Tag: Andhra Pradesh

  • ಪತಿ ಕೊಂದು ಕತ್ತರಿಸಿದ ತಲೆ ಠಾಣೆಗೆ ತಂದು ಶರಣಾದಳು

    ಪತಿ ಕೊಂದು ಕತ್ತರಿಸಿದ ತಲೆ ಠಾಣೆಗೆ ತಂದು ಶರಣಾದಳು

    ಹೈದರಾಬಾದ್: ಪತಿಯನ್ನು ಕೊಂದು, ತಲೆ ಕತ್ತರಿಸಿ ಪೊಲೀಸ್ ಠಾಣೆಗೆ ಮಹಿಳೆ ತಂದಿರುವ ಘಟನೆ ಆಂಧ್ರಪ್ರದೇಶ ಚಿತ್ತೂರು ಜಿಲ್ಲೆಯ ತಿರುಪತಿ ಬಳಿಯ ರೇಣಿಗುಂಟದಲ್ಲಿ ನಡೆದಿದೆ.

    POLICE JEEP

    ರವಿಚಂದ್ರನ್ (53) ಮೃತನಾಗಿದ್ದಾನೆ. ರವಿಚಂದ್ರನ್ ಗುಂಟೂರು ಜಿಲ್ಲೆಯ ನರಸರಾವ್‍ಪೇಟೆಯ ಮೂಲದವರು. ವಸುಂಧರಾ ಪತಿಯನ್ನು ಕೊಂದ ಆರೋಪಿ ಪತ್ನಿಯಾಗಿದ್ದಾಳೆ. ಚಾಕುವಿನಿಂದ ಹಲ್ಲೆ ಮಾಡಿ ಕೊಲೆ ಮಾಡಿ ಠಾಣೆಗೆ ಬಂದು ಶರಣಾಗಿದ್ದಾಳೆ. ಇದನ್ನೂ ಓದಿ: 1200 ಕೋಟಿ ರೂ. ವೆಚ್ಚದ ಶಿರಾಡಿ ಘಾಟ್ ಚತುಷ್ಪಥ ರಸ್ತೆಗೆ ಕೇಂದ್ರ ಅನುಮೋದನೆ

    ವಸುಂಧರಾ ತಮ್ಮ ಮನೆಯಲ್ಲಿ ನಡೆದ ಜಗಳದಲ್ಲಿ ಪತಿ ರವಿಚಂದ್ರನ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಬಳಿಕ ಆತನ ತಲೆಯನ್ನು ಕತ್ತರಿಸಿ ಬ್ಯಾಗ್‍ನಲ್ಲಿ ಹಾಕಿಕೊಂಡು ಠಾಣೆಗೆ ಬಂದು ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಅಧಿಕಾರಿಗಳು ಆರೋಪಿಯನ್ನು ಅಲ್ಲಿಗೆ ಕರೆತಂದು ಸಾಕ್ಷ್ಯ ಸಂಗ್ರಹಿಸಿದ್ದಾರೆ. ಮೃತದೇಹವನ್ನು ಶವ ಪರೀಕ್ಷೆಗಾಗಿ ಎಸ್‍ವಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ.

    ದಂಪತಿ ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗುರುವಾರ ಬೆಳಗ್ಗೆ ಯಾವುದೋ ವಿಚಾರಕ್ಕೆ ದಂಪತಿ ನಡುವೆ ಮತ್ತೆ ಜಗಳ ನಡೆದಿದ್ದು, ಆಕ್ರೋಶಗೊಂಡ ಮಹಿಳೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾಳೆ. ಅಷ್ಟಕ್ಕೆ ಸುಮ್ಮನಾಗದೆ ಆತನ ತಲೆಯನ್ನು ಕತ್ತರಿಸಿ ಠಾಣೆಗೆ ಹೊತ್ತೊಯ್ದಿದ್ದಾಳೆ. ದಂಪತಿಗೆ 20 ವರ್ಷದ ಮಗನಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

  • ಆಂಧ್ರದ ವಿರೋಧ ಪಕ್ಷದ ನಾಯಕ ಚಂದ್ರಬಾಬು ನಾಯ್ಡುಗೆ ಕೊರೊನಾ

    ಆಂಧ್ರದ ವಿರೋಧ ಪಕ್ಷದ ನಾಯಕ ಚಂದ್ರಬಾಬು ನಾಯ್ಡುಗೆ ಕೊರೊನಾ

    ಹೈದರಾಬಾದ್: ಆಂಧ್ರ ಪ್ರದೇಶದ ವಿರೋಧ ಪಕ್ಷದ ನಾಯಕ ಎನ್.ಚಂದ್ರಬಾಬು ನಾಯ್ಡು ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತಂತೆ ಚಂದ್ರಬಾಬು ನಾಯ್ಡು ಅವರು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

