Tag: Andhra Pradesh

  • ವಿಮಾನಗಳ ಬೆನ್ನಲ್ಲೇ ತಿರುಪತಿ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ!

    ವಿಮಾನಗಳ ಬೆನ್ನಲ್ಲೇ ತಿರುಪತಿ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ!

    ಅಮರಾವತಿ: ಆಂಧ್ರಪ್ರದೇಶದ (Andhra Pradesh) ತಿರುಪತಿಯ (Tirupati) 3 ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ (Bomb Threats) ಬಂದಿದೆ. ಇಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ.

    ಈ ಬಗ್ಗೆ ಹೊಟೆಲ್‌ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು, ಶ್ವಾನದಳ ಹಾಗೂ ಬಾಂಬ್ ಸ್ಕ್ವಾಡ್‌ನೊಂದಿಗೆ ಹೊಟೇಲ್‌ಗಳಲ್ಲಿ ಶೋಧ ನಡೆಸಿದ್ದಾರೆ. ಆದರೆ ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಚಿವ ವಿ.ಸೋಮಣ್ಣಗೆ ಬಿಗ್ ರಿಲೀಫ್ – ಅಕ್ರಮ ಆಸ್ತಿ ಗಳಿಕೆ ಆರೋಪದ ಪ್ರಕರಣ ವಜಾ

    ಬೆದರಿಕೆ ಇಮೇಲ್ ಕೇವಲ ವದಂತಿ ಎಂದು ಪೊಲೀಸರು ದೃಢಪಡಿಸಿದ್ದಾರೆ. ಇದು ಕೇವಲ ಜನರನ್ನು ಆತಂಕಕ್ಕೊಳಪಡಿಸಲು ಈ ರೀತಿ ಮಾಡಿದ್ದಾರೆ. ಪೊಲೀಸರು ಈಗ ಇಮೇಲ್ ಕಳುಹಿಸಿರುವವರ ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ. ಅಲ್ಲದೇ ಹೋಟೆಲ್‌ಗಳಿಗೆ ಭೇಟಿಕೊಟ್ಟವರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

    ಇಮೇಲ್‌ನಲ್ಲಿ ಈ ವರ್ಷದ ಫೆಬ್ರವರಿಯಲ್ಲಿ ಅರೆಸ್ಟ್‌ ಆದ ಮಾದಕವಸ್ತುಗಳ ಜಾಲದ ಕಿಂಗ್‌ಪಿನ್ ಜಾಫರ್ ಸಿದ್ದಿಕ್ ಹೆಸರು ಇದೆ ಎಂದು ಹೇಳಲಾಗಿದೆ.

    ಕಳೆದ 15 ದಿನಗಳಿಂದ ವಿಶ್ವದ ಪ್ರಸಿದ್ಧ ವಿಮಾನಯಾನ ಸಂಸ್ಥೆಗಳ ವಿಮಾನಗಳಿಗೂ ಬಾಂಬ್ ಬೆದರಿಕೆಗಳು ಬಂದಿವೆ. ಶಾಲಾ-ಕಾಲೇಜುಗಳಿಗೂ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿವೆ. ಹೀಗಾಗಿ ಇಂತಹ ಸಂದೇಶಗಳನ್ನು ಕಳುಹಿಸುತ್ತಿರುವ ಜನರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂಬ ಆಗ್ರಹಗಳು ಕೇಳಿಬರುತ್ತಿವೆ. ಇದನ್ನೂ ಓದಿ: ಬಾಬಾ ಸಿದ್ದಿಕ್ ಹತ್ಯೆ ಕೇಸ್‌ – ಪಾಕ್ ಡ್ರೋನ್‌ಗಳ ಮೂಲಕ ಗನ್‌ ಪೂರೈಕೆ?

  • ಬಿಹಾರ, ಆಂಧ್ರಕ್ಕೆ ಬಂಪರ್‌ ಗಿಫ್ಟ್‌ – 6,798 ಕೋಟಿ ಮೊತ್ತದ 2 ರೈಲ್ವೇ ಯೋಜನೆಗಳಿಗೆ ಕೇಂದ್ರ ಕ್ಯಾಬಿನೆಟ್ ಅಸ್ತು

    ಬಿಹಾರ, ಆಂಧ್ರಕ್ಕೆ ಬಂಪರ್‌ ಗಿಫ್ಟ್‌ – 6,798 ಕೋಟಿ ಮೊತ್ತದ 2 ರೈಲ್ವೇ ಯೋಜನೆಗಳಿಗೆ ಕೇಂದ್ರ ಕ್ಯಾಬಿನೆಟ್ ಅಸ್ತು

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕ್ಯಾಬಿನೆಟ್‌ ಗುರುವಾರ ಬಿಹಾರ ಮತ್ತು ಆಂಧ್ರ ಪ್ರದೇಶದ 2 ರೈಲ್ವೆ ಯೋಜನೆಗಳಿಗೆ ಅನುಮೋದನೆ ನೀಡಿದೆ. ಆಂಧ್ರ ಪ್ರದೇಶದ ಅಮರಾವತಿ ಮತ್ತು ಉತ್ತರ ಬಿಹಾರದಿಂದ ಈಶಾನ್ಯ ರಾಜ್ಯಗಳೊಂದಿಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದೆ.

    ಅಮರಾವತಿ ರೈಲ್ವೆ ಯೋಜನೆಯು (Amaravati Railway Projects) 87 ಕಿಮೀ ರೈಲುಮಾರ್ಗ ನಿರ್ಮಿಸುವ ಯೋಜನೆಯಾಗಿದ್ದು, ಸುಮಾರು 2,245 ಕೋಟಿ ರೂ. ವೆಚ್ಚ ಆಗಲಿದೆ ಎಂದು ಅಂದಾಜಿಸಲಾಗಿದೆ. ಈ ಹೊಸ ರೈಲ್ವೆ ಯೋಜನೆಯು ಹೈದರಾಬಾದ್‌, ಚೆನ್ನೈ ಮತ್ತು ಕೋಲ್ಕತ್ತಾದಂತಹ ಪ್ರಮುಖ ನಗರಗಳಿಗೆ ನೇರ ರೈಲ್ವೆ ಸಂಪರ್ಕವನ್ನು ಕಲ್ಪಿಸುತ್ತದೆ. ಅಲ್ಲದೇ ಮಚಲಿಪಟ್ಟಣಂ, ಕೃಷ್ಣಪಟ್ಟಣಂ ಮತ್ತು ಕಾಕಿನಾಡ ಬಂದರುಗಳಿಗೂ ಸಂಪರ್ಕ ಕಲ್ಪಿಸುತ್ತದೆ. ಇದನ್ನೂ ಓದಿ: ಶಿವಮೊಗ್ಗ | ವಾಹನ ತಪಾಸಣೆ ವೇಳೆ ಟ್ರಾಫಿಕ್ ಪೊಲೀಸ್‌ನನ್ನೇ ಬಾನೆಟ್ ಮೇಲೆ ಹೊತ್ತೋಯ್ದ ಕಾರು ಚಾಲಕ

