Tag: anand sing

  • ಬಿಜೆಪಿ, ಕಾಂಗ್ರೆಸ್, ಹೆಣ್ಣು-ಗಂಡೆಂಬ ಭೇದ ಕೊರೊನಾಗೆ ಇಲ್ಲ: ಆನಂದ್ ಸಿಂಗ್

    ಬಿಜೆಪಿ, ಕಾಂಗ್ರೆಸ್, ಹೆಣ್ಣು-ಗಂಡೆಂಬ ಭೇದ ಕೊರೊನಾಗೆ ಇಲ್ಲ: ಆನಂದ್ ಸಿಂಗ್

    ಬಳ್ಳಾರಿ (ವಿಜಯನಗರ): ಬಿಜೆಪಿ, ಕಾಂಗ್ರೆಸ್, ಹೆಣ್ಣು-ಗಂಡೆಂಬ ಭೇದ ಕೊರೊನಾಗೆ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ವ್ಯಂಗ್ಯವಾಡಿದರು.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಏನಾದರೂ ಹೇಳಿ ಕೇಳಿ ಬರುತ್ತಾ? ಕಾಂಗ್ರೆಸ್ ಪಾದಯಾತ್ರೆ ಇದೆ, ಆ ಮೇಲೆ ಬರುತ್ತೇನೆ ಅಂತ ಏನಾದರೂ ಹೇಳಿ ಬರುತ್ತಾ. ಎಲುಬಿಲ್ಲದ ನಾಲಿಗೆ ಏನೇನೋ ಮಾತನಾಡುತ್ತದೆ. ಕಾಂಗ್ರೆಸ್ ನಾಯಕರು ಪಾದಯಾತ್ರೆ ತಡೆಯಲು ಬಿಜೆಪಿ ಸರ್ಕಾರ ವೀಕೆಂಡ್ ಕಫ್ರ್ಯೂ ಹೇರಿದೆ ಅಂತ ಆರೋಪ ಮಾಡುತ್ತಿದ್ದಾರೆ. ಆದರೆ ಅಕ್ಕ-ಪಕ್ಕದ ರಾಜ್ಯಗಳಲ್ಲಿ ಈಗಾಗಲೇ ಲಾಕ್‍ಡೌನ್ ಆಗಿದೆ ಎಂದರು. ಇದನ್ನೂ ಓದಿ: ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ: ಬಿಜೆಪಿ ವ್ಯಂಗ್ಯ

    ಕೊರೊನಾ ಪ್ರಕರಣಗಳನ್ನು ನೋಡಿಕೊಂಡು ಸರ್ಕಾರ ಆದೇಶ ಮಾಡಿದೆ. ವಿನಾ: ಕಾರಣ ನಮ್ಮ ಮೇಲೆ ಆರೋಪ ಮಾಡೋದು ಸರಿಯಲ್ಲ. ಸುತ್ತಮುತ್ತಲೀನ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಹೇಗಿವೆ ಅಂತ ನೋಡಿ. ಕೈ ಪಕ್ಷದವರು ಮೇಕೆದಾಟು ಪಾದಯಾತ್ರೆಗೆ ಮೊದಲೇ ನಾವು ದಿನಾಂಕ ನಿಗದಿ ಮಾಡಿದ್ದು, ಆ ನಂತರ ಬಿಜೆಪಿ ಪಕ್ಷ ವೀಕೆಂಡ್ ಕಫ್ರ್ಯೂ ಹಾಕಿದೆ ಅಂತ ಆರೋಪ ಮಾಡುತ್ತಾರೆ. ನಾವು ನಿಯಮ ಪಾಲನೆ ಮಾಡುತ್ತಿದ್ದೇವೆ ಅನ್ನುತ್ತಿದ್ದಾರೆ. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೆ ಆಯಾ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಸರ್ಕಾರ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ: ಸಿದ್ದರಾಮಯ್ಯ ಕಿಡಿ

    ಸರ್ಕಾರದ ಆದೇಶ ಉಲ್ಲಂಘನೆ ಮಾಡಿದರೆ ಕ್ರಮ ಗ್ಯಾರಂಟಿ ಕೈ ಗೊಳ್ಳುತ್ತೇವೆ. ಕಾಂಗ್ರೆಸ್‍ನಲ್ಲಿ (ಸಿಎಲ್ಪಿ) ನಾಯಕರಿದ್ದು, ಹಿರಿಯರೂ ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು.

  • `ಕೈ’ ಹಿಡಿದ ಆನಂದ್ ಸಿಂಗ್ ಮತ್ತು ಟೀಂ- ಮತ್ತಷ್ಟು ಬಿಜೆಪಿ ಶಾಸಕರು ಕಾಂಗ್ರೆಸ್ಸಿಗಂತೆ!

    `ಕೈ’ ಹಿಡಿದ ಆನಂದ್ ಸಿಂಗ್ ಮತ್ತು ಟೀಂ- ಮತ್ತಷ್ಟು ಬಿಜೆಪಿ ಶಾಸಕರು ಕಾಂಗ್ರೆಸ್ಸಿಗಂತೆ!

