ಕಾರವಾರ: ಸಂಸದ ಅನಂತ್‌ಕುಮಾರ್ ಹೆಗಡೆ (Anantkumar Hegde) ಒಬ್ಬ ಹುಚ್ಚ. ಅವನಿಗೆ ಸಂಸ್ಕೃತಿ ಇಲ್ಲ. ಅವನ ಬಗ್ಗೆ ಮಾತಾಡಲು ನನಗೆ ಹುಚ್ಚು ಹಿಡಿದಿಲ್ಲ ಎಂದು ಅನಂತ್‌ಕುಮಾರ್ ಹೆಗಡೆ ವಿರುದ್ಧ ಸಚಿವ ಮಧು ಬಂಗಾರಪ್ಪ (Madhu Bangarappa) ಕಿಡಿಕಾರಿದ್ದಾರೆ.
ಶಿರಸಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಜನರಿಂದ ಮತ ಪಡೆದು ಜನರಿಗೆ ದ್ರೋಹ ಮಾಡಿದ ಮೊದಲ ವ್ಯಕ್ತಿ ಅನಂತ್‌ಕುಮಾರ್ ಹೆಗಡೆ. ನಾಲ್ಕು ವರ್ಷ ಕೂತ್ಕೊಳೋದು, ಆಮೇಲೆ ಜನರ ವಿಶ್ವಾಸಕ್ಕೆ ಮೋಸ ಮಾಡೋದು. ಪ್ರಜಾಪ್ರಭುತ್ವದ ಬಗ್ಗೆ ವಿರೋಧ ಮಾಡಿದವರಿಗೆ ನಾವು ಧಿಕ್ಕಾರ ಮಾಡಲೇಬೇಕು. ಜನ ಅವನನ್ನು ಬದಲಾವಣೆ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಮಲಲ್ಲಾ ವಿಗ್ರಹ ಕೆತ್ತನೆಗೆ ಬಳಸಿರುವ ಕಪ್ಪು ಶಿಲೆ ಸಿಕ್ಕ ಜಾಗದಲ್ಲೇ ರಾಮಮಂದಿರ – ಜ.22 ಕ್ಕೆ ಭೂಮಿಪೂಜೆ
ಬಿಜೆಪಿ (BJP) ಅವನಿಗೆ ಟಿಕೆಟ್ ಕೊಡ್ಬೇಕು. ಆಗ ನಾವು ಅವರನ್ನ ಉಪಚಾರ ಮಾಡೋಕೆ ಬರುತ್ತೇವೆ. ನಾನು ಕೂಡ ಸೋತಿದ್ದೇನೆ. ಆದರೆ ಮಾನ ಮರ್ಯಾದೆ ಬಿಟ್ಟು ಈ ಥರ ಮಾಡೋದನ್ನ ಮಾಡಿಲ್ಲ. ಮನುಷ್ಯನೇ ಅಲ್ಲ ಅವನು, ತಲೆಕೆಟ್ಟಿರೋ ವ್ಯಕ್ತಿ. ಮಾನ ಮರ್ಯಾದೆ ಇಲ್ಲದಿರೋ ವ್ಯಕ್ತಿ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಮೋದಿ ಕಠಿಣ ವ್ರತ – ಪ್ರತಿದಿನ 1 ಗಂಟೆ ವಿಶೇಷ ಮಂತ್ರ ಪಠಣ
ಬೆಂಗಳೂರು: ಸಂಸದ ಅನಂತ್‌ಕುಮಾರ್ ಹೆಗಡೆ (Anantkumar Hegde) ಬಂಧನ ಮಾಡಬೇಕಾ, ಬೇಡ್ವಾ ಎಂದು ಸ್ಥಳೀಯ ಪೊಲೀಸರು ನಿರ್ಧಾರ ಮಾಡುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಸಂಸದರ ವಿರುದ್ಧ ಎಫ್‌ಐಆರ್ ದಾಖಲಾಗಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸಂಸದರ ಮೇಲೆ ಎಫ್‌ಐಆರ್ ಆಗಿದೆ. ಪೊಲೀಸರು ಸಾಕ್ಷ್ಯ ಎಲ್ಲವನ್ನೂ ಕಲೆ ಹಾಕುತ್ತಿದ್ದಾರೆ. ಅದಾದ ಮೇಲೆ ಮುಂದಿನ ಕ್ರಮ ಏನು ಆಗಬೇಕೋ ಅದು ಕಾನೂನು ರೀತಿ ಆಗುತ್ತದೆ. ಅವರನ್ನು ಅರೆಸ್ಟ್ ಮಾಡಬೇಕಾ, ಮಾಡಬಾರದಾ ಎಂದು ಸ್ಥಳೀಯ ಪೊಲೀಸರು ನಿರ್ಧಾರ ಮಾಡುತ್ತಾರೆ ಎಂದರು. ಇದನ್ನೂ ಓದಿ: ಹಿಂದೂ ಸಮಾಜ ಅಂದ್ರೆ ಬೇವರ್ಸಿ ಸಮಾಜಾನಾ?: ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಅನಂತ್ ಕುಮಾರ್ ಹೆಗಡೆ
ನಾವು ಗೃಹ ಇಲಾಖೆಯಿಂದ ಯಾವುದೇ ಡೈರೆಕ್ಷನ್ ಕೊಡೋದಿಲ್ಲ. ಅವರನ್ನು ಅರೆಸ್ಟ್ ಮಾಡಿ, ಬಿಡಿ ಅಂತ ನಾನು ಯಾವತ್ತೂ ಯಾರಿಗೂ ಹೇಳಿಲ್ಲ. ಹೇಳೋದು ಇಲ್ಲ. ಸ್ಥಳೀಯ ಪೋಲೀಸರು ಯಾವ ಸೆಕ್ಷನ್ ಹಾಕಬೇಕೋ ಆ ಸೆಕ್ಷನ್ ಹಾಕಿದ್ದಾರೆ. ಆ ಸೆಕ್ಷನ್‌ನಲ್ಲಿ ಅರೆಸ್ಟ್ ಮಾಡಬೇಕು ಎಂದು ಇದ್ದರೆ ಅರೆಸ್ಟ್ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ‘ಪೂಜಿಸಲೆಂದೇ ಹೂಗಳ ತಂದೆ’; ರಾಮನ ಸ್ಮರಿಸುವ ಕನ್ನಡ ಹಾಡಿಗೆ ಮೋದಿ ಫಿದಾ
– ಕಾಂಗ್ರೆಸ್, ಸಿದ್ದರಾಮಯ್ಯಗೆ ಇಲ್ಲದ ಸಭ್ಯತೆ ಬಿಜೆಪಿಯವರಿಗ್ಯಾಕೆ?