    ತೆಲುಗು ದೇಶಂ ಪಕ್ಷ(ಟಿಡಿಪಿ) ಮುಖ್ಯಶ್ಥರಾಗಿರುವ ಚಂದ್ರಬಾಬು ನಾಯ್ಡು ಅವರು, ನಾನು ಕೋವಿಡ್-19 ಟೆಸ್ಟ್ ಮಾಡಿಸಿಕೊಂಡಿದ್ದು, ಈ ವೇಳೆ ನನಗೆ ಕೊರೊನಾ ಪಾಸಿಟಿವ್ ಬಂದಿದೆ. ನನಗೆ ಸೌಮ್ಯ ರೋಗಲಕ್ಷಣಗಳಿದ್ದು, ಇದೀಗ ಮನೆಯಲ್ಲಿಯೇ ಕ್ವಾರಂಟೈನ್‍ನಲ್ಲಿದ್ದೇನೆ ಮತ್ತು ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇನೆ. ನನ್ನ ಜೊತೆ ಸಂಪರ್ಕಕ್ಕೆ ಬಂದಿದ್ದ ಎಲ್ಲರೂ ಆದಷ್ಟು ಬೇಗ ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ವಿನಂತಿಸುತ್ತೇನೆ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಮತ್ತು ನಿಮ್ಮ ಬಗ್ಗೆ ಕಾಳಜಿ ವಹಿಸಿ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ಕೊಟ್ಟ ಮಹೇಶ್ ಸವಾನಿ

    ಆಂಧ್ರಪ್ರದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು 30,000 ಗಡಿ ದಾಟಿ 30,182 ಕ್ಕೆ ತಲುಪಿದೆ. ಸೋಮವಾರ ರಾಜ್ಯದಲ್ಲಿ 4,108 ಕೊರೊನಾ ಹೊಸ ಪ್ರಕರಣಗಳು ವರದಿಯಾಗಿದ್ದು, ವಿಶಾಖಪಟ್ಟಣಂ ಜಿಲ್ಲೆಯಲ್ಲಿ 1,018 ಮತ್ತು ಚಿತ್ತೂರಿನಲ್ಲಿ 1,004 ಹೊಸ ಪ್ರಕರಣಗಳು ದಾಖಲಾಗಿದೆ. ಇದನ್ನೂ ಓದಿ: ರಜನಿಕಾಂತ್ ಪುತ್ರಿಗೆ ಡಿವೋರ್ಸ್ ನೀಡಿದ ಧನುಷ್

  • ಸಂಕ್ರಾಂತಿ ವೇಳೆ ಕೋಳಿ ಅಂಕಕ್ಕೆ ಬ್ರೇಕ್ ಹಾಕಲು ಪೊಲೀಸರು ಸಜ್ಜು

    ಸಂಕ್ರಾಂತಿ ವೇಳೆ ಕೋಳಿ ಅಂಕಕ್ಕೆ ಬ್ರೇಕ್ ಹಾಕಲು ಪೊಲೀಸರು ಸಜ್ಜು

    ಅಮರಾವತಿ: ದಕ್ಷಿಣ ಭಾರತದ ಹೆಚ್ಚಿನ ಕಡೆಗಳಲ್ಲಿ ನಡೆಸಲಾಗುವ ಜೂಜಿನ ಆಟ ಕೋಳಿ ಅಂಕಕ್ಕೆ ಆಂಧ್ರಪ್ರದೇಶದಲ್ಲಿ ಬ್ರೇಕ್ ಹಾಕಲು ಪೊಲೀಸರು ಮುಂದಾಗಿದ್ದಾರೆ. ಸಂಕ್ರಾಂತಿಗೆ ಕೆಲವೇ ದಿನಗಳು ಬಾಕಿ ಇರುವಾಗ ಕೋಳಿ ಅಂಕ ಜನರು ಸಜ್ಜಾಗುತ್ತಿದ್ದಂತೆ ಪೊಲೀಸರು ಅದರ ನಿರ್ಬಂಧದ ಕಟ್ಟೆಚ್ಚರಿಕೆ ನೀಡಿದ್ದಾರೆ.

    ಕೋಳಿ ಅಂಕ ನಿಷೇಧ ಕೆಲವು ವರ್ಷಗಳ ಹಿಂದೆಯಷ್ಟೇ ಜಾರಿಯಾಗಿತ್ತು. ಹೀಗಿದ್ದರೂ ಜನರು ಅದನ್ನು ಮರೆತು ಮತ್ತೆ ಕೋಳಿ ಅಂಕಕ್ಕೆ ಸಜ್ಜಾಗುತ್ತಿದ್ದಾರೆ. ಮುಖ್ಯವಾಗಿ ಆಂಧ್ರಪ್ರದೇಶದ ಪೂರ್ವ ಹಾಗೂ ಪಶ್ಚಿಮ ಗೋದಾವರಿ ಜಿಲ್ಲೆಗಳಲ್ಲಿ ಕೋಳಿ ಅಂಕ ಹಾಗೂ ಬೆಟ್ಟಿಂಗ್ ನಡೆಯುವ ಪ್ರಮುಖ ಕೇಂದ್ರಗಳೆಂದು ವರದಿಯಾಗಿದೆ. ಇದನ್ನೂ ಓದಿ: ಪುಷ್ಪ ಸಿನಿಮಾ ಮಾದರಿಯಲ್ಲಿ ದರೋಡೆ – ಇಬ್ಬರು ಹೆಡ್ ಕಾನ್‍ಸ್ಟೇಬಲ್ ಸಸ್ಪೆಂಡ್

