Tag: anekal

  • 18 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಅನುಮಾನಾಸ್ಪದ ಸಾವು

    18 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಅನುಮಾನಾಸ್ಪದ ಸಾವು

    ಆನೇಕಲ್: 18 ದಿನಗಳ ಹಿಂದೆ ಮದುವೆ ಆಗಿದ್ದ ಯುವತಿ (Newly Married Woman) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಆನೇಕಲ್ (Anekal) ತಾಲೂಕಿನ ಸರ್ಜಾಪುರದಲ್ಲಿ (Sarjapura) ನಡೆದಿದೆ.

    ರಿಹಾನ (24) ಮೃತ ದುರ್ದೈವಿ. ಸರ್ಜಾಪುರ ಪಟ್ಟಣದಲ್ಲಿ ಘಟನೆ ನಡೆದಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತ ದೇಹ ಪತ್ತೆಯಾಗಿದೆ. ಡೆಂಕಣಿಕೋಟೆ ಸಮೀಪದ ಕಲಕಂಡರಹಳ್ಳಿಯ ನಿವಾಸಿ ರಿಹಾನ ಸರ್ಜಾಪುರದಲ್ಲಿ ಗಂಡ ಹಾಗೂ ಅತ್ತೆ ಜೊತೆ ವಾಸವಿದ್ದರು. ಇದನ್ನೂ ಓದಿ: ಮದ್ದೂರು ಶಾಸಕ ಉದಯ್‌ ಮನೆಯಲ್ಲೇ ಗನ್‌ಮ್ಯಾನ್‌ ಮೇಲೆ ಹಲ್ಲೆ ನಡೆಸಿತ್ತು ದರ್ಶನ್‌ ಗ್ಯಾಂಗ್‌!

    ರಿಹಾನ ಗಂಡ ಸಬಾಶ್ ಮೇಲೆ ವರದಕ್ಷಿಣೆ ಕಿರುಕುಳ ಆರೋಪ ಹೊರಿಸಲಾಗಿದೆ. ಮೃತ ರಿಹಾನ ಗಂಡ ಶಬಾಸ್ ಕೊಲೆ ಮಾಡಿ ನೇಣು ಹಾಕಿದ್ದಾನೆಂದು ಆರೋಪ ಮಾಡಲಾಗಿದೆ. ಈ ಕುರಿತು ಸರ್ಜಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ನೀಟ್‌ ಪರೀಕ್ಷೆ ಹಿಂದಿನ ದಿನ ನನಗೆ ಪ್ರಶ್ನೆ ಪತ್ರಿಕೆ ಸಿಕ್ಕಿತ್ತು: ಪೊಲೀಸರ ಬಳಿ ತಪ್ಪೊಪ್ಪಿಕೊಂಡ ಬಂಧಿತ ವಿದ್ಯಾರ್ಥಿ

  • ದರ್ಶನ್‌ ಫಾರ್ಮ್ ಹೌಸ್‌ ನೋಡಿಕೊಳ್ಳುತ್ತಿದ್ದ ಮ್ಯಾನೇಜರ್‌ ಆತ್ಮಹತ್ಯೆ

    ದರ್ಶನ್‌ ಫಾರ್ಮ್ ಹೌಸ್‌ ನೋಡಿಕೊಳ್ಳುತ್ತಿದ್ದ ಮ್ಯಾನೇಜರ್‌ ಆತ್ಮಹತ್ಯೆ

    – ಏಪ್ರಿಲ್‌ 16 ರಂದು ವಿಷ ಸೇವಿಸಿ ಆತ್ಮಹತ್ಯೆ
    – 1 ವರ್ಷ ಕಾಲ ಮ್ಯಾನೇಜರ್‌ ಆಗಿದ್ದ ಶ್ರೀಧರ್‌

