Tag: amphotericin b injection

  • ರಾಜ್ಯಕ್ಕೆ 9750 ವಯಲ್ಸ್ ಕಪ್ಪುಶಿಲೀಂದ್ರ ಔಷಧ ಹಂಚಿಕೆ: ಡಿವಿಎಸ್

    ರಾಜ್ಯಕ್ಕೆ 9750 ವಯಲ್ಸ್ ಕಪ್ಪುಶಿಲೀಂದ್ರ ಔಷಧ ಹಂಚಿಕೆ: ಡಿವಿಎಸ್

    ಬೆಂಗಳೂರು: ಕಪ್ಪು ಶಿಲೀಂದ್ರ (Black Fungus) ರೋಗದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಬೇರೆ ಬೇರೆ ರಾಜ್ಯಗಳಿಗೆ ಇಂದು ಒಟ್ಟು 1.21 ಲಕ್ಷ ವಯಲ್ಸ್ ಎಂಫೊಟೆರಿಸಿನ್-ಬಿ (Amphotericin-B) ಹಂಚಿಕೆ ಮಾಡಿದ್ದು ಕರ್ನಾಟಕಕ್ಕೆ 9750 ವಯಲ್ಸ್ ಒದಗಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ಅವರು ತಿಳಿಸಿದ್ದಾರೆ. ‌

    ಸ್ವದೇಶಿಯವಾಗಿಯೂ ಈ ಚುಚ್ಚುಮದ್ದಿನ ಉತ್ಪಾದನೆ ಹೆಚ್ಚಾಗುತ್ತಿದೆ, ಅದೇ ರೀತಿ ಆಮದಿನ ಪ್ರಮಾಣವನ್ನು ಕೂಡಾ ಹೆಚ್ಚಿಸಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಇದರ ಬೇಡಿಕೆ ಮತ್ತು ಪೂರೈಕೆ ಮಧ್ಯೆ ಸಮತೋಲನ ಉಂಟಾಗಲಿದೆ. ಸದ್ಯಕ್ಕಂತೂ ಇದರ ಹಂಚಿಕೆ ನಿರಂತರವಾಗಿ ನಡೆಯಲಿದೆ ಎಂದರು.

    ಸದ್ಯ ತೀವ್ರ ಬೇಡಿಕೆಯಲ್ಲಿರುವ ಆಮ್ಲಜನಕ ಸಾಂದ್ರಕವನ್ನು (ಆಕ್ಸಿಜನ್ ಕಾನ್ಸಂಟ್ರೇಟರ್ಸ್) ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ವರದಿಗಳು ಬರುತ್ತಿರುವ ಹಿನ್ನಲೆಯಲ್ಲಿ ನಾವು ಮಧ್ಯಪ್ರವೇಶ ಮಾಡಿದ್ದೇವೆ. ವಿತರಕರಿಗೆ ನೀಡುವ ಬೆಲೆಯ ಟ್ರೇಡ್ ಮಾರ್ಜಿನ್’ನಲ್ಲಿ ಪ್ರತಿಶತ 198 ರವರೆಗೂ ಏರಿಕೆಯಾದ ಬಗ್ಗೆ ವರದಿಯಾಗಿತ್ತು. ಅದನ್ನು ಈಗ ಶೇಕಡಾ 70ಕ್ಕೆ ಮಿತಿಗೊಳಿಸಲಾಗಿದೆ. ಮೂರು ದಿನದೊಳಗೆ ಗರಿಷ್ಠ ಮಾರಾಟ ಬೆಲೆ ಸೂಚಿಯನ್ನು ನೀಡುವಂತೆ ಆಮ್ಲಜನಕ ಸಾಂದ್ರಕ ಉತ್ಪಾದಕರು ಹಾಗೂ ಆಮದುದಾರರಿಗೆ ಸೂಚಿಸಲಾಗಿದೆ. ನಮ್ಮ ಇಲಾಖಾ ಅಧೀನದ ಎನ್.ಪಿ.ಪಿ.ಎ. (National Pharmaceuticals Pricing Authority) ವಾರದೊಳಗೆ ವಿವಿಧ ಬ್ರಾಂಡಿನ ಆಮ್ಲಜನಕ ಸಾಂದ್ರಕಗಳ ಪರಿಷ್ಕೃತ ಗರಿಷ್ಠ ಮಾರಾಟ ಬೆಲೆಗಳ ಅಧಿಸೂಚನೆ ಹೊರಡಿಸಲಿದೆ. ಇದುವರೆಗೆ ಆಮ್ಲಜನಕ ಸಾಂದ್ರಕ ಅತ್ಯವಶ್ಯಕ ವಸ್ತುಗಳ ಪಟ್ಟಿಯಲ್ಲಿ ಇರಲಿಲ್ಲ. ಹಾಗಾಗಿ ಅದರ ಬೆಲೆ ನಿಯಂತ್ರಣ ಸಾಧ್ಯವಿರಲಿಲ್ಲ. ಆದರೆ ಜನರ ಅನುಕೂಲಕ್ಕಾಗಿ ಡಿಪಿಸಿಒ-2013 ಕಾಯ್ದೆ ಅನುಚ್ಛೇಧ 19ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿ ಇದರ ಬೆಲೆ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸದ್ಯದ ಬೆಲೆ ನಿಯಂತ್ರಣ ಆದೇಶ 2021 ನವೆಂಬರ್ 30ರವರೆಗೆ ಜಾರಿಯಲ್ಲಿರಲಿದೆ. ಇದನ್ನೂ ಓದಿ: ವ್ಯಾಕ್ಸಿನ್ ಕೇಳಿದ್ದೇ ತಪ್ಪಾ, ಪೊಲೀಸರು ನೋಟೀಸ್ ಕೊಟ್ಟು ಕಿರುಕುಳ ನೀಡ್ತಿದ್ದಾರೆ: ವೆಂಕಟೇಶ್

