Tag: AmitShah

  • ಒಂದು ಗ್ರಾಂ ಡ್ರಗ್ಸ್‌ ಕೂಡ ಭಾರತ ಪ್ರವೇಶಿಸಲು ಬಿಡಲ್ಲ: ಅಮಿತ್‌ ಶಾ ಪ್ರತಿಜ್ಞೆ

    ಒಂದು ಗ್ರಾಂ ಡ್ರಗ್ಸ್‌ ಕೂಡ ಭಾರತ ಪ್ರವೇಶಿಸಲು ಬಿಡಲ್ಲ: ಅಮಿತ್‌ ಶಾ ಪ್ರತಿಜ್ಞೆ

    ನವದೆಹಲಿ: ಒಂದು ಗ್ರಾಂ ಡ್ರಗ್ಸ್‌ (Drugs) ಕೂಡ ದೇಶಕ್ಕೆ ಪ್ರವೇಶಿಸಲು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಹೇಳಿದ್ದಾರೆ.

    ವಿಜ್ಞಾನ ಭವನದಲ್ಲಿ ಗುರುವಾರ ನಡೆದ 7ನೇ ಅಪೆಕ್ಸ್ ಲೆವೆಲ್ ನಾರ್ಕೋ-ಕೋಆರ್ಡಿನೇಷನ್ ಸೆಂಟರ್ (ಎನ್‌ಸಿಒಆರ್‌ಡಿ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತವನ್ನು ಮಾದಕವಸ್ತುಗಳಿಂದ ಮುಕ್ತಗೊಳಿಸುವುದಾಗಿ ಪ್ರತಿಜ್ಞೆ ಮಾಡಿದರು. ಇದನ್ನೂ ಓದಿ: ಅಫ್ಜಲ್‌ ಖಾನ್‌ ಕೊಲ್ಲಲು ಛತ್ರಪತಿ ಶಿವಾಜಿ ಬಳಿಸಿದ್ದ ‘ವಾಘ್‌ ನಖ್‌’ ಅಸ್ತ್ರ ಜು.19ಕ್ಕೆ ಲಂಡನ್‌ನಿಂದ ಭಾರತಕ್ಕೆ

    ಡ್ರಗ್ಸ್ ‌ಪೂರೈಕೆ ಸರಪಳಿ ಕಿತ್ತುಹಾಕಲು ನಿರ್ದಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾದಕ ದ್ರವ್ಯ ವಿರೋಧಿ ಏಜೆನ್ಸಿಗಳಿಗೆ ಅಮಿತ್‌ ಶಾ ಸಲಹೆ ನೀಡಿದ್ದಾರೆ.

    ಈಗ ಡ್ರಗ್ ಸಿಂಡಿಕೇಟ್‌ಗಳು ಸಮುದ್ರದ ಗಡಿಯ ಮೂಲಕ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ. ಅಧಿಕಾರಿಗಳು ಈ ಡ್ರಗ್ಸ್ ಗಮ್ಯಸ್ಥಾನಗಳ ಬಗ್ಗೆ ಆಕಸ್ಮಿಕವಾಗಿ ನನಗೆ ಹೇಳುತ್ತಿದ್ದರು. ಎಲ್ಲಿಂದಲೇ ಆಗಲಿ ಒಂದೇ ಒಂದು ಗ್ರಾಂ ಡ್ರಗ್ಸ್ ಭಾರತಕ್ಕೆ ಬರಲು ಬಿಡುವುದಿಲ್ಲ ಎಂದು ನಾವು ನಿರ್ಣಯ ಮಾಡಬೇಕು. ಭಾರತದ ಗಡಿಗಳನ್ನು ಯಾವುದೇ ರೀತಿಯಲ್ಲಿ ಮಾದಕವಸ್ತು ವ್ಯಾಪಾರಕ್ಕೆ ಬಳಸಿಕೊಳ್ಳಲು ಅನುಮತಿಸಬಾರದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜುಲೈ 20ರಂದು NEET-UG ಫಲಿತಾಂಶ ಪ್ರಕಟಿಸಿ – ಎನ್‌ಟಿಎಗೆ ಸುಪ್ರೀಂ ಆದೇಶ

    ಯಾವುದೇ ಮಾದಕವಸ್ತುಗಳು ದೇಶಕ್ಕೆ ಪ್ರವೇಶಿಸದಂತೆ ತಡೆಯುವ ಬದ್ಧವಾಗಿರಿ. ಭಾರತದ ಗಡಿಗಳನ್ನು ಮಾದಕವಸ್ತು ಕಳ್ಳಸಾಗಣೆಗೆ ಬಳಸದಂತೆ ಖಾತ್ರಿಪಡಿಸಿ ಎಂದು ರಾಜ್ಯಗಳಿಗೆ ಮನವಿ ಮಾಡಿದ್ದಾರೆ.

  • ಜೂನ್ 4ರಂದು ಷೇರುಪೇಟೆ ಮಹಾಪತನ ದೇಶದ ಅತಿದೊಡ್ಡ ಹಗರಣ: ರಾಹುಲ್ ಗಾಂಧಿ

    ಜೂನ್ 4ರಂದು ಷೇರುಪೇಟೆ ಮಹಾಪತನ ದೇಶದ ಅತಿದೊಡ್ಡ ಹಗರಣ: ರಾಹುಲ್ ಗಾಂಧಿ

    – ಮೋದಿ ವಿರುದ್ಧ ಜೆಪಿಸಿ ತನಿಖೆಗೆ ಆಗ್ರಹ

    ನವದೆಹಲಿ: ಐಎನ್‍ಡಿಐಎ ಕೂಟ ವಿಪಕ್ಷ ಸ್ಥಾನದಲ್ಲಿ ಕೂರಲು ನಿರ್ಧರಿಸಿದ ಬೆನ್ನಲ್ಲೇ ಮೋದಿ-ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ (Rahul Gandhi) ವಾಗ್ದಾಳಿ ಆರಂಭಿಸಿದ್ದಾರೆ.

    ಎಕ್ಸಿಟ್ ಪೋಲ್‍ಗಳನ್ನು (Exit Poll) ಮತ್ತು ಜೂನ್ ನಾಲ್ಕರ ಷೇರುಪೇಟೆ ಮಹಾಪತನವನ್ನು ಅತಿ ದೊಡ್ಡ ಹಗರಣ ಎಂದು ಆರೋಪಿಸಿದ್ದಾರೆ. ಮೋದಿ ಸೇರಿ ಬಿಜೆಪಿಯ ಉನ್ನತ ನಾಯಕರು ಸೇರಿಕೊಂಡು ಮಾಡಿರುವ ಹಗರಣ ಇದು. ಇದರಿಂದ ಹೂಡಿಕೆದಾರರಿಗೆ 30 ಲಕ್ಷ ಕೋಟಿ ನಷ್ಟವಾಗಿದೆ. ಈ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆ ನಡೆಯಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

    ಫಲಿತಾಂಶಕ್ಕೆ ಕೆಲವೇ ದಿನ ಮೊದಲು ಮೋದಿ, ಅಮಿತ್ ಶಾ, ನಿರ್ಮಲಾ ಸೀತಾರಾಮ್ ಷೇರ್ ಮಾರ್ಕೆಟ್ ಬಗ್ಗೆ ಏಕೆ ಹೇಳಿಕೆ ನೀಡಿದ್ರು ಎಂದು ಕೇಳಿದ್ದಾರೆ. ಕೆಲ ನಿರ್ದಿಷ್ಟ ಮಾಧ್ಯಮಗಳಿಗೆ ಮೋದಿ ನೀಡಿದ ಸಂದರ್ಶನದ ಬಗ್ಗೆಯೂ ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ.

    ಈ ನಡುವೆ ವಿಪಕ್ಷ ನಾಯಕತ್ವ ಜವಾಬ್ದಾರಿ ವಹಿಸಲು ಐಎನ್‍ಡಿಐಎ ಕೂಟ ಮುಂದಾಗಿದೆ. ಆದರೆ ರಾಹುಲ್ ಗಾಂಧಿ ಇನ್ನೂ ತಮ್ಮ ನಿರ್ಧಾರ ಪ್ರಕಟಿಸಿಲ್ಲ. ಸಮಯಾವಕಾಶ ಕೇಳಿದ್ದಾರೆ ಎನ್ನಲಾಗಿದೆ. ಇನ್ನೂ ವಯನಾಡು-ರಾಯ್‍ಬರೇಲಿ ಪೈಕಿ ಸ್ಥಾನವನ್ನು ಬಿಟ್ಟುಕೊಡಬೇಕು ಎಂಬ ಜಿಜ್ಞಾಸೆಯಲ್ಲಿ ರಾಹುಲ್ ಗಾಂಧಿ ಇದ್ದಾರೆ. ಇದೀಗ ರಾಹುಲ್ ತೆಗೆದುಕೊಳ್ಳುವ ಎರಡು ನಿರ್ಧಾರಗಳ ಬಗ್ಗೆ ಇದೀಗ ಕುತೂಹಲ ಮನೆ ಮಾಡಿದೆ.

  • ಅಮಿತ್‌ ಶಾ ಇನ್ನೂ ಪ್ರಧಾನಿಯಾಗಿಲ್ಲ ಆಗಲೇ ದುರಹಂಕಾರಿಯಾಗಿದ್ದಾರೆ: ಕೇಜ್ರಿವಾಲ್ ವಾಗ್ದಾಳಿ

    ಅಮಿತ್‌ ಶಾ ಇನ್ನೂ ಪ್ರಧಾನಿಯಾಗಿಲ್ಲ ಆಗಲೇ ದುರಹಂಕಾರಿಯಾಗಿದ್ದಾರೆ: ಕೇಜ್ರಿವಾಲ್ ವಾಗ್ದಾಳಿ

    ನವದೆಹಲಿ: ಗೃಹ ಸಚಿವ ಅಮಿತ್ ಶಾ (Amitshah) ಇನ್ನೂ ಪ್ರಧಾನಿಯಾಗಿಲ್ಲ, ಆಗಲೇ ಅವರು ದುರಹಂಕಾರಿಯಾಗಿದ್ದಾರೆ. ದೇಶದ ಜನರನ್ನು ನಿಂದಿಸಲು ಆರಂಭಿಸಿದ್ದಾರೆ. ಆಪ್ ಬೆಂಬಲಿಗರನ್ನು ಪಾಕಿಸ್ತಾನಿಗಳು ಎನ್ನುತ್ತಿದ್ದಾರೆ. ಈ ಮೂಲಕ ಅವರು ಜನರನ್ನು ಅವಮಾನಿಸುತ್ತಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ವಾಗ್ದಾಳಿ ನಡೆಸಿದ್ದಾರೆ.

    ಕೇಜ್ರಿವಾಲ್‌ ಅವರು ವೀಡಿಯೋ ಬಿಡುಗಡೆ ಮಾಡಿ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು. ಸೋಮವಾರ ಅಮಿತ್ ಶಾ ಚುನಾವಣಾ ಪ್ರಚಾರದಲ್ಲಿ ಜನರನ್ನು ನಿಂದಿಸಿದ್ದಾರೆ. ಆಮ್ ಆದ್ಮಿ ಪಕ್ಷದ ಬೆಂಬಲಿಗರು ಪಾಕಿಸ್ತಾನಿಗಳು ಎಂದು ಕರೆದಿದ್ದಾರೆ. ನಾನು ಅವರನ್ನು ಕೇಳಲು ಬಯಸುತ್ತೇನೆ, ದೆಹಲಿಯ ಜನರು ನಮಗೆ 62 ಸ್ಥಾನಗಳನ್ನು ನೀಡುವ ಮೂಲಕ ನಮ್ಮ ಸರ್ಕಾರವನ್ನು ರಚಿಸಿದ್ದಾರೆ. ಪಂಜಾಬ್ ನಲ್ಲಿ 117 ಸ್ಥಾನಗಳಲ್ಲಿ 92 ಸ್ಥಾನಗಳನ್ನು ನಮಗೆ ನೀಡಿದ್ದಾರೆ. ಗುಜರಾತ್, ಗೋವಾ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶದ ಜನರು ನಮಗೆ ಪ್ರೀತಿ ಮತ್ತು ವಿಶ್ವಾಸವನ್ನು ನೀಡಿದ್ದಾರೆ. ನಮ್ಮನ್ನು ಬೆಂಬಲಿಸಿದ ಜನರು ಪಾಕಿಸ್ತಾನಿಗಳಾ ಎಂದು ಪ್ರಶ್ನಿಸಿದರು.

    ಈ ದೇಶದ ಜನರೆಲ್ಲರೂ ನಿಮ್ಮನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಮಾಡಿದ್ದಾರೆಯೇ? ನೀವು ಇನ್ನೂ ಪ್ರಧಾನಿಯಾಗಿಲ್ಲ. ಈಗಲೇ ನೀವು ತುಂಬಾ ದುರಹಂಕಾರಿಯಾಗಿದ್ದೀರಿ. ಜನರನ್ನು ನಿಂದಿಸಲು ಮತ್ತು ಬೆದರಿಕೆ ಹಾಕಲು ಪ್ರಾರಂಭಿಸಿದ್ದೀರಿ. ನೀವು ಪ್ರಧಾನಿಯಾಗುತ್ತಿಲ್ಲ, ಜನರು ಬಿಜೆಪಿ ಸರ್ಕಾರವನ್ನು ರಚಿಸುತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಂಸದ ಜಯಂತ್ ಸಿನ್ಹಾಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್ ಜಾರಿ

    ಲೋಕಸಭಾ ಚುನಾವಣೆಯ ಒಂದೊಂದೇ ಹಂತ ಮುಕ್ತಾಯವಾಗುತ್ತಿರುವಂತೆ ಪ್ರಧಾನಿ ನರೇಂದ್ರ ಮೋದಿ (narendra Modi) ಅವರ ಸರ್ಕಾರ ದೇಶದಿಂದ ನಿರ್ಗಮಿಸುತ್ತಿದೆ. ಜೂನ್ 4 ರಂದು ಇಂಡಿಯಾ ಒಕ್ಕೂಟದ ಮೈತ್ರಿ ಸರ್ಕಾರ ರಚನೆಯಾಗಲಿದೆ. ಪ್ರತಿ ಹಂತದ ಮತದಾನದಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದೆ ಎಂಬುದು ಸ್ಪಷ್ಟವಾಗುತ್ತಿದೆ. ಇಂಡಿಯಾ ಬ್ಲಾಕ್ ದೇಶಕ್ಕೆ ಸ್ಥಿರ ಸರ್ಕಾರವನ್ನು ನೀಡುತ್ತದೆ. ಮೋದಿ ಸರ್ಕಾರವು ಅಧಿಕಾರದಿಂದ ಹೊರಬರಲಿದೆ ಎಂದು ಇದೇ ವೇಳೆ ಕೇಜ್ರಿವಾಲ್ ಭವಿಷ್ಯ ನುಡಿದರು. ‌

  • ಬಿಹಾರದಲ್ಲಿ ಭವ್ಯವಾದ ಸೀತಾ ಮಂದಿರ ಕಟ್ಟುತ್ತೇವೆ: ಅಮಿತ್ ಶಾ ಭರವಸೆ

    ಬಿಹಾರದಲ್ಲಿ ಭವ್ಯವಾದ ಸೀತಾ ಮಂದಿರ ಕಟ್ಟುತ್ತೇವೆ: ಅಮಿತ್ ಶಾ ಭರವಸೆ

    ಪಾಟ್ನಾ: ಅಯೋಧ್ಯೆಯ ರಾಮ ಮಂದಿರ ಬಿಜೆಪಿಯ ಪ್ರಮುಖ ಚುನಾವಣಾ ಭರವಸೆಗಳಲ್ಲಿ ಒಂದಾಗಿದ್ದು, ಅದು ನಿಜವಾಗಿದೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amitshah) ಅವರು ಮತ್ತೊಂದು ಪ್ರಮುಖ ಭರವಸೆ ನೀಡಿದ್ದಾರೆ.

    ಬಿಹಾರದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡುತ್ತಾ, ಸೀತಾಮರ್ಹಿಯಲ್ಲಿ ಸೀತಾ ದೇವಿಗೆ ಮಂದಿರ ನಿರ್ಮಾಣ ಮಾಡುವ ಕುರಿತು ಪ್ರಸ್ತಾಪ ಮಾಡಿದ್ದಾರೆ.

    ಬಿಜೆಪಿಯವರು ‘ವೋಟ್ ಬ್ಯಾಂಕ್’ಗೆ ಹೆದರುವುದಿಲ್ಲ. ಅಯೋಧ್ಯೆಯಲ್ಲಿ ರಾಮಲಲ್ಲಾ ಮಂದಿರವನ್ನು (Ayodhya Ramamanidra) ನಿರ್ಮಿಸಿದ ಪ್ರಧಾನಿ ಮೋದಿಯವರಿಗೆ (Narendra Modi) ಈಗ ಉಳಿದಿರುವ ಕೆಲಸವೆಂದರೆ ಸೀತೆಯ ಜನ್ಮಸ್ಥಳದಲ್ಲಿ ದೊಡ್ಡ ಸ್ಮಾರಕವನ್ನು ನಿರ್ಮಿಸುವುದಾಗಿದೆ. ರಾಮಮಂದಿರವನ್ನು ದೂರವಿಟ್ಟವರು ಇದನ್ನು ಮಾಡಲು ಸಾಧ್ಯವಿಲ್ಲ. ಸೀತೆಯ ಜೀವನದಂತೆ ಆದರ್ಶಪ್ರಾಯವಾದ ದೇವಾಲಯವನ್ನು ಯಾರಾದರೂ ನಿರ್ಮಿಸಲು ಸಾಧ್ಯವಾದರೆ ಅದು ನರೇಂದ್ರ ಮೋದಿ ಹಾಗೂ ಬಿಜೆಪಿಯಿಂದ ಮಾತ್ರ ಎಂದು ಅಮಿತ್ ಶಾ ಹೇಳಿದರು.

    ಮೇ 20 ರಂದು 5ನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು, ಬಿಹಾರದ 40 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ 40 ರಲ್ಲಿ 39 ಸ್ಥಾನಗಳನ್ನು ಗೆದ್ದಿತ್ತು.

  • ಮೋದಿಗೆ 75 ವರ್ಷವಾದ್ರೂ ಪ್ರಧಾನಿ ಆಗಿಯೇ ಆಗ್ತಾರೆ- ಕೇಜ್ರಿವಾಲ್‌ಗೆ ಅಮಿತ್ ಶಾ ಟಕ್ಕರ್

    ಮೋದಿಗೆ 75 ವರ್ಷವಾದ್ರೂ ಪ್ರಧಾನಿ ಆಗಿಯೇ ಆಗ್ತಾರೆ- ಕೇಜ್ರಿವಾಲ್‌ಗೆ ಅಮಿತ್ ಶಾ ಟಕ್ಕರ್

    ನವದೆಹಲಿ:‌ ನರೇಂದ್ರ ಮೋದಿ (Narendra Modi) ಅವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿದ್ದು, ಮೂರನೇ ಅವಧಿಯನ್ನು ಕೂಡ ಪೂರ್ಣಗೊಳಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ಹೇಳಿದ್ದಾರೆ.

    ಹೈದರಾಬಾದ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ ಬಿಜೆಪಿ ಅಧಿಕಾರಕ್ಕೆ ಬಂದರೂ ನರೇಂದ್ರ ಮೋದಿ ಪ್ರಧಾನಿಯಾಗಲ್ಲ ಎಂಬ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮೋದಿಜಿ 75 ನೇ ವರ್ಷಕ್ಕೆ ಕಾಲಿಡುತ್ತಿರುವ ಬಗ್ಗೆ ಸಂತೋಷಪಡುವ ಅಗತ್ಯವಿಲ್ಲ ಎಂದು ಅರವಿಂದ್ ಕೇಜ್ರಿವಾಲ್ ಮತ್ತು ಭಾರತ ಮೈತ್ರಿಕೂಟಕ್ಕೆ ಹೇಳಲು ಬಯಸುತ್ತೇನೆ. ಮೋದಿಜಿ ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ಬಿಜೆಪಿಯ ಸಂವಿಧಾನದಲ್ಲಿ ಬರೆದಿಲ್ಲ. ಅವರು ಮತ್ತೆ ಪ್ರಧಾನಿ ಆಗಿಯೇ ಆಗುತ್ತಾರೆ ಎಂದು ತಿಳಿಸಿದ್ದಾರೆ.

    ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನನ್ನು ಕ್ಲೀನ್ ಚಿಟ್ ಎಂದು ಪರಿಗಣಿಸಬಾರದು. ಮಧ್ಯಂತರ ಜಾಮೀನು ಜೂನ್ 1 ರವರೆಗೆ ಮಾತ್ರ ನೀಡಲಾಗಿದ್ದು, ಜೂನ್ 2 ರಂದು ಅವರು ಶರಣಾಗಬೇಕು. ಅರವಿಂದ್ ಕೇಜ್ರಿವಾಲ್ ಇದನ್ನು ಕ್ಲೀನ್ ಚಿಟ್ ಎಂದು ಪರಿಗಣಿಸಿದರೆ, ಕಾನೂನಿನ ಬಗ್ಗೆ ಅವರ ತಿಳುವಳಿಕೆ ದುರ್ಬಲವಾಗಿದೆ ಎಂದರ್ಥ ಅಂತಾ ಅಮಿತ್‌ ಶಾ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೂ ಮೋದಿ ಪ್ರಧಾನಿಯಾಗಲ್ಲ: ಅರವಿಂದ್ ಕೇಜ್ರಿವಾಲ್ ಭವಿಷ್ಯ

    ನಿನ್ನಯಷ್ಟೇ ಮಧ್ಯಂತರ ಜಾಮೀನಿನ ಮೇಲೆ ತಿಹಾರ್‌ ಜೈಲಿನಿಂದ ಹೊರಬಂದಿರುವ ಕೇಜ್ರಿವಾಲ್‌ ಇಂದು ಸುದ್ದಿಗೋಷ್ಠಿ ನಡೆಸಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ತುಂಬುತ್ತಿದೆ. 75 ವರ್ಷದ ಬಳಿಕ ರಾಜಕೀಯ ನಿವೃತ್ತಿ ಪಡೆಯಬೇಕು ಎಂದು ಅವರೇ ನಿರ್ಣಯ ಮಾಡಿದ್ದಾರೆ. ಇದೇ ಕಾರಣ ನೀಡಿ ಎಲ್‌.ಕೆ.ಅಡ್ವಾಣಿ, ಮುರುಳಿ ಮನೋಹರ್ ಜೋಶಿ ಸೇರಿದಂತೆ ಹಿರಿಯ ನಾಯಕರನ್ನು ತೆರೆ ಮರೆಗೆ ಸರಿಸಿದ್ದಾರೆ. ಈಗ 75 ವರ್ಷ ತುಂಬುತ್ತಿರುವ ಅವರು ಮುಂದಿನ ಪ್ರಧಾನಿ ಅಭ್ಯರ್ಥಿ ಯಾರು ಎಂದು ಘೋಷಿಸಬೇಕು ಎಂದಿದ್ದರು.

  • ಮಹಿಳೆಯರ ಮೇಲಿನ ದೌರ್ಜನ್ಯ ಸಹಿಸಲ್ಲ- ಪ್ರಜ್ವಲ್‌ ಬಗ್ಗೆ ಅಮಿತ್‌ ಶಾ ಫಸ್ಟ್‌ ರಿಯಾಕ್ಷನ್‌

    ಮಹಿಳೆಯರ ಮೇಲಿನ ದೌರ್ಜನ್ಯ ಸಹಿಸಲ್ಲ- ಪ್ರಜ್ವಲ್‌ ಬಗ್ಗೆ ಅಮಿತ್‌ ಶಾ ಫಸ್ಟ್‌ ರಿಯಾಕ್ಷನ್‌

    – ನಾವು ದೇಶದ ‘ಮಾತೃಶಕ್ತಿ’ ಜೊತೆ ನಿಲ್ಲುತ್ತೇವೆ

    ಡಿಸ್ಪುರ್: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ‘ಅಶ್ಲೀಲ ವಿಡಿಯೋ’ ಪ್ರಕರಣ ಸಂಬಂಧ ಇದೇ ಮೊದಲ ಬಾರಿಗೆ ಗುವಾಹಟಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ಪ್ರತಿಕ್ರಿಯೆ ನೀಡಿದ್ದಾರೆ.

    ಗುವಾಹಟಿಯಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಇದೊಂದು ಬಹಳ ಆಘಾತಕಾರಿ ಘಟನೆಯಾಗಿದೆ. ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ. ನಾವು ದೇಶದ ‘ಮಾತೃಶಕ್ತಿ’ ಜೊತೆ ನಿಲ್ಲುತ್ತೇವೆ. ಈ ವಿಚಾರದಲ್ಲಿ ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ನಾನು ಕಾಂಗ್ರೆಸ್ (Congress) ಸರ್ಕಾರವನ್ನು ಕೇಳಲು ಬಯಸುತ್ತೇನೆ. ಕರ್ನಾಟಕದಲ್ಲಿ ಯಾರ ಸರ್ಕಾರವಿದೆ? ಅವರ್ಯಾಕೆ ಇದುವರೆಗೆ ಕ್ರಮ ಕೈಗೊಂಡಿಲ್ಲ?. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಾಗಿದೆ ಎಂದರು.

    ನಾವು ತನಿಖೆಯ ಪರವಾಗಿದ್ದೇವೆ, ತನಿಖೆ ನಡೆಯಲಿ. ಇದು ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯ, ಹೀಗಾಗಿ ನಾವು ಈ ಬಗ್ಗೆ ಕ್ರಮ ಕೈಗೊಳ್ಳಲು ಆಗಲ್ಲ. ನಮ್ಮ ಮೈತ್ರಿ ಪಕ್ಷ ಜೆಡಿಎಸ್ ಕೂಡ ಇದರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಇಂದು ಅವರ ಕೋರ್ ಕಮಿಟಿ ಸಭೆ ಇದ್ದು, ಕ್ರಮಕೈಗೊಳ್ಳಲಿದ್ದಾರೆ ಎಂದು ಅಮಿತ್‌ ಶಾ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್‍ಗೆ ಟಿಕೆಟ್ ಕೊಡಬೇಡಿ ಅಂತಾ ಮೊದಲೇ ಹೇಳಿದ್ದೆ- ದೇವರಾಜೇ ಗೌಡ ಸ್ಫೋಟಕ ಹೇಳಿಕೆ

  • ಸೆಕೆಂಡ್ ಹಾಫ್ ಎಲೆಕ್ಷನ್‍ಗೆ ಅಮಿತ್ ಶಾ ಎಂಟ್ರಿ- ಉತ್ತರ ಕರ್ನಾಟಕ ಕ್ಷೇತ್ರಗಳತ್ತ ಚಾಣಕ್ಯ ಫೋಕಸ್

    ಸೆಕೆಂಡ್ ಹಾಫ್ ಎಲೆಕ್ಷನ್‍ಗೆ ಅಮಿತ್ ಶಾ ಎಂಟ್ರಿ- ಉತ್ತರ ಕರ್ನಾಟಕ ಕ್ಷೇತ್ರಗಳತ್ತ ಚಾಣಕ್ಯ ಫೋಕಸ್

    ಬೆಂಗಳೂರು: ಮೊದಲ ಹಂತದ ಲೋಕಸಭಾ ಚುನಾವಣೆಗೆ (Loksabha Elections 2024) ನಾಲ್ಕೆ ನಾಲ್ಕು ದಿನಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರದ ತೆರೆಗೂ ಮುನ್ನ ದೋಸ್ತಿಗಳು ಹಾಗೂ ಕಾಂಗ್ರೆಸ್ ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಇತ್ತ 2ನೇ ಹಂತದ ಲೋಕಸಭಾ ಚುನಾವಣಾ ಅಖಾಡಕ್ಕೆ ಕೇಸರಿ ಚಾಣಕ್ಯ ಅಮಿತ್ ಶಾ ಎಂಟ್ರಿ ಕೊಡಲಿದ್ದಾರೆ.

