Tag: amith nayak

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಗಿಚ್ಚಿ ಗಿಲಿಗಿಲಿ’ ನಟಿ ಪ್ರಿಯಾಂಕಾ ಕಾಮತ್

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಗಿಚ್ಚಿ ಗಿಲಿಗಿಲಿ’ ನಟಿ ಪ್ರಿಯಾಂಕಾ ಕಾಮತ್

    ಜಾಭಾರತ, ಗಿಚ್ಚಿ ಗಿಲಿಗಿಲಿ (Gichchi Giligili) ನಟಿ ಪ್ರಿಯಾಂಕಾ ಕಾಮತ್ (Priyanka Kamath) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಗಳೂರಿನಲ್ಲಿ ಅಮಿತ್ ನಾಯಕ್ ಜೊತೆ ಪ್ರಿಯಾಂಕಾ ಅದ್ದೂರಿಯಾಗಿ ಮದುವೆಯಾಗಿದ್ದಾರೆ. ನವಜೋಡಿಗೆ ಕಿರುತೆರೆ ನಟ-ನಟಿಯರು ಆಗಮಿಸಿ ಶುಭಹಾರೈಸಿದ್ದಾರೆ.

    ಕಳೆದ ಎರಡು ದಿನಗಳಿಂದ ಮೆಹೆಂದಿ ಶಾಸ್ತ್ರ, ಹಳದಿ ಶಾಸ್ತ್ರ ಮದುವೆ ಕುರಿತ ಕಾರ್ಯಕ್ರಮಗಳು ಸಂಭ್ರಮದಿಂದ ಜರುಗಿವೆ. ಇದೀಗ ದಾಂಪತ್ಯ ಜೀವನಕ್ಕೆ ನಟಿ ಕಾಲಿಟ್ಟಿದ್ದಾರೆ. ಈ ಕುರಿತ ಸುಂದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ.

    ಅಮಿತ್- ಪ್ರಿಯಾಂಕಾ ಕಳೆದ ಜನವರಿಯಲ್ಲಿ ಪುತ್ತೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅದಾದ ನಂತರದಲ್ಲಿ ಏಳು-ಬೀಳಿನಲ್ಲಿ ಇವರಿಬ್ಬರು ಒಟ್ಟಿಗೆ ಸಾಥ್ ನೀಡಿದ್ದರು. ಇದೀಗ ಹೊಸ ಬಾಳಿಗೆ ನವಜೋಡಿ ಕಾಲಿಟ್ಟಿದ್ದಾರೆ. ಇದನ್ನೂ ಓದಿ:‘ಕಾಟೇರ’ ಮೂಲಕ ಸಿನಿಮಾ ವಿತರಣಾ ಕ್ಷೇತ್ರಕ್ಕೆ ಮರಳಿದ ಗುರು ದೇಶಪಾಂಡೆ

    ಅಮಿತ್ ನಾಯಕ್ (Amith Nayak) ಮೂಲತಃ ಕುಂದಾಪುರದವರು. ಕಳೆದ ಒಂದು ವರ್ಷದಿಂದ ಈ ಜೋಡಿ ಸಾಕಷ್ಟು ಕಡೆ ಪ್ರವಾಸ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿತ್ತು.

    ನಟಿ ಪ್ರಿಯಾಂಕಾ ಮೂಲತಃ ಮಂಗಳೂರಿನವರು. ಅನಾರೋಗ್ಯದ ಸಮಸ್ಯೆಯಿಂದಾಗಿ ಎರಡು ಬಾರಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆಗ ಅಮಿತ್ ಅವರು ಪ್ರಿಯಾಂಕಾ ನೆರವಿಗೆ ನಿಂತು ಸಂಗಾತಿಯ ಆರೈಕೆ ಮಾಡಿದ್ದರು. ಅದನ್ನು ನಟಿಯೇ ಸಾಕಷ್ಟು ಬಾರಿ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು.

