Tag: Amrit Paul

  • ಪಿಎಸ್‍ಐ ಹಗರಣ – ಎಡಿಜಿಪಿ ಅಮೃತ್ ಪೌಲ್‌ಗೆ ಮತ್ತೊಂದು ಸಂಕಷ್ಟ

    ಪಿಎಸ್‍ಐ ಹಗರಣ – ಎಡಿಜಿಪಿ ಅಮೃತ್ ಪೌಲ್‌ಗೆ ಮತ್ತೊಂದು ಸಂಕಷ್ಟ

    ಬೆಂಗಳೂರು: ಪಿಎಸ್‍ಐ ನೇಮಕಾತಿ ಹಗರಣ (PSI Scam) ಸಂಬಂಧ ಎಡಿಜಿಪಿ ಅಮೃತ್ ಪೌಲ್ (Amrit Paul) ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಸಿಕ್ಕಿದೆ.

    ಭ್ರಷ್ಟಚಾರ ನಿಯಂತ್ರಣ ಕಾಯ್ದೆಯಡಿ ತನಿಖೆ ಮಾಡಲು ಅವಕಾಶ ಇದೆ. ಆರೋಪಿ ವಿರುದ್ಧ ಚಾರ್ಜ್ ಫ್ರೇಮ್ ಮಾಡಲು ಅನುಮತಿ ನೀಡಲಾಗಿದೆ. ಈಗಾಗಲೇ ಅಮೃತ್ ಪೌಲ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿತ್ತು. ಇದನ್ನೂ ಓದಿ: ಮುರುಘಾ ಮಠಕ್ಕೆ ಜಿಲ್ಲಾ ನ್ಯಾಯಾಧೀಶರನ್ನು ಆಡಳಿತಾಧಿಕಾರಿಯಾಗಿ ನೇಮಿಸಿದ ಹೈಕೋರ್ಟ್

     

    ಅಮೃತ್ ಪೌಲ್ ಐಪಿಎಸ್ ಅಧಿಕಾರಿ ಆಗಿದ್ದ ಹಿನ್ನೆಲೆಯಲ್ಲಿ ಪ್ರಾಸಿಕ್ಯೂಷನ್ ಅನುಮತಿ ಕಡ್ಡಾಯವಾಗಿತ್ತು. ಈಗ ಅನುಮತಿ ದೊರೆತಿದ್ದು, ಪಿಎಸ್‍ಐ ಹಗರಣದ ತನಿಖೆಯಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಂತಾಗಿದೆ. ಈ ಮೂಲಕ ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಬಿಟ್‍ಕಾಯಿನ್ ಹಾಗೂ ಪಿಎಸ್‍ಐ ಹಗರಣಕ್ಕೆ ಒಂದೇ ದಿನ ಮರು ಜೀವ ಬಂದಂತಾಗಿದೆ.

    ಏನಿದು ಪ್ರಕರಣ?
    ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿತ್ತು. ಬಳಿಕ ತನಿಖೆಯ ವೇಳೆ ಪರೀಕ್ಷಾ ಕೇಂದ್ರಗಳನ್ನು ಬುಕ್ ಮಾಡಿಕೊಂಡು ಅಕ್ರಮ ಎಸಗಿರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ಆಡಿಯೋ ಸಹ ವೈರಲ್ ಆಗಿತ್ತು. ಇದಾದ ಬಳಿಕ ಈ ನೇಮಕಾತಿಯನ್ನು ರದ್ದು ಮಾಡಲಾಗಿತ್ತು. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಈಗಲೂ ಪ್ರಕರಣ ವಿಚಾರಣೆ ಹಂತದಲ್ಲಿದೆ. ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಹಲವು ಸಚಿವರು ಹಾಗೂ ಅಧಿಕಾರಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ಅಲ್ಲದೇ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಎಸಗಿರುವ 52 ಅಭ್ಯರ್ಥಿಗಳನ್ನು ಪೊಲೀಸ್ ಇಲಾಖೆ ನಡೆಸುವ ಯಾವುದೇ ನೇಮಕಾತಿ ಪರೀಕ್ಷೆಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ಡಿಬಾರ್ ಮಾಡಿ ಇತ್ತೀಚೆಗೆ ಆದೇಶಿಸಲಾಗಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ ಮರುತನಿಖೆಗೆ ಎಸ್‍ಐಟಿ ರಚನೆ – ನಾಳೆಯಿಂದಲೇ ತನಿಖೆಗೆ ಮರುಜೀವ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಮೃತ್ ಪೌಲ್ ಹರಕೆಯ ಕುರಿ – PSI ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಸಿಎಂ ಮಗ: ದಿನೇಶ್ ಗುಂಡೂರಾವ್

