Tag: amul

  • ನಂದಿನಿ ‘ನಮ್ಮವಳು’ ಅಲ್ಲ, ‘ನನ್ನವಳು’ : ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್

    ನಂದಿನಿ ‘ನಮ್ಮವಳು’ ಅಲ್ಲ, ‘ನನ್ನವಳು’ : ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್

    ಮೂಲ್ (Amul) ಮತ್ತು ನಂದಿನಿ (Nandini) ಹಾಲಿನ ಜಟಾಪಟಿ ತಾರಕಕ್ಕೇರಿದೆ. ಕರ್ನಾಟಕದಲ್ಲಿ ತನ್ನ ಉದ್ಯಮವನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ಅಮೂಲ್ ಹಲವು ರೀತಿಯಲ್ಲಿ ಕಸರತ್ತು ಮಾಡುತ್ತಿದೆ. ಇದಕ್ಕೆ ತೀವ್ರ ವಿರೋಧವು ವ್ಯಕ್ತವಾಗಿದೆ. ವಿರೋಧದ ಕಾವು ಜೋರಾಗುತ್ತಿದ್ದಂತೆಯೇ  ಅಮೂಲ್ ಕಂಪೆನಿಯ ಎಂ.ಡಿ ಸದ್ಯಕ್ಕೆ ಒಂದಷ್ಟು ಕೆಲಸವನ್ನು ಸ್ಥಗಿತಗೊಳಿಸಿದ್ದೇವೆ ಎಂದು ಹೇಳಿದರೂ, ಹೋರಾಟಗಾರರು ಮಾತ್ರ ಸುಮ್ಮನಾಗಿಲ್ಲ.

    ನಂದಿನಿ ಉಳಿವಿಗಾಗಿ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಮಾತನಾಡಿದ್ದು, ನಿರ್ದೇಶಕ ಮಂಸೋರೆ, ಚಿತ್ರಸಾಹಿತಿ ಕವಿರಾಜ್ ಸೇರಿದಂತೆ ಹಲವರು ಗಟ್ಟಿಯಾಗಿ ಧ್ವನಿ ಎತ್ತಿದ್ದಾರೆ. ಇನ್ನೂ ಹಲವರು ಡಾ.ರಾಜ್ ಕುಟುಂಬ ನಂದಿನಿ ಡೈರಿಗೆ ಸಪೋರ್ಟ್ ಮಾಡಿದ್ದನ್ನು ನೆನಪಿಸಿಕೊಂಡಿದ್ದಾರೆ. ಅಲ್ಲದೇ, ರೈತರ ಉಳಿವಿಗಾಗಿ ಎಂತಹ ಹೋರಾಟಕ್ಕೂ ಸಿದ್ಧ ಎಂದು ಕನ್ನಡಪರ ಹೋರಾಟಗಾರರು ಕರೆಕೊಟ್ಟಿದ್ದಾರೆ. ಈ ನಡುವೆ ನಾಗತಿಹಳ್ಳಿ ಚಂದ್ರಶೇಖರ್ (Nagatihalli Chandrasekhar) , ನಂದಿನಿ ಜೊತೆಗಿನ ಸಂಬಂಧವನ್ನು ಹೇಳಿಕೊಂಡಿದ್ದಾರೆ.

    ನಂದಿನಿ ಕುರಿತಾಗಿ ಟ್ವೀಟ್ ಮಾಡಿರುವ ನಾಗತಿಹಳ್ಳಿ, ‘ನಂದಿನಿ ನಮ್ಮವಳು ಅಲ್ಲ, ನನ್ನವಳು. ಆರೋಗ್ಯದಾಯಿನಿ. ನಾನು ಕೆಎಂಎಫ್ ನ ಮೈಸೂರು ಡೈರಿಯಲ್ಲಿ ಆರು ವರ್ಷ ದಿನಗೂಲಿ ಜತೆ ವ್ಯಾಸಂಗ ಮಾಡಿ ಬದುಕು ಕಟ್ಟಿಕೊಂಡವನು. ನಾಗತಿಹಳ್ಳಿಯಲ್ಲಿ ಹೆಣ್ಣು ಮಕ್ಕಳಿಗಾಗಿ ಮಾಡಿಕೊಟ್ಟ ಅಭಿವ್ಯಕ್ತಿ ಹಾಲು ಉತ್ಪಾದಕರ ಸಂಘ ಯಶಸ್ವಿಯಾಗಿ ನಡೆಯುತ್ತಿದೆ. ನಂದಿನಿ ಇಲ್ಲದ ಗ್ರಾಮ್ಯ ಬದುಕನ್ನು ಕಲ್ಪಿಸಿಕೊಳ್ಳುವುದೂ ಕಷ್ಟ’ ಎಂದು ಬರೆದಿದ್ದಾರೆ. ಇದನ್ನೂ ಓದಿ: ಬೋಲ್ಡ್ ಅವತಾರ ತಾಳಿದ ‘ಕಬ್ಜ’ ಸುಂದರಿ ಶ್ರೀಯಾ

    ನಾಗತಿಹಳ್ಳಿ ಮೇಷ್ಟ್ರು ಶಾಲಾ ದಿನಗಳಲ್ಲಿ ನಂದಿನಿ ಡೈರಿಯಲ್ಲಿ ಕೆಲಸ ಮಾಡಿದ್ದನ್ನು ನೆನಪಿಸಿಕೊಂಡಿದ್ದಾರೆ. ಆರು ವರ್ಷಗಳ ಕಾಲ ಡೈರಿಯಲ್ಲಿ ಅವರು ಕೆಲಸ ಮಾಡಿದ್ದಾರಂತೆ. ಹಾಗಾಗಿ ಅದರೊಂದಿಗೆ ತಮ್ಮದು ಭಾವನಾತ್ಮಕ ಸಂಬಂಧವಿದೆ ಎಂದು ಹೇಳಿಕೊಂಡಿದ್ದಾರೆ. ಅದು ಎಲ್ಲರ ಬದುಕನ್ನು ಕಟ್ಟಿಕೊಟ್ಟಿದೆ ಎಂದು ವಿವರಿಸಿದ್ದಾರೆ.

