Tag: Anand Asnotikar

  • ಅನಂತ್‍ಕುಮಾರ್ ಹೆಗ್ಡೆ ನಾಲಿಗೆ ರಾಜಕಾರಣ ಮಾಡುತ್ತಿದ್ದಾರೆ: ಅಸ್ನೋಟಿಕರ್

    ಅನಂತ್‍ಕುಮಾರ್ ಹೆಗ್ಡೆ ನಾಲಿಗೆ ರಾಜಕಾರಣ ಮಾಡುತ್ತಿದ್ದಾರೆ: ಅಸ್ನೋಟಿಕರ್

    ಕಾರವಾರ: ಕೇಂದ್ರ ಕೌಶಾಲ್ಯಾಭಿವೃದ್ಧಿ ಸಚಿವ ಅನಂತ್‍ಕುಮಾರ್ ಹೆಗ್ಡೆ ನಾಲಿಗೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಸಂಭಾವ್ಯ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ಕಿಡಿಕಾರಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅನಂತ್‍ಕುಮಾರ್ ಅವರ ತಂದೆಯೇ ಅವರ ಮೇಲೆ ವಿಶ್ವಾಸ ಇಡುವುದಿಲ್ಲ, ರಾಜಕೀಯಕ್ಕೆ ತಂದೆಯ ಭಾವನೆಯನ್ನೇ ಬಳಸಿಕೊಳ್ಳುತಿದ್ದಾರೆ. ಅವರು ನಾಲಿಗೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

    ಅನಂತಕುಮಾರ್ ಅವರು ಹಿಂದೂ ಮುಸ್ಲಿಂ ಅಂತ ಬೇದ ಭಾವ ಮಾಡುತಿದ್ದಾರೆ. ಅವರು ರಾಜಕಾರಣಕ್ಕೆ ಬಂದಿದ್ದು ರಾಜಕೀಯ ಮಾಡಲು. ಸಮಾಜ ಸೇವೆ ಮಾಡಲು ಅಲ್ಲ. ಈ ಬಾರಿ ಅಭಿವೃದ್ಧಿ ಪರ ಚುನಾವಣೆ ನಡೆಯುತ್ತದೆ. ಈ ಚುನಾವಣೆಯನ್ನು ಆರ್.ವಿ ದೇಶಪಾಂಡೆ ನೇತೃತ್ವದಲ್ಲಿ ಎದುರಿಸುತ್ತೇವೆ. ಮನೆಯಲ್ಲಿ ಜಗಳ ಇದ್ದೇ ಇರುತ್ತದೆ, ಅದು ಸಾಮಾನ್ಯ. ಆದ್ರೆ ಚುನಾವಣೆಯನ್ನು ಒಟ್ಟಿಗೇ ಎದುರಿಸುತ್ತೇವೆ ಎಂದು ಅಸ್ನೋಟಿಕರ್ ತಿಳಿಸಿದ್ದಾರೆ.

  • ಆನಂದ್ ಆಸ್ನೋಟಿಕರ್‌ಗೆ ಆರ್‌ವಿ ದೇಶಪಾಂಡೆ ಶಾಕ್

    ಆನಂದ್ ಆಸ್ನೋಟಿಕರ್‌ಗೆ ಆರ್‌ವಿ ದೇಶಪಾಂಡೆ ಶಾಕ್

    ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಭಲವಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ನಮ್ಮದೇ ಅಭ್ಯರ್ಥಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಅವರಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಶಾಕ್ ಕೊಟ್ಟಿದ್ದಾರೆ.

    ಶಿರಸಿಯಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು, ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದರೆ ತಪ್ಪಿಲ್ಲ. ಆದರೆ ಇದಕ್ಕೂ ಮುನ್ನ ಹಲವಾರು ವಿಷಯಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಹೇಳಿದರು.

    ಜಿಲ್ಲೆಯಲ್ಲಿ ಕಾಂಗ್ರೆಸ್ ಅಸ್ತಿತ್ವಲ್ಲಿದ್ದು, ನಮ್ಮ ಪಕ್ಷದಷ್ಟು ಜೆಡಿಎಸ್ ಪ್ರಭಲವಾಗಿಲ್ಲ. ಹೀಗಾಗಿ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಯೇ ಲೋಕಸಭಾ ಚುನಾವಣೆಗೆ ಎದುರಿಸಬೇಕಾಗುತ್ತದೆ ಎಂದು ದೇಶಪಾಂಡೆ ಹೇಳುವ ಮೂಲಕ ಪುತ್ರ ಪ್ರಶಾಂತ್ ದೇಶಪಾಂಡೆ ಅವರನ್ನು ಕಣಕ್ಕೆ ಇಳಿಸುವ ನಿಟ್ಟಿನಲ್ಲಿ ಯೋಚನೆ ಹೂಡಿದ್ದಾರೆ ಎನ್ನುವ ವಿಶ್ಲೇಷಣೆ ಕೇಳಿಬಂದಿದೆ.

    ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ಸಚಿವ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಕ್ಯಾಬಿನೆಟ್ ನಲ್ಲಿ ಅಭಿಪ್ರಾಯ ನೀಡಲು ಅವಕಾಶವಿದೆ. ಆದರೆ ಒಮ್ಮೆ ಸಚಿವ ಸಂಪುಟದಲ್ಲಿ ನಿರ್ಣಯವಾದರೆ ಅದಕ್ಕೆ ಬದ್ಧರಾಗಿ ನಡೆದುಕೊಳ್ಳಬೇಕು. ಅನಾವಶ್ಯಕವಾಗಿ ಮಾತನಾಡುವುದು ತಪ್ಪು, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ತಿಳಿಸಿದರು.

