Tag: Ananthkumar hegde

  • ಅನಂತ್‍ಕುಮಾರ್ ಹೆಗ್ಡೆ ಮನೆಗೆ ನಾಗಸಾಧುಗಳು ದಿಢೀರ್ ಭೇಟಿ – ನುಡಿದ ಭವಿಷ್ಯವೇನು?

    ಅನಂತ್‍ಕುಮಾರ್ ಹೆಗ್ಡೆ ಮನೆಗೆ ನಾಗಸಾಧುಗಳು ದಿಢೀರ್ ಭೇಟಿ – ನುಡಿದ ಭವಿಷ್ಯವೇನು?

    ಕಾರವಾರ: ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿರುವ ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗ್ಡೆ ಅವರ ಮನೆಗೆ ಏಳು ಜನ ನಾಗಾ ಸಾಧುಗಳು ಭಾನುವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿದ್ದಾರೆ.

    ಮನೆಯಲ್ಲೇ ಇದ್ದ ಅನಂತಕುಮಾರ್ ಹೆಗ್ಡೆಗೆ ಇವರ ಭೇಟಿ ಅನಿರೀಕ್ಷಿತವಾಗಿತ್ತು. ಹೀಗಾಗಿ ಮೊದಲು ಅವರನ್ನು ಹೆಗ್ಡೆ ಭೇಟಿಮಾಡಲು ಬಿಡದಿದ್ದರೂ ನಂತರ ಅವರು ತಮ್ಮ ಪರಿಚಯ ಹೇಳಿದ ನಂತರ ಅವರನ್ನು ಖುದ್ದು ಅನಂತಕುಮಾರ್ ಹೆಗ್ಡೆ ಹಾಗೂ ಪತ್ನಿ ಶ್ರೀರೂಪ ಹೆಗ್ಡೆ ಅವರು ಬರಮಾಡಿಕೊಂಡು ಪಾದಪೂಜೆ ನೆರವೇರಿಸಿದರು.

    ಭೇಟಿ ನೀಡಿದ್ದು ಯಾಕೆ?
    ಮುಂಜಾನೆ ಶಿರಸಿ ನಗರಕ್ಕೆ ಆಗಮಿಸಿದ್ದ ಉತ್ತರ ಪ್ರದೇಶದ ನಾಗಸಾಧು ಮಹಾಂತ ರಾಮಗಿರಿ ಸ್ವಾಮೀಜಿ ಹಾಗೂ ಅವರ ಶಿಷ್ಯರು ಎಲ್ಲರೂ ಆಶ್ಚರ್ಯ ಪಡುವಂತೆ ನೇರವಾಗಿ ಶಿರಸಿಯ ಕೆ.ಹೆಚ್.ಬಿ ಕಾಲೋನಿಯ ಅನಂತಕುಮಾರ್ ಹೆಗ್ಡೆ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಅವರ ಆಗಮನ ಅನಂತಕುಮಾರ್ ಹೆಗ್ಡೆಗೆ ಆಶ್ಚರ್ಯ ತಂದಿತ್ತು. ಯಾವುದೇ ಮಾಹಿತಿ ನೀಡದೇ ಭೇಟಿ ನೀಡಿದ್ದರೂ ಪತ್ನಿ ಸಮೇತರಾಗಿ ಅವರನ್ನು ಮನೆಯೊಳಗೆ ಕರೆದು ಪಾದಪೂಜೆ ಮಾಡಿ ಫಲಪುಷ್ಪಗಳನ್ನು ನೀಡಿ ಗೌರವಿಸಿದರು.

    ನಂತರ ಏಳುಜನ ನಾಗಸಾಧುಗಳು ಹೆಗ್ಡೆ ಕುಟುಂಬಕ್ಕೆ ಆಶಿರ್ವಾದ ಮಾಡಿದರು. ಇದರ ಜೊತೆಗೆ ಅನಂತಕುಮಾರ್ ಹೆಗ್ಡೆಗೆ ನಿಮ್ಮ ಹೆಸರು ರಾಷ್ಟಮಟ್ಟದಲ್ಲಿ ಉಜ್ಜಲಿಸಲಿದೆ, ನೀವು ಉತ್ತಮ ಪದವಿ ಪಡೆಯುತ್ತೀರಿ, ನಿಮ್ಮ ಹೆಸರು ಅಜರಾಮರವಾಗಲಿದೆ. ಸತ್ಯ ನಿಷ್ಟೆಯಿಂದ ಹೆಸರು ಮಾಡುತ್ತೀರಿ, ಈ ಬಾರಿ ವಿಜಯ ನಿಮ್ಮದಾಗಲಿದೆ ಎಂದು ಭವಿಷ್ಯ ನುಡಿದು ಹರಸಿದರು.

