Tag: Ananya Panday

  • ನಿಮ್ಮದು ಕೋಳಿ ಕಾಲುಗಳು- ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ ಅನನ್ಯಾ ಪಾಂಡೆ

    ನಿಮ್ಮದು ಕೋಳಿ ಕಾಲುಗಳು- ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ ಅನನ್ಯಾ ಪಾಂಡೆ

    ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ (Ananya Panday) ನಟಿಸಿದ ಚೊಚ್ಚಲ ಚಿತ್ರದಿಂದ ಇದುವರೆಗೂ ಸಕ್ಸಸ್ ಎಂಬುದೇ ಸಿಕ್ಕಿಲ್ಲ. ನೆಪೋ ಕಿಡ್ ಎಂದು ಟ್ರೋಲ್ ಆಗುವುದರ ಜೊತೆ ಬಾಡಿ ಶೇಮಿಂಗ್‌ಗೆ (Body Shaming) ಒಳಗಾಗಿದ್ದು ಇದೆ. ಇದೀಗ ಸಂದರ್ಶನವೊಂದರಲ್ಲಿ ಬಾಡಿ ಶೇಮಿಂಗ್ ಮಾಡಿದ್ದರ ಕೆಟ್ಟ ಕಾಮೆಂಟ್‌ಗಳ ಬಗ್ಗೆ ನಟಿ ಮಾತನಾಡಿದ್ದಾರೆ. ಇದನ್ನೂ ಓದಿ:ಬಿಕಿನಿಯಲ್ಲಿ ಬೀಚ್ ಬಳಿ ನಟಿ ಖುಷಿ ಕಪೂರ್ ಚಿಲ್

    ಸಂದರ್ಶನವೊಂದರಲ್ಲಿ ಅನನ್ಯಾ ಮಾತನಾಡಿ, ನನಗೆ ಆಗ 18 ಅಥವಾ 19 ವರ್ಷವಿರಬಹುದು. ನಾನು ಹೊರಗೆ ಕ್ಯಾಮೆರಾ ಮುಂದೆ ಗುರುತಿಸಿಕೊಳ್ಳಲು ಆರಂಭಿಸಿದ್ದೆ. ಆಗ ನಾನು ತೆಳ್ಳಗಿರುವ ಬಗ್ಗೆ ಎಲ್ಲರೂ ಟೀಕಿಸುತ್ತಿದ್ದರು. ನಿಮ್ಮದು ಕೋಳಿ ಕಾಲುಗಳು, ಬೆಂಕಿ ಕಡ್ಡಿಯಂತೆ ಕಾಣುತ್ತೀರಿ ಎಂದು ಎಲ್ಲರೂ ಟೀಕಿಸುತ್ತಿದ್ದರು. ನಿಮಗೆ ಎದೆಯ ಭಾಗ, ಹಿಂಭಾಗ ಏನು ಇಲ್ಲ ಎಂದು ಗೇಲಿ ಮಾಡುತ್ತಿದ್ದರು ಎಂದು ಹಳೆಯ ಕಹಿ ಅನುಭವಗಳನ್ನು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: Cannes Film Festival 2025: ರೆಡ್ ಕಾರ್ಪೆಟ್‌ನಲ್ಲಿ ಮಿಂಚಿದ ಕನ್ನಡತಿ ದಿಶಾ ಮದನ್

    ಬಾಲಿವುಡ್ ನಟ ಚಂಕಿ ಪಾಂಡೆ ಪುತ್ರಿ ಅನನ್ಯಾ ಪಾಂಡೆ ಅವರು ಸ್ಟುಡೆಂಟ್ ಆಫ್ ದಿ ಇಯರ್ 2 ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಿಚಿತರಾದರು. ನಟಿಸಿದ ಮೊದಲ ಸಿನಿಮಾನೇ ಅಟ್ಟರ್ ಫ್ಲಾಪ್ ಆಗಿತ್ತು. ಪತಿ ಪತ್ನಿ ಔರ್ ವೋ, ಲೈಗರ್, ಗೆಹರಾಯಿಯಾ ಸಿನಿಮಾಗಳು ಕೂಡ ಗಲ್ಲಾಪೆಟ್ಟಿಗೆಯಲ್ಲಿ ಮಕಾಡೆ ಮಲಗಿತ್ತು. ಹೀಗಾಗಿನೇ ಸ್ಟಾರ್ ಕಿಡ್, ನೆಪೋ ಕಿಡ್ ಎಂದು ಹೆಚ್ಚಾಗಿ ನಟಿ ಟ್ರೋಲ್ ಆಗುತ್ತಲೇ ಇರುತ್ತಾರೆ.

    ಇತ್ತೀಚೆಗೆ ಅಕ್ಷಯ್ ಕುಮಾರ್ (Akshay Kumar) ಜೊತೆ ನಟಿಸಿದ ‘ಕೇಸರಿ ಚಾಪ್ಟರ್ 2’ಗೆ (Kesari Chapter 2) ಮೆಚ್ಚುಗೆ ವ್ಯಕ್ತವಾಗಿತ್ತು. ಇವು ಸಿನಿಮಾಗಳಿಗಿಂತ ಕೇಸರಿ ಚಿತ್ರದಲ್ಲಿನ ಅನನ್ಯಾ ಪಾತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಇಲ್ಲಿಂದ ಅವರ ಸಿನಿ ಕೆರಿಯರ್‌ಗೆ ಟರ್ನಿಂಗ್ ಪಾಯಿಂಟ್ ಸಿಗುತ್ತಾ ಕಾದುನೋಡಬೇಕಿದೆ.

  • ಅಲ್ಲು ಅರ್ಜುನ್ ಸಿನಿಮಾದಲ್ಲಿ ‘ಲೈಗರ್’ ನಟಿ?

    ಅಲ್ಲು ಅರ್ಜುನ್ ಸಿನಿಮಾದಲ್ಲಿ ‘ಲೈಗರ್’ ನಟಿ?

    ‘ಪುಷ್ಪ 2′ ಸಿನಿಮಾದ (Pushpa 2) ಸಕ್ಸಸ್ ಬಳಿಕ ಅಲ್ಲು ಅರ್ಜುನ್ ಇದೀಗ ‘ಜವಾನ್’ (Jawan) ಡೈರೆಕ್ಟರ್ ಅಟ್ಲಿ ಜೊತೆ ಕೈಜೋಡಿಸಿದ್ದಾರೆ. ಇದೀಗ ಈ ಚಿತ್ರಕ್ಕೆ ನಾಯಕಿಯಾಗಿ ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ನಟಿಸಲಿದ್ದಾರೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಇದನ್ನೂ ಓದಿ:ಯಶ್ ತಾಯಿ ನಿರ್ಮಾಣದ ಸಿನಿಮಾದಲ್ಲಿ ಪೃಥ್ವಿ ಅಂಬರ್- ‌’ಕೊತ್ತಲವಾಡಿ’ ಚಿತ್ರದ ಪೋಸ್ಟರ್‌ ಔಟ್

    ಅಟ್ಲಿ ಸಿನಿಮಾದಲ್ಲಿ ಅಲ್ಲು ಅರ್ಜುನ್ (Allu Arjun) ಅವರು ತ್ರಿಬಲ್ ರೋಲ್‌ನಲ್ಲಿ ನಟಿಸಲಿದ್ದಾರಂತೆ. ಹಾಗಾಗಿ ಅದರಲ್ಲಿ ಒಂದು ಪಾತ್ರಕ್ಕೆ ಅಲ್ಲು ಅರ್ಜುನ್‌ಗೆ ಜೋಡಿಯಾಗಿ ನಟಿಸಲು ಅನನ್ಯಾ (Ananya Panday) ಅವರನ್ನು ಚಿತ್ರತಂಡ ಸಂಪರ್ಕಿಸಿದೆ ಎನ್ನಲಾಗಿದೆ. ಆದರೆ ಈ ಸಿನಿಮಾದಲ್ಲಿ ನಟಿಸಲು ನಟಿ ಒಪ್ಪಿಕೊಂಡ್ರಾ ಎಂಬುದು ಚಿತ್ರತಂಡದ ಕಡೆಯಿಂದ ಖಾತ್ರಿಯಾಗಬೇಕಿದೆ.

