸ್ಪ್ರಿಂಗ್ಸ್‌ನಿಂದ ಡಲ್ಲಾಸ್ ಫೋರ್ಟ್ ವರ್ತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವಿಮಾನದ ಎಂಜಿನ್‌ನಲ್ಲಿ ಬೆಂಕಿ (Fire Accident) ಕಾಣಿಸಿಕೊಂಡಿದೆ.

    ಕೂಡಲೇ ವಿಮಾನವನ್ನು ಡೆನ್ವರ್‌ ವಿಮಾನ ನಿಲ್ದಾಣದ ಕಡೆಗೆ ತಿರುಗಿಸಲಾಯಿತು. ಅಲ್ಲಿ ಲ್ಯಾಂಡ್‌ ಆಗುತ್ತಿದ್ದಂತೆ ವಿಮಾನದಲ್ಲಿ ಬೆಂಕಿ ಹೆಚ್ಚಾಗಿದೆ. ಅಲ್ಲದೇ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ವಿಮಾನ ನಿಲ್ದಾಣದ ಸಿಬ್ಬಂದಿ ವಿಮಾನದಲ್ಲಿದ್ದ 6 ಸಿಬ್ಬಂದಿ ಸೇರಿದಂತೆ, 178 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಅವಘಡದಲ್ಲಿ 12 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರಯಾಣಿಕರನ್ನು ಸ್ಥಳಾಂತರಿಸುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೈರಲ್‌ ಆದ ವಿಡಿಯೋದಲ್ಲಿ ಪ್ರಯಾಣಿಕರು ವಿಮಾನದ ರೆಕ್ಕೆಯ ಮೇಲೆ ನಿಂತಿರುವುದನ್ನು ನೋಡಬಹುದಾಗಿದೆ.

    ಪೈಲಟ್‌ ಹಾಗೂ ಏರ್‌ಪೋರ್ಟ್‌ನ ಸಿಬ್ಬಂದಿ ವಿಮಾನದಲ್ಲಿದ್ದ ಪ್ರತಿಯೊಬ್ಬರ ಸುರಕ್ಷತೆಯನ್ನು ಆದ್ಯತೆಯಾಗಿಟ್ಟುಕೊಂಡು ತ್ವರಿತ ಮತ್ತು ನಿರ್ಣಾಯಕ ಕ್ರಮಕೈಗೊಂಡಿದ್ದಕ್ಕೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಅಮೇರಿಕನ್ ಏರ್‌ಲೈನ್ಸ್ (American Airlines) ತಿಳಿಸಿದೆ.

    ವಿಮಾನದಲ್ಲಿ ಅಗ್ನಿ ದುರಂತ ಸಂಭವಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ರಂಪ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಟ್ರಂಪ್ ನೇತೃತ್ವದಲ್ಲಿ ವಿಮಾನ ಸುರಕ್ಷತೆ ಕುಸಿಯುತ್ತಿರುವಂತೆ ತೋರುತ್ತಿದೆ, ಬಹುಶಃ ವಿಮಾನಯಾನ ಸುರಕ್ಷತಾ ಕ್ರಮಗಳನ್ನು ಕಡಿತಗೊಳಿಸಿರುವುದರಂದ ಇಂತಹ ಘಟನೆಗಳು ಸಂಭವಿಸುತ್ತಿರಬಹುದು ಎಂದು ಅಸಮಾಧಾನ ಹೊರಹಾಕಿದ್ದಾರೆ.

  • ವಿಮಾನ – ಹೆಲಿಕಾಪ್ಟರ್ ದುರಂತ; ಎಲ್ಲಾ 64 ಮಂದಿ ದುರ್ಮರಣ, 28 ಮೃತದೇಹ ಪತ್ತೆ

    ವಿಮಾನ – ಹೆಲಿಕಾಪ್ಟರ್ ದುರಂತ; ಎಲ್ಲಾ 64 ಮಂದಿ ದುರ್ಮರಣ, 28 ಮೃತದೇಹ ಪತ್ತೆ

    ವಾಷಿಂಗ್ಟನ್: ಸೇನಾ ಹೆಲಿಕಾಪ್ಟರ್‌ – ಅಮೆರಿಕರ ವಿಮಾನದ ನಡುವಿನ ದುರಂತದಲ್ಲಿ (Plane Helicopter Collision) ಎಲ್ಲಾ 64 ಮಂದಿ ದುರ್ಮರಣಕ್ಕೀಡಾಗಿದ್ದು, ಈವರೆಗೆ 28 ಮೃತದೇಹಗಳನ್ನು ಪೊಟೊಮ್ಯಾಕ್ ನದಿಯಿಂದ (Potomac River) ಹೊರತೆಗೆಯಲಾಗಿದೆ ಎಂದು ವರದಿಗಳು ತಿಳಿಸಿವೆ.

