Tag: Andhra Pradesh

  • ಉದ್ಘಾಟನೆಗೆ ಮುನ್ನವೇ ವಂದೇ ಭಾರತ್ ರೈಲಿಗೆ ಕಲ್ಲೆಸೆತ – ಮೂವರ ಬಂಧನ

    ಉದ್ಘಾಟನೆಗೆ ಮುನ್ನವೇ ವಂದೇ ಭಾರತ್ ರೈಲಿಗೆ ಕಲ್ಲೆಸೆತ – ಮೂವರ ಬಂಧನ

    ಅಮರಾವತಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ಚಾಲನೆ ನೀಡಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ (Vande Bharat Express Train) ಕಲ್ಲು ಹೊಡೆದು (Stone Pelting) ಕಿಟಕಿ ಗಾಜುಗಳನ್ನು ಒಡೆದಿರುವ ಘಟನೆ ವರದಿಯಾಗಿತ್ತು. ರೈಲಿಗೆ ಹಾನಿ ಮಾಡಿರುವ ಆರೋಪದ ಮೇಲೆ ವಿಶಾಖಪಟ್ಟಣಂನ (Visakhapatnam) ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

    ಬುಧವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಇನ್ನೂ ಚಾಲನೆ ಸಿಗದ ಹೊಸ ಹೈಸ್ಪೀಡ್ ರೈಲಿನ ಕೋಚ್ ಒಂದರ ಮೇಲೆ ಕಲ್ಲು ತೂರಾಟ ನಡೆಸಿ ಕಿಟಕಿಗಳನ್ನು ಒಡೆದಿದ್ದಾರೆ. ಗುರುವಾರ ಪೊಲೀಸರು ಪ್ರಕರಣದ ಬಗ್ಗೆ ತೀವ್ರ ತನಿಖೆ ಕೈಗೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

    ವರದಿಗಳ ಪ್ರಕಾರ ಕಂಚಾರ್ಲಪಾಲೆಂನ ಕೋಚ್ ಕಾಂಪ್ಲೆಕ್ಸ್ ಬಳಿ ಕಲ್ಲು ತೂರಾಟ ಪ್ರಕರಣ ನಡೆದಿದೆ. ರೈಲಿನ ಒಂದು ಕಿಟಕಿಯ ಗಾಜನ್ನು ಸಂಪೂರ್ಣ ಒಡೆದಿದ್ದು, ಮತ್ತೊಂದರಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದನ್ನೂ ಓದಿ: ರನ್‌ವೇ ಸಿದ್ದವಾಗಿದೆ, ಕೌಶಲ್ಯಗಳನ್ನು ಕಲಿತು ಟೇಕಾಫ್‌ ಆಗಿ – ಯುವ ಜನತೆಗೆ ಮೋದಿ ಕರೆ

    ಆರೋಪಿಗಳ ವಿರುದ್ಧ ರೈಲ್ವೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಪ್ರಕರಣವನ್ನು ನಿರ್ವಹಿಸಿದೆ ಎಂದು ಪೊಲೀಸ್ ಆಯುಕ್ತ ಶ್ರೀಕಾಂತ್ ತಿಳಿಸಿದ್ದಾರೆ.

    ನಿರ್ವಹಣೆ ತಪಾಸಣೆ ಮತ್ತು ಪ್ರಾಯೋಗಿಕ ಓಡಾಟಕ್ಕಾಗಿ ವಂದೇ ಭಾರತ್ ರೈಲನ್ನು ಬುಧವಾರ ಚೆನ್ನೈನಿಂದ ವಿಶಾಖಪಟ್ಟಣಂಗೆ ತರಿಸಲಾಗಿತ್ತು. ಈ ದುಷ್ಕೃತ್ಯದ ಹಿನ್ನೆಲೆ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.

    ವಂದೇ ಭಾರತ್ ಎಕ್ಸ್‌ಪ್ರೆಸ್‌ನ 8ನೇ ರೈಲಿಗೆ ಜನವರಿ 19 ರಂದು ಹೈದರಾಬಾದ್‌ನಲ್ಲಿ ಪ್ರಧಾನ ಮಂತ್ರಿ ಅವರು ಚಾಲನೆ ನೀಡಲು ನಿರ್ಧರಿಸಿದ್ದರು. ಆದರೆ ಈ ಭೇಟಿಯನ್ನು ಮುಂದೂಡಲಾಗಿದ್ದು, ಜನವರಿ 15 ಮಕರ ಸಂಕ್ರಾಂತಿಯಂದು ವರ್ಚುವಲ್ ಆಗಿ ಚಾಲನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ – ಬ್ಯಾರಿಕೇಡ್ ಹಾರಿ ಕಾರಿನತ್ತ ನುಗ್ಗಿದ ಯುವಕ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಾಜಿ ಸಿಎಂ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 11 ಸಾವು- ರ‍್ಯಾಲಿ, ಸಾರ್ವಜನಿಕ ಸಭೆಗೆ ಆಂಧ್ರ ಸರ್ಕಾರ ನಿಷೇಧ

    ಮಾಜಿ ಸಿಎಂ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 11 ಸಾವು- ರ‍್ಯಾಲಿ, ಸಾರ್ವಜನಿಕ ಸಭೆಗೆ ಆಂಧ್ರ ಸರ್ಕಾರ ನಿಷೇಧ

    ಅಮರಾವತಿ: ಸಾರ್ವಜನಿಕ ಸುರಕ್ಷತೆಯ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರ್ಕಾರವು ಹೆದ್ದಾರಿ ಸೇರಿದಂತೆ ರಸ್ತೆಗಳಲ್ಲಿ ಸಾರ್ವಜನಿಕ ಸಭೆಗಳನ್ನು (Public Meetings) ಹಾಗೂ ರ‍್ಯಾಲಿಗಳನ್ನು (Rallies) ನಡೆಸುವುದನ್ನು ನಿಷೇಧಿಸಿದೆ.

    ಕಳೆದ ವಾರ ಕಂದುಕೂರಿನಲ್ಲಿ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನಡೆಸಿದ್ದ ರ‍್ಯಾಲಿ ವೇಳೆ ನೂಕುನುಗ್ಗಲು ಉಂಟಾಗಿತ್ತು. ಈ ವೇಳೆ ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ಆಂಧ್ರ ಸರ್ಕಾರ ನಿಷೇಧಾಜ್ಞೆಯನ್ನು ಜಾರಿಗೆ ತಂದಿದೆ.

