Tag: andra pradesh

  • ಸ್ವೀಟ್ ಆಸೆ ತೋರಿಸಿ 9ರ ಬಾಲಕಿ ಮೇಲೆ ಅತ್ಯಾಚಾರ!

    ಸ್ವೀಟ್ ಆಸೆ ತೋರಿಸಿ 9ರ ಬಾಲಕಿ ಮೇಲೆ ಅತ್ಯಾಚಾರ!

    ಹೈದರಾಬಾದ್: ಸ್ವೀಟ್ ನೀಡುವುದಾಗಿ ಆಸೆ ತೋರಿಸಿ ಯುವಕನೋರ್ವ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಅಮಾನವೀಯ ಘಟನೆ ಆಂಧ್ರ ಪ್ರದೇಶದ ಸಿಂಗರೆನಿ ಕಾಲೋನಿಯಲ್ಲಿ ನಡೆದಿದೆ.

    ಸಿಂಗರೆನಿ ಕಾಲೋನಿಯ ನಿವಾಸಿ ಶ್ರೀನಿವಾಸ್(28) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಮನೆಯ ಪಕ್ಕದ ಮನೆಯಲ್ಲಿಯೇ ಶ್ರೀನಿವಾಸ್ ವಾಸಿಸುತ್ತಿದ್ದನು. ಶುಕ್ರವಾರ ರಾತ್ರಿ ಸುಮಾರು 7.30ರ ಹೊತ್ತಿಗೆ ಬಾಲಕಿ ತನ್ನ ಸಹೋದರನ ಜೊತೆ ಮನೆಯ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದ ಶ್ರೀನಿವಾಸ್ ಬಾಲಕಿಗೆ ಸ್ವೀಟ್ ಕೊಡುತ್ತೇನೆ ಬಾ ಎಂದು ತನ್ನೊಡನೆ ಕರೆದೋಯ್ದು ಅತ್ಯಾಚಾರ ಮಾಡಿದ್ದಾನೆ.

    ಈ ವಿಷಯವನ್ನು ಬಾಲಕಿ ಯಾರ ಬಳಿಯೂ ಹೇಳಿರಲಿಲ್ಲ. ಬಳಿಕ ಶನಿವಾರ ಬೆಳಗ್ಗೆ ಹೊಟ್ಟೆ ನೋವೆಂದು ಬಾಲಕಿ ನರಳಾಡುತ್ತಿದ್ದ ವೇಳೆ ಆಕೆಯ ತಾಯಿ ಪ್ರಶ್ನಿಸಿದಾಗ, ನಡೆದ ಘಟನೆಯನ್ನು ಬಾಲಕಿ ವಿವರಿಸಿದ್ದಾಳೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಬಾಲಕಿಯ ತಾಯಿ ನಗರದ ಸಾಯಿದಾಬಾದ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ದೂರು ನೀಡಿದ್ದಾರೆ.

    ಸದ್ಯ ದೂರಿನ ಆಧಾರದ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376(2) ಹಾಗೂ ಪೋಸ್ಕೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಪ್ರೀತಿಸಲಿಲ್ಲ ಎಂದು 12ರ ಬಾಲಕಿಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ!

    ಪ್ರೀತಿಸಲಿಲ್ಲ ಎಂದು 12ರ ಬಾಲಕಿಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ!

    ಹೈದರಾಬಾದ್: ಪ್ರೀತಿಯನ್ನು ನಿರಾಕರಿಸಿದಕ್ಕೆ ಪಾಗಲ್ ಪ್ರೇಮಿಯೊಬ್ಬ ಅಪ್ರಾಪ್ತ ಬಾಲಕಿ ಮೇಲೆ ನಡುರಸ್ತೆಯಲ್ಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಮಾನವೀಯ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.

    ಮೌಲಾನಾ ಸಾಹೇಬ್ ಎಂಬ ಯುವಕ ಅಪ್ರಾಪ್ತೆಗೆ ಬೆಂಕಿ ಹಚ್ಚಿದ್ದಾನೆ. ಕರ್ನೂಲ್ ಜಿಲ್ಲೆಯ ಕೌತಾಲಂ ಮಂಡಲದಲ್ಲಿ ಈ ಅಮಾನವೀಯ ಘಟನೆ ಜರುಗಿದೆ. ಕೌತಾಲಂ ಪ್ರದೇಶದ 12 ವರ್ಷದ ಬಾಲಕಿಯೊಬ್ಬಳನ್ನು ಮೌಲಾನಾ ಪ್ರೀತಿಸುತ್ತಿದ್ದನು. ಆದರಿಂದ ಕಳೆದ ಕೆಲವು ತಿಂಗಳಿಂದ ಬಾಲಕಿಗೆ ಪ್ರೀತಿ ಪ್ರೇಮವೆಂದು ಯುವಕ ಪೀಡಿಸುತ್ತಿದ್ದನು.