    ಮಂಗಳವಾರ ಪೊಲೀಸರು ಸಂಕ್ರಾಂತಿಗೆಂದು ಸಿದ್ಧಪಡಿಸಿದ್ದ 4 ಕೋಳಿಗಳನ್ನು ಸೆರಹಿಡಿದು, ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ಪಶ್ಚಿಮ ಗೋದಾವರಿಯ ಎಲೂರಿನಲ್ಲಿ ಬೆಟ್ಟಿಂಗ್ ದಂಧೆಯೊಂದನ್ನು ಬೇಧಿಸಿ 1.20 ಲಕ್ಷ ರೂ.ಯನ್ನು ವಶಪಡಿಸಿಕೊಂಡಿದ್ದಾರೆ.

    ಕೋಳಿ ಅಂಕದಲ್ಲಿ ಪಂಟರ್ ಕೋಳಿಗಳ ಕಾಲಿಗೆ ಚಿಕ್ಕ ಕತ್ತಿಯನ್ನು ಕಟ್ಟಿ ಕಾಳಗಕ್ಕೆ ಬಿಡಲಾಗುತ್ತದೆ. ಎರಡು ಕೋಳಿಗಳಲ್ಲಿ ಯಾವುದಾದರೂ ಒಂದು ಸಾಯುವ ವರೆಗೂ ಕಾಳಗ ಮುಂದುವರಿಯುತ್ತದೆ. ಇದರಲ್ಲಿ ಪ್ರಾಣಿ ಹಿಂಸೆಯೊಂದಿಗೆ ಬೆಟ್ಟಿಂಗ್ ಕೂಡಾ ನಡೆಯುವ ಕಾರಣ ಈ ಆಟವನ್ನು ದಕ್ಷಿಣ ಭಾರತ ರಾಜ್ಯಗಳಲ್ಲಿ ನಿಷೇಧಿಸಲಾಗಿದೆ. ಇದನ್ನೂ ಓದಿ: ಹಿಟ್ಟಿನ ಮೇಲೆ ಉಗುಳಿ ರೊಟ್ಟಿ ಮಾಡಿದವನು ಸೇರಿ 5 ಜನ ಅರೆಸ್ಟ್

    ಇಂತಹ ಕಾನೂನು ಬಾಹಿರ ಆಟಗಳಲ್ಲಿ ತೊಡಗಿಗೊಳ್ಳುವುದು ಅಥವಾ ಪ್ರೋತ್ಸಾಹಿಸುವುದು ತಿಳಿದು ಬಂದಲ್ಲಿ ಕಾನೂನು ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತದೆ.

  • ಕಾರಿಗೆ ಕ್ಯಾಂಟರ್ ಡಿಕ್ಕಿ – ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವು

    ಕಾರಿಗೆ ಕ್ಯಾಂಟರ್ ಡಿಕ್ಕಿ – ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವು

    ಚಿಕ್ಕಬಳ್ಳಾಪುರ: ಕ್ಯಾಂಟರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಅಯ್ಯಪ್ಪ ಭಕ್ತರಿಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.

    ಧರಣೀಶ್(22) ನಿರಂಜನ್ ಸಿಂಗ್(54) ಮೃತರು. ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ದೊಡ್ಡಪ್ಯಾಯಲಗುರ್ಕಿ ಬಳಿ ಈ ಅಪಘಾತ ಸಂಭವಿಸಿದೆ. ಮೃತರಿಬ್ಬರನ್ನು ಆಂಧ್ರ ಮೂಲದ ಗುಂತಕಲ್ ನಿವಾಸಿಗಳೆಂದು ಗುರುತಿಸಲಾಗಿದೆ.