    ಖಾತೆ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ. ನಾನು ಬಹಳ ಇನ್ನಿಂಗ್ಸ್ ಆಡಿದ್ದೇನೆ. ಬಹಳ ಆಸಕ್ತಿ ಇಟ್ಟುಕೊಳ್ಳುವ ವ್ಯಕ್ತಿ ನಾನಲ್ಲ. ಸಂಪುಟ ವಿಸ್ತರಣೆ ಆಗಬೇಕಾಗಿದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೋದಿಯಿಂದ ದೇಶ ವಿಭಜನೆ, ಬಿಎಸ್‍ವೈಯಿಂದ ರಾಜ್ಯ ವಿಭಜನೆ: ಆನಂದ್ ಅಸ್ನೋಟಿಕರ್

    ಮೋದಿಯಿಂದ ದೇಶ ವಿಭಜನೆ, ಬಿಎಸ್‍ವೈಯಿಂದ ರಾಜ್ಯ ವಿಭಜನೆ: ಆನಂದ್ ಅಸ್ನೋಟಿಕರ್

    ಕಾರವಾರ: ಯುವಕರನ್ನು ಬಳಸಿ ಹಿಂದುತ್ವದ ಆಧಾರದ ಮೇಲೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ಯಡಿಯೂರಪ್ಪನವರು ಕರ್ನಾಟಕವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಕಿಡಿಕಾರಿದ್ದಾರೆ.

    ಪ್ರತ್ಯೇಕ ರಾಜ್ಯ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಖ್ಯಾತಿಯನ್ನು ಸಹಿಸಲಾಗದೇ ಯಡಿಯೂರಪ್ಪನವರು ಹಾಗೂ ಬಿಜೆಪಿಯವರು ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡುವ ಕುರಿತು ರೈತರನ್ನು ಬಲಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

    ಬಡ ರೈತರನ್ನು, ಯುವಕರನ್ನು ಬಳಸಿ ಹಿಂದುತ್ವದ ಆಧಾರದ ಮೇಲೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ಯಡಿಯೂರಪ್ಪನವರು ಕರ್ನಾಟಕವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಸ್ನೋಟಿಕರ್ ದೂರಿದರು.

    ಯಡಿಯೂರಪ್ಪನವರು ಮುಖ್ಯಮಂತ್ರಿ ಆಗುವ ಸಾಧ್ಯತೆಗಳಿಲ್ಲ, ಕೇಂದ್ರದಲ್ಲಿ ಮಂತ್ರಿಯಾಗುತ್ತೇನೆ ಎನ್ನುವ ಉದ್ದೇಶವಿಟ್ಟುಕೊಂಡು ಹೀಗೆ ಮಾಡುತ್ತಿದ್ದಾರೆ. ಇವರ ಮೇಲಿರುವ ಕೇಸುಗಳನ್ನು ಮುಗಿಸಿಕೊಳ್ಳಬೇಕಿದೆ ಹೀಗಾಗಿ ಈ ರೀತಿ ಮಾಡುತ್ತಿದ್ದಾರೆ. ಇದೊಂದು ಪೊಲಿಟಿಕಲ್ ಗೇಮ್. ಮುಂಬರುವ ಲೋಕಸಭಾ ಚುನಾವಣೆಯೇ ಮುಖ್ಯ ಉದ್ದೇಶ ಎಂದು ತಿಳಿಸಿದರು.

    ಅಮಿತ್ ಶಾ ರವರಿಗೆ ಕರ್ನಾಟಕದಲ್ಲಿ ತಾನೇನೋ ಮಾಡುತ ದ್ದೇನೆ ಎಂದು ತೋರಿಸಿಕೊಳ್ಳಲು ಯಡಿಯೂರಪ್ಪನವರು ಹೀಗೆ ಮಾಡುತ್ತಿದ್ದಾರೆ. ಅವರು ಇನ್ನು ಮುಂದೆ ರಾಜ್ಯದ ಮುಖ್ಯಮಂತ್ರಿಯಾಗುವುದಿಲ್ಲ. ಕುಮಾರಸ್ವಾಮಿಯವರ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುತ್ತದೆ. ತಾವು ವಿರೋಧ ಪಕ್ಷದಲ್ಲಿದ್ದು ರಾಜ್ಯಕ್ಕಾಗಿ ಒಳ್ಳೆಯ ಹೋರಾಟ ಮಾಡಿ ಎಂದು ಯಡಿಯೂರಪ್ಪನವರಿಗೆ ಸಲಹೆ ನೀಡಿದರು.

  • ಅನಂತಕುಮಾರ್ ಹೆಗಡೆ ಒಬ್ಬ ಬ್ರಿಟಿಷ್, ಹಿಂದೂಗಳನ್ನು ಡಿವೈಡ್ ಮಾಡಲು ಹೊರಟ್ಟಿದ್ದಾರೆ: ಆಸ್ನೋಟಿಕರ್

    ಅನಂತಕುಮಾರ್ ಹೆಗಡೆ ಒಬ್ಬ ಬ್ರಿಟಿಷ್, ಹಿಂದೂಗಳನ್ನು ಡಿವೈಡ್ ಮಾಡಲು ಹೊರಟ್ಟಿದ್ದಾರೆ: ಆಸ್ನೋಟಿಕರ್

    ಕಾರವಾರ: ಕೇಂದ್ರ ಕೌಶಲ್ಯಾಭಿವೃದ್ಧಿ ಖಾತೆಯ ಸಚಿವ ಅನಂತಕುಮಾರ್ ಹೆಗ್ಡೆ ಒಬ್ಬ ಬ್ರಿಟಿಷ್. ಹಿಂದೂಗಳನ್ನು ವಿಭಜನೆ ಮಾಡಲು ಹೊರಟ್ಟಿದ್ದಾರೆ ಎಂದು ಮಾಜಿ ಶಾಸಕ ಆನಂದ್ ಆಸ್ನೋಟಿಕರ್ ಗಂಭೀರ ಆರೋಪವನ್ನ ಮಾಡಿದ್ದಾರೆ.