    ಬೆಂಗಳೂರು: ದರ್ಶನ್‌ಗೆ (Darshan) ಸೇರಿದ ಫಾರ್ಮ್ ಹೌಸ್‌ನಲ್ಲಿ (Farm House) ಮ್ಯಾನೇಜರ್‌ ಒಬ್ಬು ಆತ್ಮಹತ್ಯೆಗೆ (Suicide) ಶರಣಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಮಾನಸಿಕ ಖಿನ್ನತೆಗೆ ಒಳಗಾಗಿ ಡೆತ್‌ನೋಟ್‌ (Death Note) ಬರೆದಿಟ್ಟು ಶ್ರೀಧರ್‌ ಅವರು ಆನೇಕಲ್ ತಾಲೂಕಿನ ಬಗ್ಗನದೊಡ್ಡಿಯಲ್ಲಿ ಏಪ್ರಿಲ್‌ 16 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಕಲ್ಲು ಬಂಡೆ ಮೇಲೆ ಅನಾಥವಾಗಿ ಶ್ರೀಧರ್ ಮೃತದೇಹ ಪತ್ತೆಯಾಗಿತ್ತು. ಶ್ರೀಧರ್ ಮೃತ ದೇಹ ಕಂಡು ಪೊಲೀಸರಿಗೆ ಸ್ನೇಹಿತ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಮೂವರು ಮಕ್ಕಳನ್ನ ಬಿಟ್ಟು ವ್ಯಕ್ತಿ ಜೊತೆ ಓಡಿ ಹೋದ ತಾಯಿ – ಪೊಲೀಸ್ ಠಾಣೆ ಮೆಟ್ಟಿಲೇರಿದ ಮಕ್ಕಳು

    ಸುಮಾರು 10 ಎಕರೆ ಪ್ರದೇಶದಲ್ಲಿದ್ದ ಫಾರ್ಮ್ ಹೌಸ್‌ನಲ್ಲಿ ಸುಮಾರು 1 ವರ್ಷ ಕಾಲ ಶ್ರೀಧರ್‌ ಮ್ಯಾನೇಜರ್‌ ಆಗಿ ಕೆಲಸ ಮಾಡಿದ್ದರು. ವಿಷ ಸೇವಿಸಿದ ಪರಿಣಾಮ ಫಾರ್ಮ್ ಹೌಸ್ ಪಕ್ಕದಲ್ಲಿ ರಕ್ತಕಾರಿ ಶ್ರೀಧರ್ ಸಾವನ್ನಪ್ಪಿದ್ದರು. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.  ಡೆತ್‌ನೋಟ್‌ನಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದೇನೆ ಎಂದಿದ್ದರು. ಅಷ್ಟೇ ಅಲ್ಲದೇ ವಿಡಿಯೋದಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಹೇಳಿದ್ದರು.

    ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಪ್ರತಿಕ್ರಿಯಿಸಿ, ಆತ್ಮಹತ್ಯೆ ಮಾಡಿಕೊಳ್ಳುವಾಗ ಶ್ರೀಧರ್‌ ಡೆತ್ ನೋಟ್ ಬರೆದಿದ್ದರು. ಡೆತ್‌ ನೋಟ್‌ನಲ್ಲಿ ಒಂಟಿತನದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಉಲ್ಲೇಖ ಮಾಡಿದ್ದರು. ಪೊಲೀಸರು ತೊಂದರೆ ಕೊಡಬೇಡಿ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ. ನಮ್ಮ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದು ಡೆತ್ ನೋಟ್ ಮತ್ತು ವಿಡಿಯೋ ಕೂಡ ಪರಿಶೀಲನೆ ಮಾಡಲಾಗುತ್ತಿದೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ವಿಷ ಸೇವಿಸಿ ಸಾವು ಸಂಭವಿಸಿದೆ ಎಂದು ವರದಿ ಬಂದಿದೆ ಎಂದು ತಿಳಿಸಿದರು.

    ಆತ್ಮಹತ್ಯೆ ಪತ್ರದಲ್ಲಿ ಏನಿತ್ತು?
    ಪೊಲೀಸ್ ಸರ್ ನನ್ನ ಸಾವಿಗೆ ನಾನೇ ಕಾರಣ ನನ್ನ ಸಾವಿನ ಬಗ್ಗೆ ಯಾರೂ ಕಾರಣ ಅಲ್ಲ.. ನನ್ನ ಸಾವಿಗೆ ನಾನೇ ಕಾರಣ

    ನನ್ನ ಒಂಟಿತನ ನನಗೆ ತುಂಬಾ ಜಾಸ್ತಿ ಕಾಡುತ್ತಾ ಇತ್ತು. ಎಷ್ಟೇ ಪ್ರಯತ್ನ ಪಟ್ಟರೂ ನನ್ನಿಂದ ಆಗಲಿಲ್ಲ.ಅದಕ್ಕೆಚೆನ್ನಾಗಿ ಯೋಚನೆ ಮಾಡಿ ನನ್ನ ಸಾವಿನ ನಿರ್ಧಾರ ನಾನೇ ಮಾಡಿ ಸಾಯುತ್ತಾ ಇದ್ದೇನೆ.