  • ಮದುವೆ ಸಂಭ್ರಮದಲ್ಲಿ ‘ಗಿಚ್ಚಿ ಗಿಲಿಗಿಲಿ’ ನಟಿ ಪ್ರಿಯಾಂಕಾ ಕಾಮತ್

    ಮದುವೆ ಸಂಭ್ರಮದಲ್ಲಿ ‘ಗಿಚ್ಚಿ ಗಿಲಿಗಿಲಿ’ ನಟಿ ಪ್ರಿಯಾಂಕಾ ಕಾಮತ್

    ‘ಮಜಾ ಭಾರತ’- ‘ಗಿಚ್ಚಿ ಗಿಲಿಗಿಲಿ’ (Gicchi Giligili) ರಿಯಾಲಿಟಿ ಶೋಗಳಲ್ಲಿ ವಿವಿಧ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಕಾಮತ್ (Priyanka Kamath) ಅವರು ಮದುವೆಯ ಸಂಭ್ರಮದಲ್ಲಿದ್ದಾರೆ. ಈಗಾಗಲೇ ಪ್ರಿಯಾಂಕಾ ಅವರ ಸಂಗೀತ ಕಾರ್ಯಕ್ರಮ ಮಂಗಳೂರಿನಲ್ಲಿ ಗ್ರ್ಯಾಂಡ್‌ ಆಗಿ ನಡೆದಿದೆ. ಮದುವೆ ಬಗ್ಗೆ ನಟಿ ಪ್ರಿಯಾಂಕಾ ಎಲ್ಲಿಯೂ ಮಾಹಿತಿ ರಿವೀಲ್ ಮಾಡಿಲ್ಲ. ಈಗಾಗಲೇ ಅವರ ಮನೆಯಲ್ಲಿ ಮದುವೆ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯುತ್ತಿವೆ.

    ಈ ಜೋಡಿ ಕಳೆದ ಜನವರಿಯಲ್ಲಿ ಪುತ್ತೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಅದಾದ ನಂತರದಲ್ಲಿ ಏಳು-ಬೀಳಿನಲ್ಲಿ ಇವರಿಬ್ಬರು ಒಟ್ಟಿಗೆ ಸಾಥ್ ನೀಡಿದ್ದರು. ಇದೀಗ ಹೊಸ ಬಾಳಿಗೆ ಕಾಲಿಡುವ ಸಂಭ್ರಮದಲ್ಲಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ವಿನ್ನರ್ ಪಲ್ಲವಿ ಪ್ರಶಾಂತ್ ಗೆ ಕೋರ್ಟ್ ಶಾಕ್

     

    View this post on Instagram

     

    A post shared by Pixel Stream (@pixel_stream)

    ಅಮಿತ್ ನಾಯಕ್ ಜೊತೆ ಪ್ರಿಯಾಂಕಾ ಕಾಮತ್ ಅವರ ಮದುವೆ ನಡೆಯಲಿದೆ. ಅಮಿತ್ ನಾಯಕ್ ಮೂಲತಃ ಕುಂದಾಪುರದವರು.  ಕಳೆದ ಒಂದು ವರ್ಷದಿಂದ ಈ ಜೋಡಿ ಸಾಕಷ್ಟು ಕಡೆ ಪ್ರವಾಸ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿತ್ತು.

    ನಟಿ ಪ್ರಿಯಾಂಕಾ ಮೂಲತಃ ಮಂಗಳೂರಿನವರು. ಅನಾರೋಗ್ಯದ ಸಮಸ್ಯೆಯಿಂದಾಗಿ ಎರಡು ಬಾರಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆಗ ಅಮಿತ್ ಅವರು ಪ್ರಿಯಾಂಕಾ ನೆರವಿಗೆ ನಿಂತು ಸಂಗಾತಿಯ ಆರೈಕೆ ಮಾಡಿದ್ದರು. ಅದನ್ನು ನಟಿಯೇ ಸಾಕಷ್ಟು ಬಾರಿ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು.