Tag: Anagha

  • ರಾಜ್ಯಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್‍ನಲ್ಲಿ ಅನಘಾಗೆ 2 ಚಿನ್ನ 1 ಬೆಳ್ಳಿ ಪದಕ

    ರಾಜ್ಯಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್‍ನಲ್ಲಿ ಅನಘಾಗೆ 2 ಚಿನ್ನ 1 ಬೆಳ್ಳಿ ಪದಕ

    – ರಾಷ್ಟ್ರ ಮಟ್ಟಕ್ಕೆ ಆಯ್ಕೆ

    ಮಂಗಳೂರು: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ 36ನೇ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಅನಘಾ ಎರಡು ಚಿನ್ನದ ಪದಕ ಹಾಗೂ ಒಂದು ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ.

    ಮೈಸೂರಿನ ರಾವ್ಸ್ ಸ್ಕೇಟಿಂಗ್ ರಿಂಕ್ ನಲ್ಲಿ ಮಾರ್ಚ್ 4 ರಿಂದ 7 ರವರೆಗೆ ನಡೆದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನ 9 ರಿಂದ 11 ವರ್ಷದ ಬಾಲಕಿಯರ ವಿಭಾಗದಲ್ಲಿ 1 ಲ್ಯಾಪ್ ರೋಡ್ ರೇಸ್ ಹಾಗೂ 1,000 ಮೀಟರ್ ರಿಂಕ್ ರೇಸ್ ನಲ್ಲಿ ತಲಾ ಎರಡು ಚಿನ್ನದ ಪದಕ ಹಾಗೂ 500 ಮೀಟರ್ ರಿಂಕ್ ರೇಸ್ ನಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಸ್ಕೇಟಿಂಗ್ ಗೋಲ್ಡ್ ಮೆಡಲಿಸ್ಟ್ ಅನಘಾ ಮಂಗ್ಳೂರಿಗೆ- ವಿಮಾನ ನಿಲ್ದಾಣದಲ್ಲಿ ಸ್ವಾಗತ

    ಪಂಜಾಬ್ ನ ಮೊಹಾಲಿಯಲ್ಲಿ ಎಪ್ರಿಲ್ 1 ರಿಂದ 4 ರವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಅನಘಾ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಮಂಗಳೂರಿನ ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ಅವರ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 5 ನೇ ತರಗತಿ ವಿದ್ಯಾರ್ಥಿನಿ. ಇದನ್ನೂ ಓದಿ: ಸ್ಕೇಟಿಂಗ್ ಚಾಂಪಿಯನ್ ಅನಘಾಗೆ ವೀರೇಂದ್ರ ಹೆಗ್ಗಡೆಯವರಿಂದ ಚಿನ್ನದ ಪದಕ

    ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯೆಯಾಗಿರುವ ಅನಘಾ ತರಬೇತುದಾರ ಮೋಹನ್ ದಾಸ್.ಕೆ ಹಾಗೂ ಜಯರಾಜ್ ಅವರಿಂದ ತರಬೇತಿ ಪಡೆಯುತ್ತಿದ್ದು, ಬೆಂಗಳೂರಿನ ತರಬೇತುದಾರರಾದ ಏಕಲವ್ಯ ಪ್ರಶಸ್ತಿ ವಿಜೇತ ಪ್ರತೀಕ್ ರಾಜ ಅವರಿಂದ ಹೆಚ್ಚಿನ ತರಬೇತಿ ಪಡೆಯುತ್ತಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅನಘಾ ಇನ್ನಷ್ಟು ಸಾಧನೆ ಮಾಡಲಿ ಅನ್ನೋದು ನಮ್ಮ ಹಾರೈಕೆ.