    ಈ ಬಗ್ಗೆ ರಾಜ್ಯ ಗೃಹ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಹರೀಶ್ ಕುಮಾರ್ ಗುಪ್ತಾ ಮಾತನಾಡಿ, ಸಾರ್ವಜನಿಕ ಸಂಚಾರ, ತುರ್ತು ಸೇವೆ, ಅಗತ್ಯ ವಸ್ತುಗಳ ಚಲನೆಗೆ ಅಡ್ಡಿಯಾಗದ ರೀತಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲು ಆಯಾ ಜಿಲ್ಲಾಡಳಿತ ಹಾಗೂ ಪೊಲೀಸರು ಅನುವು ಮಾಡಿಕೊಡಬೇಕು ಎಂದು ತಿಳಿಸಿದರು.

    ಅಧಿಕಾರಿಗಳು ರಸ್ತೆಗಳಲ್ಲಿ ಸಭೆಗಳಿಗೆ ಅನುಮತಿ ನೀಡುವುದನ್ನು ತಪ್ಪಿಸಬೇಕು. ಅಪರೂಪದ ಸಂದರ್ಭದಲ್ಲಿ ಮಾತ್ರ ಸಾರ್ವಜನಿಕ ಸಭೆಗಳಿಗೆ ಅನುಮತಿಯನ್ನು ನೀಡಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಆಂಧ್ರದ ಮಾಜಿ ಸಿಎಂ ರ‍್ಯಾಲಿ ವೇಳೆ ಕಾಲ್ತುಳಿತಕ್ಕೆ ಮತ್ತೆ 3 ಬಲಿ

    ಆಂಧ್ರಪ್ರದೇಶದ (Andhra Pradesh) ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರು ನಡೆಸುತ್ತಿರುವ ರ‍್ಯಾಲಿ ವೇಳೆ ನೂಕುನುಗ್ಗಲಿನಿಂದ ಕಾಲ್ತುಳಿತಕ್ಕೆ (Stampede) ಇತ್ತೀಚೆಗಷ್ಟೇ 8 ಮಂದಿ ದಾರುಣ ಸಾವಿಗೀಡಾದ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಇತ್ತೀಚೆಗಷ್ಟೇ ಸಂಭವಿಸಿತ್ತು. ನಾಯ್ಡು ಅವರ ರ‍್ಯಾಲಿ ವೇಳೆ ಗುಂಟೂರು (Guntur) ಜಿಲ್ಲೆಯಲ್ಲಿ ಕಾಲ್ತುಳಿತಕ್ಕೆ ಮತ್ತೆ 3 ಮಂದಿ ಬಲಿಯಾಗಿದ್ದಾರೆ. ಇದನ್ನೂ ಓದಿ: ಲಾರಿ ಟೈರ್‌ ಸ್ಫೋಟಿಸಿ ಚಾಲಕ ಸ್ಥಳದಲ್ಲೇ ಸಾವು

    Live Tv
    [brid partner=56869869 player=32851 video=960834 autoplay=true]

  • ಆಂಧ್ರದ ಮಾಜಿ ಸಿಎಂ ರ‍್ಯಾಲಿ ವೇಳೆ ಕಾಲ್ತುಳಿತಕ್ಕೆ ಮತ್ತೆ 3 ಬಲಿ

    ಆಂಧ್ರದ ಮಾಜಿ ಸಿಎಂ ರ‍್ಯಾಲಿ ವೇಳೆ ಕಾಲ್ತುಳಿತಕ್ಕೆ ಮತ್ತೆ 3 ಬಲಿ

    ಅಮರಾವತಿ: ಆಂಧ್ರಪ್ರದೇಶದ (Andhra Pradesh) ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರು ನಡೆಸುತ್ತಿರುವ ರ‍್ಯಾಲಿ ವೇಳೆ ನೂಕುನುಗ್ಗಲಿನಿಂದ ಕಾಲ್ತುಳಿತಕ್ಕೆ (Stampede) ಇತ್ತೀಚೆಗಷ್ಟೇ 8 ಮಂದಿ ದಾರುಣ ಸಾವಿಗೀಡಾದ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ನಾಯ್ಡು ಅವರ ರ‍್ಯಾಲಿ ವೇಳೆ ಗುಂಟೂರು (Guntur) ಜಿಲ್ಲೆಯಲ್ಲಿ ಕಾಲ್ತುಳಿತಕ್ಕೆ ಮತ್ತೆ 3 ಮಂದಿ ಬಲಿಯಾಗಿದ್ದಾರೆ.

    ರಾಜ್ಯದಲ್ಲಿ 2024ರ ವಿಧಾನಸಭಾ ಚುನಾವಣೆಯ ತಯಾರಿಗಾಗಿ ರಾಜ್ಯಾದ್ಯಂತ ನಾಯ್ಡು ಅವರು ಸರಣಿ ರಾಜಕೀಯ ಸಭೆಗಳನ್ನು ನಡೆಸುತ್ತಿದ್ದಾರೆ. ರ‍್ಯಾಲಿ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಈ ವೇಳೆ ತಳ್ಳಾಟ-ನೂಕಾಟ ಜೋರಾಗಿತ್ತು. ಕಾಲ್ತುಳಿತದಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಶಂಕಿತ ಉಗ್ರರ ದಾಳಿ- ಮೂವರು ನಾಗರಿಕರು ಸಾವು

    ಗುಂಟೂರಿನಲ್ಲಾದ ಕಾಲ್ತುಳಿತ ದುರಂತದ ಬಗ್ಗೆ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ (Jagan Mohan Reddy) ಆಘಾತ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಎಲ್ಲ ರೀತಿಯ ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ಸರ್ಕಾರದ ನೆರವಿನ ಭರವಸೆ ನೀಡಿದ್ದಾರೆ.