ಕಾರವಾರ: ಸಂಸ್ಕೃತಿಯ ಬಗ್ಗೆ ಹೇಳುವ ಸಿದ್ದರಾಯ್ಯನವರು ಬಹಿರಂಗವಾಗಿ ಚರ್ಚೆಗೆ ಬರಲಿ. ಹಿಂದೂ ಸಮಾಜ ಅಂದ್ರೆ ಬೇವರ್ಸಿ ಸಮಾಜಾನಾ ಎಂದು ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಶಿರಸಿಯ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸಂಸ್ಕೃತಿಯ ಬಗ್ಗೆ ಹೇಳುವ ಸಿದ್ದರಾಯ್ಯನವರು (Siddaramaiah) ಬಹಿರಂಗವಾಗಿ ಚರ್ಚೆಗೆ ಬರಲಿ. ಹಿಂದೂ ಸಮಾಜ ಅಂದ್ರೆ ಬೇವರ್ಸಿ ಸಮಾಜಾನಾ? 20% ಮತಕ್ಕಾಗಿ ಎಷ್ಟೊಂದು ಜೊಲ್ಲು ಸುರಿಸಿ ಮಾತನಾಡುತ್ತಾರೆ? 80% ರಿಂದ 85% ಇರುವ ಹಿಂದೂ ಸಮಾಜದ ಬಗ್ಗೆ ನಿಮಗೆ ಗೌರವ ಯಾಕಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಆ ಮೂಲಕ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಅನಂತ್ ಕುಮಾರ್, ಸಿದ್ದರಾಮಯ್ಯ ಕಾಲಿನ ಧೂಳಿಗೂ ಸಮನಲ್ಲ: ತಂಗಡಗಿ ವಾಗ್ದಾಳಿ
ಸಿಎಂ ಸಿದ್ದರಾಮಯ್ಯ ಮೋದಿ ಅವರನ್ನ ಏಕವಚನದಲ್ಲಿ ಮಾಸ್ ಮರ್ಡರ್ ಎಂದು ಕರೆದರು. ಕಾಂಗ್ರೆಸ್ ನವರಿಗೆ, ಸಿದ್ದರಾಮಯ್ಯ ಅವರಿಗೆ ಇಲ್ಲದ ಸಭ್ಯತೆ ಬಿಜೆಪಿಯವರಿಗ್ಯಾಕೆ? ಇದು ನನ್ನ ಪ್ರಧಾನಿ, ನನ್ನ ದೇಶ, ನನ್ನ ಧರ್ಮದ ಬಗ್ಗೆ ಹೇಳಿರುವ ಹೇಳಿಕೆಯಲ್ಲಿ ಯಾವುದೇ ಹಿಂಜರಿಕೆ ಇಲ್ಲ. ದಿಗ್ವಿಜಯ ಸಿಂಗ್, ಮೋದಿಯವರನ್ನ ರಾವಣ ಅಂತಾ ಕರೆದರು. ಜಯರಾಂ ರಮೇಶ್ ಭಸ್ಮಾಸೂರ ಅಂತಾ ಕರೆದ್ರು, ಮಣಿಶಂಕರ್ ಅಯ್ಯರ್ ವಿಷ ಸರ್ಪ ಅಂತಾ ಕರೆದ್ರು. ಇನ್ನೂ ಏನ್ರಿ ಹೇಳಿಸಿಕೊಳ್ಳಬೇಕು ನಾವು ಎಂದು ಗರಂ ಆಗಿದ್ದಾರೆ.
