Tag: anagha rajesh

  • ಸ್ಕೇಟಿಂಗ್ ಪಟು ಅನಘಾ ರಾಜೇಶ್‍ಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ

    ಸ್ಕೇಟಿಂಗ್ ಪಟು ಅನಘಾ ರಾಜೇಶ್‍ಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ

    ಮಂಗಳೂರು: ಸ್ಕೇಟಿಂಗ್‍ನಲ್ಲಿ ಅತ್ಯುನ್ನತ ಸಾಧನೆ ತೋರಿ ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಿರುವ ಕುಮಾರಿ ಅನಘಾ ರಾಜೇಶ್‍ಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಅಸಾಧಾರಣ ಪ್ರತಿಭೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

    ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಮಂಗಳೂರು ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ-2022 ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಅನಘಾ ರಾಜೇಶ್‍ಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಅಸಾಧಾರಣ ಪ್ರತಿಭೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದನ್ನೂ ಓದಿ: ಸ್ಕೇಟಿಂಗ್‍ನಲ್ಲಿ ಅಂತಾರಾಷ್ಟ್ರೀಯ ಚಿನ್ನದ ಪದಕ ಪಡೆದ ಅನಘಾಗೆ ಸಿಎಂ ಅಭಿನಂದನೆ

    ತನ್ನ ನಾಲ್ಕನೇ ವಯಸ್ಸಿನಲ್ಲಿ ಸ್ಕೇಟಿಂಗ್ ತರಬೇತಿ ಆರಂಭಿಸಿದ ಅನಘಾ, ಜಿಲ್ಲಾ, ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್‍ನಲ್ಲಿ ಭಾಗವಹಿಸಿ ಒಟ್ಟು 26 ಚಿನ್ನದ ಪದಕ, 11 ಬೆಳ್ಳಿ ಪದಕ ಹಾಗೂ 8 ಕಂಚಿನ ಪದಕ ಪಡೆದು ತನ್ನ 12 ನೇ ವಯಸ್ಸಿನಲ್ಲೇ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಮಂಗಳೂರಿನ ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾಗಿರುವ ಅನಘಾ ರಾಜೇಶ್ ಬಿಜೈ ಲೂಡ್ರ್ಸ್ ಸೆಂಟ್ರಲ್ ಸ್ಕೂಲ್‍ನ 6 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಅಂತರಾಷ್ಟ್ರೀಯ ಸ್ಕೇಟಿಂಗ್ ಕೋಚ್ ಪ್ರತೀಕ್ ರಾಜ ಅವರಿಂದ ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಮಹಿಳಾ ದಿನಾಚರಣೆ ಪ್ರಯುಕ್ತ ಶಭಾಷ್ ಮಿಥು ಚಿತ್ರದ ಪೋಸ್ಟರ್ ಹಂಚಿಕೊಂಡ ತಾಪ್ಸಿ ಪನ್ನು

    ಕಾರ್ಯಕ್ರಮದಲ್ಲಿ ದ.ಕ ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಜಿಲ್ಲಾ ಪಂಚಾಯತ್ ಸಿಇಓ ಡಾ.ಕುಮಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

  • ಟ್ರಿನಿಟಿ ಕಾಲೇಜ್ ಲಂಡನ್‍ನ ಡ್ರಮ್ಸ್ ಪರೀಕ್ಷೆಯಲ್ಲಿ ಅನಘಾ ರಾಜೇಶ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

    ಟ್ರಿನಿಟಿ ಕಾಲೇಜ್ ಲಂಡನ್‍ನ ಡ್ರಮ್ಸ್ ಪರೀಕ್ಷೆಯಲ್ಲಿ ಅನಘಾ ರಾಜೇಶ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

    ಮಂಗಳೂರು: ಟ್ರಿನಿಟಿ ಕಾಲೇಜ್ ಲಂಡನ್ ಆಯೋಜಿಸಿದ ರಾಕ್ ಎಂಡ್ ಪೋಪ್ ಡ್ರಮ್ಸ್ ಫಸ್ಟ್ ಗ್ರೇಡ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಮಂಗಳೂರಿನ ಅನಘಾ ರಾಜೇಶ್ ತೇರ್ಗಡೆ ಹೊಂದಿದ್ದಾರೆ.

    ನಗರದ ಬಿಜೈ ಕೋರಸ್ ಮ್ಯೂಸಿಕ್ ಸ್ಕೂಲ್ ನ ವಿದ್ಯಾರ್ಥಿ ಆಗಿರುವ ಅನಘಾ, ಶಿಕ್ಷಕರಾದ ರೋಷನ್ ವಿ. ಕೊರ್ಡೇರೋ ಹಾಗೂ ಜಾಕ್ಲಿನ್ ಡಿಸೋಜಾ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಮಂಗಳೂರಿನ ಅತೀ ಕಿರಿಯ ಬಾಲಕಿ ಎಂಬ ಹೆಗ್ಗಳಿಕೆಗೆ ಅನಘಾ ಪಾತ್ರರಾಗಿದ್ದಾರೆ.

    ಬಿಜೈ ಲೂಡ್ರ್ಸ್ ಸೆಂಟ್ರಲ್ ಸ್ಕೂಲ್ ನ 5ನೇ ತರಗತಿಯ ವಿದ್ಯಾರ್ಥಿ ಆಗಿರುವ ಅನಘಾ ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ಅವರ ಪುತ್ರಿಯಾಗಿದ್ದಾರೆ.