    ಮೂರು ದಿನಗಳ ಹಿಂದೆ, ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಮಾಜಿ ಸಿಎಂ ನಾಯ್ಡು ಅವರ ರೋಡ್‌ ಶೋ ವೇಳೆ ಕಾಲ್ತುಳಿತಕ್ಕೆ 8 ಮಂದಿ ಬಲಿಯಾಗಿದ್ದರು. ಘಟನೆಗೆ ವಿಷಾದ ವ್ಯಕ್ತಪಡಿಸಿದ್ದ ನಾಯ್ಡು ಅವರು ತಮ್ಮ ಸಭೆಗಳನ್ನು ರದ್ದುಗೊಳಿಸಿ, ಮೃತರ ಕುಟುಂಬಕ್ಕೆ 24 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಇದನ್ನೂ ಓದಿ: ಭೀಕರ ಅಪಘಾತ- ಡಿಕ್ಕಿ ಹೊಡೆದು 12 ಕಿ.ಮೀ ಎಳೆದೊಯ್ದ ಕಾರು, ಯುವತಿ ದುರ್ಮರಣ

    ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು, ದುರಂತಕ್ಕೆ ತೆಲುಗು ದೇಶಂ ಪಕ್ಷದ ಮುಖ್ಯಸ್ಥರ ವಿರುದ್ಧ ಹರಿಹಾಯ್ದಿದ್ದರು. ಪ್ರಚಾರದ ಉನ್ಮಾದವೇ ಈ ದುರಂತಕ್ಕೆ ಕಾರಣ ಎಂದು ನಾಯ್ಡು ವಿರುದ್ಧ ಕಿಡಿಕಾರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಚಲಿಸುತ್ತಿದ್ದ ಬೈಕ್‌ಟ್ಯಾಂಕ್ ಮೇಲೆ ಕುಳಿತು ಪ್ರಿಯಕರನೊಂದಿಗೆ ರೊಮ್ಯಾನ್ಸ್ – ಪೊಲೀಸರು ಕೊಟ್ರು ಶಾಕ್

    ಚಲಿಸುತ್ತಿದ್ದ ಬೈಕ್‌ಟ್ಯಾಂಕ್ ಮೇಲೆ ಕುಳಿತು ಪ್ರಿಯಕರನೊಂದಿಗೆ ರೊಮ್ಯಾನ್ಸ್ – ಪೊಲೀಸರು ಕೊಟ್ರು ಶಾಕ್

    ಅಮರಾವತಿ: ಪ್ರೇಮಿಗಳಿಗೆ (Lovers) ಜಗತ್ತೇ ಕುರುಡಾಗಿರುತ್ತದೆ. ಕೆಲ ಪ್ರೇಮಿಗಳಂತೂ ಅಕ್ಕಪಕ್ಕ ಯಾರಿರುತ್ತಾರೆ ಎಂಬ ಅರಿವೇ ಇಲ್ಲದೇ ಸಾರ್ವಜನಿಕ ಪ್ರದೇಶಗಳಲ್ಲೂ ಹುಚ್ಚಾಟ ಮರೆಯುವುದನ್ನು ನೋಡಿರುತ್ತೇವೆ. ಸದ್ಯ ಪ್ರೇಮಿಗಳಿಬ್ಬರು ಹಾಡಹಗಲೇ ರಸ್ತೆಯಲ್ಲಿ ಬೈಕ್ ಮೇಲೆ ಕುಳಿತು ರೊಮ್ಯಾನ್ಸ್ ಮಾಡಿಕೊಂಡು ಚಲಿಸುತ್ತಿರುವ ವೀಡಿಯೋ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದೆ.

    ಯುವ ಪ್ರೇಮಿಗಳಿಬ್ಬರು ಹಾಡಹಗಲೇ ಬೈಕ್ ಮೇಲೆ ರಾಜಾರೋಷವಾಗಿ ತಬ್ಬಿಕೊಂಡು ಹೋಗುತ್ತಿದ್ದಾರೆ. ಬೈಕಿನ (Bike) ಪೆಟ್ರೋಲ್ ಟ್ಯಾಂಕ್ ಮೇಲೆ ಉಲ್ಟಾ ಕುಳಿತ ಯುವತಿ ತನ್ನ ಪ್ರಿಯಕರನನ್ನು ಬಿಗಿದಪ್ಪಿಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಇದೇ ವೇಳೆ ಹಿಂಬಂದಿಯಿಂದ ಬರುತ್ತಿದ್ದ ವಾಹನ ಸವಾರರು ಇಬ್ಬರ ರೊಮ್ಯಾನ್ಸ್ (Romance) ದೃಶ್ಯವನ್ನು ವೀಡಿಯೋ ಮಾಡಿ ಜಾಲತಾಣದಲ್ಲಿ (Social Media) ಹರಿಬಿಟ್ಟಿದ್ದಾರೆ. ಈ ಪ್ರೇಮಿಗಳ ನಡೆಗೆ ಎಲ್ಲೆಡೆ ಆಕ್ಷೇಪ ವ್ಯಕ್ತವಾಗಿದೆ. ಇದನ್ನೂ ಓದಿ: ಹೊಸ ವರ್ಷದಂದೇ ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 25 ರೂ. ಏರಿಕೆ