    ಈ ಹಿಂದೆ ವಿಜಯ್ ದೇವರಕೊಂಡಗೆ ನಾಯಕಿಯಾಗಿ ಅನನ್ಯಾ ‘ಲೈಗರ್’ ಸಿನಿಮಾದಲ್ಲಿ ನಟಿಸಿದ್ದರು. ಹಾಗಾಗಿ ತೆಲುಗಿನ ನಟ ಅಲ್ಲು ಅರ್ಜುನ್ ಸಿನಿಮಾದಲ್ಲಿ ಅವರು ನಟಿಸಲಿದ್ದಾರೆ ಎನ್ನಲಾದ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ: ಪ್ರತಿ ಜನ್ಮಕೂ ನೀನೇ ಬೇಕು – ಚಿರು ಜೊತೆಗಿನ ಸ್ಪೆಷಲ್‌ ಫೋಟೋ ಹಂಚಿಕೊಂಡ ಮೇಘನಾ

    ಅನನ್ಯಾ ಪಾಂಡೆ ಅವರು ಬಾಲಿವುಡ್‌ನಲ್ಲಿ ಬ್ಯುಸಿಯಾಗಿದ್ದಾರೆ. ಅವರು ನಟಿಸುತ್ತಿರುವ ಸಿನಿಮಾ ಸಕ್ಸಸ್ ಕಾಣದೇ ಇದ್ದರೂ ಅವರಿಗೆ ಬೇಡಿಕೆ ಕಮ್ಮಿಯಾಗಿಲ್ಲ.

  • ಕಥಕ್ಕಳಿ ವೇಷದಲ್ಲಿ ಅಕ್ಷಯ್ ಕುಮಾರ್- ‘ಕೇಸರಿ 2’ ಚಿತ್ರದ ಪೋಸ್ಟರ್ ಔಟ್

    ಕಥಕ್ಕಳಿ ವೇಷದಲ್ಲಿ ಅಕ್ಷಯ್ ಕುಮಾರ್- ‘ಕೇಸರಿ 2’ ಚಿತ್ರದ ಪೋಸ್ಟರ್ ಔಟ್

    ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಸದಾ ಹೊಸ ಬಗೆಯ ಪಾತ್ರಗಳ ಮೂಲಕ ಗಮನ ಸೆಳೆಯುತ್ತಲೇ ಇರುತ್ತಾರೆ. ಕಥಕ್ಕಳಿ ವೇಷದಲ್ಲಿ ಅಕ್ಷಯ್ ಕಾಣಿಸಿಕೊಂಡಿದ್ದಾರೆ. ‘ಕೇಸರಿ 2’ (Kesari 2) ಸಿನಿಮಾ ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಏಪ್ರಿಲ್ 10ರಂದು ತೆರೆಗಾಣಲು ಸಜ್ಜಾದ ‘ವಿದ್ಯಾಪತಿ’!

    ಕಥಕ್ಕಳಿ ಲುಕ್‌ನಲ್ಲಿರುವ ಫೋಟೋ ಶೇರ್ ಮಾಡಿ ಇದು ಕೇವಲ ಕಾಸ್ಟ್ಯೂಮ್ ಅಲ್ಲ, ನಮ್ಮ ದೇಶದ ಸಂಪ್ರದಾಯದ ಪ್ರತೀಕ ಎಂದು ಅಕ್ಷಯ್ ಕುಮಾರ್ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಏ.22ರಿಂದ ಜ್ಯೂ.ಎನ್‌ಟಿಆರ್, ಪ್ರಶಾಂತ್ ನೀಲ್ ಸಿನಿಮಾದ ಶೂಟಿಂಗ್ ಶುರು

     

    View this post on Instagram

     

    A post shared by Akshay Kumar (@akshaykumar)

    ‘ಕೇಸರಿ 2’ ಚಿತ್ರದಲ್ಲಿ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಕುರಿತು ಚಿತ್ರೀಕರಿಸಿದ್ದಾರೆ. ಇದಕ್ಕಾಗಿ ಸಿ. ಶಂಕರನ್ ನಾಯರ್ ನೇತೃತ್ವದಲ್ಲಿ ನ್ಯಾಯಕ್ಕಾಗಿ ನಡೆದ ಹೋರಾಟದ ಅಸಲಿ ಕಥೆಯನ್ನೇ ಈ ಸಿನಿಮಾದಲ್ಲಿ ತೋರಿಸಲು ಹೊರಟಿದ್ದಾರೆ. ಇದೇ ಏ.18ರಂದು ಸಿನಿಮಾ ರಿಲೀಸ್ ಆಗಲಿದೆ.

     

    View this post on Instagram

     

    A post shared by Akshay Kumar (@akshaykumar)

    ಧರ್ಮ ಸಂಸ್ಥೆ ನಿರ್ಮಾಣದ ಸಿನಿಮಾ ಇದಾಗಿದ್ದು, 2019ರಲ್ಲಿ ತೆರೆಕಂಡ ‘ಕೇಸರಿ’ ಚಿತ್ರದ ಸೀಕ್ವೆಲ್ ಇದಾಗಿದೆ. ಈ ಚಿತ್ರವನ್ನು ಕರಣ್ ಸಿಂಗ್ ತ್ಯಾಗಿ ನಿರ್ದೇಶನ ಮಾಡಿದ್ದಾರೆ. ‘ಕೇಸರಿ 2’ನಲ್ಲಿ ಅಕ್ಷಯ್ ಜೊತೆ ಅನನ್ಯಾ ಪಾಂಡೆ (Ananya Panday), ತಮಿಳು ನಟ ಆರ್. ಮಾಧವನ್ ನಟಿಸಿದ್ದಾರೆ.

  • ಅಕ್ಷಯ್ ಕುಮಾರ್ ನಟನೆಯ ಹೊಸ ಚಿತ್ರಕ್ಕೆ ಆರ್.ಮಾಧವನ್, ಅನನ್ಯಾ ಪಾಂಡೆ ಸಾಥ್

    ಅಕ್ಷಯ್ ಕುಮಾರ್ ನಟನೆಯ ಹೊಸ ಚಿತ್ರಕ್ಕೆ ಆರ್.ಮಾಧವನ್, ಅನನ್ಯಾ ಪಾಂಡೆ ಸಾಥ್

    ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಅವರು ಲಾಯರ್ (Lawyer) ಆಗಿ ಬೆಳ್ಳಿಪರದೆಯಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ. ಲಾಯರ್ ಸಿ. ಶಂಕರನ್ ನಾಯರ್ (C. Sankaran Nair) ಬಯೋಪಿಕ್‌ನಲ್ಲಿ ಅಕ್ಷಯ್ ಕುಮಾರ್ ಜೊತೆ ನಟಿಸಲು ಅನನ್ಯಾ ಪಾಂಡೆ (Ananya Panday) ಮತ್ತು ತಮಿಳು ನಟ ಆರ್. ಮಾಧವನ್ (R.Madhavan) ಕೈಜೋಡಿಸಿದ್ದಾರೆ.

    ಸಿನಿಮಾದಿಂದ ಸಿನಿಮಾಗೆ ಭಿನ್ನ ಪಾತ್ರಗಳನ್ನು ಆಯ್ಕೆ ಮಾಡೋ ಅಕ್ಷಯ್ ಕುಮಾರ್ ಈಗ ಕಪ್ಪು ಕೋಟ್ ಧರಿಸಿ ಲಾಯರ್ ಆಗಿ ನ್ಯಾಯದ ಪಾಠ ಮಾಡಲು ರೆಡಿಯಾಗಿದ್ದಾರೆ. ಖ್ಯಾತ ಅಡ್ವೋಕೇಟ್ ಸಿ. ಶಂಕರನ್ ನಾಯರ್ ಜೀವನ ಆಧರಿಸಿದ ಕಥೆಯಲ್ಲಿ ಅಕ್ಷಯ್ ಲೀಡ್ ರೋಲ್‌ನಲ್ಲಿ ನಟಿಸುತ್ತಿದ್ದಾರೆ. ಇದನ್ನೂ ಓದಿ:‘ಶೇರ್ಷಾ’ ಬಳಿಕ ಮತ್ತೊಂದು ಲವ್ ಸ್ಟೋರಿ ಸಿನಿಮಾದಲ್ಲಿ ಸಿದ್ಧಾರ್ಥ್, ಕಿಯಾರಾ?

     

    View this post on Instagram

     

    A post shared by Dharma Productions (@dharmamovies)

    ಅಕ್ಷಯ್ ಕುಮಾರ್ ಜೊತೆ ಅನನ್ಯಾ ಪಾಂಡೆ ಮತ್ತು ತಮಿಳು ನಟ ಆರ್. ಮಾಧವನ್ ಕೂಡ ಕಾಣಿಸಿಕೊಳ್ತಿದ್ದಾರೆ. ಅವರ ಪಾತ್ರಕ್ಕೂ ಪ್ರಾಮುಖ್ಯತೆ ಇದೆ. ಕರಣ್ ಜೋಹರ್ ಈ ಚಿತ್ರವನ್ನು ನಿರ್ಮಾಣ ಮಾಡೋದಾಗಿ ಅನೌನ್ಸ್ ಮಾಡಿದ್ದು, ಮುಂದಿನ ವರ್ಷ ಮಾರ್ಚ್ 14ರಂದು ರಿಲೀಸ್ ಆಗಲಿದೆ ಎಂದು ಘೋಷಿಸಿದ್ದಾರೆ.

    ಇನ್ನೂ ಅಕ್ಷಯ್ ನಟನೆಯ ಸಾಲು ಸಾಲು ಸಿನಿಮಾಗಳು ಚಿತ್ರಮಂದಿರದಲ್ಲಿ ಮಕಾಡೆ ಮಲಗಿವೆ. ಹಾಗಾಗಿ ಒಂದು ಗೆಲುವಿಗಾಗಿ ಎದುರು ನೋಡ್ತಿರುವ ನಟನಿಗೆ ಈ ಚಿತ್ರ ಕೈಹಿಡಿಯುತ್ತಾ? ಕಾದುನೋಡಬೇಕಿದೆ.

  • ಚಿತ್ರರಂಗದಲ್ಲಿ ಮಹಿಳೆಯರಿಗೆ ಸುರಕ್ಷತೆ ಬೇಕು: ಅನನ್ಯಾ ಪಾಂಡೆ

    ಚಿತ್ರರಂಗದಲ್ಲಿ ಮಹಿಳೆಯರಿಗೆ ಸುರಕ್ಷತೆ ಬೇಕು: ಅನನ್ಯಾ ಪಾಂಡೆ

    ಹೇಮಾ ಸಮಿತಿ ವರದಿ ಹೊರಬಿದ್ದ ಬಳಿಕ ಮಾಲಿವುಡ್ ಇಂಡಸ್ಟ್ರಿಯಲ್ಲಿ ಅಲ್ಲೋಲ ಕಲ್ಲೋಲ ಆಗಿದೆ. ಇದೇ ತರಹ ಸಮಿತಿ ಮಹಿಳೆಯರ ಸುರಕ್ಷತೆಗಾಗಿ ಎಲ್ಲಾ ಭಾಷೆಯ ಚಿತ್ರರಂಗದಲ್ಲೂ ಇರಬೇಕು ಎಂದು ಅನೇಕರು ಪಟ್ಟು ಹಿಡಿದಿದ್ದಾರೆ. ಇದರ ನಡುವೆ ಕಾಸ್ಟಿಂಗ್ ಕೌಚ್ ಬಗ್ಗೆ ಬಾಲಿವುಡ್ ನಟ ಅನನ್ಯಾ ಪಾಂಡೆ (Ananya Panday) ಮಾತನಾಡಿದ್ದಾರೆ. ನಟಿಯರಿಗೆ ಸೆಫ್ಟಿ ಬೇಕು ಎಂದಿದ್ದಾರೆ. ಇದನ್ನು ಓದಿ:ಹಾಲಿವುಡ್ ಅಂಗಳದಲ್ಲಿ ಕಾಂತಾರ ಬೆಡಗಿ ಸಖತ್ ಜಾಲಿ

    ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ನಟಿ ಕಾಸ್ಟಿಂಗ್ ಕೌಚ್ ಕುರಿತು ಸಮಾರಂಭವೊಂದರಲ್ಲಿ ಮಾತನಾಡಿ, ಸಿನಿಮಾರಂಗದಲ್ಲಿ ಕೆಲಸ ಮಾಡುವ ಮಹಿಳೆಯರಿಗಾಗಿಯೇ ಹೇಮಾ ಸಮಿತಿಯಂತಹ ಸಂಸ್ಥೆಗಳು ಬರಬೇಕು ಎಂದಿದ್ದಾರೆ. ಪ್ರತಿ ಉದ್ಯಮದಲ್ಲೂ ಹೇಮಾ ಸಮಿತಿಯಂತಹ ಸಮಿತಿ ಇರುವುದು ಬಹಳ ಮುಖ್ಯ ಎಂದರು. ಅಲ್ಲಿ ಮಹಿಳೆಯರು ಸೇರುತ್ತಾರೆ. ಸುರಕ್ಷತೆಗಾಗಿ ಏನೆಲ್ಲಾ ಅವಶ್ಯಕತೆ ಇದೆ ಎನ್ನುವ ಚರ್ಚೆಗಳು ನಡೆಯುತ್ತವೆ ಎಂದು ನಟಿ ಮಾತನಾಡಿದರು.

    ಈ ಸಮಿತಿಯು ಬಂದ ನಂತರ ಅನೇಕ ಬದಲಾವಣೆಗಳಿವೆ ಎಂದು ನಾನು ಅಂದುಕೊಂಡಿದ್ದೇನೆ. ನೀವೇ ನೋಡುತ್ತಿರುವಂತೆ ಧೈರ್ಯವಾಗಿ ಕಿರುಕುಳದ ವಿರುದ್ಧ ಧ್ವನಿ ಎತ್ತಿದ್ದಾರೆ. ತಮ್ಮ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದ್ದಾರೆ. ಈ ವಿಷಯವು ಚಿತ್ರರಂಗಕ್ಕೆ ಮಾತ್ರ ಮೀಸಲಾದ ವಿಷಯವಲ್ಲ. ಇಂದು ಅನೇಕ ಸಹಾಯವಾಣಿ ಸಂಖ್ಯೆ, ಯೋಜನೆಗಳು ಮಹಿಳೆಯರಿಗಾಗಿ ಶುರುವಾಗಿದೆ. ಕೆಲವು ವಿಭಾಗಗಳು ಮಹಿಳೆಯರ ಸುರಕ್ಷತೆಗಾಗಿ ಮಾಡಿದ್ದಾರೆ. ನಮ್ಮ ಕಾಲ್‌ಶೀಟ್‌ನಲ್ಲಿಯೂ ಸಹಾಯವಾಣಿ ಸಂಖ್ಯೆಗಳಿವೆ. ನೀವು ಅವರಿಗೆ ಕರೆ ಮಾಡಿ ದೂರು ನೀಡಬಹುದು. ನೀವು ಅನಾಮಧೇಯವಾಗಿ ದೂರು ನೀಡಬಹುದು ಎಂದಿದ್ದಾರೆ ಅನನ್ಯಾ ಪಾಂಡೆ.

    ಸದ್ಯ ಅವರು ‘ಕಾಲ್ ಮಿ ಬೇ’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ಅಕ್ಷಯ್ ಕುಮಾರ್ ಜೊತೆಗಿನ ಹೊಸ ಚಿತ್ರಕ್ಕೆ ನಟಿ ಕಾಣಿಸಿಕೊಳ್ಳಲಿದ್ದಾರೆ.

  • ಡಿವೋರ್ಸ್ ಬೆನ್ನಲ್ಲೇ ಅನನ್ಯಾ ಪಾಂಡೆ ಜೊತೆ ಹಾರ್ದಿಕ್ ಲವ್ವಿ ಡವ್ವಿ

    ಡಿವೋರ್ಸ್ ಬೆನ್ನಲ್ಲೇ ಅನನ್ಯಾ ಪಾಂಡೆ ಜೊತೆ ಹಾರ್ದಿಕ್ ಲವ್ವಿ ಡವ್ವಿ

    ಟಿ ನತಾಶಾ (Natasa) ಜೊತೆಗಿನ ಡಿವೋರ್ಸ್ (Divorce) ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ (Hardik Pandya) ಮತ್ತೆ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ನತಾಶಾಗೆ ಗುಡ್ ಬೈ ಹೇಳಿದ್ಮೇಲೆ ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ (Ananya Pandya) ಜೊತೆ ಹಾರ್ದಿಕ್ ಪಾಂಡ್ಯ ಲವ್ವಿ ಡವ್ವಿ ಶುರುವಾಗಿದೆ ಎಂದು ಗುಮಾನಿ ಹಬ್ಬಿದೆ.

    ಬಾಲಿವುಡ್‌ನಲ್ಲಿ ಬ್ರೇಕಪ್, ಡಿವೋರ್ಸ್, ಡೇಟಿಂಗ್ ಎಲ್ಲವೂ ಕಾಮನ್ ಆಗಿದೆ. ಸೆಲೆಬ್ರಿಟಿಗಳು ಹಿಂದಿನ ಬದುಕಿನ ಬಗ್ಗೆ ಅಷ್ಟು ತಲೆಕೆಡಿಸಿಕೊಳ್ಳದೇ ಮುಂದಕ್ಕೆ ಹೋಗುತ್ತಾರೆ. ಹೀಗಿರುವಾಗ ನತಾಶಾಗೆ ಡಿವೋರ್ಸ್ ಕೊಟ್ಟು ಸಿಂಗಲ್ ಆಗಿರುವ ಹಾರ್ದಿಕ್ ಪಾಂಡ್ಯ ಜೊತೆ ನಟಿ ಅನನ್ಯಾ ಮಿಂಗಲ್ ಆಗೋಕೆ ರೆಡಿಯಾಗಿದ್ದಾರೆ ಎಂಬ ಸುದ್ದಿ ಈಗ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ಹಾರ್ದಿಕ್ ಮತ್ತು ಅನನ್ಯಾ ಡೇಟಿಂಗ್ ಬಗ್ಗೆ ಅಧಿಕೃತಪಡಿಸಿಲ್ಲ. ಆದರೆ ಈ ಸುದ್ದಿಗೆ ಪುಷ್ಠಿ ನೀಡಿರೋದು ಮಾತ್ರ ಅಂಬಾನಿ ಮನೆ ಮದುವೆ. ಅನಂತ್‌ ಮತ್ತು ರಾಧಿಕಾ ಮದುವೆಯಲ್ಲಿ ಇಬ್ಬರೂ ಜೊತೆಯಾಗಿ ಕುಣಿದಿರುವ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿದೆ. ಇಬ್ಬರ ಡ್ಯಾನ್ಸ್ ನೋಡಿ ಇವರ ನಡುವೆ ಸಮ್‌ಥಿಂಗ್ ಸಮ್‌ಥಿಂಗ್ ಶುರುವಾಗಿದೆ ಎಂದೇ ಹೇಳಲಾಗುತ್ತಿದೆ.

     

    View this post on Instagram

     

    A post shared by Viral Bhayani (@viralbhayani)

    ಈ ಕಾರ್ಯಕ್ರಮದ ಬಳಿಕ ಇಬ್ಬರೂ ಇನ್ಸ್ಟಾಗ್ರಾಂ ಖಾತೆಯಲ್ಲಿ ಒಬ್ಬರನೊಬ್ಬರು ಹಿಂಬಾಲಿಸುತ್ತಿದ್ದಾರೆ. ಇತ್ತ ಅನನ್ಯಾ ಪಾಂಡೆ ಕೂಡ ಆದಿತ್ಯಾ ರಾಯ್ ಕಪೂರ್ ಜೊತೆ ಬ್ರೇಕಪ್ ಮಾಡಿಕೊಂಡಿದ್ದಾರೆ. ಹಾಗಾಗಿ ಅನನ್ಯಾ ಮತ್ತು ಹಾರ್ದಿಕ್ ನಡುವೆ ಹೊಸ ಪ್ರೇಮ ಕಹಾನಿ ಶುರುವಾಗಿದೆ ಎಂದೇ ಗುಮಾನಿ ಹಬ್ಬಿದೆ. ಮುಂದಿನ ದಿನಗಳಲ್ಲಿ ಇಬ್ಬರೂ ಮದುವೆ ಬಗ್ಗೆ ಗುಡ್‌ ನ್ಯೂಸ್‌ ಕೊಡ್ತಾರಾ ಕಾದುನೋಡಬೇಕಿದೆ.

    ಅಂದಹಾಗೆ, ನತಾಶಾ ಜೊತೆಗಿನ 4 ವರ್ಷಗಳ ದಾಂಪತ್ಯಕ್ಕೆ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಜು.18ರಂದು ಅಂತ್ಯ ಹಾಡಿದ್ದಾರೆ. ಡಿವೋರ್ಸ್ ಕುರಿತು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

  • ಅನನ್ಯಾಗೆ ಗುಡ್‌ಬೈ- ಸಾರಾ ಜೊತೆ ‘ಆಶಿಕಿ 2’ ಹೀರೋ ಡೇಟಿಂಗ್?

    ಅನನ್ಯಾಗೆ ಗುಡ್‌ಬೈ- ಸಾರಾ ಜೊತೆ ‘ಆಶಿಕಿ 2’ ಹೀರೋ ಡೇಟಿಂಗ್?

    ‘ಲೈಗರ್’ (Liger) ನಟಿ ಅನನ್ಯಾ ಪಾಂಡೆ (Ananya Panday)  ಮತ್ತು ಆದಿತ್ಯ ರಾಯ್ ಕಪೂರ್ (Aditya Roy Kapoor) ನಡುವೆ ಡೇಟಿಂಗ್ ವದಂತಿಗಳು ಹೊಸದೇನಲ್ಲ. ಆದರೆ ಈ ಜೋಡಿ ಬ್ರೇಕಪ್ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬೆನ್ನಲ್ಲೇ ಆದಿತ್ಯ ರಾಯ್ ಕಪೂರ್ ಅವರು ಸಾರಾ ಅಲಿ ಖಾನ್ (Sara Ali Khan) ಅವರೊಂದಿಗೆ ಪಾರ್ಟಿಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪಾರ್ಟಿಯ ಹಲವು ಫೋಟೊಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

    ವೈರಲ್ ಆದ ಫೋಟೋದಲ್ಲಿ ಆದಿತ್ಯ ಮತ್ತು ಸಾರಾ ಅವರು ನಿರ್ಮಾಪಕ ಅನುರಾಗ್ ಬಸು ಅವರೊಂದಿಗೆ ಸಮಯವನ್ನು ಕಳೆಯುತ್ತಿರುವುದು ಕಾಣಬಹುದು. ‘ಮೆಟ್ರೋ ಇನ್ ಡಿನೋ’ ಸಿನಿಮಾ ಸೆಟ್‌ನಲ್ಲಿ ಆಯೋಜಿಸಲಾದ ನಿರ್ದೇಶಕರ ಹುಟ್ಟುಹಬ್ಬದ ಸಂದರ್ಭದ ಫೋಟೋಗಳಿವು ಎನ್ನಲಾಗುತ್ತಿದೆ. ಆದಿತ್ಯ ಮತ್ತು ಸಾರಾ ಚಿತ್ರಗಳಲ್ಲಿ ಪರಸ್ಪರ ಹತ್ತಿರವಾಗಿ ನಿಂತಿದ್ದಾರೆ. ಇದನ್ನೂ ಓದಿ:ಬಾಲಿವುಡ್‌ಗೆ ಹಾರಿದ ಕನ್ನಡತಿ- ಡೈರೆಕ್ಟರ್ ವಿಕ್ರಮ್ ಭಟ್ ಸಿನಿಮಾದಲ್ಲಿ ಶ್ರುತಿ ಪ್ರಕಾಶ್

    ಅಂದಹಾಗೆ, ಅನನ್ಯಾ ಮತ್ತು ಆದಿತ್ಯ ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬ ವದಂತಿ 2022ರಲ್ಲಿ ಶುರುವಾಗಿತ್ತು. 2022ರಲ್ಲಿ ಕೃತಿ ಸನೂನ್ ಅವರ ದೀಪಾವಳಿ ಪಾರ್ಟಿಯಲ್ಲಿ ಜೋಡಿ ಕಾಣಿಸಿಕೊಂಡಾಗ ವದಂತಿ ಸುದ್ದಿಗಳು ಮತ್ತಷ್ಟು ಹೆಚ್ಚಾಯ್ತು. ಅಂಬಾನಿ ಮನೆ ಮಗನ ವಿವಾಹ ಪೂರ್ವ ಕಾರ್ಯಕ್ರಮದಲ್ಲಿಯೂ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದರು.

    ಕಾರ್ತಿಕ್ ಆರ್ಯನ್ (Sara Ali Khan) ಜೊತೆ ಸಾರಾ ಬ್ರೇಕಪ್ ಮಾಡಿಕೊಂಡು ಸಿಂಗಲ್ ಲೈಫ್ ಲೀಡ್ ಮಾಡುತ್ತಾ ಇದ್ದರು. ಅನನ್ಯಾ ಪ್ರೀತಿಗೆ ಗುಡ್ ಬೈ ಹೇಳಿರೋ ಆದಿತ್ಯಾ ಇದೀಗ ಸಾರಾ ಜೊತೆ ಹೊಸ ಪ್ರೇಮ ಕಹಾನಿ ಶುರು ಮಾಡುತ್ತಾರಾ? ಎಂದು ಕಾದುನೋಡಬೇಕಿದೆ.

  • ಬಿಕಿನಿಯಲ್ಲಿ ಅನನ್ಯಾ ಮಿಂಚಿಂಗ್, ಬಾಯ್‌ಫ್ರೆಂಡ್ ಎಲ್ಲಿ ಎಂದು ಕಾಲೆಳೆದ ನೆಟ್ಟಿಗರು

    ಬಿಕಿನಿಯಲ್ಲಿ ಅನನ್ಯಾ ಮಿಂಚಿಂಗ್, ಬಾಯ್‌ಫ್ರೆಂಡ್ ಎಲ್ಲಿ ಎಂದು ಕಾಲೆಳೆದ ನೆಟ್ಟಿಗರು

    ‘ಲೈಗರ್’ (Liger) ಬ್ಯೂಟಿ ಅನನ್ಯಾ ಪಾಂಡೆ (Ananya Panday) ಅವರು ಸದ್ಯ ಫಾರಿನ್‌ಗೆ ಹಾರಿದ್ದಾರೆ. ವಿದೇಶದ ಪ್ರಯಾಣವನ್ನು ಎಂಜಾಯ್ ಮಾಡ್ತಿದ್ದಾರೆ. ಸದ್ಯ ಅವರು ಬಿಕಿನಿ ಧರಿಸಿ ಹಾಟ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಅನನ್ಯಾ ಪಾಂಡೆ ತಮ್ಮ ನಯಾ ಬಿಕಿನಿ ಫೋಟೋ ಶೇರ್ ಮಾಡ್ತಿದ್ದಂತೆ ಆದಿತ್ಯ ಕಪೂರ್ ಎಲ್ಲಿ ಎಂದು ಕಾಮೆಂಟ್ ಮಾಡುವ ಮೂಲಕ ಕಾಲೆಳೆದಿದ್ದಾರೆ. ಇದನ್ನೂ ಓದಿ:ಡೈರೆಕ್ಟರ್ ಕ್ಯಾಪ್ ತೊಟ್ಟ ‘ಚುಟು ಚುಟು’ ಕೊರಿಯೋಗ್ರಾಫರ್ ಭೂಷಣ್ ಮಾಸ್ಟರ್

    ವಿಜಯ್ ದೇವರಕೊಂಡ ಜೊತೆಗಿನ ‘ಲೈಗರ್’ ಸಿನಿಮಾ ಸೋಲುಂಡಿದೆ. ಗಲ್ಲಾಪೆಟ್ಟಿಗೆಯಲ್ಲಿ ಸಿನಿಮಾ ಮಕಾಡೆ ಮಲಗಿದೆ. ಸಿನಿಮಾದ ನಂತರ ನಟಿ ಆದಿತ್ಯ ರಾಯ್ ಕಪೂರ್ ಜೊತೆಗಿನ ಡೇಟಿಂಗ್ ವಿಚಾರವಾಗಿ ಭಾರೀ ಸುದ್ದಿಯಲ್ಲಿದ್ದಾರೆ. ಸದ್ಯ ವಿದೇಶದಲ್ಲಿ ಬೀಡು ಬಿಟ್ಟಿರುವ ಅನನ್ಯಾ ಪಾಂಡೆ, ಹಸಿ ಬಿಸಿ ಫೋಟೋಗಳು ಸಖತ್ ಸದ್ದು ಮಾಡುತ್ತಿದೆ.

    ರೆಸ್ಟೋರೆಂಟ್‌ವೊಂದರಲ್ಲಿ ಅನನ್ಯಾ ಪಾಂಡೆ ಅವರು ಎಂಜಾಯ್ ಮಾಡುತ್ತಿದ್ದು, ನಟಿಯ ಬಿಕಿನಿ ಲುಕ್ ಎಲ್ಲರ ಗಮನ ಸೆಳೆಯುತ್ತಿದೆ. ಅನನ್ಯಾ ಅವರ ಬಿಕಿನಿ (Bikini) ಫೋಟೋವನ್ನ ಆದಿತ್ಯಾ ಕಪೂರ್ (Adithya Kapur) ಕ್ಲಿಕ್ಕಿಸಿದ್ದಾರೆ ಎಂದು ನೆಟ್ಟಿಗರು ಊಹಿಸಿದ್ದಾರೆ. ಹಾಗಾಗಿ ಬಾಯ್‌ಫ್ರೆಂಡ್ ಆದಿ ಎಲ್ಲಿ ಎಂದು ಕಾಮೆಂಟ್ ಮಾಡುವ ಮೂಲಕ ನಟಿಯ ಕಾಲೆಳೆದಿದ್ದಾರೆ.

    ಸಾಕಷ್ಟು ವರ್ಷಗಳಿಂದ ಆಶಿಕಿ 2 ಹೀರೋ ಆದಿತ್ಯ- ಅನನ್ಯಾ ಪಾಂಡೆ ಇಬ್ಬರು ಪರಿಚಿತರು. ಹಾಗಾಗಿ ಡೇಟಿಂಗ್ ಸುದ್ದಿಗೆ ಈ ಜೋಡಿಯ ನಯಾ ಪುಷ್ಟಿ ನೀಡುತ್ತಿದೆ. ಇಬ್ಬರೂ ಅವರು ಪ್ರತ್ಯೇಕವಾಗಿ ವಿಮಾನ ಏರಿ ವಿದೇಶಕ್ಕೆ ತೆರಳಿದ್ದಾರೆ. ಆದರೆ ಅವರಿಬ್ಬರೂ ಹೋಗಿರುವುದು ಒಂದೇ ಲೊಕೇಷನ್‌ಗೆ. ಸ್ಪೇನ್‌ನಲ್ಲಿ ಸಂಗೀತ ಕರ‍್ಯಕ್ರಮವೊಂದಕ್ಕೆ ಈ ಜೋಡಿ ಇತ್ತೀಚಿಗೆ ಹಾಜರಿ ಹಾಕಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಸ್ಟೋರಿಗಳನ್ನು ಅಪ್‌ಲೋಡ್ ಮಾಡಿಕೊಂಡಿದ್ದರು. ಇಬ್ಬರ ಸ್ಟೋರಿಯಲ್ಲೂ ಸಾಮ್ಯತೆ ಇರುವುದರಿಂದ ಒಟ್ಟಿಗೆ ಇರೋದು ಅಭಿಮಾನಿಗಳಿಗೆ ಎಲ್ಲವೂ ಸ್ಪಷ್ಟವಾಗಿತ್ತು. ಇಷ್ಟೇ ಅಲ್ಲ, ಅವರಿಬ್ಬರ ನಡುವಿನ ಆಪ್ತತೆಗೆ ಸಾಕ್ಷಿ ಒದಗಿಸುವಂತಹ ಇನ್ನೊಂದು ಫೋಟೋ ಕೂಡ ವೈರಲ್ ಆಗಿದೆ. ಅನನ್ಯಾರನ್ನ ಹಿಂಬದಿಯಿಂದ ಆದಿತ್ಯ ತಬ್ಬಿಕೊಂಡಿದ್ದರು. ಇದಾದ ಬಳಿಕ ಪರ‍್ಚುಗಲ್‌ನಲ್ಲಿ ಇಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದರು. ಸದ್ಯದ ಬಾಲಿವುಡ್ ಹೊಸ ಜೋಡಿ ಅಂದರೆ, ಅನನ್ಯಾ- ಆದಿತ್ಯ ಕಪೂರ್ ಕಪಲ್.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಲೈಗರ್‌’ ನಟಿ ಜೊತೆ ಆದಿತ್ಯ ಕಪೂರ್ ಕಣ್ ಕಣ್ ಸಲಿಗೆ

    ‘ಲೈಗರ್‌’ ನಟಿ ಜೊತೆ ಆದಿತ್ಯ ಕಪೂರ್ ಕಣ್ ಕಣ್ ಸಲಿಗೆ

    ಬಾಲಿವುಡ್‌ನ (Bollywood) ನಯಾ ಜೋಡಿ ಅನನ್ಯಾ ಪಾಂಡೆ- ಆದಿತ್ಯ ರಾಯ್ ಕಪೂರ್ (Adithya Roy Kapoor) ಅವರು ರೊಮ್ಯಾಂಟಿಕ್ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಪೋರ್ಚುಗಲ್‌ನಲ್ಲಿ ಈ ಲವ್ ಬರ್ಡ್ಸ್ ಫೋಟೋಗ್ರಾಫರ್ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದಾರೆ.

    ಕೆ.ಎಲ್ ರಾಹುಲ್- ಅಥಿಯಾ ಶೆಟ್ಟಿ, ಸಿದ್- ಕಿಯಾರಾ ಜೋಡಿಯಂತೆ ಮತ್ತೊಂದು ಹೊಸ ಜೋಡಿ ಹಸೆಮಣೆ ಏರುವ ಸುದ್ದಿ ಕೊಡ್ತಾರಾ ಕಾಯಬೇಕಿದೆ. ಸದ್ಯ ಮುಂಬೈ ಗಲ್ಲಿ ಮತ್ತು ವಿದೇಶದಲ್ಲೂ ಅನನ್ಯಾ ಪಾಂಡೆ(Ananya Panday) – ಆದಿತ್ಯ ರಾಯ್ ಕಪೂರ್ ಜೋಡಿ ಕೈ ಕೈ ಹಿಡಿದು ಓಡಾಡುತ್ತಿದ್ದಾರೆ. ಇಬ್ಬರ ಡೇಟಿಂಗ್ ಬಗ್ಗೆ ಸಾಕಷ್ಟು ಸುದ್ದಿ ಸೌಂಡ್ ಮಾಡ್ತಿದೆ.

    ಕೆಲ ದಿನಗಳ ಹಿಂದೆ ಸ್ಪೇನ್‌ನಲ್ಲಿ ಅನನ್ಯಾ- ಆದಿತ್ಯ ಜೋಡಿ ಒಟ್ಟಿಗೆ ಇರುವ ರೊಮ್ಯಾಂಟಿಕ್ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿತ್ತು. ಈಗ ಇಬ್ಬರು ಪೋರ್ಚುಗಲ್‌ನ (Portugal) ರೆಸ್ಟೋರೆಂಟ್‌ವೊಂದರಲ್ಲಿ ಅನನ್ಯಾ- ಆದಿತ್ಯ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇಬ್ಬರ ಕಣ್ ಸಲಿಗೆ ಫೋಟೋ ಸಖತ್ ವೈರಲ್ ಆಗುತ್ತಿದೆ.

    ಸಾಕಷ್ಟು ವರ್ಷಗಳಿಂದ ಆದಿತ್ಯ- ಅನನ್ಯಾ ಪಾಂಡೆ ಇಬ್ಬರು ಪರಿಚಿತರು. ಹಾಗಾಗಿ ಡೇಟಿಂಗ್ ಸುದ್ದಿಗೆ ಈ ಜೋಡಿಯ ನಯಾ ಪುಷ್ಟಿ ನೀಡುತ್ತಿದೆ. ಇಬ್ಬರೂ ಅವರು ಪ್ರತ್ಯೇಕವಾಗಿ ವಿಮಾನ ಏರಿ ವಿದೇಶಕ್ಕೆ ತೆರಳಿದ್ದಾರೆ. ಆದರೆ ಅವರಿಬ್ಬರೂ ಹೋಗಿರುವುದು ಒಂದೇ ಲೊಕೇಷನ್‌ಗೆ. ಸ್ಪೇನ್‌ನಲ್ಲಿ ಸಂಗೀತ ಕಾರ್ಯಕ್ರಮವೊಂದಕ್ಕೆ ಅವರು ಹಾಜರಿ ಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸ್ಟೋರಿಗಳನ್ನು ಅಪ್‌ಲೋಡ್ ಮಾಡಿಕೊಂಡಿದ್ದಾರೆ. ಇಬ್ಬರ ಸ್ಟೋರಿಯಲ್ಲೂ ಸಾಮ್ಯತೆ ಇರುವುದರಿಂದ ಅಭಿಮಾನಿಗಳಿಗೆ ಎಲ್ಲವೂ ಸ್ಪಷ್ಟವಾಗಿದೆ. ಇಷ್ಟೇ ಅಲ್ಲ, ಅವರಿಬ್ಬರ ನಡುವಿನ ಆಪ್ತತೆಗೆ ಸಾಕ್ಷಿ ಒದಗಿಸುವಂತಹ ಇನ್ನೊಂದು ಫೋಟೋ ಕೂಡ ವೈರಲ್ ಆಗಿದೆ. ಇದನ್ನೂ ಓದಿ:ತೆಲುಗಿನ ಮತ್ತೊಬ್ಬ ನಟಿಯ ದಾಂಪತ್ಯದಲ್ಲಿ ಬಿರುಕು- ಪತಿ ಜೊತೆ ಸ್ವಾತಿ ರೆಡ್ಡಿ ಡಿವೋರ್ಸ್?

    ಅನನ್ಯಾರನ್ನು ಆದಿತ್ಯ ಅವರು ಹಿಂಬದಿಯಿಂದ ತಬ್ಬಿಕೊಂಡು ನಿಂತಿರುವ ಫೋಟೋ ಸದ್ದು ಮಾಡುತ್ತಿದೆ. ಇದನ್ನು ನೋಡಿ ಅಭಿಮಾನಿಗಳು ಹುಬ್ಬೇರಿಸಿದ್ದಾರೆ. ಇಷ್ಟು ದಿನಗಳ ಕಾಲ ಈ ಜೋಡಿ ಹಕ್ಕಿಗಳು ತಮ್ಮ ಪ್ರೀತಿ ಬಗ್ಗೆ ಬಾಯಿ ಬಿಟ್ಟಿರಲಿಲ್ಲ. ಆದರೆ ಈಗ ಎಲ್ಲವೂ ಬಟಾಬಯಲಾಗಿದೆ. ಕದ್ದು-ಮುಚ್ಚಿ ಡೇಟಿಂಗ್ ಮಾಡುತ್ತಿರುವ ರಹಸ್ಯ ರಿವೀಲ್ ಆಗಿದೆ. ಫ್ಯಾನ್ಸ್ ಬಗೆ ಬಗೆಯ ರೀತಿಯಲ್ಲಿ ಕಾಮೆಂಟ್ ಮಾಡ್ತಿದ್ದಾರೆ.ಇನ್ನೂ ಕೆಲವು ತಿಂಗಳುಗಳ ಹಿಂದೆ ಇವೆಂಟ್‌ವೊಂದರಲ್ಲಿ ಇಬ್ಬರು ಜೊತೆಯಾಗಿ ರ‍್ಯಾಂಪ್ ವಾಕ್ ಮಾಡಿದ್ದು. ಜೋಡಿಯಾಗಿ ಹಲವು ಇವೆಂಟ್‌ನಲ್ಲಿ ಭಾಗಿಯಾಗುತ್ತಿದ್ದರು. ಅಂದಿನ ಆದಿತ್ಯ- ಅನನ್ಯಾ ಅವರ ಫೋಟೋಶೂಟ್ ಸಖತ್ ವೈರಲ್ ಆಗಿತ್ತು. ಇಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದರು ಕೂಡ ತಮ್ಮ ರಿಲೇಷನ್‌ಶಿಪ್ ಬಗ್ಗೆ ಅಧಿಕೃತವಾಗಿ ಹೇಳಿಕೊಂಡಿಲ್ಲ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಲೈಗರ್’ ಬ್ಯೂಟಿ ಜೊತೆ ಆದಿತ್ಯ ರಾಯ್ ಲವ್ವಿ-ಡವ್ವಿ: ಲೀಕ್ ಆಯ್ತು ರೊಮ್ಯಾಂಟಿಕ್ ಫೋಟೋ

