ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಮನೆಯಲ್ಲಿ ನಟಿ ಅನನ್ಯಾ ಪಾಂಡೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಸದ್ಯ ಈ ಜೋಡಿ ನಟನೆಯ ಲೈಗರ್ ಸಿನಿಮಾ ರಿಲೀಸ್ ಆಗುತ್ತಿದ್ದು, ಹಲವು ವಾರಗಳಿಂದ ಇಬ್ಬರೂ ಒಟ್ಟೊಟ್ಟಿಗೆ ಓಡಾಡುತ್ತಿದ್ದಾರೆ. ಆದರೆ, ಈ ಬಾರಿ ವಿಜಯ್ ಅವರ ಮನೆಯಲ್ಲಿ ನಡೆದ ವಿಶೇಷ ಪೂಜಾ ಸಮಾರಂಭದಲ್ಲಿ ಅನನ್ಯಾ ಪಾಂಡೆ ಕಾಣಿಸಿಕೊಂಡು ಕುತೂಹಲಕ್ಕೆ ಕಾರಣವಾಗಿದ್ದಾರೆ.

ಅಜಯ್ ಮನೆಯಲ್ಲಿ ಅನನ್ಯಾ ಕಾಣಿಸಿಕೊಳ್ಳುತ್ತಿದ್ದಂತೆಯೇ ನೆಟ್ಟಿಗರು ಈ ಸಂದರ್ಭದಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ನೆನಪಿಸಿಕೊಂಡಿದ್ದಾರೆ. ವಿಜಯ್ ಮತ್ತು ರಶ್ಮಿಕಾ ಇಬ್ಬರೂ ಡೇಟಿಂಗ್ ನಲ್ಲಿದ್ದಾರೆ ಎಂದು ಸುದ್ದಿಯಿತ್ತು. ಒಬ್ಬರಿಗೊಬ್ಬರೂ ಇಷ್ಟಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಬಹಿರಂಗವಾಗಿ ಇಬ್ಬರೂ ಹೇಳಿಕೊಳ್ಳದೇ ಇದ್ದರೂ, ಒಟ್ಟೊಟ್ಟಿಗೆ ಮಧ್ಯ ರಾತ್ರಿ ಕಾಣಿಸಿಕೊಂಡಿದ್ದರು. ಒಟ್ಟಿಗೆ ನ್ಯೂ ಯಿಯರ್ ಸೆಲೆಬ್ರೇಷನ್ ನಲ್ಲಿ ಭಾಗಿಯಾಗಿದ್ದರು. ಅದೆಷ್ಟೋ ಬಾರಿ ವಿಜಯ್ ಅವರ ಮನೆಯಲ್ಲಿ ನಡೆದ ಫ್ಯಾಮಿಲಿ ಸಮಾರಂಭದಲ್ಲೂ ರಶ್ಮಿಕಾ ಭಾಗಿಯಾಗಿದ್ದರು. ಈ ಬಾರಿ ಅನನ್ಯ ಕಾಣಿಸಿಕೊಂಡಿದ್ದರಿಂದ ರಶ್ಮಿಕಾ ಟ್ರೋಲ್ ಆಗುತ್ತಿದ್ದಾರೆ. ಇದನ್ನೂ ಓದಿ:ರಾಜಮೌಳಿ ಶಿಷ್ಯನಿಂದ ಬಂಕಿಮ ಚಂದ್ರ ಚಟರ್ಜಿ ಅವರ ‘ಆನಂದಮಠ’ ಕೃತಿ ಆಧರಿಸಿದ ಸಿನಿಮಾ

ರಶ್ಮಿಕಾ ಮಂದಣ್ಣ ಜಾಗದಲ್ಲಿ ಅನನ್ಯಾ ಕಾಣಿಸಿಕೊಂಡಿದ್ದು, ಹಲವರಿಗೆ ನುಂಗಲಾರದ ತುತ್ತಾಗಿದೆ. ಹೀಗಾಗಿಯೇ ವಿಜಯ್ ದೇವರಕೊಂಡ ಹೃದಯದಿಂದ ರಶ್ಮಿಕಾ ಸಂಪೂರ್ಣ ಮರೆಯಾಗಿದ್ದಾರಾ ಎನ್ನುವ ಪ್ರಶ್ನೆ ಕೂಡ ಎತ್ತಿದ್ದಾರೆ. ಕಳೆದ ಒಂದು ವರ್ಷದಿಂದ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಕಾಣಿಸಿಕೊಂಡಿಲ್ಲ. ಒಬ್ಬರೂ ಒಬ್ಬರಿಗೊಬ್ಬರ ಕುರಿತು ಯಾವ ವಿಷಯವನ್ನೂ ಹಂಚಿಕೊಂಡಿಲ್ಲ. ಇದಕ್ಕೆ ಕಾರಣ ಅನನ್ಯಾ ಪಾಂಡೆ ಎಂದೇ ಹೇಳಲಾಗುತ್ತಿದೆ.


ಚಿತ್ರದ ಪೋಸ್ಟರ್, ಟೀಸರ್ ಮೂಲಕ ಸದ್ದು ಮಾಡುತ್ತಿರುವ `ಲೈಗರ್’ ಸಿನಿಮಾ ಇದೇ ಆಗಸ್ಟ್ 25ಕ್ಕೆ ತೆರೆಗೆ ಬರುತ್ತಿದೆ. ಚಿತ್ರದ ಪ್ರಚಾರ ಕೂಡ ಭರ್ಜರಿ ಆಗಿ ನಡೆಯುತ್ತಿದೆ. ಸದ್ಯ ಚಿತ್ರತಂಡ ಮುಂಬೈನಲ್ಲಿ ಬೀಡು ಬಿಟ್ಟಿದ್ದಾರೆ. ಈ ವೇಳೆ `ಲೈಗರ್’ ಜೋಡಿಯ ಜತೆ ರಮ್ಯಾ ಕೃಷ್ಣನ್ ಕೂಡ ಕಾಣಿಸಿಕೊಂಡಿದ್ದು, ನಟಿಯ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಇದನ್ನೂ ಓದಿ:














ಬಿಟೌನ್‌ನ ಫಿಲ್ಮ್ಂ ಮೇಕರ್ ಕರಣ್ ಜೋಹರ್ ಶೋನಲ್ಲಿ ಒಂದಲ್ಲಾ ಒಂದು ಬ್ರೇಕಿಂಗ್ ನ್ಯೂಸ್ ಕೊಡುವುದರ ಮೂಲಕ ಸೌಂಡ್ ಮಾಡ್ತಿದ್ದಾರೆ. ಇದೀಗ ಈ ಕಾರ್ಯಕ್ರಮದಲ್ಲಿ ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಭಾಗವಹಿಸಿದ್ದು, ವಿಜಯ್ ಕೊನೆಯ ಬಾರಿ ಸೆಕ್ಸ್ ಮಾಡಿರುವುದರ ಬಗ್ಗೆ ಕರಣ್ ಕೇಳಿದ್ದಾರೆ. ಜತೆಗೆ ಅನನ್ಯಾ ಡೇಟಿಂಗ್ ಸ್ಟೋರಿ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ:
ವಿಜಯ್ ದೇವರಕೊಂಡ, ಪುರಿ ಜಗನ್ನಾಥ್ ಕಾಂಬಿನೇಷನ್‌ನ ಹೈವೋಲ್ಟೇಜ್ ಕಾಂಬಿನೇಶನ್ `ಲೈಗರ್’ ಸೆಟ್ಟೇರಿದ ದಿನದಿಂದಲೂ ಸಾಕಷ್ಟು ಸುದ್ದಿ ಮಾಡಿತ್ತು. ಪೋಸ್ಟರ್‌ಗಳಿಂದಲೇ ನಿರೀಕ್ಷೆ ಹೆಚ್ಚಿಸಿದ್ದ `ಲೈಗರ್’ ಟ್ರೈಲರ್ ರಿಲೀಸ್ ಆಗಿ, ಈಗ ಸಿನಿಮಾ ಮೇಲಿನ ಕ್ಯೂರಿಯಾಸಿಟಿಯನ್ನು ದುಪ್ಪಟ್ಟು ಮಾಡಿದೆ. ಮಾಸ್ ಲುಕ್‌ನಲ್ಲಿ ವಿಜಯ್ ದೇವರಕೊಂಡ ಕಾಣಿಸಿಕೊಂಡಿದ್ದು, ವಿಜಯ್‌ಗೆ ನಾಯಕಿಯಾಗಿ ಬ್ಯೂಟಿ ಕ್ವೀನ್ ಅನನ್ಯಾ ಪಾಂಡೆ ನಟಿಸಿದ್ದಾರೆ. ʻಲೈಗರ್ʼನಲ್ಲಿ ವಿಜಯ್ ರಗಡ್ ಆಗಿ ನಟಿಸಿದ್ದು, ಟ್ರೈಲರ್ ಪ್ರಶಂಸೆಯ ಮಹಾಪೂರವೇ ಹರಿದು ಬರುತ್ತಿದೆ.ಈ ಸಿನಿಮಾ ಮೂಲಕ ವಿಜಯ್ ದೇವರಕೊಂಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬರುತ್ತಿದ್ದಾರೆ. ಇದನ್ನೂ ಓದಿ:
