Tag: Andhra Pradesh

  • ನೀರಿನ ಬಾಟಲ್‌ ವಿಚಾರಕ್ಕೆ ಆಂಧ್ರ ವ್ಯಾಪಾರಸ್ಥರಿಂದ ಗಲಾಟೆ- ಕರ್ನಾಟಕದ ಯುವಕ ಗಂಭೀರ

    ನೀರಿನ ಬಾಟಲ್‌ ವಿಚಾರಕ್ಕೆ ಆಂಧ್ರ ವ್ಯಾಪಾರಸ್ಥರಿಂದ ಗಲಾಟೆ- ಕರ್ನಾಟಕದ ಯುವಕ ಗಂಭೀರ

    ಅಮರಾವತಿ: ಆಂಧ್ರಪ್ರದೇಶದ ಶ್ರೀಶೈಲದ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ನೀರಿನ ಬಾಟಲ್‌ಗಾಗಿ ನಡೆದ ಗಲಾಟೆಯಲ್ಲಿ ಕನ್ನಡಿಗ  ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

    ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಜಾನಮಟ್ಟಿ ಗ್ರಾಮದ ಶ್ರೀಶೈಲ ವಾರಿಮಠ (28) ಗಾಯಗೊಂಡಿದ್ದಾನೆ. ಮಾರಾಮಾರಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು. ಈ ವೇಳೆ ನೂರಾರು ವಾಹನಗಳನ್ನು ಧ್ವಂಸಗೊಳಿಸಲಾಗಿದೆ. ಇದನ್ನೂ ಓದಿ: ಕೇಜ್ರಿವಾಲ್ ಮನೆ ಮೇಲೆ ದಾಳಿ- 8 ಮಂದಿ ಬಂಧನ

    ದೇವಸ್ಥಾನದ ಆವರಣದಲ್ಲಿ ನೀರಿನ ಬಾಟಲ್‌ಗಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ. ಆಂಧ್ರ ಮೂಲದ ವ್ಯಾಪಾರಸ್ಥರು ಹಾಗೂ ಸ್ಥಳೀಯರಿಂದ ಕರ್ನಾಟಕ ಭಕ್ತರ ಮೇಲೆ ಹಲ್ಲೆ ನಡೆದಿದೆ. ಲಾಠಿ ಹಾಗೂ ಮಾರಕಾಸ್ತ್ರ ಹಿಡಿದು ಹೊಡೆದಾಡುತ್ತಿರುವ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

    ಕರ್ನಾಟಕ ಮೂಲದ ಅಂದಾಜು 200 ವಾಹನಗಳ ಗ್ಲಾಸ್‌ಗಳು ಜಖಂಗೊಂಡಿವೆ. ಕರ್ನಾಟಕ ಮೂಲದ ಕೆಲವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಮೂಲದ ಭಕ್ತರ ಮೇಲೆ ರಾತ್ರಿ ಹಲ್ಲೆ ನಡೆಸಲಾಗಿದೆ. ರಾಯಚೂರು, ಬಾಗಲಕೋಟೆ, ಕಲಬುರಗಿ ಸೇರಿ ವಿವಿಧ ಜಿಲ್ಲೆಗಳ ಭಕ್ತರು ದೇವಸ್ಥಾನಕ್ಕೆ ತೆರಳಿದ್ದವು. ಅವರ ಮೇಲೆ ಹಲ್ಲೆ ನಡೆಸಿರುವುದಲ್ಲದೇ, ಅವರಿಗೆ ಸೇರಿದ ಕಾರುಗಳ ಗಾಜನ್ನು ಪುಡಿ ಪುಡಿ ಮಾಡಲಾಗಿದೆ. ಇದನ್ನೂ ಓದಿ: ಕೇಜ್ರಿವಾಲ್ ತಪ್ಪಿಸಿಕೊಳ್ಳಲು ಇರುವ ಒಂದೇ ಮಾರ್ಗ ಬಲಿಪಶು: ಗಂಭೀರ್

    ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಪಾದಯಾತ್ರೆ ಮಾಡಿದ್ದರು. ರಾತ್ರಿ ವೇಳೆ ಕ್ಷುಲ್ಲಕ ಕಾರಣಕ್ಕೆ ಭಕ್ತರು ಹಾಗೂ ವ್ಯಾಪಾರಿಗಳ ನಡುವೆ ಜಗಳ ನಡೆದಿದೆ. ಜಗಳ ತಾರಕಕ್ಕೇರಿ ಸ್ಥಳೀಯರಿಂದ ಭಕ್ತರ ಜೊತೆ ಹೊಡೆದಾಟವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆದಿದೆ.