ನನ್ನ ಹೇಳಿಕೆಯನ್ನ ಖಂಡಿಸುವುದು ಸಹಜ. ಇದು ನನ್ನ ವೈಯಕ್ತಿಕ ಹೇಳಿಕೆ. ಇದು ಪಕ್ಷದ ಹೇಳಿಕೆ ಅಲ್ಲ. ವಿಜಯೇಂದ್ರ ಹೇಳಿರುವ ಮಾತು ಸರಿ ಇದೆ. ಸಂಸ್ಕೃತಿ ಬಗ್ಗೆ ಸಿದ್ದರಾಮಯ್ಯ ನನ್ನ ಎದುರು ಬಂದು ಮಾತನಾಡಲಿ. ಇದೆಲ್ಲದರ ಬಗ್ಗೆ ನಾವಿಬ್ರೂ ಕೂತ್ಕೊಂಡು ಜನರ ಮುಂದೆ ಚರ್ಚೆ ಮಾಡೋಣ. ಎಲ್ಲೋ ಕೂತ್ಕೊಂಡು ಸಭೆಯಲ್ಲಿ ಮಾತನಾಡುವುದು ಸರಿ ಅಲ್ಲ. ಯಡಿಯೂರಪ್ಪನವರ ಬಗ್ಗೆ, ಮೋದಿಯವರ ಬಗ್ಗೆ ನಮ್ಮ ದೇವಸ್ಥಾನದ ಬಗ್ಗೆ ಅಸಭ್ಯವಾಗಿ ಮೊದಲು ಮಾತನಾಡಿದ್ದು, ನಮ್ಮ ದೇವಸ್ಥಾನದ ಬಗ್ಗೆ ಅಷ್ಟು ಕೀಳಾಗಿ ಮಾತನಾಡುವುದು (ಕಾಂಗ್ರೆಸ್) ಯಾಕೆ ಬೇಕಿತ್ತು. ನಮ್ಮ ಪ್ರಧಾನಿ ಮೋದಿ, ಅಮಿತ್ ಶಾ ಬಗ್ಗೆ ಯಾರೆಲ್ಲ ಏನೇನು ಮಾತಾಡಿದ್ದಾರೆ ಹೇಳಬೇಕಾ? ಸಲ್ಮಾನ್ ಖುರ್ಷಿದ್ ಕಪ್ಪೆ, ಮಂಗ, ನಪಸುಂಕ ಎಂದು ಕರೆದರು. ಶರದ್ ಪವಾರ್, ಮೋದಿಯವರನ್ನ ಹಿಟ್ಲರ್ ಅಂತಾ ಕರೆದ್ರು. ಕಾಂಗ್ರೆಸ್ ಬಹುತೇಕ ನಾಯಕರು, ಹಿಟ್ಲರ್ ಎಂದು ಕರೆದಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು
ಕಾಂಗ್ರೆಸ್ ನಾಯಕರು ಎಲ್ರೂ ನನ್ನ ಮುಂದೆ ಬಂದು ಸಂಸ್ಕೃತಿ ಬಗ್ಗೆ ಚರ್ಚೆ ಮಾಡಲಿ. ಸಭ್ಯತೆ ಎಂದ್ರೆ ಏನು ಅಂತಾ ನಾನು ಪಾಠ ಮಾಡ್ತೀನಿ. ಏನೂ ಮಾತನಾಡಬೇಕು ಅಂತಾ ನಾನು ಹೇಳ್ತೀನಿ. ಯಾರಿಗೆ ಯಾವ ಭಾಷೆಯಲ್ಲಿ ಹೇಗೆ ಮಾತಾಡಬೇಕು ಹಾಗೆ ಮಾತಾಡಬೇಕು. ಸಭ್ಯತೆ ಅಂದ್ರೆ ಏನು ಎಂಬುವುದನ್ನ ನೀವೂ ತಿಳಿದುಕೊಳ್ಳಿ. ಸಿದ್ದರಾಮಯ್ಯ ಕಳೆದ ಚುನಾವಣೆಯಲ್ಲಿ ಮೋದಿಯವರಿಗೆ ಏಕವಚನದಲ್ಲಿ ಏನೆಲ್ಲ ಮಾತಾಡಿದ್ರು. ಅವರಿಗೊಂದು ನ್ಯಾಯ ನಮಗೊಂದು ನ್ಯಾಯನಾ? ಅದೆಲ್ಲ ನಮಗೆ ಗೊತ್ತಿಲ್ಲ. ಯಾರಿಗೆ ಹೇಗೆ ಮಾತಾಡಬೇಕು ನಮಗೆ ಗೊತ್ತು. ನನ್ನ ನಾಯಕರನ್ನು ಪ್ರೀತಿ ಮಾಡುವ ಜನ, ಅದಕ್ಕೂ ಹೆಚ್ಚು ನನ್ನ ಧರ್ಮವನ್ನೂ ಪ್ರಿತಿ ಮಾಡುವವ ಜನ. ರಾಮಮಂದಿರ ಬಗ್ಗೆ ಎಷ್ಟ ಅವಹೇಳನವಾಗಿ ಮಾತಾಡಿದ್ರು. ಎಷ್ಟು ಕೀಳಾಗಿ ಹಿಂದೂ ಸಮಾಜದ ಬಗ್ಗೆ ಮಾತಡಿದ್ರು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಂಸ್ಕೃತಿ ಬಗ್ಗೆ ಮಾತನಾಡುವ ಸಿದ್ದರಾಮಯ್ಯನವರೇ ನನ್ನ ಮುಂದೆ ಬರಲಿ. ಲೈವ್ ಡಿಬೆಟ್ ಮಾಡೋಣ. ರಾಜ್ಯದ ಜನರಿಗೆ ಗೊತ್ತಿಲ್ಲ. ನಾಲ್ಕೂವರೆ ವರ್ಷ ಎಲ್ಲಿದ್ರು? ಕುಂಭಕರ್ಣ ಎಂಬ ಕಾಂಗ್ರೆಸ್ ಟೀಕೆ ಮಾಡಿದೆ. ಅದಕ್ಕೆಲ್ಲ ನಾನು ಮುಂದಿನ ದಿನಗಳಲ್ಲಿ ಉತ್ತರ ಕೊಡ್ತೇನೆ. ಎಲ್ಲದಕ್ಕೂ ಉತ್ತರ ಕೊಡ್ತೀನಿ. ಯಾವುದಕ್ಕೂ ಬಡ್ಡಿ ಗಿಡ್ಡಿ ಇಟ್ಟಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.
