Tag: Amit mishra

  • IPL 2023: ಬೌಲರ್‌ಗಳ ಬಿಗಿ ಹಿಡಿತದಲ್ಲಿ ಹೈದರಾಬಾದ್‌ ಒದ್ದಾಟ – ಲಕ್ನೋಗೆ 5 ವಿಕೆಟ್‌ಗಳ ಜಯ

    IPL 2023: ಬೌಲರ್‌ಗಳ ಬಿಗಿ ಹಿಡಿತದಲ್ಲಿ ಹೈದರಾಬಾದ್‌ ಒದ್ದಾಟ – ಲಕ್ನೋಗೆ 5 ವಿಕೆಟ್‌ಗಳ ಜಯ

    ಲಕ್ನೋ: ಬಿಗಿ ಹಿಡಿತದ ಬೌಲಿಂಗ್‌ ಹಾಗೂ ಕೆ.ಎಲ್‌.ರಾಹುಲ್‌ (KL Rahul), ಕೃನಾಲ್‌ ಪಾಂಡ್ಯ (Krunal Pandya) ಜವಾಬ್ದಾರಿಯುತ ಬ್ಯಾಟಿಂಗ್‌ ನೆರವಿನಿಂದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿದ್ದು, 16ನೇ ಆವೃತ್ತಿಯ ಐಪಿಎಲ್‌ನಲ್ಲಿ 2ನೇ ಗೆಲುವು ದಾಖಲಿಸಿದೆ.

    ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಏಡೆನ್ ಮಾರ್ಕ್ರಮ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 121 ರನ್ ಗಳಿಸಿತು. 122 ರನ್‌ ಗಳ ಅಲ್ಪಮೊತ್ತದ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ (Lacknow Super Gaints) ತಂಡವು 16 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 127 ರನ್‌ ಗಳಿಸಿ ಜಯ ಸಾಧಿಸಿತು. ಇದನ್ನೂ ಓದಿ:  ರಿಕ್ವೆಸ್ಟ್‌ ಮಾಡಿ ಕೊಹ್ಲಿ ಕೈಹಿಡಿದು ಡಾನ್ಸ್‌ ಮಾಡಿಸಿದ ಬಾದ್‌ ಷಾ – ಚಾಂಪಿಯನ್ಸ್‌ ಆಗೋಣ ಎಂದ ಜೂಹಿ ಚಾವ್ಲಾ

    ಚೇಸಿಂಗ್‌ ಆರಂಭಿಸಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಆರಂಭದಲ್ಲಿ ವಿಕೆಟ್‌ ಕಳೆದುಕೊಂಡರೂ ರನ್‌ ಕಲೆಹಾಕುತ್ತಾ ಸಾಗಿತು. ಆರಂಭಿಕರಾಗಿ ಕಣಕ್ಕಿಳಿದ ಕೇಲ್‌ ಮೇಯರ್ಸ್‌ 13 ರನ್‌ ಗಳಿಸಿ ಔಟಾಗುತ್ತಿದ್ದಂತೆ ದೀಪಕ್‌ 7 ರನ್‌ ಗಳಿಸಿ ವಿಕೆಟ್‌ ಕೈಚೆಲ್ಲಿದರು. 3ನೇ ವಿಕೆಟ್‌ಗೆ ಜೊತೆಯಾದ ಕೃನಾಲ್‌ ಪಾಂಡ್ಯ ಹಾಗೂ ಆರಂಭಿಕ ಕೆ.ಎಲ್‌. ರಾಹುಲ್‌ ಉತ್ತಮ ಜೊತೆಯಾಟವಾಡಿ ಚೇತರಿಕೆ ನೀಡಿದರು. 38 ಎಸೆತಗಳಲ್ಲಿ ಈ ಜೋಡಿ 55 ರನ್‌ ಕಲೆಹಾಕಿತು. ಈ ವೇಳೆ ಕೃನಾಲ್‌ ಪಾಂಡ್ಯ 23 ಎಸೆತಗಳಲ್ಲಿ 34 ರನ್‌ (4 ಬೌಂಡರಿ, 1 ಸಿಕ್ಸರ್)‌ ಗಳಿಸಿದರು. ಇನ್ನೂ 36 ಎಸೆತಗಳಲ್ಲಿ ಗೆಲುವಿಗೆ 8 ರನ್‌ಗಳ ಅಗತ್ಯವಿದ್ದಾಗಲೇ ರಾಹುಲ್‌ 35 ರನ್‌ (30 ಎಸೆತ, 4 ಬೌಂಡರಿ) ಗಳಿಸಿ ಹೊರನಡೆದರು. ಕೊನೆಯಲ್ಲಿ ಮಾರ್ಕಸ್‌ ಸ್ಟೋಯ್ನಿಸ್‌ 10 ರನ್‌, ನಿಕೊಲಸ್‌ ಪೂರನ್‌ ಅಜೇಯ 11 ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