    ಕೇರಳದ ಶಬರಿಮಲೆಯಿಂದ ಆಂಧ್ರಕ್ಕೆ ವಾಪಾಸ್ಸಾಗುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಕಾರು ಪಂಕ್ಚರ್ ಆಗಿತ್ತು. ಇದರಿಂದಾಗಿ ಕಾರು ಹೆದ್ದಾರಿ ಮಧ್ಯೆ ನಿಂತಿತ್ತು. ಈ ಕಾರಿನಲ್ಲಿ ಒಟ್ಟು 5 ಮಂದಿ ಪ್ರಯಾಣಿಸುತ್ತಿದ್ದರು. ಪಂಕ್ಚರ್ ಆದ ಕಾರಿನಿಂದ ನಾಲ್ವರು ಕೆಳಗೆ ಇಳಿದಿದ್ದರು. ನಿರಂಜನ್ ಸಿಂಗ್ ಮಾತ್ರ ಕಾರಲ್ಲೇ ನಿದ್ದೆ ಮಾಡುತ್ತಿದ್ದು, ಧರಣೀಶ್ ಸ್ಟೆಪ್ನಿ ಟೈರ್ ತೆಗೆದುಕೊಳ್ಳುವ ಸಲುವಾಗಿ ಡಿಕ್ಕಿ ತೆಗೆದು ಲಗೇಜ್ ಕೆಳಗೆ ಇಳಿಸಿಕೊಳ್ಳುತ್ತಿದ್ದ. ಈ ವೇಳೆ ಹೆದ್ದಾರಿಯಲ್ಲಿ ಅತಿ ವೇಗವಾಗಿ ಬಂದಿರುವ ಕ್ಯಾಂಟರ್ ನಿಂತಿದ್ದ ಕಾರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಿರಂಜನ್ ಸಿಂಗ್ ಹಾಗೂ ಧರಣೀಶ್ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಜೈಲು ಅಧಿಕಾರಿಗಳ ಕಣ್ತಪ್ಪಿಸಲು ಮೊಬೈಲ್ ನುಂಗಿದ ಕೈದಿ!

    POLICE JEEP

    ಪೇರೇಸಂದ್ರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನಗಳನ್ನು ಸ್ಥಳಾಂತರಿಸಿ ಮೃತದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಪೇರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಡ್ರ್ಯಾಗನ್ ಫ್ರೂಟ್‍ನಲ್ಲಿ ಕೊರೊನಾ!

     

  • ‘RRR’ ಸಿನಿಮಾ ಬಿಡುಗಡೆಯಾಗಬಾರದು: ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ

    ‘RRR’ ಸಿನಿಮಾ ಬಿಡುಗಡೆಯಾಗಬಾರದು: ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ

    ಹೈದರಾಬಾದ್: ‘RRR’ ಸಿನಿಮಾ ವಿರುದ್ಧ ವಿದ್ಯಾರ್ಥಿನಿಯೊಬ್ಬಳು ಹೈಕೋರ್ಟ್ ಮೆಟ್ಟಿಲೇರಿದ್ದಾಳೆ.

    ಆಂಧ್ರಪ್ರದೇಶದ ವಿದ್ಯಾರ್ಥಿನಿ ಅಲ್ಲೂರಿ ಸೌಮ್ಯ ಅವರು ತೆಲಗಾಣ ಹೈಕೋರ್ಟ್‍ನಲ್ಲಿ ಎಸ್‍ಎಸ್ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ‘RRR’ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಸಲ್ಲಿಸಿದ್ದಾರೆ.

    ಈ ಸಿನಿಮಾದಲ್ಲಿ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮ ರಾಜು ಮತ್ತು ಕೊಮ್ಮರಂ ಭೀಮ್ ಪಾತ್ರ ಬರುತ್ತದೆ. ಈ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ಇತಿಹಾಸವನ್ನು ಈ ಸಿನಿಮಾದಲ್ಲಿ ತಿರುಚಲಾಗಿದೆ. ಹಾಗಾಗಿ ಈ ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ನೀಡಬಾರದು. ಅಷ್ಟೇ ಅಲ್ಲದೇ ‘RRR’ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

    ಅಲ್ಲೂರಿ ಸೀತಾರಾಮ ರಾಜು ಮತ್ತು ಕೊಮ್ಮರಂ ಭೀಮ್ ಪಾತ್ರದಲ್ಲಿ ರಾಮ್ ಚರಣ್ ಮತ್ತು ಜೂನಿಯರ್ ಎನ್‍ಟಿಆರ್ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾ ಜನವರಿ 7 ರಂದು ಬಿಡುಗಡೆಯಾಗಬೇಕಿತ್ತು, ಆದರೆ ಕೋವಿಡ್-19 ಪರಿಣಾಮ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.

  • ಮೀನುಗಾರರ 2 ಗುಂಪುಗಳ ನಡುವೆ ಕಿತ್ತಾಟ- 7 ಮಂದಿಗೆ ಗಾಯ

    ಮೀನುಗಾರರ 2 ಗುಂಪುಗಳ ನಡುವೆ ಕಿತ್ತಾಟ- 7 ಮಂದಿಗೆ ಗಾಯ

    ಅಮರಾವತಿ: ಮೀನುಗಾರರ 2 ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ 7 ಮಂದಿ ಗಾಯಗೊಂಡಿದ್ದು, 6 ದೋಣಿಗಳಿಗೆ ಬೆಂಕಿ ಹಚ್ಚಿ ಸುಟ್ಟಿದ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ.