    ಅಮೃತ್ ಪೌಲ್ ಹರಕೆಯ ಕುರಿ – PSI ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಸಿಎಂ ಮಗ: ದಿನೇಶ್ ಗುಂಡೂರಾವ್

    ಬೆಂಗಳೂರು: ಯತ್ನಾಳ್ ಆರೋಪ ಗಮನಿಸಿದರೆ ಪಿಎಸ್‍ಐ (PSI) ಹಗರಣದಲ್ಲಿ ಬಂಧಿತರಾಗಿರುವ ಅಮೃತ್ ಪೌಲ್ (Amrit Paul) ಹರಕೆಯ ಕುರಿಯಂತೆ ಭಾಸವಾಗುತ್ತಿದೆ. ಈ ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಮುಖ್ಯಮಂತ್ರಿಯ ಮಗ. ಹಾಗಾದರೆ ಅದು ಯಾರು ಎಂಬುದೇ ಯಕ್ಷಪ್ರಶ್ನೆ? ಈ ಸತ್ಯ ಜನರಿಗೆ ಗೊತ್ತಾಗಬೇಕು. ಆ ಸತ್ಯ ತಿಳಿಯಬೇಕಾದರೆ ಒಂದೋ ನ್ಯಾಯಾಂಗ ತನಿಖೆಯಾಗಬೇಕು, ಇಲ್ಲವೆ ಸಿಬಿಐ (CBI) ತನಿಖೆಯಾಗಬೇಕು ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಸರಣಿ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬರ ಪುತ್ರನ ನೇರ ಕೈವಾಡವಿದೆ ಎಂದು ಯತ್ನಾಳ್ ಆರೋಪಿಸಿದ್ದಾರೆ. ಈ ಹಗರಣದ ತನಿಖೆಯನ್ನು ಈಗಾಗಲೇ ಸಿಐಡಿ ನಡೆಸುತ್ತಿದೆ. ಯತ್ನಾಳ್‍ರ ಈ ಆರೋಪ ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ ಈ ಆರೋಪ ಮಾಡಿದ್ದಾರೆ. ಆದರೂ ಸಿಐಡಿ ಅಧಿಕಾರಿಗಳು ಯತ್ನಾಳ್ ಆರೋಪದ ಬಗ್ಗೆ ಯಾಕೆ ತನಿಖೆ ನಡೆಸುತ್ತಿಲ್ಲ.?ಕಳೆದ ಅಧಿವೇಶನದಲ್ಲಿ ಪಿಎಸ್‍ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ನಾವು ಒತ್ತಾಯಿಸಿದ್ದೆವು. ಆದರೆ ಯತ್ನಾಳ್ ಈ ಹಗರಣದ ಕಿಂಗ್‍ಪಿನ್ ಎಕ್ಸ್ ಸಿಎಂ ಪುತ್ರ ಎಂದಿದ್ದಾರೆ. ಜೊತೆಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ನಮ್ಮ ಒತ್ತಾಯಕ್ಕಂತೂ ಈ ಸರ್ಕಾರ ಒಪ್ಪಲಿಲ್ಲ. ಕೊನೆಯ ಪಕ್ಷ ಯತ್ನಾಳ್ ಒತ್ತಾಯಕ್ಕಾದರೂ ಬೆಲೆ ಕೊಡಲಿ. ಇದನ್ನೂ ಓದಿ: ಕಳ್ಳರ ಕೃತ್ಯಕ್ಕೆ ಬೇಸತ್ತ ಗ್ರಾಮಸ್ಥರು – ಖದೀಮರನ್ನು ಹುಡುಕಿಕೊಟ್ಟವರಿಗೆ ಬಹುಮಾನ ಜೊತೆಗೆ ಸನ್ಮಾನ