ಬೆಂಗಳೂರು: ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ಪಾಪ. ಅವರಿಗೆ ಅವರ ಮುಖಂಡರೇ ಆರೋಗ್ಯದ ಬಗ್ಗೆ ಕಾಳಜಿ ಮಾಡಬೇಕು. ಮಾನಸಿಕವಾಗಿ ಸ್ಥಿರ ಇರೋರು ಈ ರೀತಿ ಮಾತಾನಾಡೋಕೆ ಹೋಗಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಟೀಕಿಸಿದರು.
ಸಂಸದ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಹುಶಃ ಅವರ ಲೀಡರ್‌ಗಳಿಗೆ ಅವರು ಮಾತನಾಡಿದ್ದು ತಪ್ಪು ಅಂತ ಗೊತ್ತಾಗಿದೆ. ಇದು ಒಳ್ಳೆಯ ಬೆಳವಣಿಗೆ. ಕೂಡಲೇ ಅವರ ಹೆಲ್ತ್ ಬಗ್ಗೆ ಗಮನ ಕೊಡಲಿ ಎಂದರು. ಇದನ್ನೂ ಓದಿ: ಜ.22ರಂದು ಶ್ರೀರಾಮ ದರ್ಶನ ನೀಡ್ತಿದ್ದು, ಆಹ್ವಾನಿಸಿರೋದು ನನ್ನ ಅದೃಷ್ಟ: ಮೋದಿ
ಇನ್ನು ಇದೇ ಸಂದರ್ಭದಲ್ಲಿ ಜನರಿಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಅವರು, ಈ ವರ್ಷ ಆದರೂ ಮಳೆ ಬಂದು, ಮುಂದಿನ ವರ್ಷ ಒಳ್ಳೆಯ ಬೆಳೆ ಆಗುತ್ತದೆ ಎಂದು ಭಾವಿಸಿದ್ದೇನೆ. ಸುಮಾರು 200ಕ್ಕೂ ಹೆಚ್ಚು ತಾಲೂಕು ಬರಗಾಲ ಅಂತ ಘೋಷಣೆ ಮಾಡಿದ್ದೇವೆ. ಈ ವರ್ಷ ಮತ್ತೆ ಬರಗಾಲ ಬರಬಾರದು. ರೈತರ ಬದುಕು ಹಸನಾಗಲಿ ಎಂದು ನಾವೆಲ್ಲರೂ ಭಗವಂತನಲ್ಲಿ ಪ್ರಾರ್ಥನೆ ಮಾಡೋಣ ಎಂದು ಹರಸಿದರು. ಇದನ್ನೂ ಓದಿ: Ayodhya Ram Mandir: ರಾಮನೂರಿನಲ್ಲಿ ತಲೆಎತ್ತಲಿದೆ ದೇಶದ ಮೊದಲ 7 ಸ್ಟಾರ್ ಸಸ್ಯಹಾರಿ ಹೋಟೆಲ್
19ನೇ ತಾರೀಕು ಸಂಜೆ 4 ಗಂಟೆಗೆ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಲೆಕ್ಷನ್ ಕಮಿಟಿ ಸಭೆ ಕರೆಯುತ್ತಿದ್ದೇನೆ. ನಮ್ಮ ಸೆಂಟ್ರಲ್ ಅಧ್ಯಕ್ಷರು ಬರುತ್ತಾರೆ. ನಮ್ಮ ಲೋಕಸಭಾ ಕ್ಯಾಂಡಿಡೆಟ್ ಫೈನಲ್‌ಗೆ ಸಂಬಂಧಿಸಿದಂತೆ ಸಭೆ ನಡೆಸಲಿದ್ದೇನೆ. ಹಾಗೆಯೇ 21ನೇ ತಾರೀಕು ದಕ್ಷಿಣ ಕನ್ನಡದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ. ನಿಗಮ ಮಂಡಳಿ ಸಂಕ್ರಾಂತಿ ಒಳಗಡೆನೆ ಆಗಲಿದೆ. ಅದಕ್ಕಿಂತ ಮುಂದೆ ಹೋಗಲ್ಲ. ಸಾಯಂಕಾಲ ಒಳಗಡೆ ಆದರೆ ನಿಮ್ಮ ಜೊತೆಗೆ ಮಾತಾನಾಡುತ್ತೇನೆ. ಎಲೆಕ್ಷನ್ ಟೈಮ್‌ನಲ್ಲಿ ಏನು ಮಾತು ಕೊಟ್ಟಿದ್ದೇವೆ ಅದನ್ನು ನಡೆಸುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಭಿಕ್ಷುಕರೆಂದು ಗೊರವಯ್ಯನವವರನ್ನು ನಿರಾಶ್ರಿತರ ಕೇಂದ್ರಕ್ಕೆ ಕರೆದೊಯ್ದ ಅಧಿಕಾರಿಗಳು
ಬೆಂಗಳೂರು: ಸಂಸದ ಅನಂತಕುಮಾರ್ ಹೆಗಡೆ (Ananthkumar Hegde) ಕುಂಭಕರ್ಣನಿದ್ದಂತೆ. ನಾಲ್ಕೂವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದು ಎಂದು ಕಾಂಗ್ರೆಸ್ (Congress) ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.
ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ಕುರಿತು ಕಾಂಗ್ರೆಸ್ (Congress) ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ. ದಲಿತ, ಹಿಂದುಳಿದ ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಏಳಿಗೆಯನ್ನು ಸಹಿಸದ ವಿಕೃತ ಮನಸ್ಥಿತಿಯ ಪರಂಪರೆಯನ್ನು ಮುಂದುವರಿಸುವ ಅನಂತ್ ಕುಮಾರ್ ಹೆಗಡೆಯಂತಹ ಕ್ರಿಮಿ ಕೀಟಗಳು ಈ ದೇಶಕ್ಕೆ ಕ್ಯಾನ್ಸರ್‌ನಂತೆ ಕಾಡುತ್ತವೆ. ಈ ಕ್ಯಾನ್ಸರ್‌ಗೆ ಸಂವಿಧಾನದಲ್ಲಿ ಔಷಧವಿದೆ ಎಂದು ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಕೋಚಿಮುಲ್ ನೇಮಕಾತಿ ಅಕ್ರಮ – ಶಾಸಕರ ಶಿಫಾರಸು ಪತ್ರ ನೀಡಿದ ಅಭ್ಯರ್ಥಿಗಳಿಗೆ ಇಡಿ ಶಾಕ್
ಶಿವಮೊಗ್ಗ: ಸಿದ್ದರಾಮಯ್ಯನವರು (Siddaramaiah) ನಿಮಿಷಕ್ಕೊಂದು ಮಾತನಾಡ್ತಾರೆ. ನಿಮ್ಮ ಹೆಸರಿನಲ್ಲಿ ಸಿದ್ದ, ರಾಮ ಎರಡೂ ಇದೆ. ನೀವೇಕೆ ಬಿಜೆಪಿ ರಾಮಮಂದಿರ ಅಂತ ಅಂದುಕೊಳ್ತೀರಾ? ರಾಮಮಂದಿರಕ್ಕೆ ಹೋಗಿ ನಿಮ್ಮ ಪಾಪ ತೊಳೆದುಕೊಂಡು ಬನ್ನಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa), ಸಿಎಂ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಶಿವಮೊಗ್ಗದಲ್ಲಿ (Shivamogga) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನಂತಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಅನಂತಕುಮಾರ್ ಹೇಳಿರೋದ್ರಲ್ಲಿ ತಪ್ಪಿಲ್ಲ. ಏಕೆಂದರೆ ಮಂಡ್ಯದ ಶ್ರೀರಂಗಪಟ್ಟಣ, ಕಾರವಾರ ಜಿಲ್ಲೆಯಲ್ಲಿ ದೇವಸ್ಥಾನ ಒಡೆದು ಮಸೀದಿ (Mosque) ಕಟ್ಟಿದ್ದಾರೆ. ಇದನ್ನು ಎಲ್ಲಾ ಭಾರತೀಯರು ಸ್ವಾಗತ ಮಾಡಬೇಕಾ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಾಬರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಿರ್ನಾಮ ಆಗುತ್ತೆ – ಅನಂತಕುಮಾರ್ ಹೆಗಡೆ ಎಚ್ಚರಿಕೆ
ನೀವೇಕೆ ಅಯೋಧ್ಯೆಯಲ್ಲಿರೋದು ಬಿಜೆಪಿ ರಾಮಮಂದಿರ (Ram Mandir) ಅಂದುಕೊಳ್ತೀರಾ? ನಾವು ಈ ವಿಷಯದಲ್ಲಿ ರಾಜಕಾರಣ ಮಾಡ್ತಿಲ್ಲ. ಇಡೀ ವಿಶ್ವದ ಹಿಂದೂಗಳನ್ನು ಒಂದು ಮಾಡಲು ಶ್ರೀರಾಮ ಇರೋದು. ಯಾವ ರೀತಿ ರಾಜಕಾರಣ ಮಾಡ್ತಿದ್ದೇವೆ ಅಂತಾ ನೀವು ಹೇಳಿದ್ರೆ ನಾವು ತಿದ್ದಿಕೊಳ್ಳುವ ಪ್ರಯತ್ನ ಮಾಡ್ತೇವೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಇಂಟರ್‌ನೆಟ್‌ನಲ್ಲಿ ಹುಡುಕಿ ಪ್ಲ್ಯಾನ್- ರಿಮೂವರ್ ಕುಡಿಸಿ ಮಗು ಹತ್ಯೆಗೈದಿದ್ದ ಮಹಿಳೆ ಅರೆಸ್ಟ್
ಹಾವೇರಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಹಾವೇರಿಯ ಲಾಡ್ಜ್‌ವೊಂದರಲ್ಲಿ ಮಹಿಳೆಯ ಮೇಲೆ ಏಳು ಜನ ಅತ್ಯಾಚಾರ ಮಾಡಿದ್ದಾರೆ. ಇವರನ್ನು ಮನುಷ್ಯರೆಂದು ಕರೆಯಬೇಕಾ? ಯಾವುದೇ ಧರ್ಮದ ಹೆಣ್ಣು ಮಗಳಾಗಲಿ ಇಂತಹ ನೀಚ ಕೃತ್ಯ ನಡೆಯಬಾರದು. ಗೃಹ ಸಚಿವರು ಇಂತಹ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.ಇದನ್ನೂ ಓದಿ: ಕಾಲಿಗೆ ಬಿದ್ದು ಬೇಡಿಕೊಂಡರೂ ಬಿಡದೇ ಅತ್ಯಾಚಾರ ಮಾಡಿದ್ರು – ಘಟನೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಸಂತ್ರಸ್ತೆ
ಕಾರವಾರ: ಬಾಬರಿ ಮಸೀದಿ (Babri Masjid) ನಿರ್ನಾಮ ಆದಂತೆ ಭಟ್ಕಳದ ಚಿನ್ನದ ಪಳ್ಳಿಯೂ ಅದರ ಸಾಲಿಗೆ ಸೇರಲಿದೆ. ಇದನ್ನು ಬೆದರಿಕೆ ಅಂತ ಬೇಕಾದ್ರೆ ತಿಳಿಯಿರಿ, ಬಾಬರಿ ಮಸೀದಿಯಂತೆ ಭಟ್ಕಳದ ಮಸೀದಿಯನ್ನೂ ನಿರ್ನಾಮ ಮಾಡುವುದು ಗ್ಯಾರಂಟಿ ಎಂದು ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ಕುಮಟಾದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಸದರು, ಬಾಬರಿ ಮಸೀದಿಯಂತೆ ಭಟ್ಕಳದ ಮಸೀದಿಯನ್ನೂ (Mosque) ನಿರ್ನಾಮ ಮಾಡುವುದು ಗ್ಯಾರಂಟಿ. ಇದು ಅನಂತಕುಮಾರ ಹೆಗಡೆ ತೀರ್ಮಾನವಲ್ಲ, ಹಿಂದೂ ಸಮಾಜದ ತೀರ್ಮಾನ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗ್ಯಾರಂಟಿಗಳ ಪ್ರತಿ ಪೈಸೆಯೂ ನಿಮ್ಮ ಬದುಕಿಗೆ ಸದುಪಯೋಗವಾಗಬೇಕು: ಸಿದ್ದರಾಮಯ್ಯ
ಶಿರಸಿಯ ಸಿಪಿ ಬಜಾರ್‌ನಲ್ಲಿರುವ ಮಸೀದಿ, ಅದು ವಿಜಯ ವಿಠ್ಠಲ ದೇವಸ್ಥಾನ, ಶ್ರೀರಂಗಪಟ್ಟಣದಲ್ಲಿರುವ ದೊಡ್ಡ ಮಸೀದಿ ಕೂಡು ಮಾರುತಿ ದೇವಸ್ಥಾನ. ಇದೇ ರೀತಿ ದೇಶದ ಹಳ್ಳಿಯ ಮೂಲೆ-ಮೂಲೆಗಳಲ್ಲಿ ಅಪಮಾನಗೊಂಡಿರುವ ಅನೇಕ ಸಂಕೇತಗಳಿವೆ, ಅದನ್ನು ಕಿತ್ತುಹಾಕುವ ತನಕ ಹಿಂದೂ ಸಮಾಜ ಸುಮ್ಮನೆ ಕೂರಲ್ಲ. ಈಗ ರಣಭೈರವ ಎದ್ದಾಗಿದೆ. ಮತ್ತೆ ಕೂರುವ ಪ್ರಶ್ನೆಯೇ ಇಲ್ಲ. ಹಿಂದೂ ಧರ್ಮ ಯಾರ ಋಣವನ್ನು ಇಟ್ಟುಕೊಳ್ಳುವ ಧರ್ಮವಲ್ಲ, ಸಾವಿರ ವರ್ಷಗಳ ಸೇಡನ್ನು ತೀರಿಸಿಕೊಳ್ಳದಿದ್ದರೇ ಇದು ಹಿಂದೂ ರಕ್ತವೇ ಅಲ್ಲ ಎಂದು ಕೆಂಡ ಕಾರಿದ್ದಾರೆ.
ಜಾತಿ ಹೆಸರಲ್ಲಿ ಹಿಂದೂ ಸಮಾಜ ಒಡೆದರು: ಇಂದಿಗೂ ಮೂರ್ಖ ರಾಮಯ್ಯನಂತಹವರು ಹಿಂದೂ ಸಮಾಜ ಒಡೆಯುತ್ತಿದ್ದಾರೆ. ಶತಮಾನಗಳು ಕಳೆದ ಬಳಿಕವೂ ಹಿಂದೂ ಸಮಾಜ ಒಡೆಯುವ ಕೆಲಸ ಆಗಬಾರದು. ಮತ್ತೆ ನಾವೇ ಪ್ರತ್ನಿಸಿದರೂ ಸಮಾಜ ಒಡೆಯದಂತೆ ಸದೃಢಗೊಳಿಸಬೇಕು ಎಂದು ಕರೆ ನೀಡಿದ್ದಾರೆ.
ಕೆಲವರು ರಾಮಮಂದಿರ ಆಮಂತ್ರಣ ನಮಗೆ ಬಂದಿಲ್ಲ ಅಂದರು, ಬಂದಮೇಲೆ ಕಾರ್ಯಕ್ರಮಕ್ಕೆ ಹೋಗಲ್ಲ ಅಂದರು. ಈಗ ಹೋಗ್ತೀನಿ ಅಂತಿದ್ದಾರೆ. ಇದು ಹಿಂದೂ ಸಮಾಜದ ದಮ್ಮು, ತಾಕತ್ತು ಎಂದು ಟಾಂಗ್ ಕೊಟ್ಟಿದ್ದಾರೆ.