    ಸುಮಾರು ಒಂದು ಗಂಟೆಗಳ ಕಾಲ ಹೆಗ್ಡೆ ಮನೆಯಲ್ಲಿದ್ದ ನಾಗಸಾಧುಗಳು ರಾಮಮಂದಿರ ಸೇರಿದಂತೆ ರಾಜಕೀಯ ಕುರಿತು ಮಾತುಕತೆ ನಡೆಸಿದರು ಎಂಬುದು ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ. ಉತ್ತರ ಪ್ರದೇಶದ ಮಹಾಂತ ರಾಮಗಿರಿ ಸ್ವಾಮೀಜಿ, ತಾವು ದೇಶ ಸುತ್ತುತ್ತಿದ್ದು ದೇಶದ ಪ್ರಮುಖ ಆಧ್ಯಾತ್ಮಿಕ ಸ್ಥಳಗಳಿಗೆ ಭೇಟಿ ನೀಡುತ್ತಿದ್ದೇವೆ. ಈ ವೇಳೆ ಆ ಪ್ರದೇಶದ ಪ್ರಮುಖ ಜನರನ್ನು ಭೇಟಿ ಮಾಡಿ ಹೋಗುತ್ತಿದ್ದೇವೆ. ಮುಂದೆ ಯಾವ ದಿಕ್ಕಿಗೆ ಹೋಗುತ್ತೇವೆ ಎಂಬುದು ತಿಳಿದಿಲ್ಲ. ದೇವರ ಇಚ್ಚೆಯಂತೆ ಪ್ರತಿ ಸ್ಥಳವನ್ನೂ ಭೇಟಿ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

  • ಅನಂತ್‍ಕುಮಾರ್ ಹೆಗ್ಡೆ ನಾಲಿಗೆ ರಾಜಕಾರಣ ಮಾಡುತ್ತಿದ್ದಾರೆ: ಅಸ್ನೋಟಿಕರ್

    ಅನಂತ್‍ಕುಮಾರ್ ಹೆಗ್ಡೆ ನಾಲಿಗೆ ರಾಜಕಾರಣ ಮಾಡುತ್ತಿದ್ದಾರೆ: ಅಸ್ನೋಟಿಕರ್

    ಕಾರವಾರ: ಕೇಂದ್ರ ಕೌಶಾಲ್ಯಾಭಿವೃದ್ಧಿ ಸಚಿವ ಅನಂತ್‍ಕುಮಾರ್ ಹೆಗ್ಡೆ ನಾಲಿಗೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಸಂಭಾವ್ಯ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ಕಿಡಿಕಾರಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅನಂತ್‍ಕುಮಾರ್ ಅವರ ತಂದೆಯೇ ಅವರ ಮೇಲೆ ವಿಶ್ವಾಸ ಇಡುವುದಿಲ್ಲ, ರಾಜಕೀಯಕ್ಕೆ ತಂದೆಯ ಭಾವನೆಯನ್ನೇ ಬಳಸಿಕೊಳ್ಳುತಿದ್ದಾರೆ. ಅವರು ನಾಲಿಗೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

    ಅನಂತಕುಮಾರ್ ಅವರು ಹಿಂದೂ ಮುಸ್ಲಿಂ ಅಂತ ಬೇದ ಭಾವ ಮಾಡುತಿದ್ದಾರೆ. ಅವರು ರಾಜಕಾರಣಕ್ಕೆ ಬಂದಿದ್ದು ರಾಜಕೀಯ ಮಾಡಲು. ಸಮಾಜ ಸೇವೆ ಮಾಡಲು ಅಲ್ಲ. ಈ ಬಾರಿ ಅಭಿವೃದ್ಧಿ ಪರ ಚುನಾವಣೆ ನಡೆಯುತ್ತದೆ. ಈ ಚುನಾವಣೆಯನ್ನು ಆರ್.ವಿ ದೇಶಪಾಂಡೆ ನೇತೃತ್ವದಲ್ಲಿ ಎದುರಿಸುತ್ತೇವೆ. ಮನೆಯಲ್ಲಿ ಜಗಳ ಇದ್ದೇ ಇರುತ್ತದೆ, ಅದು ಸಾಮಾನ್ಯ. ಆದ್ರೆ ಚುನಾವಣೆಯನ್ನು ಒಟ್ಟಿಗೇ ಎದುರಿಸುತ್ತೇವೆ ಎಂದು ಅಸ್ನೋಟಿಕರ್ ತಿಳಿಸಿದ್ದಾರೆ.

  • ಇವರು ತಿಲಕವಿಟ್ಟುಕೊಂಡ ಹಿಂದೂಗಳನ್ನು ಕಂಡರೆ ಗಾಬರಿಯಾಗುವ ನಮ್ಮ ಸಿದ್ದಣ್ಣ: ಅನಂತ್ ಕುಮಾರ್ ಹೆಗ್ಡೆ ವ್ಯಂಗ್ಯ

    ಇವರು ತಿಲಕವಿಟ್ಟುಕೊಂಡ ಹಿಂದೂಗಳನ್ನು ಕಂಡರೆ ಗಾಬರಿಯಾಗುವ ನಮ್ಮ ಸಿದ್ದಣ್ಣ: ಅನಂತ್ ಕುಮಾರ್ ಹೆಗ್ಡೆ ವ್ಯಂಗ್ಯ

    ಬೆಂಗಳೂರು: ಕುಂಕುಮವನ್ನು ನೋಡಿದರೆ ಜನರಿಗೆ ಭಯ ಹುಟ್ಟದೆ, ಗೌರವ ಹುಟ್ಟತ್ತಾ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್‍ಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಟ್ವೀಟ್ ಮೂಲಕವೇ ತಿರುಗೇಟು ನೀಡಿದ್ದಾರೆ.

