Tag: ananth kumar hegade

  • ಅನಂತ್‌ ಕುಮಾರ್‌, ಸಿದ್ದರಾಮಯ್ಯ ಕಾಲಿನ ಧೂಳಿಗೂ ಸಮನಲ್ಲ: ತಂಗಡಗಿ ವಾಗ್ದಾಳಿ

    ಅನಂತ್‌ ಕುಮಾರ್‌, ಸಿದ್ದರಾಮಯ್ಯ ಕಾಲಿನ ಧೂಳಿಗೂ ಸಮನಲ್ಲ: ತಂಗಡಗಿ ವಾಗ್ದಾಳಿ

    ಕೊಪ್ಪಳ: ಸಿಎಂ ಸಿದ್ದರಾಮಯ್ಯ (Siddaramaiah) ಮುಂದೆ ಸಂಸದ ಅನಂತ್ ಕುಮಾರ್‌ ಹೆಗಡೆ (Ananth Kumar Hegade) ಪುಟಗೋಸಿಗೆ ಸಮನಲ್ಲ. ಸಿದ್ದರಾಮಯ್ಯ, ಕಾಂಗ್ರೆಸ್ ಬಗ್ಗೆ ಮಾತನಾಡುವ ನಿಮ್ಮಂಥ ನಾಯಿಗಳಿಗೆ ನಾನು ಅಲ್ಲಿಗೆ ಬಂದು ಉತ್ತರ ಕೊಡಬೇಕಾಗುತ್ತೆ ಮಗನೆ ಎಂದು ಸಚಿವ ಶಿವರಾಜ್‌ ತಂಗಡಗಿ (Shivaraj Tangadagi) ಏಕವಚನದಲ್ಲಿಯೇ ತಿರುಗೇಟು ನೀಡಿದ್ದಾರೆ.

    ಕೊಪ್ಪಳ (Koppal) ಜಿಲ್ಲೆ ಕಾರಟಗಿ ಪಟ್ಟಣದಲ್ಲಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ, ಅನಂತ್‌ ಕುಮಾರ್‌ಗೆ ಅವನದೇ ಭಾಷೆಯಲ್ಲಿ ಉತ್ತರ ಕೊಡಲು ನನಗೂ ಬರುತ್ತೆ.‌ ಆದರೆ ನನ್ನ ಹಿರಿಯರು ನನಗೆ ಸಂಸ್ಕಾರ ಕಲಿಸಿದ್ದಾರೆ. ಅದಕ್ಕಾಗಿ ಅವನಿಗೆ ಕೆಟ್ಟ ಭಾಷೆಯಲ್ಲಿ ಉತ್ತರ ಕೊಡುತ್ತಿಲ್ಲ. ಬದಲಿಗೆ ಎಚ್ಚರಿಕೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಾಬರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಿರ್ನಾಮ ಆಗುತ್ತೆ – ಅನಂತಕುಮಾರ್ ಹೆಗಡೆ ಎಚ್ಚರಿಕೆ

