Tag: anekal

  • ಹಾಡಹಗಲೇ ಮನೆಯಲ್ಲಿದ್ದ ಒಂಟಿ ಮಹಿಳೆಯ ಕತ್ತು ಹಿಸುಕಿದ ದುಷ್ಕರ್ಮಿಗಳು

    ಹಾಡಹಗಲೇ ಮನೆಯಲ್ಲಿದ್ದ ಒಂಟಿ ಮಹಿಳೆಯ ಕತ್ತು ಹಿಸುಕಿದ ದುಷ್ಕರ್ಮಿಗಳು

    ಆನೇಕಲ್/ಬೆಂಗಳೂರು:‌ ಹಾಡಹಗಲೇ ಗೃಹಿಣಿಯೋರ್ವಳನ್ನ ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಸಿಲಿಕಾನ್ ವ್ಯಾಲಿ ಖ್ಯಾತಿಯ ಎಲೆಕ್ಟ್ರಾನಿಕ್ ಸಿಟಿಯ ಮಗ್ಗಲಿನಲ್ಲಿಯೇ ನಡೆದಿದೆ. ಇದು ಐಟಿಬಿಟಿ (ITBT) ಸಿಟಿಯ ಜನರನ್ನ ಬೆಚ್ಚಿ ಬೀಳಿಸಿದೆ.

    ಮೃತ ಮಹಿಳೆಯನ್ನು ನೀಲಂ(30) ಎಂದು ಗುರುತಿಸಲಾಗಿದೆ. ಮೂಲತಃ ಉತ್ತರ ಪ್ರದೇಶದವರಾಗಿರುವ ಈಕೆ ತನ್ನ ಕುಟುಂಬದ ಜೊತೆ ಕಳೆದ ಕೆಲ ವರ್ಷಗಳ ಹಿಂದೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಬೆಟ್ಟದಾಸನಪುರದ ಸಾಯಿ ಶಕ್ತಿ ಬಡಾವಣೆಯ ಗಂಗಾ ಬ್ಲಾಕ್ ನ ಬಾಡಿಗೆ ಮನೆಯಲ್ಲಿ ವಾಸವಿದ್ರು. ಪತಿ ಹಾರ್ಡ್ ವೇರ್ ಶಾಪ್ ಜೊತೆಗೆ ಪೈಂಟಿಂಗ್ ಕಾಂಟ್ರಾಕ್ಟ್ ಕೆಲಸ ಮಾಡಿಕೊಂಡಿದ್ದ. ಎಂದಿನಂತೆ ಮಕ್ಕಳು ಶಾಲೆಗೆ ಹೋಗಿದ್ರೆ, ಪತಿ ಕೆಲಸಕ್ಕೆ ಹೋಗಿದ್ದ ಎನ್ನಲಾಗಿದೆ.

    ಮನೆಯಲ್ಲಿ ಮಹಿಳೆ ನೀಲಂ ಮಾತ್ರ ಒಬ್ಬಂಟಿಯಾಗಿದ್ದಾಗ ಯಾರೋ ಅಪರಿಚಿತರು ಮನೆಗೆ ನುಗ್ಗಿ ಮಹಿಳೆಯ ಹತ್ಯೆ ಮಾಡಿದ್ದಾರೆ. ಆದರೆ ದುಷ್ಕರ್ಮಿಗಳು ಯಾವುದೇ ಒಡವೆ, ಹಣವನ್ನು ಕದ್ದಿಲ್ಲ. ಹೀಗಾಗಿ ಈ ಕೊಲೆಯ ಹಿಂದೆ ಅನುಮಾನಗಳು ಹುಟ್ಟಿಕೊಂಡಿವೆ. ಇದನ್ನೂ ಓದಿ: ಡಬಲ್ ಬ್ಯಾರೆಲ್ ಗನ್‌ನಿಂದ ಶೂಟ್ ಮಾಡಿಕೊಂಡು BE ವಿದ್ಯಾರ್ಥಿ ಆತ್ಮಹತ್ಯೆ‌

    ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು, ಶ್ವಾನದಳ ಹಾಗೂ ಎಫ್ಎಸ್ಎಲ್ ತಂಡ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕವಾಗಿ ಪರಿಚಿತರೇ ಹತ್ಯೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ಹಾಗೂ ಆಕೆಯ ಕಾಲ್ ಡಿಟೈಲ್ಸ್ ಗಳನ್ನ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆ ಪ್ರಕರಣ ಆರೋಪಿಯನ್ನ ಬಂಧಿಸಲು ವಿಶೇಷ ತಂಡ ಮಾಡಲಾಗಿದೆ ಎಂದು ಅಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ ಹೇಳಿದ್ದಾರೆ.