    ಬಾಲಕಿಗೆ ಯುವಕನನ್ನು ಪ್ರೀತಿಸಲು ಇಷ್ಟವಿರಲಿಲ್ಲ. ಎಷ್ಟೇ ಬಾರಿ ಯುವಕ ಪ್ರೀತಿ ಮಾಡು ಎಂದು ಕಾಟಕೊಡುತ್ತಿದ್ದರೂ ಬಾಲಕಿ ನಾನು ಪ್ರೀತಿ ಮಾಡಲ್ಲ ಎಂದು ಹೇಳಿದ್ದಾಳೆ. ಹೀಗಾಗಿ ತನ್ನ ಪ್ರೀತಿಯನ್ನು ಬಾಲಕಿ ಒಪ್ಪಲಿಲ್ಲ ಎಂದು ಯುವಕ ಮನನೊಂದಿದ್ದನು. ಹಾಗೆಯೇ ಬಾಲಕಿ ಮೇಲೆ ಹುಚ್ಚು ಪ್ರೀತಿ ಇಟ್ಟಿದ್ದ ಯುವಕ ಆಕೆಯನ್ನು ಪಡೆಯಲೆಬೇಕು ಎಂದು ಹಟಕ್ಕೆ ಬಿದ್ದಿದ್ದನು.

    ಶುಕ್ರವಾರ ರಾತ್ರಿ ವೇಳೆ ಬಾಲಕಿ ರಸ್ತೆಯಲ್ಲಿ ಹೋಗುತ್ತಿದ್ದಾಗ ಯುವಕ ಆಕೆಯನ್ನು ತಡೆದು ತನ್ನನ್ನು ಪ್ರೀತಿ ಮಾಡಲೇ ಬೇಕು ಎಂದು ಬೆದರಿಸಿದ್ದಾನೆ. ಅದ್ಯಾವುದಕ್ಕೂ ಬಾಲಕಿ ಒಪ್ಪದೇ ಇದ್ದಾಗ ನಡುರಸ್ತೆಯಲ್ಲೇ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಆಗ ಬಾಲಕಿಯ ಕಿರುಚಾಟವನ್ನು ಕೇಳಿ ಸ್ಥಳಕ್ಕೆ ಬಂದ ಜನರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಸದ್ಯ ಅಪ್ರಾಪ್ತ ಬಾಲಕಿ ಮೇಲೆ ಕೊಲೆ ಯತ್ನ ಮಾಡಿದಕ್ಕೆ ಆರೋಪಿ ಮೇಲೆ ಪೊಲೀಸರು ನಿರ್ಭಯ ಕಾಯ್ದೆ ಪ್ರಕಾರ ಕೊಲೆ ಪ್ರಕರಣ ದಾಖಲಿಸಿದ್ದು, ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 5 ರೂ.ಗೆ ಊಟ, ತಿಂಡಿ ನೀಡುವ `ಅಣ್ಣಾ ಕ್ಯಾಂಟೀನ್’ ಆಂಧ್ರದಲ್ಲಿ ಉದ್ಘಾಟನೆ

    5 ರೂ.ಗೆ ಊಟ, ತಿಂಡಿ ನೀಡುವ `ಅಣ್ಣಾ ಕ್ಯಾಂಟೀನ್’ ಆಂಧ್ರದಲ್ಲಿ ಉದ್ಘಾಟನೆ

    ಅಮರಾವತಿ: ಕೇವಲ 5 ರೂಪಾಯಿಗೆ ಊಟ ಮತ್ತು ಉಪಹಾರ ವಿತರಿಸುವ `ಅಣ್ಣಾ ಕ್ಯಾಂಟೀನ್’ ಅನ್ನು ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡುರವರು ವಿಜಯವಾಡದಲ್ಲಿ ಉದ್ಘಾಟಿಸಿದ್ದಾರೆ.