  • KMF ನಷ್ಟದಲ್ಲಿಲ್ಲ, 200 ಕೋಟಿ ಲಾಭದಲ್ಲಿದೆ – ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌

    KMF ನಷ್ಟದಲ್ಲಿಲ್ಲ, 200 ಕೋಟಿ ಲಾಭದಲ್ಲಿದೆ – ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌

    ಬೆಳಗಾವಿ: ರಾಜ್ಯದ ಕೆಎಂಎಫ್ (KMF) ನಷ್ಟದಲ್ಲಿಲ್ಲ, ಈ ವರ್ಷ 200 ಕೋಟಿ ರೂ. ಲಾಭದಲ್ಲಿದೆ. ಹೀಗಾಗಿ ಅಮುಲ್ ಜೊತೆಗೆ ನಂದಿನಿ ಯಾವುದೇ ಕಾರಣಕ್ಕೂ ವಿಲೀನ ಆಗಲ್ಲ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌ (Balachandra Jarkiholi) ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಎಂಎಫ್ ಹಾಗೂ ರಾಜ್ಯದ 15 ಒಕ್ಕೂಟಗಳು ಈ ವರ್ಷ 22 ಸಾವಿರ ಕೋಟಿ ರೂ. ವಹಿವಾಟು ನಡೆಸಿವೆ. ಅದರಲ್ಲಿ ಕೆಎಂಎಫ್‌ಗೆ ‌100 ಕೋಟಿ ರೂ. ಹಾಗೂ ಇತರೇ 15 ಒಕ್ಕೂಟಗಳ ಲಾಭ 100 ಕೋಟಿ ರೂ. ಸೇರಿ 200 ಕೋಟಿ ಲಾಭದಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ದೇವೇಗೌಡರ ತೀರ್ಮಾನವೇ ಅಂತಿಮ, ಅವರು ಹಾಕಿದ ಗೆರೆ ದಾಟಲ್ಲ : ಹೆಚ್.ಡಿ ರೇವಣ್ಣ

    ಯಾವುದೇ ಕಾರಣಕ್ಕೂ ನಂದಿನಿ-ಅಮುಲ್ (Amul) ವಿಲೀನ ಆಗಲ್ಲ. ಬೇಕಾದಷ್ಟು ಕಂಪನಿಗಳು ಬಂದರೂ ನಂದಿನಿಗೆ (Nandini) ಯಾರೂ ಕಾಂಪಿಟೇಷನ್ ಕೊಡಲು ಆಗಲ್ಲ. 10 ಅಮುಲ್ ನಂಥ ಕಂಪನಿಗಳು ಬಂದರೂ ಅದಕ್ಕೆ ಪ್ರತಿಸ್ಪರ್ಧೆ ಒಡ್ಡಲು ನಾವು ಸಿದ್ಧರಿದ್ದೇವೆ. ರಾಜಕೀಯ (Politics) ಕಾರಣಕ್ಕೆ ಕೆಲ ರಾಜಕೀಯ ಪಕ್ಷಗಳು, ಸಂಘಟನೆಗಳು ಈ ರೀತಿ ಮಾಡುತ್ತಿವೆ. ‌ನಮ್ಮ ಗ್ರಾಹಕರು, ರೈತರು ಹಾಗೂ ಉದ್ಯೋಗಿಗಳ ಹಿತ ಕಾಯಲು ನಾವು ಸಿದ್ಧರಿದ್ದೇವೆ. ಒಂದು ವಾರದಿಂದಲೂ ಗೊಂದಲವಿದೆ. ಈ ಗೊಂದಲ ಏಕೆ ಆಗ್ತಿದೆ ಎಂಬುದು ಗೊತ್ತಾಗ್ತಿಲ್ಲ. ನಾನು ರಾಜ್ಯದ ರೈತರು, ಗ್ರಾಹಕರಿಗೆ ಸಂದೇಶ ನೀಡುತ್ತೇನೆ, ಅಮುಲ್ ಜೊತೆಗೆ ನಂದಿನಿ ವಿಲೀನ ಆಗಲ್ಲ ಎಂದು ಬಾಲಚಂದ್ರ ಹೇಳಿದರು. ಇದನ್ನೂ ಓದಿ: ಆಕಾಶದಲ್ಲಿ ಜಾಗ ಸಿಕ್ಕಿಲ್ಲ, ಸಿಕ್ಕಿದ್ರೆ ಅಲ್ಲೂ ಭ್ರಷ್ಟಚಾರ ಮಾಡುತ್ತಿದ್ದರು: ಸಿ.ಟಿ.ರವಿ ವಿರುದ್ಧ ತಮ್ಮಯ್ಯ ವಾಗ್ದಾಳಿ