    ಈ ಕೊಲೆ ಲಾಭಕ್ಕಾಗಿ ಅಲ್ಲ ಬಹುಶಃ ವೈಯಕ್ತಿಕ ವಿಚಾರವಾಗಿ ನಡೆದಿರುವ ಶಂಕೆ ವ್ಯಕ್ತವಾಗಿದೆ.‌ ಒಟ್ಟಿನಲ್ಲಿ ಕೊಲೆ ಯಾವೊಂದು ವಿಚಾರವಾಗಿ ನಡೆದಿದೆ ಅನ್ನೋದು ಪೊಲೀಸರ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

  • ಸಿನಿಮಾ ಸ್ಟೈಲ್‍ನಲ್ಲಿ ಬ್ರ್ಯಾಂಡೆಡ್ ಶೂಗಳ ಕಳ್ಳತನ

    ಸಿನಿಮಾ ಸ್ಟೈಲ್‍ನಲ್ಲಿ ಬ್ರ್ಯಾಂಡೆಡ್ ಶೂಗಳ ಕಳ್ಳತನ

    ಆನೇಕಲ್: ಕೋಟಿ ಮೌಲ್ಯದ ಬ್ರಾಂಡೆಡ್ ಶೂಗಳು. ಅವುಗಳನ್ನು ತುಂಬಿದ್ದ ಈಚರ್ ವಾಹನ ಸಮೇತ ಸಿನಿಮಾ ಸ್ಟೈಲ್‍ನಲ್ಲಿ ಕಳ್ಳತನ ಮಾಡಲಾಗಿತ್ತು. ಸಣ್ಣ ಸುಳಿವು ನೀಡದೇ ಕಾಸ್ಲ್ಟಿ ಶೂಗಳನ್ನು ಕದ್ದಿದ್ದ ಖದೀಮರನ್ನು ಅತ್ತಿಬೆಲೆ ಪೊಲೀಸರು ಬಂಧಿಸಿದ್ದಾರೆ.

    ಅಸ್ಸಾಂ ಮೂಲದ ಸುಭಾನ್ ಪಾಷಾ, ಮನ್ಸರ್ ಅಲಿ ಮತ್ತು ಶಹಿದ್ದುಲ್ ರೆಹಮಾನ್ ಬಂಧಿತರು. ಇದೀಗ ಇವರು ಬ್ರಾಂಡೆಡ್ ನೈಕಿ ಶೂಗಳನ್ನು ಕದ್ದು ಜೈಲು ಪಾಲಾಗಿದ್ದಾರೆ. ಕಳೆದ ತಿಂಗಳು 21 ರಂದು ಬೆಂಗಳೂರು ಹೊರವಲಯ ಆನೇಕಲ್ ಸಮೀಪದ ಶೆಟ್ಟಿಹಳ್ಳಿ ಬಳಿಯ ನೈಕಿ ಗೋದಾಮಿನಿಂದ ಹೊಸಕೋಟೆ ಬಳಿಯ ಮಿಂತ್ರ ಗೋದಾಮಿಗೆ ಹೊರಟಿದ್ದ ಶೂ ಹೊತ್ತ ಈಚರ್ ವಾಹನ ಕಾಣೆಯಾಗಿತ್ತು. ಸುಮಾರು ಒಂದು ಕೋಟಿ ಹತ್ತು ಲಕ್ಷ ಮೌಲ್ಯದ 1,558 ಜೊತೆ ಶೂ ಸಹಿತ ಈಚರ್ ವಾಹನ ಕಳುವಾದ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

    ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ನಾಪತ್ತೆಯಾದ ಈಚರ್ ವಾಹನ ಚಾಲಕನ ಹಿಸ್ಟರಿ ಚೆಕ್ ಮಾಡಿದ್ದಾರೆ. ಆತ ಈ ಹಿಂದೆ ಕಾಸ್ಟ್ಲಿ ಬೆಲೆಯ ಬ್ರಾಂಡೆಡ್ ಬಟ್ಟೆಗಳನ್ನು ಇದೇ ರೀತಿ ವಾಹನ ಸಮೇತ ಕದ್ದು, ಜೈಲು ಸೇರಿದ್ದ ಎಂಬ ಮಾಹಿತಿ ಆಧರಿಸಿ ತನಿಖೆ ನಡೆಸಿದಾಗ ಶೂಗಳ ಜೊತೆ ಅಸ್ಸಾಂ ಮೂಲದ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಆನೇಕಲ್ ಗೋದಾಮಿನಿಂದ ಶೂಗಳನ್ನು ತುಂಬಿಕೊಂಡ ಹೊರಟ ವಾಹನವನ್ನು ಹೊಸಕೋಟೆ ಬದಲು ನಗರದ ರಜಾಕ್ ಪಾಳ್ಯಕ್ಕೆ ಕದ್ದೊಯ್ದಿದ್ದಾರೆ. ಅಲ್ಲಿನ ಮನೆಯೊಂದರಲ್ಲಿ ಅನ್ ಲೋಡ್ ಮಾಡಿದ ಅಸಾಮಿಗಳು ಈಚರ್ ವಾಹನವನ್ನು ಚಿಕ್ಕಜಾಲದ ಬಳಿ ಬಿಟ್ಟು ಪರಾರಿಯಾಗಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಸತ್ತೇ ಹೋದೆ ಅಂದ್ಕೊಂಡೆ – ಅವಘಡಕ್ಕೀಡಾದ ವಿಮಾನದೊಳಗಿದ್ದ ಪ್ರಯಾಣಿಕ

    ಈ ನಡುವೆ ಅತ್ತಿಬೆಲೆ ಪೊಲೀಸರ ಹೊಸೂರು ಮುಖ್ಯರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ಸಾಗುತ್ತಿದ್ದ 407 ವಾಹನವನ್ನು ಅಡ್ಡಗಟ್ಟಿದಾಗ ನಿಲ್ಲಿಸದೇ ಮುಂದೆ ಸಾಗಿದ್ದಾರೆ. ಪೊಲೀಸರು ಚೇಸ್ ಮಾಡುತ್ತಿದ್ದಂತೆ ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಪರಿಶೀಲನೆ ವೇಳೆ ಕಂಚಿನ ದೇವರ ವಿಗ್ರಹ, ಕಳಶ ದೀಪದ ಕಂಬಗಳು ಪತ್ತೆಯಾಗಿದ್ದು, ತನಿಖೆ ವೇಳೆ ತಮಿಳುನಾಡಿನ ಹೊಸೂರಿನ ಅಂಗಡಿಯೊಂದರಲ್ಲಿ ಕದ್ದ ವಸ್ತುಗಳು ಎಂದು ತಿಳಿದು ಬಂದಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

    ಒಟ್ಟಿನಲ್ಲಿ ಸಣ್ಣ ಸುಳಿವು ನೀಡದೇ ಪಕ್ಕಾ ಸಿನಿಮಾ ಸ್ಟೈಲ್ ನಲ್ಲಿ ಬ್ರಾಂಡೆಡ್ ನೈಕಿ ಶೂಗಳನ್ನು ಎಗರಿಸಿದ್ದವರಲ್ಲಿ ಪ್ರಮುಖ ಆರೋಪಿ ಸಲೇ ಮಹಮದ್ ಲಷ್ಕರ್ ತಲೆ ಮರೆಸಿಕೊಂಡಿದ್ದು, ಉಳಿದ ಆರೋಪಿಗಳ ಪತ್ತೆಗಾಗಿ ಅತ್ತಿಬೆಲೆ ಪೊಲೀಸರು ಬಲೆ ಬೀಸಿದ್ದಾರೆ.

  • ಅಸ್ವಸ್ಥಗೊಂಡಿದ್ದ ಕೈದಿ ಸಾವು- ಮರ್ಮಾಂಗಕ್ಕೆ ಖಾರದ ಪುಡಿ ಹಾಕಿದ್ರಾ ಪೊಲೀಸ್ರು?