    ಯತ್ನಾಳ್ ಆರೋಪ ಗಮನಿಸಿದರೆ ಪಿಎಸ್‍ಐ ಹಗರಣದಲ್ಲಿ ಬಂಧಿತರಾಗಿರುವ ಅಮೃತ್ ಪೌಲ್ ಹರಕೆಯ ಕುರಿಯಂತೆ ಭಾಸವಾಗುತ್ತಿದೆ. ಈ ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಮುಖ್ಯಮಂತ್ರಿಯ ಮಗ. ಹಾಗಾದರೆ ಅದು ಯಾರು ಎಂಬುದೇ ಯಕ್ಷಪ್ರಶ್ನೆ? ಈ ಸತ್ಯ ಜನರಿಗೆ ಗೊತ್ತಾಗಬೇಕು. ಆ ಸತ್ಯ ತಿಳಿಯಬೇಕಾದರೆ ಒಂದೋ ನ್ಯಾಯಾಂಗ ತನಿಖೆಯಾಗಬೇಕು, ಇಲ್ಲವೆ ಸಿಬಿಐ ತನಿಖೆಯಾಗಬೇಕು. ಪಿಎಸ್‍ಐ ನೇಮಕಾತಿಯ ಅಧಿಸೂಚನೆ ಹೊರಟಿದ್ದು ಇದೇ ಸರ್ಕಾರದ ಅವಧಿಯಲ್ಲಿ. ಹಗರಣ ನಡೆದಿರುವುದೂ ಇದೇ ಅವಧಿಯಲ್ಲಿ. ಈ ಅವಧಿಯಲ್ಲೇ ಬಿಎಸ್‍ವೈ (B.S Yediyurappa) ಮುಖ್ಯಮಂತ್ರಿ ಪದವಿ ಬಿಟ್ಟು ಮಾಜಿಯಾಗಿದ್ದಾರೆ. ಹಾಗಾದರೆ ಯತ್ನಾಳ್ ಆರೋಪ ಮಾಡುತ್ತಿರುವುದು ಬಿಎಸ್‍ವೈ ಪುತ್ರನ ವಿರುದ್ಧವೇ? ಬೆಂಕಿಯಿಲ್ಲದೆ ಹೊಗೆ ಬರಲು ಸಾಧ್ಯವಿಲ್ಲವೆಂಬಂತೆ ಯತ್ನಾಳ್ ಸುಮ್ಮನೆ ಆರೋಪ ಮಾಡಲು ಸಾಧ್ಯವೇ? ಇದನ್ನೂ ಓದಿ: ವಿಜಯದಶಮಿ ಬಳಿಕ 10 ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ: ಬೊಮ್ಮಾಯಿ

    ಪಿಎಸ್‍ಐ ಹಗರಣ ಈ ಸರ್ಕಾರದ ಅತಿ ದೊಡ್ಡ ಕಳಂಕ. ಸಿಐಡಿ ಮೂಲಕ ಕಾಟಾಚಾರದ ತನಿಖೆ ಮಾಡಿಸಿ ತನ್ನ ಮೇಲಿರುವ ಕಳಂಕ ತೊಳೆದುಕೊಳ್ಳಲು ಈ ಸರ್ಕಾರ ಯತ್ನಿಸುತ್ತಿದೆ. ಆದರೆ ಈ ಸರ್ಕಾರದ ಭಾಗವಾಗಿರುವವರೇ ಈ ಹಗರಣದಲ್ಲಿ ಪ್ರಭಾವಿಗಳ ಭಾಗಿಯ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಸರ್ಕಾರ ಪ್ರಾಮಾಣಿಕವಾಗಿದ್ದರೆ ಈಗಲಾದರೂ ಪಾರದರ್ಶಕ ತನಿಖೆ ನಡೆಸಲಿ ಎಂದು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • PSI ಕೇಸ್‍ – ನಿಮ್ಹಾನ್ಸ್‌ನಲ್ಲಿ ಅಮೃತ್ ಪೌಲ್‌ಗೆ ಚಿಕಿತ್ಸೆ

    PSI ಕೇಸ್‍ – ನಿಮ್ಹಾನ್ಸ್‌ನಲ್ಲಿ ಅಮೃತ್ ಪೌಲ್‌ಗೆ ಚಿಕಿತ್ಸೆ

    ಬೆಂಗಳೂರು: ಪಿಎಸ್‍ಐ ನೇಮಕಾತಿ ಹಗರಣದಲ್ಲಿ ಮಾಜಿ ಎಡಿಜಿಪಿ ಅಮೃತ್ ಪೌಲ್‍ಗೆ ಸಂಕಷ್ಟ ಇನ್ನು ಮುಗಿದಿಲ್ಲ. ಅತಿಯಾದ ಒಂಟಿತನದಿಂದ ಡಿಪ್ರೆಶನ್‍ಗೆ ಹೋಗಿರುವ ಅಮೃತ್ ಪೌಲ್‍ಗೆ ಜೈಲಾಧಿಕಾರಿಗಳು ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.