  • ಸ್ಕೇಟಿಂಗ್ ಚಾಂಪಿಯನ್ ಅನಘಾಗೆ ವೀರೇಂದ್ರ ಹೆಗ್ಗಡೆಯವರಿಂದ ಚಿನ್ನದ ಪದಕ

    ಸ್ಕೇಟಿಂಗ್ ಚಾಂಪಿಯನ್ ಅನಘಾಗೆ ವೀರೇಂದ್ರ ಹೆಗ್ಗಡೆಯವರಿಂದ ಚಿನ್ನದ ಪದಕ

    ಮಂಗಳೂರು: ಅಂತರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್, ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಮಂಗಳೂರಿನ ಕುಮಾರಿ ಅನಘಾ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಚಿನ್ನದ ಪದಕ ನೀಡಿ ಅಭಿನಂದಿಸಿದರು.

    ಐಸ್ ಸ್ಕೇಟಿಂಗ್ ಅನ್ನುವ ಅಪರೂಪದ ಹಾಗೂ ಕಷ್ಟಕರವಾದ ಕ್ರೀಡೆಯಲ್ಲಿ ಅತೀ ಕಿರಿಯ ವಯಸ್ಸಿನಲ್ಲೇ ಅಂತರಾಷ್ಟ್ರೀಯ ಮಟ್ಟದಲ್ಲಿ ಎರಡು ಚಿನ್ನದ ಪದಕ ಪಡೆದು ನಮ್ಮ ಜಿಲ್ಲೆಯ ಕೀರ್ತಿ ಪತಾಕೆಯನ್ನು ಹಾರಿಸಿದ ಅನಘಾ ಇನ್ನಷ್ಟು ಸಾಧನೆ ಮಾಡುವಂತೆ ಮಂಜುನಾಥ ಸ್ವಾಮಿ ಹರಸಲಿ ಎಂದು ಅವರು ಆಶೀರ್ವಾದಿಸಿದರು. ಈ ಸಂದರ್ಭದಲ್ಲಿ ಮಾತೃಶ್ರೀ ಹೇಮಾವತಿ ಹೆಗ್ಗಡೆ, ಅನಘಾ ರ ತಂದೆ ಡಾ.ರಾಜೇಶ್ ಹುಕ್ಕೇರಿ, ತಾಯಿ ಡಾ.ಅನಿತಾ ರಾಜೇಶ್, ಅಜ್ಜಿ ಮೀನಾಕ್ಷಿ ಆರ್ ಪುತ್ರನ್ ಜೊತೆಗಿದ್ದರು.

    ಅನಘಾ ಕಳೆದ 2020 ಜನವರಿ 4 ಹಾಗೂ 5 ರಂದು ಸಿಂಗಾಪುರದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್ ನಲ್ಲಿ ಎರಡು ಚಿನ್ನದ ಪದಕ ಪಡೆದು ಅತೀ ಕಿರಿಯ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಚಿನ್ನದ ಪದಕ ಪಡೆದ ದೇಶದ ಮೊದಲ ಸ್ಕೇಟರ್ ಅನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅನಘಾ ಈವರೆಗೆ ಜಿಲ್ಲಾ, ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಒಟ್ಟು 23 ಚಿನ್ನದ ಪದಕ, 9 ಬೆಳ್ಳಿ ಹಾಗೂ 6 ಕಂಚಿನ ಪದಕ ಪಡೆದಿದ್ದಾರೆ.

    ಮಂಗಳೂರಿನ ಅನಘಾ ಡೆಂಟಲ್ ಸ್ಪೆಷಾಲಿಟಿ ಕ್ಲಿನಿಕ್ ನ ವೈದ್ಯರಾದ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ, ಬಿಜೈ ಲೂಡ್ರ್ಸ್ ಸೆಂಟ್ರಲ್ ಸ್ಕೂಲ್ ನ ನಾಲ್ಕನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅನಘಾ ಅವರ ಕ್ರೀಡಾ ಸಾಧನೆಯನ್ನು ಪರಿಗಣಿಸಿ ಜನವರಿ 26 ರಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ದೆಹಲಿಯಲ್ಲಿ ಐಸ್ ಸ್ಕೇಟಿಂಗ್‍ನ ಭಾರತ ತಂಡದ ಕೋಚ್ ಅವಧೂತ್ ಥಾವಡೇ ಅವರಿಂದ ಐಸ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿರುವ ಅನಘಾ, ಮಂಗಳೂರಿನಲ್ಲಿ ಮೋಹನ್ ದಾಸ್.ಕೆ ಹಾಗೂ ಜಯರಾಜ್ ಕುಕ್ಯಾನ್ ಅವರಿಂದ ರೋಲರ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿದ್ದಾರೆ.