    ಅಸ್ವಸ್ಥಗೊಂಡಿದ್ದ ಕೈದಿ ಸಾವು- ಮರ್ಮಾಂಗಕ್ಕೆ ಖಾರದ ಪುಡಿ ಹಾಕಿದ್ರಾ ಪೊಲೀಸ್ರು?

    ಆನೇಕಲ್: ಡಕಾಯಿತಿ ಪ್ರಕರಣದಲ್ಲಿ ಬಂಧಿಸಿದ್ದ ಆರೋಪಿ ನಿಗೂಢ ಸಾವನ್ನಪ್ಪಿರೋ ಘಟನೆ ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್  ಪೊಲೀಸ್ ಠಾಣೆಯಲ್ಲಿ ನಡೆದಿದೆ.

    ಮಡಿವಾಳದ ತಾವರೆಕೆರೆ ಮೂಲದ ಆರೋಪಿ ಗಣೇಶ್‍ನನ್ನ ದರೋಡೆ ಪ್ರಕರಣದಲ್ಲಿ (Robbery case) 2023ರ ಡಿಸೆಂಬರ್ 22ರಂದು ಬಂಧಿಸಲಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಗಣೇಶ್ ತೀವ್ರ ನೋವಿನಿಂದ ಒದ್ದಾಡಿದ್ದ. ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.

    ಆರೋಪಿಯನ್ನ ಠಾಣೆಯಲ್ಲಿ ಹಲವು ದಿನ ಇಟ್ಟುಕೊಂಡಿದ್ದ ಪೊಲೀಸರು, ತೀವ್ರ ವಿಚಾರಣೆಗೆ ಒಳಪಡಿಸಿದ್ರು. ವಿಚಾರಣೆ ಮಾಡುವ ವೇಳೆ ಮರ್ಮಾಂಗಕ್ಕೆ ಗಾಯ ಆಗಿತ್ತು. ಮರ್ಮಾಂಗಕ್ಕೆ ಖಾರದಪುಡಿ ಹಾಕಿರೋದಾಗಿ ಕುಟುಂಬಸ್ಥರು ಹಾಗೂ ಸ್ನೇಹಿತರು ಹೆಚ್‍ಎಸ್‍ಆರ್ ಠಾಣೆ ಪೊಲೀಸರ (HSR Police Station) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಬಟ್ಟೆ ಕಳ್ಳಿ ಅನಿಸಿಕೊಂಡ ಬಿಗ್ ಬಾಸ್ ಸ್ಪರ್ಧಿ: ದೂರು ದಾಖಲು

  • ಕೆರೆ ಏರಿ ಮೇಲಿಂದ ಉರುಳಿ ಬಿದ್ದ ಬಸ್- 20ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರು ಗಂಭೀರ

    ಕೆರೆ ಏರಿ ಮೇಲಿಂದ ಉರುಳಿ ಬಿದ್ದ ಬಸ್- 20ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರು ಗಂಭೀರ

    ಆನೇಕಲ್: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಕೆರೆ ಏರಿ ಮೇಲಿಂದ ಕೆಳಗೆ ಉರುಳಿ ಬಿದ್ದ ಘಟನೆ ಬೆಂಗಳೂರು ಹೊರವಲಯ ಆನೇಕಲ್‍ನಲ್ಲಿ (Anekal)  ನಡೆದಿದೆ.

    ಆನೇಕಲ್ ತಾಲೂಕಿನ ಅತ್ತಿಬೆಲೆ- ಸರ್ಜಾಪುರ ಮುಖ್ಯ ರಸ್ತೆಯ ಬಿದರಗುಪ್ಪೆ ಕೆರೆ ಏರಿ ಮೇಲೆ ಘಟನೆ ನಡೆದಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್ ಬಾಂಬ್ ದಾಳಿ ಹಿಂದೆ ಬಿಜೆಪಿ ಕೈವಾಡ: ಸಚಿವ ತಂಗಡಗಿ