    ‘ಲೈಗರ್’ ಬ್ಯೂಟಿ ಜೊತೆ ಆದಿತ್ಯ ರಾಯ್ ಲವ್ವಿ-ಡವ್ವಿ: ಲೀಕ್ ಆಯ್ತು ರೊಮ್ಯಾಂಟಿಕ್ ಫೋಟೋ

    ಬಾಲಿವುಡ್‌ನ ‘ಆಶಿಕಿ 2’ (Ashiqui 2) ಹೀರೋ ಆದಿತ್ಯ ರಾಯ್ ಕಪೂರ್ (Aditya Roy Kapoor) ಅವರು ಸಿನಿಮಾಗಿಂತ ಹೆಚ್ಚುಚ್ಚು ಖಾಸಗಿ ವಿಚಾರವಾಗಿಯೇ ಸುದ್ದಿಯಾಗುತ್ತಿದ್ದಾರೆ. ಅನನ್ಯಾ ಪಾಂಡೆ (Ananya Panday) ಜೊತೆ ಆದಿತ್ಯ ಡೇಟ್ ಮಾಡ್ತಿದ್ದಾರೆ ಎನ್ನಲಾಗಿತ್ತು. ಇಬ್ಬರೂ ಈ ಬಗ್ಗೆ ತುಟಿಕ್ ಪಿಟಿಕ್ ಎನ್ನುತ್ತಿರಲಿಲ್ಲ. ಈಗ ಇಬ್ಬರೂ ಜೊತೆಯಿರುವ ಫೋಟೋ ಲೀಕ್ ಆಗಿದೆ. ಸೋಷಿಯಲ್ ಮೀಡಿಯಾ ತುಂಬೆಲ್ಲಾ ಈ ಜೋಡಿಯ ಫೋಟೋ ಸದ್ದು ಮಾಡುತ್ತಿದೆ.

    ಆದಿತ್ಯ ಕಪೂರ್ ಮತ್ತು ಲೈಗರ್‌ (Liger) ನಟಿ ಅನನ್ಯಾ ಪಾಂಡೆ ಇಬ್ಬರು ಸ್ಟಾರ್ ಕಿಡ್ಸ್ ಆಗಿದ್ದರು ಕೂಡ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ‘ಆಶಿಕಿ 2’ ಚಿತ್ರದಲ್ಲಿ ಗಮನ ಸೆಳೆದ ಆದಿತ್ಯ, ತಮ್ಮ ವೃತ್ತಿ ಜೀವನದಲ್ಲಿ ಒಂದೊಳ್ಳೆ ಬ್ರೇಕ್‌ಗಾಗಿ ಕಾಯ್ತಿದ್ದಾರೆ. ಹೀಗಿರುವಾಗ ಲೈಗರ್ ನಟಿ ಜೊತೆ ಆದಿತ್ಯ ಹೆಸರು ಕೇಳಿ ಬರುತ್ತಿದೆ. ಸಾಕಷ್ಟು ವರ್ಷಗಳಿಂದ ಇಬ್ಬರು ಡೇಟಿಂಗ್ ಮಾಡ್ತಿದ್ದಾರೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್

    ಸಾಕಷ್ಟು ವರ್ಷಗಳಿಂದ ಆದಿತ್ಯ- ಅನನ್ಯಾ ಪಾಂಡೆ ಇಬ್ಬರು ಪರಿಚಿತರು. ಹಾಗಾಗಿ ಡೇಟಿಂಗ್ ಸುದ್ದಿಗೆ ಈ ಜೋಡಿಯ ನಯಾ ಪುಷ್ಟಿ ನೀಡುತ್ತಿದೆ. ಇಬ್ಬರೂ ಅವರು ಪ್ರತ್ಯೇಕವಾಗಿ ವಿಮಾನ ಏರಿ ವಿದೇಶಕ್ಕೆ ತೆರಳಿದ್ದಾರೆ. ಆದರೆ ಅವರಿಬ್ಬರೂ ಹೋಗಿರುವುದು ಒಂದೇ ಲೊಕೇಷನ್‌ಗೆ. ಸ್ಪೇನ್‌ನಲ್ಲಿ ಸಂಗೀತ ಕಾರ್ಯಕ್ರಮವೊಂದಕ್ಕೆ ಅವರು ಹಾಜರಿ ಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸ್ಟೋರಿಗಳನ್ನು ಅಪ್‌ಲೋಡ್ ಮಾಡಿಕೊಂಡಿದ್ದಾರೆ. ಇಬ್ಬರ ಸ್ಟೋರಿಯಲ್ಲೂ ಸಾಮ್ಯತೆ ಇರುವುದರಿಂದ ಅಭಿಮಾನಿಗಳಿಗೆ ಎಲ್ಲವೂ ಸ್ಪಷ್ಟವಾಗಿದೆ. ಇಷ್ಟೇ ಅಲ್ಲ, ಅವರಿಬ್ಬರ ನಡುವಿನ ಆಪ್ತತೆಗೆ ಸಾಕ್ಷಿ ಒದಗಿಸುವಂತಹ ಇನ್ನೊಂದು ಫೋಟೋ ಕೂಡ ವೈರಲ್ ಆಗಿದೆ.

     

    View this post on Instagram

     

    A post shared by Manav Manglani (@manav.manglani)

    ಅನನ್ಯಾರನ್ನು ಆದಿತ್ಯ ಅವರು ಹಿಂಬದಿಯಿಂದ ತಬ್ಬಿಕೊಂಡು ನಿಂತಿರುವ ಫೋಟೋ ಸದ್ದು ಮಾಡುತ್ತಿದೆ. ಇದನ್ನು ನೋಡಿ ಅಭಿಮಾನಿಗಳು ಹುಬ್ಬೇರಿಸಿದ್ದಾರೆ. ಇಷ್ಟು ದಿನಗಳ ಕಾಲ ಈ ಜೋಡಿ ಹಕ್ಕಿಗಳು ತಮ್ಮ ಪ್ರೀತಿ ಬಗ್ಗೆ ಬಾಯಿ ಬಿಟ್ಟಿರಲಿಲ್ಲ. ಆದರೆ ಈಗ ಎಲ್ಲವೂ ಬಟಾಬಯಲಾಗಿದೆ. ಕದ್ದು-ಮುಚ್ಚಿ ಡೇಟಿಂಗ್ ಮಾಡುತ್ತಿರುವ ರಹಸ್ಯ ರಿವೀಲ್ ಆಗಿದೆ. ಫ್ಯಾನ್ಸ್ ಬಗೆ ಬಗೆಯ ರೀತಿಯಲ್ಲಿ ಕಾಮೆಂಟ್ ಮಾಡ್ತಿದ್ದಾರೆ.

    ಇನ್ನೂ ಕೆಲವು ತಿಂಗಳುಗಳ ಹಿಂದೆ ಇವೆಂಟ್‌ವೊಂದರಲ್ಲಿ ಇಬ್ಬರು ಜೊತೆಯಾಗಿ ರ‍್ಯಾಂಪ್ ವಾಕ್ ಮಾಡಿದ್ದು. ಜೋಡಿಯಾಗಿ ಹಲವು ಇವೆಂಟ್‌ನಲ್ಲಿ ಭಾಗಿಯಾಗುತ್ತಿದ್ದರು. ಅಂದಿನ ಆದಿತ್ಯ- ಅನನ್ಯಾ ಅವರ ಫೋಟೋಶೂಟ್ ಸಖತ್ ವೈರಲ್ ಆಗಿತ್ತು. ಬಾಲಿವುಡ್‌ನಲ್ಲೂ ಸ್ಟಾರ್ ನಟ-ನಟಿಯರ ಮದುವೆ ಸೀಸನ್ ಶುರುವಾಗಿರೋದ್ರಿಂದ ಈ ಜೋಡಿ ಕೂಡ ಮದುವೆ ಬಗ್ಗೆ ಸಿಹಿಸುದ್ದಿ ಕೊಡ್ತಾರಾ ಕಾಯಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]