Tag: anant kumar hegade

  • ಪ್ರಜಾಪ್ರಭುತ್ವಕ್ಕೆ ವಿರೋಧ ಪಕ್ಷ ಬೇಕು, ದೇಶದ್ರೋಹಿಗಳ ವಿರೋಧ ಪಕ್ಷವಲ್ಲ: ಅನಂತ್ ಕುಮಾರ್ ಹೆಗಡೆ

    ಪ್ರಜಾಪ್ರಭುತ್ವಕ್ಕೆ ವಿರೋಧ ಪಕ್ಷ ಬೇಕು, ದೇಶದ್ರೋಹಿಗಳ ವಿರೋಧ ಪಕ್ಷವಲ್ಲ: ಅನಂತ್ ಕುಮಾರ್ ಹೆಗಡೆ

    ಕಾರವಾರ: ಪ್ರಜಾಪ್ರಭುತ್ವಕ್ಕೆ ವಿರೋಧ ಪಕ್ಷ ಬೇಕೇ ಹೊರತು ದೇಶದ್ರೋಹಿಗಳ ವಿರೋಧ ಪಕ್ಷವಲ್ಲ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ (Anant Kumar Hegade) ಕಾಂಗ್ರೆಸ್ (Congress) ವಿರುದ್ಧ ಕಿಡಿಕಾರಿದ್ದಾರೆ.

    ಇಂದು ಸಿದ್ದಾಪುರ ತಾಲೂಕಿನ ಕಾನಸೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ಭಗವಂತನ ಇಚ್ಛೆ. ಇವತ್ತು ದೇಶದಲ್ಲಿ ಏನು ನಡೆಯುತ್ತಿದೆಯೋ ಅವೆಲ್ಲವೂ ಭಗವಂತನ ಇಚ್ಛೆ. ನಾವು ತೀರ್ಮಾನ ಮಾಡಿದ್ದೇನೂ ಇಲ್ಲ, ಜಗತ್ತಿಗೆ ಈ ಭಾರತ ಬೇಕು. ದೇಶಕ್ಕೆ ಬಿಜೆಪಿ (BJP) ಬೇಕು ಎಂದರು.

    ಒಮ್ಮೆ ಗೆದ್ದರೆ ಸಾಕಾಗೋದಿಲ್ಲ ಅಂತಿಮದ ತನಕ ನಾವೇ ಗೆಲ್ಲುತ್ತಿರಬೇಕು. ಏನದು ಅಂತಿಮ ಗೆಲುವು ಎಂದರೆ ನಮ್ಮ ಗೆಲುವು, ನಮ್ಮ ಗುರಿ ಹಿಂದೂರಾಷ್ಟ್ರ ಎಂದ ಅವರು ಮುಂದೆ ಎಲ್ಲವೂ ಸರಿಹೋಗುತ್ತದೆ. ಜಾತಿ ಧರ್ಮ ಅದು ಇದು, ವ್ಯವಸ್ಥೆ ಸಹ ಸರಿ ಹೋಗುತ್ತೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.  ಇದನ್ನೂ ಓದಿ: ಅನಂತ್‌ಕುಮಾರ್ ಹೆಗಡೆ ಒಬ್ಬ ಹುಚ್ಚ: ಮಧು ಬಂಗಾರಪ್ಪ

    ಪ್ರಜಾಪ್ರಭುತ್ವಕ್ಕೆ ವಿರೋಧ ಪಕ್ಷ ಬೇಕು, ದೇಶದ್ರೋಹಿಗಳ ವಿರೋಧ ಪಕ್ಷವಲ್ಲ. ಲಾಲ್ ಬಹದ್ದೂರ್ ಶಾಸ್ತ್ರಿ ಕೊಲೆ ನಂತರ 15 ದಿವಸದ ನಂತರ ಜಹಂಗೀರ್ ಬಾಬ ಹತ್ಯೆಯಾಯಿತು. ಸಾರಾಬಾಯಿ ಕೊಲೆಯಾಯಿತು. ಇದ್ಯಾವುದೂ ಸಾವಲ್ಲ, ನನ್ನ ಶಬ್ಧದಲ್ಲಿ ಸ್ಪಷ್ಟತೆ ಇದೆ. ಇಂತಹ ಘಟನೆಗಳು ಸರಣಿ ಸರಣಿಯಲ್ಲಿ ನಮ್ಮ ದೇಶದಲ್ಲಿ ನಡೆದಿದೆ. ಈ ದೇಶವನ್ನು ಮುಗಿಸಬೇಕು ಎಂದು ಸಂಚು ನಡೆದಿತ್ತು ಎಂದು ಹಿಂದಿನ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