    ಖಾಸಗಿ ಬಸ್ ಚಿಕ್ಕ ಬೆಳಂಡೂರಿನಿಂದ ಓಂ ಶಕ್ತಿಗೆ ಹೋಗುತ್ತಿತ್ತು. ಈ ಬಸ್ಸಿನಲ್ಲಿ ಸುಮಾರು 50 ಮಂದಿ ಪ್ರಯಾಣ ಮಾಡುತ್ತಿದ್ದರು. ಕೆರೆ ಏರಿ ಮೇಲೆ ಬರುತ್ತಿದ್ದಾಗ ಬಸ್ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಕೂಡಲೇ ಸ್ಥಳೀಯರ ಸಹಕಾರದಿಂದ ಬಸ್ಸಿನಲ್ಲಿದ್ದ ಎಲ್ಲರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಕೆರೆ ಏರಿ ಮೇಲಿನ ಇನ್ನೊಂದು ಭಾಗದಲ್ಲಿ ಸಂಪೂರ್ಣವಾಗಿ ಕೆರೆಯಲ್ಲಿ ನೀರು ತುಂಬಿತ್ತು. ಎಡಬದಿಗೆ ಬಸ್ ಬಿದ್ದಿದ್ದರಿಂದ ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ. ಅತ್ತಿಬೆಲೆ ಪೊಲೀಸ್ (Attibele Police Station) ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಇದನ್ನೂ ಓದಿ: ತ್ರಿಷಾ ಪ್ರಕರಣ: ಮನ್ಸೂರ್ ಅಲಿಖಾನ್ ಗೆ ದಂಡ ವಿಧಿಸಿದ ಹೈಕೋರ್ಟ್

  • ಬೆಂಗಳೂರು ಇತಿಹಾಸದಲ್ಲೇ ಮೊದಲ ಬಾರಿ ಕೆರೆ ಸೀಜ್

    ಬೆಂಗಳೂರು ಇತಿಹಾಸದಲ್ಲೇ ಮೊದಲ ಬಾರಿ ಕೆರೆ ಸೀಜ್

    ಬೆಂಗಳೂರು: ನಗರದ ಇತಿಹಾಸದಲ್ಲೇ ಮೊದಲ ಬಾರಿಗೆ ಕೆರೆಯೊಂದನ್ನು (Lake) ಸೀಜ್ ಮಾಡಲಾಗಿದೆ. ಕೆರೆಯ ಒಳಗೆ ಪ್ರವೇಶಿಸುವ ಮಾರ್ಗಗಳನ್ನು ಜಿಲ್ಲಾಡಳಿತ ಬಂದ್ ಮಾಡಿದೆ.

    ಖಾಸಗಿ ಕಂಪನಿಯೊಂದರಿಂದ ಜಿಗಣಿಯ (Jigani) ಹೆನ್ನಾಗರ ಕೆರೆ (Hennagar Lake) ಒತ್ತುವರಿ ಕಾರ್ಯ ನಡೆಯುತ್ತಿತ್ತು. ಕೆರೆ ಒಳಗಡೆ ಮಣ್ಣು ಹಾಕಿ ಮುಚ್ಚಲು ಯತ್ನಿಸಲಾಗುತ್ತಿತ್ತು. ಹೆನ್ನಾಗರ ಕೆರೆ ಒತ್ತುವರಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಆನೇಕಲ್ ತಹಶೀಲ್ದಾರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

    ದೂರು ನೀಡಿದ ಬಳಿಕ ಕೆರೆ ಒತ್ತುವರಿ ಬಗ್ಗೆ ಅಧಿಕಾರಿಗಳು ಪರಿಶೀಲನೆ ಮಾಡಿ ಖಾಸಗಿ ಕಂಪನಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಲಾರಿಗಳಲ್ಲಿ ಮಣ್ಣನ್ನು ಕೊಂಡೊಯ್ದು ಮುಚ್ಚಲು ಯತ್ನಿಸುತ್ತಿದ್ದವರನ್ನು ತಡೆಯಲಾಗಿದೆ. ಈಗ ಒಳಗಡೆ ಯಾವುದೇ ವಾಹನ ಪ್ರವೇಶ ಮಾಡದಂತೆ ಕೆರೆಯ ಪ್ರವೇಶ ದ್ವಾರಗಳನ್ನು ಬ್ಯಾರಿಕೇಡ್ ಹಾಗೂ ಕಬ್ಬಿಣದ ಸರಳುಗಳನ್ನು ಹಾಕಿ ಬಂದ್ ಮಾಡಲಾಗಿದೆ. ಇದನ್ನೂ ಓದಿ: ಕೆರೆಯ ಮಣ್ಣು ಅಕ್ರಮ ಸಾಗಾಟ – ಗ್ರಾಮಸ್ಥರಿಂದ 50ಕ್ಕೂ ಹೆಚ್ಚು ಲಾರಿಗಳನ್ನು ತಡೆದು ಆಕ್ರೋಶ