    ನನ್ನ ಅಮ್ಮ, ಅಪ್ಪ, ಅಕ್ಕಂದಿರು ಮತ್ತು ನನ್ನ ಫ್ರೆಂಡ್ಸ್ ಯಾರಾದ್ರೂ ನನ್ನ ಸಾವಿನ ಬಗ್ಗೆ ಅನುಮಾನ ಇದೆ ಅಂತಾ ಹೇಳಿ ದೂರು ಕೊಟ್ಟರೆ ಅದನ್ನು ತಗೊಬೇಡಿ ಸರ್.

    ಯಾಕಂದ್ರೆ ನನ್ನ ಸಾವು ನನ್ನ ನಿರ್ಧಾರ. ನಾನು ಚೆನ್ನಾಗಿ ಯೋಚನೆ ಮಾಡಿ, ನನ್ನ ನಾನೇ ಕಳೆದು ಕೊಳ್ತಾ ಇದ್ದೇನೆ. ದಯವಿಟ್ಟು ನನ್ನ ಬಗ್ಗೆ ಯಾರೂ ಕೆಟ್ಟದಾಗಿ ತಿಳ್ಕೊಬೇಡಿ. ಪೊಲೀಸ್ ಸರ್ ನನ್ನ ಸಾವಿಗೆ ನಾನೇ ಕಾರಣ. ದಯವಿಟ್ಟು ಸರ್ ಯಾರಿಗೂ ತೊಂದರೆ ಕೊಡಬೇಡಿ.

    ಪ್ಲೀಸ್ ಸರ್. ನನ್ನ ಸಾವಿಗೆ ನಾನೇ ಕಾರಣ ಬದುಕಿದ್ದು ಮನೆ ಕಟ್ಟಬೇಕು ಅಂತಾ ತುಂಬಾ ಆಸೆ ಇತ್ತು. ಆಗ್ತಿಲ್ಲ. ನಾನು ಸತ್ತಮೇಲೆ ನನ್ನ ಗೋರಿ ಆದ್ರು ಕಟ್ಟಿ ಖುಷಿಯಾಗಿ ಇರಿ..

    ಶ್ರೀಧರ್. ಎಸ್

  • ಬಾಡಿಗೆ ಹಣಕ್ಕೆ ಕಿರಿಕ್ – ಪತ್ನಿಯನ್ನು ಹತ್ಯೆಗೈದಿದ್ದ ಪಾಪಿ ಪತಿ ಅರೆಸ್ಟ್

    ಬಾಡಿಗೆ ಹಣಕ್ಕೆ ಕಿರಿಕ್ – ಪತ್ನಿಯನ್ನು ಹತ್ಯೆಗೈದಿದ್ದ ಪಾಪಿ ಪತಿ ಅರೆಸ್ಟ್

    ಬೆಂಗಳೂರು: ಪತ್ನಿಯನ್ನು (Wife) ಚಾಕುವಿನಿಂದ ಇರಿದು ಹತ್ಯೆಗೈದು ತಲೆಮರೆಸಿಕೊಂಡಿದ್ದ ಪಾಪಿ ಪತಿಯನ್ನು ಸರ್ಜಾಪುರ ಪೊಲೀಸರು (Police) ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಗಂಗಿರೆಡ್ಡಿ ಎಂದು ಗುರುತಿಸಲಾಗಿದೆ. ಮನೆ ಬಾಡಿಗೆ ಹಣ ಪಡೆಯುವ ವಿಚಾರವಾಗಿ ಹಾಗೂ ಆಕೆಯ ಶೀಲವನ್ನು ಶಂಕಿಸಿ ಹೆಂಡತಿಯ ಜೊತೆ ಆರೋಪಿ ಆಗಾಗ ಗಲಾಟೆ ನಡೆಸುತ್ತಿದ್ದ. ಅಲ್ಲದೇ ಆರೋಪಿ ಬಾಡಿಗೆ ಹಣವನ್ನು ಕುಡಿದು ಹಾಳು ಮಾಡುತ್ತಿದ್ದ ಎಂದು ಪತ್ನಿಯೇ ಹಣ ಪಡೆಯುತ್ತಿದ್ದಳು. ಇದೇ ಕಾರಣಕ್ಕೆ ಗಂಗರೆಡ್ಡಿ ತನ್ನ ಪತ್ನಿ ಸುಜಾತ (41) ಎಂಬಾಕೆಯನ್ನು ಜೂ.3 ರಂದು ಚಾಕುವಿನಿಂದ ಇರಿದು ಹತ್ಯೆಗೈದಿದ್ದ. ಇದನ್ನೂ ಓದಿ: ಬಿಜೆಪಿ ವಿಜಯೋತ್ಸವದ ಬಳಿಕ ಚಾಕು ಇರಿತ ಪ್ರಕರಣ- ಮೂವರು ಪೊಲೀಸ್ ವಶಕ್ಕೆ