  • ಸ್ಕೇಟಿಂಗ್‍ನಲ್ಲಿ ಅಂತಾರಾಷ್ಟ್ರೀಯ ಚಿನ್ನದ ಪದಕ ಪಡೆದ ಅನಘಾಗೆ ಸಿಎಂ ಅಭಿನಂದನೆ

    ಸ್ಕೇಟಿಂಗ್‍ನಲ್ಲಿ ಅಂತಾರಾಷ್ಟ್ರೀಯ ಚಿನ್ನದ ಪದಕ ಪಡೆದ ಅನಘಾಗೆ ಸಿಎಂ ಅಭಿನಂದನೆ

    ಮಂಗಳೂರು: ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ಅಂತಾರಾಷ್ಟ್ರೀಯ ಐಸ್ ಸ್ಕೇಟಿಂಗ್ ನಲ್ಲಿ ಎರಡು ಚಿನ್ನದ ಪದಕ ಪಡೆದ ಮಂಗಳೂರಿನ ಕುಮಾರಿ ಅನಘಾ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬೆಂಗಳೂರಿನ ಅವರ ಸ್ವಗೃಹ ಧವಳಗಿರಿಯಲ್ಲಿ ಅಭಿನಂದಿಸಿದರು.

    ಕಿರಿಯ ಪ್ರಾಯದಲ್ಲೇ ಐಸ್ ಸ್ಕೇಟಿಂಗ್ ಅನ್ನುವ ಕಷ್ಟಕರ ಕ್ರೀಡೆಯಲ್ಲಿ ಸಾಧನೆ ಮಾಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಪಡೆದಿರೋದು ಈ ರಾಜ್ಯಕ್ಕೆ ಹೆಮ್ಮೆಯ ವಿಚಾರ, ಮುಂದಿನ ದಿನದಲ್ಲೂ ಈ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯ ಹಾಗೂ ದೇಶಕ್ಕೆ ಹೆಸರು ತರುವಂತೆ ಅವರು ಆಶಿಸಿದರು.

    ಅನಘಾ ಕಳೆದ 2020 ಜನವರಿ 4 ಹಾಗೂ 5 ರಂದು ಸಿಂಗಾಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್ ನಲ್ಲಿ ಎರಡು ಚಿನ್ನದ ಪದಕ ಪಡೆದು ಅತೀ ಕಿರಿಯ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಚಿನ್ನದ ಪದಕ ಪಡೆದ ದೇಶದ ಮೊದಲ ಸ್ಕೇಟರ್ ಅನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅನಘಾ ಈವರೆಗೆ ಜಿಲ್ಲಾ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಒಟ್ಟು 22 ಚಿನ್ನದ ಪದಕ, 9 ಬೆಳ್ಳಿ ಹಾಗೂ 6 ಕಂಚಿನ ಪದಕ ಪಡೆದಿದ್ದಾರೆ.

    ಮಂಗಳೂರಿನ ಕದ್ರಿ ಹಿಲ್ಸ್ ನಿವಾಸಿ, ಅನಘಾ ಡೆಂಟಲ್ ಸ್ಪೆಷಾಲಿಟಿ ಕ್ಲಿನಿಕ್‍ನ ವೈದ್ಯರಾದ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಲೂಡ್ರ್ಸ್ ಸೆಂಟ್ರಲ್ ಸ್ಕೂಲ್‍ನ ನಾಲ್ಕನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅನಘಾ ಅವರ ಕ್ರೀಡಾ ಸಾಧನೆಯನ್ನು ಪರಿಗಣಿಸಿ ಜನವರಿ 26 ರಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

    ದೆಹಲಿಯಲ್ಲಿ ಐಸ್ ಸ್ಕೇಟಿಂಗ್ ನ ಭಾರತ ತಂಡದ ಕೋಚ್ ಅವಧೂತ್ ಥಾವಡೇ ಅವರಿಂದ ಐಸ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿರುವ ಅನಘಾ, ಮಂಗಳೂರಿನಲ್ಲಿ ತರಬೇತುದಾರರಾದ ಮೋಹನ್ ದಾಸ್.ಕೆ ಹಾಗೂ ಜಯರಾಜ್ ಕುಕ್ಯಾನ್ ಅವರಿಂದ ರೋಲರ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿದ್ದಾರೆ.