    ತಹಶೀಲ್ದಾರ್ ದೂರಿನ ಅನ್ವಯ ಜಿಗಣಿ ಪೊಲೀಸ್ ಠಾಣೆ ಪೊಲೀಸರು ಕೆರೆಯ ಪ್ರವೇಶದ್ವಾರಗಳನ್ನು ಮುಚ್ಚಿದ್ದಾರೆ. ಒತ್ತುವರಿ ಮಾಡುತ್ತಿದ್ದ ವೀಡಿಯೋ ಆಧರಿಸಿ ತಹಶೀಲ್ದಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇದೀಗ ಖಾಸಗಿ ಕಂಪನಿ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ – ತನಿಖೆಗೆ ಹಾಜರಾಗದೇ ಶ್ರೀಕಿ ಕಳ್ಳಾಟ

  • ಕೆರೆಯ ಮಣ್ಣು ಅಕ್ರಮ ಸಾಗಾಟ – ಗ್ರಾಮಸ್ಥರಿಂದ 50ಕ್ಕೂ ಹೆಚ್ಚು ಲಾರಿಗಳನ್ನು ತಡೆದು ಆಕ್ರೋಶ

    ಕೆರೆಯ ಮಣ್ಣು ಅಕ್ರಮ ಸಾಗಾಟ – ಗ್ರಾಮಸ್ಥರಿಂದ 50ಕ್ಕೂ ಹೆಚ್ಚು ಲಾರಿಗಳನ್ನು ತಡೆದು ಆಕ್ರೋಶ

    ಬೆಂಗಳೂರು: ಕೆರೆಯಿಂದ ಪ್ರತಿನಿತ್ಯ ಮಣ್ಣು ಸಾಗಿಸುತ್ತಿರುವುದರಿಂದ ಅತ್ತಿಬೆಲೆ – ಅನೆಕಲ್ (Anekal) ಮುಖ್ಯ ರಸ್ತೆ ಹಾಳಾಗುತ್ತಿದೆ ಎಂದು ಕರ್ಪೂರು ಗ್ರಾಮದ ಜನರು ಮಣ್ಣು ಸಾಗಿಸುತ್ತಿದ್ದ 50ಕ್ಕೂ ಹೆಚ್ಚು ಲಾರಿಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕರ್ಪೂರು ಗ್ರಾಮದ ಕೆರೆಯಿಂದ (Lake) ರಸ್ತೆ ಅಭಿವೃದ್ಧಿಗೆ ಎಸ್‍ಎಸ್‍ಸಿ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಗುತ್ತಿಗೆದಾರ ಮಣ್ಣು ಸಾಗಿಸುತ್ತಿದ್ದು, ಲಾರಿ ಚಾಲಕರು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡುತ್ತಿದ್ದಾರೆ. ಇದರಿಂದ ಗ್ರಾಮದ ರಸ್ತೆ ಹಾಳಾಗುತ್ತಿದೆ. ಅಲ್ಲದೇ ಅನುಮತಿಗಿಂತ ಹೆಚ್ಚಿನ ಮಣ್ಣು ತೆಗೆಯುತ್ತಿರುವುದರಿಂದ ಕೆರೆ ಸೇರಿದಂತೆ ಗ್ರಾಮದ ಪರಿಸರ ಹಾಳಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಶಿವರಾಜ್‌ಸಿಂಗ್‌ ರಾಜ್ಯ ರಾಜಕೀಯ ಅಂತ್ಯ – ಲೋಕಸಭೆಗೆ ಸ್ಪರ್ಧೆ?

