Tag: Amrita Iyengar

  • ಕಿರುತೆರೆಯಲ್ಲಿ ಧನಂಜಯ್ ನಟನೆಯ ‘ಹೊಯ್ಸಳ’ ಸಿನಿಮಾ

    ಕಿರುತೆರೆಯಲ್ಲಿ ಧನಂಜಯ್ ನಟನೆಯ ‘ಹೊಯ್ಸಳ’ ಸಿನಿಮಾ

    ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ಟಾರ್ ಸುವರ್ಣ ವಾಹಿನಿಯು ಇದೀಗ ಸುವರ್ಣ ವರ್ಲ್ಡ್ ಪ್ರೀಮಿಯರ್ ಆಯೋಜನೆ ಮಾಡಿದೆ. ಅದರಲ್ಲಿ ನಟ ರಾಕ್ಷಸ ಡಾಲಿ ಧನಂಜಯ್ (Dolly Dhananjay) ಅಭಿನಯದ ‘ಗುರುದೇವ್ ಹೊಯ್ಸಳ’ (Gurudeva Hoysala) ಸಿನಿಮಾವನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಸ್ವಾತಂತ್ಯ ದಿನಾಚರಣೆಯ ಪ್ರಯುಕ್ತ ಈ ಸಿನಿಮಾವು ಕಿರುತೆರೆಯಲ್ಲಿ ರಾರಾಜಿಸಲಿದೆ.

    ಪಟ್ಟಣದ ಅತ್ಯಂತ ನಿಷ್ಠಾವಂತ ಹಾಗು ಶಕ್ತಿಶಾಲಿ ಪೊಲೀಸ್ ಅಧಿಕಾರಿ ಗುರುದೇವ್ ಹೊಯ್ಸಳ. ರಾಜಕಾರಣಿಗಳು ಹಾಗು ದರೋಡೆಕೋರರಿಂದ ಭೂ ಮಾಫಿಯಾವನ್ನು ತಡೆಗಟ್ಟುವಲ್ಲಿ ಗುರುದೇವ್ ಹೇಗೆ ಯಶಸ್ವಿಯಾಗುತ್ತಾರೆ ಎಂಬುದು ಈ ಸಿನಿಮಾದ ಮುಖ್ಯ ಕಥೆ. ಇನ್ನು ಇದೊಂದು ಸಾಮಾನ್ಯ ಪೊಲೀಸ್ ವಿಲನ್ ಕತೆ ಮಾತ್ರವಲ್ಲದೆ ಭಾಷೆ-ನೆಲದ ವಿಷಯವನ್ನು ಒಳಗೊಂಡ ಸುಂದರ ಕತೆಯಾಗಿದೆ. ಇದನ್ನೂ ಓದಿ:ನಾಳೆಯಿಂದ ಡಾ.ವಿಷ್ಣು ಹೆಸರಿನಲ್ಲಿ ಕ್ರಿಕೆಟ್: ಚಿತ್ರೋದ್ಯಮ ಭಾಗಿ

    ‘ಹೊಯ್ಸಳ’ ಸಿನಿಮಾದ ನಾಯಕನಾಗಿ ಡಾಲಿ ಧನಂಜಯ್ ಹಾಗು ನಾಯಕಿಯಾಗಿ ಅಮೃತ ಅಯ್ಯಂಗಾರ್ (Amrita Iyengar) ನಟಿಸಿದ್ದಾರೆ. ಜೊತೆಗೆ ಅಚ್ಯುತ್ ಕುಮಾರ್, ನವೀನ್ ಶಂಕರ್, ಅವಿನಾಶ್, ರಾಜೇಶ್ ನಟರಂಗ, ನಾಗಭೂಷಣ್ ಸೇರಿದಂತೆ ಇನ್ನು ಅನೇಕ ಕಲಾವಿದರು ಅಭಿನಯಿಸಿದ್ದಾರೆ. ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡಿರುವ ಈ ಸಿನಿಮಾವು ಇದೇ ಮೊದಲ ಬಾರಿಗೆ ಕಿರುತೆರೆಯ ಮೂಲಕ ನಿಮ್ಮ ಮನೆಯಂಗಳಕ್ಕೆ ಬರಲಿದೆ.

    ಈ ನಿಟ್ಟಿನಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಪ್ರೇಕ್ಷಕರಿಗಾಗಿ ಉಡುಗೊರೆಯನ್ನು ನೀಡಲು ಸಜ್ಜಾಗಿದೆ. ‘ಗುರುದೇವ್ ಹೊಯ್ಸಳ’ ಸಿನಿಮಾವನ್ನು ಟಿವಿಯಲ್ಲಿ ನೋಡಿ, ಅಲ್ಲಿ ಕೇಳುವ 2 ಸರಳ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿ 43 ಇಂಚಿನ LED TV ಯನ್ನು ನೀಡಲಿದೆ.  ಇದೇ ಆಗಸ್ಟ್ 13 ರಂದು ಭಾನುವಾರ ಸಂಜೆ 6.00 ಕ್ಕೆ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಸಿನಿಮಾ ಪ್ರಸಾರವಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅರವಿಂದ್ ಕುಪ್ಳಿಕರ್- ಶರಣ್ ಚಿತ್ರಕ್ಕೆ ಯೋಗಿ ದ್ವಾರಕೀಶ್ ನಿರ್ಮಾಪಕ

    ಅರವಿಂದ್ ಕುಪ್ಳಿಕರ್- ಶರಣ್ ಚಿತ್ರಕ್ಕೆ ಯೋಗಿ ದ್ವಾರಕೀಶ್ ನಿರ್ಮಾಪಕ

    ನ್ನಡದ ಪ್ರತಿಭಾವಂತ ನಿರ್ದೇಶಕ ಅರವಿಂದ್ ಕುಪ್ಳಿಕರ್ (Arvind Kuplikar) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಹೊಸ ಚಿತ್ರಕ್ಕೆ ಯೋಗಿ ದ್ವಾರಕೀಶ್ (Yogi Dwarkeesh) ಹಣ ಹೂಡುತ್ತಿದ್ದಾರೆ. ಶರಣ್ (Sharan) ಹಾಗೂ ಅಮೃತಾ ಅಯ್ಯಂಗರ್ (Amruta Iyengar)ಕಾಂಬಿನೇಷನ್ ನಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಹೆಸರಾಂತ ತಾರಾಗಣವೇ ಚಿತ್ರದಲ್ಲಿದೆ. ಅಚ್ಯುತ್ ಕುಮಾರ್, ರಂಗಾಯಣ ರಘು, ರಾಜು ತಾಳಿಕೋಟೆ ಸೇರಿದಂತೆ ಹಲವು ಕಲಾವಿದರು ಪಾತ್ರ ಮಾಡಲಿದ್ದಾರೆ.

    ಶರಣ್ ಹುಟ್ಟುಹಬ್ಬದ ದಿನದಂದು ಸಿನಿಮಾ ಘೋಷಣೆ ಮಾಡಿದ್ದ ನಿರ್ದೇಶಕ ಅರವಿಂದ್ ಕುಪ್ಳಿಕರ್ ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳುವೆ ಎಂದಿದ್ದರು. ಇದೀಗ ಸಿನಿಮಾದ ಶೂಟಿಂಗ್ ಪ್ರಾರಂಭಿಸುತ್ತಿದ್ದಾರೆ. ಬೆಂಗಳೂರು, ಬಾಗಲಕೋಟೆ ಸೇರಿದಂತೆ ಹಲವು ಕಡೆ ಚಿತ್ರೀಕರಣ ನಡೆಯಲಿದೆ. ನಿರ್ದೇಶಕರ ಎರಡನೇ ಸಿನಿಮಾ ಇದಾಗಿದ್ದು, ಮೊದಲ ಸಿನಿಮಾದಲ್ಲೇ ಇವರಿಗೆ ಚಂದನವನ ಫಿಲ್ಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅತ್ಯುತ್ತಮ ಸಿನಿಮಾ ಪ್ರಶಸ್ತಿ ದೊರೆತಿತ್ತು. ಇದನ್ನೂ ಓದಿ:ಆರ್.ಎಲ್ ಜಾಲಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು ಹಿರಿಯ ನಟ ಶ್ರೀನಿವಾಸ್ ಮೂರ್ತಿ

    ಅರವಿಂದ್ ಕುಪ್ಳಿಕರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದರೆ, ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜನೆ ಚಿತ್ರಕ್ಕಿದ್ದು, ಯೋಗಿ ದ್ವಾರಕೀಶ್ ನಿರ್ಮಾಪಕರು. ಅದ್ವೈತ ಗುರುಮೂರ್ತಿ ಅವರ ಸಿನಿಮಾಟೋಗ್ರಫಿ ಹಾಗೂ ಕೆ.ಎಂ. ಪ್ರಕಾಶ್ ಅವರ ಸಂಕಲನ ಚಿತ್ರಕ್ಕೆ ಇರಲಿದೆ. ಮುಂದಿನ ದಿನಗಳಲ್ಲಿ ಹಲವಾರು ವಿಷಯಗಳನ್ನು ಹಂಚಿಕೊಳ್ಳಲಿದ್ದಾರಂತೆ ಅರವಿಂದ್.

    ರಂಗಭೂಮಿ, ಕಿರುತೆರೆ ಮತ್ತು ಸಿನಿಮಾ ಕ್ಷೇತ್ರದಲ್ಲಿ ಅಪಾರವಾಗಿ ಕೆಲಸ ಮಾಡಿದವರು ಅರವಿಂದ್. ಸಂಚಾರಿ ವಿಜಯ್ ನಟನೆಯ ಪುಕ್ಸಟ್ಟೆ ಲೈಫ್ ಅವರ ಚೊಚ್ಚಲು ಸಿನಿಮಾವಾಗಿದ್ದರೂ, ಪ್ರಕಾಶ್ ರೈ, ಬಿ.ಸುರೇಶ್ ಸೇರಿದಂತೆ ಹಲವು ನಿರ್ದೇಶಕರ ಬಳಿ ಕೆಲಸ ಮಾಡಿದ್ದಾರೆ. ರಂಗಭೂಮಿ ಮತ್ತು ಕಿರುತೆರೆಯಲ್ಲಿ ನಟರಾಗಿಯೂ ಅರವಿಂದ್ ಗುರುತಿಸಿಕೊಂಡಿದ್ದಾರೆ. ಎರಡನೇ ಸಿನಿಮಾದ ಮೂಲಕ ಮತ್ತೆ ಪ್ರೇಕ್ಷಕರ ಎದುರು ನಿಂತಿದ್ದಾರೆ.

  • ಕೋಟಿ ಕಾರಿನ ಒಡೆಯ ನಟ ಧನಂಜಯ್ ಮುಂದೆ ವಿಶೇಷ ಬೇಡಿಕೆ ಇಟ್ಟ ರಮ್ಯಾ

    ಕೋಟಿ ಕಾರಿನ ಒಡೆಯ ನಟ ಧನಂಜಯ್ ಮುಂದೆ ವಿಶೇಷ ಬೇಡಿಕೆ ಇಟ್ಟ ರಮ್ಯಾ

    ನಂಜಯ್ ಗುಂಪಿನಲ್ಲಿ ನಟಿ ರಮ್ಯಾ (Ramya) ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಬಾರಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಅಮೃತಾ ಅಯ್ಯಂಗಾರ್ (Amrita Iyengar) ಜೊತೆ ಹೆಚ್ಚೆಚ್ಚು ಗುರುತಿಸಿಕೊಳ್ಳುತ್ತಾರೆ. ಹಾಗಾಗಿ ಧನಂಜಯ್ ಗೆ ರಮ್ಯಾ ವಿಶೇಷ ಬೇಡಿಕೆ ಇಟ್ಟಿದ್ದಾರೆ. ಧನಂಜಯ್ ಮನೆಗೆ ದುಬಾರಿ ಕಾರು ಬಂದ ಹಿನ್ನೆಲೆಯಲ್ಲಿ ರಮ್ಯಾ ಟ್ವೀಟ್ ಮಾಡಿದ್ದು, ತಮಗೆ ಐಸ್ ಕ್ರೀಮ್ ಕೊಡಿಸುವಂತೆ ಕೇಳಿದ್ದಾರೆ. ಅದಕ್ಕೆ ಧನಂಜಯ್ ಕೂಡಲೇ ಬನ್ನಿ ಎಂದು ಉತ್ತರವನ್ನೂ ನೀಡಿದ್ದಾರೆ.

    ನಂಜಯ್ (Dhananjay) ನಟನೆಯ 25ನೇ ಸಿನಿಮಾ `ಗುರುದೇವ್ ಹೊಯ್ಸಳ’ ಮಾರ್ಚ್ 30ರಂದು ತೆರೆ ಕಂಡಿದೆ. ಬಾಕ್ಸಾಫೀಸ್‌ನಲ್ಲಿ ಸಿನಿಮಾ ಸೌಂಡ್ ಮಾಡ್ತಿದೆ. 25ನೇ ಸಿನಿಮಾ ರಿಲೀಸ್ ಆಗಿರುವ ಶುಭ ಸಂದರ್ಭದಲ್ಲಿ ಡಾಲಿಗೆ ವಿಶೇಷ ಉಡುಗೊರೆಯೊಂದು ಸಿಕ್ಕಿದೆ. ಈ ಕುರಿತು ಡಾಲಿ ಸೋಷಿಯಲ್ ಮೀಡಿಯಾದಲ್ಲಿ ಖುಷಿ ಸುದ್ದಿ ಹೇಳಿಕೊಂಡಿದ್ದಾರೆ.

    ಡಾಲಿ- ಅಮೃತಾ ನಟನೆಯ `ಹೊಯ್ಸಳ’ ಸಿನಿಮಾ ಚಿತ್ರಮಂದಿರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಡಾಲಿ, ಅಮೃತಾ, ನವೀನ್ ಶಂಕರ್, ನಟನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. `ಗುರುದೇವ್ ಹೊಯ್ಸಳ’ ಕಥೆಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಚಿತ್ರ ಸಕ್ಸಸ್‌ಫುಲ್ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ಡಾಲಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ದುಬಾರಿ ಬೆಲೆಯ Toyota Vellfire ಕಾರನ್ನ ಚಿತ್ರದ ನಿರ್ಮಾಪಕರಾದ ಕಾರ್ತಿಕ್- ಯೋಗಿ ಡಾಲಿಗೆ ಉಡುಗೊರೆ ನೀಡಿದ್ದಾರೆ.

    25ನೇ ಚಿತ್ರ ಮತ್ತು ನನ್ನ ವಿಶೇಷ ವ್ಯಕ್ತಿಗಳಿಂದ ವಿಶೇಷ ಉಡುಗೊರೆ. ಲವ್‌ ಯೂ ನಾವು ಒಟ್ಟಿಗೆ ಮಾಡಲಿರುವ ಹೆಚ್ಚು ಹೆಚ್ಚು ಕೆಲಸಗಳಿಗಾಗಿ ಚೀರ್ಸ್. ಇಂತಹ ಒಳ್ಳೆಯ ನೆನಪುಗಳಿಗೆ ಧನ್ಯವಾದಗಳು ಎಂದು ಡಾಲಿ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಅಂದಹಾಗೆ ಡಾಲಿ ಇದೀಗ ಕೋಟಿ ಕಾರಿನ ಒಡೆಯನಾಗಿದ್ದಾರೆ. ನಿರ್ಮಾಪಕರಾದ ಕಾರ್ತಿಕ್-ಡಾಲಿ ಉಡುಗೊರೆ ನೀಡಿರುವ Toyota Vellfire ಕಾರಿಗೆ 1 ಕೋಟಿ ಬೆಲೆಯದಾಗಿದೆ.

  • 25ನೇ ಚಿತ್ರದಲ್ಲಿ ಗುರುದೇವ್ ಹೊಯ್ಸಳನಾದ ಧನಂಜಯ್

    25ನೇ ಚಿತ್ರದಲ್ಲಿ ಗುರುದೇವ್ ಹೊಯ್ಸಳನಾದ ಧನಂಜಯ್

    ಯೋಗಿ. ಜಿ. ರಾಜ್ ಹಾಗೂ ಕಾರ್ತಿಕ್ ಗೌಡ ಅವರು ನಿರ್ಮಿಸಿರುವ ‘ಹೊಯ್ಸಳ’ (Hoysala) ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಮಾರ್ಚ್ 30ರಂದು ವಿಶ್ವದಾದ್ಯಂತ ಕನ್ನಡ ಭಾಷೆಯಲ್ಲಿಯೇ ಬಿಡುಗಡೆಯಾಗಲಿದೆ. ಈಗಾಗಲೇ ಟೀಸರ್, ಹಾಡುಗಳಿಂದ ಪ್ರೇಕ್ಷಕರ ಹೃದಯ ಗೆದ್ದಿರುವ ‘ಹೊಯ್ಸಳ’ ತಂಡದಿಂದ ಸದ್ಯದಲ್ಲಿಯೇ ಟ್ರೇಲರ್ ಕೂಡ ಬಿಡುಗಡೆ ಆಗಲಿದೆ. ಚಿತ್ರದ ಪ್ರಮೋಷನ್ ಜೋರಾಗಿದ್ದು, ನಾಯಕ ಡಾಲಿ ಧನಂಜಯ್ ಉತ್ತರ ಕರ್ನಾಟಕದಲ್ಲಿ ಸಂಚರಿಸುತ್ತಿದ್ದಾರೆ.

    ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಧನಂಜಯ್ (Dhananjay) “ರತ್ನನ ಪ್ರಪಂಚ’ ಆದಮೇಲೆ ಕೆ.ಆರ್.ಜಿ ಸ್ಟುಡಿಯೋ ಜೊತೆ ಕನೆಕ್ಟ್ ಆಗಿ ಒಂದಿಷ್ಟು ಸಿನಿಮಾ ಮಾಡುವ ಪ್ಲ್ಯಾನ್ ಮಾಡಿಕೊಂಡೆವು. ಆಗ ಈ ಚಿತ್ರದ ಕಥೆ ಬಂತು. ಕಥೆ ಕೇಳಿದಾಗ ತುಂಬಾ ಇಷ್ಟವಾಯ್ತು. ನಂತರ ಗೊತ್ತಾಯ್ತು ಇದು ನನ್ನ ಅಭಿನಯದ 25ನೇ ಸಿನಿಮಾ ಅಂತ. ನನಗೂ ಸಮಾಜಕ್ಕೆ ಎನಾದರೂ ಸಂದೇಶ ಹೇಳುವ ಸಿನಿಮಾ ಮಾಡಬೇಕು ಎನಿಸಿತ್ತು. ಅದರಂತೆಯೇ ಫ್ಯಾಮಿಲಿ ಜೊತೆ ಕುಳಿತು ನೋಡುವ ಕಥೆ ನಂಗೆ ‘ಹೊಯ್ಸಳ’ದಲ್ಲಿ ಸಿಕ್ಕಿತು. ಇದರಲ್ಲಿ ಒಂದು ಸೀರಿಯಸ್ ಅಂಶವನ್ನು ಹೇಳುವ ಪ್ರಯತ್ನ ಮಾಡಲಾಗಿದ್ದು, ಒಳ್ಳೆ ಮೆಸೇಜ್ ಇರುವ ಕಮರ್ಷಿಯಲ್ ಸಿನಿಮಾ. ನಾವು ಚಿತ್ರದ ಶೀರ್ಷಿಕೆಯನ್ನು ರಾಮು ಫಿಲ್ಮಸ್ ಜೋತೆ ಮಾತನಾಡಿ ಪಡೆದುಕೊಂಡೆವು. ಆದರೇ ಇದೇ ಹೆಸರಿನಲ್ಲಿ ಇನ್ನೊಂದು ಸಿನಿಮಾ ಸೆನ್ಸಾರ್ ಆಗಿದೆಯಂತೆ. ಹಾಗಾಗಿ ನಾನು ಚಿತ್ರದಲ್ಲಿ ಗುರುದತ್ ಹೊಯ್ಸಳ ಹೆಸರಿನಲ್ಲಿ ಕಾಣಿಸಿಕೊಂಡಿದ್ದು, ಇದೇ ಹೆಸರಿನಲ್ಲಿ ಸಿನಿಮಾ ಬಿಡುಗಡೆ ಮಾಡಲು ಸಿದ್ದರಾಗಿದ್ದೇವೆ. ಈ ಸಿನಿಮಾಗಾಗಿ ನಾನು ಕಾಯತಾ ಇದ್ದು, ತುಂಬಾ ವಿಷಯಗಳ ಬಗ್ಗೆ ಚಿತ್ರ ಮಾತನಾಡುತ್ತದೆ’ ಎಂದು ಹೇಳಿದರು.

    ನಂತರ ಮತ್ತೋರ್ವ ನಟ ನವೀನ ಶಂಕರ್ (Naveen) ಮಾತನಾಡಿ ‘ಈ ಸಿನಿಮಾ ಸಿಲ್ಕಿದ್ದು ನಂಗೆ ಖುಷಿಯ ವಿಷಯ. ಇದೇ ಮೊದಲಬಾರಿ ನಾನು ಕಂಪರ್ಟ್ನಲ್ಲಿ ನಟನೆ ಮಾಡಿದ್ದೇನೆ. ಇಲ್ಲಿ ನಾನು ಬಲಿ ಪಾತ್ರ ಮಾಡಿದ್ದು ರಗಡ್ ಲುಕ್‌ನಲ್ಲಿ ವಿಲನ್ ಆಗಿರುತ್ತೇನೆ. ಧನಂಜಯ್ ‘ಹೆಡ್ಡಬುಷ್’ ಸಿನಿಮಾಗೆ ಕರೆದಿದ್ದರು ಆಗಿರಲಿಲ್ಲ. ಈಗ ಗೆಳೆಯನ ಜೊತೆ ನಟನೆ ಮಾಡಿದ್ದು ಖುಷಿ ಇದೆ. ನಿರ್ಮಾಪಕರು ಕರೆದು ಅವಕಾಶ ಕೊಟ್ಟರು. ಪಾತ್ರ ಅದ್ಭುತವಾಗಿ ಬಂದಿದ್ದು, ಒಳ್ಳೆ ಜರ್ನಿ ನೀಡುವ ಸಿನಿಮಾ ಇದು ನಂಗೆ. ಅಪ್ಪಟ ಕಮರ್ಷಿಯಲ್ ಸಿನಿಮಾ ಇದಾಗಿದ್ದು, ಎಲ್ಲಾ ಪಾತ್ರಗಳಿಗೂ ಗಟ್ಟಿತನ ಇದೆ’ ಎನ್ನುವರು. ಇದನ್ನೂ ಓದಿ: ಭಾರತದ ದಿ ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಚಿತ್ರದ ನಾಯಕಿ ಅಮೃತ ಅಯ್ಯಂಗಾರ್ (Amrita Iyengar) ‘ಧನಂಜಯ ಜೊತೆ ನಂಗೆ ಇದು 3ನೇ ಸಿನಿಮಾ. ಇದರಲ್ಲಿ ನಾನು ಗಂಗಾ ಆಗಿ ಪೊಲೀಸ್ ಆಫೀಸರ್ ಹೆಂಡತಿ ಪಾತ್ರ ಮಾಡಿದ್ದೇನೆ. ಜೊತೆಗೆ ನಾನು ಭರತನಾಟ್ಯ ಟೀಚರ್ ಆಗಿರುತ್ತೇನೆ. ಈ ಪಾತ್ರ ಮಾಡುವುದು ನಂಗೆ ಚಾಲೆಂಜಿಂಗ್ ಆಗಿತ್ತು. ಈ ಚಿತ್ರ ಒಳ್ಳೆ ಪೊಲೀಸ್ ಸ್ಟೋರಿ ಫೀಲ್ ಕೊಡುತ್ತದೆ’ ಎಂದು ಹೇಳಿದರು. ನಟ ಅವಿನಾಶ್ ಮಾತನಾಡಿ ‘ಇದರಲ್ಲಿ ನಾನು ವಿಲನ್ ಪಾತ್ರ ಮಾಡಿದ್ದು, ಅದ್ಭುತವಾಗಿ ಬಂದಿದೆ. ನಿರ್ದೇಶಕರು ನಂಗೆ ಕಥೆ ಹೇಳುವಾಗ ನಾನಾ ಪಾಟೇಕರ್ ತರಾ ಪಾತ್ರ ಇರುತ್ತದೆ ಎಂದು ಹೇಳಿದ್ದರು. ಈ ಪೊಲೀಸ್ ಸ್ಟೋರಿ ಸಿನಿಮಾ ಅದ್ಭುತವಾಗಿ ಬಂದಿದ್ದು, ನಾನಿಲ್ಲಿ ದಾದಾ ಪಾತ್ರ ಮಾಡಿದ್ದೇನೆ’ ಎನ್ನುವರು.

    ಇದೇ ಸಂದರ್ಭದಲ್ಲಿ ನಿರ್ಮಾಪಕ ಯೋಗಿ ಜಿ. ರಾಜ್ ಮಾತನಾಡಿ ‘ಧನು ಜೊತೆ ಸಿನಿಮಾ ಮಾಡಲು ಸಿದ್ದರಾದಾಗ ನಿರ್ದೇಶಕರು ಕಥೆ ಹೇಳಿದ್ರು. ಕಥೆ ತುಂಬಾ ಚನ್ನಾಗಿದೆ ಅನಿಸಿ ನಿರ್ಮಾಣಕ್ಕೆ ಮುಂದಾದೆವು. ಚಿತ್ರ ಇದೇ ಮಾರ್ಚ್ 30 ರಂದು ವಿಶ್ವಾದ್ಯಂತ ಕನ್ನಡ ಭಾಷೆಯಲ್ಲಿಯೇ ರಿಲೀಸ್ ಆಗಲಿದೆ. ಇದರಲ್ಲಿ ನಾಯಕನ ಹೆಸರು ಗುರುದೇವ ಹೊಯ್ಸಳ ಅಂತ ಇರುತ್ತದೆ. ಕಥೆ ಬೆಳಗಾವಿ ಭಾಗದಲ್ಲಿ ನಡೆಯುತ್ತದೆ’ ಎಂದರು. ನಿರ್ದೇಶಕ ವಿಜಯ್ ಎನ್ ‘ಈ ಚಿತ್ರವನ್ನು ಪೊಲೀಸ್ ಡಿಪಾರ್ಟ್ಮೆಂಟ್‌ಗೆ ಅರ್ಪಣೆ ಮಾಡಲಾಗುತ್ತಿದೆ’ ಎಂದಷ್ಟೇ ಹೇಳಿದರು.

  • ‘ಹೊಯ್ಸಳ’ ಸಿನಿಮಾದ ರೊಮ್ಯಾಂಟಿಕ್ ಹಾಡು ರಿಲೀಸ್

    ‘ಹೊಯ್ಸಳ’ ಸಿನಿಮಾದ ರೊಮ್ಯಾಂಟಿಕ್ ಹಾಡು ರಿಲೀಸ್

    ಟ ರಾಕ್ಷಸ ಧನಂಜಯ (Dhananjaya) ನಟನೆಯ 25ನೇ ಸಿನೆಮಾ ಹೊಯ್ಸಳ (Hoysala) ದಲ್ಲಿ ಖಡಕ್ ಪೊಲೀಸ್ ಆಗಿ ಕಾಣಿಸಿಕೊಳ್ಳುವುದಲ್ಲದೆ ತನ್ನ ಮಡದಿಯ ಮುಂದೆ ಪ್ರೀತಿಯ ನಿವೇದನೆ ಮಾಡುವ ರೊಮ್ಯಾಂಟಿಕ್ ಗಂಡನಾಗಿಯೂ ಕಾಣಿಸಿಕೊಂಡಿದ್ದಾರೆ. ಬಡವ ರಾಸ್ಕಲ್ ನಲ್ಲಿ ಉಡುಪಿ ಹೋಟೆಲು ಹಾಡಿನಿಂದ ತಮ್ಮ ಜೋಡಿಯ ಮೋಡಿ ಮಾಡಿದ್ದ ಧನಂಜಯ ಹಾಗೂ ಅಮೃತಾ ಐಯ್ಯಂಗಾರ್ (Amrita Iyengar) ಈಗ “ಅರೇ ಇದು ಎಂಥಾ ಭಾವನೆ” ಎನ್ನುವ ಮೆಲೋಡಿ ಲವ್ ಸಾಂಗ್ ನಲ್ಲಿ ಬಹಳ ಹೋಮ್ಲಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

    “ಅರೇ ಇದು ಎಂಥಾ ಭಾವನೆ” ಹಾಡಿನ ಲಿರಿಕಲ್ ವಿಡಿಯೋ ಆನಂದ್ ಆಡಿಯೋ ಚಾನೆಲ್ ನಲ್ಲಿ ಇಂದು ಬಿಡುಗಡೆಯಾಗಿದ್ದು, ಗುರುದೇವ್ – ಗಂಗಾಳ ಕ್ಯೂಟ್ ರೊಮಾನ್ಸ್ ಅನ್ನು ನಾವು ಈ ಹಾಡಿನಲ್ಲಿ ನೋಡಬಹುದು. ತನ್ನ ಮಡದಿ- ಮನದರಸಿಗೆ ಮನದಾಳದ ಮಾತುಗಳನ್ನು ಈ ಹಾಡಿನ ಮೂಲಕ ಡಾಲಿ ಪ್ರೀತಿಯಿಂದ ವ್ಯಕ್ತಪಡಿಸುತ್ತಿದ್ದಾರೆ. ಗಾಯಕ ಹರಿಚರಣ್ ಧ್ವನಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಯೋಗರಾಜ್ ಭಟ್ (Yogaraj Bhatt) ಸಾಹಿತ್ಯ ಬರೆದಿದ್ದು, ಅಜನೀಶ್ ಲೋಕನಾಥ್ ರವರು ಸಂಗೀತ ಸಂಯೋಜಿಸಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಕಿರುತೆರೆ ಸುಂದರಿ ಅಮೂಲ್ಯ ಗೌಡ

    ಈ ಹಿಂದೆ ಟೈಟಲ್ ಸಾಂಗ್ ರಿಲೀಸ್ ಆಗಿದ್ದು ಭಾರಿ ಸದ್ದು ಮಾಡಿತ್ತು. ಪೊಲೀಸ್ ಡ್ರಾಮಾ ಸಿನಿಮಾ ಆಗಿರುವ ಹೊಯ್ಸಳ ಚಿತ್ರದ ಟೀಸರ್ ರಿಲೀಸ್ ಆಗಿ ಭರವಸೆ ಮೂಡಿಸಿತ್ತು. ಇನ್ನು ಡಾಲಿ ಧನಂಜಯ್​ರ 25ನೇ ಸಿನಿಮಾ ಹೊಯ್ಸಳ ಮಾರ್ಚ್‌ 30 ರಂದು ತೆರೆಮೇಲೆ ಅಪ್ಪಳಿಸಲಿದೆ. ಸಿನಿಮಾದಲ್ಲಿ ಅಮೃತಾ ಐಯ್ಯಂಗಾರ್ ನಾಯಕಿ, ಅಚ್ಯುತ್ ಕುಮಾರ್, ರಾಜೇಶ್ ನಟರಂಗ ಸೇರಿದಂತೆ ಇನ್ನಿತರರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾವನ್ನು ವಿಜಯ್ ಎನ್ ನಿರ್ದೇಶನ ಮಾಡಿದ್ದು, ಕೆಆರ್​ಜಿ ಸ್ಟುಡಿಯೋ ಅಡಿಯಲ್ಲಿ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ನಿರ್ಮಾಣ ಮಾಡಿದ್ದಾರೆ.

  • ಶರಣ್ ಜೊತೆ ತೆರೆಹಂಚಿಕೊಳ್ಳಲಿದ್ದಾರೆ ಅಮೃತಾ ಅಯ್ಯಂಗಾರ್

    ಶರಣ್ ಜೊತೆ ತೆರೆಹಂಚಿಕೊಳ್ಳಲಿದ್ದಾರೆ ಅಮೃತಾ ಅಯ್ಯಂಗಾರ್

    ನ್ನಡದ ಹೆಸರಾಂತ ನಟ ಶರಣ್ ನಟನೆಯ ಹೊಸ ಸಿನಿಮಾಗೆ ನಾಯಕಿಯಾಗಿ ಅಮೃತಾ ಅಯ್ಯಂಗಾರ್ ಆಯ್ಕೆಯಾಗಿದ್ದಾರೆ. ಇದು ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿ ಬರಲಿರುವ ಚಿತ್ರವಾಗಿದ್ದು, ಈ ಸಿನಿಮಾದಲ್ಲಿ ಅವರು ಪತ್ರಕರ್ತೆಯ ಪಾತ್ರ ಮಾಡಲಿದ್ದಾರಂತೆ. ಈ ಪಾತ್ರಕ್ಕಾಗಿ ಅವರು ಆ ಶೈಲಿಯ ಭಾಷೆಯನ್ನು ಕಲಿಯಲಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಇದೊಂದು ವಿಭಿನ್ನ ಪಾತ್ರ ಹಾಗಾಗಿ ಈ ಸಿನಿಮಾವನ್ನು ಒಪ್ಪಿಕೊಂಡೆ ಎನ್ನುವುದು ಅಮೃತಾ ಮಾತು.

    ‘ಪುಗ್ಸಟ್ಟೆ ಲೈಫು ಪುರುಸೊತ್ತೇ ಇಲ್ಲ’ ಸಿನಿಮಾ ಖ್ಯಾತಿಯ ಅರವಿಂದ್ ಕುಪ್ಲಿಕರ್ ಶರಣ್ ಮುಂದಿನ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಾರ್ಕ್ ಹ್ಯೂಮರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಶರಣ್ ಪಾತ್ರ ಹಿಂದಿನ ಸಿನಿಮಾಗಳಿಗಿಂತ ಡಿಫ್ರೆಂಟ್ ಆಗಿರಲಿದ್ದು, ಎಲೆಕ್ಟ್ರಿಷಿಯನ್ ಪಾತ್ರ ನಿರ್ವಹಿಸುತ್ತಿದ್ದಾರೆ. ಶರಣ್ ಹುಟ್ಟುಹಬ್ಬ ಆದ್ರಿಂದ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಅಧೀಕೃತ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿಸಿದ್-ಕಿಯಾರಾ ಮದುವೆ ಜೀವನದ ಬಗ್ಗೆ ಭವಿಷ್ಯ ನುಡಿದ ಜ್ಯೋತಿಷಿ

    ಶ್ರೀಧರ ಕೃಪ ಕಂಬೈನ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿದ್ದು, ಬಿ.ಬಸವರಾಜ್ ಹಾಗೂ ಶ್ರೀಧರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಅರವಿಂದ್ ಕುಪ್ಲಿಕರ್ ನಿರ್ದೇಶನ ಮಾಡುತ್ತಿದ್ದಾರೆ. ಸಂಚಾರಿ ವಿಜಯ್ ಅಭಿನಯದ ‘ಪುಗ್ಸಟ್ಟೆ ಲೈಫು ಪುರುಸೋತ್ತೇ ಇಲ್ಲ’ ಸಿನಿಮಾ ನಂತರ ಅರವಿಂದ್ ಕುಪ್ಲಿಕರ್ ಆಕ್ಷನ್ ಕಟ್ ಹೇಳುತ್ತಿರುವ ಎರಡನೇ ಸಿನಿಮಾವಿದು. ಬಾಗಲಕೋಟೆಯಲ್ಲಿ ನಡೆಯುವ ಕಥೆಯನ್ನು ಚಿತ್ರ ಒಳಗೊಂಡಿದ್ದು, ಉತ್ತರ ಕರ್ನಾಟಕ ಶೈಲಿ ಭಾಷೆಯಲ್ಲಿ ಶರಣ್ ಗಮನ ಸೆಳೆಯಲಿದ್ದಾರೆ ಎಂದು ನಿರ್ದೇಶಕ ಅರವಿಂದ್ ಕುಪ್ಲಿಕರ್ ತಿಳಿಸಿದ್ದಾರೆ.

    ಅಚ್ಯುತ್ ಕುಮಾರ್, ರಂಗಾಯಣ ರಘು ಸೇರಿದಂತೆ ಹೊಸ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದು, ಇದೇ ತಿಂಗಳ 20ರಿಂದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದ ಟೈಟಲ್ ಹಾಗೂ ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ಚಿತ್ರತಂಡ ಹಂಚಿಕೊಳ್ಳಲಿದೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಉಲ್ಲಾಸ್ ಹೈದೂರ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಿಲನಾ ನಾಗರಾಜ್ ನಟನೆಯ ‘ಓ’ ಸಿನಿಮಾಗಾಗಿ ಹಾಡಿದ ಪುನೀತ್ ರಾಜ್ ಕುಮಾರ್

    ಮಿಲನಾ ನಾಗರಾಜ್ ನಟನೆಯ ‘ಓ’ ಸಿನಿಮಾಗಾಗಿ ಹಾಡಿದ ಪುನೀತ್ ರಾಜ್ ಕುಮಾರ್

    ವ್ ಮಾಕ್ಟೇಲ್  ಚಿತದ ನಂತರ ಮಿಲನಾ ನಾಗರಾಜ್ (Milana Nagaraj) ಹಾಗೂ ಅಮೃತಾ ಅಯ್ಯಂಗಾರ್ (Amrita Iyengar) ಒಟ್ಟಿಗೇ ನಟಿಸಿರುವ ವಿಭಿನ್ನ ಪ್ರೇಮಕಥಾಹಂದರ ಇರುವ ವಾಮಾಚಾರ ಹಾಗೂ ಹಾರರ್ ಹಿನ್ನೆಲೆಯಲ್ಲಿ ಮೂಡಿಬಂದಿರುವ  ಚಿತ್ರ ಓ (O). ಮಹೇಶ್ ಸಿ.ಅಮ್ಮಲ್ಲಿದೊಡ್ಡಿ (Mahesh Ammallidoddy) ಅವರ ಚಿತ್ರಕಥೆ ಹಾಗೂ ನಿರ್ದೇಶನವಿರುವ ಈ ಚಿತ್ರದ ಟ್ರೈಲರ್ (Trailer) ಬಿಡುಗಡೆ ಕಾರ್ಯಕ್ರಮ ವಿಜಯದಶಮಿಯ ಶುಭ ಸಂದರ್ಭದಲ್ಲಿ ನೆರವೇರಿತು. ಕಿರಣ್ ತಲಕಾಡು ಅವರು ಕಥೆ ಬರೆದು ಏಕಾಕ್ಷರ ಫಿಲಂಸ್ ಬ್ಯಾನರ್ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

    ಕೋವಿಡ್‌ಗೂ ಮುನ್ನವೇ ಪ್ರಾರಂಭವಾಗಿದ್ದ ಈ ಚಿತ್ರ ಎಲ್ಲಾ ಅಡೆತಡೆಗಳನ್ನು ದಾಟಿ ಈಗ ಬಿಡುಗಡೆಯ ಹಂತ ತಲುಪಿದೆ. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಮಹೇಶ್ ಈವರೆಗೆ ನಾನೇನು ಹಾರರ್ ಸಿನಿಮಾಗಳನ್ನು ನೋಡಿದ್ದೇನೋ, ಅದೆಲ್ಲಕ್ಕಿಂತ ವಿಭಿನ್ನವಾಗಿರಬೇಕು ಎಂದು ಮಾಡಿದ ಚಿತ್ರ. ಒಂದು ಕುಟುಂಬದಲ್ಲಿ ಅಕ್ಕತಂಗಿಯ ಮೇಲೆ ನಡೆಯುವ ಕಥೆಯಿದು. ಓ ಎಂಬ ಪದಕ್ಕೆ ಅರ್ಥವನ್ನು ಚಿತ್ರದಲ್ಲಿ ಹೇಳಿದ್ದೇವೆ. ಅಲ್ಲದೆ ವಾಮಾಚಾರ ಮಾಡುವುದು ತಪ್ಪು ಅಂತಲೇ ತೋರಿಸಿದ್ದೇವೆ. ಈಗಾಗಲೇ ಚಿತ್ರದ ಫಸ್ಟ್ ಕಾಪಿ ಬಂದಿದ್ದು, ನ.೧೧ಕ್ಕೆ  ಬಿಡುಗಡೆಯಾಗುತ್ತಿದೆ. ನನ್ನ ಜೊತೆ ಕೆಲಸ ಮಾಡಿರುವ ರಿತೇಶ್, ಚೇತನ್ ಮೂಲಕ ನಿರ್ಮಾಪಕ ಕಿರಣ್ ಅವರು ಪರಿಚಯವಾದರು ಎಂದು ವಿವರಿಸಿದರು. ಇದನ್ನೂ ಓದಿ:ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ ಮೂರು ದಿನದ ಗಳಿಕೆ 230 ಕೋಟಿಗೂ ಅಧಿಕ

    ನಿರ್ಮಾಪಕ ಕಿರಣ್ ತಲಕಾಡು ಮಾತನಾಡುತ್ತ ನನಗೆ ಚಿಕ್ಕವನಿದ್ದಾಗಲೇ ನನಗೆ ಏಕಾಕ್ಷರ ಶೀರ್ಷಿಕೆಯಿಟ್ಟುಕೊಂಡು ಸಿನಿಮಾ ಮಾಡಬೇಕೆಂಬ ಆಸೆಯಿತ್ತು. ಸೆನ್ಸಾರ್ ಮಂಡಳಿಯವರು ಸಿನಿಮಾ ನೋಡಿ ತುಂಬಾ ಚೆನ್ನಾಗಿ ಮೂಡಿಬಂದಿದೆ ಎಂದು ಪ್ರಶಂಸಿಸಿದರು. ನಮ್ಮ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರು ಒಂದು ಹಾಡನ್ನು ಹಾಡಿದ್ದಾರೆ. ಆ ಹಾಡಿನ ಬಿಡುಗಡೆಯನ್ನು ದೊಡ್ಡ ಇವೆಂಟ್ ಮೂಲಕ ಮಾಡಬೇಕೆಂಬ ಯೋಚನೆಯಿದೆ. ಆಡಿಯೋ ಬಿಡುಗಡೆಗೆ ನಾನು ಬರುತ್ತೇನೆ ಎಂದೂ ಪುನೀತ್ ಅವರು ಹೇಳಿದ್ದರು.ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಚಿತ್ರವನ್ನು ಜನರಿಗೆ ಹೇಗೆಲ್ಲಾ ತಲುಪಿಸಬೇಕೆಂದು ಸಾಕಷ್ಟು ಯೋಜನೆಗಳನ್ನು ಹಾಕಿಕೊಂಡಿದ್ದೇವೆ ಎಂದು ಹೇಳಿದರು.

    ನಾಯಕಿ ಮಿಲನಾ ನಾಗರಾಜ್ ಮಾತನಾಡಿ ಹಬ್ಬದ ಶುಭ ದಿನದಂದು ನಮ್ಮ ಚಿತ್ರದ ಟ್ರೇಲರ್ ಬಿಡುಗಡೆಯಾಗುತ್ತಿದೆ. ಲಾಕ್‌ಡೌನ್‌ಗೂ ಮುನ್ನವೇ ಈ ಸಿನಿಮಾ ಪ್ರಾರಂಭವಾಗಿತ್ತು. ಬೇರೆಯದೇ ರೀತಿಯ ಅನುಭವ ಕೊಡುವಂಥ ಚಿತ್ರವಿದು. ಈ ಥರದ ಚಿತ್ರಗಳನ್ನು ಮಾಡುವಾಗ ತುಂಬಾ ಸಹನೆ ಇರಬೇಕು, ಅದು ಈ ನಿರ್ದೇಶಕರಲ್ಲಿತ್ತು. ಅಮೃತ ನನ್ನ ಸಹೋದರಿ ಪಾತ್ರ ಮಾಡಿದ್ದಾರೆ. ಸಿದ್ದು ಕೂಡ ಒಂದೊಳ್ಳೇ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ಬ್ಲಾಕ್ ಮ್ಯಾಜಿಕ್, ಹಾರರ್ ಹೀಗೆ ತುಂಬಾ ವಿಷಯಗಳಿವೆ. ಇದನ್ನು ನಾರ್ಮಲ್ ಸಿನಿಮಾ ರೀತಿ ಶೂಟ್ ಮಾಡಲು ಸಾಧ್ಯವಿಲ್ಲ, ಬೇರೆಥರದ ಶಾಟ್ ಇಡಬೇಕು ಎಂದು ಚಿತ್ರದ ಬಗ್ಗೆ ಸಾಕಷ್ಟು ಮಾಹಿತಿ ಹಂಚಿಕೊಂಡರು. ನಂತರ ಅಮೃತ ಅಯ್ಯಂಗಾರ್ ಮಾತನಾಡಿ ಚಿತ್ರದಲ್ಲಿ ಹಾರರ್ ಎಫೆಕ್ಟ್ ತುಂಬಾ ಚೆನ್ನಾಗಿ ಮೂಡಿಬಂದಿದೆ. ನನ್ನದು  ಎಲ್ಲ ಥರದ ಎಮೋಷನ್ ಕ್ಯಾರಿ ಮಾಡುವಂಥ ಪಾತ್ರ. ಜನರಿಗೆ ಹೆದರಿಸೋದು ತುಂಬಾ ಕಷ್ಟದ ಕೆಲಸ, ಕೆಲವು ಸೀನ್‌ಗಲ್ಲಿ ಆಕ್ಟ್  ಮಾಡುವಾಗ ತುಂಬಾ ಭಯವಾಗಿತ್ತು. ಆಲಾಪ್ ನನ್ನ ತಮ್ಮನ ಪಾತ್ರ ಮಾಡಿದ್ದಾನೆ. ಅವನ ಜೊತೆಗೇ ನನಗೆ ಹೆಚ್ಚು ಸೀನ್‌ಗಳಿವೆ ಎಂದರು. ನಾಯಕ ಸಿದ್ದು ಮೂಲಿಮನಿ ಮಾತನಾಡಿ ನಾನು ಅಭಿನಯಿಸಿದ ಮೊದಲ ಚಿತ್ರವಿದು. ಆಗ ನಾನು ಬೇರೊಂದು ಸಿನಿಮಾಗೆ ಆಡಿಷನ್ ಕೊಟ್ಟಿದ್ದೆ, ಸ್ನೇಹಿತ ಮಹೇಶ್ ನಾನೊಂದು ಸಿನಿಮಾ ಮಾಡುತ್ತಿದ್ದೇನೆ. ಅದರಲ್ಲಿ ನೀನೇ ಹೀರೋ ಅಂದಿದ್ದರು. ಹೇಳಿದ ಹಾಗೇ ಕರೆದು ಹೀರೋ ಮಾಡಿದ್ದಾರೆ ಎಂದು ಹೇಳಿಕೊಂಡರು.

    ನಾಯಕಿಯರ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಹಿರಿಯನಟಿ ಸಂಗೀತಾ ಮಾತನಾಡಿ ನಿರ್ಮಾಪಕ ಕಿರಣ್ ನನಗೆ ಫ್ಯಾಮಿಲಿ ಫ್ರೆಂಡ್. ಅವರಿಗೆ ಸಿನಿಮಾ ಬಗ್ಗೆ ತುಂಬಾ ಆಸಕ್ತಿಯಿದೆ. ಇನ್ನೂ ಒಳ್ಳೊಳ್ಳೇ ಚಿತ್ರಗಳನ್ನು ಮಾಡುವಂತಾಗಲಿ, ನಾನೀ ಚಿತ್ರದಲ್ಲಿ ಮಾ.ಆಲಾಪ್, ಅಮೃತಾ ಹಾಗೂ ಮಿಲನಾರ ತಾಯಿಯಾಗಿ ನಟಿಸಿದ್ದೇನೆ ಎಂದು ಹೇಳಿದರು. ಚಿತ್ರಕ್ಕೆ ಛಾಯಾಗ್ರಾಹಕರಾಗಿ ದಿಲೀಪ್ ಚಕ್ರವರ್ತಿ ಕೆಲಸ ಮಾಡಿದ್ದಾರೆ. ಕಿರಣ್ ರವೀಂದ್ರನಾಥ್ ಅವರ ಸಂಗೀತ ಸತೀಶ್ ಬಾಬು ಅವರ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ. ಉಗ್ರಂ, ಕೆಜಿಎಫ್ ಖ್ಯಾತಿಯ ಶ್ರೀಕಾಂತ್ ಸಂಕಲನಕಾರರಾಗಿ ಕೆಲಸ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಧನಂಜಯ್ ನಟನೆಯ 25ನೇ ಸಿನಿಮಾ ‘ಹೊಯ್ಸಳ’ ಬಿಡುಗಡೆ ದಿನಾಂಕ ಫಿಕ್ಸ್

    ಧನಂಜಯ್ ನಟನೆಯ 25ನೇ ಸಿನಿಮಾ ‘ಹೊಯ್ಸಳ’ ಬಿಡುಗಡೆ ದಿನಾಂಕ ಫಿಕ್ಸ್

    ಡಾಲಿ ಧನಂಜಯ್ (Dhananjay) ನಟನೆಯ ಹೊಯ್ಸಳ ಸಿನಿಮಾಗೆ ಭರದಿಂದ ಚಿತ್ರೀಕರಣ ನಡೆಯುತ್ತಿದೆ. ಕೆ.ಆರ್.ಜಿ ಸ್ಟುಡಿಯೋ ಬ್ಯಾನರ್ಸ್ ಅಡಿಯಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ಧನಂಜಯ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಫಸ್ಟ್ ಲುಕ್ ಕೂಡ ಕುತೂಹಲ ಮೂಡಿಸಿತ್ತು. ಹಾಗಾಗಿ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ನಿರೀಕ್ಷೆ ಕೂಡ ಹೆಚ್ಚಾಗಿತ್ತು. ಅದಕ್ಕೂ ಇದೀಗ ತೆರೆ ಬಿದ್ದಿದೆ. ಹೊಯ್ಸಳ ಸಿನಿಮಾವನ್ನು ಮುಂದಿನ ವರ್ಷ ಬಿಡುಗಡೆ ಮಾಡುತ್ತಿದ್ದು, ಮಾರ್ಚ್ 30ರಂದು ದಿನಾಂಕ ನಿಗಧಿ ಆಗಿದೆ.

    ಇದು ಧನಂಜಯ್ ಅವರ 25ನೇ ಸಿನಿಮಾ. ಅದ್ಧೂರಿಯಾಗಿಯೇ ಈ ಸಿನಿಮಾವನ್ನು ಬಿಡುಗಡೆ ಮಾಡಬೇಕು ಎನ್ನುವುದು ಚಿತ್ರತಂಡದ ಆಸೆ. ಹೀಗಾಗಿ ಇಷ್ಟು ಬೇಗ ದಿನಾಂಕ ಫಿಕ್ಸ್ ಮಾಡಿ, ಹೊಯ್ಸಳ (Hoysala) ಉತ್ಸವಕ್ಕೆ ಎಲ್ಲರೂ ರೆಡಿಯಾಗಿರಿ ಎಂದು ಹೇಳಿದ್ದಾರೆ ನಿರ್ಮಾಪಕರು. ವಿಜಯ್ ಎನ್ ಅವರ ನಿರ್ದೇಶನದಲ್ಲಿ ಈ ಸಿನಿಮಾ ತಯಾರಾಗುತ್ತಿದ್ದು, ಇದೊಂದು ಹೊಸ ಬಗೆಯ ಕಥೆಯನ್ನು ಹೊಂದಿದೆಯಂತೆ. ಇದನ್ನೂ ಓದಿ:ರಾಕೇಶ್‌ಗಾಗಿ ಬಿಗ್ ಬಾಸ್ ಮನೆನಾ ಎರಡು ಮನೆ ಮಾಡಬೇಕಾ: ಸೋನು ವಿರುದ್ಧ ಗುರೂಜಿ ಗರಂ

    ಡಾಲಿ ಜೊತೆ ಅಮೃತಾ ಅಯ್ಯಂಗಾರ್ (Amrita Iyengar) ಈ ಸಿನಿಮಾದಲ್ಲಿ ನಟಿಸಿದ್ದು, ರಾಘು ಶಿವಮೊಗ್ಗ, ಅಚ್ಯುತ್ ಕುಮಾರ್ ಸೇರಿದಂತೆ ಪ್ರತಿಭಾವಂತ ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ. ಈ ಚಿತ್ರಕ್ಕಾಗಿ ಧನಂಜಯ್ ಒಂದಷ್ಟು ತೂಕ ಕಳೆದುಕೊಂಡು ಪೊಲೀಸ್ ಪಾತ್ರವನ್ನು ಒಪ್ಪಿಕೊಂಡಿದ್ದಾರೆ. ಸಲಗ ಸಿನಿಮಾದಲ್ಲಿ ಡಾಲಿ ಪೊಲೀಸ್ ಪಾತ್ರ ಮಾಡಿದ್ದರೂ, ಅದಕ್ಕಿಂತಲೂ ಈ ಪಾತ್ರ ಸಾಕಷ್ಟು ಭಿನ್ನವಾಗಿದೆ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಜಾಝ್ ಶೈಲಿಯಲ್ಲಿ ‘ಸರೆಂಡರ್’ ಮಾಡಲು ಬಂದ ‘ವಿಂಡೋಸೀಟ್’ ನಟಿಮಣಿಯರು

    ಜಾಝ್ ಶೈಲಿಯಲ್ಲಿ ‘ಸರೆಂಡರ್’ ಮಾಡಲು ಬಂದ ‘ವಿಂಡೋಸೀಟ್’ ನಟಿಮಣಿಯರು

    ಬೆಂಗಳೂರು: ಶೀತಲ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರ್ತಿರೋ ‘ವಿಂಡೋಸೀಟ್’ ಸಿನಿಮಾ ಸ್ಯಾಂಡಲ್‍ವುಡ್ ಬಹು ನಿರೀಕ್ಷಿತ ಚಿತ್ರಗಳಲ್ಲೊಂದು.

    ರೋಮ್ಯಾಂಟಿಕ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ‘ವಿಂಡೋಸೀಟ್’ ಚಿತ್ರದಲ್ಲಿ ನಿರೂಪ್ ಭಂಡಾರಿ, ಸಂಜನಾ ಆನಂದ್, ಅಮೃತಾ ಐಯ್ಯಂಗಾರ್ ಮುಖ್ಯ ಭೂಮಿಕೆಯಲ್ಲಿ ತೆರೆ ಹಂಚಿಕೊಂಡಿದ್ದಾರೆ. ಆರಂಭದಿಂದಲೂ ಎಲ್ಲರ ಗಮನ ಸೆಳೆಯುತ್ತಲೇ ಬಂದಿರುವ ಈ ಚಿತ್ರ ಇದೀಗ ಚಿತ್ರದ ಹಾಡೊಂದನ್ನ ವಿಶೇಷ ಶೈಲಿಯಲ್ಲಿ ಚಿತ್ರೀಕರಿಸಿ ಎಲ್ಲರ ಚಿತ್ತ ಸೆಳೆದಿದೆ.

    ಚಿತ್ರದ ‘ಸರೆಂಡರ್’ ಹಾಡನ್ನು ಚಿತ್ರತಂಡ ವಿಭಿನ್ನವಾಗಿ, ವಿಶೇಷವಾಗಿ ಚಿತ್ರೀಕರಿಸಿ ಸುದ್ದಿಯಲ್ಲಿದೆ. ಜಾಝ್ ಶೈಲಿಯಲ್ಲಿ ಮೂಡಿ ಬಂದಿರುವ ಈ ಹಾಡು ಕನ್ನಡದ ಮಟ್ಟಿಗಂತೂ ಇದೇ ಮೊದಲ ಪ್ರಯೋಗ. ಸರೆಂಡರ್ ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆಯಾಗಿದ್ದು, ಈ ಹಾಡು ಎಲ್ಲರ ಗಮನವನ್ನು ತನ್ನತ್ತ ಆಕರ್ಷಿಸಿದೆ. ಈ ಪ್ರಯೋಗಾತ್ಮಕ ಹಾಡಿಗೆ ಮಹೇಶ್ ರಘುನಂದನ್ ಸಾಹಿತ್ಯ, ಸೌಂದರ್ಯ ಜಯಚಂದ್ರನ್ ಗಾಯನ, ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಮ್ಯೂಸಿಕ್ ಮೋಡಿ ಇದೆ. ಇದನ್ನೂ ಓದಿ:  ಕೆಜಿಎಫ್ ಶೂಟಿಂಗ್ ನಡೆದ ಬಂಜರು ಭೂಮಿಗೆ ಮತ್ತೆ ಜೀವ ನೀಡುತ್ತಿದೆ ಹೊಂಬಾಳೆ ಫಿಲಂಸ್

