Tag: Andhra Pradesh

  • ಭೀಕರ ರೈಲು ದುರಂತ ಪ್ರಕರಣ- ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ

    ಭೀಕರ ರೈಲು ದುರಂತ ಪ್ರಕರಣ- ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ

    ಅಮರಾವತಿ: ಆಂಧ್ರಪ್ರದೇಶದ (Andhrapradesh) ವಿಜಯನಗರಂ ಜಿಲ್ಲೆಯಲ್ಲಿ ರೈಲು ಹಳಿ ತಪ್ಪಿದ್ದು, ಘಟನೆಯಲ್ಲಿ ಮೃತರ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.  ಇನ್ನು ಮೃತರ ಕುಟುಂಬಸ್ಥರಿಗೆ ಆಂಧ್ರ ಸರ್ಕಾರ 10 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ 2.5 ಲಕ್ಷ ಸಾವಿರ ಪರಿಹಾರ ಘೋಷಿಸಿದೆ.

    ಭಾನುವಾರ ರಾತ್ರಿ 7 ಗಂಟೆ ಸುಮಾರಿಗೆ ವಿಶಾಖಪಟ್ಟಣಂ-ರಾಯಗಢ  (Visakhapatnam to Rayagada) ಪ್ಯಾಸೆಂಜರ್ ರೈಲು ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್ ರೈಲಿಗೆ ಡಿಕ್ಕಿಯಾಗಿತ್ತು. ಘಟನೆಯಲ್ಲಿ 11 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಆಂಧ್ರದಲ್ಲಿ ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ; 6 ಮಂದಿ ಸಾವು

    ವಿಶಾಖಪಟ್ಟಣದಿಂದ ರಾಯಗಢಕ್ಕೆ ರೈಲು ಪ್ರಯಾಣಿಸುತ್ತಿತ್ತು. ವಿಶಾಖಪಟ್ಟಣದಿಂದ ಪಲಾಸಕ್ಕೆ ಅದೇ ಮಾರ್ಗದಲ್ಲಿ ಚಲಿಸುತ್ತಿದ್ದ ಪ್ಯಾಸೆಂಜರ್ ರೈಲಿಗೆ ಡಿಕ್ಕಿಯಾಗಿದೆ. ಪರಿಣಾಮ ರೈಲಿನ ಬೋಗಿಗಳು ಹಳಿ ತಪ್ಪಿದೆ. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ರೈಲ್ವೆ ಸಚಿವ ಅಶ್ವಿನ್ ವೈಷ್ಣವ್‍ಗೆ ಕರೆ ಮಾಡಿ ಪ್ರಧಾನಿ ಮೋದಿ ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ.

     Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಂಧ್ರದಲ್ಲಿ ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ; 6 ಮಂದಿ ಸಾವು

    ಆಂಧ್ರದಲ್ಲಿ ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ; 6 ಮಂದಿ ಸಾವು

    ಅಮರಾವತಿ: ಆಂಧ್ರಪ್ರದೇಶದಲ್ಲಿ (Andhra Pradesh) ಎಕ್ಸ್‌ಪ್ರೆಸ್‌ ರೈಲೊಂದು ನಿಂತಿದ್ದ ಪ್ಯಾಸೆಂಜರ್‌ ರೈಲಿಗೆ (Train Collides) ಭಾನುವಾರ ಡಿಕ್ಕಿ ಹೊಡೆದು 6 ಮಂದಿ ಸಾವಿಗೀಡಾಗಿದ್ದಾರೆ. ಒಡಿಶಾದಲ್ಲಿ 280 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡ ಭೀಕರ ಮೂರು ರೈಲುಗಳ ಅಪಘಾತವಾಗಿ ತಿಂಗಳುಗಳು ಕಳೆದ ನಂತರ ಆಂಧ್ರದಲ್ಲಿ ಈ ಅವಘಡ ಸಂಭವಿಸಿದೆ.

    ಪ್ಯಾಸೆಂಜರ್ ರೈಲು ವಿಶಾಖಪಟ್ಟಣಂನಿಂದ ರಾಯಗಡಕ್ಕೆ ಹೋಗುತ್ತಿತ್ತು. ಓವರ್‌ಹೆಡ್ ಕೇಬಲ್‌ ಸಮಸ್ಯೆಯಾಗಿದ್ದರಿಂದ ರೈಲು ನಿಂತಿತ್ತು. ಈ ವೇಳೆ ಪಲಾಸ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿ ನಿಂತಿದ್ದ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: Kerala Bomb Blast: ಬಾಂಬ್ ಇಟ್ಟಿದ್ದು ನಾನೇ ಅಂತಾ ಪೊಲೀಸರಿಗೆ ವ್ಯಕ್ತಿ ಶರಣು!

    ಅಪಘಾತದಲ್ಲಿ ಮೃತಪಟ್ಟವರಿಗೆ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ. ವಿಜಯನಗರಂ ಜಿಲ್ಲೆಯ ಕಂಟಕಪಲ್ಲಿ ರೈಲು ಅಪಘಾತದ ಘಟನೆಯ ಬಗ್ಗೆ ಸಿಎಂ ವಿಷಾದ ವ್ಯಕ್ತಪಡಿಸಿದ್ದಾರೆ.

    ಶೀಘ್ರ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಮತ್ತು ಗಾಯಾಳುಗಳಿಗೆ ತ್ವರಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸಿಎಂ ಆದೇಶಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ. ಇದನ್ನೂ ಓದಿ: ಹಮಾಸ್‌ನ್ನು ಭಾರತದ ಭಯೋತ್ಪಾದಕರ ಪಟ್ಟಿಗೆ ಸೇರಿಸೋ ಕಾಲ ಬಂದಿದೆ: ಇಸ್ರೇಲಿ ರಾಯಭಾರಿ

    ಸಮೀಪದ ಜಿಲ್ಲೆಗಳಾದ ವಿಶಾಖಪಟ್ಟಣ ಮತ್ತು ಅನಕಾಪಲ್ಲಿಯಿಂದ ಸಾಧ್ಯವಾದಷ್ಟು ಅಂಬುಲೆನ್ಸ್‌ಗಳನ್ನು ಕಳುಹಿಸಲು ಮತ್ತು ಹತ್ತಿರದ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲು ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದ ವಿವರಗಳನ್ನು ಕಾಲಕಾಲಕ್ಕೆ ಸಿಎಂಗೆ ವರದಿ ಮಾಡಬೇಕು ಎಂದು ಸೂಚಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಝಡ್ ಪ್ಲಸ್ ಭದ್ರತೆ ಇದ್ರೂ ಚಂದ್ರಬಾಬು ನಾಯ್ಡುಗೆ ಜೈಲಲ್ಲಿ ಸೊಳ್ಳೆ ಕಾಟ- ಡೆಂಗ್ಯೂ ಭೀತಿ