  • ಸ್ಕೇಟಿಂಗ್ ಚಾಂಪಿಯನ್ ಅನಘಾಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

    ಸ್ಕೇಟಿಂಗ್ ಚಾಂಪಿಯನ್ ಅನಘಾಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

    ಮಂಗಳೂರು: ಸ್ಕೇಟಿಂಗ್ ಪಟು ಅನಾಘಾಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಧಾನ ಮಾಡಲಾಯಿತು.

    ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ, ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಅತಿಥಿಗಳು ಪ್ರಶಸ್ತಿ ನೀಡಿ ಗೌರವಿಸಿದರು.

    ಮಂಗಳೂರಿನ ಕದ್ರಿ ಹಿಲ್ಸ್ ನಿವಾಸಿ ಸ್ಕೇಟಿಂಗ್ ಪಟು ಅನಘಾ,ತನ್ನ ನಾಲ್ಕನೇ ವಯಸ್ಸಿನಲ್ಲಿ ಸ್ಕೇಟಿಂಗ್ ಕ್ರೀಡೆಯನ್ನು ಆರಂಭಿಸಿದ್ದು ಪ್ರಸ್ತುತ 9 ವರ್ಷ ವಯಸ್ಸಿನಲ್ಲಿ, ಕಳೆದ 2020 ಜನವರಿ 4 ಹಾಗೂ 5 ರಂದು ಸಿಂಗಾಪುರದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್ ನಲ್ಲಿ ಎರಡು ಚಿನ್ನದ ಪದಕ ಪಡೆದು ಅತೀ ಕಿರಿಯ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಚಿನ್ನದ ಪದಕ ಪಡೆದ ದೇಶದ ಮೊದಲ ಸ್ಕೇಟರ್ ಅನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಅನಘಾ ಈವರೆಗೆ ಜಿಲ್ಲಾ, ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಒಟ್ಟು 22 ಚಿನ್ನದ ಪದಕ, 9 ಬೆಳ್ಳಿ ಹಾಗೂ 6 ಕಂಚಿನ ಪದಕ ಪಡೆದಿದ್ದಾರೆ. ಮಂಗಳೂರಿನ ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಲೂಡ್ರ್ಸ್ ಸೆಂಟ್ರಲ್ ಸ್ಕೂಲ್ ನ ನಾಲ್ಕನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

    ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಯು.ಟಿ.ಖಾದರ್, ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ, ಭೋಜೆಗೌಡ, ಜಿ.ಪಂ.ಅಧ್ಯಕ್ಷೆ ಕಸ್ತೂರಿ ಪಂಜ, ತಾ.ಪಂ.ಅಧ್ಯಕ್ಷ ಮೋನು, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಉಪಸ್ಥಿತರಿದ್ದರು.

  • ಸ್ಕೇಟಿಂಗ್ ಚಾಂಪಿಯನ್ ಅನಘಾಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

    ಸ್ಕೇಟಿಂಗ್ ಚಾಂಪಿಯನ್ ಅನಘಾಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಕ್ರೀಡಾ ವಿಭಾಗದಿಂದ ಮಂಗಳೂರಿನ ಸ್ಕೇಟಿಂಗ್ ಪಟು ಅನಘಾ ಆಯ್ಕೆಯಾಗಿದ್ದಾರೆ.