    ಚಂದ್ರಬಾಬು ನಾಯ್ಡು ಅವರು ಇಂದು ವಿಜಯವಾಡದ ಭವಾನಿಪುರದಲ್ಲಿ ಅಣ್ಣಾ ಕ್ಯಾಂಟೀನ್ ಉದ್ಘಾಟಿಸಿದರು. ಇದಲ್ಲದೇ ರಾಜ್ಯಾದ್ಯಂತ ಒಟ್ಟು 60 ಕ್ಯಾಂಟೀನ್ ಗಳು ಇಂದು ಉದ್ಘಾಟನೆಗೊಂಡಿವೆ. ಈ ವೇಳೆ ಮಾತನಾಡಿದ ಅವರು ರಾಜ್ಯಾದ್ಯಂತ ಒಟ್ಟು 203 ಕ್ಯಾಂಟೀನ್ ಗಳನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ತಿಳಿಸಿದ್ದಾರೆ.

    ಆಂಧ್ರದ ಪುರಸಭೆ ಮತ್ತು ನಗರಾಭಿವೃದ್ಧಿ ಸಚಿವರಾದ ಪಿ ನಾರಾಯಣ್ ರವರು ಮಾತನಾಡಿ, ಬಡವರು ಕೇವಲ 15 ರೂಪಾಯಿಗಳಿಗೆ ದಿನದ ಮೂರು ಹೊತ್ತಿನ ಆಹಾರ ಪಡೆಯಬೇಕೆಂಬುದು `ಅಣ್ಣಾ ಕ್ಯಾಂಟೀನ್’ನ ಯೋಜನೆಯ ಮುಖ್ಯ ಉದ್ದೇಶ ಎಂದು ತಿಳಿಸಿದರು.

    ನೂತನವಾಗಿ ಉದ್ಘಾಟನೆಯಾಗಿರುವ ಈ ಕ್ಯಾಂಟೀನ್ ಗಳಲ್ಲಿ ಕೇವಲ 5 ರೂಪಾಯಿಗಳಿಗೆ ಉಪಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿ ಊಟ ನೀಡಲಾಗುತ್ತದೆ. ಬೆಳಿಗ್ಗೆ ಮೂರು ಇಡ್ಲಿ, ಮೂರು ಪೂರಿ, ಉಪ್ಪಿಟ್ಟು ಹಾಗೂ ಪೊಂಗಲ್ ಅನ್ನು ಉಪಹಾರವಾಗಿ ನೀಡಿದರೆ, ಮಧ್ಯಾಹ್ನ ಮತ್ತು ರಾತ್ರಿ ಭೋಜನಕ್ಕೆ ಅನ್ನ ಸಾಂಬಾರ್, ದಾಲ್, ಉಪ್ಪಿನಕಾಯಿ, ಕರ್ರಿ ಮತ್ತು ಮೊಸರು ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

    ಈ ಯೋಜನೆಯ ಉಸ್ತುವಾರಿಯನ್ನು ಅಕ್ಷಯಪಾತ್ರ ಪ್ರತಿಷ್ಠಾನಕ್ಕೆ ನೀಡಲಾಗಿದ್ದು, ದಿನನಿತ್ಯ 2 ಲಕ್ಷ ಮಂದಿಗೆ ಆಹಾರ ಪೂರೈಸುವ ಉದ್ದೇಶವನ್ನು `ಅಣ್ಣಾ ಕ್ಯಾಂಟೀನ್’ ಹೊಂದಿದೆ ಎಂದು ನಾರಾಯಣ್ ರವರು ಹೇಳಿದ್ದಾರೆ.

    ಆರಂಭದಲ್ಲಿ ತಮಿಳುನಾಡಿನಲ್ಲಿ ಅಮ್ಮ ಕ್ಯಾಂಟೀನ್ ಆರಂಭಗೊಂಡ ಬಳಿಕ ಕರ್ನಾಟಕದಲ್ಲಿ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದರು.

  • ಅನುಮಾನಾಸ್ಪದ ರೀತಿಯಲ್ಲಿ ಒಂಟಿ ಸಲಗ ಸಾವು – ಜನರೇ ವಿಷ ಹಾಕಿ ಕೊಂದ್ರಾ?

    ಅನುಮಾನಾಸ್ಪದ ರೀತಿಯಲ್ಲಿ ಒಂಟಿ ಸಲಗ ಸಾವು – ಜನರೇ ವಿಷ ಹಾಕಿ ಕೊಂದ್ರಾ?