    ಝಡ್ ಪ್ಲಸ್ ಭದ್ರತೆ ಇದ್ರೂ ಚಂದ್ರಬಾಬು ನಾಯ್ಡುಗೆ ಜೈಲಲ್ಲಿ ಸೊಳ್ಳೆ ಕಾಟ- ಡೆಂಗ್ಯೂ ಭೀತಿ

    ತಂದೆಯನ್ನು ಕೊಲ್ಲುವ ಉದ್ದೇಶದಿಂದ ಜೈಲಿನಲ್ಲಿಟ್ಟಿದ್ದಾರೆಂದು ನಾರಾ ಲೋಕೇಶ್ ಆರೋಪ

    ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು (Chandrababu Naidu) ಅವರಿಗೆ ಜೈಲಿನಲ್ಲಿ (Jail) ಝಡ್ ಪ್ಲಸ್ ಭದ್ರತೆ ಇದ್ದರೂ ಅವರಿರುವ ಕೊಠಡಿಯಲ್ಲಿ ವಿಪರೀತ ಸೊಳ್ಳೆಗಳಿವೆ (Mosquito) ಎನ್ನಲಾಗಿದೆ. ತಮ್ಮ ತಂದೆಯನ್ನು ಕೊಲ್ಲಲು ಜೈಲಿನಲ್ಲಿಟ್ಟಿರುವುದಾಗಿ ಅವರ ಪುತ್ರ ನಾರಾ ಲೋಕೇಶ್ ಆರೋಪಿಸಿದ್ದಾರೆ.

    ಈ ಬಗ್ಗೆ ಎಕ್ಸ್ನಲ್ಲಿ ಬರೆದುಕೊಂಡಿರುವ ನಾರಾ ಲೋಕೇಶ್, ಮುಖ್ಯಮಂತ್ರಿ ಜಗನ್ ರೆಡ್ಡಿ ತನ್ನ ತಂದೆಯನ್ನು ಕೊಲ್ಲುವ ಉದ್ದೇಶದಿಂದ ಜೈಲಿನಲ್ಲಿಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬರು ಡೆಂಗ್ಯೂನಿಂದ ಸಾವನ್ನಪ್ಪಿದ್ದಾರೆ ಎಂದು ಲೋಕೇಶ್ ಆರೋಪಿಸಿದ್ದಾರೆ. ಈ ಹಿನ್ನೆಲೆ ತಮ್ಮ ತಂದೆಯ ಆರೋಗ್ಯದ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

    ಜೈಲಿನಲ್ಲಿ ಸೊಳ್ಳೆ ಕಡಿತದ ಬಗ್ಗೆ ಚಂದ್ರಬಾಬು ನಾಯ್ಡು ಅವರ ದೂರುಗಳನ್ನು ಜೈಲು ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎಂದು ಲೋಕೇಶ್ ಆರೋಪಿಸಿದ್ದಾರೆ. ಅದೇ ರೀತಿ ಟಿಡಿಪಿ ಆಂಧ್ರಪ್ರದೇಶದ ಅಧ್ಯಕ್ಷ ಕಿಂಜರಾಪು ಅಚ್ಚನ್ನೈಡು ಅವರು ಕೂಡಾ ಜೈಲಿನಲ್ಲಿ ತೀವ್ರ ಸೊಳ್ಳೆಗಳ ಹಾವಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ಜೈಲು ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಪಾಲಿಸಿಲ್ಲ ಎಂದಿದ್ದಾರೆ. ಡೆಂಗ್ಯೂಗೆ ಕೈದಿಯೊಬ್ಬರು ಸಾವನ್ನಪ್ಪಿದ ನಂತರ ಈ ಆತಂಕಗಳು ತೀವ್ರಗೊಂಡಿವೆ ಎಂದು ಅವರು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಆರು ವರ್ಷದ ನಂತರ ಕಾರವಾರಕ್ಕೆ ಬಂದಿಳಿದ ಟುಪೋಲೆವ್ ಯುದ್ಧ ವಿಮಾನ

    ಈ ಹಿಂದೆ ಟಿಡಿಪಿ ಅವಧಿಯಲ್ಲಿ ಮಾಜಿ ಹಣಕಾಸು ಸಚಿವ ಯನಮಲ ರಾಮಕೃಷ್ಣುಡು ಅವರು ಕೂಡಾ ಇದೇ ರೀತಿ ಸೊಳ್ಳೆ ಕಾಟದ ಬಗ್ಗೆ ಮಾಧ್ಯಮಗಳಿಗೆ ತಿಳಿಸಿದ್ದರು. ಸೆಪ್ಟೆಂಬರ್ 18 ರಂದು ಕೇಂದ್ರ ಕಾರಾಗೃಹದಲ್ಲಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ ನಂತರ ರಾಮಕೃಷ್ಣುಡು ಚಂದ್ರಬಾಬು ನಾಯ್ಡು ಅವರ ಜೈಲು ಕೋಣೆಯಲ್ಲಿ ವಿಪರೀತ ಸೊಳ್ಳೆಗಳಿವೆ ಎಂಬುದನ್ನು ತಿಳಿದುಕೊಂಡರು. ಈ ಬಗ್ಗೆ ವಿಚಾರಿಸಿದಾಗ ಸೊಳ್ಳೆಪರದೆ, ಹಾಸಿಗೆ ಮತ್ತಿತರ ವಸ್ತುಗಳನ್ನು ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಅಸಮರ್ಪಕ ಸೌಲಭ್ಯಗಳು ಇರುವುದು ಎದ್ದು ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.

