Tag: anchepalya

  • ಕಂಟೇನರ್ ಡಿಕ್ಕಿ ಹೊಡೆದು ಈರುಳ್ಳಿ ಟೆಂಪೋ ಪಲ್ಟಿ – ಓರ್ವ ಸಾವು

    ಕಂಟೇನರ್ ಡಿಕ್ಕಿ ಹೊಡೆದು ಈರುಳ್ಳಿ ಟೆಂಪೋ ಪಲ್ಟಿ – ಓರ್ವ ಸಾವು

    – ಈರುಳ್ಳಿ ತುಂಬಿಕೊಳ್ಳಲು ಮುಗಿಬಿದ್ದ ಜನ

    ನೆಲಮಂಗಲ: ಹಿಂಬದಿಯಿಂದ ಕಂಟೇನರ್ (Container) ಡಿಕ್ಕಿ ಹೊಡೆದ ಪರಿಣಾಮ ಈರುಳ್ಳಿ ತುಂಬಿದ್ದ ಟೆಂಪೋ (Tempo) ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಬೆಂಗಳೂರು (Bengaluru) ಹೊರವಲಯದ ನೆಲಮಂಗಲದ (Nelamangala) ಅಂಚೆಪಾಳ್ಯದ (Anchepalya) ಬಳಿ ನಡೆದಿದೆ.

    ತುಮಕೂರು ಮಾರ್ಗವಾಗಿ ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ ಬರುತ್ತಿದ್ದ ಈರುಳ್ಳಿ ತುಂಬಿದ ಟೆಂಪೋಗೆ ಹಿಂಬದಿಯಿಂದ ವೇಗವಾಗಿ ಬಂದ ಮತ್ತೊಂದು ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ. ಕಂಟೇನರ್ ಗುದ್ದಿದ ರಭಸಕ್ಕೆ ಟೆಂಪೋ ಪಲ್ಟಿಯಾಗಿದೆ. ಘಟನೆಯಲ್ಲಿ ಈರುಳ್ಳಿ ಟೆಂಪೋದಲ್ಲಿದ್ದ ಗಂಗಾಧರಪ್ಪ (55) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಇಡೀ ವಿಶ್ವದಲ್ಲಿ ಜನರ ಖಾತೆಗೆ ಹಣ ಹಾಕುತ್ತಿರುವ ಏಕೈಕ ಸರ್ಕಾರ ನಮ್ಮದು – ಯತೀಂದ್ರ

    ಮತ್ತೊಂದು ವಾಹನದ ಚಾಲಕ ಓಬಣ್ಣರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟೆಂಪೋ ಪಲ್ಟಿಯಾಗಿದ್ದರಿಂದ ಕೆಲ ಜನರು ಈರುಳ್ಳಿ ತುಂಬಲು ಮುಗಿಬಿದ್ದ ಘಟನೆ ಕೂಡ ನಡೆದಿದೆ. ಸ್ಥಳಕ್ಕೆ ಬಂದ ನೆಲಮಂಗಲ ಸಂಚಾರಿ ಪೊಲೀಸರು ಎರಡೂ ವಾಹನಗಳನ್ನು ತೆರವು ಮಾಡಿದ್ದಾರೆ. ಈ ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೊಲೀಸರು ನಿಯಂತ್ರಿಸಿದ್ದಾರೆ. ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗೆ ಫುಲ್‌ ಡಿಮ್ಯಾಂಡ್‌ – 69 ಪ್ರಶಸ್ತಿಗೆ 2,000ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

  • ನೆಲಮಂಗಲದಲ್ಲಿ ಧಗಧಗನೇ ಹೊತ್ತಿ ಉರಿದ ಕಾರು – ಓರ್ವ ಸಜೀವ ದಹನ

    ನೆಲಮಂಗಲದಲ್ಲಿ ಧಗಧಗನೇ ಹೊತ್ತಿ ಉರಿದ ಕಾರು – ಓರ್ವ ಸಜೀವ ದಹನ

    ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ (Car) ಏಕಾಏಕಿ ಬೆಂಕಿ (Fire) ಕಾಣಿಸಿಕೊಂಡ ಪರಿಣಾಮ ಮಾರುತಿ ಎಕ್ಸ್ಎಲ್ 6 ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ನೆಲಮಂಗಲದ (Nelamangala) ಅಂಚೇಪಾಳ್ಯದ (Anchepalya) ಬಳಿ ನಡೆದಿದೆ.

    ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಓರ್ವ ವ್ಯಕ್ತಿ ಹೊರಗಡೆ ಬರಲು ಸಾಧ್ಯವಾಗದೇ ಕೂತಲ್ಲೇ ಸಜೀವ ದಹನವಾಗಿದ್ದಾರೆ. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಧಗಧಗನೇ ಹೊತ್ತಿ ಉರಿದು ಭಸ್ಮವಾಗಿದೆ. ಇದನ್ನೂ ಓದಿ: ಊಟದ ಮೆನುವಿನಲ್ಲಿ ಮಟನ್ ಕರ್ರಿ ಇಲ್ಲವೆಂದು ಮದುವೆ ಕ್ಯಾನ್ಸಲ್ ಮಾಡಿದ ವರ!

    ಘಟನೆಯಿಂದಾಗಿ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿ ಪರಿಶಿಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸ್ನೇಹಿತರ ಜೊತೆ ಚಾರಣಕ್ಕೆ ಬಂದಿದ್ದ ಯುವಕ ನಾಪತ್ತೆ

    ಹೈಬ್ರಿಡ್/ಪೆಟ್ರೋಲ್ ಎಕ್ಸ್ಎಲ್ 6 ಕಾರು ಅನಿಲ್ ಕುಮಾರ್ ಟಿ ಅವರಿಗೆ ಸೇರಿದ್ದು, ಬೆಂಗಳೂರು ಉತ್ತರ ಆರ್‌ಟಿಒ ಕಚೇರಿಯಲ್ಲಿ ನೋಂದಣಿಯಾಗಿದೆ. ಇದನ್ನೂ ಓದಿ: ಗ್ಯಾಸ್ ಗೀಸರ್‌ಗೆ ಮತ್ತೊಂದು ಬಲಿ – ವಿಷಾನಿಲ ಸೋರಿಕೆಯಾಗಿ ಸ್ನಾನ ಮಾಡಲು ಹೋಗಿದ್ದ ಯುವತಿ ಸಾವು

  • ಗ್ರಾಮದಲ್ಲಿ ನಿಲ್ದಾಣ ಮಾಡುವಂತೆ ‘ನಮ್ಮ ಮೆಟ್ರೋ’ ಪಿಲ್ಲರ್ ಏರಿ ಪ್ರತಿಭಟನೆ

    ಗ್ರಾಮದಲ್ಲಿ ನಿಲ್ದಾಣ ಮಾಡುವಂತೆ ‘ನಮ್ಮ ಮೆಟ್ರೋ’ ಪಿಲ್ಲರ್ ಏರಿ ಪ್ರತಿಭಟನೆ

    ಬೆಂಗಳೂರು/ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲದ ಅಂಚೆಪಾಳ್ಯದ ಬಳಿ ನಮ್ಮ ಮೆಟ್ರೋ ನಿಲ್ದಾಣ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರು.

    ನಿರ್ಮಾಣ ಹಂತದಲ್ಲಿರುವ ಪಿಲ್ಲರ್ ಗಳನ್ನ ಏರಿದ ಯುವಕರು ಮಹಾತ್ಮ ಗಾಂಧಿಜೀ ಹಾಗೂ ಅಂಬೇಡ್ಕರ್ ಫೋಟೋಗಳನ್ನ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ಇತ್ತ ನೂರಾರು ಸಂಖ್ಯೆಯಲ್ಲಿ ಸೇರಿದ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ತಡೆಯಲು ಮುಂದಾದರು. ಈ ಹಿಂದೆ ನಮ್ಮ ಮೆಟ್ರೋ ಅಧಿಕಾರಿಗಳು ಅಂಚೆಪಾಳ್ಯದ ಬಳಿ ಮೆಟ್ರೋ ನಿಲ್ದಾಣ ಮಾಡುವ ಭರವಸೆ ನೀಡಿದ್ದರು. ಆದರೆ ಏಕಾಏಕಿ ರಸ್ತೆ ಹಾಗೂ ನಿಲ್ದಾಣವನ್ನ ಸಹ ಮಾಡುವುದಿಲ್ಲ ಎಂಬುದಕ್ಕೆ ಆಕ್ರೋಶಗೊಂಡು ಗ್ರಾಮಸ್ಥರು ಮೆಟ್ರೋ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.

    ಸ್ಥಳದಲ್ಲಿ ಮಾದನಾಯಕನಹಳ್ಳಿ ಪೊಲೀಸರು ಮೊಕ್ಕಾಂ ಹೂಡಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ರಾಷ್ಟ್ರೀಯ ಹೆದ್ದಾರಿ 48ರ ಸರ್ವೀಸ್ ರಸ್ತೆಯಲ್ಲಿ ಕುಳಿತು ಪ್ರತಿಭಟಿಸುತ್ತಿದ್ದ, ಪ್ರತಿಭಟನಾ ಸ್ಥಳಕ್ಕೆ ಬಿಎಂಆರ್ ಸಿಎಲ್ ಎಂಡಿ ಬರುವಂತೆ ಆಗ್ರಹಿಸುತ್ತಿದ್ದರು. ಪ್ರತಿಭಟನೆಯಲ್ಲಿ ಮಹಿಳೆಯರು ಸಹ ಭಾಗಿಯಾಗಿದ್ದು, ಪಟ್ಟುಬಿಡದೇ ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೂಡಲೇ ಪೊಲೀಸರು ಟ್ರಾಫಿಕ್ ನಿಯಂತ್ರಣಕ್ಕೆ ತಂದರು. ಇದನ್ನೂ ಓದಿ: ಇನ್‍ಸ್ಟಾಗ್ರಾಂ ಖಾತೆ ಹ್ಯಾಕ್ – ಅಂತರಾಷ್ಟ್ರೀಯ ಷಡ್ಯಂತ್ರ ಎಂದ ಕಂಗನಾ

    ಸ್ಥಳಕ್ಕೆ ನೆಲಮಂಗಲ ಉಪ ವಿಭಾಗದ ಡಿವೈಎಸ್ ಪಿ ಜಗದೀಶ್, ನಮ್ಮ ಮೆಟ್ರೋ ಮುಖ್ಯ ಇಂಜಿನಿಯರ್ ಕಲ್ಲಪ್ಪ ಭೇಟಿ ನೀಡಿ ಪ್ರತಿಭಟನಾಕಾರರ ಜೊತೆ ಮಾತನಾಡಿ, ಉನ್ನತ ಅಧಿಕಾರಿಗಳೊಂದಿಗೆ ಮತ್ತೆ ಸಭೆ ನಡೆಸುವ ಭರವಸೆ ನೀಡಿದರು. ನಮ್ಮ ಬೇಡಿಕೆ ಈಡೇರದಿದ್ದರೆ ಮುಂದೆ ಉಗ್ರ ರೂಪದಲ್ಲಿ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ಇದನ್ನೂ ಓದಿ; ಸಿಂಗಲ್ ಡೋಸ್ ಸ್ಪುಟ್ನಿಕ್ ಲೈಟ್ ವ್ಯಾಕ್ಸಿನ್ ಸೆಪ್ಟೆಂಬರ್​​​ಗೆ ಲಭ್ಯ – ಬೆಲೆ 750 ರೂ.