    ಹೈದರಾಬಾದ್‌ ತಂಡದ ಪರ ಆದಿಲ್‌ ರಶೀದ್‌ 2 ವಿಕೆಟ್‌ ಪಡೆದರೆ, ಭುವನೇಶ್ವರ್‌ ಕುಮಾರ್‌, ಫಜಲ್ಹಕ್ ಫಾರೂಕಿ, ಹಾಗೂ ಉಮ್ರಾನ್‌ ಮಲಿಕ್‌ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: ಅಭಿಮಾನಿಗಳನ್ನ ಹುಚ್ಚೆದ್ದು ಕುಣಿಸೋದೇಕೆ ಗೊತ್ತಾ – ಚಿಯರ್‌ ಗರ್ಲ್ಸ್‌ ಸಂಭಾವನೆ ಕೇಳಿದ್ರೆ ಶಾಕ್‌ ಆಗ್ತೀರಾ

    ಸನ್‌ರೈಸರ್ಸ್ ಹೈದರಾಬಾದ್ ತಂಡ ಪರ ಬ್ಯಾಟಿಂಗ್ ಆರಂಭಿಸಿದ ಮಯಾಂಕ್ ಅಗರ್ವಾಲ್ (Mayank Agarwal) ಮತ್ತು ಅನ್ಮೋಲ್‌ಪ್ರಿತ್ ಸಿಂಗ್ ಉತ್ತಮ ಆರಂಭ ನೀಡುವಲ್ಲಿ ವಿಫಲರಾದರು. 2.5 ಓವರ್‌ಗಳಲ್ಲಿ ತಂಡದ ಮೊತ್ತ 21 ರನ್‌ಗಳಾಗಿದ್ದಾಗಲೇ 8 ರನ್ ಗಳಿಸಿ ಆಡುತ್ತಿದ್ದ ಮಯಾಂಕ್ ಅಗರ್ವಾಲ್ ಸುಲಭ ಕ್ಯಾಚ್‌ ನೀಡಿ ವಿಕೆಟ್ ಒಪ್ಪಿಸಿದರು. ನಂತರ ಬಂದ ರಾಹುಲ್ ತ್ರಿಪಾಠಿ (Rahul Tripathi) ನಿಧಾನಗತಿಯ ಬ್ಯಾಟಿಂಗ್‌ ನಡೆಸಿ 41 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ 35 ರನ್ ಗಳಿಸಿದರು. ಈ ವೇಳೆ ಅನ್ಮೋಲ್‌ಪ್ರಿತ್ ಸಿಂಗ್ 26 ಎಸೆತಗಳಲ್ಲಿ 31 ರನ್ (3 ಬೌಂಡರಿ, 1 ಸಿಕ್ಸರ್)‌ ಗಳಿಸಿ ಔಟಾದರು.

    4ನೇ ವಿಕೆಟ್‌ಗೆ ಕ್ರೀಸ್‌ಗಿಳಿದ ನಾಯಕ ಏಡೆನ್ ಮಾರ್ಕ್ರಮ್ ಮೊದಲ ಎಸೆತದಲ್ಲೇ ಕೃನಾಲ್ ಪಾಂಡ್ಯ ಸ್ಪಿನ್‌ ದಾಳಿಗೆ ತುತ್ತಾದರು. ನಂತರ ಹ್ಯಾರಿ ಬ್ರೂಕ್ 3 ರನ್, ವಾಷಿಂಗ್ಟನ್ ಸುಂದರ್ 28 ಎಸೆತಗಳಲ್ಲಿ 16 ರನ್, ಅಬ್ದುಲ್ ಸಮದ್ 10 ಎಸೆತಗಳಲ್ಲಿ 21 ರನ್, ಆದಿಲ್ ರಶೀದ್ 4 ರನ್ ಗಳಿಸಿದರು.

    ಬೌಲಿಂಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಕೃನಾಲ್ ಪಾಂಡ್ಯ 4 ಓವರ್‌ಗಳಲ್ಲಿ 18 ರನ್ ನೀಡಿ 3 ವಿಕೆಟ್ ಕಿತ್ತರೆ, ಅಮಿತ್ ಮಿಶ್ರಾ 4 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಯಶ್ ಠಾಕೂರ್ ಮತ್ತು ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.