    ಹತ್ಯೆಯ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ವಿರುದ್ಧದ ಅತ್ಯಾಚಾರ ಕೇಸ್ – ಬಸವನಗುಡಿ ನಿವಾಸದಲ್ಲಿ ಎಸ್‍ಐಟಿ ಮಹಜರು

  • ಆನೇಕಲ್‌ನಲ್ಲಿ ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

    ಆನೇಕಲ್‌ನಲ್ಲಿ ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

    ಬೆಂಗಳೂರು: ವಿಷ ಸೇವಿಸಿ ಗಂಡ-ಹೆಂಡತಿ (Husband-Wife) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಬನ್ನೇರುಘಟ್ಟ ಜನತಾ ಕಾಲೋನಿಯಲ್ಲಿ ನಡೆದಿದೆ.

    ಪ್ರಭು (38), ಲಕ್ಕಮ್ಮ (30) ಮೃತ ದುರ್ದೈವಿಗಳು. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ಘಟನೆ ನಡೆದಿದೆ. ಗಂಡ ಪ್ರಭು ಡ್ರೈವರ್ ಕೆಲಸ ಮಾಡುತ್ತಿದ್ದು, ಲಕ್ಕಮ್ಮ ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದರು. ಗಂಡ-ಹೆಂಡತಿ ವಾಸವಿದ್ದ ಮನೆಯಲ್ಲಿ ಕೆಟ್ಟ ವಾಸನೆ ಬರುತ್ತಿದ್ದರಿಂದ ಸ್ಥಳೀಯರು ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಜೂನ್‌ 8 ರಂದು ಸಂಜೆ ನರೇಂದ್ರ ಮೋದಿ ಪ್ರಮಾಣವಚನ

    ದಂಪತಿ ಮೃತಪಟ್ಟು ಮೂರರಿಂದ ನಾಲ್ಕು ದಿನ ಕಳೆದಿರಬಹುದು ಎಂದು ಊಹಿಸಲಾಗಿದೆ. ವಿಶ್ವನಾಥ್ ಎಂಬವರ ಮನೆಯಲ್ಲಿ ದಂಪತಿ ಬಾಡಿಗೆಗಿದ್ದರು. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: 24 ವರ್ಷಗಳ ನಂತ್ರ ಅಧಿಕಾರ ಕಳೆದುಕೊಂಡ ಬಿಜೆಡಿ- ನವೀನ್ ಪಟ್ನಾಯಕ್ ರಾಜೀನಾಮೆ

  • ಮಾಜಿ ಸಚಿವ ಎಂ.ಪಿ.ಕೇಶವಮೂರ್ತಿ ನಿಧನ

    ಮಾಜಿ ಸಚಿವ ಎಂ.ಪಿ.ಕೇಶವಮೂರ್ತಿ ನಿಧನ

    ಬೆಂಗಳೂರು: ಮಾಜಿ ಸಚಿವ, ಆನೇಕಲ್‌ (Anekal) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ಕೇಶವಮೂರ್ತಿ(85) ನಿಧನರಾಗಿದ್ದಾರೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೇಶವಮೂರ್ತಿ (MP Keshavmurthy) ಕೆಲ ಕಾಲದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

    ಆನೇಕಲ್‌ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದ ಇವರು ವೀರಪ್ಪಮೊಯ್ಲಿ ಅವರ ಸಂಪುಟದಲ್ಲಿ ಅರಣ್ಯ ಮತ್ತು ಸಣ್ಣ ನೀರಾವರಿ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

    ಆನೇಕಲ್‌ ತಾಲ್ಲೂಕಿನ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೇಶವಮೂರ್ತಿ ಮಾಡಿದ್ದರು.