    ಇದೇ ಮೊದಲು ಮತ್ತು ಕೊನೆ. ಸಿದ್ದರಾಮಯ್ಯ ಬಗ್ಗೆ ಅವನು ಮಾತನಾಡಬಾರದು. ಸಿದ್ದರಾಮಯ್ಯ ಅವರಿಗೆ ಆಗಿರುವ ಅನುಭವ‌ದಷ್ಟು ಅವನಿಗೆ ವಯಸ್ಸಾಗಿಲ್ಲ. ಅವರ ಕಾಲಿನ ಧೂಳಿಗೂ ಹೆಗಡೆ ಸಮನಲ್ಲ. ನಾನೂ ಕೂಡ ಹೀಗೆ ಮಾತನಾಡಬಾರದು. ಆದರೆ ಅವನಾಡಿದ ಮಾತಿನಿಂದ ನೋವಾಗಿ ಹೀಗೆ ಹೇಳಿದ್ದೇನೆ. ಇಂಥ ನಾಯಿಗಳಿಗೆ ನಾವು ಬುದ್ಧಿ ಕಲಿಸುತ್ತೇವೆ. ಹೀಗೆ ಮಾತು ಮುಂದುವರೆಸಿದರೆ, ನಾನು ಮುಂದೆ ಉತ್ತರ ಕರ್ನಾಟಕದ ಭಾಷೆಯಲ್ಲಿ ಉತ್ತರ ಕೊಡ ಬೇಕಾಗುತ್ತೆ. ಇವನಿಗಿಂತ ಕೆಟ್ಟ ಭಾಷೆಯಲ್ಲಿ ಉತ್ತರ ಕೊಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಸಿದ್ದರಾಮಯ್ಯ,‌ ಪ್ರಧಾನಿ ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡಿದ ಬಗ್ಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ, ಮೋದಿ ಅವರಿಗೆ ಬಾಯಿ ತಪ್ಪಿ ಏಕವಚನದಲ್ಲಿ ಮಾತನಾಡಿರಬಹುದು. ಆದರೆ ಇಂಥ ಕೆಟ್ಟ ಭಾಷೆ ಬಳಿಸಿ ಮಾತನಾಡಿಲ್ಲ. ಸಿದ್ದರಾಮಯ್ಯ ಇಡೀ‌ ದೇಶದಲ್ಲಿ ತಮ್ಮದೇ ಆದ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರಿಗೆ ಅನಂತ್ ಕುಮಾರ್‌ ಪುಟಗೋಸಿಗೆ ಸಮ. ಬಿಜೆಪಿಗರಿಗೆ ಚುನಾವಣೆ ಬಂದಾಗ ಮಾತ್ರ ಪಾಕಿಸ್ತಾನ, ಹಿಂದೂ-ಮುಸ್ಲಿಂ, ಹಿಂದೂಗಳ ದೇವಾಲಯ ನೆನಪಾಗುತ್ತವೆ ಎಂದು ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

  • ಸಿದ್ದರಾಮಯ್ಯ ಧಮ್ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ: ಸಂಸದ ಅನಂತಕುಮಾರ್ ಹೆಗಡೆ

    ಸಿದ್ದರಾಮಯ್ಯ ಧಮ್ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ: ಸಂಸದ ಅನಂತಕುಮಾರ್ ಹೆಗಡೆ

    ಕಾರವಾರ: ಸಿದ್ದರಾಮಯ್ಯನವರಿಗೆ (Siddaramaiah) ಧಮ್ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ. ಹಿಜಬ್‌ನ ಹಿಂದೆ ತಿರುಗುವ ಈ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ. ಸಿದ್ದರಾಮಯ್ಯನ ಸರ್ಕಾರ ಹುಚ್ಚು ಮಹಮ್ಮದ್‌ನ ಸರ್ಕಾರ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Ananth Kumar Hegade) ಕಿಡಿಕಾರಿದ್ದಾರೆ.

    ಶಿರಸಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ವೋಟುಗಳು ಇಲ್ಲದೇ ಕಾಂಗ್ರೆಸ್ ಬದುಕಲು ಸಾಧ್ಯವಿಲ್ಲ. ಯಾವತ್ತೂ ಕಾಂಗ್ರೆಸ್ ಬಹುಸಂಖ್ಯಾತರ ರಾಜಕಾರಣ ಮಾಡಿಲ್ಲ. ಮನಸ್ಸಿಗೆ ಬಂದಂತೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪೂಜಾ ಗಾಂಧಿ ದಂಪತಿ

    ಈ ರಾಜ್ಯದ ಜನತೆ ತೆಗೆದಿಟ್ಟ ವ್ಯಕ್ತಿ ಟಿಪ್ಪು. ಈ ರಾಜ್ಯವನ್ನು ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ತೊಂದರೆಗೀಡು ಮಾಡಿದ ವ್ಯಕ್ತಿ. ಅವನ ಹೆಸರನ್ನೇ ತೆಗದುಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತೆ ಎಂದರೇ ಕಾಂಗ್ರೆಸ್‌ಗೆ ಮುಂದಿನ ದಿನ ಜನತೆ ಹೇಗೆ ಉತ್ತರ ಕೊಡುತ್ತಾರೆ ಎಂಬುದನ್ನು ಯೋಚನೆ ಮಾಡಬೇಕು ಎಂದು ತಿಳಿಸಿದ್ದಾರೆ.

    ಹಿಜಬ್ ವಿಷಯದಲ್ಲಿ ಸಿದ್ದರಾಮಯ್ಯ ಅವರ, ಯಾರು ಬೇಕಾದ್ರು ಏನು ಬೇಕಾದ್ರು ಡ್ರೆಸ್ ಹಾಕಿಕೊಂಡು ಹೋಗಬಹುದು ಎಂಬ ಹೇಳಿಕೆ ಮುಂದಿನ ದಿನ ಆತಂಕಕಾರಿ ಬೆಳವಣಿಗೆಗೆ ಕಾರಣ ಆಗುತ್ತೆ. ನಮ್ಮವರು ಕೇಸರಿ ಶಾಲು ಹಾಕಿಕೊಂಡು ಹೋಗ್ತಾರೆ. ಅವರು ಹಿಜಬ್ ಹಾಕಿಕೊಂಡು ಹೋಗ್ತಾರೆ. ಒಂದು ಚೌಕಟ್ಟಿನ ಕಲ್ಪನೆ ಸರ್ಕಾರಕ್ಕೆ ಇಲ್ಲಾ ಎಂದಾದರೇ ಸರ್ಕಾರ ಇದೆ ಎಂದು ಅನಿಸುವುದಿಲ್ಲ. ಸಿದ್ದರಾಮಯ್ಯನವರಿಗೆ ಧಮ್‌ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಬೈರತಿ ಸುರೇಶ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

    ಸಿದ್ದರಾಮಯ್ಯನ ದುರಂಹಕಾರಿ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಕರ್ನಾಟಕದಲ್ಲಿ ಹಿಂದೂ ವಿರೋಧಿ ಸರ್ಕಾರ ಇರಲು ಸಾಧ್ಯವೇ ಇಲ್ಲ. ಕಾಂಗ್ರೆಸ್‌ನವರು ಬದುಕಬೇಕು ಎಂದರೆ ಮುಸ್ಲಿಮರ ಹಿಜಬ್‌ನ್ನು ಹಿಡಿದುಕೊಂಡೇ ವೋಟು ತಗೋಬೇಕು. ಹಿಜಬ್‌ನ ಹಿಂದೆ ತಿರುಗುವ ಈ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ. ಕರ್ನಾಟಕದಲ್ಲಿ ಮುಂದಿನ ದಿನದಲ್ಲಿ ಬಿಜೆಪಿ ಬರುತ್ತದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

    ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯನ್ನು ಖಂಡಿಸಿದ ಅವರು, ಆರ್ಥಿಕ ಸುಭದ್ರತೆಯ ಕಲ್ಪನೆಯೇ ಇಲ್ಲದಂಥ ಕೆಲವರು ಮಾಡಿದಂತಹ ಉಪದ್ರವ ಇದು. ಜನರಿಗೂ ಸಹ ಇದು ಬೇಕಾಗಿಲ್ಲ. ಇದರ ಪರಿಣಾಮ ಅಭಿವೃದ್ಧಿಗೆ ಹಣವಿಲ್ಲ. ಸಾಲ ತಂದು ಈ ಸರ್ಕಾರ ಫ್ರೀ ಬೀಸ್ ಕೊಟ್ಟಿರುವುದು ಹುಚ್ಚು ಮಹಮ್ಮದ್‌ನ ಸರ್ಕಾರವಾಗಿದೆ. ರಾಮಮಂದಿರ ಉದ್ಘಾಟನೆ ಆಗುತ್ತಿರುವುದು ಇದು ಹಿಂದೂ ಸಮಾಜದ ವಿಜಯ. ಇದು ಹಿಂದೂ ಸಮಾಜದ ನಿರ್ಮಾಣದ ಮೊದಲ ಹೆಜ್ಜೆಯ ಗುರುತು ಎಂದಿದ್ದಾರೆ. ಇದನ್ನೂ ಓದಿ: ಕಲುಷಿತ ಕಾಂಗ್ರೆಸ್‌ಗೆ ಹಿಂದುತ್ವ ರುಚಿಸಲ್ಲ, ವಿದೇಶಿ ಜೀನ್ಸ್‌ ಎಂದೂ ಭಾರತೀಯತೆಯನ್ನು ಒಪ್ಪಲ್ಲ: ಜೆಡಿಎಸ್‌ ಕಿಡಿ

  • ಏನು ನಿಮ್ಮ ಶಾಸಕರೇನಾದ್ರು ಸತ್ತೋದ್ರ- ಕೇಂದ್ರ ಸಚಿವ ಹೆಗಡೆ

    ಏನು ನಿಮ್ಮ ಶಾಸಕರೇನಾದ್ರು ಸತ್ತೋದ್ರ- ಕೇಂದ್ರ ಸಚಿವ ಹೆಗಡೆ

    ಉತ್ತರಕನ್ನಡ: ಶಿರಸಿ ತಾಲೂಕಿನ ಬನವಾಸಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ ಕುಮಾರ್ ಹೆಗಡೆ ಸ್ಥಳೀಯ ಶಾಸಕರ ವಿರುದ್ಧ ಹರಿಹಾಯ್ದಿದ್ದಾರೆ.