    ತನ್ನ ನಾಲ್ಕನೇ ವಯಸ್ಸಿನಲ್ಲಿ ಸ್ಕೇಟಿಂಗ್ ಕ್ರೀಡೆಯನ್ನು ಆರಂಭಿಸಿದ 9 ವರ್ಷ ವಯಸ್ಸಿನ ಅನಘಾ ಕಳೆದ 2020 ಜನವರಿ 4 ಹಾಗೂ 5 ರಂದು ಸಿಂಗಾಪುರದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್ ನಲ್ಲಿ ಎರಡು ಚಿನ್ನದ ಪದಕ ಪಡೆದು ಅತೀ ಕಿರಿಯ ವಯಸ್ಸಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಚಿನ್ನದ ಪದಕ ಪಡೆದ ದೇಶದ ಮೊದಲ ಸ್ಕೇಟರ್ ಅನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಅನಘಾ ಜಿಲ್ಲಾ, ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಈವರೆಗೆ ಒಟ್ಟು 22 ಚಿನ್ನದ ಪದಕ, 9 ಬೆಳ್ಳಿ ಹಾಗೂ 6 ಕಂಚಿನ ಪದಕ ಪಡೆದಿದ್ದಾರೆ. ಮಂಗಳೂರಿನ ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಸೆಂಟ್ರಲ್ ಸ್ಕೂಲ್ ನಾಲ್ಕನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

    ಕಳೆದ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ಸಂದರ್ಭ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ನೀತಿ ಸಂಹಿತೆಯ ಹಿನ್ನಲೆಯಲ್ಲಿ ಪ್ರಶಸ್ತಿ ನೀಡಲಿಲ್ಲ. ಹೀಗಾಗಿ 2019-20ರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಜಿಲ್ಲಾಡಳಿತ ನಾಳೆ ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಿದೆ.

  • ಸ್ಕೇಟಿಂಗ್ ಗೋಲ್ಡ್ ಮೆಡಲಿಸ್ಟ್ ಅನಘಾ ಮಂಗ್ಳೂರಿಗೆ- ವಿಮಾನ ನಿಲ್ದಾಣದಲ್ಲಿ ಸ್ವಾಗತ

    ಸ್ಕೇಟಿಂಗ್ ಗೋಲ್ಡ್ ಮೆಡಲಿಸ್ಟ್ ಅನಘಾ ಮಂಗ್ಳೂರಿಗೆ- ವಿಮಾನ ನಿಲ್ದಾಣದಲ್ಲಿ ಸ್ವಾಗತ

    ಮಂಗಳೂರು: ಸಿಂಗಾಪುರದಲ್ಲಿ ನಡೆದ ಇಂಟರ್ ನ್ಯಾಷನಲ್ ಐಸ್ ಸ್ಕೇಟಿಂಗ್ ನಲ್ಲಿ ಎರಡು ಚಿನ್ನದ ಪದಕ ಪಡೆದ ಮಂಗಳೂರಿನ ಕುಮಾರಿ ಅನಘಾಗೆ ತಾಯ್ನಾಡಿಗೆ ಮರಳಿದ್ದಾಳೆ.

    ಶುಕ್ರವಾರ ಬೆಳಗ್ಗೆ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅನಘಾಳನ್ನು ಸ್ವಾಗತಿಸಿ, ಸನ್ಮಾನಿಸಲಾಯಿತು. ಮಂಗಳೂರಿನ ಉದ್ಯಮಿ, ಮಾಸ್ಟರ್ ಫ್ಲವರ್ಸ್ ನ ಮಾಲಕ ಪಕೀರಬ್ಬ ಹೂವಿನ ಹಾರ, ಮೈಸೂರು ಪೇಟ ತೊಡಿಸಿ ಸನ್ಮಾನಿಸಿದರು. ಎಂಟು ವಯಸ್ಸಿನ ಒಳಗಿನ ಐಸ್ ಸ್ಕೇಟಿಂಗ್ ನಲ್ಲಿ ಅನಘಾ, ಮೊದಲ ಬಾರಿಗೆ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದಾಳೆ.