    ಇಂದು ಕಾರವಾರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆಸ್ನೋಟಿಕರ್, ರಾಜಕಾರಣದ ಲಾಭ ಪಡೆಯಲು, ಜನರ ಮತ ಪಡೆಯಲು ಯಾವ ಮಟ್ಟಕ್ಕೆ ಬೇಕಾದ್ರೂ ಇಳಿಯಲು ಅನಂತಕುಮಾರ ಹೆಗಡೆ ತಯಾರಿದ್ದಾರೆ. ಅನಂತ್ ಕುಮಾರ್ ಹೆಗಡೆ ಒಬ್ಬ ನೀಚ ಎನ್ನೋದನ್ನ ಈಗಲೂ ಸಮರ್ಥನೆ ಮಾಡಿಕೊಳ್ಳುತ್ತೆನೆ. ಒಂದು ವೇಳೆ ಕ್ಷಮೆ ಕೇಳಬೇಕೆಂದರೆ ಹಿಂದುಳಿದ ವರ್ಗದ ನಾಯಕ ಬಿಜೆಪಿ ಜಿಲ್ಲಾ ಅಧ್ಯಕ್ಷ ಕೆ.ಜಿ ನಾಯಕ್ ರವರಲ್ಲಿ ಕೇಳುತ್ತೇನೆ ಆದರೆ ಬಿಜೆಪಿಯವರಲ್ಲಿ ಅಲ್ಲ ಎಂದರು.

    ರಾಜ್ಯಕ್ಕೆ ರೆಸಾರ್ಟ್ ರಾಜಕಾರಣವನ್ನ ಪರಿಚಯಿಸಿದವರು ಬಿಜೆಪಿಗರು. ಅದರಲ್ಲಿ ರೆಸಾರ್ಟ್ ರಾಜಕಾರಣದ ಮುಖ್ಯ ರೂವಾರಿಯನ್ನ ಕೇಂದ್ರ ಸಂಸದೀಯ ಸಚಿವ ಅನಂತಕುಮಾರ್ ವಹಿಸಿದ್ದರು. ಅಂದು ಒಂದು ನಯಾ ಪೈಸೆಯನ್ನೂ ಪಡೆದುಕೊಂಡಿಲ್ಲ ಎಂಬುದಾಗಿ ಯಡಿಯೂರಪ್ಪ, ಜನಾರ್ದನ ರೆಡ್ಡಿ ದೇವಸ್ಥಾನಕ್ಕೆ ಬಂದು ಪ್ರಮಾಣ ಮಾಡಿ ಹೇಳಲಿ ಎಂದು ಬಹಿರಂಗ ಸವಾಲು ಹಾಕಿದರು.

  • ಅನಂತಕುಮಾರ ಹೆಗಡೆ ಕಾಲಿನ ಹೆಬ್ಬೆರಳಿಗಿರುವಷ್ಟೂ ಬೆಲೆ ಆನಂದ್ ಅಸ್ನೋಟಿಕರ್ ಗೆ ಇಲ್ಲ: ಬಿಜೆಪಿ ಮುಖಂಡ

    ಅನಂತಕುಮಾರ ಹೆಗಡೆ ಕಾಲಿನ ಹೆಬ್ಬೆರಳಿಗಿರುವಷ್ಟೂ ಬೆಲೆ ಆನಂದ್ ಅಸ್ನೋಟಿಕರ್ ಗೆ ಇಲ್ಲ: ಬಿಜೆಪಿ ಮುಖಂಡ

    ಕಾರವಾರ: ಮಾಜಿ ಶಾಸಕ ಆನಂದ್ ಅಸ್ನೋಟಿಕರ್ ಒಬ್ಬ ಪರಮನೀಚ, ಆತನಿಗೆ ಅನಂತಕುಮಾರ್ ಹೆಗಡೆ ಕಾಲಿನ ಹೆಬ್ಬೆರಳಿಗಿರುವಷ್ಟೂ ಬೆಲೆಯಿಲ್ಲ ಎಂದು ಬಿಜೆಪಿ ಮುಖಂಡ ಸುನಿಲ್ ಹೆಗಡೆ ಕಿಡಿಕಾರಿದ್ದಾರೆ. ಕಾರವಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಅನಂತಕುಮಾರ ಓರ್ವ ನೀಚ ರಾಜಕಾರಣಿ ಎಂದು ಹೇಳಿದ್ದ ಆನಂದ್ ಅಸ್ನೋಟಿಕರ್ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ರು.