    ಪೊಲೀಸರು ಕೊಟ್ರು ಶಾಕ್: ಆಂಧ್ರಪ್ರದೇಶದ (Andhra Pradesh) ವಿಶಾಖಪಟ್ಟಣಂನ ಸ್ಟೀಲ್ ಪ್ಲಾಂಟ್ ರಸ್ತೆಯಲ್ಲಿ ಬೈಕ್ ಮೇಲೆ ರೊಮ್ಯಾನ್ಸ್ ಮಾಡುತ್ತಾ ತೆರಳುತ್ತಿದ್ದ ಪ್ರೇಮಿಗಳಿಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಯನ್ನು ಇಲ್ಲಿನ ಚೋಡವರಂ ನಿವಾಸಿ ಕೆ.ಶೈಲಜಾ (19) ಹಾಗೂ ಯುವಕ ಅಜಯ್ ಕುಮಾರ್ (22) ಎಂದು ಗುರುತಿಸಲಾಗಿದೆ. ಬಳಿಕ ಯುವಕನ ಬೈಕ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಪ್ರೇಮಿಗಳಿಬ್ಬರು ನಡೆಸಿದ ಹುಚ್ಚಾಟದಿಂದ ರಸ್ತೆ ಸುರಕ್ಷತೆ ನಿಯಮವನ್ನು ಉಲ್ಲಂಘಿಸಿದ್ದು, ಐಪಿಸಿ (IPC) ಸೆಕ್ಷನ್ 336, 279 ಹಾಗೂ ಮೋಟಾರು ವಾಹನ ಕಾಯ್ದೆ (Motor Vehicle Act) ಸೆಕ್ಷನ್ 132, 129ರ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ವಿಶಾಖಪಟ್ಟಣಂ ಪೊಲೀಸ್ ಆಯುಕ್ತ ಸಿ.ಎಚ್. ಶ್ರೀಕಾಂತ್ ತಿಳಿಸಿದ್ದಾರೆ. ಅಲ್ಲದೇ ನಾಗಕರಿಕರು ವಾಹನ ಚಲಾಯಿಸುವಾಗ ಸಂಚಾರ ನಿಯಮ ಪಾಲನೆ ಮಾಡುವಂತೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಬೈಕ್ ಟ್ಯಾಂಕ್ ಮೇಲೆ ಕುಳಿತು ಪ್ರೇಮಿಗಳ ಲಿಪ್‍ಲಾಕ್ – ಲವರ್ಸ್ ಜಾಲಿ ರೈಡ್ ವೀಡಿಯೋ ವೈರಲ್

    lovers

    ಈ ಹಿಂದೆ ದೆಹಲಿಯಲ್ಲಿ ರಾತ್ರಿ ವೇಳೆ ಪ್ರೇಮಿಗಳಿಬ್ಬರು ನಡು ರಸ್ತೆಯಲ್ಲಿ ರೊಮ್ಯಾನ್ಸ್ ಮಾಡಿಕೊಂಡು ಹೋಗುತ್ತಿದ್ದದ್ದು, ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲೂ ಇಂತಹದ್ದೇ ಕೇಸ್ ಬೆಳಕಿಗೆ ಬಂದಿತ್ತು.

    Live Tv
    [brid partner=56869869 player=32851 video=960834 autoplay=true]

  • ತಿರುಪತಿ ಗರ್ಭಗುಡಿ 8 ತಿಂಗಳು ಬಂದ್ ಇಲ್ಲ – ಮುಖ್ಯ ಅರ್ಚಕರ ಸ್ಪಷನೆ

    ತಿರುಪತಿ ಗರ್ಭಗುಡಿ 8 ತಿಂಗಳು ಬಂದ್ ಇಲ್ಲ – ಮುಖ್ಯ ಅರ್ಚಕರ ಸ್ಪಷನೆ

    ಅಮರಾವತಿ: ಚಿನ್ನಲೇಪನದ ವೇಳೆ ತಿರುಪತಿ ತಿರುಮಲ ದೇವಸ್ಥಾನದ (TTD) ಗರ್ಭಗುಡಿಯನ್ನು 6-8 ತಿಂಗಳು ಮುಚ್ಚುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದ್ರೆ ಈ ಬಗ್ಗೆ ದೇಗುಲದ ಮುಖ್ಯ ಅರ್ಚಕರಲ್ಲಿ ಒಬ್ಬರಾದ ವೇಣುಗೋಪಾಲ ದೀಕ್ಷಿತುಲು (enugopal Dikshitulu) ಅವರು ಸ್ಪಷ್ಟನೆ ನೀಡಿದ್ದಾರೆ.

    ಗರ್ಭಗುಡಿ ಗೋಪುರಕ್ಕೆ ಚಿನ್ನದ ಲೇಪನ (Gold Painting) ಕಾರ್ಯ ನಡೆದರೂ ತಿಮ್ಮಪ್ಪನ ಮೂಲ ವಿರಾಟ ಮೂರ್ತಿಯ ದರ್ಶನ ಎಂದಿನಂತೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಫಾರ್ಮ್ ಹೌಸ್‌ನಲ್ಲಿ ವನ್ಯ ಜೀವಿಗಳ ಪತ್ತೆ ಪ್ರಕರಣ- ನಿರೀಕ್ಷಣಾ ಜಾಮೀನು ಕೋರಿದ ಎಸ್‌ಎಸ್ ಮಲ್ಲಿಕಾರ್ಜುನ್

    ಮಾರ್ಚ್ 1 ರಿಂದ ಚಿನ್ನದ ಲೇಪನ ಕಾರ್ಯ ಆರಂಭವಾಗಲಿದೆ. ಚಿನ್ನ ಲೇಪನಕ್ಕೆ 6 ತಿಂಗಳು ಸಮಯ ಬೇಕಾಗಲಿದೆ. ಇದಕ್ಕೂ 1 ವಾರ ಮುನ್ನ ದೇಗುಲದ ಪಕ್ಕದಲ್ಲೇ (ತಾತ್ಕಾಲಿಕ ಮಂದಿರ) ನಿರ್ಮಿಸಿ ಅಲ್ಲಿ ವೆಂಕಟೇಶ್ವರನ ಪ್ರತಿಕೃತಿ ಇರಿಸಲಾಗುತ್ತದೆ. ಈ 6 ತಿಂಗಳೂ ಮೂಲ ಮೂರ್ತಿಯ ದರ್ಶನ ಭಕ್ತರಿಗೆ ಲಭ್ಯವಿರುತ್ತದೆ. ಆದರೆ ಸುಪ್ರಭಾತದಿಂದ ಏಕಾಂತ ಸೇವೆವರೆಗಿನ ಸೇವೆಗಳನ್ನು ಏಕನಾಥಂನಲ್ಲಿ ಮಾಡಲಾಗುತ್ತದೆ ಎಂದಿದ್ದಾರೆ.