  • ಆರ್‌ಆರ್‌ಆರ್‌ ಸಿನಿಮಾ ನೋಡ್ತಾ ಪ್ರಾಣ ಬಿಟ್ಟ ಅಭಿಮಾನಿ

    ಆರ್‌ಆರ್‌ಆರ್‌ ಸಿನಿಮಾ ನೋಡ್ತಾ ಪ್ರಾಣ ಬಿಟ್ಟ ಅಭಿಮಾನಿ

    ಆರ್‌ಆರ್‌ಆರ್‌ ಸಿನಿಮಾ ಅಬ್ಬರ ಜೋರಾಗಿದೆ. ಅಭಿಮಾನಿಗಳು ನಾಮುಂದೆ, ತಾಮುಂದೆ ಎಂದು ಸಿನಿಮಾ ನೋಡಲು ಮುಗಿ ಬೀಳುತ್ತಿದ್ದಾರೆ. ಶಿಳ್ಳೆ-ಚಪ್ಪಾಳೆ ಹಾಕುತ್ತ ಸಿನಿಮಾ ನೋಡುತ್ತಿದ್ದ ಅಭಿಮಾನಿಯೊಬ್ಬ ಕುಸಿದು ಬಿದ್ದು, ನೋಡ ನೋಡುತ್ತಿದ್ದಂತೆ ಪ್ರಾಣ ಬಿಟ್ಟಿರುವ ಘಟನೆ ನಡೆದಿದೆ.

    ನಡೆದಿದ್ದೇನು?: ಅನಂತಪುರಂನಲ್ಲಿ ಎಸ್‌ವಿ ಮ್ಯಾಕ್ಸ್ ಚಿತ್ರಮಂದಿರದಲ್ಲಿ ಬೆಳಗಿನ ಜಾವದ ಶೋ ನೋಡುತ್ತಿದ್ದನು. ಸಿನಿಮಾ ನೋಡುತ್ತದ್ದಂತೆ ಚಿತ್ರಮಂದಿರದಲ್ಲಿಯೇ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾನೆ. ಅಭಿಮಾನಿ ಕುಸಿದು ಬಿದ್ದ ಕೂಡಲೇ ಆತನ ಗೆಳೆಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ : RRR ಸಿನೆಮಾ ನೋಡಲು ಬಾಗಿಲು ಮುರಿದು ಚಿತ್ರಮಂದಿರಕ್ಕೆ ನುಗ್ಗಿದ ಪ್ರೇಕ್ಷಕರು

    ಆದರೆ ಆತ ಆಸ್ಪತ್ರೆಗೆ ಬರುವ ಮೊದಲೇ ಮೃತನಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವುದಾಗಿ ವೈದ್ಯರು ಹೇಳೀದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    ಆರ್‌ಆರ್‌ಆರ್‌ ಸಿನಿಮಾ ದೇಶದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಪಕ್ಕಾ ಬ್ಲಾಕ್ ಬಸ್ಟರ್ ಆಗಲಿದೆ ಎಂಬ ಮಾತುಗಳು ಸಿನಿ ಪಂಡಿತರಿಂದ ಕೇಳಿ ಬರುತ್ತಿದೆ. ಜೂ.ಎನ್‌ಟಿಆರ್‌, ರಾಮ್ ಚರಣ್ ತೇಜ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ರಾಜಮೌಳಿ ನಿರ್ದೇಶನಕ್ಕೆ ಅಭಿಮಾನಿಗಳು ಮತ್ತೊಮ್ಮೆ ಮನಸೋತಿರುವುದಂತೂ ಪಕ್ಕಾ ಹೌದು, ಪೈಸಾ ವಸೂಲ್ ಸಿನಿಮಾ ಇದು ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

  • ತಾಯಿ ಮಲಗಿದ್ದಾಳೆ ಎಂದು 4 ದಿನ ಶವದೊಂದಿಗೆ ಕಾಲ ಕಳೆದ ಬಾಲಕ..!

    ತಾಯಿ ಮಲಗಿದ್ದಾಳೆ ಎಂದು 4 ದಿನ ಶವದೊಂದಿಗೆ ಕಾಲ ಕಳೆದ ಬಾಲಕ..!

    ಅಮರಾವತಿ: ತಾಯಿಗೆ ಹುಷಾರಿಲ್ಲ, ಹೀಗಾಗಿ ಮಲಗಿದ್ದಾಳೆ ಎಂದುಕೊಂಡಿದ್ದ ಬಾಲಕ 4 ದಿನಗಳವರೆಗೆ ತನ್ನ ತಾಯಿಯ ಹೆಣದೊಂದಿಗೆ ಕಾಲ ಕಳೆದ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ.

    10 ವರ್ಷದ ಬಾಲಕ ಶ್ಯಾಮ್ ತನ್ನ ತಾಯಿ ರಾಜಲಕ್ಷ್ಮಿ ಮಾರ್ಚ್ 8 ರಂದು ಅನಾರೋಗ್ಯದ ಕಾರಣ ಮಲಗಿದ್ದಾಳೆ. ಅವಳಿಗೆ ತೊಂದರೆ ಕೊಡುವುದು ಬೇಡ ಎಂದುಕೊಂಡು ನಾಲ್ಕು ದಿನಗಳ ವರೆಗೂ ಆಕೆಯ ಶವದೊಂದಿಗೆ ಕಳೆದಿದ್ದ. ಆದರೆ ಮನೆಯಲ್ಲಿ ದುರ್ವಾಸನೆ ಬರಲು ಪ್ರಾರಂಭವಾದಂತೆ ತನ್ನ ಸಂಬಂಧಿಕರಿಗೆ ಈ ಬಗ್ಗೆ ತಿಳಿಸಿದ್ದಾನೆ.

    ಬಾಲಕನ ಸಂಬಂಧಿಕರು ಬಾಲಕನ ಮಾಹಿತಿ ಮೇರೆಗೆ ಅವರ ಮನೆಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಗಂಡನ ಶಿರಚ್ಛೇದ ಮಾಡಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ದೇಗುಲದಲ್ಲಿ ಕೂತಿದ್ಲು!