    ಸೌತ್ ಈಸ್ಟ್ ಏಷ್ಯನ್ ಓಪನ್ ಶಾರ್ಟ್ ಟ್ರಾಕ್ ಟ್ರೋಫಿ -2020 ಐಸ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಅನಘಾ, 500 ಹಾಗೂ 333 ಮೀಟರ್ ಐಸ್ ಸ್ಕೇಟಿಂಗಲ್ಲಿ ಚಿನ್ನ ಗೆದ್ದಿದ್ದಾಳೆ. ಸಿಂಗಾಪುರದ ಜೆಕ್ಯೂಬ್ ಐಸ್ ರಿಂಕ್‍ನಲ್ಲಿ ಜನವರಿ 4 ಹಾಗೂ 5 ರಂದು ನಡೆದ ಟೂರ್ನಮೆಂಟಿನಲ್ಲಿ 14 ದೇಶದ ಸ್ಕೇಟಿಂಗ್ ಪಟುಗಳು ಭಾಗವಹಿಸಿದ್ದರು.

    ಅಮೆರಿಕ, ರಷ್ಯಾ, ಜಪಾನ್, ಇಂಡೋನೇಷ್ಯಾ, ಮಲೇಷ್ಯಾ, ಥಾಯ್ಲೆಂಡ್ ಸೇರಿ ಜಗತ್ತಿನ ಮುಂಚೂಣಿ ಸ್ಕೇಟರ್ ಗಳು ಪಾಲ್ಗೊಂಡಿದ್ದ ಟೂರ್ನಮೆಂಟಿನಲ್ಲಿ ಭಾರತದ ಹುಡುಗಿ ಗೋಲ್ಡ್ ಮೆಡಲ್ ಗಳಿಸಿದ್ದು ಸಿಂಗಾಪುರದ ಆಯೋಜಕರಿಗೇ ಅಚ್ಚರಿಗೆ ಕಾರಣವಾಗಿತ್ತು.

    ಮಂಗಳೂರಿನ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಲೂಡ್ಸ್ ಸೆಂಟ್ರಲ್ ಸ್ಕೂಲ್ ನ 4ನೇ ತರಗತಿ ವಿದ್ಯಾರ್ಥಿನಿ. ಐಸ್ ಸ್ಕೇಟಿಂಗ್‍ನ ಭಾರತ ತಂಡದ ಕೋಚ್ ಅವಧೂತ್ ಥಾವಡೇ ಅವರಿಂದ ಅನಘಾ ದೆಹಲಿಯಲ್ಲಿ ಐಸ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿದ್ದಾಳೆ.

  • ಸೌತ್ ಝೋನ್ ಸ್ಕೇಟಿಂಗ್ ಚಾಂಪಿಯನ್‍ಶಿಪ್- 2 ಕಂಚಿನ ಪದಕ ಗೆದ್ದ ಮಂಗ್ಳೂರ ಬಾಲೆ

    ಸೌತ್ ಝೋನ್ ಸ್ಕೇಟಿಂಗ್ ಚಾಂಪಿಯನ್‍ಶಿಪ್- 2 ಕಂಚಿನ ಪದಕ ಗೆದ್ದ ಮಂಗ್ಳೂರ ಬಾಲೆ

    ಮಂಗಳೂರು: ಸಿಬಿಎಸ್ಇ ಬೋರ್ಡ್ ಹಾಗೂ ಜೈನ್ ಹೆರಿಟೇಜ್ ಸ್ಕೂಲ್ ಆಯೋಜಿಸಿದ ಸೌತ್ ಝೋನ್ ಸ್ಕೇಟಿಂಗ್ ಚಾಂಪಿಯನ್‍ಶಿಪ್- 2019ರಲ್ಲಿ ಮಂಗಳೂರಿನ ಅನಘಾ ಎರಡು ಕಂಚಿನ ಪದಕ ಪಡೆದಿದ್ದಾರೆ.