    ಕಲ್ಯಾಣೋತ್ಸವದಂಥ ಅರಿಜಿತ ಸೇವೆಯನ್ನು ಉತ್ಸವಮೂರ್ತಿಗಳಿಗೆ ಮಾಡಲಾಗುತ್ತದೆ. ಗರ್ಭಗುಡಿ ಮುಚ್ಚುತ್ತದೆ. ಆದ್ದರಿಂದ ಗರ್ಭಗೂಡಿ ಲೇಪನ ಕಾರ್ಯ ನಡೆಯುತ್ತಿದ್ದರೂ ವಿರಾಟ ಮೂರ್ತಿಯ ದರ್ಶನ ಭಕ್ತರಿಗೆ ಸಿಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಟಿಕೆಟ್‍ಗಾಗಿ ಕಾಂಗ್ರೆಸ್ ಕಾರ್ಯಕರ್ತರ ಸಮರ- ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಭುಗಿಲೆದ್ದ ಆಕ್ರೋಶ

    1957-58ರಲ್ಲಿ ಹಾಗೂ 2018ರಲ್ಲೂ ಚಿನ್ನದ ಲೇಪನ ಕಾರ್ಯ ಯಾವುದೇ ಅಡೆತಡೆಗಳಿಲ್ಲದೇ ನಡೆದಿದೆ. ಈ ಬಾರಿಯೂ ಚಿನ್ನದ ಲೇಪನ ಕಾರ್ಯ ಮುಕ್ತವಾಗಿ ನಡೆಯಲಿದೆ. ಭಕ್ತರು ಎಂದಿನಂತೆ ದರ್ಶನ ಪಡೆದುಕೊಳ್ಳಬಹುದಾಗಿದೆ ಎಂದು ಮುಖ್ಯ ಅರ್ಚಕರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅನಿಲ ಸೋರಿಕೆಯಾಗಿ ಭೀಕರ ಸ್ಫೋಟ – 4 ಸಾವು, ಒಬ್ಬರಿಗೆ ಗಾಯ

    ಅನಿಲ ಸೋರಿಕೆಯಾಗಿ ಭೀಕರ ಸ್ಫೋಟ – 4 ಸಾವು, ಒಬ್ಬರಿಗೆ ಗಾಯ

    ಅಮರಾವತಿ: ಔಷಧಿ ಅಂಗಡಿಯೊಂದರಲ್ಲಿ (Pharmacy) ಅನಿಲ ಸೋರಿಕೆಯಾಗಿ (Gas Leakage) ಭೀಕರ ಸ್ಫೋಟ (Explosion) ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ (Andhra Pradesh) ವಿಶಾಖಪಟ್ಟಣಂನಲ್ಲಿ (Visakhapatnam) ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯಗಳಾಗಿವೆ.

    ವಿಶಾಖಪಟ್ಟಣಂ ಸಮೀಪದ ಅನಕಪಲ್ಲಿ ಜಿಲ್ಲೆಯ ಜವಾಹರಲಾಲ್ ನೆಹರು ಫಾರ್ಮಸಿಯಲ್ಲಿ ಸೋಮವಾರ ಈ ಭೀಕರ ಘಟನೆ ನಡೆದಿದೆ. ಸಂಜೆ 3 ಗಂಟೆ ವೇಳೆಗೆ ಫಾರ್ಮಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಔಷಧ ಅಂಗಡಿಯಲ್ಲಿದ್ದ ಕೆಲಸಗಾರರು ಬೆಂಕಿಯನ್ನು ತಡೆಯಲು ಪ್ರಯತ್ನಿಸಿದ್ದರು. ಆದರೆ ಅನಿಲ ಸೋರಿಕೆ ಹಿನ್ನೆಲೆ ಭೀಕರ ಸ್ಫೋಟ ಸಂಭವಿಸಿದೆ. ಇದನ್ನೂ ಓದಿ: ಮಗಳ ಅಶ್ಲೀಲ ವೀಡಿಯೋ ಪೋಸ್ಟ್ ಮಾಡಿದ್ದನ್ನು ಖಂಡಿಸಿದ್ದಕ್ಕೆ ಯೋಧನ ಹತ್ಯೆ

    ಔಷಧಾಲಯದ ಆಡಳಿತದ ಪ್ರಕಾರ, ವಿಶಾಖಪಟ್ಟಣಂನ ಫಾರ್ಮಾ ಸಿಟಿಯಲ್ಲಿರುವ ಲಾರಸ್ ಕಂಪನಿಯ ಯುನಿಟ್-3ರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಸಂಭವಿಸಿದೆ. ಸ್ಫೋಟ ಉಂಟಾದ ಬಳಿಕ ಅಗ್ನಿಶಾಮಕ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ ಎಂದು ತಿಳಿಸಿದೆ.

    ಮೃತರನ್ನು ಖಮ್ಮಂ ಮೂಲದ ಬಿ ರಾಂಬಾಬು, ಗುಂಟೂರಿನ ರಾಜೇಪ್ ಬಾಬು, ಕೋಟಪಾಡುವಿನ ಆರ್ ರಾಮಕೃಷ್ಣ ಮತ್ತು ಚೋಡಾವರಂನ ಮಜ್ಜಿ ವೆಂಕಟರಾವ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಸತೀಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಭೀಕರ ಸುನಾಮಿಗೆ 60 ಮಂದಿ ಬಲಿ – 15 ಸಾವಿರ ವಿಮಾನಗಳ ಸಂಚಾರ ರದ್ದು

    Live Tv
    [brid partner=56869869 player=32851 video=960834 autoplay=true]

  • 8 ತಿಂಗಳು ಬಂದ್ ಆಗಲಿದೆ ತಿರುಪತಿಯ ಗರ್ಭಗುಡಿ!

    8 ತಿಂಗಳು ಬಂದ್ ಆಗಲಿದೆ ತಿರುಪತಿಯ ಗರ್ಭಗುಡಿ!

    ಹೈದರಾಬಾದ್: ಆಂಧ್ರಪ್ರದೇಶದ (Andhra Pradesh) ತಿರುಪತಿ ಜಿಲ್ಲೆಯಲ್ಲಿರುವ ತಿರುಮಲ ದೇವಸ್ಥಾನದ (Tirupati Tirumala Temple) ಮುಖ್ಯ ಗರ್ಭಗುಡಿಯನ್ನು (Sanctum) 2023ರ ಹೊಸ ವರ್ಷದಲ್ಲಿ ಕನಿಷ್ಠ 6 ರಿಂದ 8 ತಿಂಗಳು ಮುಚ್ಚುವ ಸಾಧ್ಯತೆಯಿದೆ.

