Tag: Amrutha Mahotsav

  • ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಬೊಮ್ಮಾಯಿಗೆ ಕಪ್ಪುಪಟ್ಟಿ ಪ್ರದರ್ಶನ

    ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಬೊಮ್ಮಾಯಿಗೆ ಕಪ್ಪುಪಟ್ಟಿ ಪ್ರದರ್ಶನ

    ಕಲಬುರಗಿ: ಈ ಹಿಂದೆ ಹೈದರಾಬಾದ್ ಕರ್ನಾಟಕ ಪ್ರದೇಶ ಎಂದು ಕರೆಯಲ್ಪಡುತ್ತಿದ್ದ ಕಲ್ಯಾಣ ಕರ್ನಾಟಕ (Kalyana Karnataka) ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿ ಇಂದಿಗೆ 75 ವರ್ಷಗಳು ಕಳೆದಿದೆ. ಈ ಹಿನ್ನೆಲೆ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು (Amrutha Mahotsav) ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಇಂದು ಕಲಬುರಗಿಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬರುತ್ತಿದ್ದಂತೆ ತಳವಾರ ಸಮುದಾಯದ ಜನ ಕಪ್ಪುಪಟ್ಟಿ (Black Flag) ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ.

    ಬೊಮ್ಮಾಯಿ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತಕ್ಕೆ ಆಗಮಿಸಿ ವಲ್ಲಭಬಾಯ್ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡುತ್ತಿದ್ದಂತೆ ಅಲ್ಲಿಗೆ ಆಗಮಿಸಿದ ತಳವಾರ ಸಮುದಾಯದ ಜನ ಕಪ್ಪುಪಟ್ಟಿ ಪ್ರದರ್ಶಿಸಿದರು. ತಳವಾರ ಸಮುದಾಯಕ್ಕೆ ಎಸ್‍ಟಿ (ST) ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಹೋರಾಟ ನಡೆಯುತ್ತಿದೆ. ಈ ಹೋರಾಟಕ್ಕೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಸಿಎಂಗೆ ಕಪ್ಪುಪಟ್ಟಿ ಪ್ರದರ್ಶನ ಮಾಡಿದ್ದಾರೆ. ಬಳಿಕ ಪೊಲೀಸರು (Police) ಕಪ್ಪುಪಟ್ಟಿ ಪ್ರದರ್ಶಿಸಿದ 25ಕ್ಕೂ ಅಧಿಕ ಜನರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕಕ್ಕೆ ಅಮೃತ ಮಹೋತ್ಸವ ಸಂಭ್ರಮ – ಸಿಎಂ ಬೊಮ್ಮಾಯಿ ಭಾಗಿ

    ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ಇಂದು ಕಲಬುರಗಿ ನಗರದ ಪ್ರಮುಖ ಬೀದಿಗಳಲ್ಲಿ ಬ್ಯಾನರ್ ಕಟೌಟ್‍ಗಳು ರಾರಾಜಿಸುತ್ತಿದ್ದು 2 ದಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ನಗರದ ನಗರೇಶ್ವರ ಶಾಲೆಯಿಂದ ಕೇಂದ್ರ ಬಸ್ ನಿಲ್ದಾಣದವರೆಗೆ 24 ಕಲಾ ತಂಡಗಳು ಮತ್ತು 200 ಕಲಾವಿದರು ಮೆರವಣಿಗೆ ಮಾಡಲಿದ್ದಾರೆ. ಇದನ್ನೂ ಓದಿ: ಸಿದ್ದು, ಡಿಕೆಶಿ ಮಧ್ಯೆ ಮತ್ತೆ ಪವರ್ ವಾರ್ – ಅತ್ತ ಭಾರತ್ ಜೋಡೋ, ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ಜೋಡೋ ಸ್ಥಿತಿ!