    ಟಿಡಿಪಿ ನಾಯಕರಿಂದ ಹಲವಾರು ದೂರುಗಳ ಹೊರತಾಗಿಯೂ ಜೈಲು ಅಧಿಕಾರಿಗಳು ಸಮಸ್ಯೆಗಳಿಗೆ ಪರಿಹಾರ ನೀಡದ ಕಾರಣ ಚಂದ್ರಬಾಬು ನಾಯ್ಡು ಅವರ ಬಂಧನದ ಸಮಯದಲ್ಲಿ ತೊಂದರೆಗಳನ್ನು ಉಂಟುಮಾಡಿದರು ಎಂದು ಪಕ್ಷ ಹೇಳಿದೆ. ರಾಜ್ಯಾದ್ಯಂತ ಜನರು ಮಾಜಿ ಸಿಎಂ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುತ್ತಿದ್ದರೂ, ಈ ಕಳವಳಗಳನ್ನು ಪರಿಹರಿಸಲು ಅಧಿಕಾರಿಗಳು ಯಾವುದೇ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ಪಕ್ಷ ಆರೋಪಿಸಿದೆ. ಇದನ್ನೂ ಓದಿ: ಮದುವೆ ಹಾಲ್‍ನಲ್ಲಿ ಅಗ್ನಿ ಅವಘಡ- 100 ಮಂದಿ ದುರ್ಮರಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದ್ರಬಾಬು ನಾಯ್ಡು ಜಾಮೀನು ಅರ್ಜಿ ವಿಚಾರಣೆ ಸೆ.21ಕ್ಕೆ ಮುಂದೂಡಿಕೆ

    ಚಂದ್ರಬಾಬು ನಾಯ್ಡು ಜಾಮೀನು ಅರ್ಜಿ ವಿಚಾರಣೆ ಸೆ.21ಕ್ಕೆ ಮುಂದೂಡಿಕೆ

    ಅಮರಾವತಿ: ಆಂಧ್ರಪ್ರದೇಶ (Andhra Pradesh) ಮಾಜಿ ಮುಖ್ಯಮಂತ್ರಿ, ಟಿಡಿಪಿ (TDP) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು (N.Chandrababu Naidu) ಅವರ ಜಾಮೀನು (Bail) ಅರ್ಜಿ ವಿಚಾರಣೆಯನ್ನು ಆಂಧ್ರಪ್ರದೇಶ ಹೈಕೋರ್ಟ್ ಮಂಗಳವಾರ ಸೆಪ್ಟೆಂಬರ್ 21ಕ್ಕೆ ಮುಂದೂಡಿದೆ.

    ಟಿಡಿಪಿ ಕಾನೂನು ತಂಡವು ಹೈಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದೆ. ಟಿಡಿಪಿ ಕಾನೂನು ಸಲಹೆಗಾರ ಸುಪ್ರೀಮ್ ಸಿದ್ದಾರ್ಥ್ ಲೂತ್ರಾ ಅವರು ತಮ್ಮ ವಾದವನ್ನು ವಾಸ್ತವಿಕವಾಗಿ ಮಂಡಿಸಿದರು. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣಗೆ ರಿಲೀಫ್‌ – ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಮಧ್ಯಂತರ ತಡೆ

    ಕೌಶಲ್ಯಾಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ವಿಜಯವಾಡದ ಭ್ರಷ್ಟಾಚಾರ ನಿಗ್ರಹ ದಳ (ACB) ನ್ಯಾಯಾಲಯವು ಸೆಪ್ಟೆಂಬರ್ 23ರವರೆಗೆ ಚಂದ್ರಬಾಬು ನಾಯ್ಡುವನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಇದನ್ನೂ ಓದಿ: ವಾಕ್ ಸ್ವಾತಂತ್ರ್ಯ ಧರ್ಮದ ವಿರುದ್ಧ ದ್ವೇಷ ಭಾಷಣ ಆಗಬಾರದು: ಮದ್ರಾಸ್ ಹೈಕೋರ್ಟ್

    ನಾಯ್ಡು ಅವರನ್ನು ಬಂಧಿಸಿರುವ ಪ್ರಕರಣವು ಆಂಧ್ರಪ್ರದೇಶದಲ್ಲಿರುವ ಸೆಂಟರ್ಸ್ ಆಫ್ ಎಕ್ಸಲೆನ್ಸ್ (COE) ಕ್ಲಸ್ಟರ್‌ಗಳ ಸ್ಥಾಪನೆಗೆ ಸಂಬಂಧಿಸಿದ್ದು, ಒಟ್ಟು ಅಂದಾಜು ಯೋಜನಾ ಮೌಲ್ಯ 3,300 ಕೋಟಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅಕ್ರಮದಿಂದ ರಾಜ್ಯ ಸರ್ಕಾರಕ್ಕೆ 300 ಕೋಟಿಗೂ ಅಧಿಕ ನಷ್ಟ ಉಂಟಾಗಿದೆ ಎಂದು ಸಂಸ್ಥೆ ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಸಚಿವ ಡಿ.ಸುಧಾಕರ್‌ಗೆ ರಿಲೀಫ್ – ಜಾತಿ ನಿಂದನೆ ಆರೋಪ ಪ್ರಕರಣಕ್ಕೆ ಧಾರವಾಡ ಹೈಕೋರ್ಟ್ ತಡೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಾಮೀನು ಇಲ್ಲ – ಚಂದ್ರಬಾಬು ನಾಯ್ಡುಗೆ 14 ದಿನಗಳ ನ್ಯಾಯಾಂಗ ಬಂಧನ

    ಜಾಮೀನು ಇಲ್ಲ – ಚಂದ್ರಬಾಬು ನಾಯ್ಡುಗೆ 14 ದಿನಗಳ ನ್ಯಾಯಾಂಗ ಬಂಧನ

    ಅಮರಾವತಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ACB) ನ್ಯಾಯಾಲಯ ಭಾನುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

    371 ಕೋಟಿ ರೂ.ಗಳ ಆಂಧ್ರಪ್ರದೇಶ ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಪದ ಮೇಲೆ ಚಂದ್ರಬಾಬು ನಾಯ್ಡು ಅವರನ್ನು ಅಪರಾಧ ತನಿಖಾ ಇಲಾಖೆ (CID) ಶನಿವಾರ ಮುಂಜಾನೆ ಬಂಧಿಸಿದೆ.