  • ನಂದಿನಿ ಬೇಕು; ಅಮುಲ್ ಬೇಡ- ಕನ್ನಡ ಪರ ಸಂಘಟನೆಗಳಿಂದ ಭುಗಿಲೆದ್ದ ಆಕ್ರೋಶ

    ನಂದಿನಿ ಬೇಕು; ಅಮುಲ್ ಬೇಡ- ಕನ್ನಡ ಪರ ಸಂಘಟನೆಗಳಿಂದ ಭುಗಿಲೆದ್ದ ಆಕ್ರೋಶ

    ಬೆಂಗಳೂರು: ಕರ್ನಾಟಕದಲ್ಲಿ ನಂದಿನಿ ಉಳಿಸಿ (#SaveNandini) ಅಭಿಯಾನ ಜೋರಾಗುತ್ತಿದೆ. ಇದರ ಮಧ್ಯೆ ಅಮುಲ್ (Amul) ಆನ್‍ಲೈನ್‍ನಲ್ಲಿ ವಿಸ್ತರಣೆಗೊಳ್ಳುತ್ತಿದೆ. ಅತ್ತ ಕೆಎಂಎಫ್ (KMF)- ಅಮುಲ್ ಹೆಸರಲ್ಲಿ ಮತ್ತೆ ರಾಜಕೀಯ ಜಟಾಪಟಿ ಜೋರಾಗುತ್ತಿದೆ.

    ಬೆಂಗಳೂರಲ್ಲಿ ಅಮುಲ್ ವಿರುದ್ಧ ಧಿಕ್ಕಾರದ ಕೂಗು ಮೊಳಗಿದೆ. ಅಮುಲ್ ಉತ್ಪನ್ನ ವಿರೋಧಿಸಿ ಕನ್ನಡ ಪರ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದವು. ಅಮುಲ್ ಚೀಸ್, ಅಮುಲ್ ಬೆಣ್ಣೆ, ತುಪ್ಪ ಹೀಗೆ ಅಮುಲ್ ಪ್ರಾಡಕ್ಟ್ ಗಳನ್ನು ನೆಲಕ್ಕೆಸೆದು ಆಕ್ರೋಶ ಹೊರಹಾಕಿದ್ರು. ಮಗದೊಂದು ಕಡೆಗೆ ಅಮುಲ್ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ರು. ಇದನ್ನೂ ಓದಿ: ಅಮುಲ್‍ಗೆ ವಿರೋಧ – ನಂದಿನಿ ಉತ್ಪನ್ನ ಖರೀದಿಸಿ ಹಂಚಿದ ಡಿಕೆಶಿ

    ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‍ (Mysuru Bank Circle) ನಲ್ಲಿ ಕರವೇ ನಾರಾಯಣಗೌಡ ಬಣ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. ಅಮುಲ್ ಉತ್ಪನ್ನ ಆನ್‍ಲೈನ್ ಮಾರಾಟ ಖಂಡಿಸಿದೆ. ಶೀಘ್ರದಲ್ಲಿಯೇ ಅಮುಲ್ ಫ್ಯಾಕ್ಟರಿ, ಅಮುಲ್ ಹಾಲಿನ ಮಾರಾಟ ಘಟಕಕ್ಕೆ ದಾಳಿ ಮಾಡೋದಾಗಿ ಕನ್ನಡ ಪರ ಸಂಘಟನೆ ಎಚ್ಚರಿಕೆ ನೀಡಿದೆ.

    ನಂದಿನಿ (Nandini) ಯನ್ನು ಮುಚ್ಚುವ ಹುನ್ನಾರ.. ರಾಜಕೀಯ ಷಡ್ಯಂತ್ರ ಅಂತಾ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ರು. ಕೊನೆಗೆ ಅಮುಲ್ ಹೆಸರು ಬೋರ್ಡ್ ಇರುವ ಪ್ರತಿಕೃತಿ ದಹನಕ್ಕೆ ಮುಂದಾದಾಗ ಪೊಲೀಸರು ಪ್ರತಿಭಟನೆಕಾರರನ್ನು ವಶಕ್ಕೆ ಪಡೆದುಕೊಂಡ್ರು.  ಇದನ್ನೂ ಓದಿ: ಬೆಂಗಳೂರು ಮಾರುಕಟ್ಟೆಗೆ ಅಮುಲ್‌ – ನಂದಿನಿ ಉಳಿಸಲು ಕನ್ನಡಿಗರಿಂದ #SaveNandini ಅಭಿಯಾನ

    ಹೆಚ್‍ಡಿಕೆ ವ್ಯಂಗ್ಯ: ಬಿಜೆಪಿ ಅವರಿಗೆ ಅಮುಲ್ ಪರಿಣಾಮದ ಮಾಹಿತಿ ಇಲ್ಲ. ಬಿಜೆಪಿ ಅವರ ಕಣ್ಣಿಗೆ ಮೋದಿ ಬಿಟ್ಟರೆ ಏನೂ ಕಾಣಲ್ಲ ಅಂತ ಹೆಚ್‍ಡಿಕೆ (HD Kumaraswamy) ಟೀಕಿಸಿದ್ದಾರೆ. ಈ ವಿಚಾರದಲ್ಲಿ ಎಚ್ಚರಿಕೆಯಿಂದ ತೀರ್ಮಾನ ತೆಗೆದುಕೊಳ್ಳದೆ ಇದ್ರೆ ನಂದಿನಿ ಮುಳುಗಿಸುತ್ತಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