    ಎರಡನೇ ಹಂತದ ಕ್ಷೇತ್ರಗಳತ್ತ ಅಮಿತ್ ಶಾ ಫೋಕಸ್ ಮಾಡಿದ್ದು, ಕಾಂಗ್ರೆಸ್‍ಗೆ ಠಕ್ಕರ್ ಕೊಡಲು ತಂತ್ರಗಾರಿಕೆ ಹೂಡಿದ್ದಾರೆ. 2ನೇ ಹಂತದ ಪ್ರಚಾರಕ್ಕೆ ನೇಹಾ ಹಿರೇಮಠ್ ಪ್ರಕರಣವೇ ಬಿಜೆಪಿಗೆ ಬೂಸ್ಟ್. ಸೆಕೆಂಡ್ ಹಾಫ್ ಎಲೆಕ್ಷನ್‍ಗೆ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದಲೇ ಚಾಣಕ್ಯ ಕ್ಯಾಂಪೇನ್ ಸ್ಟಾರ್ಟ್ ಮಾಡಲಿದ್ದಾರೆ. ಹಳೇ ಮೈಸೂರು ನಂತರ ಈಗ ಉತ್ತರ ಕರ್ನಾಟಕ ಹಾಟ್ ಟಾರ್ಗೆಟ್, ಉತ್ತರ ಕ್ಷೇತ್ರಗಳ ಪಿಚ್ ರಿಪೋರ್ಟ್ ತರಿಸಿಕೊಂಡಿರುವ ಅಮಿತ್ ಶಾ, ಚುನಾವಣಾ ಕಣಕ್ಕೆ ಮತ್ತಷ್ಟು ರಂಗು ತುಂಬಲಿದ್ದಾರೆ.

    ಮಂಗಳವಾರ ಇಡೀ ದಿನ ರಾಜಧಾನಿಯಲ್ಲಿ ಅಮಿತ್ ಶಾ (Amitshah) ಭರ್ಜರಿ 4 ರೋಡ್ ಶೋ ನಡೆಸಲಿದ್ದಾರೆ. ನಾಡಿದ್ದು ಉಡುಪಿ-ಚಿಕ್ಕಮಗಳೂರು, ತುಮಕೂರು, ಹುಬ್ಬಳ್ಳಿ ಧಾರವಾಡದಲ್ಲಿ ಅಮಿತ್ ಶಾ ಪ್ರಚಾರ ಮಾಡಲಿದ್ದಾರೆ. ನಾಡಿದ್ದು ಹುಬ್ಬಳ್ಳಿಯಲ್ಲೇ ವಾಸ್ತವ್ಯ ಹೂಡಿ ಉತ್ತರ ಕ್ಷೇತ್ರಗಳತ್ತ ಅಮಿತ್ ಶಾ ಫೋಕಸ್ ಮಾಡಲಿದ್ದಾರೆ. ಹಳೆ ಮೈಸೂರು ಭಾಗ ಟಾರ್ಗೆಟ್ ನಂತರ ಈಗ ಉತ್ತರ ಕರ್ನಾಟಕ ಟಾರ್ಗೆಟ್ ಮಾಡಿದ್ದಾರೆ. ಉತ್ತರ ಕರ್ನಾಟಕ ಭಾಗದ ಮುಖಂಡರ ಜೊತೆ ಹುಬ್ಬಳ್ಳಿಯಲ್ಲಿ ಚಾಣಕ್ಯ ಹೈವೋಲ್ಟೇಜ್ ಸಭೆ ನಡೆಸೋ ಸಾಧ್ಯತೆ ಇದೆ. ಇದನ್ನೂ ಓದಿ: ಮುಸ್ಲಿಮರಿಗೆ ರಾಷ್ಟ್ರದ ಸಂಪತ್ತಿನ ಮೊದಲ ಹಕ್ಕು ಎಂದು ಕಾಂಗ್ರೆಸ್‌ ಹೇಳಿತ್ತು: ಮೋದಿ ಕಿಡಿ

  • ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದ ಗೃಹ ಸಚಿವ ಅಮಿತ್ ಶಾ

    ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದ ಗೃಹ ಸಚಿವ ಅಮಿತ್ ಶಾ

    ಮೈಸೂರು: ಸುತ್ತೂರು ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾರೆ.

    ಈ ವೇಳೆ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಚಾಮುಂಡಿ ಬೆಟ್ಟದಿಂದ (Chamundi HIlls) ರ್ಯಾಡಿಷನ್ ಬ್ಲೂ ಹೋಟೆಲ್ ಕಡೆ ತೆರಳಿದರು.

    ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಸಂದರ್ಭದಲ್ಲಿ ಅಮಿತ್ ಅಮಿತ್ ಶಾಗೆ ದೇವಾಲಯದ ವತಿಯಿಂದ ಪೂರ್ಣಕುಂಭ ಸ್ವಾಗತ ಮಾಡಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ನಾಗೇಂದ್ರ ಸೇರಿ ಸ್ಥಳೀಯ ಮುಖಂಡರೂ ಅಮಿತ್ ಶಾ ಅವರನ್ನು ಸ್ವಾಗತ ಮಾಡಿದರು. ಕಳಸ, ಮಂಗಳವಾದ್ಯದ ಮೂಲಕ ಗೃಹ ಸಚಿವರನ್ನು ಅರ್ಚಕರು ಬರಮಾಡಿಕೊಂಡರು. ಇದನ್ನೂ ಓದಿ: ಅಯೋಧ್ಯೆಯಲ್ಲಿ ಸುತ್ತೂರು ಶಾಖಾ ಮಠ ಆರಂಭಕ್ಕೆ ಚಿಂತನೆ: ಅಮಿತ್ ಶಾ

    ಗೃಹ ಸಚಿವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿ.ವೈ.ವಿಜಯೇಂದ್ರ, ಸಂಸದ ಪ್ರತಾಪ್ ಸಿಂಹ, ಸಿ.ಟಿ.ರವಿ ಸಾಥ್ ನೀಡಿದರು. ಅಮಿತ್ ಶಾ ಚಾಮುಂಡಿ ಬೆಟ್ಟಕ್ಕೆ ಭೇಟಿ ಹಿನ್ನೆಲೆಯಲ್ಲಿ ದೇವಾಲಯದ ಮುಂಭಾಗ ಬ್ಯಾರಿಕೇಡ್ ಹಾಕಲಾಗಿತ್ತು. ಅಲ್ಲದೆ ಮಧಾಹ್ನ 2:15 ರಿಂದ ಸಂಜೆ 4 ಗಂಟೆ ತನಕ ಸಾರ್ವಜನಿಕ ದರ್ಶನಕ್ಕೆ ನಿಬರ್ಂಧ ಹೇರಲಾಗಿದೆ. ಸಂಜೆ 4ರ ಬಳಿಕ ಮತ್ತೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದೇವಾಲಯದ ಸುತ್ತ ಬಿಗಿ ಪೆÇಲೀಸ್ ಭದ್ರತೆ ಒದಗಿಸಲಾಗಿತ್ತು.