    ಬೆಳಗಾವಿಯ ಶಿವಗಂಗಾ ಸ್ಕೇಟಿಂಗ್ ರಿಂಕ್‍ನಲ್ಲಿ ಕರ್ನಾಟಕ, ಮಹಾರಾಷ್ಟ್ರ, ಕೇರಳ ಹಾಗೂ ಗೋವಾ ರಾಜ್ಯಗಳ ಸೌತ್ ಝೋನ್ ಚಾಂಪಿಯನ್‍ಶಿಪ್ ನಡೆಸಲಾಗಿತ್ತು. ಈ ಸ್ಪರ್ಧೆಯಲ್ಲಿ 10 ವರ್ಷದೊಳಗಿನ ಬಾಲಕಿಯರ ವಿಭಾಗದ 500 ಹಾಗೂ 1,000 ಮೀಟರ್ ರಿಂಕ್ ರೇಸ್‍ನಲ್ಲಿ ಅನಘಾ ತಲಾ ಎರಡು ಕಂಚಿನ ಪದಕ ಪಡೆದಿದ್ದಾರೆ.ಇದನ್ನೂ ಓದಿ:ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್: ಮಂಗಳೂರಿನ ಅನಘಾಗೆ ಬೆಳ್ಳಿ ಪದಕ

     

    ಮಂಗಳೂರಿನ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ, ಬಿಜೈ ಲೂಡ್ಸ್ ಸೆಂಟ್ರಲ್ ಸ್ಕೂಲ್‍ನಲ್ಲಿ 4ನೇ ತರಗತಿಯಲ್ಲಿ ಓದುತ್ತಿದ್ದಾರೆ. ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್‍ನ ಸದಸ್ಯೆಯಾಗಿರುವ ಅನಘಾ ತರಬೇತುದಾರರಾದ ಮೋಹನ್ ದಾಸ್. ಕೆ ಹಾಗೂ ಜಯರಾಜ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

  • ಸ್ಪೀಡ್ ಸ್ಕೇಟಿಂಗ್ ಓಪನ್ ಚಾಲೆಂಜ್‍ನಲ್ಲಿ ಚಿನ್ನದ ಪದಕ ಗೆದ್ದ ಮಂಗ್ಳೂರ ಬಾಲೆ!

    ಸ್ಪೀಡ್ ಸ್ಕೇಟಿಂಗ್ ಓಪನ್ ಚಾಲೆಂಜ್‍ನಲ್ಲಿ ಚಿನ್ನದ ಪದಕ ಗೆದ್ದ ಮಂಗ್ಳೂರ ಬಾಲೆ!

    ಮಂಗಳೂರು: ದೆಹಲಿಯ ಗುರುಗ್ರಾಮ್‍ನಲ್ಲಿ ಐಸ್ ಸ್ಕೇಟಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಆಯೋಜಿಸಿದ ಸ್ಪೀಡ್ ಸ್ಕೇಟಿಂಗ್ ಓಪನ್ ಚಾಲೆಂಜ್ 2019 ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಅನಘಾ ಚಿನ್ನದ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ.

    8 ರಿಂದ 10 ವರ್ಷದೊಳಗಿನ ಬಾಲಕಿಯರ ವಿಭಾಗದ 500 ಮೀಟರ್ ಐಸ್ ರಿಂಕ್ ರೇಸ್‍ನಲ್ಲಿ ಅನಘಾ ಚಿನ್ನದ ಪದಕ ಗಳಿಸಿದ್ದಾರೆ. ಮಂಗಳೂರಿನ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಲೂಡ್ರ್ಸ್ ಸಿಬಿಎಸ್‍ಇ ಶಾಲೆಯ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.

    ಐಸ್ ಸ್ಕೇಟಿಂಗ್ ರಾಷ್ಟ್ರೀಯ ತರಬೇತುದಾರ ಅವಧೂತ್ ಥಾವಡೆ ಅವರಿಂದ ಅನಘಾ ಐಸ್ ಸ್ಕೇಟಿಂಗ್ ತರಬೇತಿ ಪಡೆದಿದ್ದಾಳೆ. ಸದ್ಯ ಮಂಗಳೂರಿನ ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್‍ನ ಸದಸ್ಯರಾಗಿರುವ ಅನಘಾ ತರಬೇತುದಾರರಾದ ಮೋಹನ್ ದಾಸ್.ಕೆ ಹಾಗೂ ಜಯರಾಜ್ ಅವರಿಂದ ಸ್ಕೇಟಿಂಗ್ ತರಬೇತಿಯನ್ನು ಪಡೆಯುತ್ತಿದ್ದಾಳೆ.