    ಉದ್ಯಮಿಯಾಗಿರುವ ಆನಂದ್ ಅಸ್ನೋಟಿಕರ್ ಸ್ವಹಿತ ಸಾಧನೆಗಾಗಿ ಕಾಂಗ್ರೆಸ್ ದೃಷ್ಟಿಯಲ್ಲಿ ಒಳ್ಳೆಯವರೆನಿಸಿಕೊಳ್ಳಲು ಈ ರೀತಿಯ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಆದರೆ ವಸಂತ ಅಸ್ನೋಟಿಕರ್ ಬಳಿಕ ಸಿಂಪತಿ ಮೇಲೆ ಚುನಾವಣೆಯಲ್ಲಿ ಆರಿಸಿ ಬಂದ ಆನಂದ್ ಪಕ್ಷದಿಂದ ಪಕ್ಷವನ್ನ ಬದಲಾವಣೆ ಮಾಡುತ್ತಾ ಆರಿಸಿದ ಮತದಾರರಿಗೂ ನಿಷ್ಠಾವಂತರಾಗಿರದೇ ಪ್ರಜಾಪ್ರಭುತ್ವವನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ದೇಶದ ನೀಚ ಮಂತ್ರಿ ಅಂದ್ರೆ ಅನಂತಕುಮಾರ್ ಹೆಗಡೆ-ಆನಂದ್ ಅಸ್ನೋಟಿಕರ್

    ಗೋವಾದ ಕ್ಯಾಸಿನೋ ಒಂದರಲ್ಲಿ ತೆವಲನ್ನ ತೀರಿಸಿಕೊಳ್ಳಲು ಹೋಗಿದ್ದ ಆನಂದ್ ಅಸ್ನೋಟಿಕರ್ ಅಲ್ಲಿನ ಬೌನ್ಸರ್ ಗಳಿಂದ ಹೊಡೆತ ತಿಂದು ಬಂದಿದ್ದರು. ಸಚಿವ ಅನಂತಕುಮಾರ್ ವಿರುದ್ಧ ಮಾತನಾಡುವ ಯಾವುದೇ ನೈತಿಕತೆ ಆನಂದ್ ಅಸ್ನೋಟಿಕರ್ ಗೆ ಇಲ್ಲ ಎಂದು ಮಾಜಿ ಶಾಸಕ ಸುನಿಲ್ ಹೆಗಡೆ ಟೀಕಿಸಿದ್ರು.

    ಸಚಿವ, ಸಂಸದ ಅನಂತಕುಮಾರ್ ಹೆಗಡೆ ಹೋರಾಟಗಳ ಮೂಲಕವೇ ತಮ್ಮನ್ನ ತಾವು ಗುರುತಿಸಿಕೊಂಡು ಬಂದಿರುವವರು. ಅನಂತಕುಮಾರ್ ಯಾರೋ ಹಾರಿಸಿದ ಧ್ವಜವನ್ನ ಹಾರಿಸಿ ಹೆಸರು ಪಡೆದುಕೊಂಡಿದ್ದಾರೆ ಅಂತಾ ತುಚ್ಛವಾಗಿ ಮಾತನಾಡಿರುವುದು ಸರಿಯಲ್ಲ. ಇನ್ನು ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಸಚಿವ ಅನಂತಕುಮಾರ್ ಹಲ್ಲೆ ಮಾಡಿದ್ದರು ಎನ್ನುವ ಕುರಿತು ದಾಖಲೆಗಳಿದ್ದರೆ ಅದನ್ನ ಬಿಡುಗಡೆ ಮಾಡಲೀ ಅಂತಾ ಬಿಜೆಪಿ ಆನಂದ್ ಅಸ್ನೋಟಿಕರ್ ಗೆ ಬಹಿರಂಗ ಸವಾಲನ್ನು ಹಾಕಿದರು.

  • ದೇಶದ ನೀಚ ಮಂತ್ರಿ ಅಂದ್ರೆ ಅನಂತಕುಮಾರ್ ಹೆಗಡೆ-ಆನಂದ್ ಅಸ್ನೋಟಿಕರ್

    ದೇಶದ ನೀಚ ಮಂತ್ರಿ ಅಂದ್ರೆ ಅನಂತಕುಮಾರ್ ಹೆಗಡೆ-ಆನಂದ್ ಅಸ್ನೋಟಿಕರ್

    ಕಾರವಾರ: ಭಾರತ ದೇಶದ ಅತ್ಯಂತ ನೀಚ ಮಂತ್ರಿ ಅಂದ್ರೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ ಯಾರೋ ಹಾರಿಸಿರುವ ಧ್ವಜವನ್ನು ನಾನು ಹಾರಿಸಿದ್ದೇನೆಂದು ಹೇಳುವ ಮೂಲಕ ತಾವು ಆರ್‍ಎಸ್‍ಎಸ್‍ನಲ್ಲಿ ದೊಡ್ಡ ಕೆಲಸ ಮಾಡಿದ್ದೇನೆ ಎಂದು ಅನಂತಕುಮಾರ್ ಹೆಗಡೆ ಹೇಳಿಕೊಳ್ಳುತ್ತಾರೆ. ಅದು ಹೇಗೆ ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೋ ಗೊತ್ತಿಲ್ಲ. ಜೀವನದಲ್ಲಿಯೇ ಹೆಗಡೆಗೆ ಮಂತ್ರಿ ಸ್ಥಾನ ಸಿಗುತ್ತಿರಲಿಲ್ಲ. ಇರಲಿ ಎಂದು ಕರುಣೆ ತೋರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಚಿವ ಸ್ಥಾನ ನೀಡಿದ್ದಾರೆ ಎಂದು ಅವನು, ಇವನು ಅಂತಾ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು.