  • ಕಪ್ಪು ಪಟ್ಟಿ ಧರಿಸಿ ಅಮಿತ್‌ ಶಾ ವಿರುದ್ಧ ಪ್ರತಿಭಟನೆ

    ಕಪ್ಪು ಪಟ್ಟಿ ಧರಿಸಿ ಅಮಿತ್‌ ಶಾ ವಿರುದ್ಧ ಪ್ರತಿಭಟನೆ

    ಮೈಸೂರು: ರಾಜ್ಯ ಪ್ರವಾಸದಲ್ಲಿರುವ ಅಮಿತ್‌ ಶಾ (Amitshah) ವಿರುದ್ಧ ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.

    ಕೇಂದ್ರದಿಂದ ಅನುದಾನ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿ ಮೈಸೂರು ಗ್ರಾಮಾಂತರ ಹಾಗೂ ನಗರ ಕಾಂಗ್ರೆಸ್ ವತಿಯಿಂದ ಮೈಸೂರಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಬರಿಗೈನಲ್ಲಿ ಬಂದ ಗೃಹ ಸಚಿವರಿಗೆ ಧಿಕ್ಕಾರ ಎಂದು ಕಿಡಿಕಾರಿರುವ ಕಾಂಗ್ರೆಸ್‌, ಕಪ್ಪು ಪಟ್ಟಿ ಧರಿಸಿ.. ಗೋ ಬ್ಯಾಕ್ ಅಮಿಶ್ ಶಾ ಎಂದು ಘೋಷಣೆ ಕೂಗಿದೆ. ಇದನ್ನೂ ಓದಿ: ಅಮಿತ್ ಶಾ ಚುನಾವಣೆ ಇದ್ದಾಗ ರಾಜ್ಯಕ್ಕೆ ಬಂದೇ ಬರ್ತಾರೆ: ಜಿ.ಪರಮೇಶ್ವರ್

    ನನ್ನ ತೆರಿಗೆ ನನ್ನ ಹಕ್ಕು ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದೆ. ಅಮಿಶ್ ಶಾ ವಿರುದ್ಧ ಪೋಸ್ಟರ್ ಅಭಿಯಾನವನ್ನು ಕೂಡ ಕಾಂಗ್ರೆಸ್ ಕಾರ್ಯಕರ್ತರು ಕೈಗೊಂಡಿದ್ದಾರೆ. ಗೋಡೆಗಳಿಗೆ ಪೋಸ್ಟರ್ ಅಂಟಿಸಲು ಮುಂದಾದರು. ಈ ವೇಳೆ ಪೋಸ್ಟರ್ ಅಂಟಿಸದಂತೆ ಪೊಲೀಸರು ತಾಕೀತು ಮಾಡಿದರು.

    ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ‌ ನಡೆಯಿತು. ಬಳಿಕ ಪೊಲೀಸರು ಪೋಸ್ಟರ್ ಕಿತ್ತುಕೊಂಡು ಹೋದ ಪ್ರಸಂಗವೂ ನಡೆಯಿತು. ಇದಾದ ನಂತರ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ಕೈಯಿಂದ ಪೋಸ್ಟರ್ ಕಿತ್ತುಕೊಂಡು ಗೋಡೆಗಳಿಗೆ ಅಂಟಿಸಿದರು.

  • ಅಮಿತ್ ಶಾ ಚುನಾವಣೆ ಇದ್ದಾಗ ರಾಜ್ಯಕ್ಕೆ ಬಂದೇ ಬರ್ತಾರೆ: ಜಿ.ಪರಮೇಶ್ವರ್

    ಅಮಿತ್ ಶಾ ಚುನಾವಣೆ ಇದ್ದಾಗ ರಾಜ್ಯಕ್ಕೆ ಬಂದೇ ಬರ್ತಾರೆ: ಜಿ.ಪರಮೇಶ್ವರ್

    ಬೆಂಗಳೂರು: ಕೇಂದ್ರ ಗೃಹ ಮಂತ್ರಿ ಅಮಿತ್ ಶಾ (Amit shah) ಅವರು ಚುನಾವಣೆ ಇದ್ದಾಗ ರಾಜ್ಯಕ್ಕೆ ಬಂದೇ ಬರುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Parameshwara) ವ್ಯಂಗ್ಯವಾಡಿದ್ದಾರೆ.