  • ವಿಷಕಾರಿದ್ದ ಅಫ್ರಿದಿ ವಿರುದ್ಧ ಅಮಿತ್ ಮಿಶ್ರಾ ಕಿಡಿ

    ವಿಷಕಾರಿದ್ದ ಅಫ್ರಿದಿ ವಿರುದ್ಧ ಅಮಿತ್ ಮಿಶ್ರಾ ಕಿಡಿ

    ನವದೆಹಲಿ: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‍ನನ್ನು ಬೆಂಬಲಿಸಿ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಟ್ವೀಟ್ ಮಾಡಿದ್ದಕ್ಕೆ ಭಾರತೀಯ ಕ್ರಿಕೆಟಿಗ ಅಮಿತ್ ಮಿಶ್ರಾ ಕಿಡಿಕಾರಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರವನ್ನು ಬೆಂಬಲಿಸಿದ್ದಕ್ಕಾಗಿ ಮಲಿಕ್‍ಗೆ ಮರಣದಂಡನೆ ವಿಧಿಸಬೇಕೆಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಬುಧವಾರ ನ್ಯಾಯಾಲಯವನ್ನು ಒತ್ತಾಯಿಸಿತ್ತು. ಇದನ್ನೂ ಓದಿ: ಪುಟಿನ್‌ನೊಂದಿಗೆ ನೇರ ಮಾತುಕತೆಗೆ ನಾನು ಸಿದ್ಧ: ಝೆಲೆನ್ಸ್ಕಿ

    ಈ ಬಗ್ಗೆ ಟ್ವೀಟ್ ಮಾಡಿದ್ದ ಅಫ್ರಿದಿ, ಮಾನವ ಹಕ್ಕುಗಳ ದುರುಪಯೋಗದ ವಿರುದ್ಧ ವಿಮರ್ಶಾತ್ಮಕ ಧ್ವನಿಗಳನ್ನು ಮೌನಗೊಳಿಸಲು ಭಾರತದ ನಿರಂತರ ಪ್ರಯತ್ನಗಳು ನಿಷ್ಪ್ರಯೋಜಕವಾಗಿದೆ. ಯಾಸಿನ್ ಮಲಿಕ್ ವಿರುದ್ಧದ ಆರೋಪಗಳು ಕಾಶ್ಮೀರದ ಸ್ವಾತಂತ್ರ್ಯ ಹೋರಾಟಕ್ಕೆ ಅಡ್ಡಿಯಾಗದಿರಲಿ. ಕಾಶ್ಮೀರಿ ನಾಯಕರ ವಿರುದ್ಧ ಅನ್ಯಾಯ ಮತ್ತು ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ನಿಗಾ ಇಡುವಂತೆ ವಿಶ್ವಸಂಸ್ಥೆಗೆ ಒತ್ತಾಯಿಸುತ್ತೇವೆ ಎಂದು ಬರೆದುಕೊಂಡಿದ್ದರು. ಇದನ್ನೂ ಓದಿ: ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ

    ಇದಕ್ಕೆ ಪ್ರತ್ಯುತ್ತರವಾಗಿ, ಅಮಿತ್ ಮಿಶ್ರಾ ಅವರು ಟ್ವೀಟ್ ಮಾಡಿ, ಆತ್ಮೀಯ ಶಾಹಿದ್ ಅಫ್ರಿದಿ ಅವರೇ ಯಾಸಿನ್ ಮಲಿಕ್ ಸ್ವತಃ ನ್ಯಾಯಾಲಯದ ದಾಖಲೆಯಲ್ಲಿ ತಪ್ಪೋಪ್ಪಿಕೊಂಡಿದ್ದಾನೆ. ನಿಮ್ಮ ಜನ್ಮದಿನಾಂಕದಂತೆ ಎಲ್ಲವೂ ದಾರಿತಪ್ಪಿಸುವುದಿಲ್ಲ ಎಂದು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

    ವಿವಿಧ ಪ್ರಕರಣಗಳ ಮೇಲೆ 2017ರಲ್ಲಿ ಮಲಿಕ್ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗಿತ್ತು. ದೆಹಲಿಯ ತಿಹಾರ್ ಜೈಲಿನಲ್ಲಿ ಭಾರಿ ಭದ್ರತೆಯಲ್ಲಿದ್ದ ಯಾಸಿನ್ ಮಲಿಕ್ ವಿರುದ್ಧ ಯುಎಪಿಎ ಕಾಯ್ದೆಯ ಸೆಕ್ಷನ್ 16 (ಭಯೋತ್ಪಾದನಾ ಕೃತ್ಯ), 17 (ಭಯೋತ್ಪಾದನಾ ಚಟುವಟಿಕೆಗೆ ಹಣಕಾಸು ಸಂಗ್ರಹ), 18 (ಭಯೋತ್ಪಾದನಾ ಕೃತ್ಯ ಎಸಗಲು ಸಂಚು) ಮತ್ತು 20 (ಭಯೋತ್ಪಾದನಾ ಸಂಘಟನೆಯ ಸದಸ್ಯನಾಗಿರುವುದು), ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 (ಅಪರಾಧ ಸಂಚು) ಮತ್ತು 124 (ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಲಾಗಿತ್ತು. ಕೋರ್ಟ್ ವಿಚಾರಣೆಯಲ್ಲಿ ಕೃತ್ಯದ ಬಗ್ಗೆ ಯಸಿನ್ ಮಲಿಕ್ ತಪ್ಪೊಪ್ಪಿಕೊಂಡಿದ್ದ. ಎನ್‍ಐಎ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

  • ಕ್ರೀಸ್‌ಗಿಳಿಯುವ ಮುನ್ನ ಧೋನಿ ಬ್ಯಾಟ್ ಕಚ್ಚಿದ್ದೇಕೆ? ರಹಸ್ಯ ಬಿಚ್ಚಿಟ್ಟ ಮಿಶ್ರಾ

    ಕ್ರೀಸ್‌ಗಿಳಿಯುವ ಮುನ್ನ ಧೋನಿ ಬ್ಯಾಟ್ ಕಚ್ಚಿದ್ದೇಕೆ? ರಹಸ್ಯ ಬಿಚ್ಚಿಟ್ಟ ಮಿಶ್ರಾ

    ಮುಂಬೈ: IPL 15ನೇ ಆವೃತ್ತಿಯಲ್ಲಿ ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರಸಿಂಗ್ ಧೋನಿ ಬ್ಯಾಟ್ ಕಚ್ಚುತ್ತಿದ್ದ ದೃಶ್ಯ ಬಾರೀ ಕುತೂಹಲ ಮೂಡಿಸಿತ್ತು.

    ಚೆನ್ನೈ ಇನ್ನಿಂಗ್ಸ್ ವೇಳೆ ಕೊನೆಯ ಹಂತದಲ್ಲಿ ಕುಳಿತಿದ್ದ ಧೋನಿ, ತಮ್ಮ ಬ್ಯಾಟ್ ಅನ್ನು ಕಚ್ಚುತ್ತಿದ್ದರು. ಈ ಫೋಟೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ, ಬ್ಯಾಟ್ ಕಚ್ಚಿದ್ದರ ಹಿಂದಿನ ರಹಸ್ಯವನ್ನು ಭಾರತೀಯ ಮಾಜಿ ಕ್ರಿಕೆಟಿಗ ಅಮಿತ್ ಮಿಶ್ರಾ ಬಹಿರಂಗಪಡಿಸಿದ್ದಾರೆ.

    https://twitter.com/Im_Perfect45/status/1523325474805456896?ref_src=twsrc%5Etfw%7Ctwcamp%5Etweetembed%7Ctwterm%5E1523325474805456896%7Ctwgr%5E%7Ctwcon%5Es1_&ref_url=https%3A%2F%2Fwww.prajavani.net%2Fsports%2Fcricket%2Fipl-2022-amit-mishra-explains-why-does-dhoni-bite-his-bat-935353.html

    ಧೋನಿ ಬ್ಯಾಟ್ ಅನ್ನು ಕಚ್ಚಿದ್ದೇಕೆ ಎಂದು ನೀವು ಆಶ್ಚರ್ಯಪಟ್ಟಿದ್ದರೆ, ಧೋನಿ ಅವರು ಬ್ಯಾಟಲ್ಲಿ ಇದ್ದ ಟೇಪ್ ಅನ್ನು ತೆಗೆಯಲು ಪ್ರಯತ್ನಿಸುತ್ತಿದ್ದರು. ಅವರು ಯಾವಾಗಲೂ ಕ್ಲೀನ್ ಬ್ಯಾಟ್ ಇಷ್ಟಪಡುತ್ತಾರೆ. ಎಂಎಸ್‌ಡಿ ಬ್ಯಾಟಿಂಗ್ ಮಾಡುವಾಗ ಒಂದೇ ಒಂದು ತುಂಡು ಟೇಪ್ ಸಹ ಕಾಣಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

    ಡೆಲ್ಲಿ ವಿರುದ್ಧ ನಡೆದ ಪಂದ್ಯದಲ್ಲಿ 91 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದ ಚೆನ್ನೈ , ಪ್ಲೇ-ಆಫ್ ಕನಸನ್ನು ಜೀವಂತವಾರಿಗಿಸಿದೆ. ಬ್ಯಾಟಿಂಗ್‌ನಲ್ಲಿ ಮಿಂಚಿದ ಧೋನಿ ಕೇವಲ 8 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 1 ಬೌಂಡರಿ ಸಿಡಿಸಿ 21 ರನ್ ಗಳಿಸಿ ಅಜೇಯರಾಗುಳಿದರು.

  • ಪಠಾಣ್ VS ಮಿಶ್ರಾ ಟ್ವೀಟ್ ವಾರ್ – ನಾನು ಸಂವಿಧಾನ ಅನುಸರಿಸುತ್ತೇನೆ ಎಂದ ಪಠಾಣ್

    ಪಠಾಣ್ VS ಮಿಶ್ರಾ ಟ್ವೀಟ್ ವಾರ್ – ನಾನು ಸಂವಿಧಾನ ಅನುಸರಿಸುತ್ತೇನೆ ಎಂದ ಪಠಾಣ್

    ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್ ಹಾಗೂ ಅಮಿತ್ ಮಿಶ್ರಾ ಅವರ ನಡುವೆ ನೆನ್ನೆಯಿಂದಲೂ ಟ್ವೀಟ್ ವಾರ್ ನಡೆಯುತ್ತಿದ್ದು, ಇಂದೂ ಸಹ ಟಾಪ್ ಟ್ರೆಂಡಿಗ್ ಟ್ವೀಟ್ ಆಗಿದೆ.

    ನೆನ್ನೆ ಅಮಿತ್ ಮಿಶ್ರಾ ಅವರು ಮಾಡಿದ್ದ ಟ್ವೀಟ್‌ಗೆ ಮತ್ತೆ ತಿರುಗೇಟು ನೀಡಿರುವ ಇರ್ಫಾನ್ ಪಠಾಣ್ ತಮ್ಮ ಟ್ವೀಟ್‌ನಲ್ಲಿ, ನಾನು ಭಾರತದ ಸಂವಿಧಾನವನ್ನು ಯಾವಾಗಲೂ ಅನುಸರಿಸುತ್ತೇನೆ. ನಮ್ಮ ಸುಂದರ ದೇಶದ ಪ್ರತಿಯೊಬ್ಬ ನಾಗರಿಕನೂ ಇದನ್ನು ಅನುಸರಿಸಬೇಕು ಎಂದು ಒತ್ತಾಯಿಸುತ್ತೇನೆ. ದಯವಿಟ್ಟು ಓದಿ ಮತ್ತೆ ಓದಿ… ಎಂದು ಹೇಳಿದ್ದಾರೆ. ಇದರೊಂದಿಗೆ ಭಾರತ ಸಂವಿಧಾನದ ಪೀಠಿಕೆಯ ಚಿತ್ರವನ್ನು ಹಾಕಿದ್ದಾರೆ. ಇದನ್ನೂ ಓದಿ: ಪಠಾಣ್‌ Vs ಮಿಶ್ರಾ – ಭಾರತ ಶ್ರೇಷ್ಠ ದೇಶವಾಗಬಹುದು ಆದರೆ…

    amit mishra irfan pathan

    ಟ್ವೀಟ್ ವಾರ್‌ನ ಅಸಲಿ ಗುಟ್ಟೇನು?: ಭಾರತದ ವೇಗದ ಬೌಲರ್ ಆಗಿದ್ದ ಇರ್ಫಾನ್ ಪಠಾಣ್ ಯಾವುದೇ ಘಟನೆಯನ್ನು ಉಲ್ಲೇಖಿಸದೇ, ‘ನನ್ನ ದೇಶ, ನನ್ನ ಸುಂದರ ದೇಶ, ಭೂಮಿಯ ಮೇಲಿನ ಶ್ರೇಷ್ಠ ದೇಶವಾಗುವ ಸಾಮರ್ಥ್ಯವನ್ನು ಹೊಂದಿದೆ. ಆದರೆ…..’ ಎಂದು ಬರೆದು ಟ್ವೀಟ್ ಮಾಡಿದ್ದರು.

    ಈ ಟ್ವೀಟ್‌ಗೆ ಟಾಂಗ್ ಕೊಡುವಂತೆ ಮಾಜಿ ಬಲಗೈ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ, ‘ನನ್ನ ದೇಶ, ನನ್ನ ಸುಂದರ ದೇಶ, ಭೂಮಿಯ ಮೇಲಿನ ಶ್ರೇಷ್ಠ ದೇಶವಾಗುವ ಸಾಮರ್ಥ್ಯ ಹೊಂದಿದೆ. ನಮ್ಮ ಸಂವಿಧಾನವೇ ನಮ್ಮ ಮೊದಲ ಗ್ರಂಥ ಎಂಬುದನ್ನು ಕೆಲವರು ಅರಿತುಕೊಂಡಾಗ ಮಾತ್ರ’ ಎಂದು ಬರೆದಿದ್ದರು. ಇದನ್ನೂ ಓದಿ: ಡೆಲ್ಲಿಯ ಪ್ರವೀಣ್‌ಗೆ ದಂಡದೊಂದಿಗೆ ಒಂದು ಪಂದ್ಯ ಬ್ಯಾನ್