    ಅಮೆರಿಕದ (America) ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ (Reagan National Airport) ಬಳಿ ದುರಂತ ನಡೆದಿದೆ. ಈ ವೇಳೆ ಅಮೆರಿಕನ್ ಏರ್‌ಲೈನ್ಸ್ ಫ್ಲೈಟ್-5342ರಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ 64 ಮಂದಿ ಸಾವನ್ನಪ್ಪಿದ್ದು, ಈವರೆಗೆ 28 ಮೃತದೇಹಳನ್ನು ಹೊರತೆಗೆಯಲಾಗಿದೆ. ಭೀಕರ ದುರಂತದಲ್ಲಿ ಬದುಕುಳಿದಿರುವ ಸಾಧ್ಯತೆಗಳು ಕಡಿಮೆ ಎಂದು ವಾಷಿಂಗ್ಟನ್ ಅಗ್ನಿಶಾಮಕ ಮುಖ್ಯಸ್ಥ ಜಾನ್ ಡೊನ್ನೆಲ್ಲಿಯನ್ನು ತಿಳಿಸಿದ್ದಾರೆ. ಇದನ್ನೂ ಓದಿ: AI ರಂಗದಲ್ಲಿ ಡೀಪ್‌ಸೀಕ್ ಸಂಚಲನ – ಅಮೆರಿಕ ಷೇರುಪೇಟೆ ಶೇಕ್!

    ಸದ್ಯ ನದಿಯಲ್ಲಿ ಉಳಿದ ಮೃತದೇಹಳಿಗಾಗಿ ಕಾರ್ಯಾಚರಣೆ ಮುಂದುವರಿದಿದೆ. ಆದ್ರೆ ಮಿಲಿಟರಿ ಬ್ಲಾಕ್‌ ಹಾಕ್ ಹೆಲಿಕಾಪ್ಟರ್‌ನಲ್ಲಿ ಮೂವರು ಸೈನಿಕರಿದ್ದು, ಅವರ ಬಗ್ಗೆ ಯಾವುದೇ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕಾಂಗೋದಲ್ಲಿ M23 ಬಂಡುಕೋರರ ಲೂಟಿ – 100ಕ್ಕೂ ಹೆಚ್ಚು ಬಲಿ, ಸಾವಿರಾರು ಜನರಿಗೆ ಗಾಯ

    ಅಪಘಾತ ಸಂಭವಿಸಿದ್ದು ಹೇಗೆ?
    ದುರಂತಕ್ಕೀಡಾದ ಅಮೆರಿಕನ್‌ ಏರ್‌ಲೈನ್ಸ್‌ (American Airlines) ವಿಮಾನವು ಕಾನ್ಸಾಸ್‌ನಿಂದ ಡಿ.ಸಿ.ಯ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬುಧವಾರ ತಡರಾತ್ರಿ ಪೊಟೊಮ್ಯಾಕ್ ನದಿಯಲ್ಲಿ ವಿಮಾನ ಪತನಗೊಂಡಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದೆ. ವಿಮಾನ ನಿಲ್ದಾಣದಲ್ಲಿ ಎಲ್ಲಾ ಹಾರಾಟಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿನ ವಲಸಿಗರ ಕೈಗೆ ಕೋಳ – ಟ್ರಂಪ್ ಆದೇಶದ ವಿರುದ್ಧ ಸಿಡಿದೆದ್ದ ಸಿಖ್ಖರು

  • ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ – American Airlines ನಲ್ಲಿ ಮತ್ತೊಂದು ಕೇಸ್‌

    ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ – American Airlines ನಲ್ಲಿ ಮತ್ತೊಂದು ಕೇಸ್‌