    ಅಮಿತ್ ಶಾ ಅವರ ಮೈಸೂರು (Mysuru) ಪ್ರವಾಸ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಮಿತ್ ಶಾ ಚುನಾವಣೆ ಇದ್ದಾಗ ಬಂದೇ ಬರ್ತಾರೆ. ಪ್ರಧಾನಿಯದ್ದು ಇಷ್ಟರಲ್ಲೇ ಟಿಪಿ ಬರುತ್ತೆ. ಅವರು ಏನ್ ಮಾಡಬೇಕೋ ಮಾಡಲಿ, ನಾವೇನ್ ಮಾಡಬೇಕೋ ಮಾಡ್ತೀವಿ. ಸಂದರ್ಭ ಬಂದಾಗ ಅಭ್ಯರ್ಥಿಗಳ ಟಿಕೆಟ್ ಘೋಷಣೆ ಮಾಡ್ತೀವಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ಯೂ ಟರ್ನ್ ಹೊಡೆಯುವ ಗಿರಾಕಿ ಅಲ್ಲ: ನಿಖಿಲ್ ಕುಮಾರಸ್ವಾಮಿ

    ನೂರು ನೋಟಿಸ್ ಕೊಟ್ಟರೂ ಹೆದರುವುದಿಲ್ಲ ಎಂಬ ಈಶ್ವರಪ್ಪ (Eshwarappa) ಹೇಳಿಕೆಗೆ ಪ್ರತಿಕ್ರಿಯಿಸಿ, ಈಶ್ವರಪ್ಪ ಅವರನ್ನು ಹೆದರಿಸಲು ಯಾರೂ ಹೋಗಿಲ್ಲ. ಕಾನೂನಿನ ಪ್ರಕಾರ, ನೋಟೀಸ್ ಕೊಟ್ಟಿದ್ದೀವಿ. ಮೊದಲು ಅದಕ್ಕೆ ಸಮಜಾಯಿಷಿ ಕೊಡಲಿ. ಈಶ್ವರಪ್ಪ ಅವರು ಬಹಳ ದೊಡ್ಡವರು, ಹೆದರಿಸೋಕೆ ಆಗುತ್ತಾ? ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಅಳಿಯ-ಮಗಳ ಜಗಳದಲ್ಲಿ ಹತ್ಯೆಯಾದ ಅತ್ತೆ

    ಕಾರ್ಯಕರ್ತರಿಗೆ ನಿಗಮ ಮಂಡಳಿ ಹಂಚಿಕೆ ವಿಳಂಬ ವಿಚಾರದ ಬಗ್ಗೆ ಮಾತನಾಡಿ, ಆದಷ್ಟು ಬೇಗ ಮಾಡ್ತೀವಿ ಅಂತಾ ಹೇಳಿದ್ದಾರೆ. ನಾವು ಬೇಸರ ಪಟ್ಟಿದ್ದೆಲ್ಲ ಮುಗಿದು ಹೋಯ್ತು. ಸಿಎಂ ಮತ್ತು ಡಿಸಿಎಂ ಚರ್ಚೆ ಮಾಡಿದ್ದಾರೆ. ಅಂತಿಮಗೊಳಿಸಿದ್ದೀವಿ ಅಂತಾ ಸಹ ಹೇಳಿದ್ದಾರೆ. ನಾವು ಯಾರದ್ದೋ ಮನೆಯಲ್ಲಿ ತಿಂಡಿ ತಿನ್ನೋದೇ ತಪ್ಪಾ? ನಾವೆಲ್ಲ ಮುನಿಯಪ್ಪ ಮನೆಗೆ ಹೋಗಿ ತಿಂಡಿ ತಿಂದಿದ್ದೀವಿ. ಅವರ ಮನೆಗೆ ಹೋಗಿ ಲಗ್ನ, ಸಂಬಂಧ ಮಾಡೋಕೆ ಮಾತಾಡ್ತೀವಾ? ನಾಲ್ಕು ಜನ ಸೇರಿದ ಮೇಲೆ ರಾಜಕೀಯ ಮಾತಾಡ್ತೀವಿ. ಹೆಚ್ಚು ಸೀಟು ಗೆಲ್ಲೋಕೆ ನಾವು ಏನ್ ಮಾಡಬಹುದು ಅಂತಾ ಚರ್ಚೆ ಮಾಡಿದ್ದೀವಿ. ಅದಕ್ಕೆ ಬೇರೆ ಬಣ್ಣ ಬಳಿಯೋದು ಬೇಡ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಆಚಾರ್ಯ ಪ್ರಮೋದ್ ಕೃಷ್ಣಂ ಉಚ್ಛಾಟನೆ- ಕೈ ನಾಯಕ ಹೇಳಿದ್ದೇನು?

    ಇದೇ ವೇಳೆ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ರಾಜೀನಾಮೆ ಕೊಟ್ಟಿರೋದು ವೈಯಕ್ತಿಕ ಎಂದು ಅವರು ಹೇಳಿದ್ದಾರೆ. ರಾಜೀನಾಮೆಯಲ್ಲಿ ಯಾವ ಆರೋಪ ಮಾಡಿಲ್ಲ. ಹೀಗಾಗಿ ರಾಜೀನಾಮೆ ಸ್ವೀಕರಿಸಬೇಕಲ್ವಾ?. ಪ್ರತಾಪ್ ಅವರ ರಾಜೀನಾಮೆ ಸ್ವೀಕಾರ ಆಗಿದೆ ಎಂದು ತಿಳಿಸಿದ್ದಾರೆ. ಕಮಿಷನ್ ಆರೋಪಕ್ಕೆ ಸಿಬಿಐ ತನಿಖೆಗೆ ಆರ್.ಅಶೋಕ್  (R.Ashok) ಆಗ್ರಹ ವಿಚಾರಕ್ಕೆ, ಅವರು ಇದ್ದಾಗ ನಾವು ಕೇಳಿದ್ದೀವಿ, ಅವರು ಕೊಟ್ಟಿರಲಿಲ್ಲ. ಅವರ ಕಾಲದಲ್ಲಿ ಪ್ರಧಾನಿಗೇ ಪತ್ರ ಬರೆದಿದ್ರು. ಆದರೂ ಸಿಬಿಐ ತನಿಖೆಗೆ ನೀಡಲಿಲ್ಲ. ಈಗ ಆಗ್ರಹ ಮಾಡುತ್ತಿದ್ದಾರೆ ಎಂದು ಆರ್. ಆಶೋಕ್‌ಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ- ಮೈತ್ರಿ ನಾಯಕರ ಭೇಟಿ ಇಂದೇ ನಡೆಯುತ್ತಾ?