    ಈ ಪ್ರಕರಣ ಆಂಧ್ರಪ್ರದೇಶ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮ (APSSDC) ರಚನೆಗೆ ಸಂಬಂಧಿಸಿದೆ. 2014 ರಲ್ಲಿ ನಿರುದ್ಯೋಗಿ ಯುವಕರಿಗೆ ತರಬೇತಿ ನೀಡಲು ಮತ್ತು ಅನಂತಪುರ ಜಿಲ್ಲೆಯ ಕಿಯಾದಂತಹ ಕೈಗಾರಿಕೆಗಳ ಬಳಿ ಶಿಕ್ಷಣ ಸಂಸ್ಥೆಗಳೊಂದಿಗೆ ಸಂಬಂಧವನ್ನು ಬೆಳೆಸುವ ಗುರಿಯನ್ನು ಹೊಂದಿದೆ. ತೆಲುಗು ದೇಶಂ ಪಕ್ಷದ (TDP) ಮುಖ್ಯಸ್ಥ ಈ ಪ್ರಕರಣದಲ್ಲಿ ಮುಖ್ಯ ಸಂಚುಕೋರನಂತೆ ವರ್ತಿಸಿದ್ದು, ಎಪಿಎಸ್‌ಎಸ್‌ಡಿಸಿಯ ಸೋಗಿನಲ್ಲಿ 371 ಕೋಟಿ ರೂ.ಗಳ ಹಗರಣವನ್ನು ನಡೆಸಿದ್ದಾರೆ ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ. ಇದನ್ನೂ ಓದಿ: ಭಾರತ ಎಂಬ ಮರುನಾಮಕರಣವನ್ನು ವಿರೋಧಿಸುವವರು ದೇಶ ತೊರೆಯಬಹುದು: ಬಿಜೆಪಿ ಎಂಪಿ

    ಚಂದ್ರಬಾಬು ನಾಯ್ಡು ಅವರು 2014 ರಿಂದ 2019 ರವರೆಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ಆ ಸಂದರ್ಭ ಆಂಧ್ರಪ್ರದೇಶದ ಸರ್ಕಾರ ಎಪಿಎಸ್‌ಎಸ್‌ಡಿಸಿ ಯೋಜನೆಗಾಗಿ ಜರ್ಮನ್ ಎಂಜಿನಿಯರಿಂಗ್ ದೈತ್ಯ ಸೀಮೆನ್ಸ್ನೊಂದಿಗೆ ಪಾಲುದಾರಿಕೆ ಹೊಂದಿತ್ತು. 6 ಶ್ರೇಷ್ಠ ಕೇಂದ್ರಗಳನ್ನು ಸ್ಥಾಪಿಸುವ ಕಾರ್ಯವನ್ನು ಸೀಮೆನ್ಸ್ಗೆ ವಹಿಸಲಾಗಿತ್ತು. ಆದರೆ ಸೀಮೆನ್ಸ್ ಯೋಜನೆಗೆ ಯಾವುದೇ ಹಣವನ್ನು ಹೂಡಿಕೆ ಮಾಡದಿದ್ದರೂ ರಾಜ್ಯ ಸರ್ಕಾರ ಯೋಜನೆಗೆ 371 ಕೋಟಿ ರೂ. ಬಿಡುಗಡೆ ಮಾಡಿತ್ತು.

    ಇದೀಗ ಆಂಧ್ರಪ್ರದೇಶದ ಮಾಜಿ ಸಿಎಂ ಅವರನ್ನು ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದೆ. ಇದರಲ್ಲಿ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), 420 (ವಂಚನೆ ಮತ್ತು ಅಪ್ರಾಮಾಣಿಕವಾಗಿ ಆಸ್ತಿ ವಿತರಣೆ) ಮತ್ತು 465 (ನಕಲಿ) ಸೇರಿವೆ. ಆಂಧ್ರಪ್ರದೇಶದ ಸಿಐಡಿ ಕೂಡ ಅವರ ವಿರುದ್ಧ ಭ್ರಷ್ಟಾಚಾರ ಪ್ರಕರಣವನ್ನು ದಾಖಲಿಸಿದೆ. ಇದನ್ನೂ ಓದಿ: ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ, ಹೋರಾಟ ಮಾಡೋದು ನೌಕರರ ಹಕ್ಕು: ರಾಮಲಿಂಗಾ ರೆಡ್ಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Chandrababu Naidu Arrested – ಏನಿದು 371 ಕೋಟಿ ಹಗರಣ ಕೇಸ್‌?

    Chandrababu Naidu Arrested – ಏನಿದು 371 ಕೋಟಿ ಹಗರಣ ಕೇಸ್‌?

    ಹೈದರಾಬಾದ್‌: ತೆಲುಗು ದೇಶಂ ಪಕ್ಷದ (TDP) ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ (Andhra Pradesh) ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು (Chandrababu Naidu) ಮೇಲೆ 371 ಕೋಟಿ ರೂ. ಹಗರಣ (Scam) ಎಸಗಿದ ಗಂಭೀರ ಆರೋಪ ಕೇಳಿ ಬಂದಿದೆ.

    ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿ (Skill Development Corporation) ಅಕ್ರಮ ಎಸಗಿದ ಆರೋಪ ಇರುವ ಹಿನ್ನೆಲೆಯಲ್ಲಿ ಹೈದರಾಬಾದಿನಿಂದ ಸುಮಾರು 300 ಕಿ.ಮೀ ದೂರದಲ್ಲಿರುವ ನಂದ್ಯಾಲ್‌ನಲ್ಲಿ ಇಂದು ಮುಂಜಾನೆ ನಾಯ್ಡು ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.  ಇದನ್ನೂ ಓದಿ: ಸೆ.11ಕ್ಕೆ ಬೆಂಗಳೂರು ಬಂದ್ – ಏನಿದೆ? ಏನಿರಲ್ಲ?

    ನಾಯ್ಡು ಮೇಲಿರುವ ಆರೋಪ ಏನು?
    ಯುವಕರಿಗೆ ಉದ್ಯೋಗ ತರಬೇತಿ ನೀಡಲು ಅಂದಿನ ಮುಖ್ಯಮಂತ್ರಿ ನಾಯ್ಡು ಅವರ ನೇತೃತ್ವದಲ್ಲಿ ಆಂಧ್ರಪ್ರದೇಶ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ.

    ಈ ಸಂಬಂಧ ಟಿಡಿಪಿ ಸರ್ಕಾರವು ಜರ್ಮನ್ ಎಂಜಿನಿಯರಿಂಗ್ ದೈತ್ಯ ಸೀಮೆನ್ಸ್‌ (Siemens) ಕಂಪನಿಯೊಂದಿಗೆ ತಿಳುವಳಿಕೆ ಒಪ್ಪಂದವನ್ನು (MoU) ಮಾಡಿಕೊಂಡಿತ್ತು. ಸೀಮೆನ್ಸ್, ಇಂಡಸ್ಟ್ರಿ ಸಾಫ್ಟ್‌ವೇರ್ ಇಂಡಿಯಾ ಲಿಮಿಟೆಡ್ ಮತ್ತು ಡಿಸೈನ್ ಟೆಕ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಸಹಭಾಗಿತ್ವದಲ್ಲಿ ರಾಜ್ಯ ಕೌಶಲ್ಯ ಅಭಿವೃದ್ಧಿ ಸಂಸ್ಥೆಯು ಈ ಯೋಜನೆಯನ್ನು ಕಾರ್ಯಗತಗೊಳಿಸುವ ಉದ್ದೇಶವನ್ನು ಹೊಂದಿತ್ತು.