    ಸಿದ್ದರಾಮಯ್ಯ ಅವರು ಹಿಂದೂ ಹಾಗೂ ಬಿಜೆಪಿ ವಿರುದ್ಧ ಮಾತನಾಡಿರುವುದಕ್ಕೆ ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಅನಂತ್ ಕುಮಾರ್ ಹೆಗ್ಡೆ ಅವರು ಸಿದ್ದರಾಮಯ್ಯ ಅವರು ಕುಂಕುಮ ಇಟ್ಟಿಕೊಂಡಿರುವ ಫೋಟೋವೊದನ್ನು ಹಾಕಿ “ಅಯ್ಯೋ! ಭಯ, ಭೀತಿಗೊಳ್ಳಬೇಡಿ. ಇವರು ಹಣೆಯಲ್ಲಿ ತಿಲಕವಿಟ್ಟುಕೊಂಡ ಹಿಂದೂಗಳನ್ನು ಕಂಡರೆ ಗಾಬರಿಯಾಗುವ ನಮ್ಮ ಸಿದ್ದಣ್ಣ #selfie with tilak” ಅಂತ ಬರೆದು ಟ್ವೀಟ್ ಮಾಡಿದ್ದಾರೆ.ಇದನ್ನೂ ಓದಿ: ಕುಂಕುಮಧಾರಿಯನ್ನ ನೋಡಿದಾಗ ಭಯ ಹುಟ್ಟದೆ, ಗೌರವ ಹುಟ್ಟುತ್ತಾ: ಸಿದ್ದರಾಮಯ್ಯ ಪ್ರಶ್ನೆ

    ಅಷ್ಟೇ ಅಲ್ಲದೆ ಸಿದ್ದರಾಮಯ್ಯ ಅವರ ಟ್ವೀಟ್ ಬಗ್ಗೆ ಬಿಜೆಪಿ ನಾಯಕ ಸಿ.ಟಿ ರವಿ ಅವರು ಕೂಡ ರೀ-ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ. “ಚುನಾವಣೆ ವೇಳೆ ಇದೇ ಕುಂಕುಮ ತಾನೆ ನಿಮ್ಮ ಹಣೆಮೇಲೆ ಇದ್ದಿದ್ದು. ಆಗ ನಿಮಗೆ ಭಯವಿರಲಿಲ್ಲವೇ? ಬೇಕಾದಾಗ ಕುಂಕುಮ, ತಿಲಕ ಹಚ್ಚಿ ಬೇಡವಾದಾಗ ಅದೇ ಸಂಪ್ರದಾಯದ ವಿರುದ್ಧ ಕೇವಲ ಮತಗಳಿಕೆಗೋಸ್ಕರ ಜನರನ್ನು ಎತ್ತಿಕಟ್ಟುವ ನಿಮ್ಮ ಕೀಳು ಮನಸ್ಥಿತಿಗೆ ಭಾರತದ ಯಾವ ಭಾಗದಲ್ಲೂ ಬೆಲೆ ಇಲ್ಲ. ಇನ್ನೂ ಎಷ್ಟು ನೀಚ ರಾಜಕಾರಣ ಮಾಡುತ್ತೀರ ಸಿದ್ದರಾಮಯ್ಯ ಸಾರ್?” ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಿಯಾಂಕಾ ಗಾಂಧಿಯೊಂದಿಗೆ ಕಾಂಗ್ರೆಸ್‍ನ ಮಹಾಭಾರತ ಪೂರ್ಣ : ಅನಂತ್‍ಕುಮಾರ್ ಹೆಗ್ಡೆ

    ಪ್ರಿಯಾಂಕಾ ಗಾಂಧಿಯೊಂದಿಗೆ ಕಾಂಗ್ರೆಸ್‍ನ ಮಹಾಭಾರತ ಪೂರ್ಣ : ಅನಂತ್‍ಕುಮಾರ್ ಹೆಗ್ಡೆ

    ಕಾರವಾರ: ಲೋಕಸಭೆ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಬತ್ತಳಿಕೆಯಲ್ಲಿ ಇರುವ ಕೊನೇ ಅಸ್ತ್ರ ಪ್ರಿಯಾಂಕಾ ಗಾಂಧಿ, ಅವರು ರಾಹುಲ್ ಗಾಂಧಿಗಿಂತ ಪ್ರಭಾವಿಯಂತೆ, ಇಂದಿರಾಗಾಂಧಿ ಅವತಾರವಂತೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್‍ಕುಮಾರ್ ಹೆಗ್ಡೆ ವ್ಯಂಗ್ಯವಾಡಿದ್ದಾರೆ.

    ಶಿರಸಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನೀರಿಗೆ ಬಂದ ನಾರಿ ಊರಿಗೆ ಬಾರದೇ ಇರುತ್ತಾಳೆಯೇ? ಅವಳ ಬಂಡವಾಳವೂ ಇನ್ನೇನು ಬಯಲಾಗಲಿದೆ. ಪ್ರಿಯಾಂಕಾ ಗಾಂಧಿಯೊಂದಿಗೆ ಕಾಂಗ್ರೆಸ್‍ನ ಮಹಾಭಾರತ ಪೂರ್ಣಗೊಳ್ಳಲಿದೆ. ಕಾಂಗ್ರೆಸ್ ಪಕ್ಷ ನೆಹರೂ ಕುಟುಂಬದ ಹೊರತಾಗಿ ಯಾರನ್ನೂ ಒಪ್ಪದು ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

    ರಾಮ ಮಂದಿರ ಕಟ್ಟಿದರೆ ದೇಶ ಎದ್ದು ನಿಲ್ಲುತ್ತದೆ. ಅದಕ್ಕೆ ಇದನ್ನು ನಿರ್ಮಿಸಲು ಹಲವು ಅಡ್ಡಿಗಳು ಬರುತ್ತಿದೆ. ದೇಶದ ಎಲ್ಲಾ ವ್ಯವಸ್ಥೆಯಲ್ಲಿ ಅರ್ಬನ್ ನಕ್ಸಲಿಯರೇ ತುಂಬಿಕೊಂಡಿದ್ದಾರೆ. ಈ ದೇಶಕ್ಕೆ ಒಂದು ಇತಿಹಾಸ ಪರಂಪರೆ ಇದೆ. ಅದನ್ನು ಅವರು ಒಪ್ಪುತ್ತಿಲ್ಲ ಎಂದರು.

    ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ಎಲ್ಲ ಕಡೆ ಕಾಂಗ್ರೆಸ್ ರಾಷ್ಟ್ರದ್ರೋಹಿಗಳನ್ನು ಇಟ್ಟಿದೆ. ಮಾಧ್ಯಮದಲ್ಲೂ ಅರ್ಬನ್ ನಕ್ಸಲಿಯರು ಇದ್ದಾರೆ. ಅವರೇ ಎಲ್ಲೋ ಇದ್ದ ನನ್ನನ್ನು ಜನಪ್ರಿಯತೆಗೆ ತಂದಿದ್ದಾರೆ. ವಿವಾದಿತ ಹೇಳಿಕೆ ಎಂದು ನನಗೆ ಪ್ರಚಾರ ನೀಡಿದ್ದಕ್ಕೆ ಮಾಧ್ಯಮಗಳಿಗೆ ಧನ್ಯವಾದಗಳು. ಇಲ್ಲದೇ ಇರುವಂತ ವಿವಾದವನ್ನು ಸೃಷ್ಟಿಸಿ ಜನರಲ್ಲಿ ಕುತೂಹಲವನ್ನು ಮೂಡಿಸಿ ಸಾಧನೆ ಮಾಡಿದಕ್ಕೆ ನಿಮ್ಮನ್ನು ಶ್ಲಾಘಿಸುತ್ತೇನೆ ಎಂದು ಮಾಧ್ಯಮಗಳನ್ನು ಅನಂತ್ ಕುಮಾರ್ ಅವರು ಟೀಕಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಅನಂತ್‍ಕುಮಾರ್ ಹೆಗ್ಡೆ ವಿರುದ್ಧ ಅರೆಸ್ಟ್ ವಾರೆಂಟ್

    ಅನಂತ್‍ಕುಮಾರ್ ಹೆಗ್ಡೆ ವಿರುದ್ಧ ಅರೆಸ್ಟ್ ವಾರೆಂಟ್

    – ಕೇಸ್‍ಗಳಿಗೆ ಸ್ವಾಗತ, ಕಾಂಗ್ರೆಸ್‍ಗೆ ಧನ್ಯವಾದ ಅಂದ್ರು ಅನಂತ್ ಕುಮಾರ್ ಹೆಗ್ಡೆ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಕೌಶಲ್ಯಾಭಿರುದ್ಧಿ ಸಚಿವ ಅನಂತಕುಮಾರ್ ಹೆಗ್ಡೆ ಅವರ ವಿರುದ್ಧ ಮಂಕಿ ಠಾಣೆ ಪೊಲೀಸರು ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದಾರೆ.

    ಈ ವಿಚಾರವಾಗಿ ಶಿರಸಿ ತಾಲೂಕಿನ ಮಾರುಕಟ್ಟೆ ಪೊಲೀಸ್ ಠಾಣೆಗೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹಾಜರಾಗಿದ್ದರು. ಈ ವೇಳೆ ಕಾರವಾರದ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಗೆ ಹಾಜರುಪಡಿಸಿದರು. 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಚೋದನಾಕಾರಿ ಭಾಷಣ ಹಿನ್ನಲೆಯಲ್ಲಿ ಅನಂತ್ ಕುಮಾರ್ ಹೆಗ್ಡೆ ವಿರುದ್ದ ಅಂದಿನ ಚುನಾವಣಾಧಿಕಾರಿಯಾಗಿದ್ದ ಭಟ್ಕಳದ ಉಪವಿಭಾಗಾಧಿಕಾರಿ ದೂರನ್ನ ದಾಖಲಿಸಿದ್ದರು.

    ಈ ಪ್ರಕರಣ ಕುರಿತು ಮಾತನಾಡಿದ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ, ಭಾಷಣವನ್ನು ಮುಂದಿಟ್ಟು ನನ್ನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ, ಎಂದೋ ಮಾಡಿದ ಭಾಷಣಕ್ಕೆ ಇನ್ಯಾವಾಗಲೋ ಕೇಸ್ ಹಾಕುವ ಸರ್ಕಾರ ಪೂರ್ವಾಗ್ರಹ ಪೀಡಿತವಾದದ್ದು. ಇಂದಿನ ಸರ್ಕಾರ ಮತ್ತೊಮ್ಮೆ ನನ್ನ ಗುರಿ ಮಾಡಿ ಷಡ್ಯಂತ್ರ ರೂಪಿಸುತ್ತಿದೆ. ನಮ್ಮ ಚುನಾವಣೆಯನ್ನೂ ಬಹುಶಃ ಕಾಂಗ್ರೆಸ್ ಸರ್ಕಾರವೇ ಮಾಡಿ ಮುಗಿಸುವ ಸ್ಥಿತಿಯನ್ನು ಅವರೇ ತಂದುಕೊಟ್ಟಿದ್ದಾರೆ. ನನ್ನ ಮೇಲೆ ದಾಖಲಾಗುವ ಕೇಸ್‍ಗಳಿಗೆ ಸ್ವಾಗತ ಮತ್ತು ಕಾಂಗ್ರೆಸ್‍ಗೆ ಧನ್ಯವಾದ ಎಂದು ವ್ಯಂಗ್ಯವಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಟ್ವಿಟ್ಟರ್ ವಾರ್- ವೈಯಕ್ತಿಕ ನಿಂದನೆ ವಿರುದ್ಧ ಗುಡುಗಿದ ದಿನೇಶ್ ಗುಂಡೂರಾವ್

    ಟ್ವಿಟ್ಟರ್ ವಾರ್- ವೈಯಕ್ತಿಕ ನಿಂದನೆ ವಿರುದ್ಧ ಗುಡುಗಿದ ದಿನೇಶ್ ಗುಂಡೂರಾವ್

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ತಮ್ಮ ಮೇಲೆ ವೈಯಕ್ತಿಕ ನಿಂದನೆ ಮಾಡಿದ್ದ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ವಿರುದ್ಧ ಗುಡುಗಿದ್ದಾರೆ.