ಕಾರವಾರ: ಉತ್ತರ ಕನ್ನಡ ಜಿಲ್ಲೆಗೆ ಸಂಸದ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಗೊಂದಲವಿಲ್ಲ. ಈ ಬಾರಿ ಲೋಕಸಭಾ ಚುನಾವಣೆಗೆ ಹಾಲಿ ಸಂಸದ ಅನಂತ್‌ಕುಮಾರ್ ಹೆಗಡೆ (Anantkumar Hegde) ಅವರೇ ಮತ್ತೆ ಉತ್ತರ ಕನ್ನಡ ಜಿಲ್ಲೆಯ ಅಭ್ಯರ್ಥಿ ಆಗಲಿದ್ದಾರೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ತಿಳಿಸಿದ್ದಾರೆ.
ಶಿರಸಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಗೆ (Lok Sabha Elections) ಹಾಲಿ ಸಂಸದ ಅನಂತ್‌ಕುಮಾರ್ ಹೆಗಡೆ ಅವರೇ ಅಭ್ಯರ್ಥಿಯಾಗಲಿದ್ದಾರೆ. ಅಂತಿಮವಾಗಿ ಹೈಕಮಾಂಡ್ ಹಾಗೂ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧವಾಗಿದ್ದೇವೆ ಯಾರೇ ನಿಂತರು ಗೆಲ್ಲಿಸಿ ತರುತ್ತೇವೆ ಎಂದು ಹೇಳಿದ್ದಾರೆ.
ಇದೇ ವೇಳೆ ಕಾವೇರಿ ಹೋರಾಟ ವಿಚಾರವಾಗಿ ಮಾತನಾಡಿ, ರಾಜ್ಯ ಸರ್ಕಾರವು ತಮಿಳುನಾಡಿಗೆ ನೀರು ಬಿಡುವುದನ್ನು ಕೂಡಲೇ ನಿಲ್ಲಿಸಬೇಕು. ಕನ್ನಡ ನಾಡಿನ ಹಿತ ಕಾಪಾಡಬೇಕು ಮತ್ತು ರಾಜ್ಯಕ್ಕೆ ನ್ಯಾಯ ಸಿಗಬೇಕು. ಬಿಜೆಪಿ-ಜೆಡಿಎಸ್ ಪಕ್ಷಗಳು ಸೇರಿ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುತ್ತೇವೆ ಎಂದರಲ್ಲದೇ, ಕಾವೇರಿ ನೀರಿನ ವಿಚಾರದಲ್ಲಿ ಅಧಿಕಾರದ ದುರ್ಬಳಕೆಯಾಗುತ್ತಿದೆ. INDIA (ಇಂಡಿಯಾ) ಮೈತ್ರಿಗಾಗಿ ರಾಜ್ಯದ ಹಿತವನ್ನ ಬಲಿ ಕೊಡಲಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಏಷ್ಯಾದ ಅತಿದೊಡ್ಡ ಮಾರುಕಟ್ಟೆ ಧಗ ಧಗ – ಬೆಂಕಿ ನಂದಿಸಲು ಹರಸಾಹಸ
ಕಾರವಾರ: ಕಾಂಗ್ರೆಸ್ ಶಾಸಕನೊಂದಿಗೆ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ಗೌಪ್ಯ ಸಭೆ ನಡೆಸಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಹಲವು ತಿಂಗಳಿನಿಂದ ಪಕ್ಷ ಹಾಗೂ ಕ್ಷೇತ್ರದ ಕಾರ್ಯಚಟುವಟಿಕೆಯಿಂದ ದೂರ ಉಳಿದಿದ್ದ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದಿಶಾ ಸಭೆಗೆ ಆಗಮಿಸಿದ್ದರು.
ಈ ಹಿಂದೆ ಬಿಜೆಪಿ ಸೇರುವಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಆಹ್ವಾನವನ್ನು ಹೆಗಡೆ ನೀಡಿದ್ದರು. ಆದರೆ ಪಕ್ಷದ ವರಿಷ್ಠರ ಕಾರಣದಿಂದ ಸೈಲ್ ಬಿಜೆಪಿಗೆ ಸೇರದಂತಾಗಿತ್ತು. ಇನ್ನು ಸೈಲ್ ಕೂಡ ಚುನಾವಣಾ ಸಂದರ್ಭದಲ್ಲಿ ಪಕ್ಷದ ಯಾವ ನಾಯಕರನ್ನು ಕರೆಸದೇ ಹಾಗೂ ಪಕ್ಷದ ಯಾವುದೇ ಕಾರ್ಯಚಟುವಟಿಕೆಯಲ್ಲಿ ಭಾಗವಹಿಸದೇ ಪಕ್ಷದಲ್ಲೇ ಅಂತರ ಕಾಯ್ದುಕೊಂಡಿದ್ದರು.