    ವಾಷಿಂಗ್ಟನ್‌: ಇತ್ತೀಚೆಗೆ ವಿಮಾನಗಳಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಏರ್ ಇಂಡಿಯಾ (Air India), ಗೋ ಫಸ್ಟ್‌ ಬಳಿಕ ಅಮೆರಿಕನ್ ಏರ್‌ಲೈನ್ಸ್ (American Airlines) ವಿಮಾನದಲ್ಲೂ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.‌

    ಅಮೆರಿಕನ್‌ ಏರ್‌ಲೈನ್ಸ್‌ನ ನ್ಯೂಯಾರ್ಕ್‌-ನವದೆಹಲಿ (New York-Delhi Flight) ವಿಮಾನದಲ್ಲಿ ಭಾರತದ ಪ್ರಯಾಣಿಕನೊಬ್ಬ ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ವಿಮಾನ ದೆಹಲಿಗೆ ಬಂದಿಳಿದ ನಂತರ ಆರೋಪಿಯನ್ನ ಸಿಐಎಸ್ಎಫ್ ಅಧಿಕಾರಿಗಳು ಬಂಧಿಸಿದ್ದಾರೆ.

    Air India

    ವಿಮಾನಯಾನ ಸಂಸ್ಥೆ ಸಹಪ್ರಯಾಣಿಕನ ಹೇಳಿಕೆಯನ್ನ ದಾಖಲಿಸಿಕೊಂಡಿದ್ದು, ಆರೋಪಿ ವಿರುದ್ಧ ನಾಗರಿಕ ವಿಮಾನಯಾನ ಕಾಯ್ದೆ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಇದನ್ನೂ ಓದಿ: ಕೇದಾರನಾಥ ಯಾತ್ರೆ ಇಂದಿನಿಂದ ಆರಂಭ – ಯಾತ್ರಾರ್ಥಿಗಳಿಗೆ ಬಾಗಿಲು ತೆರೆದ ದೇವಾಲಯ

    ಏನಿದು ಘಟನೆ?
    ಅಮೆರಿಕನ್‌ ಏರ್‌ಲೈನ್ಸ್‌ನ AA-292 ವಿಮಾನವು ನ್ಯೂಯಾರ್ಕ್‌ನಿಂದ ದೆಹಲಿಗೆ ಹೊರಟಿತ್ತು. ಈ ವೇಳೆ ಭಾರತದ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ಸಂಬಂಧ ಅಮೆರಿಕನ್‌ ಏರ್‌ಲೈನ್ಸ್‌ ವಿಮಾನ ಲ್ಯಾಂಡಿಂಗ್‌ ಆಗುವ ಮೊದಲೇ ದೆಹಲಿ ವಿಮಾನ ನಿಲ್ದಾಣಕ್ಕೆ (Delhi Airport) ವಿಷಯ ವರದಿ ಮಾಡಿತ್ತು. ಭಾನುವಾರ ರಾತ್ರಿ 9 ಗಂಟೆಗೆ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ ಆರೋಪಿಯನ್ನ ಬಂಧಿಸಲಾಗಿದೆ. ಇದನ್ನೂ ಓದಿ: ಯಾವುದೇ ಅಹಂ ಇಲ್ಲ, ಬಿಜೆಪಿ ವಿರುದ್ಧ ಹೋರಾಡಲು ಸಿದ್ಧ: ಮಮತಾ ಬ್ಯಾನರ್ಜಿಯನ್ನು ಭೇಟಿಯಾದ ನಿತೀಶ್

    ಕಳೆದ ವರ್ಷ ನವೆಂಬರ್‌ನಲ್ಲಿ ಏರ್‌ ಇಂಡಿಯಾದಲ್ಲಿ ವ್ಯಕ್ತಿಯೊಬ್ಬ ಸಹ ಪ್ರಯಾಣಿಕ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಮತ್ತೊಂದು ಘಟನೆಯಲ್ಲಿ ಡಿಸೆಂಬರ್‌ 6 ರಂದು ಪ್ಯಾರಿಸ್-ನವದೆಹಲಿ ಏರ್‌ ಇಂಡಿಯಾ ವಿಮಾನದಲ್ಲೂ ಇದೇ ಘಟನೆ ನಡೆದಿತ್ತು. ಈ ವರ್ಷದ ಮಾರ್ಚ್‌ ತಿಂಗಳಲ್ಲೂ ಅಮೆರಿಕನ್‌ ಏರ್‌ಲೈನ್ಸ್‌ನಲ್ಲಿ ಇದೇ ರೀತಿ ಘಟನೆ ವರದಿಯಾಗಿತ್ತು.