    ರಾಜಲಕ್ಷ್ಮಿ ಕೌಟುಂಬಿಕ ಕಲಹದಿಂದಾಗಿ ಗಂಡನೊಂದಿಗೆ ಬೇರ್ಪಟ್ಟು ತನ್ನ ಮಗನೊಂದಿಗೆ ವಾಸವಿದ್ದಳು. ಆಕೆ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಈ ಬಗ್ಗೆ ಬಾಲಕನಲ್ಲಿ ಕೇಳಿದಾಗ ಆಕೆ ಮಾರ್ಚ್ 8 ರಂದು ಅನಾರೋಗ್ಯದಿಂದ ಬಳಲುತ್ತಿದ್ದಳು. ಅಂದು ವಾಂತಿ ಮಾಡಿ ಮಲಗಿದ ಬಳಿಕ ಎದ್ದೇಳಲೇ ಇಲ್ಲ ಎಂದು ತಿಳಿಸಿದ್ದಾನೆ. ಇದನ್ನೂ ಓದಿ: ರಾತ್ರಿಯೆಲ್ಲಾ ಮೋಜು ಮಸ್ತಿ – ಬೆಳಗ್ಗೆ ಯುವಕ ಶವವಾಗಿ ಪತ್ತೆ

    ಮಹಿಳೆ ಸಾವಿಗೆ ನಿಜವಾದ ಕಾರಣ ತಿಳಿಯಲು ಪೊಲೀಸರು ಶವವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಬಾಯ್‍ಫ್ರೆಂಡ್ ಮುಂದೆಯೇ ಯುವತಿ ಮೇಲೆ ದುಷ್ಕರ್ಮಿಗಳಿಂದ ಅತ್ಯಾಚಾರ

    ಬಾಯ್‍ಫ್ರೆಂಡ್ ಮುಂದೆಯೇ ಯುವತಿ ಮೇಲೆ ದುಷ್ಕರ್ಮಿಗಳಿಂದ ಅತ್ಯಾಚಾರ

    ಹೈದರಾಬಾದ್: ಯುವತಿಯನ್ನು ಮರಕ್ಕೆ ಕಟ್ಟಿ ಹಾಕಿ ಆಕೆಯ ಪ್ರಿಯಕರನ ಮುಂದೆ ದುಷ್ಕರ್ಮಿಗಳು ಅತ್ಯಾಚಾರವೆಸಗಿರುವ ಘಟನೆ ಕ್ರಿಶನ್ ಜಿಲ್ಲೆಯ ಮಚಲಿಪಟ್ಟಣಂ ಬೀಚ್‍ನಲ್ಲಿ ನಡೆದಿದೆ.

    ಗುಂಟೂರಿನ ಆಂಧ್ರಪ್ರದೇಶದ ಪೊಲೀಸ್ ಕೇಂದ್ರ ಕಚೇರಿಯಿಂದ 75 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದ್ದು, ಇದೀಗ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಚಲಿಪಟ್ಟಣಂನ ಬಂದರ್ ಮಂಡಲ್‍ನ ಪಲ್ಲಿಪಾಲೆಮ್ ಬೀಚ್‍ಗೆ ಜೋಡಿ ತೆರಳಿದ್ದ ವೇಳೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿ ಯುವತಿ ಮೇಲೆ ಅತ್ಯಾಚಾರ ಮಾಡಿದ್ದಾರೆ. ಇದನ್ನೂ ಓದಿ:  ರಾಡ್‍ನಿಂದ ಹೊಡೆದು ಪತ್ನಿಯ ಹತ್ಯೆಗೈದು ಪತಿಯೂ ಆತ್ಮಹತ್ಯೆಗೆ ಶರಣು

    ದುಷ್ಕರ್ಮಿಗಳು ಯುವತಿಯ ಬಾಯ್‍ಫ್ರೆಂಡ್‍ನನ್ನು ಸಹ ಮರಕ್ಕೆ ಕಟ್ಟಿ ಹಾಕಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದೀಗ ಈ ಸಂಬಂಧ ಬಂದರ್ ಗ್ರಾಮಾಂತರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಪಿ.ನಾಗಬಾಬುವನ್ನು ಬಂಧಿಸಿದ್ದಾರೆ ಮತ್ತು ಮತ್ತೋರ್ವ ಆರೋಪಿ ಎರರ್ಂಶೆಟ್ಟಿ ಅನುದೀಪ್‍ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ಈ ಕುರಿತಂತೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಇದನ್ನೂ ಓದಿ: ಯುಪಿ ಚುನಾವಣಾ ಫಲಿತಾಂಶ ನಮಗೊಂದು ಪಾಠ: ಮಾಯಾವತಿ

  • ಹೃದಯಾಘಾತದಿಂದ ಆಂಧ್ರ ಪ್ರದೇಶದ ಸಚಿವ ಮೇಕಪತಿ ಗೌತಮ್ ರೆಡ್ಡಿ ನಿಧನ

    ಹೃದಯಾಘಾತದಿಂದ ಆಂಧ್ರ ಪ್ರದೇಶದ ಸಚಿವ ಮೇಕಪತಿ ಗೌತಮ್ ರೆಡ್ಡಿ ನಿಧನ

    ಹೈದರಾಬಾದ್: ಆಂಧ್ರಪ್ರದೇಶದ ಮಾಹಿತಿ ತಂತ್ರಜ್ಞಾನ ಮತ್ತು ಕೈಗಾರಿಕಾ ಸಚಿವ ಮೇಕಪತಿ ಗೌತಮ್ ರೆಡ್ಡಿ(50) ಅವರು ಹೃದಯಾಘಾತದಿಂದ ಹೈದರಾಬಾದ್‍ನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ.