  • ಮೊಬೈಲ್ ಕೊಡದಿದ್ದಕ್ಕೆ ಸುತ್ತಿಗೆಯಿಂದ ಹೊಡೆದು ತಮ್ಮನ ಹತ್ಯೆಗೈದ ಅಣ್ಣ

    ಮೊಬೈಲ್ ಕೊಡದಿದ್ದಕ್ಕೆ ಸುತ್ತಿಗೆಯಿಂದ ಹೊಡೆದು ತಮ್ಮನ ಹತ್ಯೆಗೈದ ಅಣ್ಣ

    ಬೆಂಗಳೂರು: ನಗರದ ಹೊರವಲಯದ ಸರ್ಜಾಪುರದಲ್ಲಿ ನಡೆದಿದ್ದ ಅಪ್ರಾಪ್ತನ ಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಆನ್‍ಲೈನ್ ಗೇಮ್ ಆಡಲು ಮೊಬೈಲ್ (Mobile) ಕೊಡದೇ ಇರುವುದಕ್ಕೆ ಆತನ ಅಣ್ಣನೇ ತಮ್ಮನನ್ನು ಹತ್ಯೆಗೈದಿರುವುದು ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ.

    ಇತ್ತೀಚೆಗೆ ಪ್ರಾಣೇಶ್ (15) ಶವ ಸರ್ಜಾಪುರದ ನೆರಿಗಾ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಬಾಲಕನ ಸಹೋದರ ಶಿವಕುಮಾರ್‍ನನ್ನು (18) ವಿಚಾರಣೆ ನಡೆಸಿದಾಗ ತಾನೇ ಹತ್ಯೆಗೈದಿದ್ದಾಗಿ ಒಪ್ಪಿಕೊಂಡಿದ್ದಾನೆ. ಶಿವಕುಮಾರ್ ಆನ್‍ಲೈನ್ ಗೇಮ್ ಹುಚ್ಚಿಗೆ ಬಿದ್ದಿದ್ದು, ಆಟ ಆಡಲು ಮೊಬೈಲ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಹತ್ಯೆಗೈದಿದ್ದಾನೆ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಇದನ್ನೂ ಓದಿ: ಟ್ರ‍್ಯಾಕ್ಟರ್ ರೊಟಾವೆಲ್ಟರ್‌ಗೆ ಸಿಲುಕಿ ದೇಹ ಛಿದ್ರ ಛಿದ್ರ; ಅಜ್ಜಿ ಮನೆಗೆ ಬಂದಿದ್ದ ಬಾಲಕ ಸಾವು

    ಚನ್ನಮ್ಮ ಮತ್ತು ಬಸವರಾಜ್ ಹಾಗೂ ದಂಪತಿಯ ಮಗ ಶಿವಕುಮಾರ್ ಮೂಲತಃ ಆಂಧ್ರ ಮೂಲದ ಸೂಳೆಕೆರಿ ಗ್ರಾಮದವರು. ಕೆಲಸ ಅರಸಿಕೊಂಡು ಕಳೆದ ಮೂರು ತಿಂಗಳ ಹಿಂದೆ ನೆರಿಗಾ ಗ್ರಾಮಕ್ಕೆ ಬಂದಿದ್ದು, ಗಾರೇ ಕೆಲಸ ಮಾಡಿಕೊಂಡಿದ್ದರು. ದಂಪತಿಯ ಇನ್ನೋರ್ವ ಮಗ ಪ್ರಾಣೇಶ್ ಅಜ್ಜಿಯ ಮನೆಯಲ್ಲಿದ್ದು ವಿದ್ಯಾಭ್ಯಾಸ ಮಾಡಿಕೊಂಡಿದ್ದ. ಬೇಸಿಗೆ ರಜೆಯ ಸಲುವಾಗಿ ನೆರಿಗಾ ಗ್ರಾಮಕ್ಕೆ ಬಂದಿದ್ದ. ಈ ವೇಳೆ ಈ ಬಾಲಕ ದುರಂತ ಅಂತ್ಯ ಕಂಡಿದ್ದಾನೆ.