    3,356 ಕೋಟಿ ರೂ. ಯೋಜನಾ ವೆಚ್ಚದಲ್ಲಿ ಸರ್ಕಾರ 10% ಹಣವನ್ನು ಹೂಡಲಿದ್ದರೆ, ಸಿಮೆನ್ಸ್‌ 90% ಹಣವನ್ನು ಹೂಡಲು ಒಪ್ಪಿಕೊಂಡಿತ್ತು. ಸೀಮೆನ್ಸ್ ಈ ಯೋಜನೆಗೆ ಯಾವುದೇ ಹಣವನ್ನು ಹೂಡಿಕೆ ಮಾಡದಿದ್ದರೂ ಮೂರು ತಿಂಗಳ ಒಳಗಡೆ 371 ಕೋಟಿ ರೂ. ಹಣವನ್ನು ಐದು ಕಂತುಗಳಲ್ಲಿ ಪಾವತಿಸಲಾಗಿದೆ.  ಇದನ್ನೂ ಓದಿ: ಭಾರತ, ಅಮೆರಿಕದ ನಡುವೆ ದ್ವಿಪಕ್ಷೀಯ ಮಾತುಕತೆ – ಮೋದಿ, ಬೈಡೆನ್ ಮಧ್ಯೆ ಏನು ಚರ್ಚೆ ನಡೆದಿದೆ?

    ಈ ಯೋಜನೆಗೆ ಸಂಬಂಧಿಸಿದ ಯಾವುದೇ ಕಡತಗಳಿಗೆ ಆಗಿನ ಪ್ರಧಾನ ಹಣಕಾಸು ಕಾರ್ಯದರ್ಶಿ ಮತ್ತು ಆಗಿನ ಮುಖ್ಯ ಕಾರ್ಯದರ್ಶಿ ಸಹಿ ಹಾಕಿರಲಿಲ್ಲ. ಹೀಗಾಗಿ ಸರ್ಕಾರ ಹಣವನ್ನು ಯಾರಿಗೆ ಬಿಡುಗಡೆ ಮಾಡಿದೆ ಎನ್ನುವುದೇ ದೊಡ್ಡ ಪ್ರಶ್ನೆಯಾಗಿ ಉಳಿದಿದೆ.

    ಶೆಲ್ ಕಂಪನಿಗಳ ಮೂಲಕ ಖಾಸಗಿ ಸಂಸ್ಥೆಗಳಿಗೆ ಸರ್ಕಾರಿ ಹಣವನ್ನು ನಕಲಿ ಇನ್‌ವಾಯ್ಸ್‌ಗಳನ್ನು ಬಳಸಿಕೊಂಡು ಪಾವತಿಸಲಾಗಿದೆ. ಅಲೈಡ್ ಕಂಪ್ಯೂಟರ್ಸ್, ಸ್ಕಿಲ್ಲರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ನಾಲೆಡ್ಜ್ ಪೋಡಿಯಂ, ಕ್ಯಾಡೆನ್ಸ್ ಪಾರ್ಟ್‌ನರ್ಸ್ ಮತ್ತು ಇಟಿಎ ಗ್ರೀನ್ಸ್ ಸೇರಿದಂತೆ ವಿವಿಧ ಶೆಲ್ ಕಂಪನಿಗಳಿಗೆ ಕೌಶಲ್ಯ ಅಭಿವೃದ್ಧಿಗಾಗಿ 241 ಕೋಟಿ ಪಾವತಿಸಲಾಗಿದೆ. ಟೆಂಡರ್ ಪ್ರಕ್ರಿಯೆಯಿಲ್ಲದೆ 371 ಕೋಟಿ ಬಿಡುಗಡೆ ಮಾಡಲಾಗಿದೆ. ಚಂದ್ರಬಾಬು ನಾಯ್ಡು ನಿರ್ದೇಶನದಂತೆ ಈ ಶೆಲ್‌ ಕಂಪನಿಗಳನ್ನು ಸ್ಥಾಪಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭ್ರಷ್ಟಾಚಾರ ಕೇಸ್‌ – ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅರೆಸ್ಟ್‌

    ಭ್ರಷ್ಟಾಚಾರ ಕೇಸ್‌ – ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅರೆಸ್ಟ್‌

    ಹೈದರಾಬಾದ್‌: ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ (Andhra Pradesh) ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು (Chandrababu Naidu) ಅವರನ್ನು ಶನಿವಾರ ಮುಂಜಾನೆ ನಂದ್ಯಾಲ್ ಪೊಲೀಸರು ಬಂಧಿಸಿದ್ದಾರೆ.

    ನಂದ್ಯಾಲ್ ಡಿಐಜಿ ರಘುರಾಮಿ ರೆಡ್ಡಿ ಮತ್ತು ಅಪರಾಧ ತನಿಖಾ ದಳ (CID) ನೇತೃತ್ವದ ಪೊಲೀಸರ ಆರ್‌ಕೆ ಫಂಕ್ಷನ್ ಹಾಲ್‌ನಲ್ಲಿರುವ ನಾಯ್ಡು ಅವರ ನಿವಾಸಕ್ಕೆ ಮುಂಜಾನೆ 3 ಗಂಟೆಗೆ ಆಗಮಿಸಿದ್ದಾರೆ.

    ಈ ಸಮಯದಲ್ಲಿ ಚಂದ್ರಬಾಬು ನಾಯ್ದು ವಿಶ್ರಾಂತಿ ಪಡೆಯುತ್ತಿದ್ದರು. ಪೊಲೀಸರು ವಶಕ್ಕೆ ಪಡೆಯಲು ಬಂದ ವಿಚಾರ ತಿಳಿದು ಭಾರೀ ಸಂಖ್ಯೆಯಲ್ಲಿ ನಾಯ್ಡು ಮನೆ ಬಳಿ ಅಭಿಮಾನಿಗಳು ಸೇರಿದ್ದರು. ಅಭಿಮಾನಿಗಳ ಪ್ರತಿಭಟನೆಯಿಂದ ಪೊಲೀಸರಿಗೆ ನಾಯ್ದು ಅವರನ್ನು ವಶಕ್ಕೆ ಪಡೆಯಲು ಸಾಧ್ಯವಾಗಲಿಲ್ಲ. ಇದನ್ನೂ ಓದಿ: ಡೊನಾಲ್ಡ್ ಟ್ರಂಪ್ ಜೊತೆ ಗಾಲ್ಫ್ ಆಡಿದ ಧೋನಿ!