    ಅತ್ತ ಸಿಎಂ ಬೊಮ್ಮಾಯಿ (Basavaraj Bommai) ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ್ದಾರೆ. ರಾಷ್ಟ್ರಮಟ್ಟದಲ್ಲಿ ನಂದಿನಿ ಬ್ರಾಂಡ್ ನಂಬರ್ 1 ಆಗಿಸಲು ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ನಂದಿನಿ ಮಾರುಕಟ್ಟೆ ವ್ಯಾಪ್ತಿ ವಿಶಾಲವಾಗಿದ್ದು, ಅಮೂಲ್ ಬಗ್ಗೆ ಯಾವುದೇ ಭಯ ಬೇಡ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಒಟ್ಟಿನಲ್ಲಿ ಚುನಾವಣೆಯ ಹೊಸ್ತಿಲಲ್ಲಿ ಅಮುಲ್ ಕಿಡಿ ಜ್ವಾಲೆಯಾಗಿ ಹಬ್ಬಿದೆ. ಕನ್ನಡಿಗರ ಆಕ್ರೋಶ ಸ್ಫೋಟಗೊಂಡಿದೆ. ನಂದಿನಿ ಉಳಿಸಿ ಅಮುಲ್ ತೊಲಗಿಸಿ ಕ್ಯಾಂಪೇನ್ ಜೋರಾಗಿ ಸದ್ದು ಮಾಡುತ್ತಿದೆ.

  • `ನಂದಿನಿ’ ನಮ್ಮವಳು – ನಮ್ಮ ಹಾಲು ನಮ್ಮ ಬದುಕು; ನಂದಿನಿ ಉಳಿಸಿ ಎಂದ ಡಿಕೆಶಿ

    `ನಂದಿನಿ’ ನಮ್ಮವಳು – ನಮ್ಮ ಹಾಲು ನಮ್ಮ ಬದುಕು; ನಂದಿನಿ ಉಳಿಸಿ ಎಂದ ಡಿಕೆಶಿ

    ಹಾಸನ: `ನಂದಿನಿ’ (Nandini Milk) ನಮ್ಮವಳು, ನಮ್ಮ ಹಾಲು ನಮ್ಮ ಬದುಕು. ಎಲ್ಲ ಹಾಲಿನ ಉತ್ಪನ್ನಗಳ ಬೆಲೆ ಜಾಸ್ತಿಯಾಗಿವೆ. ಆದರೆ ರೈತರಿಗೆ ಯಾವ ತರಹದ ಸಹಾಯ ಆಗಿಲ್ಲ. ರೈತರಿಗೆ (Farmers) ಹಾಲು ಉತ್ಪಾದನೆ ಮಾಡಲು ಸರ್ಕಾರ ಸಹಾಯ ಮಾಡಿಲ್ಲ. ಇದರಿಂದ ನಮ್ಮ ಹಸುಗಳ ಹಾಲನ್ನೇ ನಾವು ಮಾರಾಟ ಮಾಡೋಕೆ ಆಗದ ಪರಿಸ್ಥಿತಿ ಬಂದೊದಗಿದೆ. ಹಾಗಾಗಿ ನಂದಿನಿ ಉತ್ಪನ್ನವನ್ನ ಉಳಿಸಿಕೊಳ್ಳಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕರೆ ನೀಡಿದ್ದಾರೆ.

    ಹಾಸನದ (Hassan) ಹೇಮಾವತಿ ಪ್ರತಿಮೆ ಬಳಿಯ ನಂದಿನಿ ಹಾಲಿನ ಕೇಂದ್ರದಲ್ಲಿಂದು ಸುಮಾರು ಎರಡೂವರೆ ಸಾವಿರ ರೂ. ಮೌಲ್ಯದ ನಂದಿನಿ ಉತ್ಪನ್ನಗಳನ್ನ ಖರೀದಿಸಿದರು. ಹಾಲು, ತುಪ್ಪ, ಮಜ್ಜಿಗೆ, ಮೈಸೂರು ಪಾಕ್ ಸೇರಿ ಹತ್ತಾರು ಉತ್ಪನ್ನ ಖರೀದಿ ಮಾಡಿ ಬೆಂಬಲಿಗರು ಹಾಗೂ ಕಾರ್ಯಕರ್ತರಿಗೆ ಹಂಚಿದರು. ಈ ಮೂಲಕ ಅಮುಲ್ ಉತ್ಪನ್ನಕ್ಕೆ ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ದೇವೇಗೌಡರ ಕುಟುಂಬದವ್ರನ್ನ ಪ್ರಶ್ನೆ ಮಾಡಿದ್ರೆ ಯಾರೂ ಉಳಿಯಲ್ಲ – ಸಿದ್ದರಾಮಯ್ಯ 