    ಸ್ವಚ್ಛಂದವಾಗಿ ಹಾರಾಡಿಕೊಂಡಿದ್ದ ಹಿರಿಯ ಅಧಿಕಾರಿ ಜೈಲು ಸೇರಿದ್ದೆ ಸೇರಿದ್ದು, ಮಾನಸಿಕವಾಗಿ ಹಿಂಸೆ ಅನುಭವಿಸುತ್ತಿದ್ದಾರೆ. ಅದೆಷ್ಟೋ ಆರೋಪಿಗಳ ಜೈಲಿಗೆ ಕಳುಹಿಸಿದ್ದ ಅಮೃತ್ ಪೌಲ್ ಅದೇ ಆರೋಪಿಗಳ ಜೊತೆ ಕಾಲ ಕಳೆಯುವಂತೆ ಆಗಿದೆ. ಆರೋಪಿಗಳ ಜೊತೆ ಬೆರೆಯುವುದಕ್ಕೂ ಆಗದೆ ಒಂಟಿತನ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಪ್ರೆಶನ್‍ಗೆ ಹೋಗಿದ್ದಾರೆ.

    ಅಮೃತ್ ಪೌಲ್ ಬಂಧನವಾಗುವ ಮುಂಚೆಯಿಂದಲೂ ಡಿಪ್ರೆಶನ್‍ಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಮಾಡಿದ ಕೆಲಸದಿಂದ ಜೈಲು ಸೇರಿ ಅವರಿಗಿದ್ದ ಸಮಸ್ಯೆ ಉಲ್ಬಣವಾಗಿದೆ. ಅದಕ್ಕಾಗಿ ಮನೋವೈದ್ಯರ ಬಳಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಕೇಂದ್ರದಿಂದ ರಾಜ್ಯಗಳ ಪಾಲಿನ ತೆರಿಗೆ ಹಣ ಬಿಡುಗಡೆ – ಕರ್ನಾಟಕದ ಪಾಲು ಎಷ್ಟು?

    jail

    ಆರೋಪ ಏನು?:
    545 ಪಿಎಸ್‌ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್‌ಪಿ ಹಾಗೂ ಎಫ್‌ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ. ಬಂಧನಕ್ಕೆ ಒಳಗಾದ ಆರೋಪಿಗಳ ವಿಚಾರಣೆ ವೇಳೆ ಕೆಲವರು ಅಮೃತ್‌ ಪೌಲ್‌ ಹೆಸರನ್ನು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಮೃತ್‌ ಪೌಲ್‌ ಅವರನ್ನು ಬಂಧಿಸಿದೆ. ಇದನ್ನೂ ಓದಿ: ಸಿ.ಟಿ.ರವಿ ಸ್ವಗ್ರಾಮದ ಯುವಕರಿಂದ ಸಿದ್ದರಾಮಯ್ಯ ವಿರುದ್ಧ ದೂರು

    Live Tv
    [brid partner=56869869 player=32851 video=960834 autoplay=true]

  • ADGP ಅಮೃತ್‌ಪೌಲ್ ಸೇಫ್ಟಿಪಿನ್ ಅಷ್ಟೇ, PSI ಅಕ್ರಮದ ಕಿಂಗ್‌ಪಿನ್‌ಗಳು ವಿಧಾನಸೌಧದಲ್ಲಿದ್ದಾರೆ – ಪ್ರಿಯಾಂಕ್‌ ಖರ್ಗೆ

    ADGP ಅಮೃತ್‌ಪೌಲ್ ಸೇಫ್ಟಿಪಿನ್ ಅಷ್ಟೇ, PSI ಅಕ್ರಮದ ಕಿಂಗ್‌ಪಿನ್‌ಗಳು ವಿಧಾನಸೌಧದಲ್ಲಿದ್ದಾರೆ – ಪ್ರಿಯಾಂಕ್‌ ಖರ್ಗೆ