    ತಿರುಮಲದ ಮುಖ್ಯ ಗರ್ಭಗುಡಿ ಮೇಲೆ ಇರುವ ವಿಮಾನ ಆಕೃತಿಯ (ಮೂರು ಅಂತಸ್ತು) ಗೋಪುರ ಆನಂದ ನಿಲಯಕ್ಕೆ ಹೊದಿಸಲಾಗಿದ್ದ ಚಿನ್ನದ ಲೇಪನವನ್ನು (Gold Plating) ಬದಲಿಸಲು ತಿರುಮಲ ತಿರುಪತಿ ದೇವಸ್ಥಾನಂ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪಾಸಿಟಿವ್ ಬಂದ್ರೆ ಕ್ವಾರಂಟೈನ್‌

    ನೂತನ ಚಿನ್ನದ ಲೇಪನ (Gold Plating) ಕಾರ್ಯ ಪೂರ್ಣಗೊಳ್ಳುವವರೆಗೆ ದೇವಸ್ಥಾನದ ಸಮೀಪ ತಾತ್ಕಾಲಿಕವಾಗಿ ವೆಂಕಟೇಶ್ವರ ವಿಗ್ರಹ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು. ಫೆಬ್ರವರಿಯಲ್ಲಿ ಕೆಲಸ ಆರಂಭಗೊಳ್ಳಲಿದ್ದು, ಈ ಚಿನ್ನದ ಲೇಪನದ ಕಾರ್ಯ ಪೂರ್ಣಗೊಳ್ಳಲು 6 ತಿಂಗಳು ಬೇಕಾಗಬಹುದು ಎಂದು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ವೈ.ವಿ.ಸುಬ್ಬ ರಾವ್ ತಿಳಿಸಿದ್ದಾರೆ.

    ಈ ಸಮಯದಲ್ಲಿ ಭಕ್ತರು ತಿಮ್ಮಪ್ಪನ ದರ್ಶನ ಪಡೆಯೋದಕ್ಕಾಗಿ ಮುಖ್ಯ ದೇವಾಲಯದ ಪಕ್ಕದಲ್ಲಿ ತಾತ್ಕಾಲಿಕವಾಗಿ ತಿರುಪತಿ ವೆಂಕಟೇಶ್ವರ ದೇವರ ತದ್ರೂಪಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಭಕ್ತರ ದರ್ಶನಕ್ಕೆ ಅನುವು ಮಾಡಲು ಯೋಜಿಸಲಾಗಿದೆ. ಡಿಸೆಂಬರ್ ಮೊದಲ ವಾರದಲ್ಲಿ ಟ್ರಸ್ಟ್ನ ಮಂಡಳಿ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಕೊರಿಯರ್ ಅಂಗಡಿಯಲ್ಲಿ ಮಿಕ್ಸಿ ಬ್ಲಾಸ್ಟ್- ಅಂಗಡಿಯಲ್ಲಿದ್ದ ವ್ಯಕ್ತಿಗೆ ಗಂಭೀರ ಗಾಯ

    `ಆಗಮ ಶಾಸ್ತç’ ಸಲಹೆಗಾರರು (ಆಗಮ ಶಾಸ್ತ್ರವು ದೇವಾಲಯದ ನಿರ್ಮಾಣಗಳು ಮತ್ತು ಆಚರಣೆಗಳ ನಡವಳಿಕೆಯ ಬಗ್ಗೆ ವ್ಯವಹರಿಸುವ ಪುರಾತನ ಗ್ರಂಥವಾಗಿದೆ), ಪುರೋಹಿತರು, ಸಿವಿಲ್ ಎಂಜಿನಿಯರ್‌ಗಳು ಮತ್ತು ಇತರ ತಜ್ಞರೊಂದಿಗೆ ಸುದೀರ್ಘ ಚರ್ಚೆ ಮತ್ತು ಸಮಾಲೋಚನೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದ್ದರಿಂದ ಮೂಲ ದೇವಾಲಯವನ್ನು ಪುನಃಸ್ಥಾಪಿಸುವವರೆಗೆ, ಎಲ್ಲಾ ದೈನಂದಿನ ಆಚರಣೆಗಳನ್ನು ತಾತ್ಕಾಲಿಕ ದೇವಾಲಯದಲ್ಲಿ ಮಾಡಲಾಗುವುದು ಮತ್ತು ಭಕ್ತರಿಗೆ ದೇವರ ದರ್ಶನವನ್ನು ಇಲ್ಲೇ ಒದಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಚ್ಛೇದನ ಪಡೆಯಲು ಪತ್ನಿಗೆ HIV ಸೋಂಕಿತ ರಕ್ತದ ಇಂಜೆಕ್ಷನ್ ಕೊಡಿಸಿದ ಭೂಪ

    ವಿಚ್ಛೇದನ ಪಡೆಯಲು ಪತ್ನಿಗೆ HIV ಸೋಂಕಿತ ರಕ್ತದ ಇಂಜೆಕ್ಷನ್ ಕೊಡಿಸಿದ ಭೂಪ

    ಅಮರಾವತಿ: ವ್ಯಕ್ತಿಯೊಬ್ಬ ಪತ್ನಿಯಿಂದ ವಿಚ್ಛೇದನ ಪಡೆಯಲು ಆಕೆಗೆ ಡಾಕ್ಟರ್ ಸಹಾಯದಿಂದ ಹೆಚ್‍ಐವಿ (HIV) ಸೋಂಕಿತ ರಕ್ತ ಇಂಜೆಕ್ಷನ್ ಕೊಡಿಸಿದ ಘಟನೆ ಆಂಧ್ರ ಪ್ರದೇಶದಲ್ಲಿ (Andhra Pradesh) ನಡೆದಿದೆ.