    ಈ ವೇಳೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ರೈತರ ಬದುಕಿನ ಪ್ರಶ್ನೆ ಇದು. ಸುಮಾರು 70 ಲಕ್ಷ ರೈತರು ಹಾಲು ಉತ್ಪಾದನೆ ಮಾಡಿ ನಂದಿನಿಗೆ ಹಾಕುತ್ತಿದ್ದೇವೆ. ಅಮೂಲ್ ಗುಜರಾತ್ ರೈತರದ್ದು, ನಮ್ಮದೇನು ತಕರಾರಿಲ್ಲ. ಆದರೆ ನಮ್ಮ ಉತ್ಪನ್ನವನ್ನ ಹಿಂದಕ್ಕೆ ತಳ್ಳಿ, ಅಮುಲ್ ಮುಂದೆ ತರುವ ಸರ್ಕಾರದ ನಿರ್ಧಾರ ಸರಿಯಲ್ಲ. ಈ ನಂದಿನಿ ನಮ್ಮವಳು, ನಮ್ಮ ಹಾಲು ನಮ್ಮ ಬದುಕು. ಅದಕ್ಕಾಗಿ ನಾವೇ ಪ್ರೋತ್ಸಾಹ ಕೊಟ್ಟು ಹಾಲು ಉತ್ಪಾದನೆ ಮಾಡಲು ಹೊರಟಿದ್ದು, ನಂದಿನಿ ಹಾಲು, ಹಾಲಿನ ಉತ್ಪನ್ನಗಳು ಪೇಡ, ಬಿಸ್ಕೆಟ್, ಚಾಕ್‌ಲೇಟ್ ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಮುಲ್‍ಗೆ ವಿರೋಧ – ನಂದಿನಿ ಉತ್ಪನ್ನ ಖರೀದಿಸಿ ಹಂಚಿದ ಡಿಕೆಶಿ

     

    ಪುನೀತ್‌ಗೆ ಮುತ್ತುಕೊಟ್ಟಿದ್ದು ನಾಟಕನಾ?
    ದಿವಂಗತ ಡಾ. ಪುನೀತ್ ರಾಜ್‌ಕುಮಾರ್ ಅವರು ನಂದಿನಿ ಹಾಲಿನ ಉತ್ಪನ್ನಕ್ಕೆ ಬ್ರ್ಯಾಂಡ್‌ ಅಂಬಾಸಿಡರ್ ಆಗಿದ್ದರು. ರೈತರು, ರೈತ ಮಹಿಳೆಯರು ಬದುಕಬೇಕು ಅಂತಾ ದೊಡ್ಡ ನಟರು ರಾಯಭಾರಿಯಾಗಿ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿಗಳೇ ನೀವೂ ಅವರ ಬಗ್ಗೆ ಗೌರವದ ಮಾತುಗಳನ್ನಾಡಿದ್ದೀರಿ. ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಅವರನ್ನ ನೆನಪಿಸಿಕೊಳ್ಳುತ್ತಿದ್ದೀರಿ. ಪುನೀತ್ ರಾಜ್‌ಕುಮಾರ್‌ಗೆ ಮುತ್ತು ಕೊಟ್ರಿ ಇದು ಸುಳ್ಳು, ನಾಟಕನಾ? ಎಂದು ಪ್ರಶ್ನಿಸಿದ್ದಾರೆ.

  • ಅಮುಲ್‍ಗೆ ವಿರೋಧ – ನಂದಿನಿ ಉತ್ಪನ್ನ ಖರೀದಿಸಿ ಹಂಚಿದ ಡಿಕೆಶಿ

    ಅಮುಲ್‍ಗೆ ವಿರೋಧ – ನಂದಿನಿ ಉತ್ಪನ್ನ ಖರೀದಿಸಿ ಹಂಚಿದ ಡಿಕೆಶಿ

    ಹಾಸನ: ನಂದಿನಿ ಉತ್ಪನ್ನಗಳನ್ನು (Nandini milk products) ಖರೀದಿಸಿ ಹಂಚುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ರಾಜ್ಯದಲ್ಲಿ ಲಗ್ಗೆ ಇಡುತ್ತಿರುವ ಅಮುಲ್ (Amul) ಉತ್ಪನ್ನಗಳಿಗೆ ವಿಭಿನ್ನವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

    ಹಾಸನದ (Hassan) ಹೇಮಾವತಿ ಪ್ರತಿಮೆ ಬಳಿಯ ನಂದಿನಿ ಹಾಲಿನ ಕೇಂದ್ರದಲ್ಲಿ ಸುಮಾರು ಎರಡೂವರೆ ಸಾವಿರ ರೂ. ಮೌಲ್ಯದ ಉತ್ಪನ್ನಗಳನ್ನು ಖರೀದಿಸಿದ್ದಾರೆ. ಹಾಲು, ತುಪ್ಪ, ಮಜ್ಜಿಗೆ, ಮೈಸೂರ್ ಪಾಕ್ ಸೇರಿ ಹತ್ತಾರು ಉತ್ಪನ್ನ ಖರೀದಿ ಮಾಡಿ ಬೆಂಬಲಿಗರು ಹಾಗೂ ಕಾರ್ಯಕರ್ತರಿಗೆ ಹಂಚಿದ್ದಾರೆ. ನಂದಿನಿ ಕೇಂದ್ರದಲ್ಲೇ ಫ್ಲೇವರ್ಡ್ ಮಿಲ್ಕ್ ಕುಡಿದಿದ್ದಾರೆ. ಇದನ್ನೂ ಓದಿ: 20ಕ್ಕೂ ಹೆಚ್ಚು ಬಿಜೆಪಿ ಶಾಸಕರಿಗೆ ಕೊಕ್‌ – ಲಿಸ್ಟ್‌ನಲ್ಲಿ ಯಾರಿದ್ದಾರೆ?

