Tag: Anakapalli

  • ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ – 8 ಮಂದಿ ದುರ್ಮರಣ

    ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ – 8 ಮಂದಿ ದುರ್ಮರಣ

    ಅಮರಾವತಿ: ಪಟಾಕಿ ಕಾರ್ಖಾನೆಯಲ್ಲಿ (Cracker Factory) ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರಪ್ರದೇಶದ (Andhra Pradesh) ಅನಕಪಲ್ಲಿಯಲ್ಲಿ ನಡೆದಿದೆ.

    ಅವಘಡದಲ್ಲಿ 8 ಜನರು ಸಾವನ್ನಪ್ಪಿದ್ದು, 7 ಜನರು ಗಾಯಗೊಂಡಿದ್ದಾರೆ. ಬೆಂಕಿ ಅವಘಡದ ಕುರಿತು ಆಂಧ್ರ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು (Chandrababu Naidu) ವಿಷಾದ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‌ನ ಸುಮಿ ಮೇಲೆ ರಷ್ಯಾ ಕ್ಷಿಪಣಿ ದಾಳಿ – 21 ಮಂದಿ ಸಾವು

    ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಬೆಂಕಿ ಅವಘಡದ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಗೃಹ ಸಚಿವೆ ವಿ.ಅನಿತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ | ಸೈಕೋಪಾತ್‌ನಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ

    ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

  • ಚುನಾವಣಾ ಭರವಸೆ ಈಡೇರಿಸಲು ಸಾಧ್ಯವಾಗ್ಲಿಲ್ಲ ಅಂತ ತನಗೆ ತಾನೇ ಚಪ್ಪಲಿಯಿಂದ ಹೊಡೆದುಕೊಂಡ ಕೌನ್ಸಿಲರ್

    ಚುನಾವಣಾ ಭರವಸೆ ಈಡೇರಿಸಲು ಸಾಧ್ಯವಾಗ್ಲಿಲ್ಲ ಅಂತ ತನಗೆ ತಾನೇ ಚಪ್ಪಲಿಯಿಂದ ಹೊಡೆದುಕೊಂಡ ಕೌನ್ಸಿಲರ್

    ಅಮರಾವತಿ: ಮತದಾರರಿಗೆ ನೀಡಿದ ಚುನಾವಣಾ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗದೇ ಹೋಗಿದ್ದಕ್ಕೆ ಕೌನ್ಸಿಲರ್ (Councillor) ಒಬ್ಬರು ತನಗೆ ತಾನೇ ಚಪ್ಪಲಿಯಿಂದ ಹೊಡೆದುಕೊಂಡಿರುವ ಘಟನೆ ಆಂಧ್ರಪ್ರದೇಶದ (Andhra Pradesh) ಅನಕಪಲ್ಲಿಯಲ್ಲಿ (Anakapalli) ನಡೆದಿದೆ. ಇದಕ್ಕೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಆಟೋ ರಿಕ್ಷಾ ಓಡಿಸಿ ಜೀವನ ಸಾಗಿಸುತ್ತಿದ್ದ ನರಸೀ ಪಟ್ಟಣ ಪುರಸಭೆಯ ಕೌನ್ಸಿಲರ್ ಮುಲಪರ್ತಿ ರಾಮರಾಜು (40) ಸ್ಥಳೀಯ ಪೌರಾಡಳಿತ ಮಂಡಳಿಯ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ತಮ್ಮಿಂದ ಸಾಧ್ಯವಾಗುವ ಎಲ್ಲಾ ಪ್ರಯತ್ನವನ್ನು ಮಾಡಿದರೂ ಸಹ ಮತದಾರರಿಗೆ ನೀಡಿದ ಭರವಸೆಯನ್ನು ಉಳಿಸುವಲ್ಲಿ ವಿಫಲವಾಗಿದ್ದಾಗಿ ಬೇಸರ ವ್ಯಕ್ತಪಡಿಸಿ ಚಪ್ಪಲಿಯಿಂದ ತಾವೇ ಹೊಡೆದುಕೊಂಡಿದ್ದಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್ ವೇ ನಿರ್ಮಾಣದ ವೇಳೆ ಕ್ರೇನ್ ಕುಸಿದು 16 ಮಂದಿ ಕಾರ್ಮಿಕರು ದುರ್ಮರಣ

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮರಾಜು, ನಾನು ಕೌನ್ಸಿಲರ್ ಆಗಿ ಚುನಾಯಿತನಾಗಿ 31 ತಿಂಗಳಾಗಿದೆ. ಆದರೆ ನನ್ನ ವಾರ್ಡ್‌ನಲ್ಲಿ ಒಳಚರಂಡಿ, ವಿದ್ಯುತ್, ನೈರ್ಮಲ್ಯ, ರಸ್ತೆ ಹಾಗೂ ಇತರ ಸಮಸ್ಯೆಗಳನ್ನು ಪರಿಹರಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ. ಮತದಾರರ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗದ ಕಾರಣಕ್ಕೆ ಪೌರ ಸಭೆಯಲ್ಲೇ ಸಾಯುವುದು ಉತ್ತಮ ಎಂದು ನೊಂದು ನುಡಿದಿದ್ದಾರೆ.