    2ನೇ ಯೋಜನೆಯು ಉತ್ತರ ಬಿಹಾರ (North Bihar) ಮತ್ತು ಈಶಾನ್ಯ ರಾಜ್ಯಗಳ ನಡುವಿನ ಸಂಪರ್ಕ ಹೆಚ್ಚಿಸುವ ಗುರಿ ಹೊಂದಿದೆ, ಇದು 256 ಕಿಮೀ ಉದ್ದದ ರೈಲು ಮಾರ್ಗ ನಿರ್ಮಿಸುವ ಯೋಜನೆಯಾಗಿದೆ. ಡಬಲ್‌ ಲೈನ್‌ ರೈಲು ಮಾರ್ಗ ಇದಾಗಿದ್ದು, 4,553 ಕೋಟಿ ರೂ. ವೆಚ್ಚ ತಗುಲಲಿದೆ ಎಂದು ಅಂದಾಜಿಸಲಾಗಿದೆ. ಈ ಮಾರ್ಗದಲ್ಲಿ ಸುಮಾರು 40 ಸೇತುವೆಗಳೂ ಇರಲಿವೆ. ಜೊತೆಗೆ ಪವಿತ್ರ ನಗರವಾದ ಅಯೋಧ್ಯೆಯನ್ನು ಸೀತಾಮರ್ಹಿಯೊಂದಿಗೆ ಸಂಪರ್ಕಿಸುತ್ತದೆ.

    ಎರಡೂ ಯೋಜನೆಗಳಿಗೆ 6,798 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದ್ದು, ಪ್ರಧಾನಿ ಮೋದಿ ನೇತೃತ್ವದ ಕ್ಯಾಬಿನೆಟ್‌ ಸಮಿತಿ ಹಸಿರು ನಿಶಾನೆ ತೋರಿದೆ. ಇದನ್ನೂ ಓದಿ: ಮಹಾ ಚುನಾವಣೆ: ಅಜಿತ್ ಪವಾರ್ ಬಣಕ್ಕೆ ಸಿಕ್ತು ಗಡಿಯಾರ ಚಿಹ್ನೆ – ಸುಪ್ರೀಂ ಕೋರ್ಟ್ ಅನುಮತಿ

    ಈ ಯೋಜನೆಯ ಅನುಕೂಲವೇನು?
    ಸುಮಾರು 313 ಕಿಮೀ ರೈಲು ಮಾರ್ಗ ಸ್ಥಾಪಿಸುವ ಈ ಯೋಜನೆಯು 168 ಹಳ್ಳಿಗಳನ್ನು ಸಂಪರ್ಕಿಸುತ್ತವೆ. ಸುಮಾರು 12 ಲಕ್ಷ ಜನರಿಗೆ ಅನುಕೂಲ ಒದಗಿಸಲಿದೆ. ಕೃಷಿ ಉತ್ಪನ್ನಗಳು, ರಸಗೊಬ್ಬರ, ಕಲ್ಲಿದ್ದಲು, ಕಬ್ಬಿಣದ ಅದಿರು, ಉಕ್ಕು ಮತ್ತು ಸಿಮೆಂಟ್ ಮುಂತಾದ ಸರಕುಗಳನ್ನು ಸಾಗಾಟಕ್ಕೆ ಹೊಸ ಮಾರ್ಗ ಸಿಕ್ಕಂತಾಗುತ್ತದೆ. ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣದಲ್ಲಿ 98 ಜನಕ್ಕೆ ಜೀವಾವಧಿ – ಕೊಪ್ಪಳ ಜಿಲ್ಲಾ ಕೋರ್ಟ್‌ ಐತಿಹಾಸಿಕ ತೀರ್ಪು!

  • Dana Cyclone | ಒಡಿಶಾ, ಪಶ್ಚಿಮ ಬಂಗಾಳ ಸೇರಿ 5 ರಾಜ್ಯಗಳ 10 ಲಕ್ಷ ಜನರ ಸ್ಥಳಾಂತರ

    Dana Cyclone | ಒಡಿಶಾ, ಪಶ್ಚಿಮ ಬಂಗಾಳ ಸೇರಿ 5 ರಾಜ್ಯಗಳ 10 ಲಕ್ಷ ಜನರ ಸ್ಥಳಾಂತರ

    ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಡಾನಾ ಚಂಡಮಾರುತದ (Dana Cyclone) ಪರಿಣಾಮ ಒಡಿಶಾ, ಪಶ್ಚಿಮ ಬಂಗಾಳ ಸೇರಿ 5 ರಾಜ್ಯಗಳ 10 ಲಕ್ಷ ಜನರನ್ನು ಸುರಕ್ಷಿತ ಸ್ಥಳಾಂತರಿಸಲಿದ್ದಾರೆ.

    ಡಾನಾ ಚಂಡಮಾರುತದಿಂದ ಆಂಧ್ರಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಛತ್ತೀಸ್‌ಗಢದಲ್ಲಿ ಅಪಾಯವಿದೆ ಎಂದು ಭಾರತೀಯ ಹವಾಮಾನ ಇಲಾಖೆ ( Indian Meteorological Department) ಎಚ್ಚರಿಕೆ ನೀಡಿದೆ.ಇದನ್ನೂ ಓದಿ: ಬೆಂಗಳೂರು ಕಟ್ಟಡ ಕುಸಿತ- ಪಿಎಂ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ ಪರಿಹಾರ ಘೋಷಣೆ

    ಈಗಾಗಲೇ ಒಡಿಶಾದಿಂದ 3 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದ್ದು, ಬಂಗಾಳದ 1.14 ಲಕ್ಷ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಚಂಡಮಾರುತ ತ್ರೀವ ರೂಪ ಪಡೆದುಕೊಂಡಿದ್ದು, ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಸೂಚನೆ ನೀಡಲಾಗಿದೆ.

    ಗಾಳಿಯ ವೇಗ ಗಂಟೆಗೆ 120 ಕಿ.ಮೀ. ತಲುಪುವ ಸಾಧ್ಯತೆಯಿದ್ದು, ಪಶ್ಚಿಮ ಬಂಗಾಳದಲ್ಲಿ ವಿಶೇಷವಾಗಿ ಉತ್ತರ ಮತ್ತು ದಕ್ಷಿಣ 24 ಪರಗಣ, ಪುರ್ಬಾ ಮತ್ತು ಪಶ್ಚಿಮ ಮೇದಿನಿಪುರ್, ಝಾರ್‌ಗ್ರಾಮ್, ಕೋಲ್ಕತ್ತಾ, ಹೌರಾ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆಯಾಗುವ ಸಾಧ್ಯತೆಯಿದೆ.