    ರಾಜ್ಯದಲ್ಲಿ ಅಮುಲ್ ಉತ್ಪನ್ನ ಮಾರಾಟಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ವಿಭಿನ್ನ ಹಾದಿಯಲ್ಲಿ ವಿರೋಧ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ: ರಾಹುಲ್‌ ವಿರುದ್ಧ ಮಾನಹಾನಿ ಕೇಸ್‌ ದಾಖಲಿಸುತ್ತೇನೆ: ಅಸ್ಸಾಂ ಸಿಎಂ

  • ಸಾಮಾಜಿಕ ಜಾಲತಾಣದಲ್ಲಿ ನಂದಿನಿ ಬ್ರ್ಯಾಂಡ್ ಬಗ್ಗೆ‌ ಹರಿದಾಡುತ್ತಿರುವ ಸುದ್ದಿ ಸುಳ್ಳು: KMF ಸ್ಪಷ್ಟನೆ

    ಸಾಮಾಜಿಕ ಜಾಲತಾಣದಲ್ಲಿ ನಂದಿನಿ ಬ್ರ್ಯಾಂಡ್ ಬಗ್ಗೆ‌ ಹರಿದಾಡುತ್ತಿರುವ ಸುದ್ದಿ ಸುಳ್ಳು: KMF ಸ್ಪಷ್ಟನೆ

    ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಂದಿನಿ (Nandini Milk) ಬ್ರ್ಯಾಂಡ್‌ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳ ಕುರಿತು ಕೆಎಂಎಫ್‌ ಸ್ಪಷ್ಟನೆ ಕೊಟ್ಟಿದೆ. ಸೋಷಿಯಲ್‌ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ ಎಂದು ಕೆಎಂಎಫ್‌ (KMF) ತಿಳಿಸಿದೆ.

    ನಂದಿನಿ ಬ್ರ್ಯಾಂಡ್‌ ಹಾಲು ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯವಾಗುವುದಿಲ್ಲ ಅನ್ನೋ ಬಗ್ಗೆ ಸಾಕಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿದೆ. ಇದೆಲ್ಲವೂ ಸತ್ಯಕ್ಕೆ ದೂರವಾಗಿದ್ದು, ಅಂತಹ ಯಾವುದೇ ಬೆಳವಣಿಗೆಗಳು ಕೆಎಂಎಫ್‌ನಲ್ಲಿ ನಡೆದಿರುವುದಿಲ್ಲವೆಂದು ತಿಳಿಸಲು ಬಯಸುತ್ತೇವೆ. ಯಾವುದೇ ಸಹಕಾರ ಸಂಸ್ಥೆ ಅಥವಾ ಉತ್ಪಾದನಾ ಮಹಾಮಂಡಳಗಳೊಂದಿಗೆ ನಾವು ಒಡಂಬಡಿಕೆ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಅಮುಲ್ ದೇಶದ ಬ್ರ್ಯಾಂಡ್‌, ಭಾರತದಲ್ಲೇ ಮಾರಾಟ ಮಾಡಿದ್ರೆ ಏನು ತೊಂದ್ರೆ – ಸಿ.ಟಿ ರವಿ ಪ್ರಶ್ನೆ

    ದೇಶದ ಅನೇಕ ನಗರಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಲಭ್ಯವಾಗುತ್ತಿವೆ. ನಂದಿನಿ ಹಾಲು ಇತರೆ ಹಾಲಿನ ಬ್ರ್ಯಾಂಡ್‌ಗಳಿಗೆ ಪೈಪೋಟಿ ನೀಡುತ್ತಾ ಮಾರುಕಟ್ಟೆಯನ್ನು ವಿಸ್ತರಿಸುತ್ತಿದೆ. ಗ್ರಾಹಕರು ಎಂದಿನಂತೆ “ನಂದಿನಿ” ಬ್ರ್ಯಾಂಡ್‌ನ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಕೊಂಡು ಪ್ರೋತ್ಸಾಹಿಸಲು ನಾವು ಮನವಿ ಮಾಡುತ್ತೇವೆ ಎಂದು ಹೇಳಿದೆ.

    ಇಂತಹ ಸಂಸ್ಥೆಯ ಬಗ್ಗೆ ಸದ್ಯ ಹರಿದಾಡುತ್ತಿರೋ ಸುದ್ದಿಗಳು ಸುಳ್ಳಾಗಿದ್ದು, ಗ್ರಾಹಕರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತವು ತನ್ನ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: KMFಗೆ ಬೊಮ್ಮಣ್ಣ ಕೈ ಹಾಕಿದ್ರೆ ರಕ್ತ ಕ್ರಾಂತಿಯಾಗುತ್ತೆ: ಸಿಎಂ ಇಬ್ರಾಹಿಂ ಎಚ್ಚರಿಕೆ

  • ಅಮುಲ್ ದೇಶದ ಬ್ರ್ಯಾಂಡ್‌, ಭಾರತದಲ್ಲೇ ಮಾರಾಟ ಮಾಡಿದ್ರೆ ಏನು ತೊಂದ್ರೆ – ಸಿ.ಟಿ ರವಿ ಪ್ರಶ್ನೆ

    ಅಮುಲ್ ದೇಶದ ಬ್ರ್ಯಾಂಡ್‌, ಭಾರತದಲ್ಲೇ ಮಾರಾಟ ಮಾಡಿದ್ರೆ ಏನು ತೊಂದ್ರೆ – ಸಿ.ಟಿ ರವಿ ಪ್ರಶ್ನೆ

    ಬೆಂಗಳೂರು: ಕಾಂಗ್ರೆಸ್ (Congress) ಪಕ್ಷದಲ್ಲಿ ಇಟಲಿಯವರ ಆಡಳಿತಕ್ಕೆ, ಗುಲಾಮಗಿರಿಗೆ ಯಾವುದೇ ಆಕ್ಷೇಪ ಇಲ್ಲ. ಆದ್ರೆ ಅಮುಲ್ ಭಾರತದ ಬ್ರ್ಯಾಂಡ್‌, ಭಾರತದಲ್ಲೇ ಮಾರಾಟ ಮಾಡಿದ್ರೆ ಇವರಿಗೇನು ತೊಂದರೆ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಕಿಡಿ ಕಾರಿದ್ದಾರೆ.