    ಮೇಕಪತಿ ಗೌತಮ್ ರೆಡ್ಡಿ ಅವರು ಮನೆಯಲ್ಲಿ ಕುಸಿದು ಬಿದ್ದ ನಂತರ ಅವರನ್ನು ಬೆಳಗ್ಗೆ 7.45 ಸುಮಾರಿಗೆ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಕೋಮು ಬಣ್ಣ ಕಟ್ಟಿ ಯಾರನ್ನೋ ಖಳನಾಯಕ ಮಾಡುವುದು ಈಶ್ವರಪ್ಪ, ಬಿಜೆಪಿಗೆ ಹೊಸದಲ್ಲ: ಬಿ.ಕೆ ಹರಿಪ್ರಸಾದ್

    Mekapati Goutham Reddy

    ದುಬೈನಲ್ಲಿ 10 ದಿನಗಳ ಕಾಲ ಕಳೆದ ಬಳಿಕ ಮೇಕಪತಿ ಗೌತಮ್ ರೆಡ್ಡಿ ಅವರು ಒಂದೆರಡು ದಿನಗಳ ಹಿಂದೆ ಹೈದರಾಬಾದ್‍ಗೆ ಮರಳಿದರು. ಆಂಧ್ರಪ್ರದೇಶದ ಕೈಗಾರಿಕಾ ಇಲಾಖೆಯು ದುಬೈ ಎಕ್ಸ್‌ಪೋದಲ್ಲಿ ರಾಜ್ಯದ ಹೂಡಿಕೆಗಳನ್ನು ಆಕರ್ಷಿಸಲು ಸ್ಟಾಲ್ ಅನ್ನು ಸ್ಥಾಪಿಸಿದ್ದರು. ಇದನ್ನೂ ಓದಿ: 2 ವರ್ಷದ ಹಿಂದೆಯೇ 10 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು: ಮೃತನ ಸಂಬಂಧಿ ಹೇಳಿಕೆ

    ಇದೀಗ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಮೇಕಪತಿ ಗೌತಮ್ ರೆಡ್ಡಿ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸಿದ್ದಾರೆ. ಮೇಕಪತಿ ರಾಜಮೋಹನ್ ರೆಡ್ಡಿ ಅವರ ಪುತ್ರರಾಗಿರುವ ಮೇಕಪತಿ ಗೌತಮ್ ರೆಡ್ಡಿ ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

  • ಆಸ್ತಿಗಾಗಿ ತಾಯಿಯ ಮೇಲೆ ಹಲ್ಲೆ ಮಾಡಿದ ಮಗ

    ಆಸ್ತಿಗಾಗಿ ತಾಯಿಯ ಮೇಲೆ ಹಲ್ಲೆ ಮಾಡಿದ ಮಗ

    ಅಮರಾವತಿ: ವ್ಯಕ್ತಿಯೊಬ್ಬ ತನ್ನ ತಾಯಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಈ ಘಟನೆ ಸದ್ಯ ಭಾರೀ ವೈರಲ್ ಆಗುತ್ತಿದೆ.

    ನಾಗಮಣಿ ಹಲ್ಲೆಗೊಳಗಾದ ಮಹಿಳೆ ಹಾಗೂ ಶೇಷು ಆರೋಪಿ. ಆಂಧ್ರಪ್ರದೇಶದ ಗುಂಟುರು ಜಿಲ್ಲೆಯ ತಾಡಪಲ್ಲಿಯ ಬ್ರಹ್ಮಾನಂದಪುರಂನಲ್ಲಿ ಈ ಘಟನೆ ನಡೆದಿದೆ. ವರ್ಷಗಳ ಹಿಂದೆ ಅಂದಿನ ಆಂಧ್ರ ಸರ್ಕಾರ ನಾಗಮಣಿ ಅವರ ಪತಿ ವೆಂಕಟೇಶ್ವರರಾವ್ ಅವರಿಗೆ ಭೂಮಿ ಮಂಜೂರು ಮಾಡಿತ್ತು. ಕಷ್ಟಪಟ್ಟು ಅವರು ಮನೆ ಕಟ್ಟಿದ್ದರು. ಆದರೆ ನಾಗಮಣಿ ಅವರ ಪತಿ ಮೂರು ವರ್ಷಗಳ ಹಿಂದೆ ನಿಧನರಾದರು. ಈ ದಂಪತಿಗೆ ಮಗ ಹಾಗೂ ಮಗಳು ಇದ್ದಾರೆ.