    ಚಂಡಮಾರುತದ ಹಿನ್ನೆಲೆಯಲ್ಲಿ ಎರಡು ನೆರೆಯ ರಾಜ್ಯಗಳ ಮೂಲಕ ಓಡುವ ಸುಮಾರು 300 ರೈಲುಗಳನ್ನು ರದ್ದುಗೊಳಿಸಲಾಗಿದೆ. ಜೊತೆಗೆ ಕೋಲ್ಕತ್ತಾ ವಿಮಾನ ನಿಲ್ದಾಣವು ಇಂದು ಸಂಜೆ 6 ರಿಂದ ನಾಳೆ ಬೆಳಿಗ್ಗೆ 9 ರವರೆಗೆ ಹಾಗೂ ಭುವನೇಶ್ವರ ವಿಮಾನ ನಿಲ್ದಾಣವು ಇಂದು ಸಂಜೆ 5 ರಿಂದ ನಾಳೆ ಬೆಳಿಗ್ಗೆ 9 ರವರೆಗೆ ಕಾರ್ಯಾಚರಣೆ ಸ್ಥಗಿತಗೊಳಿಸಿದೆ.

    ಎನ್‌ಡಿಆರ್‌ಎಫ್ ಒಟ್ಟು 56 ತಂಡಗಳನ್ನು ನಿಯೋಜಿಸಲಾಗಿದ್ದು, ಒಡಿಶಾದಲ್ಲಿ 20 ತಂಡಗಳು ಹಾಗೂ ಪಶ್ಚಿಮ ಬಂಗಾಳದ 17 ತಂಡಗಳನ್ನು ನಿಯೋಜಿಸಲಾಗಿದೆ.

    ಚಂಡಮಾರುತವಾಗಿ ಬದಲಾಗಿರುವ ಡಾನಾ ಗುರುವಾರ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ. ರಾತ್ರಿ ವೇಳೆಗೆ ಒಡಿಶಾದ ಪುರಿ ಮತ್ತು ಬಂಗಾಳದ ಸಾಗರ ದ್ವೀಪಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ. ಒಂದೊಮ್ಮೆ ಚಂಡಮಾರುತ ಪಥ ಬದಲಿಸಿದರೆ ಬಾಂಗ್ಲಾ ದೇಶಕ್ಕೆ ಅಪಾಯ ಎದುರಾಗಬಹುದು ಎನ್ನಲಾಗಿದೆ. ಒಡಿಶಾ, ಆಂಧ್ರ, ಬಂಗಾಳ ಹಾಗೂ ಇನ್ನಿತರ ರಾಜ್ಯಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.ಇದನ್ನೂ ಓದಿ: ಮುಧೋಳದಲ್ಲಿ ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ

  • ಡಾನಾ ಚಂಡಮಾರುತದ ಅಬ್ಬರ – ಆಂಧ್ರ, ತಮಿಳುನಾಡು ಸೇರಿ ನಾಲ್ಕು ರಾಜ್ಯಗಳಲ್ಲಿ ಕಟ್ಟೆಚ್ಚರ

    ಡಾನಾ ಚಂಡಮಾರುತದ ಅಬ್ಬರ – ಆಂಧ್ರ, ತಮಿಳುನಾಡು ಸೇರಿ ನಾಲ್ಕು ರಾಜ್ಯಗಳಲ್ಲಿ ಕಟ್ಟೆಚ್ಚರ

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಡಾನಾ ಚಂಡಮಾರುತದಿಂದ (Cyclone Dana) ಆಂಧ್ರಪ್ರದೇಶ (Andhra Pradesh), ಒಡಿಶಾ (Odisha), ಪಶ್ಚಿಮ ಬಂಗಾಳ (West Bengal) ಮತ್ತು ತಮಿಳುನಾಡಿಗೆ (Tamil Nadu) ಅಪಾಯವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    ಚಂಡಮಾರುತವಾಗಿ ಬದಲಾಗಿರುವ ಡಾನಾ ಗುರುವಾರ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ. ರಾತ್ರಿ ವೇಳೆಗೆ ಒಡಿಶಾದ ಪುರಿ ಮತ್ತು ಬಂಗಾಳದ ಸಾಗರ ದ್ವೀಪದ ನಡ್ವೆ ತೀರ ದಾಟಬಹುದು ಎಂದು ಅಂದಾಜಿಸಲಾಗಿದೆ. ಒಂದೊಮ್ಮೆ ಚಂಡಮಾರುತ ಪಥ ಬದಲಿಸಿದರೆ ಬಾಂಗ್ಲಾ ದೇಶಕ್ಕೆ ಅಪಾಯ ಎದುರಾಗಬಹುದು ಎನ್ನಲಾಗಿದೆ.

    ಒಡಿಶಾ, ಆಂಧ್ರ, ಬಂಗಾಳ ಮತ್ತು ತಮಿಳುನಾಡಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. 40ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು ಮಾಡಲಾಗಿದೆ. 200ಕ್ಕೂ ಹೆಚ್ಚು ರೈಲುಗಳ ಮಾರ್ಗ ಬದಲಿಸಲಾಗಿದೆ.

    ಒಡಿಶಾದಲ್ಲಿ ಕೆಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ. ತಮಿಳುನಾಡಿನಲ್ಲಿ ಈಶಾನ್ಯ ಮಾರುತಗಳು ಚುರುಕಾಗಿ ಚಲಿಸುತ್ತಿರುವುದರಿಂದ ಕರ್ನಾಟಕ ಸೇರಿ ವಿವಿಧೆಡೆ ಮಳೆಯಾಗುತ್ತಿದೆ.

  • ಅಮರಾವತಿ ಡ್ರೋನ್ ಸಮ್ಮೇಳನ 2024 | ಆಕಾಶವನ್ನೇ ಬೆಳಗಿದ 5,500 ಡ್ರೋನ್, 5 ಗಿನ್ನಿಸ್ ರೆಕಾರ್ಡ್

    ಅಮರಾವತಿ ಡ್ರೋನ್ ಸಮ್ಮೇಳನ 2024 | ಆಕಾಶವನ್ನೇ ಬೆಳಗಿದ 5,500 ಡ್ರೋನ್, 5 ಗಿನ್ನಿಸ್ ರೆಕಾರ್ಡ್

    ಅಮರಾವತಿ/ಹೈದರಾಬಾದ್: ಅ.22 ರಂದು ನಡೆದ `ಅಮರಾವತಿ ಡ್ರೋನ್ ಸಮ್ಮೇಳನ 2024′ (Amaravati Drone Summit 2024) ರಲ್ಲಿ 5,500 ಡ್ರೋನ್‌ಗಳಿಂದ ಲೈಟಿಂಗ್ಸ್ ಶೋ ನಡೆಸುವ ಮೂಲಕ 5 ಗಿನ್ನಿಸ್ ದಾಖಲೆಗಳನ್ನು (Guinness records) ನಿರ್ಮಿಸಲಾಯಿತು.