    ಆರೋಪಿ ಮೊದಲೇ ಸಂಚು ರೂಪಿಸಿ ತಮ್ಮನ ಹತ್ಯೆಗೈಯಲು ನಿರ್ಮಾಣ ಹಂತದ ಕಟ್ಟಡದಿಂದ ಸುತ್ತಿಗೆ ತಂದಿದ್ದ. ಬಹಿರ್ದೆಸೆಗೆ ತೆರಳಿದ್ದಾಗ ಆತನ ಮೇಲೆ ದಾಳಿ ಮಾಡಿ ಹತ್ಯೆಗೈದಿದ್ದ. ಬಳಿಕ ನಾಪತ್ತೆಯಾಗಿದ್ದ ಪ್ರಾಣೇಶ್ ಹುಡುಕಾಟ ನಡೆಸಲು ಆರಂಭಿಸಿದಾಗ, ಏನು ಗೊತ್ತಿಲ್ಲದ್ದಂತೆ ತಾನು ಹುಡುಕಾಟ ನಡೆಸಿ ಬಾಲಕನ ಮೃತದೇಹ ಪತ್ತೆಯಾದ ಬಗ್ಗೆ ಮಾಹಿತಿ ಕೊಟ್ಟಿದ್ದ. ತಾನೇ ಮೊದಲು ಮೃತದೇಹ ನೋಡಿದ್ದಾಗಿ ಹೇಳಿದ್ದ. ಇದರಿಂದ ಪೊಲೀಸರಿಗೆ ಆತನ ಮೇಲೆ ಅನುಮಾನ ಮೂಡಿ ವಿಚಾರಣೆ ನಡೆಸಿದಾಗ ಸತ್ಯಾಂಶ ಪ್ರಕಟವಾಗಿದೆ. ಇದನ್ನೂ ಓದಿ: ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿ ಅರೆಸ್ಟ್‌

  • ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ

    ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ

    – ಆನೆಕಲ್‍ನಲ್ಲೂ ಆಲಿಕಲ್ಲು ಮಳೆ

    ಬೆಂಗಳೂರು: ಬಿಸಿಲಿನ ತಾಪದಿಂದ ಕಂಗೆಟ್ಟ ಸಿಲಿಕಾನ್ ಸಿಟಿಗೆ ಮತ್ತೆ ವರುಣ (Rain In Bengaluru) ಎಂಟ್ರಿ ಕೊಟ್ಟಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಗುಡುಗು, ಮಿಂಚು ಸಹಿತ ಧಾರಕಾರ ಮಳೆಯಾಗುತ್ತಿದೆ. ಇನ್ನೂ ಕೆಲವೆಡೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ.

    ಹವಾಮಾನ ಇಲಾಖೆಯು ಇಂದು ಸಂಜೆಯೊಳಗೆ ಮಳೆಯ ಮುನ್ಸೂಚನೆ ನೀಡಿತ್ತು. ಅಂತೆಯೇ ಸಂಜೆಯಾಗ್ತಿದ್ದಂತೆಯೇ ನಗರದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಜೊತೆಗೆ ಆನೇಕಲ್ ತಾಲೂಕಿನಾದ್ಯಂತ ಈ ವರ್ಷದ ಮೊದಲ ಮಳೆಯಾಗುತ್ತಿದೆ. ಇದನ್ನೂ ಓದಿ: ಪೆನ್‍ಡ್ರೈವ್ ಪ್ರಕರಣದಲ್ಲಿ ಷಡ್ಯಂತ್ರ- ಡಿಕೆಶಿ ವಿರುದ್ಧ ದೇವರಾಜೇಗೌಡ ನೇರ ಆರೋಪ

    ಮೆಜೆಸ್ಟಿಕ್, ಕೆ ಆರ್ ಮಾರ್ಕೆಟ್, ಜಯನಗರ, ಜೆಜೆಆರ್ ನಗರ, ಟೌನ್ ಹಾಲ್ ಸುತ್ತ ಮುತ್ತ ಭಾರೀ ಮಳೆಯಾಗುತ್ತಿದೆ. ಸದಾಶಿವ ನಗರ, ಪ್ಯಾಲೇಸ್ ಗುಟ್ಟಹಳ್ಳಿ, ಮಲ್ಲೇಶ್ವರ, ವೈಯಾಲಿಕಾವಲ್, ಅರಮನೆ ಮೈದಾನ, ಶೇಷಾದ್ರಿಪುರ, ಯಶವಂತಪುರ ಸುತ್ತಮುತ್ತ ಆಲಿಕಲ್ಲು ಮಳೆಯಾಗುತ್ತಿದೆ. ವಿಧಾನಸೌಧ, ಕೆ.ಆರ್ ಸರ್ಕಲ್, ಕಾರ್ಪೋರೇಷನ್, ಟೌನ್ ಹಾಲ್ ಸುತ್ತಮುತ್ತ ಗುಡುಗು, ಮಿಂಚು ಸಹಿತ ಜೋರು ಮಳೆಯಾಗುತ್ತಿದೆ.