    ಎಂ. ಚರಣ್ (40) ಬಂಧಿತ ವ್ಯಕ್ತಿ. ಚರಣ್ ಮದುವೆ ಆಗಿ ಕೆಲವರ್ಷಗಳ ಕಾಲ ತನ್ನ ಪತ್ನಿಯೊಂದಿಗೆ ಸಂತೋಷದಿಂದ ಇದ್ದ. ದಂಪತಿಗೆ ಒಬ್ಬಳು ಮಗಳು ಇದ್ದಾಳೆ. ಆದರೆ 2018ರಲ್ಲಿ ಚರಣ್ ವರದಕ್ಷಿಣೆಗಾಗಿ ಹಾಗೂ ಗಂಡು ಮಗುವನ್ನು ಹೆರುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೇ ವಿಶಾಖಪಟ್ಟಣಂನ 21 ವರ್ಷದ ಯುವತಿಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದ ಎಂಬ ಆರೋಪ ಕೇಳಿ ಬಂದಿದೆ.

    ಈ ಎಲ್ಲಾ ಕಾರಣದಿಂದಾಗಿ ಆರೋಪಿ ಚರಣ್ ತನ್ನ ಪತ್ನಿ ಬಳಿ ವಿಚ್ಛೇದನ ನೀಡುವಂತೆ ಒತ್ತಾಯಿಸಿದ್ದಾನೆ. ಅಷ್ಟೇ ಅಲ್ಲದೇ ಆಕೆಯನ್ನು ಹೆಲ್ತ್ ಚೆಕಪ್‍ಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರ ಸಹಾಯದಿಂದ ಹೆಚ್‍ಐವಿ ಸೋಂಕಿತ ರಕ್ತ ಇಂಜೆಕ್ಷನ್ ಕೊಡಿಸಿದ್ದಾನೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಜಾತಿ ಆಧಾರದಲ್ಲಿ ಸಿಎಂ ಆಯ್ಕೆ ಮಾಡಲ್ಲ- ಜಿ.ಪರಮೇಶ್ವರ್

    ಇತ್ತೀಚೆಗೆ ಚರಣ್ ಪತ್ನಿ ಆಸ್ಪತ್ರೆಗೆ ಹೋದಾಗ ಆಕೆಗೆ ಹೆಚ್‍ಐವಿ ಇರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಿಸಿ ಆಕೆ ಚರಣ್‍ನನ್ನು ಪ್ರಶ್ನಿಸಿದಾಗ, ಗರ್ಭಾವಸ್ಥೆಯಲ್ಲಿ ಹೆಚ್‍ಐವಿ ಸಂಪರ್ಕಿಸಿರಬಹುದು ಎಂದು ಚರಣ್ ತಿಳಿಸಿದ್ದಾನೆ. ಇದಾದ ಬಳಿಕ ಘಟನೆಗೆ ಸಂಬಂಧಿಸಿ ತಾಡಪಲ್ಲಿ ಪೊಲೀಸರಿಗೆ ಪತಿ ಚರಣ್ ವಿರುದ್ಧ ದೂರು ದಾಖಲಿಸಿದ್ದಾಳೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ಚರಣ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಫ್ಲೈಟ್‌ನಲ್ಲಿ ನಾಯಿಯನ್ನು ಬಿಡದ ಪೈಲೆಟ್ – ಕ್ಯಾನ್ಸಲ್ ಆಯ್ತು 12 ದಿನದ ಟ್ರಿಪ್

    Live Tv
    [brid partner=56869869 player=32851 video=960834 autoplay=true]

  • ಮಾಂಡೌಸ್ ಚಂಡಮಾರುತ – ನೆರೆಯ ತಮಿಳುನಾಡು, ಆಂಧ್ರಕ್ಕೆ ಭಾರೀ ಮಳೆ ಎಚ್ಚರಿಕೆ

    ಮಾಂಡೌಸ್ ಚಂಡಮಾರುತ – ನೆರೆಯ ತಮಿಳುನಾಡು, ಆಂಧ್ರಕ್ಕೆ ಭಾರೀ ಮಳೆ ಎಚ್ಚರಿಕೆ

    ನವದೆಹಲಿ: ನೈಋತ್ಯ ಹಾಗೂ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್ ಚಂಡಮಾರುತ ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಉತ್ತರ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಎಚ್ಚರಿಕೆಯನ್ನು ನೀಡಿದೆ.

    ಹವಾಮಾನ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು, ಮಾಂಡೌಸ್ ಚಂಡಮಾರುತ ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸಲಿದ್ದು, ಡಿಸೆಂಬರ್ 7 ರಂದು ಇದರ ತೀವ್ರತೆ ಹೆಚ್ಚಾಗಲಿದೆ. ಡಿಸೆಂಬರ್ 8 ರಂದು ಉತ್ತರ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗಕ್ಕೆ ತಲುಪಲಿದ್ದು, ನೈಋತ್ಯ ಬಂಗಾಳಕೊಲ್ಲಿ ತಲುಪುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇದನ್ನೂ ಓದಿ: ಹಿಮಾಚಲದಲ್ಲಿ ಹಾವು, ಏಣಿ ಆಟ – ಪಕ್ಷೇತರರೇ ನಿರ್ಣಾಯಕ?

    ಮಾಂಡೌಸ್ ಚಂಡಮಾರುತದ ಪ್ರಭಾವದಿಂದಾಗಿ ಮುಂದಿನ 2 ದಿನಗಳ ಕಾಲ ಹಲವಾರು ರಾಜ್ಯಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಲಿದೆ. ತಮಿಳುನಾಡಿನ ಕರಾವಳಿ ಭಾಗ, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗ ಮತ್ತು ರಾಯಲಸೀಮಾದ ಅಕ್ಕ ಪಕ್ಕದ ಪ್ರದೇಶಗಳಲ್ಲಿ ಗುರುವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮಾಹಿತಿ ನೀಡಿದೆ. ಇದನ್ನೂ ಓದಿ: 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ – ಗುಜರಾತ್‌ನಲ್ಲಿ ದಾಖಲೆ ಬರೆಯುತ್ತಾ ಬಿಜೆಪಿ?

    ಡಿಸೆಂಬರ್ 10ರ ವರೆಗೂ ಭಾರೀ ಮಳೆ ಮುಂದುವರಿಯಲಿದ್ದು, ಚಂಡಮಾರುತದ ಪ್ರಭಾವದಿಂದಾಗಿ ಭಾರೀ ಗಾಳಿಯೂ ಬೀಸಲಿದೆ ಎಂದು ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಸತತ 1 ವರ್ಷ ಡ್ರಮ್‌ನಲ್ಲಿತ್ತು ಮಹಿಳೆ ದೇಹದ ಪೀಸ್‌ಗಳು – ಮನೆ ಬಾಡಿಗೆಗೆ ಕೊಟ್ಟಿದ್ದ ಮಾಲೀಕ ಶಾಕ್‌!

