Tag: Andhra Pradesh

  • ಆಂಧ್ರ, ತೆಲಂಗಾಣದಲ್ಲಿ ಭಾರೀ ಮಳೆಗೆ ಪ್ರವಾಹ ಪರಿಸ್ಥಿತಿ – 9 ಸಾವು, ಜನಜೀವನ ಅಸ್ತವ್ಯಸ್ತ

    ಆಂಧ್ರ, ತೆಲಂಗಾಣದಲ್ಲಿ ಭಾರೀ ಮಳೆಗೆ ಪ್ರವಾಹ ಪರಿಸ್ಥಿತಿ – 9 ಸಾವು, ಜನಜೀವನ ಅಸ್ತವ್ಯಸ್ತ

    – 30ಕ್ಕೂ ಹೆಚ್ಚು ರೈಲುಗಳ ಸಂಚಾರದಲ್ಲಿ ತೀವ್ರ ವ್ಯತ್ಯಯ
    -294 ಗ್ರಾಮಗಳಿಂದ 13,227 ಜನರ ಸ್ಥಳಾಂತರ

    ಆಂಧ್ರ/ತೆಲಂಗಾಣ: ಆಗಸ್ಟ್ ಮಾದರಿಯಲ್ಲೇ ಸೆಪ್ಟೆಂಬರ್‌ನಲ್ಲಿ ಹೆಚ್ಚು ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದಕ್ಕೆ ಪೂರಕ ಎಂಬಂತೆ ಆಂಧ್ರ-ತೆಲಂಗಾಣದಲ್ಲಿ (Andhra Pradesh-Telangana) ಕಳೆದ 30 ವರ್ಷದಲ್ಲಿ ಕಂಡೂ ಕೇಳರಿಯದ ರೀತಿಯಲ್ಲಿ ಕುಂಭದ್ರೋಣ ಮಳೆ (Rain) ಆಗುತ್ತಿದ್ದು, ಬಹುತೇಕ ಕಡೆ ಪ್ರವಾಹ (Flood) ಸ್ಥಿತಿ ನಿರ್ಮಾಣವಾಗಿದೆ.

    ವಿಜಯವಾಡದಲ್ಲಿ ಶನಿವಾರ ಒಂದೇ ದಿನ ಬರೋಬ್ಬರಿ 290 ಮಿಲಿ ಮೀಟರ್ ಮಳೆ ಆಗಿದೆ. ಇಡೀ ನಗರ ಜಲಾವೃತವಾಗಿದೆ. ಆಂಧ್ರ-ತೆಲಂಗಾಣ ಹೈವೇಗಳಲ್ಲಿ ನದಿಯೋಪಾದಿಯಲ್ಲಿ ನೀರು ಹರಿಯುತ್ತಿರುವ ಕಾರಣ ಸಂಚಾರ ಬಂದ್ ಆಗಿದೆ. ಬಸ್ ಸಂಚಾರ, ರೈಲು ಸಂಚಾರ ಬಂದ್ ಆಗಿದೆ. 30ಕ್ಕೂ ಹೆಚ್ಚು ರೈಲುಗಳ ಸಂಚಾರದಲ್ಲಿ ತೀವ್ರ ವ್ಯತ್ಯಯವಾಗಿದೆ. ವರಂಗಲ್ ಬಳಿ ಪ್ರವಾಹದಲ್ಲಿ ಬಸ್ ಸಿಲುಕಿ, ಅದರಲ್ಲಿದ್ದ 40 ಮಂದಿ ಇಡೀ ರಾತ್ರಿ ಪರದಾಡಿದ್ದಾರೆ. ಕೋದಾಡ ಬಳಿ ಪ್ರವಾಹದಲ್ಲಿ ಕೊಚ್ಚಿಬಂದ ಕಾರಿನಲ್ಲಿ ಯುವಕನ ಶವ ಪತ್ತೆಯಾಗಿದೆ. ಅನೇಕ ಕಡೆ ಕೊಚ್ಚಿ ಹೋಗುತ್ತಿದ್ದ ಜನರನ್ನು ರಕ್ಷಣೆ ಮಾಡಲಾಗಿದೆ. ಇದನ್ನೂ ಓದಿ: ಮಹಾ ಮಳೆಗೆ ಅವಾಂತರ – ಸೋಮವಾರ ಬೀದರ್‌ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

    ಆಂಧ್ರಪ್ರದೇಶದಲ್ಲಿ ವಿಜಯವಾಡ ಗ್ರಾಮಾಂತರ ಮಂಡಲದ ಅಂಬಾಪುರಂ, ನೈನಾವರಂ, ನುನ್ನಾ, ಪತಪಡು ಗ್ರಾಮಗಳು ಸಂಪೂರ್ಣ ಮುಳುಗಡೆಯಾಗಿವೆ. ಪೊಲೀಸ್ ಮತ್ತು ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ. ಸಂತ್ರಸ್ತರನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ವೆಹಿಕಲ್‌ಗಳ ಕಾರ್ಯಾರಂಭ

    ಆಂಧ್ರ ಮಳೆಗೆ 9 ಸಾವು:
    ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಭಾನುವಾರ ಹಿರಿಯ ಅಧಿಕಾರಿಗಳೊಂದಿಗೆ ಹವಾಮಾನ ಪರಿಸ್ಥಿತಿಯನ್ನು ಪರಿಶೀಲಿಸಿದರು. ಪ್ರವಾಹವನ್ನು ನಿರ್ಣಯಿಸಲು ಡ್ರೋನ್‌ಗಳಂತಹ ತಂತ್ರಜ್ಞಾನಗಳನ್ನು ಅಳವಡಿಸಲು ಮತ್ತು ಅದಕ್ಕೆ ಅನುಗುಣವಾಗಿ ಪರಿಹಾರ ಕಾರ್ಯಗಳನ್ನು ಯೋಜಿಸಲು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಮೆಡಿಕಲ್ ಸೀಟ್ ಸಿಗದೇ ಮನನೊಂದು ಯುವತಿ ಆತ್ಮಹತ್ಯೆ

    ಐದು ಜಿಲ್ಲೆಗಳ 294 ಗ್ರಾಮಗಳಿಂದ 13,227 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಆಂಧ್ರಪ್ರದೇಶದ ಗೃಹ ಸಚಿವರಾದ ವಂಗಲಪುಡಿ ಅನಿತಾ ತಿಳಿಸಿದ್ದಾರೆ. ಇದುವರೆಗೆ ಭಾರೀ ಮಳೆಯಿಂದಾಗಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಪೊಲೀಸರು, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು 600 ಜನರನ್ನು ರಕ್ಷಿಸಿವೆ. 17 ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಏಳು ಜಿಲ್ಲೆಗಳಲ್ಲಿ 22 ಮುಳುಗಿದ ಸ್ಥಳಗಳಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿವೆ ಎಂದು ಅನಿತಾ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಜಲ ಜೀವನ್ ಮಿಷನ್‌ ಯೋಜನೆಯಲ್ಲೂ ಅಕ್ರಮ ಆರೋಪ – 116 ಟೆಂಡ‌ರ್ ಹಣ ಮುಟ್ಟುಗೋಲು

    ಇನ್ನೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಂಧ್ರಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಮತ್ತು ಎರಡೂ ರಾಜ್ಯಗಳ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು. ಆಂಧ್ರಪ್ರದೇಶದ ಮತ್ತು ತೆಲಂಗಾಣದಲ್ಲಿ ಪ್ರವಾಹವನ್ನು ಎದುರಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಅಮಿತ್ ಶಾ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಲಕ್ನೋದ ಹಾಸ್ಟೆಲ್‌ನಲ್ಲಿ ಎನ್‌ಐಎ ಅಧಿಕಾರಿ ಪುತ್ರಿಯ ನಿಗೂಢ ಸಾವು!

  • ಆಂಧ್ರಪ್ರದೇಶದಲ್ಲಿ ಭೂಕುಸಿತ – ಐವರು ದುರ್ಮರಣ

    ಆಂಧ್ರಪ್ರದೇಶದಲ್ಲಿ ಭೂಕುಸಿತ – ಐವರು ದುರ್ಮರಣ

    – ನದಿಯಲ್ಲಿ ಕೊಚ್ಚಿಹೋದ ಕಾರು; 3 ಸಾವು

    ಅಮರಾವತಿ: ಆಂಧ್ರಪ್ರದೇಶದ (Andhra Pradesh) ವಿಜಯವಾಡದಲ್ಲಿ ಭಾರೀ ಮಳೆಯ (Rain) ಪರಿಣಾಮ ಉಂಟಾದ ಭೂಕುಸಿತದಲ್ಲಿ (Landslides) ಐವರು ಸಾವನ್ನಪ್ಪಿದ್ದಾರೆ. ಅಲ್ಲದೇ ಗುಂಟೂರು ಜಿಲ್ಲೆಯಲ್ಲಿ ನದಿಯಲ್ಲಿ ಕಾರು ಕೊಚ್ಚಿಹೋದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮೊಘಲ್‍ರಾಜಪುರಂ ಕಾಲೋನಿಯ ಸುನ್ನಪುಬಟ್ಟಿ ಎಂಬಲ್ಲಿ ಭೂಕುಸಿತ ಸಂಭವಿಸಿದೆ. ಗುಡ್ಡದ ಮೇಲಿಂದ ಭಾರೀ ಗಾತ್ರದ ಕಲ್ಲುಗಳು ಮನೆಗಳ ಮೇಲೆ ಬಿದ್ದಿವೆ. ಒಂದು ಮನೆ ಸಂಪೂರ್ಣ ನಾಶವಾಗಿದ್ದು, ಒಳಗಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಕನಿಷ್ಠ ಮೂರು ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮೃತರನ್ನು ಮೇಘನಾ (25), ಬೋಲೆಂ ಲಕ್ಷ್ಮಿ (49), ಲಾಲು (20) (ಬಿಹಾರ ಮೂಲದ ಕಾರ್ಮಿಕ ಎಂದು ನಂಬಲಾಗಿದೆ) ಮತ್ತು ಅನ್ನಪೂರ್ಣ (55) ಎಂದು ಗುರುತಿಸಲಾಗಿದೆ.

    ಘಟನೆಯ ಬಗ್ಗೆ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಗುಡ್ಡಗಾಡು ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

  • ಆಂಧ್ರ ಕಾಲೇಜಿನ ವಿದ್ಯಾರ್ಥಿನಿಯರ ವಾಶ್ ರೂಮ್‍ನಲ್ಲಿ ಕ್ಯಾಮೆರಾ ಇಟ್ಟು ವಿಡಿಯೋ ಮಾರಾಟ – ಆರೋಪಿ ಅರೆಸ್ಟ್

    ಆಂಧ್ರ ಕಾಲೇಜಿನ ವಿದ್ಯಾರ್ಥಿನಿಯರ ವಾಶ್ ರೂಮ್‍ನಲ್ಲಿ ಕ್ಯಾಮೆರಾ ಇಟ್ಟು ವಿಡಿಯೋ ಮಾರಾಟ – ಆರೋಪಿ ಅರೆಸ್ಟ್

    – ಹಣಕ್ಕಾಗಿ 300 ಫೋಟೋ, ವಿಡಿಯೋ ಮಾರಾಟ

    ಅಮರಾವತಿ: ಆಂಧ್ರಪ್ರದೇಶದ (Andhra Pradesh) ಇಂಜಿನಿಯರಿಂಗ್ ಕಾಲೇಜೊಂದರ (College) ವಿದ್ಯಾರ್ಥಿನಿಯರ ಹಾಸ್ಟೆಲ್‍ನ ವಾಶ್ ರೂಂನಲ್ಲಿ ಹಿಡನ್ ಕ್ಯಾಮೆರಾ (Hidden Camera) ಪತ್ತೆಯಾಗಿದ್ದು, ವಿಡಿಯೋ ಸೆರೆ ಹಿಡಿದು ಮಾರಾಟ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕೃಷ್ಣನ್ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಈ ಪ್ರಕರಣ ನಡೆದಿದ್ದು, ವಿದ್ಯಾರ್ಥಿಗಳು ಮತ್ತು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

    ಗುರುವಾರ ಸಂಜೆ ವಾಶ್‍ರೂಮ್‍ನಲ್ಲಿ ಮುಚ್ಚಿಟ್ಟಿದ್ದ ವಸ್ತುವನ್ನು ವಿದ್ಯಾರ್ಥಿನಿ ಗಮನಿಸಿದ್ದಾಳೆ. ಆ ವಸ್ತುವನ್ನು ನೋಡಿದಾಗ ಕ್ಯಾಮೆರಾ ಇರುವುದು ಪತ್ತೆಯಾಗಿದೆ. ಕ್ಯಾಮೆರಾ ಪರಿಶೀಲಿಸಿದಾಗ ವಿಡಿಯೋಗಳನ್ನು ನೋಡಿ ಪ್ರತಿಭಟನೆ ನಡೆಸಿದ್ದಾರೆ.

    ಪ್ರಕರಣಕ್ಕೆ ಸಂಬಂಧ ವಿದ್ಯಾರ್ಥಿಗಳ ಹಾಸ್ಟೆಲ್‍ನ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿ ವಿಜಯ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಲ್ಯಾಪ್‍ಟಾಪ್ ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ವಾಶ್‍ರೂಮ್‍ನಲ್ಲಿರುವ ವಿದ್ಯಾರ್ಥಿನಿಯರ 300ಕ್ಕೂ ಹೆಚ್ಚು ಫೋಟೋಗಳು ಮತ್ತು ವೀಡಿಯೊಗಳು ಸೋರಿಕೆಯಾಗಿದ್ದು, ಹಣ ಕೊಟ್ಟು ಕೆಲವು ವಿದ್ಯಾರ್ಥಿಗಳು ಆರೋಪಿ ವಿಜಯ್‍ನಿಂದ ವೀಡಿಯೊಗಳನ್ನು ಖರೀದಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

  • Andhra | ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್‌ ಸ್ಫೋಟ – 14 ಮಂದಿ ಕಾರ್ಮಿಕರು ಸಾವು, 20 ಮಂದಿಗೆ ಗಾಯ

    Andhra | ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್‌ ಸ್ಫೋಟ – 14 ಮಂದಿ ಕಾರ್ಮಿಕರು ಸಾವು, 20 ಮಂದಿಗೆ ಗಾಯ

    ಅಮರಾವತಿ: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ರಿಯಾಕ್ಟರ್‌ ಸ್ಫೋಟ (Reactor Explosion) ಸಂಭವಿಸಿ 14 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಸುಮಾರು 20 ಕಾರ್ಮಿಕರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ (Andhra Pradesh) ಅನಕಪಲ್ಲಿಯಲ್ಲಿ ನಡೆದಿದೆ ಎಂದು ಜಿಲ್ಲಾಧಿಕಾರಿ ವಿಜಯ ಕೃಷ್ಣನ್ ತಿಳಿಸಿದ್ದಾರೆ.

    ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ (Escientia Company) ಸ್ಫೋಟ ಸಂಭವಿಸಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಎನ್‌ಟಿಆರ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ದಾಖಲಾತಿ ತಿದ್ದುವ ಪರಿಸ್ಥಿತಿ ನಮಗೆ ಬಂದಿಲ್ಲ, ಸಿಎಂ ಪತ್ನಿ ಅವರ ಪತ್ರ ತಿದ್ದುಪಡಿ ಆಗಿಲ್ಲ: ಬೈರತಿ ಸುರೇಶ್‌

    ಕಾರ್ಮಿಕರು ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಕಾರ್ಖಾನೆಯಲ್ಲಿ ನಡೆದ ಸ್ಫೋಟದಿಂದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದಟ್ಟ ಹೊಗೆ ಆವರಿಸಿದೆ. ಘಟನೆ ಕುರಿತ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಮತ್ತು ರಕ್ಷಣಾ ಕ್ರಮಗಳನ್ನು ಕೈಗೊಂಡಿದ್ದಾರೆ.

    ಇನ್ನೂ ಅವಘಡ ಸಂಭವಿಸಿದ ವೇಳೆ ಕರ್ಖಾನೆ ಘಟಕದಲ್ಲೇ ಸಿಲುಕಿದ್ದ 13 ಮಂದಿಯನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ ಸುಮಾರು 1,000ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಅತಿದೊಡ್ಡ ಫಾರ್ಮಾ ಕಂಪನಿಗಳಲ್ಲಿ ಇದು ಸಹ ಒಂದಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: Exclusive | ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್‌ನಲ್ಲಿ ನಟ ದರ್ಶನ್ ಆರೋಪಿ ನಂ.1

    ಇನ್ನೂ ಘಟನೆ ಬಳಿಕ ಕಾರ್ಖಾನೆ ಮುಂದೆ ಜಮಾಯಿಸಿದ ಕಾರ್ಮಿಕರು ಮೃತ ಸಂತ್ರಸ್ತರ ಕುಟುಂಬಗಳಿಗೆ ಹಾಗೂ ಗಾಯಗೊಂಡವರಿಗೆ ಪರಿಹಾರ ನೀಡಬೇಕು ಹಾಗೂ ರಿಯಾಕ್ಟರ್‌ ಸ್ಫೋಟಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಕೆಸೆಟ್-2024 ಅರ್ಜಿ ಸಲ್ಲಿಸಲು ಆ.28ರ ವರೆಗೆ ವಿಸ್ತರಣೆ – ಕೆಇಎ

  • ಪ್ರೀತಿಸಿ ಎಲ್ಲಾ ಮುಗಿದ್ಮೇಲೆ ಕೈಕೊಟ್ಟ ಪ್ರಿಯಕರ – ಮದುವೆ ದಿನವೇ ಆಸಿಡ್‌ ದಾಳಿಗೆ ಮುಂದಾದ ವಿಧವೆ ಪ್ರೇಯಸಿ!

    ಪ್ರೀತಿಸಿ ಎಲ್ಲಾ ಮುಗಿದ್ಮೇಲೆ ಕೈಕೊಟ್ಟ ಪ್ರಿಯಕರ – ಮದುವೆ ದಿನವೇ ಆಸಿಡ್‌ ದಾಳಿಗೆ ಮುಂದಾದ ವಿಧವೆ ಪ್ರೇಯಸಿ!

    ಅಮರಾವತಿ: ಪ್ರೀತಿಯೊಂದು (Love) ಸುಂದರ ಅನುಭವ. ಅದನ್ನ ಅನುಭವಿಸಬೇಕೇ ಹೊರತು ಹೇಳಿಕೊಳ್ಳಲಾಗಲ್ಲ. ಅದಕ್ಕಾಗಿ ಕೆಲವರು ಪ್ರೀತಿಯೆಂಬುದೇ ಮಾಯೆ ಎನ್ನುತ್ತಾರೆ. ಕೆಲವರಿಗೆ ಹೇಳಿಕೊಳ್ಳಲು ಸಂಕೋಚ, ಹೇಳಿಕೊಂಡರೇ ಇದ್ದ ಸಂಬಂಧವೂ ಬಿಟ್ಟುಹೋಗುತ್ತದೆ ಅನ್ನೋ ಆತಂಕ. ಆದ್ರೆ ಆನ್‌ಲೈನ್‌ ಯುಗದಲ್ಲಿ ಪ್ರೀತಿ – ಪ್ರೇಮ ಎಂಬುದು ಕ್ಷಣಿಕ ಸುಃಖವಾಗಿದೆ. ಬೆಳಗ್ಗೆ ಪ್ರಪೋಸ್‌ ಮಾಡಿ, ಸಂಜೆ ಹೊತ್ತಿಗೆ ಶೇಕ್‌ ಹ್ಯಾಂಡ್‌ ಮಾಡಿ ಬ್ರೇಕಪ್‌ ಮಾಡಿಕೊಳ್ಳುವುದು ಸರ್ವೇ ಸಾಮಾನ್ಯವಾಗಿದೆ. ಆದ್ರೆ ಇಲ್ಲೊಬ್ಬಳು ವಿಧವೆ ತನ್ನ ಪ್ರಿಯಕರ (Lover) ಕೈಕೊಟ್ಟಿದ್ದಕ್ಕಾಗಿ ಅವನ ಮೇಲೆ ಆಸಿಡ್‌ ದಾಳಿಗೆ ಮುಂದಾಗಿದ್ದಾಳೆ.

    44 ವರ್ಷದ ವಿಧವೆಯೊಬ್ಬಳು ತನ್ನ ಮಾಜಿ ಪ್ರಿಯಕರನ ಮದುವೆ (Marriage) ದಿನವೇ ಆತನ ಮೇಲೆ ಆಸಿಡ್‌ ದಾಳಿಗೆ ಯತ್ನಿಸಿದ್ದು, ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಆಂಧ್ರಪ್ರದೇಶದ (Andhra Pradesh) ನಂಡಲೂರಿನಲ್ಲಿ ನಡೆದಿದೆ. ಘಟನೆ ನಂತರ ಯುವಕನ ವಿವಾಹ ಕಾರ್ಯಕ್ರಮ ರದ್ದಾಗಿದೆ. ಆಸಿಡ್‌ ದಾಳಿ (Acid Attack) ನಡೆಸಿದ ಆರೋಪಿ ಮಹಿಳೆ ಸಾಫ್ಟ್‌ವೇರ್‌ ಎಂಜಿನಿಯರ್‌ ಜಯಾ. ಈಕೆಗೆ 22 ವರ್ಷದ ಮಗನಿದ್ದಾನೆ. ಇನ್ನೂ ಆಸಿಡ್‌ ದಾಳಿಗೆ ಒಳಗಾದ ಮಾಜಿ ಪ್ರಿಯಕರ ಶೇಖ್ ಸೈಯದ್ (32), ಮದುವೆಯಾಗಲು ತಯಾರಾಗಿದ್ದ. ತನ್ನೊಂದಿಗೆ ಎಲ್ಲಾ ಮುಗಿದ ಮೇಲೆ ಕೈಕೊಟ್ಟನೆಂದು ಆಸಿಡ್‌ ದಾಳಿಗೆ ಮುಂದಾಗಿದ್ದಾಳೆ. ಇದನ್ನೂ ಓದಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರಿಂದ ಹೋರಾಟ – ಸರ್ಕಾರಿ ಶಾಲೆಗಳಲ್ಲಿ ತರಗತಿ ವ್ಯತ್ಯಯ?

    ಏನಿದು ಪ್ರೇಮಕಥೆ?
    ಸಯ್ಯದ್‌ ಮತ್ತು ಜಯಾ 10 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದ್ರೆ ಕಳೆದ 3 ವರ್ಷಗಳಲ್ಲಿ ಸೈಯ್ಯದ್‌ ಡ್ರೈವರ್‌ ಕೆಲಸಕ್ಕಾಗಿ ಕುವೈತ್‌ಗೆ ತೆರಳಿದ್ದ. ಭಾರತಕ್ಕೆ ಮರಳಿದ ನಂತರ ಜಯಾಳ ಸಂಪರ್ಕವನ್ನು ಬಿಟ್ಟು, ಇದೇ ಆಗಸ್ಟ್‌ 11ರಂದು ಬೇರೊಬ್ಬ ಮಹಿಳೆಯೊಂದಿಗೆ ಮದುವೆಯಾಗಲು ಸಿದ್ಧತೆ ಮಾಡಿಕೊಂಡಿದ್ದ. ಮದುವೆ ನಿಲ್ಲಿಸುವ ಸಲುವಾಗಿ ಜಯಾ ಕೂಡ ಅಲ್ಲಿಗೆ ಬಂದಿದ್ದಳು. ಆದ್ರೆ ಸಯ್ಯದ್‌ ಆಕೆಯೊಂದಿಗೆ ಇರಲ್ಲ ಎಂದು ಹೇಳಿದ. ಇದರಿಂದ ಕೋಪಗೊಂಡ ಮಹಿಳೆ ಬಾತ್‌ರೂಮ್‌ ಕ್ಲೀನರ್‌ ಆಸಿಡ್‌ ತಂಡು ಅವನ ಮೇಲೆ ಎರಚಿದ್ದಾಳೆ. ಆದ್ರೆ ಅವನು ತಪ್ಪಿಸಿಕೊಂಡಿದ್ದರಿಂದ ಸಯ್ಯದ್‌ ಚಿಕ್ಕಮ್ಮನಿಗೆ ಆಸಿಡ್‌ ತಾಗಿದೆ. ಇದೇ ಕೋಪದಿಂದ ಅಲ್ಲೇ ಇದ್ದ ಚಾಕು ತೆಗೆದುಕೊಂಡು ಸಯ್ಯದ್‌ ಜಯಾಳಿಗೆ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ತುಂಗಭದ್ರಾ ಡ್ಯಾಂ ವಾರ್ಷಿಕ ನಿರ್ವಹಣಾ ಗುತ್ತಿಗೆಗೆ ಎಷ್ಟು ಕೋಟಿ ಹಣ ಸಂದಾಯವಾಗಿದೆ? – ಜನಾರ್ದನ ರೆಡ್ಡಿ ಪ್ರಶ್ನೆ 

    ಬಾತ್ ರೂಂ ಕ್ಲೀನಿಂಗ್ ಆಸಿಡ್ ಆಗಿದ್ದರಿಂದ ಸೈಯದ್ ಚಿಕ್ಕಮ್ಮನಿಗೆ ಗಂಭೀರ ಗಾಯಗಳಾಗಿಲ್ಲ. ಇಯ್ಯ ಜಯಾಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸರು ಇಬ್ಬರ ವಿರುದ್ಧವೂ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್‌ ದಾಖಲಿಸಿಕೊಂಡು ಬಂಧಿಸಿದ್ದಾರೆ. ಇದನ್ನೂ ಓದಿ: Tungabhadra Dam | 5 ದಿನಗಳಲ್ಲಿ ಗೇಟ್‌ ರಿಪೇರಿ – ಸರ್ಕಾರಕ್ಕೆ ಅಧಿಕಾರಿಗಳ ಭರವಸೆ 

  • Union Budget 2024: ಬಿಹಾರ, ಆಂಧ್ರಪ್ರದೇಶಕ್ಕೆ ಬಜೆಟ್‌ನಲ್ಲಿ ಭರ್ಜರಿ ಅನುದಾನ

    Union Budget 2024: ಬಿಹಾರ, ಆಂಧ್ರಪ್ರದೇಶಕ್ಕೆ ಬಜೆಟ್‌ನಲ್ಲಿ ಭರ್ಜರಿ ಅನುದಾನ

    – ಆಂಧ್ರದ ರಾಜಧಾನಿ ಅಭಿವೃದ್ಧಿಗೆ 15,000 ಕೋಟಿ
    – ಬಿಹಾರದಲ್ಲಿ ಪ್ರವಾಹ ನಿಯಂತ್ರಣಕ್ಕೆ 11,500 ಕೋಟಿ

    ನವದೆಹಲಿ: 2024-25ನೇ ಸಾಲಿನ ಹಣಕಾಸು ವರ್ಷದ ಬಜೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ ಸರ್ಕಾರ ಮೈತ್ರಿ ಧರ್ಮ ಪಾಲಿಸಿದೆ. ಬಜೆಟ್‌ನಲ್ಲಿ (Union Budget 2024) ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಭರ್ಜರಿ ಅನುದಾನ ನೀಡಿದೆ.

    ಎನ್ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಮತ್ತು ನಿತೀಶ್ ಕುಮಾರ್ ಅವರ ಜೆಡಿಯು ಬಿಜೆಪಿಯು ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಲು ಬಹುಮತವನ್ನು ಗಳಿಸಲು ಸಹಾಯ ಮಾಡಿದ ಒಂದು ತಿಂಗಳ ನಂತರ, ಮೋದಿ 3.0 ರ ಬಜೆಟ್ 2024 ಅಗತ್ಯವಿರುವ ಎರಡು ರಾಜ್ಯಗಳಿಗೆ ಪ್ರಮುಖ ಯೋಜನೆಗಳನ್ನು ಮೀಸಲಿಟ್ಟಿದೆ. ಇದನ್ನೂ ಓದಿ: ಉದ್ಯೋಗಿಗಳಿಗೆ 17,500 ರೂ. ಉಳಿತಾಯ – ಮೊದಲು ತೆರಿಗೆ ಎಷ್ಟಿತ್ತು? ಈಗ ಏನು ಬದಲಾವಣೆಯಾಗಿದೆ?

    ಆಂಧ್ರಪ್ರದೇಶದ ಆಡಳಿತ ಪಕ್ಷ ಟಿಡಿಪಿ ಬಿಜೆಪಿಯ ಮಿತ್ರ ಪಕ್ಷವಾಗಿದೆ. ಆಂಧ್ರದ ರಾಜಧಾನಿ ಅಭಿವೃದ್ಧಿಪಡಿಸಲು 15,000 ಕೋಟಿ ರೂ. ಅನುದಾನ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಘೋಷಿಸಿದ್ದಾರೆ.

    ಬಜೆಟ್ ಪೂರ್ವ ಸಭೆಯಲ್ಲಿ ಆಂಧ್ರಪ್ರದೇಶದ ಏಕೈಕ ರಾಜಧಾನಿಯಾಗಿ ಅಮರಾವತಿ ನಿರ್ಮಾಣ ಮತ್ತು ಅಭಿವೃದ್ಧಿಗೆ 15,000 ಕೋಟಿ ಅನುದಾನ ಕೋರಿತ್ತು. ರಾಜ್ಯ ಸರ್ಕಾರದ ಪ್ರಮುಖ ಬೇಡಿಕೆಯನ್ನು ಈ ಪ್ರಕಟಣೆಯು ಪೂರೈಸಿದೆ. ಇದನ್ನೂ ಓದಿ: Budget 2024 | ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ 15 ಸಾವಿರ ರೂ.

    ಬಜೆಟ್ ಮಂಡಿಸಿದ ಸೀತಾರಾಮನ್, ಕೇಂದ್ರವು ಆಂಧ್ರಪ್ರದೇಶದ ರಾಜಧಾನಿಯ ಅಗತ್ಯವನ್ನು ಗುರುತಿಸುತ್ತದೆ. ಬಹು-ಪಕ್ಷೀಯ ಅಭಿವೃದ್ಧಿ ಏಜೆನ್ಸಿಗಳ ಮೂಲಕ ಬೆಂಬಲವನ್ನು ನೀಡುತ್ತದೆ. ಆಂಧ್ರಪ್ರದೇಶದ ರಾಜಧಾನಿ ಅಭಿವೃದ್ಧಿಗೆ ಸರ್ಕಾರವು ಈ ಹಣಕಾಸು ವರ್ಷ ಮತ್ತು ಮುಂದಿನ ವರ್ಷಗಳಲ್ಲಿ 15,000 ಕೋಟಿ ವ್ಯವಸ್ಥೆ ಮಾಡಲಿದೆ ಎಂದು ತಿಳಿಸಿದ್ದಾರೆ.

    ಬಿಹಾರದಲ್ಲಿ ರಸ್ತೆ ಸಂಪರ್ಕವನ್ನು ಹೆಚ್ಚಿಸುವ ಗುರಿಯೊಂದಿಗೆ, ಪಾಟ್ನಾ ಮತ್ತು ಪೂರ್ಣಿಯಾ, ಬಕ್ಸರ್ ಮತ್ತು ಭಾಗಲ್ಪುರ್ ಹಾಗೂ ಬೋಧಗಯಾ, ರಾಜಗೀರ್, ವೈಶಾಲಿ ಮತ್ತು ದರ್ಬಂಗಾವನ್ನು ಸಂಪರ್ಕಿಸುವ ಎಕ್ಸ್‌ಪ್ರೆಸ್‌ವೇಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಸರ್ಕಾರ ಘೋಷಿಸಿದೆ. ಇದಕ್ಕಾಗಿ ಸರ್ಕಾರ 2,600 ಕೋಟಿ ರೂ. ಮೀಸಲಿಟ್ಟಿದೆ. ಹೆಚ್ಚುವರಿಯಾಗಿ, ರಾಜ್ಯವು ಬಕ್ಸಾರ್ ಜಿಲ್ಲೆಯಲ್ಲಿ ಗಂಗಾನದಿಯ ಮೇಲೆ ಎರಡು ಪಥದ ಸೇತುವೆಯನ್ನು ಪಡೆಯುತ್ತದೆ. ಭಾಗಲ್ಪುರದ ಪಿರ್ಪೈಂಟಿಯಲ್ಲಿ 2,400 ಮೆಗಾವ್ಯಾಟ್ ವಿದ್ಯುತ್ ಸ್ಥಾವರವನ್ನು ಹಣಕಾಸು ಸಚಿವರು ಘೋಷಿಸಿದ್ದಾರೆ.

    ಪ್ರವಾಸೋದ್ಯಮವನ್ನು ಉತ್ತೇಜಿಸಲು ಬಿಹಾರದ ಗಯಾ ಮತ್ತು ರಾಜ್‌ಗೀರ್‌ನಲ್ಲಿ ದೇವಾಲಯದ ಕಾರಿಡಾರ್‌ಗಳನ್ನು ಅಭಿವೃದ್ಧಿಪಡಿಸುವ ಯೋಜನೆಗಳನ್ನು ಘೋಷಿಸಿದ್ದಾರೆ. ರಾಜ್ಯದಲ್ಲಿ ಪ್ರವಾಹ ನಿಯಂತ್ರಣಕ್ಕೆ 11,500 ಕೋಟಿ ರೂ. ಆರ್ಥಿಕ ಬೆಂಬಲದ ಭರವಸೆ ಬಜೆಟ್‌ನಲ್ಲಿ ನೀಡಲಾಗಿದೆ.

  • ತಿರುಪತಿಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಭೇಟಿ – ವೆಂಕಟರಮಣನಿಗೆ ವಿಶೇಷ ಪೂಜೆ

    ತಿರುಪತಿಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಭೇಟಿ – ವೆಂಕಟರಮಣನಿಗೆ ವಿಶೇಷ ಪೂಜೆ

    ಅಮರಾವತಿ: ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಗುರುವಾರ ಬೆಳಗ್ಗೆ ತಿರುಪತಿಗೆ (Tirupati) ಭೇಟಿ ನೀಡಿ ವೆಂಕಟೇಶ್ವರ ದೇವರ ದರ್ಶನ ಪಡೆದಿದ್ದಾರೆ.

    ತಿರುಪತಿಗೆ ಭೇಟಿ ನೀಡಿದ ಬಗ್ಗೆ ಮಾತನಾಡಿದ ಅವರು, ನಮ್ಮ ದೇಶದ ಜನರು ಸಂತೋಷ ಮತ್ತು ಸಮೃದ್ಧಿಯಾಗಿರಲು ನಾನು ದೇವರನ್ನು ಪ್ರಾರ್ಥಿಸುತ್ತೇನೆ. ದೇಶದ ಅಭಿವೃದ್ಧಿಗೆ ಕೆಲಸ ಮಾಡಲು ಸ್ಫೂರ್ತಿ, ಶಕ್ತಿ ನೀಡುವಂತೆ ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಳಿ ತಪ್ಪಿದ ರೈಲು – ಉತ್ತರ ಪ್ರದೇಶದಲ್ಲಿ ಭೀಕರ ದುರಂತಕ್ಕೆ ನಾಲ್ವರು ದುರ್ಮರಣ

    ಇದಕ್ಕೂ ಮೊದಲು ಜೂ.30 ರಂದು ಶ್ರೀಲಂಕಾದ ನ್ಯಾಯ, ಜೈಲು ವ್ಯವಹಾರಗಳು ಮತ್ತು ಸಾಂವಿಧಾನಿಕ ಸುಧಾರಣೆಗಳ ಸಚಿವ ವಿಜಯದಾಸ ರಾಜಪಕ್ಷೆ ಅವರು ತಮ್ಮ ಕುಟುಂಬದೊಂದಿಗೆ ದೇವಾಲಯಕ್ಕೆ ಭೇಟಿ ನೀಡಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು.

    ಜೂ.15 ರಂದು ಕೇಂದ್ರ ಬೃಹತ್‌ ಕೈಗಾರಿಕೆಗಳು ಮತ್ತು ಉಕ್ಕು ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ತಿರುಪತಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಕೇಂದ್ರ ಸಚಿವನಾಗಿ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಲು ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿರುವುದಾಗಿ ಹೆಚ್‌ಡಿಕೆ ತಿಳಿಸಿದ್ದರು. ಇದನ್ನೂ ಓದಿ: NEET: ಪರೀಕ್ಷೆ ಸರಿಯಾಗಿ ನಡೆಯದಿದ್ದರೆ ಮಾತ್ರ ಮರುಪರೀಕ್ಷೆ ಮಾಡಬಹುದು: ಸುಪ್ರೀಂ ಕೋರ್ಟ್

  • ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆಗೈದ ಹಿರಿಯ ವಿದ್ಯಾರ್ಥಿಗಳು

    ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆಗೈದ ಹಿರಿಯ ವಿದ್ಯಾರ್ಥಿಗಳು

    – ಅಪ್ರಾಪ್ತ ಆರೋಪಿಗಳನ್ನು ಪತ್ತೆ ಹಚ್ಚಿದ ಶ್ವಾನ

    ಅಮರಾವತಿ: 8 ವರ್ಷದ ವಿದ್ಯಾರ್ಥಿನಿಯ ಮೇಲೆ 13 ವರ್ಷದ ಮೂವರು ಹಿರಿಯರು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಬಳಿಕ ಹತ್ಯೆಗೈದಿರುವ ಘಟನೆ ಆಂಧ್ರಪ್ರದೇಶದ (Andhra Pradesh) ನಂದ್ಯಾಲ ಜಿಲ್ಲೆಯ ಮುಚ್ಚುಮರ್ರಿ ಎಂಬಲ್ಲಿ ನಡೆದಿದೆ.

    ಅಪ್ರಾಪ್ತ ಆರೋಪಿಗಳನ್ನು ಪೊಲೀಸರು (Muchumarri police) ಬಂಧಿಸಿದ್ದು, ವಿಚಾರಣೆ ವೇಳೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ ಹತ್ಯೆಯ ಬಳಿಕ ಬಾಲಕಿಯ ಶವವನ್ನು ಕಾಲುವೆಗೆ ಎಸೆದಿದ್ದಾರೆ. ಬಾಲಕಿಯ ಶವ ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನಟ ದರ್ಶನ್‌ ಬಂಧನವಾಗಿ ಒಂದು ತಿಂಗಳು ಪೂರ್ಣ – ಅರೆಸ್ಟ್‌ ದಿನದಿಂದ ಇಲ್ಲಿವರೆಗೆ ಏನೇನಾಯ್ತು? ಇಲ್ಲಿದೆ ಟೈಮ್‌ಲೈನ್‌!

    ಬಾಲಕಿ ಭಾನುವಾರ ಮುಚ್ಚುಮರ್ರಿ ಪಾರ್ಕ್‍ನಲ್ಲಿ ಆಟವಾಡುತ್ತಿದ್ದಳು. ಬಳಿಕ ಅಲ್ಲಿಂದ ಆಕೆ ನಾಪತ್ತೆಯಾಗಿದ್ದು, ಆಕೆಯ ತಂದೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದರು. ಪೊಲೀಸರು ಈ ಬಗ್ಗೆ ಸ್ಥಳೀಯರನ್ನು ವಿಚಾರಿಸಿದಾಗ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ಬಳಿಕ ಶ್ವಾನದಳವನ್ನು ಬಳಕೆ ಮಾಡಿಕೊಂಡು ಹುಡುಕಾಟ ನಡೆಸಿದಾಗ, ಮೂವರು ಅಪ್ರಾಪ್ತರ ಬಳಿ ಶ್ವಾನ ಕರೆದೊಯ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬಳಿಕ ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ಇಬ್ಬರು ಬಾಲಕರು 6ನೇ ತರಗತಿ ವಿದ್ಯಾರ್ಥಿಗಳು, ಓರ್ವ 7ನೇ ತರಗತಿಯ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕೇವಲ ನಾಮ್‌ಕಾವಸ್ತೆ ಹೋರಾಟ – ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್‌ ಗರಂ

  • ನಿರ್ಮಾಣ ಹಂತದಲ್ಲಿದ್ದ YSR ಕಾಂಗ್ರೆಸ್‌ ಪಕ್ಷದ ಕಚೇರಿ ಧ್ವಂಸ – ಸೇಡಿನ ರಾಜಕಾರಣ ಎಂದು ಆಕ್ರೋಶ

    ನಿರ್ಮಾಣ ಹಂತದಲ್ಲಿದ್ದ YSR ಕಾಂಗ್ರೆಸ್‌ ಪಕ್ಷದ ಕಚೇರಿ ಧ್ವಂಸ – ಸೇಡಿನ ರಾಜಕಾರಣ ಎಂದು ಆಕ್ರೋಶ

    ಅಮರಾವತಿ: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ತಾಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (YSRCP) ಕಚೇರಿಯನ್ನು ಮುನ್ಸಿಪಲ್ ಕಾರ್ಪೊರೇಷನ್ (MTMC) ಶನಿವಾರ ಮುಂಜಾನೆ ನೆಲಸಮಗೊಳಿಸಿದೆ.

    ಆಂಧ್ರ ಪ್ರದೇಶ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಧಿಕಾರ ಹಾಗೂ ಮಂಗಲಗಿರಿ ತಡೆಪಲ್ಲಿ ನಗರ ಪಾಲಿಕೆ ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ಕಟ್ಟವನ್ನು ಧ್ವಂಸಗೊಳಿಸುವ ಕೆಲಸ ಮಾಡಿದ್ದಾರೆ. ನೆಲಸಮವಾದ ವೈಎಸ್‌ಆರ್‌ಸಿಪಿ ಕಟ್ಟಡವು ಸೀತಾನಗರಂನ ಬೋಟ್ ಯಾರ್ಡ್ ಆರ್‌ಎಸ್ ನಂ.202-ಎ-1 ನಲ್ಲಿ ಸುಮಾರು 870.40 ಚದರ ಅಡಿಯಷ್ಟು ಸುತ್ತಳತೆ ಹೊಂದಿತ್ತು. ಇದನ್ನೂ ಓದಿ: ಪರೀಕ್ಷಾ ಅಕ್ರಮ ತಡೆಗಟ್ಟಲು ಕೇಂದ್ರ ಸರ್ಕಾರದಿಂದ ಹೊಸ ಕಾನೂನು; 5-10 ವರ್ಷ ಜೈಲು, ಒಂದು ಕೋಟಿ ಕನಿಷ್ಠ ದಂಡ

    ಕಟ್ಟಡ ಧ್ವಂಸಗೊಳಿಸಿದ ಬೆನ್ನಲ್ಲೇ ವೈಎಸ್‌ಆರ್‌ಸಿಪಿ, ಟಿಡಿಪಿ ವಿರುದ್ಧ ಹರಿಹಾಯ್ದಿದೆ. ತನಿಖೆ ಕೋರ್ಟ್‌ನಲ್ಲಿದ್ದರೂ ಧ್ವಂಸಗೊಳಿಸುವ ಕ್ರಮ ಮುಂದುವರಿದಿದೆ. ಇದು ಸೇಡಿನ ರಾಜಕಾರಣ. ಸರ್ವಾಧಿಕಾರಿಗಳಂತೆ ಬುಲ್ಡೋಜರ್‌ ಬಳಿಸಿ ಕಟ್ಟಡವನ್ನು ನೆಲಸಮಗೊಳಿಸಿದ್ದಾರೆ ಎಂದು ಕಿಡಿ ಕಾರಿದೆ. ಇದನ್ನೂ ಓದಿ: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ – ದೂರು ಬಂದ ಮೇಲೆ ಕ್ರಮ: ಜಿ. ಪರಮೇಶ್ವರ್

    ವೈಎಸ್‌ಆರ್‌ಸಿಪಿ ಗುಂಟೂರು ಜಿಲ್ಲಾಧ್ಯಕ್ಷ ಎಂ.ಶೇಷಗಿರಿ ರಾವ್ ಅವರು ಆಂಧ್ರಪ್ರದೇಶ ಹೈಕೋರ್ಟ್‌ನಲ್ಲಿ ಜೂನ್‌ 10 ರಂದು ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ಪೂರ್ಣಗೊಳ್ಳುವವರೆಗೆ ಕಟ್ಟಡದ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರ, ಸಿಆರ್‌ಡಿಎ ಮತ್ತು ಎಂಟಿಎಂಸಿಗೆ ನ್ಯಾಯಾಲಯಕ್ಕೆ ಆದೇಶಿಸಬೇಕು ಎಂದು ಕೋರಿದ್ದರು ಎಂದು ವರದಿಯಾಗಿದೆ. ಇದನ್ನೂ ಓದಿ: ರೀಲ್ಸ್‌ ಕ್ರೇಜ್‌ – ಬಾಜಿ ಕಟ್ಟಿ, ಹಠಾತ್ತನೆ ಚಲಿಸುತ್ತಿದ್ದ ಬಸ್‌ ಕೆಳಗೆ ಮಲಗಿದ ಯುವಕ!

  • ಪೊದೆಯೊಂದರಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ – ಅತ್ಯಾಚಾರ ಶಂಕೆ

    ಪೊದೆಯೊಂದರಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ – ಅತ್ಯಾಚಾರ ಶಂಕೆ

    – ತನಿಖೆಗೆ 5 ವಿಶೇಷ ತಂಡ ರಚನೆ

    ಅಮರಾವತಿ: ಆಂಧ್ರಪ್ರದೇಶದ (Andhra Pradesh) ಎಪುರುಪಾಲೆಂ ಕುಗ್ರಾಮವೊಂದರಲ್ಲಿ ಸಾರ್ವಜನಿಕರನ್ನು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಇಲ್ಲಿನ ಬಾಲಕಿಯರ ಪ್ರೌಢಶಾಲೆ ಬಳಿಯ ಪೊದೆಗಳಲ್ಲಿ 21 ವರ್ಷದ ಮಹಿಳೆಯೊಬ್ಬರ (Women) ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

    ಬಾಪಟ್ಲಾ ಜಿಲ್ಲೆಯ ಎಪುರುಪಾಲೆಂ ಗ್ರಾಮದಲ್ಲಿ ಘಟನೆ ನಡೆದಿದ್ದು, ಮಹಿಳೆಯನ್ನು ಹತ್ಯೆಗೈಯುವ ಮುನ್ನ ಅತ್ಯಾಚಾರ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ – ಸಂತ್ರಸ್ತನ ವಿರುದ್ಧವೇ ಕೇಸ್‌ ದಾಖಲು

    ಏನಿದು ಘಟನೆ?
    ಬಾಪಟ್ಲಾ ಜಿಲ್ಲೆಯ ಎಪುರುಪಾಲೆಂ ಗ್ರಾಮದ ಮಹಿಳೆ ಮುಂಜಾನೆ 5:30ರ ಸುಮಾರಿಗೆ ನಿತ್ಯಕರ್ಮಗಳನ್ನು ಮುಗಿಸಿ, ರೈಲ್ವೇ ಟ್ರ್ಯಾಕ್‌ಗೆ (Railway Track) ಸಮೀಪವಿರುವ ಶಾಲೆಯ ಬಳಿ ಸ್ನಾನಕ್ಕೆ ಹೋಗಿದ್ದಾರೆ. ಮತ್ತೆ ಅವರು ಮನೆಗೆ ಹಿಂದಿರುಗಲಿಲ್ಲ. ಇದರಿಂದ ಆತಂಕಗೊಂಡಿದ್ದ ಆಕೆಯ ಕುಟುಂಬದ ಸದಸ್ಯರು ತುಂಬ ಹೊತ್ತು ಹುಡುಕಾಟ ನಡೆಸಿದ್ದಾರೆ. ನಂತರ ಪೊದೆಯಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆ ಸಾವನ್ನಪ್ಪಿರುವುದು ಕಂಡುಬಂದಿದೆ ಎಂದು ಬಪಟ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಕುಲ್ ಜಿಂದಾಲ್ ತಿಳಿಸಿದ್ದಾರೆ.

    10 ಲಕ್ಷ ರೂ. ಪರಿಹಾರ ಘೋಷಣೆ:
    ಮಹಿಳೆಯನ್ನು ಹತ್ಯೆ ಮಾಡುವುದಕ್ಕೂ ಮುನ್ನ ಕಾಮುಕರು, ಅತ್ಯಾಚಾರ ಎಸಗಿದ್ದಾರೆ. ಸದ್ಯ ಪ್ರಕರಣದ ತನಿಖೆಗಾಗಿ 5 ವಿಶೇಷ ತಂಡಗಳನ್ನ ರಚಿಸಲಾಗಿದೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿರುವುದಾಗಿ ಗೃಹ ಸಚಿವರಾದ ವಂಗಲಪುಡಿ ಅನಿತಾ ತಿಳಿಸಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರಿನ ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜಕ್ಕೆ ಪ್ರವಾಸಿಗರಿಗೆ ನಿರ್ಬಂಧ 

    48 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿ:
    ಸದ್ಯ ಈ ಘಟನೆ ಆಂಧ್ರ ಪ್ರದೇಶದಲ್ಲಿ ಸರ್ಕಾರದ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಯಾವುದೇ ಲೋಪಕ್ಕೆ ಅವಕಾಶ ನೀಡದಂತೆ 48 ಗಂಟೆಗಳ ಒಳಗೆ ಆರೋಪಿಗಳನ್ನು ಬಂಧಿಸುವಂತೆ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಅಲ್ಲದೇ ಹೆಚ್ಚಿದ ಮಾದಕ ದ್ರವ್ಯ ಸೇವನೆಯಿಂದ ಇಂತಹ ಅಪರಾಧಗಳು ಹೆಚ್ಚಾಗುತ್ತಿವೆ ಎಂದು ಶಂಕಿಸಿದೆ.