    ಭಾನುವಾರ ಕೇಂದ್ರ ಸಚಿವರಾದ ಅನಂತಕುಮಾರ್ ಹೆಗ್ಡೆ ತಮ್ಮ ಭಾಷಣದಲ್ಲಿ ಹಿಂದೂ ಹುಡುಗಿ ಮುಟ್ಟುವ ಯುವಕನ ಕೈ ಇರಬಾರದು ಎಂಬ ಹೇಳಿಕೆಯನ್ನು ನೀಡಿದ್ದರು. ಈ ಸಂಬಂಧ ದಿನೇಶ್ ಗುಂಡೂರಾವ್, ಕೇಂದ್ರ ಸಚಿವರಾಗಿ ನಿಮ್ಮ ಸಾಧನೆ ಏನು? ಕರ್ನಾಟಕಕ್ಕೆ ನೀವು ನೀಡಿದ ಕೊಡುಗೆ ಏನು? ನಿಮ್ಮನ್ನು ಆಯ್ಕೆ ಮಾಡಿದ ಕ್ಷೇತ್ರದ ಜನರನ್ನು ನೋಡಿದ್ರೆ ನನಗೆ ನೋವಾಗುತ್ತದೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದರು. ಇದನ್ನೂ ಓದಿ: ಹಿಂದೂ ಹುಡುಗಿಯ ಮೈ ಮುಟ್ಟಿದ ಕೈ ಇರಬಾರದು: ಅನಂತ್ ಕುಮಾರ್ ಹೆಗ್ಡೆ

    ಈ ಟ್ವೀಟ್‍ಗೆ ಪ್ರತಿಕ್ರಿಯಿಸಿದ ಅನಂತಕುಮಾರ್ ಹೆಗ್ಡೆ, ನಾನು ಈ ವ್ಯಕ್ತಿಯ ಪ್ರಶ್ನೆಗಳಿಗೆ ಖಂಡಿತ ಉತ್ತರಿಸುತ್ತೇನೆ. ಮೊದಲು ನಿಮ್ಮ ಅಭಿವೃದ್ಧಿ ಕೆಲಸ, ಸಾಧನೆಯನ್ನು ತಿಳಿಸಿ. ನನಗೆ ಗೊತ್ತಿರುವ ಹಾಗೆ ಮುಸ್ಲಿಂ ಹುಡುಗಿ ಹಿಂದೆ ಓಡಿ ಹೋದವರು ನೀವು ಎಂದು ವೈಯಕ್ತಿಕವಾಗಿ ಟೀಕಿಸಿದ್ದರು.

    ಇಂದು ಬೆಳಗ್ಗೆ ಕೇಂದ್ರ ಸಚಿವರ ಟ್ವೀಟ್ ಉತ್ತರ ನೀಡಿರುವ ದಿನೇಶ್ ಗುಂಡೂರಾವ್, ಇಂತಹ ವೈಯಕ್ತಿಕ ವಿಷಯಗಳನ್ನ ಬಳಸಿ ಕೆಳಮಟ್ಟದಲ್ಲಿ ಟೀಕಿಸುವುದನ್ನು ನಿಲ್ಲಿಸಿ. ಇದು ನಿಮ್ಮಲ್ಲಿರುವ ಸಂಸ್ಕೃತಿಯನ್ನು ತೋರಿಸುತ್ತದೆ. ಕೆಳಮಟ್ಟದಲ್ಲಿ ಟೀಕಿಸುತ್ತಿರುವ ಕೇಂದ್ರ ಸಚಿವರಿಗೆ ಹಿಂದೂ ಧರ್ಮದ ಜ್ಞಾನ ಇಲ್ಲ ಎಂಬುವುದು ತಿಳಿಯುತ್ತದೆ. ಇನ್ನು ಸಮಯವಿದ್ದು, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಓರ್ವ ಗಣ್ಯ ವ್ಯಕ್ತಿಯಾಗಲು ಪ್ರಯತ್ನಿಸಿ ಎಂದು ಗುಡುಗಿದ್ದಾರೆ.

    ಕೇಂದ್ರ ಸಚಿವರ ಟ್ವೀಟ್‍ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ರಾಜಕೀಯ ಕೆಸರೆರಚಾಟದಲ್ಲಿ ಪತ್ನಿಯರ ವಿಷಯ ಪ್ರಸ್ತಾಪಿಸಿ ನಿಂದನೆ ಮಾಡೋದು ಸರಿಯಲ್ಲ ಎಂದು ಬಹುತೇಕರು ಟ್ವೀಟ್ ಮಾಡಿದ್ರೆ, ದಿನೇಶ್ ಗುಂಡೂರಾವ್ ಅವರೇ ನಿಮ್ಮ ಸಾಧನೆಗಳನ್ನು ತಿಳಿಸಿ ಬೇರೆಯವರನ್ನು ಪ್ರಶ್ನೆ ಮಾಡಿ ಎಂದು ಕೆಲವರು ಪ್ರತಿಕ್ರಿಯೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಟಿಪ್ಪು ಜಯಂತಿ: ಸಚಿವ ಹೆಗಡೆ ಪತ್ರವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ

    ಟಿಪ್ಪು ಜಯಂತಿ: ಸಚಿವ ಹೆಗಡೆ ಪತ್ರವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ

    ಕಾರವಾರ: ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ ಹೆಸರನ್ನು ಕೈ ಬಿಡಲಾಗಿದೆ.