    Live Tv
    [brid partner=56869869 player=32851 video=960834 autoplay=true]

  • ಕಲ್ಯಾಣ ಕರ್ನಾಟಕಕ್ಕೆ ಅಮೃತ ಮಹೋತ್ಸವ ಸಂಭ್ರಮ – ಸಿಎಂ ಬೊಮ್ಮಾಯಿ ಭಾಗಿ

    ಕಲ್ಯಾಣ ಕರ್ನಾಟಕಕ್ಕೆ ಅಮೃತ ಮಹೋತ್ಸವ ಸಂಭ್ರಮ – ಸಿಎಂ ಬೊಮ್ಮಾಯಿ ಭಾಗಿ

    ಕಲಬುರಗಿ: ಈ ಹಿಂದೆ ಹೈದರಾಬಾದ್ ಕರ್ನಾಟಕ ಪ್ರದೇಶ ಎಂದು ಕರೆಯಲ್ಪಡುತ್ತಿದ್ದ ಕಲ್ಯಾಣ ಕರ್ನಾಟಕ (Kalyana Karnataka) ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿ ಇಂದಿಗೆ 75 ವರ್ಷಗಳು ಕಳೆದಿದೆ. ಈ ಹಿನ್ನೆಲೆ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು (Amrutha Mahotsav) ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.

    ಇಂದು ಕಲಬುರಗಿ ನಗರದ ಪ್ರಮುಖ ಬೀದಿಗಳಲ್ಲಿ ಬ್ಯಾನರ್ ಕಟೌಟ್‍ಗಳು ರಾರಾಜಿಸುತ್ತಿದ್ದು 2 ದಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ನಗರದ ನಗರೇಶ್ವರ ಶಾಲೆಯಿಂದ ಕೇಂದ್ರ ಬಸ್ ನಿಲ್ದಾಣದವರೆಗೆ 24 ಕಲಾ ತಂಡಗಳು ಮತ್ತು 200 ಕಲಾವಿದರು ಮೆರವಣಿಗೆ ಮಾಡಲಿದ್ದಾರೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ (Basavarj Bommai) ಕೂಡ ಜಿಲ್ಲೆಗೆ ಬರಲಿದ್ದು ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಇನ್ನೂ 7,030 ಹುದ್ದೆಗಳು ಸರ್ಕಾರದ ನಿರ್ಲಕ್ಷ್ಯದಿಂದ ಭರ್ತಿಯಾಗದೇ ಉಳಿದಿವೆ. ಹೀಗಾಗಿ ನಿರುದ್ಯೋಗ ಸಮಸ್ಯೆ ಪರಿಹಾರದ ದಿಸೆಯಲ್ಲಿ ಯುವ ಸಮೂಹ ಕಾತುರದಿಂದ ಕಾಯುತ್ತಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಅವರಿಗೆ 72ರ ಸಂಭ್ರಮ – ನಮೀಬಿಯಾದಿಂದ ಭಾರತಕ್ಕೆ 8 ಚಿರತೆಗಳು

    ಅಮೃತ ಮಹೋತ್ಸವಕ್ಕೆ ಕಲಬುರಗಿಗೆ ಬೊಮ್ಮಾಯಿ ಆಗಮಿಸುತ್ತಿದ್ದು, ಬೆಂಗಳೂರಿನ ಎಚ್‍ಎಎಲ್ (HAL) ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಸಿಎಂ ಕಲಬುರಗಿಗೆ ತೆರಳುತ್ತಿದ್ದಾರೆ. ಬೆಳಗ್ಗೆ 8:15ರ ಸುಮಾರಿಗೆ ಕಲಬುರಗಿಗೆ ಸಿಎಂ ಬಂದಿಳಿಯಲಿದ್ದಾರೆ. 8:30ಕ್ಕೆ ಸರ್ದಾರ್ ವಲ್ಲಭಭಾಯ್ ಪಟೇಲ್  (Vallabhbhai Patel) ಪುತ್ಥಳಿಗೆ ಸಿಎಂ ಮಾಲಾರ್ಪಣೆ ಮಾಡಲಿದ್ದು, 9 ಗಂಟೆಗೆ ಡಿಎಆರ್ ಪೊಲೀಸ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. 11 ಗಂಟೆಗೆ ನೂತನ ನಗರ ಪೊಲೀಸ್ ಆಯುಕ್ತರ ಕಟ್ಟಡ ಉದ್ಘಾಟನೆ. 11:30 ಗಂಟೆಗೆ ಎನ್‍ವಿ ಕಾಲೇಜು ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಉದ್ಘಾಟನೆ ಕಾರ್ಯಕ್ರಮದ ನಂತರ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ:
    ಮಹಾಗಣಪತಿ ವಿಸರ್ಜನೆ – ಶಾಲಾ-ಕಾಲೇಜ್‍ಗಳಿಗೆ ರಜೆ, 4 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ

    Live Tv
    [brid partner=56869869 player=32851 video=960834 autoplay=true]