    ಕೋಲಾರ: ಜಿಲ್ಲೆಯ ಗಡಿ ಪ್ರದೇಶವಾದ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಬಂಗಾರುಪಾಳ್ಯಂನಲ್ಲಿ ಒಂಟಿ ಸಲಗವೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದೆ.

    ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಬಂಗಾರುಪಾಳ್ಯಂನ ನಾಯುಡು ಎಂಬ ಮಾವಿನ ತೋಟದಲ್ಲಿ ಅನುಮಾನಾಸ್ಪದವಾಗಿ ಆನೆಯೊಂದು ಮೃತಪಟ್ಟಿದೆ. ಬಂಗಾರಪಾಳ್ಯಂ ಅರಣ್ಯ ಪ್ರದೇಶದಲ್ಲಿ ವ್ಯಾಪ್ತಿಯಲ್ಲಿ ಕಳೆದೊಂದು ತಿಂಗಳಿನಿಂದ 5 ಆನೆಗಳ ಹಿಂಡು ಬೀಡು ಬಿಟ್ಟಿದ್ದವು. ಮಾವಿನ ತೋಪಿನಲ್ಲಿ ಆನೆ ಸಾವನ್ನಪ್ಪಿದ್ದನ್ನು ಕಂಡ ಕುರಿಗಾಹಿಗಳು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ.

    ಘಟನೆ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಐದು ಆನೆಗಳ ಹಿಂಡು ಆಗಾಗ ಜಿಲ್ಲೆಯ ಕೆಜಿಎಫ್ ಹಾಗೂ ಬಂಗಾರಪೇಟೆ ತಾಲೂಕಿನ ಗಡಿ ಪ್ರದೇಶದಲ್ಲಿ ದಾಳಿ ನಡೆಸಿ ರೈತರ ಬೆಳೆ ಹಾನಿ ಮಾಡಿದ್ದವು. ಅಲ್ಲದೇ ಮಾವು ಸೇರಿದಂತೆ ವಿವಿಧ ಬೆಳೆಗಳ ನಾಶ ಮಾಡಿದ್ದರಿಂದ ರೈತರೇ ಆನೆಗೆ ವಿಷ ಹಾಕಿ ಕೊಂದಿರಬಹುದೆಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

  • ಡಿಸಿ ಯಾಗಿ ಅಧಿಕಾರ ಸ್ವೀಕರಿಸಿದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು

    ಡಿಸಿ ಯಾಗಿ ಅಧಿಕಾರ ಸ್ವೀಕರಿಸಿದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು

    ಹೈದರಾಬಾದ್: ರಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತಕ್ಕೆ ಕೀರ್ತಿ ತಂದಿದ್ದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಬುಧವಾರದಂದು ಆಂಧ್ರ ಪ್ರದೇಶ ಸರ್ಕಾರದಲ್ಲಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

    ವಿಜಯವಾಡ ಹೊರವಲಯದ ಗೊಲ್ಲಾಪುಡಿಯಲ್ಲಿರುವ ಭೂ ಆಡಳಿತದ ಮುಖ್ಯ ಆಯುಕ್ತರ ಕಚೇರಿಯಲ್ಲಿ ಪಿವಿ ಸಿಂಧು ಕರ್ತವ್ಯಕ್ಕೆ ರ್ಸೇರ್ಪಡೆಗೊಂಡ್ರು. ವಿಶೇಷ ಮುಖ್ಯ ಕಾರ್ಯದರ್ಶಿ ಅನಿಲ್ ಚಂದ್ರ ಪುನೇತಾ ಅವರಿಗೆ ಸಿಂಧು ರಿಪೋರ್ಟ್ ಮಾಡಿಕೊಂಡ್ರು. ನಂತರ ಹಿರಿಯ ಐಎಎಸ್ ಅಧಿಕಾರಿ ಎಂ ಜಗನ್ನಾಥಂ ಅವರ ಸಮ್ಮುಖದಲ್ಲಿ ರೋಸ್ಟರ್‍ನಲ್ಲಿ ಸಹಿ ಹಾಕುವ ಮೂಲಕ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ರು. ಕಚೇರಿಯ ಸಿಬ್ಬಂದಿ ಹೂಗುಚ್ಛ ಹಾಗೂ ಹಾರಗಳನ್ನ ಹಾಕಿ ಬ್ಯಾಡ್ಮಿಂಟನ್ ತಾರೆಗೆ ಅದ್ಧೂರಿ ಸ್ವಾಗತ ಕೋರಿದ್ರು.