    ನಾಯ್ಡು ಅವರ ರಕ್ಷಣೆಗೆ ನಿಯೋಜನೆಗೊಂಡಿದ್ದ ಎಸ್‌ಪಿಜಿ ಪಡೆಗಳು ಸಹ ಪೊಲೀಸರಿಗೆ ಅನುಮತಿ ನೀಡಿರಲಿಲ್ಲ. ಕೊನೆಗೆ 6 ಗಂಟೆಗೆ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ಬಂಧಿಸಿದರು.

    ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣದಲ್ಲಿ (Skill Development Corporation Scam) ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದ್ದು, ಅವರು ಎ1 ಆರೋಪಿ ಎಂದು ಡಿಐಜಿ ರಘುರಾಮಿ ರೆಡ್ಡಿ ತಿಳಿಸಿದರು.

    ಐಪಿಸಿ ಸೆಕ್ಷನ್ 120 (8), 166, 167, 418, 420, 465, 468, 471, 409 ರ ಅಡಿಯಲ್ಲಿ ಬಂಧಿಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆ 1988 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಂಧ್ರ ಪ್ರದೇಶದ ಶಾಲೆಗಳಲ್ಲಿ ಮೊಬೈಲ್‌ ಬ್ಯಾನ್‌, ಶಿಕ್ಷಕರೂ ಮೊಬೈಲ್‌ ಬಳಸುವಂತಿಲ್ಲ

    ಆಂಧ್ರ ಪ್ರದೇಶದ ಶಾಲೆಗಳಲ್ಲಿ ಮೊಬೈಲ್‌ ಬ್ಯಾನ್‌, ಶಿಕ್ಷಕರೂ ಮೊಬೈಲ್‌ ಬಳಸುವಂತಿಲ್ಲ

    ಅಮರಾವತಿ: ಆಂಧ್ರ ಪ್ರದೇಶ ಸರ್ಕಾರ (Andhra Pradesh Government) ರಾಜ್ಯಾದ್ಯಂತ ಶಾಲೆಗಳಲ್ಲಿ ಮೊಬೈಲ್‌ ಫೋನ್‌ ಬಳಕೆಯನ್ನ ನಿಷೇಧಿಸಿದೆ. ವಿದ್ಯಾರ್ಥಿಗಳು ಶಾಲೆಗಳಿಗೆ ಮೊಬೈಲ್‌ ತರುವುದನ್ನ ನಿಷೇಧಿಸಿ ಶಿಕ್ಷಣ ಇಲಾಖೆ (Education Departments) ಆದೇಶ ಹೊರಡಿಸಿದೆ.

    ಅಲ್ಲದೇ ತರಗತಿಗಳಲ್ಲಿ ಶಿಕ್ಷಕರೂ ಸಹ ಮೊಬೈಲ್‌ ಫೋನ್‌ (Mobile Phones) ಬಳಸುವುದನ್ನ ಶಿಕ್ಷಣ ಇಲಾಖೆ ನಿಷೇಧಿಸಿದೆ. ತರಗತಿಗಳಿಗೆ ಹೋಗುವ ಮುನ್ನ ಶಿಕ್ಷಕರು ತಮ್ಮ ಮೊಬೈಲ್‌ಗಳನ್ನು ಮುಖ್ಯಶಿಕ್ಷಕರ ಬಳಿ ಕೊಟ್ಟು ಹೋಗಬೇಕು ಎಂದು ಸೂಚಿಸಿದೆ. ಇದನ್ನೂ ಓದಿ: ಡಿಸೆಂಬರ್‌ನಲ್ಲಿ ಲೋಕಸಭಾ ಚುನಾವಣೆ: ಮಮತಾ ಬ್ಯಾನರ್ಜಿ ಭವಿಷ್ಯ

    ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ (UNESCO) ಜಾಗತಿಕ ಶಿಕ್ಷಣ ಮೇಲ್ವಿಚಾರಣಾ ವರದಿಗೆ ಅನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಶಿಕ್ಷಕರಿಂದ ಮಕ್ಕಳಿಗೆ ಉಂಟಾಗುವ ತೊಂದರೆ ತಪ್ಪಿಸಲು ಶಿಕ್ಷಕರೂ ತರಗತಿಗಳಲ್ಲಿ ಮೊಬೈಲ್‌ ಬಳಸುವುದನ್ನ ನಿಷೇಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ತನಗಿಂತ 2 ವರ್ಷ ಕಿರಿಯವನನ್ನ ಪ್ರೀತಿಸಿ ಮದ್ವೆಯಾಗಿದ್ದ ವಿವಾಹಿತೆ ಆತ್ಮಹತ್ಯೆ

    ವಿಶ್ವಸಂಸ್ಥೆಯು ಶಾಲೆಗಳಲ್ಲಿ ಫೋನ್‌ ಬಳಕೆಯನ್ನ ನಿಷೇಧಿಸಿದೆ. ಡೇಟಾ ಗೌಪ್ಯತೆ, ಸುರಕ್ಷತೆ ಮತ್ತು ಮಗುವಿನ ಯೋಗಕ್ಷೇಮ ಕಾಳಜಿಯಿಂದ ಜಾಗತೀಕವಾಗಿ ನಾಲ್ಕು ದೇಶಗಳಲ್ಲಿ ಈ ಕ್ರಮ ಅನುಷ್ಠಾನಕ್ಕೆ ಬಂದಿದೆ. ಇದನ್ನ ಮಾದರಿಯಾಗಿ ತೆಗೆದುಕೊಂಡಿರುವ ಶಿಕ್ಷಣ ಇಲಾಖೆ ಆಂಧ್ರ ಪ್ರದೇಶದ ಶಾಲೆಗಳಲ್ಲಿಯೂ ಮೊಬೈಲ್‌ ಬಳಕೆಗೆ ನಿಷೇಧ ಹೇರಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಮಾನದಲ್ಲಿ ಬಂದು ದುಬಾರಿ ಸೀರೆ ಕದ್ದು ಪರಾರಿಯಾಗ್ತಿದ್ದ ಖತರ್ನಾಕ್ ಲೇಡಿ ಗ್ಯಾಂಗ್ ಅರೆಸ್ಟ್