    ಸ್ಥಳೀಯ ಚುನಾವಣೆ ವೇಳೆ ರಾಮರಾಜು ಅವರು ತೆಲುಗು ದೇಶಂ ಪಕ್ಷದ (TDP) ಪರವಾಗಿ ಲಿಂಗಾಪುರಂ ಗ್ರಾಮದ ಬುಡಕಟ್ಟು ಪ್ರತಿನಿಧಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಇದನ್ನೂ ಓದಿ: ಇಂದಿನಿಂದ ಎಕ್ಸ್‌ಪ್ರೆಸ್‌ ವೇನಲ್ಲಿ ಬೈಕ್, ಆಟೋ ಸಂಚಾರಕ್ಕೆ ನಿರ್ಬಂಧ – ರೂಲ್ಸ್ ಬ್ರೇಕ್ ಮಾಡಿದ್ರೆ ದಂಡ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ನಾನಕ್ಕೆಂದು ಹೋದ 7 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಾಪತ್ತೆ

    ಸ್ನಾನಕ್ಕೆಂದು ಹೋದ 7 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಾಪತ್ತೆ

    ಹೈದರಾಬಾದ್: ಅನಕಾಪಲ್ಲಿಯ DIET ಎಂಜಿನಿಯರಿಂಗ್ ಕಾಲೇಜಿನ ಏಳು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಆಂಧ್ರಪ್ರದೇಶದ ಪುಡಿಮಡಕ ಬೀಚ್‍ನಲ್ಲಿ ನಾಪತ್ತೆಯಾಗಿದ್ದಾರೆ.

    ಶುಕ್ರವಾರ ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿದ್ದು, ಅವರಲ್ಲಿ ಪವನ್ ಕುಮಾರ್ ಎಂಬ ಯುವಕ ಶವವಾಗಿ ಪತ್ತೆಯಾಗಿದ್ದು, ಮತ್ತೋರ್ವ ತೇಜ ಅವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ನಡೆದಂತಹ ಕೊಲೆಗಳು ರಾಜಕೀಯಕ್ಕಾಗಿ ನಡೆದಂತಹ ಕೊಲೆ: ಮಾಧುಸ್ವಾಮಿ

    ಸ್ನಾನ ಮಾಡಲೆಂದು ಏಳು ಮಂದಿ ವಿದ್ಯಾರ್ಥಿಗಳು ಸಮುದ್ರಕ್ಕೆ ಇಳಿದಿದ್ದರು. ಈ ವೇಳೆ ಜೋರಾಗಿ ಬಂದ ಅಲೆ ಅವರನ್ನು ಎಳೆದೊಯ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದೀಗ ಶನಿವಾರ ರಕ್ಷಣಾ ಅಧಿಕಾರಿಗಳು ಮತ್ತಿಬ್ಬರು ವಿದ್ಯಾರ್ಥಿಗಳ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಮೃತರನ್ನು ಜಸ್ವಂತ್ ಕುಮಾರ್ ಮತ್ತು ಪೆಂಟಕೋಟ ಗಣೇಶ್ ಎಂದು ಗುರುತಿಸಲಾಗಿದೆ.

    ಉಳಿದ ಮೂವರು ವಿದ್ಯಾರ್ಥಿಗಳಾದ ಕಂಪಾರ ಜಗದೀಶ್, ಬಯ್ಯಪುನೇನಿ ಸತೀಶ್ ಕುಮಾರ್ ಮತ್ತು ಪುಡಿ ರಾಮಚಂದು ಅವರನ್ನು ಹುಡುಕಲು ಹೆಲಿಕಾಪ್ಟರ್ ಮತ್ತು ಕೋಸ್ಟ್ ಗಾರ್ಡ್ ಬೋಟ್‍ಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ – ಆರೋಗ್ಯ ಇಲಾಖೆಗೆ ಪತ್ರ ಬರೆದ ಡಿಹೆಚ್‍ಒ

    ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಅಗತ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]