    ತಂದೆಯ ನಿಧನದ ನಂತರ ಬೇರೆ ಊರಿನಲ್ಲಿ ಕೆಲಸ ಮಾಡುತ್ತಿದ್ದ ಶೇಷು ಪತ್ನಿಯೊಂದಿಗೆ ತನ್ನ ಗ್ರಾಮಕ್ಕೆ ಬಂದು ವಾಸಿಸತೊಡಗಿನು. ಈ ಖುಷಿ ನಾಗಮಣಿಗೆ ಹೆಚ್ಚು ದಿನಗಳ ಕಾಲ ಉಳಿಯಲಿಲ್ಲ. ಅವಳಿಗೆ ಶೇಷು ದಿನನಿತ್ಯ ಆಸ್ತಿಗಾಗಿ ಕಿರುಕುಳ ನೀಡುತ್ತಿದ್ದ. ಜೊತೆ ತಾಯಿಯ ಮೇಲೆ ಅಮಾನುಷವಾಗಿ ವರ್ತಿಸುತ್ತಿದ್ದ.  ಇದನ್ನೂ ಓದಿ: ಭದ್ರಾವತಿಯಲ್ಲಿ ಕಮಲ ಅರಳಿಸೋಕೆ ಎಲ್ಲರೂ ದುಡಿಯೋಣ : ನಾರಾಯಣಗೌಡ

    POLICE JEEP

    ಇದನ್ನು ಗಮನಿಸಿದ ಸ್ಥಳೀಯರು ಈ ಹಿಂದೆ ಶೇಷುಗೆ ಛೀಮಾರಿ ಹಾಕಿದರೂ ವರ್ತನೆ ಬದಲಿಸಿಕೊಳ್ಳಲಿಲ್ಲ. ಇರಿಂದಾಗಿ ಸ್ಥಳೀಯರು ಪೊಲೀಸರಿಗೆ ಆತನ ವಿರುದ್ಧ ತಾಯಿಗೆ ಹಲ್ಲೆ ಮಾಡುತ್ತಿರುವ ಮಾಹಿತಿ ನೀಡಿದ್ದಾರೆ. ಇದರ ಆಧಾರದ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶೇಷುವನ್ನು ವಶಕ್ಕೆ ಪಡೆದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ಸ್ಟಾರ್ ಕಪಲ್

  • ಯುಗಾದಿ ಹಬ್ಬದೊಳಗೆ ಹೊಸ ಜಿಲ್ಲೆಗಳ ರಚನೆ: ಜಗನ್ ಮೋಹನ್ ರೆಡ್ಡಿ

    ಯುಗಾದಿ ಹಬ್ಬದೊಳಗೆ ಹೊಸ ಜಿಲ್ಲೆಗಳ ರಚನೆ: ಜಗನ್ ಮೋಹನ್ ರೆಡ್ಡಿ

    ಹೈದರಾಬಾದ್: ಈ ಬಾರಿ ಏಪ್ರಿಲ್ 2ರ ಯುಗಾದಿ ಹಬ್ಬದೊಳಗೆ (ಆಂಧ್ರದಲ್ಲಿ ಹೊಸ ವರ್ಷದ ದಿನ) ಹೊಸ ಜಿಲ್ಲೆಗಳನ್ನು ರಚಿಸಬೇಕು ಎಂದು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.

    ಕ್ಯಾಂಪ್ ಕಚೇರಿಯಲ್ಲಿ ಗುರುವಾರ ಹೊಸ ಜಿಲ್ಲೆಗಳ ರಚನೆ ಕುರಿತು ನಡೆಸಿದ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿಗಳು, ಹೊಸ ಜಿಲ್ಲೆಗಳ ರಚನೆಯ ನಂತರ ಇಡೀ ಕಾರ್ಯವಿಧಾನವು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಕಾಮಗಾರಿ ಆರಂಭವಾದ ನಂತರ ಯಾವುದೇ ಗೊಂದಲ ಬೇಡ. ಯಾವುದೇ ರೀತಿಯ ತೊಂದರೆಯಿಲ್ಲದ ಆಡಳಿತ ವ್ಯವಸ್ಥೆ ಕಲ್ಪಿಸಲು ಹಾಗೂ ಈ ನಿಟ್ಟಿನಲ್ಲಿ ಸಿದ್ಧತೆಗಳನ್ನು ತ್ವರಿತಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ (ಎಸ್‍ಪಿ) ಕೆಲಸವನ್ನು ಪ್ರಾರಂಭಿಸಲು ಸಿದ್ಧತೆಗಳನ್ನು ನಡೆಸುವಂತೆ ನಿರ್ದೇಶನ ನೀಡಿದ್ದಾರೆ.

    ಹೊಸ ಕಟ್ಟಡಗಳು ಸಿದ್ಧವಾಗುವವರೆಗೆ ನೌಕರರ ವಿಭಜನೆ, ಮೂಲಸೌಕರ್ಯಗಳ ಸ್ಥಾಪನೆ ಮತ್ತು ಸರ್ಕಾರಿ ಯಂತ್ರಗಳ ಕಾರ್ಯನಿರ್ವಹಣೆಗೆ ಅಗತ್ಯವಿರುವ ಕಟ್ಟಡಗಳ ಗುರುತಿಸಬೇಕು. ಏನಾದರೂ ಆಕ್ಷೇಪಗಳಿದ್ದರೆ, ಅದನ್ನು ಪರಿಶೀಲಿಸುವುದ ಜೊತೆಗೆ ಚರ್ಚೆ ನಡೆಸಬೇಕು ಎಂದಿದ್ದಾರೆ. ಇದನ್ನೂ ಓದಿ: ಅಪ್ಪು ಜೊತೆಗೆ ಕೊನೆ ಕ್ಷಣದ ವೀಡಿಯೋ ಹಂಚಿಕೊಂಡ ನವರಸ ನಾಯಕ!