    ಬಂಗಾಳಕೊಲ್ಲಿಯ ನಿರ್ಬಂಧಿತ ಪ್ರದೇಶದಲ್ಲಿ ರಿಂಗ್ ನೆಟ್ ಬಳಕೆಗೆ ಸಂಬಂಧಿಸಿ ವಾದ ನಡೆದಿತ್ತು. ವಾದ ಮಿತಿ ಮೀರಿ ಪರಸ್ಪರ ಕಿತ್ತಾಟ ನಡೆದಿದೆ. ಜೊತೆಗೆ ಒಬ್ಬರ ದೋಣಿ ಮೇಲೆ ಇನ್ನೊಬ್ಬರು ದಾಳಿ ನಡೆಸಿದ್ದಾರೆ. ಇದರಿಂದಾಗಿ ಹಲವರು ದೋಣಿಯಿಂದ ಕೆಳಗೆ ಬಿದ್ದು ಗಾಯಗಳಾಗಿದೆ. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು, ಮೀನುಗಾರರನ್ನು ಸಮಾಧಾನಪಡಿಸಿ ಹೆಚ್ಚಿನ ಅನಾಹುತಗಳನ್ನು ತಡೆದಿದ್ದಾರೆ.

    POLICE JEEP

    ಈ ಹಿಂದೆಯೂ ಸಾಂಪ್ರದಾಯಿಕ ಬಲೆ ಬಳಸುವ ಮೀನುಗಾರರು ಮತ್ತು ರಿಂಗ್ ನೆಟ್‌ಗಳನ್ನು ಬಳಸುವವರ ನಡುವೆ ಗಲಾಟೆ ನಡೆದಿತ್ತು. ಕರಾವಳಿಯ 8 ಕಿಮೀ ವ್ಯಾಪ್ತಿಯಲ್ಲಿ ರಿಂಗ್ ನೆಟ್ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ಆದರೂ ಇದನ್ನು ಸರಿಯಾಗಿ ಪಾಲಿಸುತ್ತಿಲ್ಲ. ಈ ಬಗ್ಗೆ ಪೊಲೀಸ್ ಕಮಿಷನರ್ ಮನೀಶ್ ಕುಮಾರ್ ಸಿನ್ಹಾ ಮಾತನಾಡಿ, ಗಲಾಟೆ ನಡೆದ ವಾಸವಾನಿಪಾಲೆಂ ಮತ್ತು ಜಲಾರಿಪೇಟಾ ಪ್ರದೇಶಗಳಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೆರಿಗೆಗಾಗಿ ಗರ್ಭಿಣಿಯನ್ನು ಮಂಚದ ಮೇಲೆ ಮಲಗಿಸಿ ಹೊತ್ತೊಯ್ದ ಗ್ರಾಮಸ್ಥರು!

    ಸಾಂಪ್ರದಾಯಿಕ ಮೀನುಗಾರರು ಈ ಬಲೆಗಳ ಬಳಕೆಯನ್ನು ವಿರೋಧಿಸುತ್ತಾರೆ. ಏಕೆಂದರೆ ಅದು ಸುತ್ತಲಿರುವ ಎಲ್ಲಾ ಮೀನುಗಳನ್ನು ಸೆರೆಹಿಡಿಯುತ್ತದೆ. ಇದರಿಂದಾಗಿ ಸ್ಥಳೀಯ ಮೀನುಗಾರರಿಗೆ ನಷ್ಟವಾಗುತ್ತದೆ. ಇದರಿಂದಾಗಿ 2020ರ ಡಿಸೆಂಬರ್‌ನಲ್ಲಿ ಆಂಧ್ರಪ್ರದೇಶ ಸರ್ಕಾರವು ರಿಂಗ್ ನೆಟ್‌ಗಳನ್ನು ಬಳಸುವುದನ್ನು ನಿಷೇಧಿಸಿತ್ತು. ಇದನ್ನೂ ಓದಿ: ಆಸ್ತಿ ವಿವಾದಕ್ಕೆ 70ರ ತಂದೆಯ ಕತ್ತು ಸೀಳಿ ಹತ್ಯೆಗೈದ ಮಗ

  • 3 ವರ್ಷದಿಂದ ಗೆಳತಿ ನೋಡಲು ಸಾಧ್ಯವಾಗಿಲ್ಲ ಎಂದು ಪ್ರಾಣ ಬಿಟ್ಟ ಪ್ರಿಯಕರ

    3 ವರ್ಷದಿಂದ ಗೆಳತಿ ನೋಡಲು ಸಾಧ್ಯವಾಗಿಲ್ಲ ಎಂದು ಪ್ರಾಣ ಬಿಟ್ಟ ಪ್ರಿಯಕರ

    ಹೈದರಾಬಾದ್: ಕೊರೊನಾ ಕಾರಣದಿಂದ ಗೆಳತಿಯನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ನ್ಯೂ ಇಯರ್‌ಗೆ ಗೆಳತಿ ನೋಡಲು ಹೋಗಲು ಸಾಧ್ಯವಾಗದ ಕಾರಣ ಮನನೊಂದ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