    ಅನಂತಕುಮಾರ್ ಹೆಗಡೆಗೆ ಸಚಿವ ಸ್ಥಾನ ನೀಡಿದ್ದಕ್ಕೆ ಅಮಿತ್ ಶಾ ಇಂದು ಪಶ್ಚಾತ್ತಾಪ ಪಡುತ್ತಿದ್ದಾರೆ. ಅಮಿತ್ ಶಾ ಬಿಸಿ ತುಪ್ಪವನ್ನು ಬಾಯಿಗೆ ಹಾಕಿಕೊಂಡಿದ್ದು, ನುಂಗುವ ಹಾಗಿಲ್ಲೂ ಇತ್ತ ಉಗುಳುವ ಹಾಗಿಲ್ಲ ಎಂಬ ಪರಿಸ್ಥಿತಿಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದ್ರು.

    ಅನಂತಕುಮಾರ್ ಹೆಗಡೆಗೆ ಹಿರಿಯರಿಗೆ ಗೌರವ ಕೊಡುವುದು ಗೊತ್ತಿಲ್ಲ. ಈ ಹಿಂದೆ ವೈದ್ಯರ ಮೇಲೆಯೂ ಹಲ್ಲೆ ನಡೆಸಿದ್ದು, ಎಲ್ಲರಿಗೂ ಗೊತ್ತಿದೆ. ಈ ಬಾರಿ ಚುನಾವಣೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ವಿರೋಧ ಮಾಡಿದ್ದರು. ಹಲವು ಬಾರಿ ಕಾಗೇರಿಯವರನ್ನು ಅವಮಾನಿಸಿದ್ದು, ಒಮ್ಮೆ ಚಪ್ಪಲಿಯಲ್ಲಿಯೇ ಹೊಡೆದಿದ್ದರು. ನಾನು ಕಂಡ ಅತ್ಯಂತ ನೀಚ ಸಂಸದ ಅನಂತಕುಮಾರ್ ಹೆಗಡೆ ಎಂದು ಅಸ್ನೋಟಿಕರ್ ಆಕ್ರೋಶ ಹೊರಹಾಕಿದರು.

  • ಪತ್ನಿ, ಮಕ್ಕಳಿಗೆ ಚಿಕನ್ ತಯಾರಿಸಿ ಉಣಬಡಿಸಿದ ಕಾರವಾರ ಶಾಸಕ ಸತೀಶ್ ಸೈಲ್

    ಪತ್ನಿ, ಮಕ್ಕಳಿಗೆ ಚಿಕನ್ ತಯಾರಿಸಿ ಉಣಬಡಿಸಿದ ಕಾರವಾರ ಶಾಸಕ ಸತೀಶ್ ಸೈಲ್

    ಕಾರವಾರ: ಒಂದೆಡೆ ಅಬ್ಬರದ ಪ್ರಚಾರ, ಸದಾ ತುಂಬಿ ತುಳುಕುತಿದ್ದ ಜನರ ಸಂತೆ, ಟೀಕೆ ಟಿಪ್ಪಣಿಗಳ ನಡುವೆ ತಾನು ಗೆಲ್ಲಬೇಕೆಂಬ ಹಂಬಲದಲ್ಲಿ ವಿಧಾನಸಭಾ ಚುನಾವಣೆಯ ರಂಗಿನ ರಣರಂಗದಲ್ಲಿ ಸದಾ ಬಿಸಿಯಾಗಿದ್ದ ಪ್ರತಿಷ್ಠಿತ ಕಣವಾದ ಕಾರವಾರ ವಿಧಾನಸಭಾ ಕ್ಷೇತ್ರದ ಮೂರು ಪಕ್ಷದ ನಾಯಕರು ಈಗ ರಿಲ್ಯಾಕ್ಸ್ ಮೂಡಿನಲ್ಲಿದ್ದಾರೆ.

    ಸದಾ ಜನರ ಮಧ್ಯೆ ಇರುವ ನಾಯಕರು ತಮ್ಮ ವೈಯಕ್ತಿಕ ಬದುಕಿಗೆ ಸಮಯ ಕೊಟ್ಟದ್ದು ಅಲ್ಪ ಸಮಯ. ಇದೇ ತಿಂಗಳ 15 ರಂದು ಫಲಿತಾಂಶದ ನಿರೀಕ್ಷೆಯಲ್ಲಿರುವ ಈ ನಾಯಕರು ಇಂದು ತಮ್ಮ ಒತ್ತಡವನ್ನು ಕಮ್ಮಿ ಮಾಡಿಕೊಳ್ಳಲು ಅಡುಗೆ ಮಾಡಿ ಕುಟುಂಬವರಿಗೆ ಬಡಿಸಿದ್ದಾರೆ.

    ಕಳೆದ ಎರಡು ತಿಂಗಳ ಚುನಾವಣಾ ಕುರುಕ್ಷೇತ್ರಕ್ಕೆ ಪೂರ್ಣ ವಿರಾಮ ಬಿದ್ದಿದೆ. ಇನ್ನು 15ನೇ ದಿನಾಂಕದಂದು ಜನರ ನಿರ್ಧಾರದ ಫಲಿತಾಂಶ ಬರಬೇಕಿದೆ. ತಾವು ಪಟ್ಟ ಶ್ರಮದ ನಿರೀಕ್ಷೆಯಲ್ಲಿ ನಾಯಕರು ಒತ್ತಡದಲ್ಲಿ ಇರೋದು ಸಹಜವಾಗಿದೆ. ತ್ರಿಕೋನ ಸ್ಪರ್ಧೆ ಇರುವ ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಹಾಲಿ ಪಕ್ಷೇತರ ಶಾಸಕ ಸತೀಶ್ ಸೈಲ್, ಜೆಡಿಎಸ್ ನಿಂದ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಮತ್ತು ಬಿಜೆಪಿಯಿಂದ ರೂಪಾಲಿ ನಾಯ್ಕ ಸ್ಪರ್ಧಿಸಿದ್ದರು.