    ಹೊಸ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಧಿಕಾರಿಗಳು ಮತ್ತು ಎಸ್‍ಪಿಗಳನ್ನು ನೇಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಏಕೆಂದರೆ ಅವರಿಗೆ ಕೆಲಸದಲ್ಲಿ ಅನುಭವವಿರುವುದರಿಂದ ಹೊಸ ಜಿಲ್ಲೆಗಳಲ್ಲಿ ಜಗಳ ಮುಕ್ತವಾಗಿ ಆಡಳಿತ ನಡೆಸಲು ಸಹಾಯಕವಾಗಿದೆ. ಮೂಲಸೌಕರ್ಯಗಳ ಸ್ಥಾಪನೆ ಮತ್ತು ಆಡಳಿತದ ಸಿದ್ಧತೆಗಳನ್ನು ಅವರು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಹೇಳಿದ್ದಾರೆ.

    ನ್ಯಾಯಾಂಗ ಮತ್ತು ಕಾನೂನು ಸಮಸ್ಯೆಗಳನ್ನು ಪರಿಗಣಿಸಿ ಸ್ಥಳೀಯ ಸಂಸ್ಥೆಗಳಿಗೆ (ಜಿಲ್ಲಾ ಪರಿಷತ್ತು ವಿಭಾಗ) ಸಂಬಂಧಿಸಿದಂತೆ ಅನುಸರಿಸಬಹುದಾದ ನೀತಿ ಯೋಜನೆಗಳನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹೊಸ ಜಿಲ್ಲೆಯ ನಕ್ಷೆಗಳು ಮತ್ತು ಜಿಲ್ಲಾ ಕೇಂದ್ರಗಳನ್ನು ನಿರ್ಧರಿಸಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸಲಹೆಗಳನ್ನು ನೀಡಿದ್ದಾರೆ. ಇದನ್ನೂ ಓದಿ: ಕೊನೆಗೂ ನಮ್ಮ ಕನಸು ನನಸಾಗಿದೆ: ಆಲಿಯಾ ಹೀಗೆಂದಿದ್ದೇಕೆ?

  • ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 62ಕ್ಕೆ ಏರಿಕೆ ಮಾಡಿದ ಆಂಧ್ರ ಸರ್ಕಾರ

    ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 62ಕ್ಕೆ ಏರಿಕೆ ಮಾಡಿದ ಆಂಧ್ರ ಸರ್ಕಾರ

    ಅಮರಾವತಿ: ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ವರ್ಷಕ್ಕೆ ಏರಿಸುವ ಸುಗ್ರೀವಾಜ್ಞೆಯನ್ನು ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ಸರ್ಕಾರ ಇಂದು ಹೊರಡಿಸಿದೆ.

    ಈ ನಿಯಮ ಜನವರಿ 1, 2022ರಿಂದಲೇ ಜಾರಿಗೆ ಬರುವಂತೆ ಕ್ರಮವಹಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಸರ್ಕಾರ ನಿರ್ಧಾರವು ನೌಕರರಲ್ಲೂ ಅಚ್ಚರಿ ಮೂಡಿಸಿದೆ. ನಿವೃತ್ತಿ ವಯಸ್ಸನ್ನು ಹೆಚ್ಚಿಸಿ ಎಂದು ಸರ್ಕಾರಿ ನೌಕರರು ಯಾರೂ ಪ್ರತಿಭಟನೆ ಮಾಡಿಲ್ಲ. ಆದರೂ ಸರ್ಕಾರ ನಿವೃತ್ತಿ ವಯಸ್ಸನ್ನು ಹೆಚ್ಚಿಸಿದೆ.

    ಈ ಹಿಂದೆ ತೆಲಂಗಾಣ ಮತ್ತು ಮಧ್ಯಪ್ರದೇಶದಲ್ಲೂ ನೌಕರರ ನಿವೃತ್ತಿ ವಯಸ್ಸನ್ನು ಏರಿಸಿವೆ. ತೆಲಂಗಾಣದಲ್ಲಿ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 58 ರಿಂದ 61ಕ್ಕೆ ಹೆಚ್ಚಿಸಲಾಗಿದೆ. ಮಧ್ಯಪ್ರದೇಶದಲ್ಲಿ ನಿವೃತ್ತಿ ವಯಸ್ಸು 62. ಕೇಂದ್ರ ಸರ್ಕಾರದಲ್ಲಿ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60 ಆಗಿದೆ. ಆದರೆ ಇದೀಗ ಆಂಧ್ರಪ್ರದೇಶ ಸರ್ಕಾರ ನಿವೃತ್ತಿ ವಯಸ್ಸನ್ನು 2 ವರ್ಷ ಮುಂದೆ ಹಾಕಿದೆ.