    ಸತತ 1 ವರ್ಷ ಡ್ರಮ್‌ನಲ್ಲಿತ್ತು ಮಹಿಳೆ ದೇಹದ ಪೀಸ್‌ಗಳು – ಮನೆ ಬಾಡಿಗೆಗೆ ಕೊಟ್ಟಿದ್ದ ಮಾಲೀಕ ಶಾಕ್‌!

    ಹೈದರಾಬಾದ್: ತನ್ನ ಜೊತೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಗೆಳತಿ ಶ್ರದ್ಧಾ ವಾಕರ್‌ಳನ್ನು (Shraddha Walker) ಅಫ್ತಾಬ್‌ (Aftab) ಎಂಬಾತ ಹತ್ಯೆ ಮಾಡಿ, ದೇಹವನ್ನು 35 ತುಂಡುಗಳಾಗಿಸಿ ಹಲವೆಡೆ ಬಿಸಾಡಿದ್ದ ದೆಹಲಿ ಭೀಕರ ಹತ್ಯೆ ಪ್ರಕರಣ ವರದಿಯಾಗಿ ಆತಂಕ ಮೂಡಿಸಿತ್ತು. ಇದರ ಬೆನ್ನಲ್ಲೇ ಅದಕ್ಕೆ ಹೋಲಿಕೆ ಎಂಬಂತೆ ಅನೇಕ ಕುಕೃತ್ಯದ ಪ್ರಕರಣಗಳು ವರದಿಯಾಗಿತ್ತಿದೆ.

    ಹೌದು, ಆಂಧ್ರಪ್ರದೇಶದ (Andhra Pradesh) ವಿಶಾಖಪಟ್ಟಣಂನ ಮನೆಯೊಂದರ (Andhra Women) ಡ್ರಮ್‌ನಲ್ಲಿ ಮಹಿಳೆಯ ದೇಹದ ತುಂಡುಗಳು ಇರುವುದು ಪತ್ತೆಯಾಗಿದೆ. ಒಂದು ವರ್ಷದ ಹಿಂದೆ ಮಹಿಳೆ ಕೊಲೆ ಮಾಡಿ ಡ್ರಮ್‌ನಲ್ಲಿ ದೇಹದ ತುಂಡುಗಳನ್ನು ಹಾಕಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗ್ಯಾಂಗ್ ರೇಪ್ – ಮಹಿಳೆಯ ಖಾಸಗಿ ಭಾಗಕ್ಕೆ ಸಿಗರೇಟ್‌ನಿಂದ ಸುಟ್ಟು ವಿಕೃತಿ

    ಬಾಡಿಗೆ ಮನೆಯೊಂದರಲ್ಲಿ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬಾಡಿಗೆದಾರರು ಸತತ ಒಂದು ವರ್ಷ ಬಾಡಿಗೆ ಪಾವತಿಸಿಲ್ಲ ಎಂದು ಬೇಸತ್ತು ಮನೆಯ ಮಾಲೀಕ, ಮನೆಯ ಬಾಗಿಲು ಒಡೆದು ನೋಡಿದಾಗ ಮಹಿಳೆಯ ದೇಹದ ಭಾಗಗಳು ಪತ್ತೆಯಾಗಿವೆ.

    2021ರ ಜೂನ್‌ನಲ್ಲಿ, ತನ್ನ ಹೆಂಡತಿ ಗರ್ಭಿಣಿ ಎಂದು ಹೇಳಿ ಬಾಡಿಗೆದಾರ ಬಾಡಿಗೆಯನ್ನೂ ಪಾವತಿಯಿಂದ ಮನೆಯಿಂದ ಹೋಗಿದ್ದ. ಆದರೆ ಆಗಾಗ ಯಾರಿಗೂ ತಿಳಿಯದಂತೆ ಹಿಂಬಾಗಿಲಿನಿಂದ ಮನೆಗೆ ಬಂದು ಹೋಗುತ್ತಿದ್ದ. ಸತತ ಒಂದು ವರ್ಷ ಮನೆ ಬಾಡಿಗೆ ನೀಡಿರಲಿಲ್ಲ. ಇದರಿಂದ ಬೇಸತ್ತ ಮಾಲೀಕ ಮನೆ ಪ್ರವೇಶಿಸಿ ಬಾಡಿಗೆದಾರನ ವಸ್ತುಗಳನ್ನು ತೆರವುಗೊಳಿಸಲು ಮುಂದಾದ. ಈ ವೇಳೆ ಡ್ರಮ್‌ನಲ್ಲಿ ಮಹಿಳೆಯ ದೇಹದ ಭಾಗಗಳು ಪತ್ತೆಯಾಗಿವೆ. ಇದನ್ನೂ ಓದಿ: ಪ್ರಾಂಶುಪಾಲರಿಗೆ ಜೈಶ್ರೀರಾಮ್ ಎಂದು ಘೋಷಣೆ ಕೂಗಲು ಒತ್ತಾಯಿಸಿದ ABVP ಕಾರ್ಯಕರ್ತರು

    ಒಂದು ವರ್ಷದ ಹಿಂದೆ ದೇಹವನ್ನು ತುಂಡುಗಳಾಗಿ ಕತ್ತರಿಸಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣ ಈಗ ಬೆಳಕಿಗೆ ಬಂದಿದೆ ಎಂದು ವಿಶಾಖಪಟ್ಟಣಂ ನಗರ ಪೊಲೀಸ್‌ ಆಯುಕ್ತ ಶ್ರೀಕಾಂತ್‌ ತಿಳಿಸಿದ್ದಾರೆ.

    ಆ ಮಹಿಳೆ ಬಾಡಿಗೆದಾರನ ಹೆಂಡತಿಯೇ ಇರಬಹುದು ಎಂದು ಶಂಕಿಸಲಾಗಿದೆ. ಮಾಲೀಕರು ದೂರು ನೀಡಿದ್ದು, ಅದರ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಶ್ರೀಕಾಂತ್ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]