    ಆಂಧ್ರಪ್ರದೇಶದ (Andhra Pradesh) ಪೂರ್ಣಿಮಾ ಘಾಟ್‌ನ ಕೃಷ್ಣಾ ನದಿಯ ದಡದಲ್ಲಿ ನಡೆದ `ಅಮರಾವತಿ ಡ್ರೋನ್ ಸಮ್ಮೇಳನ 2024’ರಲ್ಲಿ 5,500 ಡ್ರೋನ್‌ಗಳನ್ನು ಹಾರಿಸಿ, ರಾಷ್ಟ್ರಧ್ವಜ, ಭಗವಾನ್ ಬುದ್ಧ ಹೀಗೆ ಹಲವಾರು ರೀತಿಯ ಆಕೃತ್ತಿಗಳನ್ನು ಆಕಾಶದಲ್ಲಿ ರಚಿಸಲಾಯಿತು. ಡ್ರೋನ್ ಪ್ರದರ್ಶನದಲ್ಲಿ ಅತೀ ದೊಡ್ಡ ಸೌರಮಂಡಲ, ಅತೀ ದೊಡ್ಡ ವೈಮಾನಿಕ ಲಾಂಛನ, ಅತೀ ದೊಡ್ಡ ಧ್ವಜ ಪ್ರದರ್ಶನ, ಅತೀ ದೊಡ್ಡ ವಿಮಾನದ ವಿನ್ಯಾಸ ಹಾಗೂ ಅತೀ ದೊಡ್ಡ ಭಾರತದ ಪ್ರಮುಖ ಮೈಲುಗಲ್ಲುಗಳನ್ನು ಪ್ರದರ್ಶಿಸಲಾಯಿತು. ಈ ಮೂಲಕ 5 ಗಿನ್ನಿಸ್ ದಾಖಲೆಗಳನ್ನು ನಿರ್ಮಿಸಲಾಯಿತು.ಇದನ್ನೂ ಓದಿ: ಚುನಾವಣೆಗೆ ಮುಂಚೆಯೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ: ಆರಗ ಜ್ಞಾನೇಂದ್ರ

    ಡ್ರೋನ್ ಪದರ್ಶನದ ವೇಳೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು (N Chandrababu Naidu) ಸೇರಿದಂತೆ ಸಾವಿರಾರು ಜನರು ಭಾಗಿಯಾಗಿ, ಡ್ರೋನ್ ಪದರ್ಶನವನ್ನು ಕಣ್ತುಂಬಿಕೊಂಡರು.

    ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಎನ್.ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶದಲ್ಲಿ ಇದೊಂದು ಡ್ರೋನ್ ಮುಸ್ಸಂಜೆಯಾಗಿದೆ. ಅದ್ಭುತ ಡ್ರೋನ್ ಪ್ರದರ್ಶನದ ಮೂಲಕ ನಿರ್ಮಾಣಗೊಂಡ 5 ಗಿನ್ನಿಸ್ ವಿಶ್ವ ದಾಖಲೆಗಳನ್ನು ವೀಕ್ಷಿಸಿದ್ದೇನೆ. ಈ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಯಶಸ್ವಿಗೊಳಿಸಿದ್ದಕ್ಕಾಗಿ ನಾನು ಎಲ್ಲಾ ಸಂಘಟಕರು ಮತ್ತು ಭಾಗವಹಿಸುವವರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದರು.

    ಇನ್ನೂ ಡ್ರೋನ್ ಪದರ್ಶನದ ಬಳಿಕ ಮಾತನಾಡಿದ ಅವರು, ಡ್ರೋನ್ ಉದ್ಯಮದ ಬೆಳವಣಿಗೆಗೆ ಅನುಕೂಲವಾಗುವಂತೆ, ಕರ್ನೂಲ್ ಜಿಲ್ಲೆಯ ಓರ್ವಕಲ್ಲುನಲ್ಲಿ 300 ಎಕರೆ ಭೂಮಿಯನ್ನು ಘೋಷಿಸಿದ್ದೇನೆ. ಆ ಪ್ರದೇಶದಲ್ಲಿ 35,000 ಡ್ರೋನ್ ಪೈಲಟ್‌ಗಳಿಗೆ ತರಬೇತಿ ನೀಡುವ ಗುರಿ ಹೊಂದಿದ್ದೇವೆ. 15 ದಿನಗಳಲ್ಲಿ ಆಂಧ್ರ ಪ್ರದೇಶ ಸರ್ಕಾರವು ಡ್ರೋನ್‌ಗಳು ಹಾಗೂ ತಂತ್ರಜ್ಞಾನಗಳಿಗೆ ಅನುಕೂಲಕರ ವಾತಾವರಣವನ್ನು ನಿರ್ಮಿಸಿಕೊಡುವಲ್ಲಿ ಮುಂದಾಗಿದೆ ಎಂದು ಭರವಸೆ ನೀಡಿದರು.

    ಇತ್ತೀಚಿಗಷ್ಟೇ ಮುಕ್ತಾಯಗೊಂಡ ಮೈಸೂರು ದಸರಾ ಮಹೋತ್ಸವದಲ್ಲಿಯೂ ಏಕಕಾಲಕ್ಕೆ 3,000 ಡ್ರೋನ್‌ಗಳಿಂದ ಲೈಟಿಂಗ್ಸ್ ಶೋ ನಡೆಸಲಾಗಿತ್ತು.ಇದನ್ನೂ ಓದಿ: ಬೈರೂತ್‌ ಮೇಲೆ ಇಸ್ರೇಲ್‌ ಮತ್ತೊಂದು ದಾಳಿ; ಮೂರೇ ಸೆಕೆಂಡುಗಳಲ್ಲಿ ದೈತ್ಯ ಕಟ್ಟಡಗಳು ಧ್ವಂಸ

  • ಅಮೆರಿಕದಲ್ಲಿ ಕಾರು ಅಪಘಾತ – ಆಂಧ್ರಪ್ರದೇಶದ ಮೂವರು ಸೇರಿ, ಐವರು ಭಾರತೀಯರು ಸಾವು

    ಅಮೆರಿಕದಲ್ಲಿ ಕಾರು ಅಪಘಾತ – ಆಂಧ್ರಪ್ರದೇಶದ ಮೂವರು ಸೇರಿ, ಐವರು ಭಾರತೀಯರು ಸಾವು

    ವಾಷಿಂಗ್ಟನ್: ಅಮೆರಿಕದ (America) ಟೆಕ್ಸಾಸ್‌ನ (Texas) ರಾಂಡೋಲ್ಫ್ ಬಳಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶದ ಮೂವರು ಸೇರಿದಂತೆ ಐವರು ಭಾರತೀಯರು ಸಾವನ್ನಪ್ಪಿದ್ದಾರೆ.

