Tag: andhraparadesh

  • ಮರ್ಸಿಡಿಸ್ ಕಾರಿಗೆ ಗುದ್ದಿದ ರಭಸಕ್ಕೆ ಟ್ರ್ಯಾಕ್ಟರ್ ಇಬ್ಭಾಗ!

    ಮರ್ಸಿಡಿಸ್ ಕಾರಿಗೆ ಗುದ್ದಿದ ರಭಸಕ್ಕೆ ಟ್ರ್ಯಾಕ್ಟರ್ ಇಬ್ಭಾಗ!

    ಅಮರಾವತಿ: ಮರ್ಸಿಡಿಸ್ ಬೆಂಜ್ (Mercedes Benz) ಕಾರಿಗೆ ಗುದ್ದಿದ ರಭಸಕ್ಕೆ ಟ್ರ್ಯಾಕ್ಟರ್ ಇಬ್ಭಾಗವಾದ ಘಟನೆ ಆಂಧ್ರಪ್ರದೇಶದ ತಿರುಪತಿ ಸಮೀಪ ನಡೆದಿದೆ.

    ಚಂದ್ರಗಿರಿ ಬೈಪಾಸ್‍ನಲ್ಲಿ ಈ ದುರ್ಘಟನೆ ನಡೆದಿದೆ. ಎದುರಿನಿಂದ ಬರುತ್ತಿದ್ದ ಟ್ರ್ಯಾಕ್ಟರ್ (Tractor) ರಾಂಗ್ ಸೈಡ್ ಗೆ ಬಂದು ಮರ್ಸಿಡಿಸ್ ಬೆಂಜ್ ಕಾರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಘಟನೆಯ ಬಳಿಕ ಸ್ಥಳೀಯರು ವೀಡಿಯೋ (Video) ಮಾಡಿದ್ದು, ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಇದನ್ನೂ ಓದಿ: ಲಾರಿಗೆ ಕಾರು ಡಿಕ್ಕಿ ಹೊಡೆದು ಯುವಕ ಸಾವು- ಅಂಗಾಂಗ ದಾನಕ್ಕೆ ಮುಂದಾದ ಕುಟುಂಬಸ್ಥರು

    ವೀಡಿಯೊದಲ್ಲಿ, ಟ್ರ್ಯಾಕ್ಟರ್ ಎರಡು ಭಾಗಗಳಾಗಿದ್ದು ಹಾಗೂ ಕಾರಿನ ಮುಂಭಾಗ ಸಂಪೂರ್ಣ ಹಾನಿಗೊಳಗಾಗಿರುವುದನ್ನು ಕಾಣಬಹುದಾಗಿದೆ. ಅವಘಡದಿಂದಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಸುರಕ್ಷಿತವಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಟ್ರ್ಯಾಕ್ಟರ್ ಚಾಲಕ ಪಾರಾಗಿದ್ದಾರೆ ಎಂದು ವರದಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಚಿತ್ತೂರು ಬಸ್ ದುರಂತಕ್ಕೆ ಮೋದಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ

    ಚಿತ್ತೂರು ಬಸ್ ದುರಂತಕ್ಕೆ ಮೋದಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ

    – ಗಾಯಾಳುಗಳಿಗೆ 50 ಸಾವಿರ ಪರಿಹಾರ

    ಅಮರಾವತಿ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದ ಬಸ್ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ ದುರಂತ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

    ಘಟನೆಯಲ್ಲಿ 45 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳಿಗೆ 50 ಸಾವಿರ ಪರಿಹಾರ ನೀಡುವುದಾಗಿ ಮೋದಿ ತಿಳಿಸಿದ್ದಾರೆ.

    ಆಗಿದ್ದೇನು..?
    ಶನಿವಾರ ರಾತ್ರಿ 11.30ರ ಸುಮಾರಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಭಾಕರಪೇಟ್‍ನಲ್ಲಿ ಬಸ್ಸೊಂದು ಕಂದಕ್ಕೆ ಬಿದ್ದಿತ್ತು. ಘಟನೆಯಲ್ಲಿ 7 ಮಂದಿ ಮೃತಪಟ್ಟರೆ 45 ಮಂದಿ ಗಾಯಗೊಂಡಿದ್ದಾರೆ.

    ಮದುವೆ ಸಮಾರಂಭಕ್ಕೆಂದು ಖಾಸಗಿ ಬಸ್ ಅನಂತಪುರ ಜಿಲ್ಲೆಯ ಧರ್ಮಾವರಂನಿಂದ ಚಿತ್ತೂರಿನ ನಗರಿ ಬಳಿಯ ಗ್ರಾಮಕ್ಕೆ 52 ಮಂದಿಯನ್ನು ಕರೆದುಕೊಂಡು ಹೋಗುತ್ತಿತ್ತು. ಘಾಟ್ ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಸ್ 50 ಅಡಿ ಆಳದ ಪ್ರಪಾತಕ್ಕೆ ಉರುಳಿದೆ.

    ಈ ಸಂಬಂಧ ಪ್ರತಿಕ್ರಿಯಿಸಿದ್ದ ತಿರುಪತಿ ಪೊಲೀಸ್ ವರಿಷ್ಠಾಧಿಕಾರಿ, ಚಾಲಕನ ನಿರ್ಲಕ್ಷ್ಯದಿಂದ ದುರಂತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದರು.