    ವಿಮಾನದಲ್ಲಿ ಬಂದು ದುಬಾರಿ ಸೀರೆ ಕದ್ದು ಪರಾರಿಯಾಗ್ತಿದ್ದ ಖತರ್ನಾಕ್ ಲೇಡಿ ಗ್ಯಾಂಗ್ ಅರೆಸ್ಟ್

    – ಸುಮಾರು 14 ಲಕ್ಷ ಮೌಲ್ಯದ ಸೀರೆ ಕಳ್ಳತನ

    ಬೆಂಗಳೂರು: ಆಂಧ್ರ ಪ್ರದೇಶದಿಂದ (Andhra Pradesh) ವಿಮಾನದಲ್ಲಿ ಬಂದು ಸೀರೆ ಕಳ್ಳತನ ಮಾಡಿ ಮರಳುತ್ತಿದ್ದ ಖತರ್ನಾಕ್ ಲೇಡಿ ಗ್ಯಾಂಗ್‍ನ್ನು ಅಶೋಕ್ ನಗರ ಪೊಲೀಸರು (Police) ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಗುಂಟೂರು ಮೂಲದ ರಮಣ, ರತ್ನಾಲು, ಚುಕ್ಕಮ್ಮ ಎಂದು ಗುರುತಿಸಲಾಗಿದೆ. ಆರೋಪಿಗಳು ಗುಂಟೂರಿನಿಂದ ವಿಮಾನದಲ್ಲಿ ಬೆಂಗಳೂರಿಗೆ (Bengaluru) ಬರುತ್ತಿದ್ದರು. ಬಳಿಕ ಸ್ಕಾರ್ಪಿಯೋ ಕಾರಿನಲ್ಲಿ ಬೆಂಗಳೂರನ್ನು ಸುತ್ತುತ್ತಿದ್ದರು. ನಂತರ ಸೀರೆ ಕೊಂಡುಕೊಳ್ಳುವ ನೆಪದಲ್ಲಿ ಬಟ್ಟೆ ಅಂಗಡಿಗಳಿಗೆ ತೆರಳುತ್ತಿದ್ದರು. ಅಲ್ಲಿ ಅಂಗಡಿಯವರಿಗೆ ಯಾಮಾರಿಸಿ ದುಬಾರಿ ಸೀರೆಗಳನ್ನು ಕದ್ದು ಪರಾರಿಯಾಗುತ್ತಿದ್ದರು. ಇದನ್ನೂ ಓದಿ: ಸೊಸೆಯನ್ನು ರಕ್ಷಿಸಲು ಪತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದ ಪತ್ನಿ!

    ಕಳ್ಳಿಯರು ಶ್ರೀಮಂತರಂತೆ ಬಿಂಬಿಸಲು ಮೈತುಂಬಾ ಒಡವೆ ಹಾಕಿಕೊಂಡು ಅಂಗಡಿಗೆ ತೆರಳುತ್ತಿದ್ದರು. ಅಲ್ಲಿ ಲಕ್ಷಗಟ್ಟಲೆ ಬೆಲೆ ಬಾಳುವ ಸೀರೆ ತೋರಿಸುವಂತೆ ಕೇಳುತ್ತಿದ್ದರು. ಬಳಿಕ ಹತ್ತಾರು ಸೀರೆ ನೋಡಿ ಬೇರೆ ಸೀರೆ ತೋರಿಸಿ ಎಂದು ಹೇಳಿ, ಅಂಗಡಿಯವರು ಒಳಗಿಂದ ತರಲು ತೆರಳಿದಾಗ ಬಂಡಲ್‍ನ್ನೇ ಉಟ್ಟ ಸೀರೆಯಲ್ಲಿ ಮುಚ್ಚಿಟ್ಟುಕೊಂಡು ಪರಾರಿಯಾಗುತ್ತಿದ್ದರು.

    ಹೀಗೆ ಪರಾರಿಯಾಗುವಾಗ ಸೆಕ್ಯೂರಿಟಿ ಒಬ್ಬರಿಗೆ ಮಹಿಳೆಯ ಕಾಲಿನ ಬಳಿ ಸೀರೆ ಇರುವುದು ಕಾಣಿಸಿತ್ತು. ಬಳಿಕ ಅನುಮಾನಗೊಂಡು ಅವರು ಮಾಲೀಕರಿಗೆ ತಿಳಿಸಿದ್ದರು. ಈ ವೇಳೆ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಕಳ್ಳತನ ಬೆಳಕಿಗೆ ಬಂದಿದೆ. ಬಳಿಕ ಮಾಲೀಕರು ಸಿಸಿಟಿವಿ ವೀಡಿಯೋ ಸಮೇತ ತೆರಳಿ ಅಶೋಕ ನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.

    ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದಾಗ ಬೆಂಗಳೂರಿನ ಹಲವೆಡೆ ಕಳ್ಳತನ ಎಸಗಿರುವುದು ಬೆಳಕಿಗೆ ಬಂದಿದೆ. ಸುಮಾರು 14 ಲಕ್ಷ ಮೌಲ್ಯದ ಸೀರೆ ಕಳ್ಳತನ ಮಾಡಿರುವುದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ತಂದೆಯಿಂದಲೇ ಮಗಳ ಮರ್ಯಾದಾ ಹತ್ಯೆ – ಸದ್ದಿಲ್ಲದೆ ಅಂತ್ಯಸಂಸ್ಕಾರ ಮಾಡಿ ಸಿಕ್ಕಿಬಿದ್ದರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಳೆ, ಮಕ್ಕಳನ್ನು ಸೇತುವೆಯಿಂದ ತಳ್ಳಿದ ಲಿವ್ ಇನ್ ಪಾರ್ಟ್‌ನರ್ – 100ಕ್ಕೆ ಕರೆ ಮಾಡಿ ಪ್ರಾಣ ಉಳಿಸಿಕೊಂಡ ಬಾಲಕಿ