  • ಮೂರ್ಖರಿಗೆ ಜನರು ಚಪ್ಪಾಳೆ ತಟ್ಟಬಾರದು- ಅನಂತ್ ಕುಮಾರ್ ವಿರುದ್ಧ ಸಿಎಂ ಕಿಡಿ

    ಮೂರ್ಖರಿಗೆ ಜನರು ಚಪ್ಪಾಳೆ ತಟ್ಟಬಾರದು- ಅನಂತ್ ಕುಮಾರ್ ವಿರುದ್ಧ ಸಿಎಂ ಕಿಡಿ

    ಬೆಳಗಾವಿ: `ಅವನೊಬ್ಬ ಮೂರ್ಖ’ ಅಂತ ಏಕವಚನದಲ್ಲೇ ಸಂಸದ ಅನಂತ್ ಕುಮಾರ್ ಹೆಗಡೆ (Anant Kumar Hegade) ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.

    ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಕ್ರಾತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, ರಾಯಣ್ಣನ ದೇಶಪ್ರೇಮ, ದೇಶಭಕ್ತಿ ಬೆಳೆಸಿಕೊಳ್ಳಬೇಕು. ಪರಸ್ಪರರು ದ್ವೇಷ ಮಾಡಬಾರದು, ಪ್ರೀತಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಅವನೊಬ್ಬ ಮೂರ್ಖ ಮಸೀದಿ ದ್ವಂಸಗೊಳಿಸಿ ದೇವಸ್ಥಾನ ಕಟ್ಟಿಸುವುದಾಗಿ ಹೇಳಿಕೆ ನೀಡಿದ್ದಾನೆ. ಈ ಹಿಂದೆ ಆದ ಸಣ್ಣ ತಪ್ಪಿನಿಂದ ಆಗಿದ್ದನ್ನೇ ಈಗ ಕೆದಕುತ್ತಿದ್ದಾರೆ. ಇಂತಹ ಮೂರ್ಖರಿಗೆ ಜನರು ಚಪ್ಪಾಳೆ ತಟ್ಟುತ್ತಾರೆ, ಆದರೆ ಇಂಥವರಿಗೆ ಚಪ್ಪಾಳೆ ತಟ್ಟಬಾರದು ಎಂದು ವಾಗ್ದಾಳಿ ನಡೆಸಿದರು.

    ಗ್ಯಾರಂಟಿ ಯೋಜನೆ ಜಾರಿಯಾಗಲ್ಲ ಎಂದಿದ್ರು, ನಾವು ಯೋಜನೆ ಜಾರಿಗೆ ತಂದಿದ್ದೇವೆ. ರಾಜ್ಯ ಆರ್ಥಿಕವಾಗಿಯೂ ಸದೃಢವಾಗಿದೆ. ಗ್ಯಾರಂಟಿ ಯೋಜನೆ ಜಾರಿ ಜೊತೆಗೆ ರಾಜ್ಯದ ಅಭಿವೃದ್ಧಿಯನ್ನೂ ಮಾಡುತ್ತೇವೆ ಎಂದು ಹೇಳುವ ಮೂಲಕ ರಾಜ್ಯ ದಿವಾಳಿ ಆಗಿದೆ ಎನ್ನುತ್ತಿರುವ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ‌ ಟ್ರಕ್‌ ಅಗ್ನಿಗಾಹುತಿ!

    ರಾಜ್ಯದ ಜನರ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಎಲ್ಲ ಧರ್ಮಿಯರಿಗೂ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದೇವೆ. ನಂದಗಡದ ಮ್ಯೂಸಿಯಂ ನಿರ್ಮಾಣಕ್ಕೆ ಕೂಡ ಶೀಘ್ರವೇ ಆದ್ಯತೆ ನೀಡುತ್ತೇವೆ ಎಂದರು.