    ಇಂದು ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನಂಕ ಕುಮಾರ ಹೆಗಡೆ ಪಾಲ್ಗೊಂಡಿದ್ದರು. ಈ ವೇಳೆ ಗ್ರಾಮದ ಮಹಿಳೆಯೊಬ್ಬರು ಹಲವು ವರ್ಷಗಳಿಂದ ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರಿಲ್ಲ, ವೈದ್ಯರನ್ನು ನೇಮಕ ಮಾಡಿಕೊಡಿ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

    ಮಹಿಳೆಗೆ ಉತ್ತರಿಸುತ್ತಾ ನಿಮ್ಮ ಶಾಸಕರೇನಾದ್ರೂ ಸತ್ತು ಹೋದ್ರ? ಎಂದು ಪ್ರಶ್ನಿಸಿ, ಸ್ಥಳೀಯ ಕಾಂಗ್ರೆಸ್ ಶಾಸಕ ಶಿವರಾಮ ಹೆಬ್ಬಾರ್ ಮೇಲಿನ ಕೋಪವನ್ನು ಕಾರ್ಯಕ್ರಮದಲ್ಲೇ ಹೊರಹಾಕಿದ್ದಾರೆ. ಅಲ್ಲದೇ ಇದು ನನ್ನ ವ್ಯಾಪ್ತಿಗೆ ಬರುವುದಿಲ್ಲ. ಇದು ರಾಜ್ಯ ಸರ್ಕಾರಕ್ಕೆ ಬರುತ್ತದೆ ಎಂದು ತಿಳಿಸಿ ಕದಂಬ ಗಿಡ ನೆಟ್ಟು ಕಾರ್ಯಕ್ರಮದಿಂದ ತೆರಳಿದ್ದಾರೆ.

  • ಮನಮೋಹನ್ ಸಿಂಗ್ ನ್ಯೂಟ್ರಲ್ ಗೇರ್, ಮೋದಿ ಟಾಪ್ ಗೇರ್, ಸಿದ್ದರಾಮಯ್ಯ ರಿವರ್ಸ್ ಗೇರ್: ಅನಂತ್ ಕುಮಾರ್

    ಮನಮೋಹನ್ ಸಿಂಗ್ ನ್ಯೂಟ್ರಲ್ ಗೇರ್, ಮೋದಿ ಟಾಪ್ ಗೇರ್, ಸಿದ್ದರಾಮಯ್ಯ ರಿವರ್ಸ್ ಗೇರ್: ಅನಂತ್ ಕುಮಾರ್

    ರಾಯಚೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಮೌಲ್ವಿ ಬಾಬಾ ಅಂತಲೇ ಕರೆಯುತ್ತೇವೆ. ಮನಮೋಹನ್ ಸಿಂಗ್ ಅವರು ನ್ಯೂಟ್ರಲ್ ಗೇರ್ ಇದ್ದ ಹಾಗೆ. ನರೆಂದ್ರ ಮೋದಿ ಟಾಪ್ ಗೇರ್, ಇನ್ನು ಸಿದ್ದರಾಮಯ್ಯ ರಿವರ್ಸ್ ಗೇರ್ ಇದ್ದ ಹಾಗೆ ಅಂತ ಸಚಿವ ಅನಂತ್ ಕುಮಾರ್ ಗೇಲಿ ಮಾಡಿದ್ದಾರೆ.

    ರಾಯಚೂರಿನ ದೇವದುರ್ಗದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಚ್ಚು, ಲಾಂಗ್, ಪಿಸ್ತೂಲಿನ ರಾಜ್ಯ ಭಾರ ನಡೆಯುತ್ತಿದೆ. ಸರ್ಕಾರದ ವೈಫಲ್ಯದಿಂದ ಕರಾವಳಿಯಲ್ಲಿ ಪರೇಶ್ ಮೇಸ್ತಾ ಅನ್ನೋ ಅಮಾಯಕನ ಕಗ್ಗೊಲೆಯಾಗಿದೆ ಅಂದ್ರು.