    ಮಹಿಳೆ, ಮಕ್ಕಳನ್ನು ಸೇತುವೆಯಿಂದ ತಳ್ಳಿದ ಲಿವ್ ಇನ್ ಪಾರ್ಟ್‌ನರ್ – 100ಕ್ಕೆ ಕರೆ ಮಾಡಿ ಪ್ರಾಣ ಉಳಿಸಿಕೊಂಡ ಬಾಲಕಿ

    ಅಮರಾವತಿ: ಸೆಲ್ಫಿ ನೆಪದಲ್ಲಿ ಮಹಿಳೆ, 1 ವರ್ಷ ಹಾಗೂ 13 ವರ್ಷದ ಮಕ್ಕಳನ್ನು ಮಹಿಳೆಯ ಲಿವ್ ಇನ್ ಪಾರ್ಟ್‌ನರ್ ತುಂಬಿ ಹರಿಯುತ್ತಿದ್ದ ನದಿಯ ಸೇತುವೆಯಿಂದ ತಳ್ಳಿದ್ದು, ಘಟನೆಯಲ್ಲಿ 13ರ ಬಾಲಕಿ ಪವಾಡಸದೃಶದಂತೆ ತನ್ನ ಪ್ರಾಣ ಉಳಿಸಿಕೊಂಡಿರುವ ಘಟನೆ ಆಂಧ್ರಪ್ರದೇಶದ (Andhra Pradesh) ಗುಂಟೂರಿನಲ್ಲಿ (Guntur) ನಡೆದಿದೆ.

    13 ವರ್ಷದ ಬಾಲಕಿ ಕೀರ್ತನ, ತನ್ನ ತಾಯಿ ಪುಪ್ಪಳ ಸುಹಾಸಿನಿ (36) ಹಾಗೂ ಬಾಲಕಿಯ 1 ವರ್ಷದ ಸಹೋದರಿ ಜರ್ಸಿಯನ್ನು ಭಾನುವಾರ ಮುಂಜಾನೆ ಗೋದಾವರಿ ನದಿಗೆ (Godavari River) ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆಯಿಂದ (Bridge) ತಳ್ಳಲಾಗಿತ್ತು. ಬಾಲಕಿ ಈ ವೇಳೆ ಸೇತುವೆಗೆ ಅಳವಡಿಸಲಾಗಿದ್ದ ಪ್ಲಾಸ್ಟಿಕ್ ಪೈಪ್ ಅನ್ನು ಬಿಗಿಯಾಗಿ ಹಿಡಿದು, ಪೊಲೀಸರ ಸಹಾಯಕ್ಕಾಗಿ ತನ್ನ ಜೇಬಿನಿಂದ ಫೋನ್ ತೆಗೆದುಕೊಂಡು 100ಕ್ಕೆ ಕರೆ ಮಾಡಿದ್ದಾಳೆ.

    ಮಹಿಳೆ ಹಾಗೂ ಮಕ್ಕಳನ್ನು ಸೇತುವೆಗೆ ತಳ್ಳಿದ ಆರೋಪಿ ಉಳವ ಸುರೇಶ್ ಸುಹಾಸಿನಿಯ ಲಿವ್ ಇನ್ ಪಾರ್ಟ್‌ನರ್ ಆಗಿದ್ದ. ಗಂಡನಿಂದ ದೂರವಾಗಿದ್ದ ಸುಹಾಸಿನಿಗೆ ಸುರೇಶ್ ಪರಿಚಯವಾಗಿತ್ತು. ಹೀಗೆ ಸುರೇಶ್ ಹಾಗೂ ಸುಹಾಸಿನಿ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದರು.

    ಭಾನುವಾರ ಇಬ್ಬರು ಮಕ್ಕಳು ಹಾಗೂ ಸುಹಾಸಿನಿಯನ್ನು ಸುರೇಶ್ ಪಿಕ್‌ನಿಕ್ ಕರೆದುಕೊಂಡು ಹೋಗಿದ್ದ ಮಾತ್ರವಲ್ಲದೇ ಗೆಳತಿ ಹಾಗೂ ಆಕೆಯ ಮಕ್ಕಳನ್ನು ಕೊಲ್ಲುವ ಸಂಚು ರೂಪಿಸಿದ್ದ. ಸೆಲ್ಫಿ ನೆಪದಲ್ಲಿ ಗೋದಾವರಿ ನದಿ ಬಳಿ ಕಾರು ನಿಲ್ಲಿಸಿ, ಮೂವರನ್ನು ಸೇತುವೆ ಅಂಚಿಗೆ ಕರೆದುಕೊಂಡು ಹೋಗಿ ನದಿಗೆ ತಳ್ಳಿದ್ದಾನೆ. ಇದನ್ನೂ ಓದಿ: ‘ಹರ ಹರ ಶಂಭು’ ಗಾಯಕಿಯ ಸಹೋದರನ ಬರ್ಬರ ಹತ್ಯೆ

    ಆದರೆ ಬಾಲಕಿ ಕೀರ್ತನ ಈ ವೇಳೆ ಸೇತುವೆಗೆ ಅಳವಡಿಸಲಾಗಿದ್ದ ಪೈಪ್ ಅನ್ನು ಗಟ್ಟಿಯಾಗಿ ಹಿಡಿದು ತನ್ನ ಪ್ರಾಣ ಉಳಿಸಿಕೊಂಡಿದ್ದಾಳೆ. ತಕ್ಷಣ ತನ್ನ ಜೇಬಿನಿಂದ ಫೋನ್ ತೆಗೆದು ಸಹಾಯಕ್ಕಾಗಿ 100 ನಂಬರ್ ಅನ್ನು ಡಯಲ್ ಮಾಡಿದ್ದಾಳೆ. ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಬಾಲಕಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಸುಹಾಸಿನಿ ಹಾಗೂ ಆಕೆಯ 1 ವರ್ಷದ ಮಗು ನದಿಯಲ್ಲಿ ನಾಪತ್ತೆಯಾಗಿದೆ. ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಕಾಫಿನಾಡಿನ ಸಹನಾ ಮೊಸೆಸ್- ನಾಲ್ವರಿಗೆ ಪುನರ್ಜನ್ಮ

    ಇದೀಗ ನಾಪತ್ತೆಯಾಗಿರುವ ಸುಹಾಸಿನಿ ಹಾಗೂ ಮಗುವನ್ನು ಹುಡುಕಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಇತ್ತ ತಲೆಮರೆಸಿಕೊಂಡಿರುವ ಆರೋಪಿ ಸುರೇಶ್‌ನನ್ನು ಬಂಧಿಸಲು ಬಲೆಬೀಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]