    ಈಗ ಇಬ್ಬರ ಟ್ವೀಟ್‌ಗಳ ಬಗ್ಗೆ ಚರ್ಚೆಗೆ ಗ್ರಾಸವಾಗಿದೆ. ದೇಶದಲ್ಲಿ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಇರ್ಫಾನ್ ಪಠಾಣ್ ಸರಿಯಾದ ಟ್ವೀಟ್ ಮಾಡಿದ್ದಾರೆ ಎಂದು ಕೆಲವು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇನ್ನೂ ಕೆಲವರು ಅಮಿತ್ ಮಿಶ್ರಾ ಸರಿಯಾದ ರೀತಿಯಲ್ಲಿ ಹೇಳಿದ್ದಾರೆ. ಭಾರತದಲ್ಲಿ ಸಂವಿಧಾನವೇ ಮೊದಲಾಗಬೇಕೆ ಹೊರತು, ಧರ್ಮ ಗ್ರಂಥವಲ್ಲ. ಬಲಗೈ ಲೆಗ್ ಸ್ಪಿನ್ನರ್‌ಗೆ ಎಡಗೈ ಬ್ಯಾಟರ್ ಪಠಾಣ್ ಕ್ಲೀನ್ ಬೌಲ್ಡ್ ಆಗಿದ್ದಾರೆ ಎಂದು ಟ್ರೋಲ್ ಮಾಡಿದ್ದಾರೆ.

  • ಪಠಾಣ್‌ Vs ಮಿಶ್ರಾ – ಭಾರತ ಶ್ರೇಷ್ಠ ದೇಶವಾಗಬಹುದು ಆದರೆ…

    ಪಠಾಣ್‌ Vs ಮಿಶ್ರಾ – ಭಾರತ ಶ್ರೇಷ್ಠ ದೇಶವಾಗಬಹುದು ಆದರೆ…

    ನವದೆಹಲಿ: ಭಾರತದ ಮಾಜಿ ಬೌಲರ್‌ಗಳಾದ ಇರ್ಫಾನ್‌ ಪಠಾಣ್‌ ಮತ್ತು ಅಮಿತ್‌ ಮಿಶ್ರಾ ಅವರು ಭಾರತದ ಬಗ್ಗೆ ಮಾಡಿದ ಟ್ವೀಟ್‌ಗಳು ಈಗ ಟ್ರೆಂಡಿಂಗ್‌ ಆಗಿದೆ.

    ಇಂದು ಬೆಳಗ್ಗೆ 5:13ಕ್ಕೆ ಮಾಜಿ ವೇಗದ ಬೌಲರ್‌ ಇರ್ಫಾನ್‌ ಪಠಾಣ್‌ ಯಾವುದೇ ಘಟನೆಯನ್ನು ಉಲ್ಲೇಖಿಸದೇ, ನನ್ನ ದೇಶ, ನನ್ನ ಸುಂದರ ದೇಶ, ಭೂಮಿಯ ಮೇಲಿನ ಶ್ರೇಷ್ಠ ದೇಶವಾಗುವ ಸಾಮರ್ಥ್ಯವನ್ನು ಹೊಂದಿದೆ. ಆದರೆ….. ಎಂದು ಬರೆದು ಟ್ವೀಟ್‌ ಮಾಡಿದ್ದರು. ಇದನ್ನೂ ಓದಿ: ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ – ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅರೆಸ್ಟ್‌

    ಈ ಟ್ವೀಟ್‌ಗೆ ತಿರುಗೇಟು ಎಂಬಂತೆ ಮಾಜಿ ಬಲಗೈ ಲೆಗ್‌ ಸ್ಪಿನ್ನರ್‌ ಅಮಿತ್‌ ಮಿಶ್ರಾ, ನನ್ನ ದೇಶ, ನನ್ನ ಸುಂದರ ದೇಶ, ಭೂಮಿಯ ಮೇಲಿನ ಶ್ರೇಷ್ಠ ದೇಶವಾಗುವ ಸಾಮರ್ಥ್ಯ ಹೊಂದಿದೆ…ನಮ್ಮ ಸಂವಿಧಾನವೇ ನಮ್ಮ ಮೊದಲ ಪುಸ್ತಕ ಎಂಬುದನ್ನು ಕೆಲವರು ಅರಿತುಕೊಂಡಾಗ ಮಾತ್ರ ಎಂದು ಬರೆದು ತಿರುಗೇಟು ನೀಡಿದ್ದಾರೆ.

    ಈಗ ಇಬ್ಬರ ಟ್ವೀಟ್‌ಗಳ ಬಗ್ಗೆ ಚರ್ಚೆ ಆಗುತ್ತಿದೆ. ದೇಶದಲ್ಲಿ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಇರ್ಫಾನ್‌ ಪಠಾಣ್‌ ಸರಿಯಾದ ಟ್ವೀಟ್‌ ಮಾಡಿದ್ದಾರೆ ಎಂದು ಕೆಲವು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನನ್ನ ಕೈಯಲ್ಲಿ ಭಾರತದ ಲಸಿಕೆಯಿದೆ: ಬ್ರಿಟನ್ ಪ್ರಧಾನಿ ಬೋರಿಸ್

    ಇನ್ನು ಕೆಲವರು ಅಮಿತ್‌ ಮಿಶ್ರಾ ಸರಿಯಾದ ರೀತಿಯಲ್ಲಿ ಹೇಳಿದ್ದಾರೆ.ಭಾರತದಲ್ಲಿ ಸಂವಿಧಾನ ಪುಸ್ತಕವೇ ಮೊದಲು ಹೊರತು ಧರ್ಮ ಗ್ರಂಥವಲ್ಲ.  ಬಲಗೈ ಲೆಗ್ ಸ್ಪಿನ್ನರ್‌ಗೆ ಎಡಗೈ ಬ್ಯಾಟರ್ ಪಠಾಣ್ ಕ್ಲೀನ್‌ ಬೌಲ್ಡ್‌ ಆಗಿದ್ದಾರೆ ಎಂದು ಟ್ರೋಲ್‌ ಮಾಡುತ್ತಿದ್ದಾರೆ.

  • RCB ಕಪ್ ಗೆಲ್ಲುವ ವರೆಗೆ ಮದುವೆ ಆಗಲ್ಲ – ಅಭಿಮಾನಿಯ ಪೋಸ್ಟರ್ ವೈರಲ್

    RCB ಕಪ್ ಗೆಲ್ಲುವ ವರೆಗೆ ಮದುವೆ ಆಗಲ್ಲ – ಅಭಿಮಾನಿಯ ಪೋಸ್ಟರ್ ವೈರಲ್

    ಮುಂಬೈ: 15ನೇ ಆವೃತ್ತಿ ಐಪಿಎಲ್‍ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ವೇಳೆ ಆರ್​ಸಿಬಿ ಅಭಿಮಾನಿಯೊಬ್ಬರು ಹಿಡಿದಿದ್ದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಬಾರಿ ಸದ್ದು ಮಾಡುತ್ತಿದೆ.

    ಆರ್​ಸಿಬಿ ಮತ್ತು ಚೆನ್ನೈ ನಡುವಿನ ಪಂದ್ಯದ ವೇಳೆ ಆರ್​ಸಿಬಿ ಅಭಿಮಾನಿ ಹುಡುಗಿಯೊಬ್ಬಳು ಆರ್​ಸಿಬಿ ಕಪ್ ಗೆಲ್ಲುವ ವರೆಗೆ ಮದುವೆ ಆಗಲ್ಲ ಎಂದು ಬರೆದುಕೊಂಡಿದ್ದ ಪೋಸ್ಟರ್ ಒಂದು ಕ್ಯಾಮೆರಾ ಕಣ್ಣಿಗೆ ಬಿದ್ದಿದೆ. ಕ್ಯಾಮೆರಾಮ್ಯಾನ್ ಗ್ಯಾಲರಿ ಕಡೆ ಫೋಕಸ್ ಮಾಡಿ ಪೋಸ್ಟರ್ ಹಿಡಿದು ನಿಂತಿದ್ದ ಯುವತಿಯನ್ನು ಚಿತ್ರಿಸುತ್ತಿದ್ದಂತೆ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ ತೊಡಗಿದೆ. ಇದನ್ನೂ ಓದಿ: 74 ಎಸೆತಗಳಲ್ಲಿ 165 ರನ್‌ ಚಚ್ಚಿದ ಉತ್ತಪ್ಪ, ದುಬೆ – ಚೆನ್ನೈಗೆ 23 ರನ್‌ಗಳ ಜಯ

    14 ಆವೃತ್ತಿಗಳಲ್ಲಿ ಕಪ್ ಗೆಲ್ಲಲು ವಿಫಲವಾಗಿರುವ ಆರ್​ಸಿಬಿ ತಂಡ ಈ ಬಾರಿಯಾದರು ಕಪ್ ಗೆಲ್ಲಲಿ ಎಂಬ ಬಯಕೆ ಅಭಿಮಾನಿಗಳದ್ದು, ಹಾಗಾಗಿ ಪ್ರತಿ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ಆರ್​ಸಿಬಿ ಕಪ್ ಗೆಲ್ಲಲಿ ಎಂದು ಅಭಿಮಾನಿಗಳು ಹಾರೈಸುತ್ತಾರೆ. ಐಪಿಎಲ್‍ನಲ್ಲಿರುವ 10 ತಂಡಗಳ ಪೈಕಿ ಆರ್​ಸಿಬಿ ತಂಡಕ್ಕೆ ಅತಿ ಹೆಚ್ಚು ಅಭಿಮಾನಿಗಳಿದ್ದು, ಸಾಮಾಜಿಕ ಜಾಲತಾಣದಲ್ಲಿ ಆರ್​ಸಿಬಿ ತಂಡಕ್ಕೆ ಚಿಯರ್ ಆಪ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಐಪಿಎಲ್ 2022ರಲ್ಲಿ ಫಾಫ್ ಡು ಪ್ಲೆಸಿಸ್ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಬೇಕಿತ್ತು: ರವಿಶಾಸ್ತ್ರಿ

    ಇದೀಗ ಈ ಐಪಿಎಲ್ ಪೋಸ್ಟರ್ ಮತ್ತು ಹುಡುಗಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಆಹಾರವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮಾಜಿ ಕ್ರಿಕೆಟರ್ ಅಮಿತ್ ಮಿಶ್ರಾ ಇದೀಗ ಈ ಹುಡುಗಿಯ ಪೋಷಕರಿಗೆ ತಲೆನೋವು ಶುರುವಾಗಿದೆ ಎಂದು ಬರೆದುಕೊಂಡಿದ್ದಾರೆ.