    ವಿನೀತ್(22) ಮೃತ ಯುವಕ. ಈತ ಉತ್ತರ ಪ್ರದೇಶ ಮೂಲದವನಾಗಿದ್ದಾನೆ. ಸೋಂಕು ಹೆಚ್ಚಾಗಿರುವ ಕಾರಣ ಪ್ರಿಯತಮೆಯನ್ನು ನೋಡಲು ಸಾಧ್ಯವಾಗುತ್ತಿಲ್ಲ ಎನ್ನುವ ವಿಚಾರವಾಗಿ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಪಹದಿ ಶರೀಫ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಸ್ ಅಪಘಾತದಲ್ಲಿ 22 ಮಂದಿ ಸಾವಿಗೆ ಕಾರಣನಾದ ಚಾಲಕನಿಗೆ 190 ವರ್ಷ ಜೈಲು ಶಿಕ್ಷೆ

    ಶ್ರೀನಗರ ಕಾಲೋನಿಯ ಹೋಟೆಲ್‍ವೊಂದರಲ್ಲಿ ಕೆಲಸಕ್ಕೆ ಸೇರಿದ್ದ ವಿನೀತ್ ಅದೇ ಪ್ರದೇಶದಲ್ಲೇ ವಾಸವಾಗಿದ್ದ. ಹುಟ್ಟೂರಾದ ಉತ್ತರ ಪ್ರದೇಶದಲ್ಲಿ ವಿನೀತ್ ಯುವತಿಯನ್ನು ಪ್ರೀತಿಸಿ ಮದುವೆ ಆಗುವುದಾಗಿ ಹೇಳಿದ್ದ. ಒಳ್ಳೆ ಜೀವನ ನಡೆಸಲು ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕೆಲಸವನ್ನು ಹುಡುಕಿಕೊಂಡು ಹೈದರಾಬಾದ್‍ಗೆ ಬಂದಿದ್ದ. ಇದನ್ನೂ ಓದಿ: ಪಾಕ್ ಪ್ರಧಾನಿ, ಮಾಜಿ ಪತ್ನಿಯ ಕಾರಿನ ಮೇಲೆ ಗುಂಡಿನ ದಾಳಿ

    ವಿನೀತ್ ನಗರಕ್ಕೆ ಬಂದ ಮೊದಲ ವರ್ಷವೇ ಕೋವಿಡ್ ಲಾಕ್‍ಡೌನ್‍ನಿಂದ ಮತ್ತೆ ಯುಪಿಗೆ ಹೋಗಲು ಸಾಧ್ಯವಾಗಲಿಲ್ಲ. ಕೊರೊನಾ ಸಂಕಷ್ಟದಿಂದ ಸಾಕಷ್ಟು ಹಣದ ಸಮಸ್ಯೆಯನ್ನು ಈತ ಎದುರಿಸಿದ್ದಾನೆ. ಇದರಿಂದಾಗಿ ಊರಿಗೆ ಹೋಗಲು ಆಗಲಿಲ್ಲ. ಪ್ರತಿದಿನ ಕೆಲಸದ ನಂತರ ಗಂಟೆಗಟ್ಟಲೇ ತನ್ನ ಪ್ರೇಯಸಿ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದ.

    ಒಂದು ದಿನ ಎಂದಿನಂತೆ ಕೆಲಸ ಮುಗಿಸಿ ಪ್ರೇಯಸಿಗೆ ಫೋನ್ ಮಾಡಿದಾಗ ಆಕೆ ಸಿಟ್ಟಾಗಿದ್ದಾಳೆ. ಮೂರು ವರ್ಷದಿಂದ ಯಾಕೆ ಬಂದಿಲ್ಲ ಎಂದು ಪ್ರಶ್ನಿಸಿದ್ದಾಳೆ. ಅಲ್ಲದೆ ನ್ಯೂ ಇಯರ್‌ಗೆ ಬರುವುದಾಗಿ ಹೇಳಿದ್ದ ವಿನೀತ್ಗೆ ಊರಿಗೆ ಊಗಲು ಸಾಧ್ಯವಾಗಿಲ್ಲ. ಈ ವಿಚಾರವಾಗಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

  • 2021ರಲ್ಲಿ 1 ಕೋಟಿ ಭಕ್ತರು ತಿರುಮಲಕ್ಕೆ ಭೇಟಿ – ಹುಂಡಿಯಲ್ಲಿ 833 ಕೋಟಿ ರೂ. ಸಂಗ್ರಹ

    2021ರಲ್ಲಿ 1 ಕೋಟಿ ಭಕ್ತರು ತಿರುಮಲಕ್ಕೆ ಭೇಟಿ – ಹುಂಡಿಯಲ್ಲಿ 833 ಕೋಟಿ ರೂ. ಸಂಗ್ರಹ

    ಹೈದರಾಬಾದ್: ವಿಶ್ವದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಆಂಧ್ರಪ್ರದೇಶದ ಪ್ರಸಿದ್ಧ ದೇವಾಲಯ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ಈ ವರ್ಷ ಕೋಟಿ, ಕೋಟಿ ಹಣ ಹರಿದು ಬಂದಿದ್ದು, ಸುಮಾರು 833 ಕೋಟಿ ರೂಪಾಯಿ ಸಂಗ್ರಹವಾಗಿದೆ.