    ಶಿಷ್ಟಾಚಾರದ ಪ್ರಕಾರ ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕೇಂದ್ರ ಸಚಿವರ ಹೆಸರನ್ನು ಹಾಕಬೇಕು. ಹೀಗಾಗಿ ಈ ಹಿಂದಿನ ಟಿಪ್ಪು ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಜಿಲ್ಲಾಡಳಿತ ಅನಂತ್ ಕುಮಾರ್ ಹೆಗಡೆ ಹೆಸರನ್ನು ಪ್ರಕಟಿಸುತಿತ್ತು. ಅನಂತಕುಮಾರ್ ಹೆಗಡೆ ರಾಜ್ಯ ಸರ್ಕಾರಕ್ಕೆ ತನ್ನ ಹೆಸರನ್ನು ಹಾಕದಂತೆ ಪತ್ರ ಬರೆದ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆಯಂತೆ ಉತ್ತರ ಕನ್ನಡ ಜಿಲ್ಲೆಯ ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಇದೇ ಮೊದಲ ಬಾರಿ ಸಚಿವರ ಹೆಸರನ್ನು ಕೈಬಿಟ್ಟಿದೆ.

    ಇದೇ ತಿಂಗಳ 2ರಂದು ಸರ್ಕಾರಕ್ಕೆ ತಮ್ಮ ವಿಶೇಷ ಕರ್ತವ್ಯ ಅಧಿಕಾರಿಯಿಂದ ಪತ್ರ ಕಳುಹಿಸಿದ್ದ ಅನಂತಕುಮಾರ್ ಹೆಗಡೆ ಶಿಷ್ಟಾಚಾರದಲ್ಲಿ ತಮ್ಮ ಹೆಸರು ಕೈಬಿಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಕಳುಹಿಸಿದರಲ್ಲದೇ ಇದರ ಪ್ರತಿಯನ್ನು ಬೆಳಗಾವಿ ಹಾಗೂ ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ರವಾನಿಸಿದ್ದರು.

    ಪತ್ರ ಕಳುಹಿಸಿದ ಕಾರಣ ಶಿಷ್ಟಾಚಾರದಲ್ಲಿ ಹೆಸರು ಕೈ ಬಿಡುವಂತೆ ಸರ್ಕಾರದಿಂದ ಉ.ಕ ಜಿಲ್ಲಾಧಿಕಾರಿ ಎಸ್. ಎಸ್ ನಕುಲ್ ಅವರಿಗೆ ಆದೇಶ ನೀಡಲಾಗಿತ್ತು. ಆದೇಶದಂತೆ ಇದೇ ಮೊದಲ ಬಾರಿಗೆ ಆಹ್ವಾನ ಪತ್ರಿಕೆಯಲ್ಲಿ ಹೆಸರು ಕೈಬಿಡಲಾಗಿದೆ.

    ನ.10ರಂದು ಜಿಲ್ಲಾಡಳಿತದಿಂದ ಕಾರವಾರದ ಜಿಲ್ಲಾ ರಂಗಮಂದಿರದಲ್ಲಿ ಜಯಂತಿ ಆಚರಣೆಗೆ ಆಹ್ವಾನ ಪತ್ರಿಕೆ ಮುದ್ರಿಸಿದೆ. ಕಳೆದ ಬಾರಿ ಕೂಡ ಪತ್ರ ಬರೆದರೂ ಶಿಷ್ಟಾಚಾರದ ಪ್ರಕಾರ ಹೆಸರು ಹಾಕಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಿವೃತ್ತ ಐಎಎಸ್ ಅಧಿಕಾರಿ ರತ್ನಾಪ್ರಭಾರಿಗೆ ಪಕ್ಷಕ್ಕೆ ಆಹ್ವಾನಿಸಿದ ಅನಂತಕುಮಾರ್ ಹೆಗಡೆ

    ನಿವೃತ್ತ ಐಎಎಸ್ ಅಧಿಕಾರಿ ರತ್ನಾಪ್ರಭಾರಿಗೆ ಪಕ್ಷಕ್ಕೆ ಆಹ್ವಾನಿಸಿದ ಅನಂತಕುಮಾರ್ ಹೆಗಡೆ

    ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ರತ್ನಪ್ರಭಾರವರಿಗೆ ಬಿಜೆಪಿಗೆ ಸೇರುವಂತೆ ಟ್ವಿಟ್ಟರ್ ಮೂಲಕ ಕೇಂದ್ರ ಕೌಶಾಲ್ಯಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ಆಹ್ವಾನ ನೀಡಿದ್ದಾರೆ.