    ಇದೇ ವೇಳೆ ಮಾತನಾಡಿದ ಸಿಂಧು, ಜಿಲ್ಲಾಧಿಕಾರಿ ಆಗಿ ಆಂಧ್ರಪ್ರದೇಶ ಸರ್ಕಾರದ ಭಾಗವಾಗಿರೋದಕ್ಕೆ ನನಗೆ ತುಂಬಾ ಖುಷಿಯಾಗಿದೆ. ನನ್ನ ಕೆಲಸಕ್ಕೆ ಸೂಕ್ತ ನ್ಯಾಯ ಒದಗಿಸುತ್ತೇನೆ ಅಂತ ಭರವಸೆ ನೀಡಿದ್ರು. ಇದರ ಜೊತೆಗೆ ಬ್ಯಾಡ್ಮಿಂಟನ್ ಆಟವನ್ನು ಮುಂದುವರೆಸುವುದಾಗಿ ಹೇಳಿದ್ರು.

    ಮುಂಬರುವ ಪಂದ್ಯಗಳಿಗಾಗಿ ನಾನು ಸದ್ಯ ಪುಲೆಲಾ ಗೋಪಿಚಂದ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದೇನೆ. ನಾನು ಎಲ್ಲಾ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಟೂರ್ನಿಮೆಂಟ್‍ಗಳಲ್ಲಿ ಭಾಗವಹಿಸುತ್ತೇನೆ. ದೇಶಕ್ಕೆ ಮತ್ತಷ್ಟು ಪ್ರಶಸ್ತಿಗಳನ್ನ ತಂದುಕೊಡುತ್ತೇನೆ ಎಂಬ ಭರವಸೆ ನನಗಿದೆ ಎಂದು ಪಿವಿ ಸಿಂಧು ಹೇಳಿದ್ದಾರೆ.

    ಜುಲೈ 27 ರಂದು ಆಂಧ್ರಪ್ರದೇಶ ಸರ್ಕಾರ ಪಿವಿ ಸಿಂಧು ಅವರನ್ನು ಜಿಲ್ಲಾಧಿಕಾರಿಯಾಗಿ  ನೇಮಿಸಿ ಆದೇಶ ಹೊರಡಿಸಿತ್ತು. ಸ್ವತಃ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೇ ನೇಮಕಾತಿ ಪತ್ರವನ್ನ ಸಿಂಧು ಅವರಿಗೆ ನೀಡಿದ್ದರು. ಸಿಂಧು ಅವರು ಎಲ್ಲಾ ಅಗತ್ಯ ದಾಖಲೆಗಳನ್ನು ಒದಗಿಸಿ ಕರ್ತವ್ಯಕ್ಕೆ ಹಾಜರಾಗಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿತ್ತು.

    ಪಿವಿ ಸಿಂಧು ಅವರನ್ನ ಸರ್ಕಾರದಲ್ಲಿ ಗ್ರೂಪ್-1 ಅಧಿಕಾರಿಯಾಗಿ ನೇಮಕ ಮಾಡಲು ಮೇ ತಿಂಗಳಲ್ಲಿ ರಾಜ್ಯ ಸಾರ್ವಜನಿಕ ಸೇವೆಗಳ ಕಾಯ್ದೆಗೆ ತಿದ್ದುಪಡಿ ತಂದು ಮಸೂದೆಯನ್ನು ಪಾಸ್ ಮಾಡಲಾಗಿತ್ತು. ತೆಲಂಗಾಣ ಕೂಡ ಸಿಂಧುಗೆ ಉದ್ಯೋಗ ಅವಕಾಶ ನೀಡಿತ್ತು. ಆದ್ರೆ ಆಂಧ್ರಪ್ರದೇಶ ತನ್ನ ಪೋಷಕರ ಮೂಲ ಸ್ಥಳವಾಗಿರೋದ್ರಿಂದ ಸಿಂಧು ಆಂಧ್ರಪ್ರದೇಶ ಸರ್ಕಾರದ ಉದ್ಯೋಗವನ್ನ ಸ್ವೀಕರಿಸಿದ್ದಾರೆ.

    ಪಿವಿ ಸಿಂಧು ಸದ್ಯ ಆಗಸ್ಟ್ 21ರಿಂದ ಗ್ಲಾಸ್ಗೋನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‍ಶಿಪ್‍ಗಾಗಿ ತಯಾರಾಗುತ್ತಿದ್ದಾರೆ.