  • ಮತ್ತೊಂದು ಕೇಸ್ – ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ

    ಮತ್ತೊಂದು ಕೇಸ್ – ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ

    ನವದೆಹಲಿ: ಇತ್ತೀಚೆಗೆ ವಿಮಾನಗಳಲ್ಲಿ ಮೂತ್ರ ವಿಸರ್ಜನೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಏರ್ ಇಂಡಿಯಾ, ಗೋ ಫಸ್ಟ್‌ ಬಳಿಕ ಇದೀಗ ಅಮೆರಿಕನ್ ಏರ್‌ಲೈನ್ಸ್ (American Airlines) ವಿಮಾನದಲ್ಲೂ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

    ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಅಮೇರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಕುಡಿದ ಅಮಲಿನಲ್ಲಿ ಪ್ರಯಾಣಿಕನೊಬ್ಬ ಸಹ ಪ್ರಯಾಣಿಕನ (Flight Passenger) ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ವಿಮಾನ ದೆಹಲಿಗೆ (Delhi) ಬಂದಿಳಿದ ನಂತರ ಆರೋಪಿಯನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಮೂತ್ರ ವಿಸರ್ಜನೆ ಕೇಸ್‌ನಲ್ಲಿ ಪೈಲಟ್‌ ಬಲಿಪಶು – ಏರ್‌ ಇಂಡಿಯಾ ಪೈಲಟ್‌ ಒಕ್ಕೂಟ

    Air India

    ಎಎ292 ಅಮೆರಿಕನ್ ಏರ್‌ಲೈನ್ಸ್ ವಿಮಾನವು ಶುಕ್ರವಾರ ರಾತ್ರಿ 9:16ಕ್ಕೆ ನ್ಯೂಯಾರ್ಕ್‌ನಿಂದ ಹೊರಟು, 14 ಗಂಟೆ 26 ನಿಮಿಷಗಳ ನಂತರ (ಶನಿವಾರ ರಾತ್ರಿ 10:12ಕ್ಕೆ) ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (IGIA) ಬಂದಿಳಿಯಿತು. ಇದನ್ನೂ ಓದಿ: DGCA ನಿಮಯಗಳ ಉಲ್ಲಂಘನೆ – ಏರ್‌ಏಷ್ಯಾ ಇಂಡಿಯಾಗೆ 44 ಲಕ್ಷ ದಂಡ

    ಆರೋಪಿಯು ಅಮೇರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದು, ಕುಡಿದ ಅಮಲಿನಲ್ಲಿ ಮಲಗಿದ್ದಾಗ ಮೂತ್ರ ವಿಸರ್ಜನೆ ಮಾಡಿದ್ದಾನೆ. ಬಳಿಕ ಇದು ಹೇಗೋ ಸೋರಿಕೆಯಾಗಿದೆ ಎಂದು ಕ್ಷಮೆಯಾಚಿಸಿದ್ದಾನೆ. ಆದರೂ ಸಹ ಪ್ರಯಾಣಿಕ ಏರ್‌ಲೈನ್ ಸಿಬ್ಬಂದಿಗೆ ದೂರು ನೀಡಿದ್ದರಿಂದಾಗಿ ಆತನನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ.

    2022ರ ನವೆಂಬರ್ ತಿಂಗಳಿನಲ್ಲಿ ಏರ್ ಇಂಡಿಯಾ ವಿಮಾನದಲ್ಲಿ ಟೆಕ್ಕಿ ಶಂಕರ್ ಮಿಶ್ರಾ ತನ್ನ ಸಹ ಪ್ರಯಾಣಿಕ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿತ್ತು. ಇದಾದ ನಂತರ ಗೋ ಫಸ್ಟ್‌ ವಿಮಾನದಲ್ಲೂ ಇದೇ ರೀತಿ ಕೇಸ್ ಬೆಳಕಿಗೆ ಬಂದಿತ್ತು.