    ಈ ಕುರಿತು ತಮ್ಮ ಟ್ವಿಟ್ಟರಿನಲ್ಲಿ, ನಿವೃತ್ತ ಐಎಎಸ್ ಅಧಿಕಾರಿಯಾದ ರತ್ನಪ್ರಭಾವರವರು ಬಿಜೆಪಿಗೆ ಸೇರ್ಪಡೆಗೊಳ್ಳುವುದುನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಅಲ್ಲದೇ ಅವರು ಐಎಎಸ್ ಅಧಿಕಾರಿಯಾಗಿದ್ದಾಗ ಮಾಡಿದ ಹಲವು ಕಾರ್ಯಗಳ ಅನುಭವವನ್ನು ರಾಜಕೀಯದಲ್ಲಿ ಮುಂದುವರಿಸಿ, ಜನರ ಏಳಿಗೆಗೆ ದುಡಿಯುವಂತಾಗಬೇಕು ಎಂದು ಬರೆದುಕೊಂಡಿದ್ದಾರೆ.

    ಕಳೆದ ಎರಡು-ಮೂರು ದಿನಗಳಿಂದ ಬಿಜೆಪಿ ವಲಯದಲ್ಲಿ ರತ್ನಪ್ರಭಾ ಹೆಸರು ಭಾರೀ ಕೇಳಿಬರುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಅವರನ್ನು ಕಾಂಗ್ರೆಸ್ಸಿನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸುವ ಕುರಿತು ಊಹಾಪೋಹಗಳು ಕೇಳಿಬರುತ್ತಿವೆ. ಅಲ್ಲದೇ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ರತ್ನಪ್ರಭಾರವರನ್ನು ಅಭ್ಯರ್ಥಿಯನ್ನಾಗಿ ಮಾಡಿದರೇ, ಎಡ ಸಮುದಾಯದ ಮತಗಳ ಜೊತೆಗೆ ಪ್ರಜ್ಞಾವಂತ ಮತದಾರರನ್ನು ಸೆಳೆಯಬಹುದು ಎಂಬುದು ಬಿಜೆಪಿಯ ಲೆಕ್ಕಚಾರವಾಗಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಖರ್ಗೆ ವಿರುದ್ಧ ನಿವೃತ್ತ ಐಎಎಸ್ ಅಧಿಕಾರಿ ರತ್ನಪ್ರಭಾ ಸ್ಪರ್ಧೆ?

    ಕೇಂದ್ರ ಸಚಿವರ ಟ್ವೀಟ್‍ಗೆ ಪ್ರತಿಕ್ರಿಯಿಸಿರುವ ಜಾಲತಾಣಿಗರು, ನೀವೊಬ್ಬ ಕೇಂದ್ರ ಸಚಿವರು, ಪಕ್ಷದೊಳಗೆ ಏನು ನಡೆಯುತ್ತಿದೆ ಎಂಬುದು ನಿಮಗಲ್ಲದೇ ಬೇರೆ ಇನ್ನಾರಿಗೆ ತಿಳಿಯುತ್ತದೆ ಎಂದು ಕಿಚಾಯಿಸಿದ್ದಾರೆ. ಅಲ್ಲದೇ ರತ್ನಾಪ್ರಭಾರವರನ್ನು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸುವ ಕುರಿತು ಹಲವರು ತಮ್ಮ ಅಭಿಪ್ರಾಯಗಳನ್ನು ಸಚಿವರಿಗೆ ರೀ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕಲಬುರಗಿ ಲೋಕಸಭಾ ಕ್ಷೇತ್ರದ ಟಿಕೆಟ್‍ಗಾಗಿ ಬಿಎಸ್‍ವೈ ಎದುರೇ ಕಿತ್ತಾಡಿಕೊಂಡ ಸ್ಥಳೀಯ ನಾಯಕರು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪುಟಗೋಸಿ ಬಹಳ ಮರ್ಯಾದೆ ಕಾಪಾಡುವ ವಸ್ತು, ಬಿಜೆಪಿಯಿಂದ ಅಗೌರವವಾಗಿದೆ- ಮುಖ್ಯಮಂತ್ರಿ ಚಂದ್ರು

    ಪುಟಗೋಸಿ ಬಹಳ ಮರ್ಯಾದೆ ಕಾಪಾಡುವ ವಸ್ತು, ಬಿಜೆಪಿಯಿಂದ ಅಗೌರವವಾಗಿದೆ- ಮುಖ್ಯಮಂತ್ರಿ ಚಂದ್ರು

    ತುಮಕೂರು: ಪುಟಗೋಸಿಗೆ ಬಹಳ ಮರ್ಯಾದೆ ಕಾಪಾಡುವ ವಸ್ತುವಾಗಿದ್ದು, ಬಿಜೆಪಿಯಿಂದ ಅಗೌರವವಾಗಿದೆ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

    ಜೆಡಿಎಸ್ ಪಕ್ಷವನ್ನು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಪುಟಗೋಸಿಗೆ ಹೋಲಿಕೆ ಮಾಡಿ ಲೇವಡಿ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಂಸ್ಕೃತಿಯನ್ನ ಎತ್ತಿಹಿಡಿಯುವ ಪಕ್ಷದ ಬಾಯಿಯಲ್ಲಿ ಪುಟಗೋಸಿ ಪದ ಬರಬಾರದು. ಪುಟಗೋಸಿ ಕೆಟ್ಟದಲ್ಲ ಅವರ ಬಾಯಿಯಿಂದ ಬಂದಂತಹ ರೀತಿ ಕೆಟ್ಟದ್ದು ಎಂದು ಕಿಡಿಕಾರಿದರು.