    ತಿರುಪತಿ ದೇವಾಲಯದ (ಟಿಟಿಡಿ) ಮಂಡಳಿಯು ನಡೆಸಿದ ಹುಂಡಿ ಎಣಿಕೆಯಲ್ಲಿ 2021ರ ಜನವರಿ 1 ರಿಂದ ಡಿಸೆಂಬರ್ 30ರವರೆಗೂ 833 ಕೋಟಿ ರೂ. ಸಂಗ್ರಹವಾಗಿದೆ. ಕೊರೊನಾ ಎರಡನೇ ಅಲೆಯ ನಂತರ ಈ ವರ್ಷದಲ್ಲಿ ಸುಮಾರು 1.4 ಕೋಟಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದೇವಾಲಯ ಆಡಳಿತ ಮಂಡಳಿಯು 5.96 ಕೋಟಿ ಲಡ್ಡು ಪ್ರಸಾದವನ್ನು ಭಕ್ತರಿಗೆ ನೀಡಿದೆ ಮತ್ತು ಸುಮಾರು 1.37 ಕೋಟಿ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಗಿದೆ. ದೇವಾಲಯಕ್ಕೆ ಭೇಟಿ ನೀಡಿದ 1.4 ಕೋಟಿ ಭಕ್ತರಲ್ಲಿ 48.75 ಲಕ್ಷ ಮಂದಿ ದೇವರಿಗೆ ಮುಡಿ ನೀಡಿದ್ದಾರೆ. ಇದನ್ನೂ ಓದಿ: ಮತ್ತೆ ಕೋಟ್ಯಧೀಶನಾದ ಮಲೆ ಮಹದೇಶ್ವರ – ಹುಂಡಿಯಲ್ಲಿ 2.27 ಕೋಟಿ ರೂ. ಸಂಗ್ರಹ

    ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಬ್ರಹ್ಮರಥೋತ್ಸವಕ್ಕೆ ಭಕ್ತರಿಗೆ ನಿಷೇಧ ಹೇರಲಾಗಿದೆ. ಇದನ್ನೂ ಓದಿ: ಕೊರೊನಾ ಕಾಲದಲ್ಲೂ ಮಾದಪ್ಪನ ಹುಂಡಿಯಲ್ಲಿ 2.62 ಕೋಟಿ ಸಂಗ್ರಹ

  • ಆಯಾ ತಪ್ಪಿ ನದಿಗೆ ಬಿದ್ದ ಬಸ್ – 9 ಪ್ರಯಾಣಿಕರು ಬಲಿ

    ಆಯಾ ತಪ್ಪಿ ನದಿಗೆ ಬಿದ್ದ ಬಸ್ – 9 ಪ್ರಯಾಣಿಕರು ಬಲಿ

    ಹೈದರಾಬಾದ್: ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುಡೆಂ ಬಳಿ ಇಂದು ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಎಪಿಎಸ್‌ಆರ್‌ಟಿಸಿ)ಯ ಬಸ್ ಜಿಲ್ಲೇರು ವಾಗು(ಜಲ್ಲೇರು ಹೊಳೆ)ಯಲ್ಲಿ ಬಿದ್ದಿದೆ. ಈ ಪರಿಣಾಮ ಒಂಬತ್ತು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

    ತೆಲಂಗಾಣದ ಅಶ್ವರಾವ್‍ಪೇಟೆಯಿಂದ ಜಂಗಾರೆಡ್ಡಿಗುಡೆಮ್‍ಗೆ ತೆರಳುತ್ತಿದ್ದ ಬಸ್‍ನಲ್ಲಿ ಸುಮಾರು 35 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ಎಪಿಎಸ್‌ಆರ್‌ಟಿಸಿ ಬಸ್ ಚಾಲಕ ಜಲ್ಲೇರು ನದಿಗೆ ಅಡ್ಡಲಾಗಿರುವ ಸೇತುವೆಯ ಮೇಲೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಲಾರಿಯನ್ನು ತಪ್ಪಿಸಲು ಪ್ರಯತ್ನಿಸಿದ್ದಾನೆ. ಇದನ್ನೂ ಓದಿ: ಶ್ರೀನಿವಾಸ್ ಪೂಜಾರಿ ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ: ಬಿ.ಎಲ್.ಸಂತೋಷ್

    ಈ ಪರಿಣಾಮ ಬಸ್ ಸೇತುವೆಯ ರೇಲಿಂಗ್‍ಗೆ ಡಿಕ್ಕಿ ಹೊಡೆದು ನದಿಯೊಳಗೆ ಬಿದ್ದಿದೆ. ಅದಕ್ಕೆ ಬಸ್ ನಲ್ಲಿದ್ದ ಪ್ರಯಾಣಿಕರಲ್ಲಿ 9 ಜನರು ಸಾವನ್ನಪ್ಪಿದ್ದಾರೆ.