    ಬೆಂಗಳೂರು: ಬಿಜೆಪಿ ತೊರೆದಿದ್ದ ಮಾಜಿ ಶಾಸಕ ಆನಂದ್ ಸಿಂಗ್ ಅವರು ಇಂದು ನಗರದ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಅಧ್ಯಕ್ಷ ಪರಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

    ಕಾಂಗ್ರೆಸ್ ಬಾವುಟವನ್ನು ಆನಂದ್ ಸಿಂಗ್ ಅವರಿಗೆ ನೀಡುವ ಮೂಲಕ ಪರಮೇಶ್ವರ್ ಅವರು ತಮ್ಮ ಪಕ್ಷಕ್ಕೆ ಬರಮಾಡಿಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಗ್, ನಾನು ಎರಡು ಬಾರಿ ಬಿಜೆಪಿಯಿಂದ ಶಾಸಕನಾಗಿ ಆಯ್ಕೆಯಾಗಿದ್ದೆ. ನಾನು ಸೆಕ್ಯೂಲರ್ ಮೆಂಟಾಲಿಟಿಯವನು. ನನ್ನದು ಸರ್ವರಿಗೂ ಸಮಪಾಲು ಸಮಬಾಳು ತತ್ವ. ಬಳ್ಳಾರಿಯಲ್ಲಿ ನಾವು 9ಕ್ಕೆ 9 ಸ್ಥಾನಗಳನ್ನು ಗೆಲ್ಲುತ್ತೇವೆ. ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೆ ಅಂತ ಹೇಳಿದ್ರು.

    ರಾಹುಲ್ ಗಾಂಧಿ 10 ರಂದು ಹೊಸಪೇಟೆಗೆ ಬರುತ್ತಾರೆ. ಯಾರೂ ಕಂಡರಿಯದಂತೆ ಆ ಕಾರ್ಯಕ್ರಮ ಮಾಡುತ್ತೇವೆ. ಮುಂದೆ ಕೂಡ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಮತ್ತಷ್ಟು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಅಂದ್ರು.

    ಆನಂದ್ ಸಿಂಗ್ ಸೇರ್ಪಡೆಗೆ ರಾಹುಲ್ ಗಾಂಧಿ ಸಮ್ಮತಿ ನೀಡಿದ್ದಾರೆ. ಹೊಸಪೇಟೆ ಕ್ಷೇತ್ರದ ಆನಂದ್ ಸಿಂಗ್ ಕ್ರಿಯಾಶೀಲ ಶಾಸಕರಾಗಿದ್ದಾರೆ. ಅನೇಕ ಜನಪರ ಕೆಲಸ ಮಾಡಿದ್ದಾರೆ. ಅವರೊಬ್ಬ ಪ್ರಭಾವಿ ನಾಯಕರಾಗಿ ಹೊರಹೊಮ್ಮಿದ್ದಾರೆ. ಅವರನ್ನು ಸಂತೋಷದಿಂದ ಕಾಂಗ್ರೆಸ್ ಪಕ್ಷಕ್ಕೆ ಬರ ಮಾಡಿಕೊಳ್ಳುತ್ತಿದ್ದೇವೆ ಅಂತ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.

    ಈಗಾಗಲೇ ಹಲವು ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಆನಂದ್ ಸಿಂಗ್ ರಂತೆ ಅವರೂ ಪಕ್ಷಕ್ಕೆ ಬರಲಿದ್ದಾರೆ. ವಿಜಯನಗರದ ಹೊಸ ಪೀಳಿಗೆ ಕಾಂಗ್ರೆಸ್‍ಗೆ ಕಾಲಿಟ್ಟಿದೆ. ವಿಜಯನಗರದ ಸೈನ್ಯ ಈಗ ಕಾಂಗ್ರೆಸ್ ಪರ ಪ್ರಚಾರ ಮಾಡಲಿದೆ. ನೀವು ಒಗ್ಗಟ್ಟಿನ ಪ್ರದರ್ಶನ ಮಾಡಬೇಕು. ನಿಮ್ಮ ಶಕ್ತಿ ಪ್ರದರ್ಶನವನ್ನ ರಾಹುಲ್ ಕಾರ್ಯಕ್ರಮದಲ್ಲಿ ತೋರಿಸಿ ಅಂತ ಸಚಿವ ಡಿ ಕೆ ಶಿವಕುಮಾರ್ ಹೇಳಿದರು.

    ಆನಂದ್ ಸಿಂಗ್ ಜೊತೆ ಅವರ ಅನೇಕ ಬೆಂಬಲಿಗರು ಕೂಡ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್, ಎಸ್.ಆರ್.ಪಾಟೀಲ್ ಸಂತೋಷ್ ಲಾಡ್, ಕೆ.ಸಿ.ಕೊಂಡಯ್ಯ ಉಪಸ್ಥಿತರಿದ್ದರು.

    ಬಿಜೆಪಿ ತೊರೆಯಲು ಕಾರಣವೇನು?: ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ಹೊಸಪೇಟೆಯಲ್ಲಿ ನಡೆದ ಸರ್ಕಾರದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಆನಂದ್ ಸಿಂಗ್ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಮಾತ್ರವಲ್ಲದೇ ಅದನ್ನು ಬಹಿರಂಗವಾಗಿ ಸಮರ್ಥನೆ ಕೂಡ ಮಾಡಿಕೊಂಡಿದ್ದರು. ಇದು ಬಿಜೆಪಿಯವರನ್ನು ಮುಜುಗರಕ್ಕೀಡು ಮಾಡಿತ್ತು. ಹೀಗಾಗಿ ಈ ಕುರಿತು 7 ದಿನಗಳಲ್ಲಿ ವಿವರಣೆ ನೀಡುವಂತೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಶಂಕರಪ್ಪ ಅವರು ಶೋಕಾಸ್ ನೊಟೀಸ್ ಜಾರಿ ಮಾಡಿದ್ದರು. ಇದರಿಂದ ಬೇಸರಗೊಂಡ ಆನಂದ್ ಸಿಂಗ್ ಬಿಜೆಪಿ ತೊರೆಯಲು ನಿರ್ಧರಿಸಿದ್ದು, ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

    https://www.youtube.com/watch?v=UM7pzm4jbzU

    https://www.youtube.com/watch?v=oYObRLHynu4