    ಕೆಲವರು ದಕ್ಷಿಣ ರಾಜ್ಯದ ಆರ್ಥಿಕ ಸ್ಥಿತಿ ಕ್ಷೀಣಿಸುತ್ತಿರುವುದರಿಂದ ಆಂಧ್ರ ರಾಜ್ಯದ ನೌಕರರ ನಿವೃತ್ತಿ ವಯಸ್ಸನ್ನು 62ಕ್ಕೆ ಹೆಚ್ಚಿಸುವ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಆಂಧ್ರಪ್ರದೇಶದ ಸರ್ಕಾರಿ ನೌಕರರ ಭವಿಷ್ಯ ನಿಧಿ, ಗ್ರಾಚ್ಯುಟಿ ಮತ್ತು ಇತರ ಪ್ರಯೋಜನಗಳು ಸರಾಸರಿ ಸುಮಾರು 30 ಲಕ್ಷ ರೂ. ಆಗಿದೆ. ಅನೇಕ ಸಿಬ್ಬಂದಿಗೆ ನಿವೃತ್ತಿ ಪ್ರಯೋಜನಗಳ ಪಾವತಿಯನ್ನು ಎರಡು ವರ್ಷಗಳವರೆಗೆ ಮುಂದೂಡಬಹುದು. ಪಿಂಚಣಿ ಹಾಗೂ ಇತರ ನಿವೃತ್ತಿ ಪ್ರಯೋಜನಗಳ ಮೇಲೆ ಸರ್ಕಾರವು ಮಾಡುವ ವೆಚ್ಚವನ್ನು ಮುಂದೂಡುತ್ತದೆ. ಇದನ್ನೂ ಓದಿ: ಕಾಂಗ್ರೆಸ್ ಬಿಡೋರ ಲಿಸ್ಟ್, ಬಿಜೆಪಿ ಬಿಡೋರ ಲಿಸ್ಟ್ ನನ್ನ ಬಳಿ ಇದೆ: ಯತ್ನಾಳ್

  • ಆಂಧ್ರಪ್ರದೇಶದಲ್ಲಿ 13 ಹೊಸ ಜಿಲ್ಲೆ ರಚನೆ – ಒಟ್ಟು ಜಿಲ್ಲೆಗಳ ಸಂಖ್ಯೆ 26ಕ್ಕೆ ಏರಿಕೆ

    ಆಂಧ್ರಪ್ರದೇಶದಲ್ಲಿ 13 ಹೊಸ ಜಿಲ್ಲೆ ರಚನೆ – ಒಟ್ಟು ಜಿಲ್ಲೆಗಳ ಸಂಖ್ಯೆ 26ಕ್ಕೆ ಏರಿಕೆ

    ಅಮರಾವತಿ: ಆಂಧ್ರಪ್ರದೇಶದಲ್ಲಿ ಪ್ರಮುಖ ಆಡಳಿತ ಸುಧಾರಣೆ ತರಲು ಜಗನ್ ಮೋಹನ್ ರೆಡ್ಡಿ ಸರ್ಕಾರ ಇಂದು ಬೆಳಿಗ್ಗೆ 13 ಹೊಸ ಜಿಲ್ಲೆಗಳ ರಚನೆಗೆ ಅಧಿಸೂಚನೆಯನ್ನು ಹೊರಡಿಸಿದೆ.

    ಆಡಳಿತವನ್ನು ಸರಾಗಗೊಳಿಸಲು ಮತ್ತು ಅಧಿಕಾರಿಗಳ ಪ್ರವೇಶವನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಪ್ರಸ್ತುತ ಇರುವ 13 ಜಿಲ್ಲೆಗಳ ಸಂಖ್ಯೆಯನ್ನು ದ್ವಿಗುಣಗೊಳಿಸಿದೆ. 25 ಲೋಕಸಭಾ ಕ್ಷೇತ್ರಗಳನ್ನು ಪ್ರತಿಯೊಂದನ್ನು ಜಿಲ್ಲೆಯಾಗಿ ಪುನಾರಚಿಸಲಾಗಿದೆ. ಅರಕು ಕ್ಷೇತ್ರವನ್ನು ನಾಲ್ಕು ಕ್ಷೇತ್ರಗಳಾಗಿ ರಚಿಸಲಾಗಿದೆ.

    ಆಂಧ್ರಪ್ರದೇಶ ಜಿಲ್ಲೆಗಳ ರಚನೆ ಕಾಯ್ದೆಯ ಸೆಕ್ಷನ್ 3(5) ಅಡಿ ಜಿಲ್ಲೆಗಳನ್ನು ರಚನೆ ಮಾಡಲಾಗಿದ್ದು, ಈ ಮೂಲಕ ಆಂಧ್ರಪ್ರದೇಶದಲ್ಲಿರುವ ಒಟ್ಟು ಜಿಲ್ಲೆಗಳ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಆತ್ಮ ಗೌರವ ಇದ್ದವರು ಯಾರೂ ಕಾಂಗ್ರೆಸ್‍ಗೆ ವಾಪಸ್ ಹೋಗಲ್ಲ: ಬಿ.ಸಿ.ಪಾಟೀಲ್

    ಶ್ರೀ ಬಾಲಾಜಿ, ಅನ್ನಮಯ್ಯ, ಶ್ರೀ ಸತ್ಯಸಾಯಿ, ನಂದ್ಯಾಲ, ಬಾಪಟ್ಲ, ಪಲ್ನಾಡು, ಏಲೂರು, ಎನ್‍ಟಿಆರ್, ಅನಕಾಪಲ್ಲಿ, ಕಾಕಿನಾಡ, ಕೋನಾ ಸೀಮಾ, ಮಾನ್ಯಂ, ಅಲ್ಲೂರಿ ಸೀತಾರಾಮ ರಾಜು ನೂತನ ಜಿಲ್ಲೆಗಳಾಗಿದೆ. ಇದನ್ನೂ ಓದಿ: ಜಿಲ್ಲಾ ಉಸ್ತುವಾರಿ ಜಿಲ್ಲೆ ಸ್ಥಾನ ಬದಲಾಗುವ ನೀರಿಕ್ಷೆ ಇರಲಿಲ್ಲ: ಸುಧಾಕರ್