    ಕಲಬುರಗಿ: PSI ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಬಂಧಿತರಾದ ADGP ಅಮೃತ್ ಪೌಲ್ ಕೇವಲ ಸೇಫ್ಟಿ ಪಿನ್ ಅಷ್ಟೇ. ಮೂಲ ಕಿಂಗ್‌ಪಿನ್‌ಗಳು ವಿಧಾನಸೌಧದಲ್ಲೇ ಇದ್ದಾರೆ ಎಂದು ಕಾಂಗ್ರೆಸ್ ಹಿರಿಯ ಹಾಗೂ ಶಾಸಕ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

    ಕಲಬುರಗಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನಸೌದದ 3ನೇ ಮಹಡಿಯಲ್ಲಿನ ಅನೇಕರು ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಮಾಜಿ ಸಿಎಂ ಅವರ ಅಭ್ಯರ್ಥಿಗಳು ಎಷ್ಟು? ಅವರ ಮಗನ ಅಭ್ಯರ್ಥಿಗಳು ಎಷ್ಟು? ಅಂದಿನ ಗೃಹ ಸಚಿವರ ಅಭ್ಯರ್ಥಿಗಳು ಎಷ್ಟು? ಇದೆಲ್ಲವೂ ಹೊರಗೆ ಬರಬೇಕಲ್ವಾ? ನೀವು ಭ್ರಷ್ಟರು ಅಲ್ಲದಿದ್ರೆ PSI ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ಎಂದು ಸವಾಲು ಎಸೆದಿದ್ದಾರೆ.

    PSI SCAM

    ಇದೇ ವೇಳೆ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ `ಕರ್ನಾಟಕ ಅತ್ಯಂತ ಭ್ರಷ್ಟ ಸರ್ಕಾರ’ ಎಂದು ಹೆಸರು ಬಂದಿತ್ತು. ದೆಹಲಿಯ ಪ್ರತಿಷ್ಟಿತ ಮ್ಯಾಗಜಿನ್ ಸಹ ಇದನ್ನು ಉಲ್ಲೇಖಿಸಿತ್ತು. ಮತ್ತೆ ಈಗ ಅದೇ ಸುದ್ದಿಯನ್ನೇ ಮರುಪ್ರಕಟ ಮಾಡಬೇಕಿದೆ. ಪಿಎಸ್‌ಐ ಹಗರಣದ ಬಗ್ಗೆ ಸದನದಲ್ಲೇ ಶಾಸಕ ರವಿ ಅವರ ಪ್ರಶ್ನೆಗೆ ಉತ್ತರಿಸಿ ಉನ್ನತ ತಂಡದ ಅಧಿಕಾರಿಗಳು ಕ್ಲೀನ್ ಚಿಟ್ ಕೊಟ್ಟಿರುವುದಾಗಿ ಗೃಹ ಸಚಿವರು ಉತ್ತರಿಸಿದ್ದರು. ಈಗ ಎಡಿಜಿಪಿ ಅರೆಸ್ಟ್ ಆಗಿದ್ದಾರೆ. ಗೃಹ ಸಚಿವರು ನಮ್ಮ ಮೇಲೆ ಟೀಕೆ ಮಾಡುತ್ತಿದ್ದಾರೆ. ಅವರಿಗೆ ಕಾಮನ್ ಸೆನ್ಸ್ ಇಲ್ಲವಾ? ಪಿಎಸ್‌ಐ ನೇಮಕಾತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದೇ ಸಮರ್ಥಿಸಿದ್ದ ಗೃಹ ಸಚಿವರು ಈಗ ಎಡಿಜಿಪಿ ಸೇರಿದಂತೆ ಸುಮಾರು 60 ಜನ ಅಧಿಕಾರಿಗಳು ಹಾಗೂ ಇತರರು ಅರೆಸ್ಟ್ ಆಗಿದ್ದಾರೆ ಗೃಹ ಸಚಿವರು ಈಗೇನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುಂಚೆನೇ ಹೇಳಿದ್ದೆ, ಯಾರು ಎಷ್ಟೇ ದೊಡ್ಡವರಿದ್ರೂ ಕ್ರಮ ತಗೋತೀವಿ ಅಂತ: ಸಿಎಂ