    ಘಟನೆಯಲ್ಲಿ ಕಾರಿನಲ್ಲಿದ್ದ ಇನ್ನೋರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾನೆ. ಟೆಕ್ಸಾಸ್ ಪಬ್ಲಿಕ್ ಸೇಫ್ಟಿ ಅಧಿಕಾರಿಗಳ ಪ್ರಕಾರ, ದಕ್ಷಿಣ ಬನ್‌ಹ್ಯಾಮ್‌ನಿಂದ ದಕ್ಷಿಣಕ್ಕೆ 10 ಕಿಲೋಮೀಟರ್ ದೂರದಲ್ಲಿ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸಂಜೆ ಸುಮಾರು 6:45ರ ವೇಳೆಗೆ ಘಟನೆ ನಡೆದಿದೆ. ಇದನ್ನೂ ಓದಿ: ಸೈಟ್ ಸಿದ್ದಪ್ಪನವರೇ, ಮೂಡಾಮರಿ ಈಗ ರಾಜೀನಾಮೆ ಕೊಟ್ಟಿದ್ದು ಯಾಕೆ? – ಜೆಡಿಎಸ್ ಟೀಕೆ

    ಮೃತ ಐವರಲ್ಲಿ ಮೂವರು ಆಂಧ್ರಪ್ರದೇಶದ (Andhra Pradesh)  ಚಿತ್ತೂರು ಜಿಲ್ಲೆಯವರು. ಮೃತರನ್ನು ಗುಡೂರು ಪಟ್ಟಣದ ತಿರುಮುರು ಗೋಪಿ, ಶ್ರೀಕಾಳಹಸ್ತಿಯ ರಜಿನಿ ಶಿವ ಮತ್ತು ಹರಿ ಎಂದು ಗುರುತಿಸಲಾಗಿದೆ. ಹರಿ ಅವರ ಪತಿ ಸಾಯಿ ಚೆನ್ನು ಅವರಿಗೆ ತೀವ್ರ ಗಾಯಗಳಾಗಿದ್ದು, ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ಚಿತ್ರದುರ್ಗ| ಬೀದಿನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ

    ಆಂಧ್ರಪ್ರದೇಶದ ಶಾಸಕ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಸದಸ್ಯ ಕೊಂಡಪಲ್ಲಿ ಶ್ರೀನಿವಾಸ್ ಅವರು ಈ ಘಟನೆಯ ಬಗ್ಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಶಾಸಕಾಂಗ ಪಕ್ಷದ ನಾಯಕನಾಗಿ ಸೈನಿ ಅವಿರೋಧ ಆಯ್ಕೆ – ಎರಡನೇ ಬಾರಿಗೆ ಸಿಎಂ ಆಗಿ ಗುರುವಾರ ಪ್ರಮಾಣವಚನ

    ಅಮೆರಿಕದಲ್ಲಿ ನೆಲೆಸಿರುವ ತೆಲುಗರು ಅಪಘಾತದ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ದೇಶದ ತೆಲುಗು ಸಂಘಟನೆಗಳು ದುರಂತ ಜೀವಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿವೆ. ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – ಶೇ.3 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಕ್ಯಾಬಿನೆಟ್‌ ಅನುಮೋದನೆ

  • ತಿಮ್ಮಪ್ಪನ ದರ್ಶನಕ್ಕೆ ಹೆಚ್ಚಾಯ್ತು ಡಿಮ್ಯಾಂಡ್ – ಪ್ರತಿದಿನ 1,000 ಜನರಿಗೆ ನೇರ ದರ್ಶನಕ್ಕೆ ಅವಕಾಶ ನೀಡುವಂತೆ KSTDC ಮನವಿ

    ತಿಮ್ಮಪ್ಪನ ದರ್ಶನಕ್ಕೆ ಹೆಚ್ಚಾಯ್ತು ಡಿಮ್ಯಾಂಡ್ – ಪ್ರತಿದಿನ 1,000 ಜನರಿಗೆ ನೇರ ದರ್ಶನಕ್ಕೆ ಅವಕಾಶ ನೀಡುವಂತೆ KSTDC ಮನವಿ

    – ಆಂಧ್ರಪ್ರದೇಶದ ಸಿಎಂಗೆ ಕೆಎಸ್‌ಟಿಡಿಸಿ ಅಧ್ಯಕ್ಷ ಬೇಡಿಕೆ
    – ಭಕ್ತಾದಿಗಳಿಗೆ 350 ರೂಮ್‌ಗಳ ವ್ಯವಸ್ಥೆ

    ಅಮರಾವತಿ/ಬೆಂಗಳೂರು: ಭಾರತದ ಅತೀ ಶ್ರೀಮಂತ ದೇಗುಲಗಳಲ್ಲಿ ತಿರುಪತಿ ವೆಂಕಟೇಶ್ವರ ದೇವಾಲಯವೂ (Tirumala Tirupati Devasthanam) ಒಂದು. ತಿರುಪತಿ ತಿಮ್ಮಪ್ಪನಿಗೆ ಲಕ್ಷಾಂತರ ಭಕ್ತರಿದ್ದು, ತಿರುಪತಿ ಲಡ್ಡು ವಿವಾದದ (Tirupati Laddu Row) ನಂತರವೂ ಭಕ್ತಾದಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಅದರಲ್ಲೂ ಕರ್ನಾಟಕದಿಂದಲೂ (Karnataka) ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆ (KSTDC), ಆಂಧ್ರ ಸಿಎಂಗೆ ಹೊಸ ಮನವಿ ಮಾಡಿದೆ.

    ತಿರುಪತಿ ಭಕ್ತರ ಪಾಲಿಗೆ ಕಲಿಯುಗದ ವೈಕುಂಠ. ತಿರುಮಲಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಎರಡು ತೆಲುಗು ರಾಜ್ಯಗಳಲ್ಲದೆ, ವಿವಿಧ ರಾಜ್ಯಗಳು ಮತ್ತು ವಿದೇಶಗಳಿಂದಲೂ ಭಕ್ತರು ಇಲ್ಲಿಗೆ ಬರುತ್ತಾರೆ. ಆಪತ್ತುಗಳನ್ನು ನಿವಾರಿಸುವ ಏಡುಕೊಂಡಲವಾಡ ದರ್ಶನ ಪಡೆಯಲು ಜನ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಥವಾ ಕೆಎಸ್‌ಟಿಡಿಸಿಯ ಸೀಟ್‌ಗಳಿಗಾಗಿ ಪ್ರತಿದಿನ ಕಾಯುತ್ತಾರೆ. ಪ್ರತಿದಿನ ಟಿಟಿಡಿಯು ಕೆಎಸ್‌ಟಿಡಿಸಿಗೆ ಕರ್ನಾಟಕದ 250 ಭಕ್ತಾದಿಗಳಿಗೆ ನೇರ ದರ್ಶನಕ್ಕೆ ಸದ್ಯ ಅವಕಾಶ ನೀಡಿದೆ. ಆದರೂ ನೇರ ದರ್ಶನಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಇದು ತಿರುಪತಿ ಲಡ್ಡು ವಿವಾದದ ನಂತರವೂ ಮುಂದುವರೆದಿದೆ. ಈ ನಿಟ್ಟಿನಲ್ಲಿ ಕೆಎಸ್‌ಟಿಡಿಸಿಯು ಪ್ರತಿದಿನ 250 ಜನರಿಗೆ ನೇರ ದರ್ಶನದ ಸಂಖ್ಯೆಯನ್ನು, ಒಂದು ಸಾವಿರಕ್ಕೆ ಹೆಚ್ಚಿಸಬೇಕೆಂದು ಆಂಧ್ರ ಸಿಎಂಗೆ ಮನವಿ ಮಾಡಿದ್ದು, ಸದ್ಯ ಮಾತುಕತೆ ನಡೆದಿದೆ. ಇದನ್ನೂ ಓದಿ: ದೇಶದ ರೈತರಿಗೆ ನವರಾತ್ರಿ ಗಿಫ್ಟ್‌ – ಶನಿವಾರ ಪ್ರಧಾನಿ ಮೋದಿಯಿಂದ 20,000 ಕೋಟಿ ರೂ. ಬಿಡುಗಡೆ