    ನಿಮ್ಮ ಸಿಓಡಿ, ಪೊಲೀಸ್ ಏನೂ ಕೆಲಸ ಮಾಡುತ್ತಿಲ್ಲ. ಪ್ರಕರಣವನ್ನ ಸಿಬಿಐಗೆ ಕೊಟ್ಟರೇನೇ ಸರಿಯಾದ ತನಿಖೆ ನಡೆಯಲು ಸಾಧ್ಯ ಎಂದ ಅವರು, ರಾಜ್ಯವನ್ನು ಕಾಂಗ್ರೆಸ್ ಮುಕ್ತ ಮಾಡಬೇಕಾಗಿದೆ ಎಂದರು.

     

  • ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಮುದ್ರಣ-ಸಚಿವ ಅನಂತ್ ಕುಮಾರ್ ಹೆಗಡೆ ಹೀಗಂದ್ರು

    ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಮುದ್ರಣ-ಸಚಿವ ಅನಂತ್ ಕುಮಾರ್ ಹೆಗಡೆ ಹೀಗಂದ್ರು

    ದಾವಣಗೆರೆ: ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಬೆಳಗಾಗಿ ಜಿಲ್ಲಾಡಳಿತ ವಿಶೇಷ ಅತಿಥಿಯಾಗಿ ಹೆಸರು ಮುದ್ರಿಸಿದ್ದಕ್ಕೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

    ಜಿಲ್ಲೆಯ ಚನ್ನಗಿರಿಯಲ್ಲಿ ತುಮ್ಕೋಸ್ ಅಧ್ಯಕ್ಷರ ಅಭಿನಂದನಾ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಬೇಡಿ ಎಂದು ಮನವಿ ಮಾಡಿದ್ದೆ. ಆದರೂ ಹಾಕಿದ್ದಾರೆ. ಕಾರ್ಯಕ್ರಮಕ್ಕೆ ಹೋಗುತ್ತೇನೋ, ಇಲ್ಲವೋ ಕಾದು ನೋಡಿ ಅಂತ ಹೇಳಿದ್ದಾರೆ.

    ಇದನ್ನೂ ಓದಿ:  ಟಿಪ್ಪು ಜಯಂತಿ ಆಮಂತ್ರಣದಲ್ಲಿ ನನ್ನ ಹೆಸರು ಹಾಕ್ಬೇಡಿ: ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಪತ್ರ  

    ಸಂಸದ ಸುರೇಶ ಅಂಗಡಿ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮನವಿಯನ್ನು ಪರಿಗಣಿಸದೆ ಟಿಪ್ಪು ಜಯಂತಿಗೆ ವಿಶೇಷ ಆಮಂತ್ರಿತರು ಎಂದು ಬೆಳಗಾವಿ ಜಿಲ್ಲಾಡಳಿತ ಆಮಂತ್ರಣ ನೀಡಿದೆ. ಅಲ್ಲದೆ, ಆಮಂತ್ರಣ ಪತ್ರಿಕೆಯಲ್ಲೂ ಹೆಸರು ಮುದ್ರಿಸಿದೆ ಎಂದು ಸಚಿವರು ತಿಳಿಸಿದ್ದಾರೆ. ಒಟ್ಟಿನಲ್ಲಿ ಹೆಗಡೆ ಟಿಪ್ಪು ಜಯಂತಿಯಲ್ಲಿ ಭಾಗವಹಿಸುವ ಬಗ್ಗೆ ಸ್ಪಷ್ಟ ಪ್ರತಿಕ್ರಿಯೆ ನೀಡಲಿಲ್ಲ.

    ಇದನ್ನೂ ಓದಿ: ಆಹ್ವಾನಪತ್ರಿಕೆಯಲ್ಲಿ ಹೆಸರು ಹಾಕ್ಸೋದು ಪ್ರೋಟೋಕಾಲ್, ಬರೋದು ಬಿಡೋದು ಸಚಿವರಿಗೆ ಬಿಟ್ಟಿದ್ದು- ಸಿಎಂ

    ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಟಿಪ್ಪು ಜಯಂತಿ ಆಮಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಬೇಡಿ ಅಂದ್ರೂ ಹಾಕಿದ್ದಾರೆ. ಹೀಗಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಟಿಪ್ಪುವಿನ ಜನ್ಮ ಜಾಲಾಡುತ್ತೇನೆ ಅಂತ ಸಚಿವರು ಹೇಳಿದ್ದರು.