    ಈಗಾಗಲೇ ಚಿತ್ರೀಕರಣ, ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿರುವ ಚಿತ್ರತಂಡ ಸಿನಿಮಾ ರಿಲೀಸ್ ಮಾಡಲು ಸಿದ್ಧತೆ ನಡೆಸುತ್ತಿದೆ. ಇಷ್ಟೊತ್ತಿಗಾಗಲೇ ಈ ಸಿನಿಮಾ ತೆರೆಕಂಡಿರಬೇಕಿತ್ತು. ಆದರೆ ಕೊರೊನಾ ಅದಕ್ಕೆಲ್ಲ ಬ್ರೇಕ್ ಹಾಕಿತ್ತು. ಆದ್ರೀಗ ಎಲ್ಲವೂ ಸುಧಾರಣೆಯ ಹಂತಕ್ಕೆ ಬಂದು ತಲುಪಿದ್ದು, ‘ವಿಂಡೋಸೀಟ್’ ಚಿತ್ರತಂಡ ಕೂಡ ಸಿನಿರಸಿಕರಿಗೆ ಸದ್ಯದಲ್ಲೇ ಸಿಹಿ ಸುದ್ದಿ ನೀಡಲಿದೆ.

    ಮೇಕಿಂಗ್, ಟೀಸರ್, ಹಾಡುಗಳು ಸೃಷ್ಟಿಸಿರೋ ಬಝ್, ಶೀತಲ್ ಶೆಟ್ಟಿ ನಿರ್ದೇಶನದ ಮೊದಲ ಸಿನಿಮಾ ಅನ್ನೋ ಕ್ಯೂರಿಯಾಸಿಟಿ, ಆದಿ ಲಕ್ಷ್ಮೀ ಪುರಾಣ ನಂತರ ನಿರೂಪ್ ಭಂಡಾರಿ ಯಾವುದೇ ಸಿನಿಮಾಗಳು ತೆರೆ ಕಾಣದಿರುವುದು, ಈ ಎಲ್ಲವೂ ಪ್ರೇಕ್ಷಕ ಪ್ರಭುಗಳ ಮನಸ್ಸಲ್ಲಿ ‘ವೀಂಡೋಸೀಟ್’ ಚಿತ್ರದ ಮೇಲೆ ಅಪಾರ ನಿರೀಕ್ಷೆಯನ್ನು ಹುಟ್ಟು ಹಾಕಿವೆ.

    ಕೆ ಎಸ್ ಕೆ ಶೋರೀಲ್ ಬ್ಯಾನರ್ ನಡಿ ನಿರ್ಮಾಣವಾದ ಚಿತ್ರಕ್ಕೆ ಜಾಕ್ ಮಂಜು ಬಂಡವಾಳ ಹೂಡಿದ್ದು, ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಸಾರಥ್ಯ, ವಿಘ್ನೇಶ್ ರಾಜ್ ಕ್ಯಾಮೆರಾ ವರ್ಕ್, ರಿತ್ವಿಕ್ ಸಂಕಲನವಿದೆ. ಲೇಖಾ ನಾಯ್ಡು, ಮಧುಸೂದನ್ ರಾವ್, ರವಿಶಂಕರ್, ಸೂರಜ್ ಒಳಗೊಂಡಂತೆ ಹಲವು ಕಲಾವಿದರು ‘ವಿಂಡೋಸೀಟ್’ ತಾರಾ ಬಳಗದಲ್ಲಿದ್ದಾರೆ. ಇದನ್ನೂ ಓದಿ: ಕಷ್ಟಕರವಾದ ರಸ್ತೆಗಳು ಸುಂದರ ತಾಣಗಳಿಗೆ ದಾರಿ ಮಾಡಿಕೊಡುತ್ತೆ: ದೀಪಿಕಾ ದಾಸ್

  • ‘ವಿಂಡೋಸೀಟ್’ ಎರಡನೇ ಲಿರಿಕಲ್ ವೀಡಿಯೋ ಡಿ.18ಕ್ಕೆ ರಿಲೀಸ್

    ‘ವಿಂಡೋಸೀಟ್’ ಎರಡನೇ ಲಿರಿಕಲ್ ವೀಡಿಯೋ ಡಿ.18ಕ್ಕೆ ರಿಲೀಸ್

    ನಿರೂಪ್ ಭಂಡಾರಿ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ವಿಂಡೋಸೀಟ್’ ಸ್ಯಾಂಡಲ್‍ವುಡ್ ಅಂಗಳದಲ್ಲಿ ಬಹು ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಒಂದೊಂದೇ ಸ್ಯಾಂಪಲ್‍ಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಿರುವ ‘ವಿಂಡೋಸೀಟ್’ ಚಿತ್ರತಂಡ ಮತ್ತೊಂದು ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆ ಮಾಡಲು ಸಜ್ಜಾಗಿದೆ.

    ಈಗಾಗಲೇ ಯೋಗರಾಜ್ ಭಟ್ ಸಾಹಿತ್ಯ ಕೃಷಿಯಲ್ಲಿ ಅರಳಿರೋ ‘ಅತಿ ಚೆಂದದ ಹೂಗೊಂಚಲು’ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿ ಹಿಟ್ ಆಗಿದೆ. ಇದೀಗ ಅದೇ ಖುಷಿಯಲ್ಲಿ ಚಿತ್ರತಂಡ ‘ಖಾಲಿ ಆಕಾಶ’ ಎಂಬ ಮತ್ತೊಂದು ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆ ಮಾಡುತ್ತಿದ್ದು, ಡಿಸೆಂಬರ್ 18ಕ್ಕೆ ಆನಂದ್ ಆಡಿಯೋನಲ್ಲಿ ಈ ಲಿರಿಕಲ್ ವೀಡಿಯೋ ಬಿಡುಗಡೆಯಾಗುತ್ತಿದೆ. ಮೊದಲ ಲಿರಿಕಲ್ ವೀಡಿಯೋಗೆ ಸಿಕ್ಕ ಪ್ರತಿಕ್ರಿಯೆಯಿಂದ ಖುಷಿಯಲ್ಲಿರುವ ‘ವಿಂಡೋಸೀಟ್’ ಚಿತ್ರತಂಡ ‘ಖಾಲಿ ಆಕಾಶ’ ಹಾಡಿಗೆ ಯಾವ ರೀತಿ ಪ್ರೇಕ್ಷಕ ಪ್ರಭುವಿನ ಪ್ರತಿಕ್ರಿಯೆ ಸಿಗುತ್ತೆ ಅನ್ನೋದನ್ನ ಎದುರು ನೋಡುತ್ತಿದೆ.

    ‘ವಿಂಡೋಸೀಟ್’ ರೊಮ್ಯಾಂಟಿಕ್ ಥ್ರಿಲ್ಲರ್ ಜಾನರ್ ಸಿನಿಮಾವಾಗಿದ್ದು ನಟಿ ಶೀತಲ್ ಶೆಟ್ಟಿ ಈ ಚಿತ್ರದ ಮೂಲಕ ಚೊಚ್ಚಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಜಾಕ್ ಮಂಜುನಿರ್ಮಾಣದಲ್ಲಿ ಮೂಡಿ ಬರ್ತಿರೋ ‘ವಿಂಡೋಸೀಟ್’ ಚಿತ್ರದಲ್ಲಿ ಸಂಜನಾ ಆನಂದ್, ಅಮೃತಾ ಐಯ್ಯಂಗಾರ್ ನಿರೂಪ್ ಭಂಡಾರಿ ಜೊತೆ ನಾಯಕಿಯರಾಗಿ ಸ್ಕ್ರೀನ್ ಶೇರ್ ಮಾಡಿದ್ದಾರೆ. ರವಿಶಂಕರ್, ಮಧುಸೂದನ್ ರಾವ್, ಲೇಖಾ ನಾಯ್ಡು, ಸೂರಜ್ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದು, ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಸಂಯೋಜನೆಯಲ್ಲಿ ಚಿತ್ರದ ಹಿನ್ನೆಲೆ ಸಂಗೀತ ಹಾಗೂ ಹಾಡುಗಳು ಮೂಡಿ ಬಂದಿವೆ.