    ಭವಿಷ್ಯದಲ್ಲಿ ಪರಿಸ್ಥಿಯನ್ನು ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಒಂದೊಮ್ಮೆ ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಯಾರಾದರೂ ಇದನ್ನು ಮಾರಾಟ ಮಾಡಲು ಯತ್ನಿಸಿದರೆ ಅಂತವರಿಗೆ ಶೇಕಡಾ 100ರಷ್ಟು ದಂಡ ವಿಧಿಸಲು ಅವಕಾಶವಿದೆ ಎಂದು ಅವರು ವಿವರಿಸಿದರು.

  • ಅಕ್ರಮವಾಗಿ  ಅಂಪೋಟೆರಿಸನ್ ಬಿ ಇಂಜೆಕ್ಷನ್ ಮಾರಾಟಕ್ಕೆ ಯತ್ನ- ಮೂವರ ಬಂಧನ

    ಅಕ್ರಮವಾಗಿ ಅಂಪೋಟೆರಿಸನ್ ಬಿ ಇಂಜೆಕ್ಷನ್ ಮಾರಾಟಕ್ಕೆ ಯತ್ನ- ಮೂವರ ಬಂಧನ

    ಹುಬ್ಬಳ್ಳಿ: ಕೊರೊನಾದಿಂದ ನಿತ್ಯ ನೂರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ಜೀವ ರಕ್ಷಕ ಔಷಧಿಯನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿರುವ ಪ್ರಕರಣ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ.

    ನಾಸೀರ್ ಹುಸೇನ್ ಅಕ್ತಾರ, ರಾಘವೇಂದ್ರ ಉಣಕಲ್, ನಾಗರಾಜ ನಡವಲಕೇರಿ ಬಂಧಿತ ಆರೋಪಿಗಳಾಗಿದ್ದಾರೆ. ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸೇರಿದಂತೆ ಮೂವರನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶ್ವಸಿಯಾಗಿದ್ದಾರೆ. ಇದನ್ನೂ ಓದಿ: ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಐಪಿಎಸ್ ಅಧಿಕಾರಿ

     

    ಬ್ಲ್ಯಾಕ್ ಫಂಗಸ್‍ಗೆ ಚಿಕಿತ್ಸೆ ನೀಡುವ ಅಂಪೋಟೆರಿಸನ್ ಬಿ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದ ಮೂವರನ್ನ ಸಿಸಿಬಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಿಮ್ಸ್ ಆಸ್ಪತ್ರೆಯ ವ್ಯಾಪ್ತಿಯ ಔಷಧಿ ಅಂಗಡಿಯಲ್ಲಿ ಅಕ್ರಮವಾಗಿ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದರು. ಬಂಧಿತರಿಂದ 4 ವಯಲ್ಸ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ:  ಇಂದು, ನಾಳೆ ರಾಜ್ಯಕ್ಕೆ ಭಾರೀ ಮಳೆ- ಹಲವೆಡೆ ಆರೆಂಜ್ ಅಲರ್ಟ್

    ನಾಸೀರ್ ಹುಸೇನ್ 7 ಸಾವಿರಕ್ಕೆ ಇಂಜೆಕ್ಷನ್ ತಂದು ಹೆಚ್ಚಿಗೆ ಹಣಕ್ಕೆ ಮಾರಾಟ ಮಾಡುತ್ತಿದ್ದನು. ಖಚಿತ ಮಾಹಿತಿ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.