    ಅಂಗಾಂಗ ಮುಚ್ಚಿಕೊಳ್ಳಲು ಪುಟಗೋಸಿ ಮಹತ್ವದ ಬಗ್ಗೆ ಈಗಾಗಲೇ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಪುಟಗೋಸಿ, ಉಡುದಾರ, ಲಂಗೋಟಿ, ತುಂಡುಬಟ್ಟೆಗೆ ಅದರದ್ದೆ ಆದ ಅರ್ಥವಿದೆ ಎಂದರು. ಇದನ್ನೂ ಓದಿ: ಅನಂತಕುಮಾರ್ ಹೆಗಡೆಗೆ ಪುಟಗೋಸಿ ರವಾನಿಸಿದ ಜೆಡಿಎಸ್ ಕಾರ್ಯಕರ್ತರು

    ಪುಟಗೋಸಿಗೆ ಇವರು ಅಗೌರವ ತಂದಿದ್ದಾರೆ. ಅದು ಬಹಳ ಮರ್ಯಾದೆ ಕಾಪಾಡುವ ವಸ್ತು. ಬಿಜೆಪಿಯಿಂದ ಪುಟಗೋಸಿಗೆ ಅಗೌರವವಾಗಿದೆ. ಲಂಗೋಟಿ ಬಲು ಒಳ್ಳೇಯದಣ್ಣ ಅಂಗಾಂಗ ಮುಚ್ಚಲು ಲಂಗೋಟಿ ಬೇಕಣ್ಣ ಎಂದು ದಾಸರ ಪದ ಹಾಡಿ ಮುಖ್ಯಮಂತ್ರಿ ಚಂದ್ರು ಹಾಡಿದರು.

    ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮಪ್ಪ ಪರ ಚುನಾವಣಾ ಪ್ರಚಾರಕ್ಕೆ ತುಮಕೂರಿಗೆ ಆಗಮಿಸಿದ್ದ ವೇಳೆ ಮುಖ್ಯಮಂತ್ರಿ ಚಂದ್ರು ಈ ರೀತಿಯಾಗಿ ಪ್ರತಿಕ್ರಿಯೆ ನೀಡಿದರು.

  • ಅನಂತಕುಮಾರ್ ಹೆಗಡೆಗೆ ಪುಟಗೋಸಿ ರವಾನಿಸಿದ ಜೆಡಿಎಸ್ ಕಾರ್ಯಕರ್ತರು

    ಅನಂತಕುಮಾರ್ ಹೆಗಡೆಗೆ ಪುಟಗೋಸಿ ರವಾನಿಸಿದ ಜೆಡಿಎಸ್ ಕಾರ್ಯಕರ್ತರು

    ಮಂಡ್ಯ: ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರಿಗೆ ಪುಟಗೋಸಿ ಕಳುಹಿಸುವ ಮೂಲಕ ಜೆಡಿಎಸ್ ಕಾರ್ಯಕರ್ತರು ಆಕ್ರೋಶವನ್ನು ಹೊರಹಾಕಿದ್ದಾರೆ.

    ಇಂದು ಮಂಡ್ಯದ ಪೋಸ್ಟ್ ಆಫೀಸ್ ಬಳಿ ಆಗಮಿಸಿದ ಜೆಡಿಎಸ್ ಕಾರ್ಯಕರ್ತರು ಅನಂತಕುಮಾರ್ ಹೆಗಡೆ ಅವರಿಗೆ ಪುಟಗೋಸಿಗಳನ್ನು ಕೊರಿಯರ್ ಮಾಡಿದ್ದಾರೆ. ಈ ಹಿಂದೆ ಅನಂತಕುಮಾರ್ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಜೆಡಿಎಸ್ ಪುಟಗೋಸಿ ಪಕ್ಷ ಅಂತಾ ಲೇವಡಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮಂಡ್ಯದ ಕಾರ್ಯಕರ್ತರ ಕೇಂದ್ರ ಸಚಿವರಿಗೆ ಬಣ್ಣ ಬಣ್ಣದ ಪುಟಗೋಸಿಗಳನ್ನು ರವಾನಿಸಿದ್ದಾರೆ.

    ಅನಂತಕುಮಾರ ಹೆಗಡೆ ಅವರು ಕರ್ನಾಟಕದ ಪ್ರಾದೇಶಿಕ ಪಕ್ಷವನ್ನು ಪುಟಗೋಸಿಗೆ ಹೋಲಿಕೆ ಮಾಡಿದ್ದಾರೆ. ಪುಟಗೋಸಿ ಬಳಕೆ ಸಚಿವರಿಗೆ ಗೊತ್ತಿಲ್ಲ ಎಂಬಂತೆ ಕಾಣುತ್ತಿಲ್ಲ. ಎಲ್ಲರೂ ಪುಟಗೋಸಿ ಹಾಕಿಕೊಂಡು ಜೀವನ ಮಾಡುತ್ತಿದ್ದು, ಅದು ಜನರ ಮಾನವನ್ನು ಮುಚ್ಚುತ್ತದೆ. ಕೇಂದ್ರ ಸಚಿವರಾಗಿ ಇಂತಹ ಪದ ಪ್ರಯೋಗ ಮಾಡಬಾರದು. ಇನ್ನು ಮುಂದೆ ಜೆಡಿಎಸ್ ಬಗ್ಗೆ ಮಾತನಾಡುವಾಗ ಎಚ್ಚರವಿರಲಿ ಅಂತಾ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಇಂದು ಪುಟಗೋಸಿ ಪಕ್ಷಕ್ಕೆ ಸಲಾಂ ಹೊಡೆಯುವ ಪರಿಸ್ಥಿತಿಗೆ ಬಂದಿದೆ: ಅನಂತಕುಮಾರ್ ಹೆಗಡೆ