Tag: Ammunje Mohan Kumar

  • ಯಕ್ಷಗಾನ ರಂಗಸ್ಥಳದಲ್ಲೇ ಕುಸಿದು ಬಿದ್ದ ಅಮ್ಮುಂಜೆ ಮೋಹನ್ ಕುಮಾರ್

    ಯಕ್ಷಗಾನ ರಂಗಸ್ಥಳದಲ್ಲೇ ಕುಸಿದು ಬಿದ್ದ ಅಮ್ಮುಂಜೆ ಮೋಹನ್ ಕುಮಾರ್

    ಮಂಗಳೂರು: ಯಕ್ಷಗಾನ ನಡೆಯುತ್ತಿರುವಾಗಲೇ ಪ್ರಖ್ಯಾತ ವೇಷಧಾರಿ ಮೋಹನ ಕುಮಾರ್ ಅಮ್ಮುಂಜೆಯವರು ರಂಗಸ್ಥಳದಲ್ಲಿಯೇ ತಲೆತಿರುಗಿ ಬಿದ್ದಿರುವ ಘಟನೆ ಸೋಮವಾರ ರಾತ್ರಿ ಮೂಡುಬಿದಿರೆ ತಾಲೂಕಿನ ಅಲಂಗಾರು ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆದಿದೆ.

    ದಕ್ಷಿಣ ಕನ್ನಡದ ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ನಿನ್ನೆ ರಾತ್ರಿ ಕರ್ಣಪರ್ವ ಯಕ್ಷಗಾನ ನಡೆಯುತ್ತಿತ್ತು. ಮೋಹನ ಕುಮಾರ್ ಅಮ್ಮುಂಜೆಯವರು ಕರ್ಣಪರ್ವದ ಅರ್ಜುನ ಪಾತ್ರಧಾರಿಯಾಗಿದ್ದರು.

    ಅರ್ಜುನ – ಕರ್ಣ ಪಾತ್ರಗಳ ಮುಖಾಮುಖಿಯಾಗಿ ವಾಕ್ಸಮರ ನಡೆಯುತ್ತಿತ್ತು. ಈ ಸಂದರ್ಭ ನಿಂತಿದ್ದ ಅರ್ಜುನ ಪಾತ್ರಧಾರಿ ಮೋಹನ ಕುಮಾರ್ ಅಮ್ಮುಂಜೆಯವರು ಸ್ವಲ್ಪ ಓಲಾಡುವಂತೆ ಆಗಿ ಏಕಾಏಕಿ ಎರಡು ಹೆಜ್ಜೆ ಮುಂದೆ ಬಂದು ಮುಗ್ಗರಿಸಿ ಬಿದ್ದಿದ್ದಾರೆ. ಇದನ್ನೂ ಓದಿ : ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ: ಬೊಮ್ಮಾಯಿ ಆದೇಶ

    ರಂಗಸ್ಥಳದಲ್ಲಿದ್ದ ಹಿಮ್ಮೇಳ-ಮುಮ್ಮೇಳದ ಕಲಾವಿದರು ಒಂದು ಕ್ಷಣಕ್ಕೆ ಏನಾಗುತ್ತಿದೆ ಎಂದು ತಿಳಿಯದೆ ಗಾಬರಿಗೊಂಡಿದ್ದಾರೆ. ಬಳಿಕ ಸ್ವಲ್ಪ ಉಪಚಾರ ಮಾಡಿದ ಕೊಂಚ ಹೊತ್ತಿನಲ್ಲಿಯೇ ಮೋಹನ ಕುಮಾರ್ ಅಮ್ಮುಂಜೆಯವರು ಚೇತರಿಕೆ ಕಂಡಿದ್ದಾರೆ. ಬಳಿಕ ಯಕ್ಷಗಾನ ಸಾಂಗವಾಗಿ ನಡೆದಿದೆ..