  • ಲಖೀಂಪುರ್ ಖೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ವಜಾ ಮಾಡದಿರುವುದು ನಾಚಿಕೆಗೇಡು: ಕಾಂಗ್ರೆಸ್

    ಲಖೀಂಪುರ್ ಖೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ವಜಾ ಮಾಡದಿರುವುದು ನಾಚಿಕೆಗೇಡು: ಕಾಂಗ್ರೆಸ್

    ಲಕ್ನೋ: ಲಖೀಂಪುರ್ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಮಗ ಬಂಧನವಾದರೂ ಕೂಡ ಅವರನ್ನು ಸಚಿವ ಸಂಪುಟದಲ್ಲಿ ಮುಂದುವರಿಸುತ್ತಿರುವುದು ಕೇಂದ್ರ ಬಿಜೆಪಿ ಸರ್ಕಾರಕ್ಕೆ ನಾಚಿಕೆಗೇಡು ಎಂದು ಕಾಂಗ್ರೆಸ್ ಕಿಡಿಕಾರಿದೆ.

    ಲಖೀಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾನನ್ನು ಪೊಲೀಸರು ಬಂಧಿಸಿದ್ದಾರೆ. ಆದರೂ ಮೋದಿ ನೇತೃತ್ವದ ಸರ್ಕಾರ ಅವರನ್ನು ವಜಾಗೊಳಿಸದೆ ಸಂಪುಟದಲ್ಲಿ ಮುಂದುವರಿಸುತ್ತಿದೆ. ಇದು ಮೋದಿ ಸರ್ಕಾರದ ಅಹಂಕಾರದ ಮುಂದುವರಿದ ಭಾಗ ಎಂದು ಕಾಂಗ್ರೆಸ್ ವರ್ಕಿಂಗ್ ಕಮಿಟಿ (ಸಿಡಬ್ಲ್ಯೂಸಿ) ಟೀಕಿಸಿದೆ. ಇದನ್ನೂ ಓದಿ: ಲಖೀಂಪುರ್ ರೈತರ ಹತ್ಯಾಕಾಂಡ ಪ್ರಕರಣ- ಅಶೀಶ್ ಮಿಶ್ರಾ SIT ವಶಕ್ಕೆ

    ಬಿಜೆಪಿ ಸರ್ಕಾರದ ಜನ ವಿರೋಧಿ ನಡೆಯ ಬಗ್ಗೆ ಸಿಡಬ್ಲ್ಯೂಸಿ ನಿರ್ಣಯ ಅಂಗೀಕರಿಸಿದ್ದು, ಕಳೆದ ಏಳು ವರ್ಷಗಳಲ್ಲಿ ರೈತರು ಮತ್ತು ಭೂರಹಿತ ಕೃಷಿ ಕಾರ್ಮಿಕರ ಜೀವನೋಪಾಯದ ಮೇಲೆ ದಾಳಿ ಮಾಡಿದ ನೀಚ ಸರ್ಕಾರವಿದು. ಈ ಸರ್ಕಾರ ಬಂದ ಬಳಿಕ ಪ್ರಜಾಪ್ರಭುತ್ವ, ಆರ್ಥಿಕತೆ, ಭದ್ರತೆ ದೇಶದಲ್ಲಿ ಇಲ್ಲದಂತಹ ಪರಿಸ್ಥಿತಿ ಬಂದಿದೆ. ಇದಕ್ಕೆ ಸಾಕ್ಷಿ ಲಖೀಂಪುರ್ ಘಟನೆ. ಅಮಿತ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ಸಾರ್ವಜನಿಕ ವಲಯ ಮತ್ತು ಪ್ರತಿಪಕ್ಷ ಒತ್ತಾಯ ಮಾಡಿದರೂ ಸರ್ಕಾರ ನಾಚಿಕೆ ಇಲ್ಲದವರಂತೆ ವರ್ತಿಸುತ್ತಿದೆ ಎಂದು ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಲಖಿಂಪುರ್ ಸಂತ್ರಸ್ತ ಕುಟುಂಬಗಳಿಗೆ ಹಣ ಬೇಕಿಲ್ಲ, ನ್ಯಾಯ ಬೇಕು: ಪ್ರಿಯಾಂಕಾ ಗಾಂಧಿ