    ಇನ್ನೂ ಸದ್ಯ 250 ಜನ ಭಕ್ತಾದಿಗಳಿಗೆ ನಿಗಮದಿಂದ ಪ್ರತಿನಿತ್ಯ 5-6 ಬಸ್‌ಗಳು ರಾಜ್ಯದಿಂದ ತೆರಳುತ್ತಿದ್ದವು. ಸಾವಿರ ಜನರಿಗೆ ಅವಕಾಶ ಸಿಕ್ಕರೇ, ರಾಜ್ಯದಿಂದ ತಿರುಪತಿಯತ್ತ 10-12 ಬಸ್‌ಗಳು ಪ್ರವಾಸೋದ್ಯಮ ಇಲಾಖೆಯಿಂದ ಸಂಚರಿಸಲಿವೆ. ಭಕ್ತಾದಿಗಳ ಸಂಖ್ಯೆ ಹೆಚ್ಚಾದರೂ ಅಲ್ಲಿನ ವಸತಿ ವ್ಯವಸ್ಥೆಗೆ ಆತಂಕಪಡಬೇಕಿಲ್ಲ. ಏಕೆಂದರೆ ತಿರುಪತಿಯಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ 350 ರೂಮ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ ಭಿನ್ನಮತ ಸ್ಫೋಟ – ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ರಾಜೀನಾಮೆ

  • ತಿರುಪತಿ ಲಡ್ಡು ವಿವಾದ | ರಾಜಕೀಯದಿಂದ ದೇವರನ್ನು ದೂರವಿಡಿ: ಸುಪ್ರೀಂ ಕೋರ್ಟ್

    ತಿರುಪತಿ ಲಡ್ಡು ವಿವಾದ | ರಾಜಕೀಯದಿಂದ ದೇವರನ್ನು ದೂರವಿಡಿ: ಸುಪ್ರೀಂ ಕೋರ್ಟ್

    – ಸಾಕ್ಷಿ ಇಲ್ಲದೇ ಹೇಗೆ ಸುದ್ದಿಗೋಷ್ಠಿ ಮಾಡಿದ್ರಿ? – ಆಂಧ್ರ ಸರ್ಕಾರಕ್ಕೆ ಚಾಟಿ

    ನವದೆಹಲಿ: ತಿರುಪತಿ ದೇವಸ್ಥಾನದ ಲಡ್ಡು (Tirupati laddu) ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಕೆಯಾಗಿದೆ ಎಂಬ ಆರೋಪದ ಹಿನ್ನಲೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ಆರಂಭಿಸಿದೆ. ವಿಚಾರಣೆ ವೇಳೆ ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ವ್ಯಕ್ತಿಗಳು ರಾಜಕೀಯದಿಂದ ಧರ್ಮವನ್ನು ದೂರವಿಡಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ಒತ್ತಿ ಹೇಳಿದೆ.

    ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠವು ಆಂಧ್ರಪ್ರದೇಶ ಸರ್ಕಾರ ಮತ್ತು ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಗೆ ಹಾಗೂ ಆಂಧ್ರ ಸರ್ಕಾರಕ್ಕೆ (Andhra Pradesh) ಹಲವು ಪ್ರಶ್ನೆಗಳನ್ನು ಹಾಕಿತು. ಈ ವಿಷಯದ ಬಗ್ಗೆ ಈಗಾಗಲೇ ತನಿಖೆಗೆ ಆದೇಶಿಸಿರುವಾಗ ಸಾರ್ವಜನಿಕ ಹೇಳಿಕೆ ನೀಡುವುದು ಏಕೆ? ಪತ್ರಿಕಾಗೋಷ್ಠಿ ನಡೆಸುವ ಅಗತ್ಯವೇನಿತ್ತು ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಇದನ್ನೂ ಓದಿ: ಜನಾರ್ದನ ರೆಡ್ಡಿಗೆ ಸುಪ್ರೀಂ ರಿಲೀಫ್ – ಬಳ್ಳಾರಿ ಪ್ರವೇಶಕ್ಕೆ ಗ್ರೀನ್‌ಸಿಗ್ನಲ್‌

    ನೀವು ಎಸ್‍ಐಟಿ ತನಿಖೆಗೆ ಆದೇಶಿಸಿದ್ದೀರಿ. ತನಿಖೆಯ ವರದಿ ಬರುವ ಮುನ್ನ, ಪತ್ರಿಕಾಗೋಷ್ಠಿ ನಡೆಸುವ ಅವಶ್ಯಕತೆ ಏನು? ನೀವು ಯಾವಾಗಲೂ ಅಂತಹದ್ದಕ್ಕಾಗಿ ಕಾಣಿಸಿಕೊಳ್ಳುತ್ತಿದ್ದೀರಿ ಎಂದು ನ್ಯಾಯಾಲಯ ಆಂಧ್ರ ಪ್ರದೇಶ ಸರ್ಕಾರದ ಪರ ವಕೀಲ ರೋಹಟಗಿಯವರಿಗೆ ಪ್ರಶ್ನಿಸಿತು.

    ಲಡ್ಡು ತಯಾರಿಕೆಯಲ್ಲಿ ಕಲುಷಿತ ತುಪ್ಪವನ್ನು ಬಳಸಲಾಗಿದೆ ಎಂಬುದಕ್ಕೆ ಸಾಕ್ಷಿ ಏನು ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿತು. ಈ ಕುರಿತು ತಿರುಪತಿ ದೇವಸ್ಥಾನದ ಪರ ವಾದ ಮಂಡಿಸಿದ ವಕೀಲ ಸಿದ್ಧಾರ್ಥ್ ಲೂತ್ರಾ, `ನಾವು ತನಿಖೆ ನಡೆಸುತ್ತಿದ್ದೇವೆ’ ಎಂದು ಪೀಠಕ್ಕೆ ತಿಳಿಸಿದರು. ಈ ವೇಳೆ ನೀವು `ಮಾಧ್ಯಮದ ಮುಂದೆ ಹೋಗುವ ಅಗತ್ಯವೇನಿತ್ತು?’ ನೀವು ಧಾರ್ಮಿಕ ಭಾವನೆಗಳನ್ನು ಗೌರವಿಸಬೇಕು ಎಂದು ಕೋರ್ಟ್ ಎಚ್ಚರಿಕೆ ನೀಡಿತು.