  • ನಿಮ್ಮ ತಲೆಯನ್ನೇ ತೆಗೆಯುವ ಸಂತಾನದವರು ನಾವು: ಅನಂತ್‌ ಕುಮಾರ್ ಹೆಗಡೆ ಮತ್ತೆ ಕಿಡಿ

    ನಿಮ್ಮ ತಲೆಯನ್ನೇ ತೆಗೆಯುವ ಸಂತಾನದವರು ನಾವು: ಅನಂತ್‌ ಕುಮಾರ್ ಹೆಗಡೆ ಮತ್ತೆ ಕಿಡಿ

    ಕಾರವಾರ: ಒಂದು ಕಪಾಲಿಗೆ (ಕಪಾಳ) ಹೊಡೆದರೇ ಇನ್ನೊಂದು ಕಪಾಲು ತೋರಿಸುವ ಸಂತಾನ ನಮ್ಮದಲ್ಲ, ಒಂದು ಕಪಾಲು ಹೊಡೆದರೇ ನಿಮ್ಮ ತಲೆಯನ್ನೇ ತೆಗೆಯುವ ಸಂತಾನದವರು ನಾವು. ನಮ್ಮದು ವೀರ ಸಂತಾನ, ಹೇಡಿಗಳ ಸಂತಾನ ಅಲ್ಲ ಎಂದು ಮತ್ತೆ ಸಿಎಂ ವಿರುದ್ಧ ಸಂಸದ ಅನಂತ್‌ ಕುಮಾರ್ ಹೆಗಡೆ (Anant Kumar Hegade) ಕಿಡಿಕಾರಿದ್ದಾರೆ.

    ಉತ್ತರ ಕನ್ನಡ (Uttara Kannada) ಜಿಲ್ಲೆಯ ದಾಂಡೇಲಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮಮ್ಮ ತನ್ನ ಎದೆಹಾಲು ಕುಡಿಸಿ ಬೆಳೆಸಿದ್ದು, ಬೇವರ್ಸಿ ಹಾಲನ್ನಲ್ಲ. ತಾಯಿ ಹಾಲು ಕುಡಿದಿದ್ದಕ್ಕೆ ಗಂಡುಭಾಷೆ ಜನ್ಮದಿಂದ ಬಂದಿದೆ. ಏಕವಚನದಲ್ಲಿ ನೀವು ಮಾತನಾಡಿದ್ರೆ ನಾವೂ ಏಕವಚನದಲ್ಲಿ ಮಾತನಾಡುತ್ತೀವಿ. ಸಿದ್ದರಾಮಯ್ಯನವರೇ ನೀವು ಸಭ್ಯತೆ ಬಗ್ಗೆ ಕಲಿತುಕೊಳ್ಳಿ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಹಿಂದೂ ಸಮಾಜ ಅಂದ್ರೆ ಬೇವರ್ಸಿ ಸಮಾಜಾನಾ?: ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಅನಂತ್ ಕುಮಾರ್ ಹೆಗಡೆ

    ವಿಧಾನಸಭೆಯಲ್ಲಿ ನೀವು ಶಾಸಕರಿಗೆ, ಪತ್ರಕರ್ತರಿಗೆ ಯಾವ ರೀತಿ ಏಕವಚನದಲ್ಲಿ ಮಾತನಾಡುತ್ತೀರಿ. ನಮ್ಮ ಹತ್ರ ತಾಕತ್ ಇಲ್ವಾ ನಮಗೆ ಮಾತನಾಡಲು ಬರೋದಿಲ್ವ?. ಟಿವಿಯಲ್ಲಿ ಚರ್ಚೆ ನಡಿಯುತ್ತಿದೆ, ನಡೀಲಿ. ಈಶ್ವರನಿಗೆ ರುದ್ರಾಭಿಶೇಕ ನಡೆಯುತ್ತಿದೆ, ನಡೆಯಲಿ. ಸ್ವಾಭಿಮಾನಕ್ಕೆ ಧಕ್ಕೆ ಬಂದ್ರೆ ಸುಮ್ಮನಿರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

    ಜೀವ ಇರೋ ತನಕ ತಲೆ ತಗ್ಗಿಸಲು ಸಾಧ್ಯವಿಲ್ಲ. ನಾನೇನಾದ್ರು ತಲೆ ತಗ್ಗಿಸಿದ್ರೆ ನೀವು ಹಾಕಿದ ವೋಟಿಗೆ ಅಪಮಾನ, ಯಾರು ಕುಣಿತಾರೋ ಕುಣಿದುಕೊಂಡು ಹೋಗಲಿ. ತಾಂಡವ ನೃತ್ಯ ನಮ್ಮವರಿಗೂ ಬರುತ್ತೆ ಎಂದು ಮತ್ತೆ ವಿವಾದ ಕಿಡಿ ಹೊತ್ತಿಸಿದ್ರು.