  • ಇಂದಿನಿಂದ ಪ್ರಖ್ಯಾತ ತಿರುಪತಿ ತಿಮ್ಮಪ್ಪನ ದೇಗುಲದಲ್ಲಿ ಸರ್ವದರ್ಶನಕ್ಕೆ ಅವಕಾಶ

    ಇಂದಿನಿಂದ ಪ್ರಖ್ಯಾತ ತಿರುಪತಿ ತಿಮ್ಮಪ್ಪನ ದೇಗುಲದಲ್ಲಿ ಸರ್ವದರ್ಶನಕ್ಕೆ ಅವಕಾಶ

    – ಮೊದಲಿಗೆ ಚಿತ್ತೂರು ಜಿಲ್ಲೆಯ ಭಕ್ತರಿಗೆ ಅವಕಾಶ

    ಹೈದರಾಬಾದ್: ಮಹಾಮಾರಿ ಕೊರೊನಾ ವೈರಸ್ ಅಬ್ಬರ ತಗ್ಗುತ್ತಿರುವ ಹೊತ್ತಲ್ಲಿ ತಿರುಪತಿ ತಿಮ್ಮಪ್ಪನ ಭಕ್ತರಿಗೆ ತಿರುಪತಿ ದೇಗುಲದ ಆಡಳಿತ ಮಂಡಳಿ (ಟಿಟಿಡಿ) ಸಿಹಿಸುದ್ದಿ ನೀಡಿದೆ.

    ಇಂದಿನಿಂದ ಪ್ರಖ್ಯಾತ ತಿರುಪತಿ ತಿಮ್ಮಪ್ಪನ ದೇಗುಲದಲ್ಲಿ ಸರ್ವದರ್ಶನಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಟೋಕನ್ ವಿತರಣೆ ನಡೆಯಲಿದೆ. ಮೊದಲಿಗೆ ಚಿತ್ತೂರು ಜಿಲ್ಲೆಯ ಭಕ್ತರಿಗೆ ಅವಕಾಶ ನೀಡಲಾಗಿದ್ದು ಪ್ರತಿದಿನ 2 ಸಾವಿರ ಟೋಕನ್ ವಿತರಿಸಲಾಗುತ್ತದೆ. ಶ್ರೀನಿವಾಸ ಕಾಂಪ್ಲೆಕ್ಸ್ ನ ಕೌಂಟರ್ ಗಳಲ್ಲಿ ಟೋಕನ್ ಸಿಗಲಿದೆ. ಈ ಮೊದಲು ಸರ್ವದರ್ಶನಕ್ಕೆ 8 ಸಾವಿರ ಟೋಕನ್ ವಿತರಿಸಲಾಗುತ್ತಿತ್ತು.

    ಈ ಹಿಂದೆ ತಿರುಪತಿಯಲ್ಲಿ ನೀಡಲಾಗುವ ಲಡ್ಡು ಪ್ರಸಾದದ ವಿಲೇವಾರಿಗಾಗಿ ಪರಿಸರ ಸ್ನೇಹಿ ಬ್ಯಾಗ್‍ಗಳನ್ನು ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ತಯಾರಿಸಿತ್ತು. ಹೊಸ ಬ್ಯಾಗ್‍ಗಳಲ್ಲಿ ಲಡ್ಡು ವಿತರಿಸುವ ಕೌಂಟರ್ ಅನ್ನು ಡಿಆರ್‍ಡಿಒ ಮುಖ್ಯಸ್ಥ ಸತೀಶ್ ರೆಡ್ಡಿ ಹಾಗೂ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ಮುಖ್ಯಸ್ಥ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎಸ್ ಜವಾಹರ್ ರೆಡ್ಡಿ ಉದ್ಘಾಟಿಸಿದ್ದರು. ಇದನ್ನೂ ಓದಿ: ನೇಪಾಳದಲ್ಲಿ ಪ್ರವಾಹ – 50ಕ್ಕೂ ಹೆಚ್ಚು ಮಂದಿ ನೀರಿನಲ್ಲಿ ಕೊಚ್ಚಿ ಹೋದ್ರು!

    ಸಾಂಪ್ರದಾಯಿಕವಾಗಿ ಬಳಸಲಾಗುವ ಪ್ಲಾಸ್ಟಿಕ್ ಬ್ಯಾಗ್‍ಗಳು, ಪೆಟ್ರೋಕೆಮಿಕಲ್ಸ್‍ನಿಂದ ತಯಾರಿಸಲ್ಪಟ್ಟಿರುತ್ತವೆ. ಅವು ಆರೋಗ್ಯಕ್ಕೆ ಹಾನಿಕಾರಕ. ಅಂಥ ಬ್ಯಾಗ್‍ಗಳು ಮಣ್ಣಿನಲ್ಲಿ ಕೊಳೆಯಲು 200ಕ್ಕೂ ಹೆಚ್ಚು ವರ್ಷಗಳನ್ನು ತೆಗೆದುಕೊಳ್ಳುತ್ತವೆ. ಆದರೆ ಡಿಆರ್‍ಡಿಒ ತಯಾರಿಸಿರುವ ಬ್ಯಾಗ್‍ಗಳು, ಆರೋಗ್ಯಕ್ಕೆ ಹಾನಿಕಾರವಲ್ಲ. ಮಣ್ಣಿನಲ್ಲಿ ಬೇಗನೇ ಕೊಳೆಯುತ್ತವೆ. ಅಲ್ಲದೆ ಇವುಗಳ ತಯಾರಿಕಾ ವೆಚ್ಚವೂ ಕಡಿಮೆ ಎಂದು ಸತೀಶ್ ರೆಡ್ಡಿ ತಿಳಿಸಿದ್ದರು.