    ತುಪ್ಪದಲ್ಲಿ ಕಲಬೆರಕೆ ನಡೆದಿದೆ ಎನ್ನುವುದಕ್ಕೆ ಇಲ್ಲಿಯವರೆಗೆ ಯಾವುದೇ ಅಧಿಕೃತ ಸಾಕ್ಷಿ ಇಲ್ಲದೇ ಇರುವಾಗ ಸುದ್ದಿಗೋಷ್ಠಿ ನಡೆಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿತು. ತುಪ್ಪದಲ್ಲಿ ಕಲಬೆರಕೆ ಆಗಿದೆಯೇ ಎಂದು `ನೀವು ಎರಡನೇ ಅಭಿಪ್ರಾಯವನ್ನು ತೆಗೆದುಕೊಳ್ಳಬೇಕು ಎಂದು ವಿವೇಕವಿಲ್ಲವೇ? ಎಂದು ಸರ್ಕಾರಕ್ಕೆ ನ್ಯಾಯಮೂರ್ತಿ ವಿಶ್ವನಾಥನ್ ಅವರು ಪ್ರಶ್ನಿಸಿದರು.

    ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, ರಾಜ್ಯಸಭಾ ಸಂಸದ ಮತ್ತು ಟಿಟಿಡಿ ಮಾಜಿ ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ಸಲ್ಲಿಸಿದ್ದ ಮೂರು ಅರ್ಜಿಗಳು ಮತ್ತು ಇತಿಹಾಸಕಾರ ವಿಕ್ರಮ್ ಸಂಪತ್ ಮತ್ತು ಆಧ್ಯಾತ್ಮಿಕ ಪ್ರವಚನಕಾರ ದುಷ್ಯಂತ್ ಶ್ರೀಧರ್ ಅವರು ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

    ಹಿಂದಿನ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡೂ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ತಿಂಗಳ ಆರಂಭದಲ್ಲಿ ಆರೋಪಿಸಿದ್ದರು. ಇದು ದೇಶದೆಲ್ಲೆಡೆ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಇದನ್ನೂ ಓದಿ: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಅ.4 ಕ್ಕೆ ಮುಂದೂಡಿಕೆ

  • ತಿರುಪತಿ ಲಡ್ಡು ವಿವಾದ – ತುಪ್ಪ ಪೂರೈಸುತ್ತಿದ್ದ ಎಆರ್ ಡೈರಿಗೆ ನೋಟಿಸ್

    ತಿರುಪತಿ ಲಡ್ಡು ವಿವಾದ – ತುಪ್ಪ ಪೂರೈಸುತ್ತಿದ್ದ ಎಆರ್ ಡೈರಿಗೆ ನೋಟಿಸ್

    ನವದೆಹಲಿ: ತಿರುಪತಿ ಲಡ್ಡು ವಿವಾದದ (Tirupati Laddoo Row) ವಿಚಾರವಾಗಿ ಕೇಂದ್ರ ಆರೋಗ್ಯ ಸಚಿವಾಲಯವು (Health Ministry) ಲಡ್ಡುಗಳನ್ನು ತಯಾರಿಸಲು ತುಪ್ಪದ ಪೂರೈಕೆ ಮಾಡುತ್ತಿದ್ದ ಎಆರ್ ಡೈರಿಗೆ ಶೋಕಾಸ್ ನೋಟಿಸ್ ನೀಡಿದೆ.

    ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‍ಎಸ್‍ಎಸ್‍ಎಐ) ರವಾನಿಸಿದ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಡೈರಿ ಉತ್ಪನ್ನಗಳನ್ನು ಪರೀಕ್ಷಿಸುವ ಖಾಸಗಿ ಪ್ರಯೋಗಾಲಯ ಒಂದರಲ್ಲಿ ತುಪ್ಪದ ಮಾದರಿ ಪರೀಕ್ಷಿಸಲಾಗಿತ್ತು. ಈ ವೇಳೆ ತಿರುಪತಿ ಲಡ್ಡು ತಯಾರಿಕೆಯಲ್ಲಿ ಬಳಸುವ ತುಪ್ಪದ ಮಾದರಿಗಳಲ್ಲಿ ತಾಳೆ ಎಣ್ಣೆ, ಮೀನಿನ ಎಣ್ಣೆ, ಬೀಫ್ ಟ್ಯಾಲೋ, ಹಂದಿ ಕೊಬ್ಬು ಸೇರಿದೆ ಎಂದು ವರದಿ ನೀಡಿತ್ತು. ಇದನ್ನೂ ಓದಿ: ಮುನಿರತ್ನ ವಿರುದ್ಧದ ಕೇಸ್‌ಗಳು ಅಧಿಕೃತವಾಗಿ ಎಸ್‌ಐಟಿಗೆ ವರ್ಗ

    ವಿವಾದದ ಬೆನ್ನಲ್ಲೇ ಕಲಬೆರಕೆ ತುಪ್ಪವನ್ನು ಸರಬರಾಜು ಮಾಡಿದ ಆರೋಪದ ಮೇಲೆ ದೇವಾಲಯದ ಮಂಡಳಿಯು ಎಆರ್ ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್‍ನ್ನು ಕಪ್ಪು ಪಟ್ಟಿಗೆ ಸೇರಿಸಿದೆ. ಕಂಪನಿಯ ವಿರುದ್ಧ ಕಾನೂನು ಕ್ರಮಗಳನ್ನು ಪ್ರಾರಂಭಿಸಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಜೆ.ಶ್ಯಾಮಲಾ ರಾವ್ ಘೋಷಿಸಿದ್ದರು.

    ತಮಿಳುನಾಡು ಮೂಲದ ಎಆರ್ ಡೈರಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಕಲಬೆರಕೆ ಆರೋಪಗಳನ್ನು ಬಲವಾಗಿ ನಿರಾಕರಿಸಿದೆ. ದೇವಾಲಯಕ್ಕೆ ಪ್ರತಿ ದಿನ 10 ಟನ್ ತುಪ್ಪದ ಅವಶ್ಯಕತೆಯಿದೆ. ನಾವು 0.1% ಅಗತ್ಯವನ್ನು ಪೂರೈಸಿಲ್ಲ ಎಂದು ಹೇಳಿಕೊಂಡಿದೆ.