    ನಂದಿನಿ-ಅಮುಲ್ (Nandini-Amul) ಜಟಾಪಟಿ ವಿಚಾರದಲ್ಲಿ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಇಟಲಿಯವರ ಆಡಳಿತಕ್ಕೆ, ಗುಲಾಮಗಿರಿಗೆ ಯಾವುದೇ ಆಕ್ಷೇಪ ಇಲ್ಲ. ಅಮುಲ್ ಭಾರತದ ಬ್ರ್ಯಾಂಡ್, ಇಲ್ಲೇ ಮಾರಾಟ ಮಾಡಿದ್ರೆ ಇವರಿಗೇನು ತೊಂದರೆ. ಇದೆಂಥ ಸೋತವರ ಗುಂಪು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಅಲ್ಲದೇ ಟ್ವೀಟ್ ಮೂಲಕವೂ ಆಕ್ಷೇಪ ವ್ಯಕ್ತಪಡಿಸಿರುವ ಸಿ.ಟಿ ರವಿ, ಕಾಂಗ್ರೆಸ್ ನಮ್ಮ ತಾಯಂದಿರು ಹಾಗೂ ಅಕ್ಕಂದಿರನ್ನು ಕೇವಲ ಸಗಣಿ ಬಾಚಲು ಬಿಟ್ಟಿತ್ತು. ಆದರೆ ನಮ್ಮ ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಸಬ್ಸಿಡಿ ಕೊಟ್ಟು ಗ್ರಾಮೀಣ ಕುಟುಂಬಗಳ ಬದುಕನ್ನು ಸಮೃದ್ಧಿಗೊಳಿಸಿತು. ನಂದಿನಿ ಈಗಾಗಲೇ 12 ರಾಜ್ಯಗಳಲ್ಲಿ ವಹಿವಾಟು ನಡೆಸುತ್ತಿದ್ದು, ಇನ್ನೂ ಹೆಚ್ಚು ರಾಜ್ಯಗಳಲ್ಲಿ ಉತ್ಪನ್ನಗಳನ್ನ ಮಾರಾಟ ಮಾಡಲಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

    ಏನಿದು ವಿವಾದ?
    ಅಮುಲ್ ಕುಟುಂಬ ಬೆಂಗಳೂರು (Bengaluru) ನಗರಕ್ಕೆ ಹಾಲು ಮತ್ತು ಮೊಸರಿನ ರೂಪದಲ್ಲಿ ಹೊಸ ತಾಜಾತನವನ್ನು ತರುತ್ತಿದೆ. ಕ್ವಿಕ್ ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಶೀಘ್ರದಲ್ಲೇ ಲಭ್ಯವಾಗಲಿದ್ದು, ಅವುಗಳನ್ನು ನಿಮ್ಮ ಮನೆ ಬಾಗಿಲಿಗೆ ಆರ್ಡರ್ ಮಾಡಬಹುದು ಎಂದು ಅಮುಲ್ ಕನ್ನಡ ಏಪ್ರಿಲ್ 5 ರಂದು ಟ್ವೀಟ್ ಮಾಡಿತ್ತು. ಈ ಟ್ವೀಟ್ ಮಾಡಿದ ಬೆನ್ನಲ್ಲೇ ಕನ್ನಡಿಗರು, ರಾಜಕೀಯ ನಾಯಕರು ಅಮುಲ್ ಮತ್ತು ಬಿಜೆಪಿ ವಿರುದ್ಧ ಟೀಕೆ ಮಾಡಲು ಆರಂಭಿಸಿದ್ದಾರೆ.

    ಅಮುಲ್ ಪರ ವಾದವೇನು?
    ನಂದಿನಿ ಕೇವಲ ಕರ್ನಾಟಕದಲ್ಲಿ ಮಾತ್ರ ಹಾಲನ್ನು ಮಾರಾಟ ಮಾಡುತ್ತಿಲ್ಲ. ಉಳಿದ ರಾಜ್ಯಗಳಲ್ಲೂ ಹಾಲನ್ನು ಮಾರಾಟ ಮಾಡುತ್ತಿದೆ. ಹೀಗಿರುವಾಗ ಅಮುಲ್ ಬೇಡ ಎಂದು ಹೇಳಲು ಒಕ್ಕೂಟ ವ್ಯವಸ್ಥೆಯಲ್ಲಿ ಯಾವ ಅಧಿಕಾರವಿದೆ. ಯಾವುದು ಬೇಕೋ ಅದನ್ನು ಗ್ರಾಹಕ ಖರೀದಿಸುತ್ತಾನೆ.