    ಮುಂದಿನ ಯುಗಾದಿ ಹಬ್ಬದ ವೇಳೆಗೆ ಹೊಸ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಉಳಿದ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ತಿಗೊಳಿಸಬೇಕೆಂದು ಆಂಧ್ರಪ್ರದೇಶ ಸರ್ಕಾರ ಗುರಿ ಹೊಂದಿದೆ. ಭೌಗೋಳಿಕ, ಸಾಮಾಜಿಕ, ಸಾಂಸ್ಕೃತಿಕ ಪರಿಸ್ಥಿತಿಗಳು, ಮತ್ತು ಸೌಲಭ್ಯಗಳನ್ನು ಗಮನದಲ್ಲಿ ಇರಿಸಿಕೊಂಡು ಹೊಸ ಜಿಲ್ಲೆಗಳನ್ನು ರಚನೆ ಮಾಡಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಇದನ್ನೂ ಓದಿ: ಸಿಎಂ ಅಭ್ಯರ್ಥಿ ಘೋಷಿಸಲಿ, ಯಾರು ಉಳಿಯುತ್ತಾರೆ, ಹೋಗುತ್ತಾರೆ ನೋಡೋಣ: ಸಿ.ಟಿ. ರವಿ

  • ವಿಶಾಖಪಟ್ಟಣಂ-ದೆಹಲಿ, ಆಂಧ್ರಪ್ರದೇಶ ಎಕ್ಸ್‌ಪ್ರೆಸ್ ರೈಲಿನಲ್ಲಿ ಹೊಗೆ – ಪ್ರಯಾಣಿಕರಲ್ಲಿ ಆತಂಕ

    ವಿಶಾಖಪಟ್ಟಣಂ-ದೆಹಲಿ, ಆಂಧ್ರಪ್ರದೇಶ ಎಕ್ಸ್‌ಪ್ರೆಸ್ ರೈಲಿನಲ್ಲಿ ಹೊಗೆ – ಪ್ರಯಾಣಿಕರಲ್ಲಿ ಆತಂಕ

    ಹೈದರಾಬಾದ್: ವಿಶಾಖಪಟ್ಟಣಂ-ದೆಹಲಿ ಆಂಧ್ರಪ್ರದೇಶ ಎಕ್ಸ್‌ಪ್ರೆಸ್ ರೈಲಿನ ಎಸಿ ಕೋಚ್‍ನಲ್ಲಿ ಇಂದು ಬೆಳಗ್ಗೆ ಹೊಗೆ ಕಾಣಿಸಿಕೊಂಡಿದ್ದು ಪ್ರಯಾಣಿಕರು ಭಯಭೀತರಾಗಿದ್ದರು.

    ವಿಶಾಖಪಟ್ಟಣಂ-ದೆಹಲಿ ಆಂಧ್ರಪ್ರದೇಶ ಎಕ್ಸ್‌ಪ್ರೆಸ್‍ನ ಎಸ್6 ಕೋಚ್‍ನಡಿಯಲ್ಲಿ ಹೊಗೆ ಆವರಿಸಿತ್ತು. ಘಟನೆಯ ಬಗ್ಗೆ ಮಾಹಿತಿ ನೀಡಿದ ನಂತರ ಲೋಕೋ ಚಾಲಕನು ವಾರಂಗಲ್‍ನ ನೆಕ್ಕೊಂಡಾ ರೈಲು ನಿಲ್ದಾಣದ ಬಳಿ ರೈಲನ್ನು ನಿಲ್ಲಿಸಿದರು. ಇದನ್ನೂ ಓದಿ: ಪ್ರಿಯತಮೆ ತಾಯಿಗಾಗಿ ಕಿಡ್ನಿ ಕೊಟ್ಟ- ಒಂದೇ ಕಿಡ್ನಿಯವ ಬೇಡವೆಂದು ಬೇರೆಯವ್ರ ಕೈ ಹಿಡಿದ್ಳು!

    train

    ಹೊಗೆ ನೋಡಿ ಎಚ್ಚೆತ್ತ ಲೋಕೋ ಚಾಲಕರು ರೈಲನ್ನು ನಿಲ್ಲಿಸಿ ನೋಡಿದಾಗ ಬ್ರೇಕ್‍ಗಳ ಜಾಮ್‍ನಿಂದಾಗಿ ಘಟನೆ ಸಂಭವಿಸಿದೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದರಿಂದಾಗಿ ಸುಮಾರು ಒಂದು ಗಂಟೆ ಕಾಲ ರೈಲನ್ನು ನಿಲ್ಲಿಸಲಾಯಿತು ಎನ್ನಲಾಗಿದೆ. ಇದನ್ನೂ ಓದಿ:  ಉದ್ದೇಶಪೂರ್ವಕವಾಗಿಯೇ ಕೋವಿಡ್ ಸೋಂಕು ತಗುಲಿಸಿಕೊಂಡು ಗಾಯಕಿ ನಿಧನ