    ಆಂಧ್ರಪ್ರದೇಶದ ಆಡಳಿತಾರೂಢ ಟಿಡಿಪಿ, ಜಗನ್ ಮೋಹನ್ ರೆಡ್ಡಿ ಆಡಳಿತದ ಅವಧಿಯಲ್ಲಿ ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಿದ ತುಪ್ಪ ಬಳಕೆ ಮಾಡಲಾಗಿದೆ ಎಂದು ಆರೋಪಿಸಿತ್ತು. ಇದನ್ನೂ ಓದಿ: ಬದ್ಲಾಪುರ ಶಾಲೆಯಲ್ಲಿ ದೌರ್ಜನ್ಯ – ಕಾಮುಕನನ್ನು ಗುಂಡಿಕ್ಕಿ ಹತ್ಯೆಗೈದ ಪೊಲೀಸರು

  • ತಿರುಪತಿ ಲಡ್ಡು ಟೇಸ್ಟ್‌ ಸೂಪರ್‌: ಲಡ್ಡು ಸವಿದು ಖುಷಿ ಹಂಚಿಕೊಂಡ ಭಕ್ತರು

    ತಿರುಪತಿ ಲಡ್ಡು ಟೇಸ್ಟ್‌ ಸೂಪರ್‌: ಲಡ್ಡು ಸವಿದು ಖುಷಿ ಹಂಚಿಕೊಂಡ ಭಕ್ತರು

    – ನಮ್ಮ ಕೆಎಂಎಫ್‌, ನಮ್ಮ ಹೆಮ್ಮೆ.. ‘ನಂದಿನಿ’ ತುಪ್ಪ ಬಳಸಿ ಸ್ವಾಧಿಷ್ಟ ಲಡ್ಡು ತಯಾರಿಸಿ ಎಂದ ಕನ್ನಡಿಗ ಭಕ್ತ

    ಅಮರಾವತಿ: ನಂದಿನಿ ತುಪ್ಪ ಬಳಸಿ ತಯಾರಿಸಲಾಗುತ್ತಿರುವ ತಿರುಪತಿ ಲಡ್ಡು (Tirupati Laddu Row) ಸವಿದು ಭಕ್ತರು ಖುಷಿ ವ್ಯಕ್ತಪಡಿಸಿದ್ದಾರೆ. ಪ್ರಸಾದಕ್ಕೆ ಕಲಬೆರಕೆ, ಅಪವಿತ್ರ ವಿವಾದದ ಬೆನ್ನಲ್ಲೇ ದೇವಾಲಯ ಶುದ್ಧೀಕರಿಸಲಾಗಿದ್ದು, ಹೆಚ್ಚೆಚ್ಚು ಜನರು ತಿರುಪತಿಗೆ ಆಗಮಿಸಿ ಶ್ರೀ ವೆಂಕಟರಮಣದ ದರ್ಶನ ಪಡೆಯುತ್ತಿದ್ದಾರೆ. ಜೊತೆಗೆ ಅಪಾರ ಸಂಖ್ಯೆಯಲ್ಲಿ ಲಡ್ಡು ಪ್ರಸಾದ ತೆಗೆದುಕೊಳ್ಳುತ್ತಿದ್ದಾರೆ.

    ಬೆಂಗಳೂರಿನಿಂದ (Bengaluru) ತಿರುಪತಿ ದೇವಾಲಯಕ್ಕೆ (Tirupati Temple) ಬಂದಿದ್ದ ಜಗದೀಶ್‌ ಮಾತನಾಡಿ, ಲಡ್ಡುನಲ್ಲಿ ಏನೇನೊ ಕಲಬೆರಕೆ ಮಾಡಲಾಗಿದೆ ಅಂತಾರೆ. ಸದ್ಯಕ್ಕೆ ಏನೂ ಇಲ್ಲ, ಎಲ್ಲಾ ಬದಲಾಗಿದೆ. ಲಡ್ಡು ಟೇಸ್ಟ್‌ ಮಾಡಿದ್ದೇವೆ. ತುಂಬಾ ಚೆನ್ನಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಸಾದದಲ್ಲಿ ಕಲಬೆರಕೆ, ಅಪವಿತ್ರಕ್ಕೆ ಡೋಂಟ್ ಕೇರ್ – ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಕ್ಕೆ ಮುಗಿಬಿದ್ದ ಭಕ್ತರು

    ಮತ್ತೊಬ್ಬರು ಭಕ್ತರು, ನಾವು ಲಡ್ಡು ತೆಗೆದುಕೊಂಡು ತಿಂದೆವು. ಟೇಸ್ಟ್‌ ಸೂಪರ್‌ ಆಗಿದೆ. ನಮ್ಮ ಕೆಎಂಎಫ್‌.. ನಮ್ಮ ಬೆಂಗಳೂರು. ನಮಗೂ ಖುಷಿ ತಂದಿದೆ. ತುಂಬಾ ಚೆನ್ನಾಗಿದೆ ಎಂದು ಖುಷಿ ಹಂಚಿಕೊಂಡಿದ್ದಾರೆ.

    ನಮ್ಮ ನಾಡಿನ ನಂದಿನಿ ತುಪ್ಪ ಬಳಸಿ ಲಡ್ಡು ಮಾಡುತ್ತಿರುವುದು ತುಂಬಾ ಖುಷಿ ವಿಚಾರ. ಮಧ್ಯದಲ್ಲಿ ಈ ರೀತಿಯ ವಿವಾದ ಎದ್ದಿದ್ದಕ್ಕೆ ಬೇಜಾರಾಯ್ತು. ನಮ್ಮ ಕರ್ನಾಟಕ ನಮ್ಮ ಹೆಮ್ಮೆ. ನಂದಿನಿ ನಮ್ಮ ಹೆಮ್ಮೆ. ನಂದಿನಿ ಬಳಸಿ ಸ್ವಾಧಿಷ್ಟಕರವಾದ ಲಡ್ಡು ಸವಿಯಿರಿ ಎಂದು ಕರ್ನಾಟಕದವರೇ ಆದ ಇನ್ನೊಬ್ಬರು ಭಕ್ತರು ಖುಷಿ ವ್ಯಕ್ತಪಡಿಸಿದರು. ಇದನ್ನೂ ಓದಿ: ತಿರುಪತಿ ದೇವಾಲಯ ಪವಿತ್ರೋತ್ಸವ – ಹಾಲು, ಮೊಸರು, ತುಪ್ಪ, ಗೋಮೂತ್ರ, ಸಗಣಿ ಬಳಸಿ ದೇವಸ್ಥಾನ ಶುದ್ಧೀಕರಣ

    ಲಡ್ಡು ಟೇಸ್ಟ್‌ ಬಹಳ ಚೆನ್ನಾಗಿದೆ. ತಾಜಾ ತುಪ್ಪದ್ದೇ ಆಗಿದೆ. ಮೊದಲು ಇದ್ದ ಟೇಸ್ಟ್‌ ಥರಾನೆ ಇದೆ ಲಡ್ಡು. ತಿಂದು ಬಹಳ ಖುಷಿಯಾಯಿತು ನಮಗೆ. ನನ್ನ ಬರ್ತ್‌ಡೇ ಸೆಲಬ್ರೇಷನ್‌ ಇಲ್ಲೇ ಆಯಿತು ಎಂದು ಕುಟುಂಬ ಸಮೇತರಾಗಿ ತಿರುಪತಿಗೆ ಆಗಮಿಸಿದ್ದ ಭಕ್ತೆಯೊಬ್ಬರು ಸಂತಸ ವ್ಯಕ್ತಪಡಿಸಿದರು.