    ಸದ್ಯ ಇಂದು ಮತ್ತು ನಾಳೆ ಮನಸ್ಸಿನಲ್ಲಿ ಅಳುಕು ಮತ್ತು ಒತ್ತಡ ಇದ್ದರು ಮೂವರು ಅಭ್ಯರ್ಥಿಗಳು ಈ ಒತ್ತಡ ಮರೆಯಲು ಹರಸಾಹಸ ಪಡುತಿದ್ದಾರೆ. ಕಳೆದ ಎರಡು ತಿಂಗಳಿಂದ ಕ್ಷೇತ್ರ ಸುತ್ತಿ ಪ್ರಚಾರ ನಡೆಸಿ ದಣಿದಿರುವ ಜೆಡಿಎಸ್ ಅಭ್ಯರ್ಥಿ ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಗೋವಾಕ್ಕೆ ತೆರಳಿ ರಿಲ್ಯಾಕ್ಸ್ ಮಾಡುತ್ತಿದ್ದು, ಅವರ ಅಧಿಕೃತ ನಿವಾಸ ಜನರಿಲ್ಲದೇ ಬಿಕೋ ಎನ್ನುತಿತ್ತು. ಒತ್ತಡ ಮರೆಯಲು ಜನರಿಂದ ದೂರ ವಿರಲು ಬಯಸಿರುವ ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ ಕಾರವಾರದ ಸೋನಾರವಾಡದಲ್ಲಿರುವ ಮನೆಯ ಮುಂಭಾಗಕ್ಕೆ ಬೀಗ ಹಾಕಿ ಒಳ ಸೇರಿದ್ದಾರೆ. ಮನೆಯ ಬಳಿ ಬಂದ ಜನರ ಸಂಪರ್ಕಕ್ಕೆ ಸಿಗಲಿಲ್ಲ.

    ಇನ್ನು ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಹಾಲಿ ಪಕ್ಷೇತರ ಶಾಸಕ ಸತೀಶ್ ಸೈಲ್ ರವರ ಮಾಜಾಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ಮನೆ ಕೂಡ ಯಾವುದೇ ಕಾರ್ಯಕರ್ತರ ಸದ್ದಿಲ್ಲದೇ ತಟಸ್ಥವಾಗಿತ್ತು. ಶಾಂತವಾಗಿದ್ದ ಮನೆಯಲ್ಲಿ ಸತೀಶ್ ಸೈಲ್ ಪತ್ನಿ ಕಲ್ಪನಾರೊಂದಿಗೆ ಅಡುಗೆ ಮನೆ ಸೇರಿ ಮಧ್ಯಾಹ್ನದ ಊಟಕ್ಕಾಗಿ ಚಿಕನ್ ತಯಾರಿಸಿದ್ದಾರೆ. ಅವರ ಕುಷಲೋಪರಿ ವಿಚಾರಿಸಲು ಬಂದವರಿಗೆ ತಮ್ಮ ಕೈಯಾರೆ ಟೀ ಮಾಡಿ ನೀಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ರಾಜಕೀಯ ಕ್ಷೇತ್ರಕ್ಕೆ ಬಂದಾಗಿನಿಂದ ಸಂಸಾರಕ್ಕೆ ಹೆಚ್ಚು ಸಮಯ ಕೊಡಲಾಗುತಿಲ್ಲ. ಮಕ್ಕಳೊಂದಿಗೆ ಬೆರೆಯದೇ ಎಷ್ಟೂ ದಿನಗಳಾಗಿವೆ. ಒಂದು ದಿನವಾದರೂ ನನ್ನ ಒತ್ತಡ ಮರೆತು ಮಕ್ಕಳು ಸಂಸಾರದೊಂದಿಗೆ ಬೆರೆಯಬೇಕೆಂದು ತೀರ್ಮಾನಿಸಿ ಜಂಜಾಟದಿಂದ ರಿಲಾಕ್ಸ್ ಮಾಡುತ್ತಿದ್ದೇನೆ ಎಂದು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.

    ನನ್ನ ತಂದೆ ಕ್ಯಾನ್ಸರ್ ನಿಂದ ತೀರಿಕೊಂಡರು. ಆಗ ಅವರಿಗೆ ಕ್ಯಾನ್ಸರ್ ಇದೇ ಎಂದು ತಿಳಿದುಕೊಳ್ಳವ ವೇಳೆ ಅವರು ನಮ್ಮನ್ನು ಅಗಲಿದ್ದರು. ಕಾರವಾರ ಕ್ಷೇತ್ರದಲ್ಲಿ ಕೈಗಾ ಅಣು ಸ್ಥಾವರ, ಆದಿತ್ಯ ಬಿರ್ಲಾ ಕೆಮಿಕಲ್ ಕಾರ್ಖಾನೆಗಳಿವೆ. ಇವುಗಳಿಂದ ಸಾಕಷ್ಟು ಜನರಿಗೆ ಕ್ಯಾನ್ಸರ್ ನಂತಹ ರೋಗಗಳು ಬಂದಿವೆ. ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆ ವ್ಯವಸ್ಥೆ ಸರಿಯಾಗಿ ಇಲ್ಲ. ನನ್ನ ಅವಧಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಮಾಡಿಸುವ ಪ್ರಯತ್ನ ಮಾಡಿದ್ದೇನೆ. ಈಗ ಅದು ಸಫಲವಾಗಿದೆ ಎಂದು ತಮ್ಮ ತಂದೆಯನ್ನು ನೆನೆದು ಭಾವುಕರಾದ್ರು.

    ನನ್ನ ಕ್ಷೇತ್ರದ ಜನರಿಗೆ ಉದ್ಯೋಗ ಇಲ್ಲಿಯೇ ಸಿಗುವಂತೆ ಮಾಡಬೇಕು. ಅದಕ್ಕಾಗಿ ಈ ಬಾರಿ ಚುನಾವಣಾ ಕಣದಲ್ಲಿದ್ದೇನೆ. ನನ್ನ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿರುವೆ ಎಂದು ನಾಲ್ಕು ವರ್ಷದ ತಮ್ಮ ಸಾಧನೆಯ ಬಗ್ಗೆ ಮನದ ಮಾತು ಹಂಚಿಕೊಂಡ್ರು. ಕಾರವಾರ ಕ್ಷೇತ್ರದ ಮೂರು ಪಕ್ಷದ ಅಭ್ಯರ್ಥಿಗಳು ಇಂದು ಜನರ, ಕಾರ್ಯಕರ್ತರ ಜಂಜಾಟದಿಂದ ದೂರ ಉಳಿದು ತಮ್ಮ ದಣಿವನ್ನು ನೀಗಿಸಿಕೊಂಡಿದ್ದು, 15ರ ಅಗ್ನಿ ಪರೀಕ್ಷೆಗೆ ರಿಫ್ರೆಶ್ ಆಗುತ್ತಿದ್ದಾರೆ.

  • ಬಿಎಸ್‍ವೈ ಬಿಜೆಪಿಯಲ್ಲಿ ರಬ್ಬರ್ ಸ್ಟಾಂಪ್- ಉತ್ತರ ಕನ್ನಡ ಅಭಿವೃದ್ಧಿಗೆ ಜೆಡಿಎಸ್ ಸೇರ್ಪಡೆ: ಆನಂದ್ ಅಸ್ನೋಟಿಕರ್

    ಬಿಎಸ್‍ವೈ ಬಿಜೆಪಿಯಲ್ಲಿ ರಬ್ಬರ್ ಸ್ಟಾಂಪ್- ಉತ್ತರ ಕನ್ನಡ ಅಭಿವೃದ್ಧಿಗೆ ಜೆಡಿಎಸ್ ಸೇರ್ಪಡೆ: ಆನಂದ್ ಅಸ್ನೋಟಿಕರ್

    ಬೆಂಗಳೂರು: ಯಡಿಯೂರಪ್ಪ ಅವರು ಬಿಜೆಪಿಯಲ್ಲಿ ರಬ್ಬರ್ ಸ್ಟ್ಯಾಂಪ್ ಆಗಿದ್ದಾರೆ ಎಂದು ಆನಂದ್ ಅಸ್ನೋಟಿಕರ್ ಹೇಳಿದ್ದಾರೆ.

    ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸಮ್ಮುಖದಲ್ಲಿ ನಗರದ ಪದ್ಮನಾಭನಗರ ನಿವಾಸದಲ್ಲಿ ಆನಂದ್ ಅಸ್ನೋಟಿಕರ್ ಜೆಡಿಎಸ್ ಸೇರ್ಪಡೆಯಾದರು.

    ಜೆಡಿಎಸ್‍ಗೆ ಸೇರ್ಪಡೆಯಾದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ನಾಯಕರು ಸ್ಥಳೀಯ ಸಮಸ್ಯೆಗಳಿಗೆ ಸ್ಪಂದನೆ ನೀಡುತ್ತಿಲ್ಲ. ಏನೇ ಕೇಳಿದರು ಅಮಿತ್ ಶಾ ಎಂಬುದಾಗಿ ಉತ್ತರ ನೀಡುತ್ತಾರೆ ಎಂದು ಆರೋಪಿಸಿದರು.

    ನಮ್ಮ ಜಿಲ್ಲೆಯಲ್ಲೂ ಐದು ಬಾರಿ ಸಂಸದರಾಗಿ ಆಯ್ಕೆಯಾದ ನಾಯಕರು ಇದ್ದಾರೆ. ಆದರೆ ಅವರಿಂದ ಜಿಲ್ಲೆಗೆ ಯಾವುದೇ ಪ್ರಯೋಜನ ಆಗಿಲ್ಲ. ಸಂಸದ ಅನಂತ್‍ಕುಮಾರ್ ಅವರು ಜಿಲ್ಲೆಯಲ್ಲಿ ಹಿಡಿತ ಸಾಧಿಸಿದ್ದಾರೆ. ಬೇರೆ ಯಾವ ನಾಯಕರು ಬೆಳವಣಿಗೆ ಹೊಂದಲು ಸಾಧ್ಯವಿಲ್ಲ. ರಾಜ್ಯದಲ್ಲೂ ಬಿಎಸ್‍ವೈ ಹಾಗೂ ಶೋಭಾ ಕರಂದ್ಲಾಜೆ, ಅನಂತಕುಮಾರ್ ಮಾತ್ರ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು ಇತರೇ ನಾಯಕರನ್ನು ಮೂಲೆ ಗುಂಪು ಮಾಡಲಾಗುತ್ತಿದೆ ಎಂದು ದೂರಿದರು.