    ಪಶ್ಚಿಮ ಗೋದಾವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ದೇವ್ ಶರ್ಮಾ ಅವರು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಇದುವರೆಗೆ ನಾವು ಐದು ಮಹಿಳಾ ಪ್ರಯಾಣಿಕರು ಸೇರಿದಂತೆ ಎಂಟು ಮೃತದೇಹಗಳನ್ನು ಹೊರತೆಗೆದಿದ್ದೇವೆ. ಅಪಘಾತ ನಡೆದ ತಕ್ಷಣ ಸ್ಥಳೀಯ ಜನರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಮಾಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ:  ಪಠ್ಯಪುಸ್ತಕ ವಿತರಿಸದಿರುವುದು ಶಿಕ್ಷಣ ಸಚಿವರ ಅಸಮರ್ಥತೆಯ ಸಂಕೇತ: ಎಎಪಿ

  • ತಿರುಪತಿಗೆ 3 ಕೋಟಿ ರೂ. ಮೌಲ್ಯದ ವಜ್ರ ಖಚಿತ ಚಿನ್ನಾಭರಣ ಕಾಣಿಕೆ ನೀಡಿದ ಅನಾಮಧೇಯ ಭಕ್ತ

    ತಿರುಪತಿಗೆ 3 ಕೋಟಿ ರೂ. ಮೌಲ್ಯದ ವಜ್ರ ಖಚಿತ ಚಿನ್ನಾಭರಣ ಕಾಣಿಕೆ ನೀಡಿದ ಅನಾಮಧೇಯ ಭಕ್ತ

    ಅಮರಾವತಿ: ತಿರುಪತಿ ತಿಮ್ಮಪ್ಪನಿಗೆ ಅನಾಮಧೇಯ ಭಕ್ತನೊಬ್ಬ 3 ಕೋಟಿ ರೂಪಾಯಿ ಮೌಲ್ಯದ ವಜ್ರ ಖಚಿತ ಚಿನ್ನಾಭರಣ ಕಾಣಿಕೆಯಾಗಿ ನೀಡುವ ಮೂಲಕ  ಸುದ್ದಿಯಾಗಿದ್ದಾರೆ.

    ಕೆಲವು ದಿನಗಳ ಹಿಂದೆ ಅನಾಮಧೇಯ ಭಕ್ತರೊಬ್ಬರು ತಿರುಪತಿ ದೇವರಿಗೆ 3 ಕೋಟಿ ರೂ. ಬೆಲೆ ಬಾಳುವ ವಜ್ರ ಮತ್ತು ಚಿನ್ನದಿಂದ ಮಾಡಲಾದ ಹಸ್ತವನ್ನು ಕಾಣಿಕೆಯಾಗಿ ನೀಡಿದ್ದಾರೆ. ತನ್ನ ಹೆಸರನ್ನು ಹೇಳಲು ಅವರು ಇಚ್ಛಿಸಿಲ್ಲ. ವೆಂಕಟೇಶ್ವರನಿಗೆ ಕಾಣಿಕೆಯಾಗಿ ನೀಡಿರುವ ಈ ವಜ್ರ ಖಚಿತವಾದ ಚಿನ್ನದ ಹಸ್ತಗಳನ್ನು ನಾನು ಭಕ್ತಿಯಿಂದ ನೀಡುತ್ತಿದ್ದೇನೆ, ಅದಕ್ಕೆ ಪ್ರಚಾರ ಬೇಕಾಗಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮಕ್ಕಳಿಗೂ ವಕ್ಕರಿಸಿತು ಹೊಸ ತಳಿ- ಮಹಾರಾಷ್ಟ್ರದಲ್ಲಿ 3 ವರ್ಷದ ಮಗುವಿನಲ್ಲಿ ಓಮಿಕ್ರಾನ್‌ ಪತ್ತೆ

    ಈ ಚಿನ್ನದ ಆಭರಣ ಬರೋಬ್ಬರಿ 5.3 ಕೆಜಿ ಮೌಲ್ಯದ್ದಾಗಿದೆ. ಇದಕ್ಕೆ ಸುಮಾರು 3 ಕೋಟಿ ವೆಚ್ಚವಾಗಿದೆ. ಈ ಆಭರಣವನ್ನು ತಿರುಪತಿ ದೇಗುಲದ ಅಧಿಕಾರಿಗಳಿಗೆ ಆ ಭಕ್ತರು ನೀಡಿದ್ದಾರೆ. ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ದಿನವೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಿರುತ್ತಾರೆ. ದೇಶದ ಶ್ರೀಮಂತ ದೇವಸ್ಥಾನಗಳಲ್ಲಿ ತಿರುಮಲ ತಿರುಪತಿ ದೇವಸ್ಥಾನವು ಒಂದಾಗಿದೆ.