    ಬೆಂಗಳೂರು ಹೊರವಲಯದ ಆನೇಕಲ್ ಸುತ್ತಮುತ್ತ ಕೂಡ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ವಣಕನಹಳ್ಳಿ, ಸೋಲೂರು ಗೊಮ್ಮಾಳಾಪುರ, ಭಾಗದಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಆನೇಕಲ್ ಅತ್ತಿಬೆಲೆ ಚಂದಾಪುರ ಜಿಗಣಿ ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತ ಮಳೆಯಾಗುತ್ತಿದೆ. ಬಿಸಿಲ ಬೇಗೆಗೆ ಬೆಂಡಾಗಿದ್ದ ಭೂಮಿಗೆ ವರುಣ ತಂಪೆರೆದಿದ್ದಾನೆ. ದಿಢೀರ್ ಸುರಿದ ಮಳೆಯಿಂದ ಅಲ್ಲಲ್ಲಿ ಜನ ಪರದಾಟ ಅನುಭವಿಸಿದ್ದಾರೆ.

  • ಮತದಾರರನ್ನ ಸೆಳೆಯಲು ಆನೇಕಲ್‍ನಲ್ಲಿ ವಿಭಿನ್ನ ಪ್ರಯತ್ನ

    ಮತದಾರರನ್ನ ಸೆಳೆಯಲು ಆನೇಕಲ್‍ನಲ್ಲಿ ವಿಭಿನ್ನ ಪ್ರಯತ್ನ

    ಆನೇಕಲ್: ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಗೆ (Loksabha Elections 2024) ಮತದಾನ ನಡೆಯುತ್ತಿದೆ. ರಾಜಕಾರಣಿಗಳು, ಸೆಲೆಬ್ರಿಟಿಗಳು ಮತ ಹಾಕಿ, ಎಲ್ಲರೂ ಮತದಾನ ಮಾಡುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ಆನೇಕಲ್‍ನಲ್ಲಿ ಮತದಾರರನ್ನು ಸೆಳೆಯಲು ವಿಭಿನ್ನ ಪ್ರಯತ್ನವೊಂದು ನಡೆದಿದೆ.

    ಹೌದು. ಬಿಸಿಲಿನ ಬೇಗೆಯ ನಡುವೆಯೂ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ನೀಡುತ್ತಿದ್ದಾರೆ. ಹೀಗಾಗಿ ಬಿಸಿಲಿನ ದಗೆಗೆ ಬಿಸಿಲಿನ ದಗೆಗೆ ಪಾನಕ, ಮಜ್ಜಿಗೆ ನೀಡುವ ಮೂಲಕ ಮತದಾರರನ್ನು ಹುರಿದುಂಬಿಸಲಾಗುತ್ತಿದೆ. ಇದನ್ನೂ ಓದಿ: ತಪ್ಪದೇ ಮತದಾನ ಮಾಡಿ: ಕಾಂತಾರ ಬೆಡಗಿ ಸಪ್ತಮಿ ಗೌಡ

    ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲೂಕಿನ ಶಾಂತಿಪುರದಲ್ಲಿ ಮತದಾರರಿಗೆ ಪಾನಕ ನೀರು, ಮಜ್ಜಿಗೆ, ಹೆಸರುಬೇಳೆ ವಿತರಣೆ ಮಾಡಲಾಗುತ್ತಿದೆ. ಮತದಾರರು ಪಾನಕ ಕುಡಿದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಅತ್ಯಂತ ಉತ್ಸಾದಿಂದಲೇ ಬಂದು ಸಾರ್ವಜನಿಕರು ಮತದಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

    ಬೆಳಗ್ಗೆ 9 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರದಲ್ಲಿ 8.39% ಮತದಾನವಾಗಿದೆ. ಇಲ್ಲಿ ಕಾಂಗ್ರೆಸ್ ನಿಂದ ಡಿ.ಕೆ ಸುರೇಶ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಡಾ. ಸಿ.ಎನ್ ಮಂಜುನಾಥ್ ಚುನಾವಣಾ ಅಖಾಡದಲ್ಲಿದ್ದಾರೆ.

  • ಬನ್ನೇರುಘಟ್ಟದ ಬಿಜೆಪಿ ಮುಖಂಡ ಜಯರಾಮ್ ಕಾಂಗ್ರೆಸ್ ಸೇರ್ಪಡೆ

    ಬನ್ನೇರುಘಟ್ಟದ ಬಿಜೆಪಿ ಮುಖಂಡ ಜಯರಾಮ್ ಕಾಂಗ್ರೆಸ್ ಸೇರ್ಪಡೆ

    ಆನೇಕಲ್:‌ ಸಂಸದ ಡಿಕೆ ಸುರೇಶ್‌ ಅವರು ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿಗೆ (BJP) ಶಾಕ್ ನೀಡಿದ್ದಾರೆ. ಬನ್ನೇರುಘಟ್ಟದ (BannerGhatta)  ಬಿಜೆಪಿ ಮುಖಂಡ ಜಯರಾಮ್ (Jayaram) ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