    ನಮ್ಮದು ಹಿಂದುಳಿದ ಜಿಲ್ಲೆಯಾಗಿದ್ದು, ಪ್ರಸ್ತುತ ಶಾಂತಿ ಪ್ರಿಯ ಜಿಲ್ಲೆಯಲ್ಲಿ ಕೋಮು ಗಲಾಟೆ ನಡೆಯುತ್ತಿದೆ. ನಮ್ಮ ಜಿಲ್ಲೆ ಅಭಿವೃದ್ಧಿಯಾಗಿಲ್ಲ. ಉತ್ತರ ಕನ್ನಡ ಜಿಲ್ಲೆ ಅಭಿವೃದ್ಧಿ ಮಾಡಿಸುವ ಸಲುವಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದರು.

    2013 ರ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ನಂತರ ಅಸ್ನೋಟಿಕರ್ ಕಾಣೆಯಾಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಕಾಣೆಯಾಗಿಲ್ಲ ನಿರಂತರವಾಗಿ ಕಳೆದ ಐದು ವರ್ಷ ಕ್ಷೇತ್ರದ ಜನರ ಜೊತೆ ಸಂಪರ್ಕದಲ್ಲಿ ಇದ್ದು, ಜನರ ಸಮಸ್ಯೆಗಳನ್ನು ನೋಡಿದ್ದೇನೆ. ಈ ಹಿಂದಿನಿಂದಲೂ ಸ್ವಾಭಿಮಾನದಿಂದ ರಾಜಕೀಯ ಮಾಡಿಕೊಂಡು ಬಂದಿದ್ದೇವೆ. ಬಿಜೆಪಿಯಲ್ಲಿ ಬಹಳಷ್ಟು ನೋವು ಕೊಟ್ಟರು. ಬಹಳ ನೋವಾಗಿದೆ. ಹೀಗಾಗಿ ನಮ್ಮ ಜನರ ಆಪೇಕ್ಷೆ ಮೇರೆಗೆ ಪ್ರಾದೇಶಿಕ ಪಕ್ಷ ಜೆಡಿಎಸ್ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷದ ಅಗತ್ಯವಿದ್ದು, ರಾಜ್ಯಕ್ಕೆ ಕುಮಾರಸ್ವಾಮಿ ಅವರ ಕೊಡುಗೆ ಅಪಾರವಿದೆ. ಅವರ ಆಡಳಿತದಲ್ಲಿ ಉತ್ತಮ ಕಾರ್ಯಗಳು ನಡೆಯಲಿದೆ ಎಂದರು.

    ಇದೇ ವೇಳೆ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ ಅವರು, ಈ ಹಿಂದೆ ಶಾಸಕನಾಗಿ ಆಯ್ಕೆಯಾದ 40 ದಿನಗಳಲ್ಲಿ ರಾಜೀನಾಮೆ ನೀಡಿ ಪಕ್ಷಕ್ಕೆ ಬೆಂಬಲ ನೀಡಿದೆ. ಆದರೆ ನಮ್ಮನ್ನು ಇಂದು ವಿಚಾರ ಮಾಡುವವರು ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಅನಂತ್ ಕುಮಾರ್ ಅವರನ್ನು ಎದುರಿಸಲಾಗದೆ ಪಕ್ಷ ತೊರೆಯುತ್ತಿದ್ದಾರೆ ಎಂಬ ಆರೋಪವನ್ನು ಉತ್ತರಿಸಿದ ಅವರು, ಅನಂತ್ ಕುಮಾರ್ ಅವರನ್ನು ಯಾರು ಎದುರಿಸಲು ಸಾಧ್ಯವಿಲ್ಲ. ಅವರು ವಿರುದ್ಧ ಮಾತಾಡುವುದು ನಮ್ಮ ತಪ್ಪಾಗುತ್ತದೆ. ಈ ಕುರಿತು ಹೆಚ್ಚು ಮಾತನಾಡುವುದಿಲ್ಲ ಎಂದು ತಿಳಿಸಿದರು.

    ದೇವೇಗೌಡರು ಮಾತನಾಡಿ ಸಂಕ್ರಾಂತಿಯ ಶುಭ ದಿನ ಆನಂದ್ ಆಸ್ನೋಟಿಕ್ ಪಕ್ಷ ಸೇರ್ಪಡೆಯಾಗಿದ್ದಾರೆ. ಅವರು ಪಕ್ಷಕ್ಕೆ ಸೇರ್ಪಡೆಯಾಗಿರುವುದು ಉತ್ತರ ಕನ್ನಡ ಭಾಗದಲ್ಲಿ ಪಕ್ಷಕ್ಕೆ ಹೆಚ್ಚು ಶಕ್ತಿ ತುಂಬಿದೆ. ಉತ್ತರ ಕನ್ನಡ ಭಾಗದಲ್ಲಿ 4-5 ಸ್ಥಾನ ಗಳಿಸುವ ವಿಶ್ವಾಸ ಎಂದರು.

    ಕುಮಾರಸ್ವಾಮಿ ಮಾತನಾಡಿ ಆಸ್ನೋಟಿಕರ್ ರಂತಹ ಹಲವು ನಾಯಕರು ಬೇರೆ ಬೇರೆ ಪಕ್ಷದಿಂದ ಮುಂದಿನ ದಿನಗಳಲ್ಲಿ ನಮ್ಮ ಪಕ್ಷ ಸೇರ್ಪಡೆಯಾಗಲಿದ್ದು, ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ 113 ಸ್ಥಾನಗಳಿಸಿ ಸರ್ಕಾರ ರಚನೆ ಮಾಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.