ಮಂಗಳೂರು: ನಮ್ಮ ದೇಶದಲ್ಲಿ ಕೆಲವರು ಹಿಂದುತ್ವದ ಬಗ್ಗೆ ಚರ್ಚೆ ಮಾಡ್ತಾರೆ. ನಾನು ಹಿಂದೂ (Hindu), ಆದರೆ ನನಗೆ ಹಿಂದುತ್ವ ಬೇಕಿಲ್ಲ ಅಂತಾರೆ. ಅಬ್ಬಬ್ಬ ಆ ಮನುಷ್ಯನಿಗೆ ಅವನ ರಕ್ತಾನೇ ಗೊತ್ತಿಲ್ಲ. ಅಂಥವರಿಗೆಲ್ಲ ಹಿಂದುತ್ವ ಬೇಡ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ವಾಗ್ದಾಳಿ ನಡೆಸಿದ್ದಾರೆ.
ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಕೆಲವರು ಹಿಂದುತ್ವದ ಬಗ್ಗೆ ಚರ್ಚೆ ಮಾಡ್ತಾರೆ. ನಾನು ಹಿಂದೂ, ಆದರೆ ನನಗೆ ಹಿಂದುತ್ವ ಬೇಕಿಲ್ಲ ಅಂತಾರೆ. ಅಬ್ಬಬ್ಬ ಆ ಮನುಷ್ಯನಿಗೆ ಅವನ ರಕ್ತಾನೇ ಗೊತ್ತಿಲ್ಲ. ಅಂಥವರಿಗೆಲ್ಲ ಹಿಂದುತ್ವ ಬೇಡ. ನಿನಗೆ ಬೇಕೋ ಬೇಡ್ವೋ, ಯಾರಿಗ್ ಬೇಕು, ನಿನಗೆ ಬೇಡ ಅಂತ ನಾವು ಪರಿಗಣನೆ ಮಾಡಿ ಆಗಿದೆ.
ಅವನು ಹಿಂದೂ ಅಲ್ಲ ಅಂತ ನಾವು ತೆಗೆದಿಟ್ಟಾಗಿದೆ. ಹಿಂದೂ ಅಂತ ಹೇಳಿಸಿಕೊಳ್ಳಲು ಕೆಲವು ಯೋಗ್ಯತೆಗಳಿವೆ. ಆಡಂಬರದ ಬದುಕು ಒಪ್ಪದಿರೋದು ಮತ್ತು ಸತ್ಯದ ಬದುಕು ಹಿಂದುತ್ವ. ಈ ಹಿಂದುತ್ವದ ಬಗ್ಗೆ ಇಂತಹ ಕಮಂಗಿಗಳಿಗೆ ಏನ್ರೀ ಅರ್ಥ ಆಗಬೇಕು ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಪ್ರತಿಯೊಬ್ಬ ಹಿಂದೂ ತನ್ನ ಮನೆಯಲ್ಲಿ ತಲ್ವಾರ್ ಇಡ್ಬೇಕು- ಮುತಾಲಿಕ್ ಪ್ರಚೋದನಕಾರಿ ಹೇಳಿಕೆ
ಜಾತಿಯ ಗೂಡು ಬಿಟ್ಟು ಹೊರಗೆ ಬರಲು ಸಾಧ್ಯವಿಲ್ಲದವ್ರೆಲ್ಲ ಹಿಂದುತ್ವದ ಬಗ್ಗೆ ಚರ್ಚೆ ಮಾಡ್ತಾರೆ. ಪುಸ್ತಕ ಓದಲು ಯೋಗ್ಯತೆ ಇಲ್ಲದವ್ರೆಲ್ಲಾ ಹಿಂದುತ್ವದ ಬಗ್ಗೆ ಚರ್ಚೆ ಮಾಡ್ತಾರೆ. ದೇವಸ್ಥಾನಕ್ಕೆ ಹೋಗುವಾಗ ಹೇಗೆ ಹೋಗಬೇಕು ಅಂತ ಗೊತ್ತಿಲ್ಲದವರೆಲ್ಲಾ ಹಿಂದುತ್ವದ ಬಗ್ಗೆ ಚರ್ಚೆ ಮಾಡ್ತಾರೆ. ಕುತ್ತಿಗೆಗೆ ಹಾಕುವ ಶಾಲಿನಲ್ಲಿ ಹಿಂದುತ್ವ ಕಾಣ ಬಾರದು. ಹಣೆಗೆ ಇಟ್ಟಿರೋ ತಿಲಕದಲ್ಲಿ ಹಿಂದುತ್ವ ಕಾಣಬಾರದು, ನಮ್ಮ ಬದುಕಿನಲ್ಲಿ ಕಾಣಬೇಕು. ನನ್ನ ನಾಲಗೆ, ನನ್ನ ಬದುಕು, ನನ್ನ ವಿಚಾರದಲ್ಲಿ ಕಾಣುವುದು ನಿಜವಾದ ಹಿಂದುತ್ವ. ಒಳಗಡೆ ಒಂದು, ಹೊರಗಡೆ ಒಂದು ಇರೋದನ್ನು ಹಿಂದುತ್ವ ಎನ್ನಲು ಸಾಧ್ಯವಿಲ್ಲ. ಸುಳ್ಳು ಹೇಳುವುದು, ಅಸತ್ಯದ ಮಾತು ಹಿಂದುತ್ವ ಅಲ್ಲ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಗುಜರಾತ್ ಸಕ್ಸಸ್: ಹುಬ್ಬಳ್ಳಿಯಲ್ಲಿ ಮೋದಿ ಶೋ ಸ್ಯಾಂಪಲ್ ಅಷ್ಟೇ – ಕರ್ನಾಟಕದಲ್ಲಿ ಮುಂದಿದೆ ಮೆಗಾ ಹವಾ
Live Tv
[brid partner=56869869 player=32851 video=960834 autoplay=true]