  • ಬೇರೆ ರಾಜ್ಯಗಳಲ್ಲಿ ನಂದಿನಿ ಮಾರಾಟ ನಾವೂ ಮಾಡಿದ್ದೇವೆ; ಇದ್ರಲ್ಲಿ ರಾಜಕಾರಣ ಸಲ್ಲದು: ಬೊಮ್ಮಾಯಿ

    ಬೇರೆ ರಾಜ್ಯಗಳಲ್ಲಿ ನಂದಿನಿ ಮಾರಾಟ ನಾವೂ ಮಾಡಿದ್ದೇವೆ; ಇದ್ರಲ್ಲಿ ರಾಜಕಾರಣ ಸಲ್ಲದು: ಬೊಮ್ಮಾಯಿ

    ನವದೆಹಲಿ: ನಂದಿನಿ (Nandini) ನಂಬರ್ ಒನ್ ಬ್ರ‍್ಯಾಂಡ್ ಆಗಲಿದ್ದು, ಅಮುಲ್ (Amul) ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ಬೇರೆ ರಾಜ್ಯಗಳಲ್ಲಿ ನಂದಿನಿ ಮಾರಾಟವನ್ನು ನಾವು ಕೂಡಾ ಮಾಡಿದ್ದೇವೆ. ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಅಮುಲ್ ಹಿಮ್ಮೆಟ್ಟಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

    ಅಭ್ಯರ್ಥಿಗಳ ಬಗ್ಗೆ ಚರ್ಚೆ: ಶನಿವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಎಲ್ಲಾ ಅಭ್ಯರ್ಥಿಗಳ ವಿಚಾರ ಚರ್ಚೆ ಮಾಡಲಾಗುವುದು. ಭಾನುವಾರ ಸಂಜೆ 5 ಗಂಟೆಗೆ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಎಲ್ಲಾ 224 ಕ್ಷೇತ್ರಗಳ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದರು.

    ಸಭೆಯಲ್ಲಿ ನಿರ್ಧಾರ: ಕೆಲ ಎಂಎಲ್‌ಸಿ ಮತ್ತು ಸಂಸದರು ಟಿಕೆಟ್ ಆಕಾಂಕ್ಷಿಗಳಾಗಿದ್ದು, ಈ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಚರ್ಚೆಯ ಬಳಿಕ ಎಷ್ಟು ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ನಿರ್ಧಾರವಾಗಲಿದೆ ಎಂದು ತಿಳಿಸಿದರು.

    ನಮ್ಮ ಶಕ್ತಿ ಮೇಲೆ ನಂಬಿಕೆ ಇದೆ: ಕಾಂಗ್ರೆಸ್‌ನಲ್ಲಿ ಟಿಕೆಟ್ ಹಂಚಿಕೆಯ ಗೊಂದಲದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಶಕ್ತಿ ಮೇಲೆ ನಮಗೆ ನಂಬಿಕೆ ಇದೆ. ಸಹಜವಾಗಿಯೇ ಅದರ ಲಾಭ ಆಗಲಿದೆ ಎಂದರು. ಇದನ್ನೂ ಓದಿ: ನನ್ನ ಮಗನನ್ನು ನಿಮಗೆ ಬಿಟ್ಟಿದ್ದೇನೆ- ಕಾಂತಾದೇವಿ ಛೋಪ್ರಾ ಕಣ್ಣೀರು

    ಕಾಂಗ್ರೆಸ್‌ಗೆ ನಡುಕ ಹುಟ್ಟಿದೆ: ನಟ ಸುದೀಪ್ ಬಿಜೆಪಿ ಬೆಂಬಲ ನೀಡುವ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಈ ಹಿಂದೆ ನಟರನ್ನು ಕರೆತಂದು ಚುನಾವಣಾ ಪ್ರಚಾರ ಮಾಡಿದ್ದಾರೆ. ಅಂಬರೀಶ್ ಪ್ರಚಾರ ಮಾಡಲಿಲ್ಲವೇ? ಶಾಸಕರಾಗಿರಲಿಲ್ಲವೇ? ಎಂದು ಪ್ರಶ್ನಿಸಿದರು. ಬಿಜೆಪಿಗೆ ಬೆಂಬಲ ನೀಡುವ ಮುಂಚೆ ಅದರಿಂದಾಗುವ ಎಲ್ಲಾ ಪರಿಣಾಮದ ಬಗ್ಗೆ ಮಾಹಿತಿ ಇದೆ. ಸುದೀಪ್ ಅವರು ನಮಗೆ ಬೆಂಬಲ ನೀಡಿರುವುದರಿಂದ ಸಹಜವಾಗಿ ಕಾಂಗ್ರೆಸ್‌ಗೆ ನಡುಕ ಹುಟ್ಟಿದೆ ಎಂದು ಟಾಂಗ್ ನೀಡಿದರು.

    ಹಾಲಿ ಶಾಸಕರಿಗೆ ಟಿಕೆಟ್: ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿ, ಆ ತರಹದ ಲೆಕ್ಕಾಚಾರ ಚರ್ಚೆಯಲ್ಲಿ ಮಾಡಿದಾಗಲೇ ತಿಳಿಯುವುದು ಎಂದು ಹೇಳಿದರು. ಇದನ್ನೂ ಓದಿ: ಹಾಲಾಡಿ ಶ್ರೀನಿವಾಸ ಶೆಟ್ಟಿ ಒಂದು ಸಾವಿರ ಅಂತರದಿಂದ ಕೊನೆಗೆ ಲಕ್ಷ ಮತ ಪಡೆದ ರೋಚಕ ಕಥೆ!