    ಬನ್ನೇರುಘಟ್ಟ ಜಯರಾಮ್ ಅವರು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದಾರೆ. ದಿಢೀರ್‌ ಬೆಳವಣಿಗೆಯಂತೆ ಭಾನುವಾರ ರಾತ್ರಿ ಜಯರಾಮ್ ಹಾಗೂ ಬೆಂಬಲಿಗರು ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಸುರೇಶ್‌ ಸಮ್ಮುಖದಲ್ಲಿ ಸೇರ್ಪಡೆಯಾದರು.

    ಬನ್ನೇರುಘಟ್ಟ ಜಯರಾಮ್ ಈ ಹಿಂದೆಯೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ (Congress) ಸೇರ್ಪಡೆಯಾಗಿದ್ದರು. ಬಳಿಕ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿಗೆ ವಾಪಸ್ ಆಗಿದ್ದರು. ಈಗ ಮತ್ತೆ ಕಾಂಗ್ರೆಸ್‌ಗೆ ಸೇರಿಕೊಳ್ಳುವ ಮೂಲಕ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಗೆ ಶಾಕ್ ನೀಡಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣಾ ಪ್ರಚಾರದಿಂದ ಹಿಂದೆ ಸರಿದ ಖುಷ್ಬು

  • ನಿಯಂತ್ರಣ ತಪ್ಪಿ ನೆಲಕ್ಕುರುಳಿದ 120 ಅಡಿ ಎತ್ತರದ ತೇರು

    ನಿಯಂತ್ರಣ ತಪ್ಪಿ ನೆಲಕ್ಕುರುಳಿದ 120 ಅಡಿ ಎತ್ತರದ ತೇರು

    ಆನೇಕಲ್: ನಿಯಂತ್ರಣ ತಪ್ಪಿ ಸುಮಾರು 120 ಅಡಿ ಉದ್ದದ ತೇರು ನೆಲಕ್ಕುರುಳಿದ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲೂಕಿನ ಹೀಲಲಿಗೆ (Hilalige) ಗ್ರಾಮದಲ್ಲಿ ನಡೆದಿದೆ.

    ತೇರು ನೂರಾರು ವರ್ಷಗಳ ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆಗೆ ಹೋಗುತ್ತಿತ್ತು. ಹತ್ತಾರು ಊರುಗಳಿಂದ ಹುಸ್ಕೂರಿನ ಮದ್ದೂರಮ್ಮ ಜಾತ್ರೆಗೆ ತೇರು ಬರುತ್ತವೆ. ಹೀಲಲಿಗೆ ಗ್ರಾಮದಿಂದ ಹುಸ್ಕೂರಿಗೆ ಬರುತ್ತಿದ್ದ ತೇರು ಕಮ್ಮಸಂದ್ರದ ಹೈಪರ್ ಮಾರ್ಕೆಟ್ ತಿರುವಿನಲ್ಲಿ ಉರುಳಿಬಿದ್ದಿದೆ. ಇದನ್ನೂ ಓದಿ: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ ಮುದ್ರೆ ಹೊಂದಿದೆ, ಎಡಪಂಥಿಯರ ಪ್ರಾಬಲ್ಯವಿದೆ – ಮೋದಿ ಆರೋಪ

    ಹುಸ್ಕೂರು ಮದ್ದೂರಮ್ಮ ಜಾತ್ರೆಗೆ ಆಗಮಿಸುತ್ತಿದ್ದ ತೇರು ಎತ್ತುಗಳು ಮತ್ತು ಟ್ರಾಕ್ಟರ್‌ಗಳ ನೆರವಿನಿಂದ ಎಳೆದು ತರಲಾಗುತ್ತಿತ್ತು. ಅದೃಷ್ಟವಶಾತ್ ಘಟನೆಯಿಂದ ಯಾವುದೇ ಸಾವುನೋವು ಸಂಭವಿಸಿಲ್ಲ. ಇದನ್ನೂ ಓದಿ: ನಾಲ್ಕೈದು ಲಕ್ಷಕ್ಕೆ ಮಾರಾಟ- ಸಿಬಿಐ ದಾಳಿ ಮಾಡಿ ನವಜಾತ ಶಿಶುಗಳ ರಕ್ಷಣೆ