    ಮುಂಚೆನೇ ಹೇಳಿದ್ದೆ, ಯಾರು ಎಷ್ಟೇ ದೊಡ್ಡವರಿದ್ರೂ ಕ್ರಮ ತಗೋತೀವಿ ಅಂತ: ಸಿಎಂ

    ಬೆಂಗಳೂರು: ನಾನು ಮುಂಚೆನೇ ಹೇಳಿದ್ದೆ, ಯಾರು ಎಷ್ಟೇ ದೊಡ್ಡವರಿದ್ರೂ ಕ್ರಮ ತಗೋತೀವಿ ಅಂತ ಹೀಗಾಗಿ ಸಾಕ್ಷಾ÷್ಯಧಾರಗಳ ಆಧಾರದಲ್ಲಿ ಅಮೃತ್ ಪೌಲ್ ಬಂಧನವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಇಂದು ಎಡಿಜಿಪಿ ಅಮೃತ್ ಪೌಲ್ ಅವರನ್ನು ಬಂಧಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಿಎಂ, ನಾನು ಮುಂಚೆನೇ ಹೇಳಿದ್ದೆ, ಯಾರು ಎಷ್ಟೇ ದೊಡ್ಡವರಿದ್ರೂ ಕ್ರಮ ತಗೋತೀವಿ ಅಂತ, ಹಾಗಾಗಿ ಪೌಲ್ ಬಂಧನವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಕಾಳಿ ದೇವಿ ಕೈಯಲ್ಲಿ ಸಿಗರೇಟು: ಇದು ಹಿಂದೂಗಳ ದೌರ್ಬಲ್ಯ – ಪ್ರಮೋದ್ ಮುತಾಲಿಕ್ ಕಿಡಿ

    ಅಮೃತ್ ಪೌಲ್ ಬಂಧನದಿಂದ ಸರ್ಕಾರಕ್ಕೆ ಮುಖಭಂಗ ಆಗಿಲ್ಲ. ಪ್ರಕರಣದ ತನಿಖೆ ಮಾಡಿಸಿದವರು ನಾವು. ಬೇರೆ ಸರ್ಕಾರ ಆಗಿದ್ರೆ ತನಿಖೆ ಆಗುತ್ತಿರಲಿಲ್ಲ. ಹಿಂದಿನ ಸರ್ಕಾರ ಇದ್ದಾಗ ಇದೇ ಪೊಲೀಸ್ ಅಕ್ರಮ ಪ್ರಕರಣದಲ್ಲಿ ತನಿಖೆ ಮಾಡದೇ ಮುಚ್ಚಿ ಹಾಕಿದ್ರು. ನಾವು ಇರುವುದರಿಂದ ನಿಷ್ಪಕ್ಷಪಾತವಾಗಿ ತನಿಖೆ ಮಾಡ್ತಿದ್ದೀವಿ ಎಂದು ಸ್ಪಷ್ಟಪಡಿಸಿದ್ದಾರೆ.

    ಸಿಐಡಿಗೆ ತನಿಖೆಗೆ ಸರ್ಕಾರ ಮುಕ್ತ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ಸಾಕ್ಷ್ಯಾಧಾರಗಳಿಂದ ಅಮೃತ್ ಪೌಲ್ ಬಂಧನವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಾಲೆಯಲ್ಲಿ ಕಂಪ್ಯೂಟರ್‌ ಕಳವು- ತಾಕತ್ತಿದ್ರೆ ನಮ್ಮನ್ನ ಹಿಡೀರಿ ಎಂದು ನಂಬರ್ ಬರೆದಿಟ್ಟ ಕಳ್ಳರು

    ಏನಿದು ಅಮೃತ್ ಪೌಲ್ ಪ್ರಕರಣ?
    ಪಿಎಸ್‌ಐ ನೇಮಕಾತಿಯಲ್ಲಿ ನಡೆದ ಅಕ್ರಮಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಇಂದು ಸಿಐಡಿ ಬಂಧಿಸಿದೆ. 25 ಅಭ್ಯರ್ಥಿಗಳ ಜೊತೆ 30 ಲಕ್ಷ ರೂ. ಡೀಲ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ಈಗ ಮತ್ತಷ್ಟು ವಿಚಾರಣೆ ನಡೆಸಲು ಬಂಧಿಸಿದೆ. 545 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಅಮೃತ್ ಪೌಲ್ ಅವರಿಗೆ ದೂರುಗಳು ಬಂದಿದ್ದವು. ಆದರೆ ಪ್ರಕರಣದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪಗಳು ಸಹ ಕೇಳಿಬಂದಿತ್ತು. ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಅಮೃತ್ ಪೌಲ್ ಅವರ ವರ್ಗಾವಣೆಗೆ ಪೊಲೀಸ್ ವಲಯದಲ್ಲಿಯೇ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ವರ್ಗಾಯಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]