    ಸಾವಿರಾರು ಲೋಡ್‍ಗಳಷ್ಟು ಮಣ್ಣನ್ನು ಸಾಗಿಸಲಾಗಿದೆ. ಇದರಿಂದ ಬೇಸತ್ತ ಗ್ರಾಮಸ್ಥರು ಲಾರಿಗಳನ್ನು ತಡೆದು ಗ್ರಾಮದ ಕೆರೆಯ ಬಳಿಯೇ ನಿಲ್ಲಿಸಿದ್ದಾರೆ. ಇದನ್ನೂ ಓದಿ: SSLC, PUCಗೆ 3 ಪಬ್ಲಿಕ್ ಪರೀಕ್ಷೆ ಇರುತ್ತೆ – ಸಚಿವ ಮಧು ಬಂಗಾರಪ್ಪ

  • ಲವ್ವರ್ ಮಾತು ಕೇಳಿ ಪತಿ ಮೊಬೈಲ್‍ನಿಂದ ಬೆದರಿಕೆ ಮೆಸೇಜ್ ಕಳಿಸಿ ಸಿಕ್ಕಿಬಿದ್ದ ಪತ್ನಿ!

    ಲವ್ವರ್ ಮಾತು ಕೇಳಿ ಪತಿ ಮೊಬೈಲ್‍ನಿಂದ ಬೆದರಿಕೆ ಮೆಸೇಜ್ ಕಳಿಸಿ ಸಿಕ್ಕಿಬಿದ್ದ ಪತ್ನಿ!

    ಆನೇಕಲ್: ಪತಿ ಹಾಗೂ ಪತ್ನಿ ನಡುವೆ ನಡೆದ ಜಗಳವು ಬೆದರಿಕೆ ಮೆಸೇಜ್ (Message) ಕಳುಹಿಸುವಷ್ಟರ ಮಟ್ಟಕ್ಕೆ ಬೆಳೆದ ಘಟನೆ ಬೆಂಗಳೂರು ಹೊರವಲಯದ ಆನೇಕಲ್‍ನಲ್ಲಿ (Anekal) ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಪ್ರಕರಣದ ಹಿನ್ನೆಲೆ: ಆನೇಕಲ್‍ನ ಮಾರುತಿ ಬಡಾವಣೆಯಲ್ಲಿ ಉತ್ತರ ಕರ್ನಾಟಕ (Uttara Karnataka) ಮೂಲದ ಕಿರಣ್ ಮತ್ತು ವಿದ್ಯಾರಾಣಿ ದಂಪತಿ ವಾಸವಿದ್ದರು. ಈ ನಡುವೆ ವಿದ್ಯಾರಾಣಿಗೆ ಸೋಷಿಯಲ್ ಮೀಡಿಯಾ ಅಪ್ ಮೂಲಕ ರಾಮ್‍ಪ್ರಸಾದ್ ಅನ್ನೋ ವ್ಯಕ್ತಿಯ ಪರಿಚಯವಾಗುತ್ತೆ. ಅಂತೆಯೇ ರಾಮ್‍ಪ್ರಸಾದ್ ಜೊತೆ ವಿದ್ಯಾರಾಣಿ ನಿರಂತರ ಚ್ಯಾಟಿಂಗ್ ಮಾಡುತ್ತಿದ್ದಳು.

    ಈ ವಿಚಾರ ಪತಿ ಕಿರಣ್‍ಗೆ ಗೊತ್ತಾಗಿ ಮೊಬೈಲ್ ಹೊಡೆದು ಹಾಕಿದ್ದ. ಇದನ್ನು ಬೇರೆ ನಂಬರ್ ಮೂಲಕ ರಾಮ್‍ಪ್ರಸಾದ್‍ಗೆ ವಿದ್ಯಾರಾಣಿ ತಿಳಿಸಿದ್ದಳು. ಇದರಿಂದ ಸಿಟ್ಟಿಗೆದ್ದ ಪ್ರಿಯಕರ ರಾಮ್ ಪ್ರಸಾದ್, ವಿದ್ಯಾರಾಣಿ ಗಂಡನಿಗೆ ಬುದ್ಧಿ ಕಲಿಸಲು ಪ್ಲಾನ್ ಮಾಡಿದ್ದ. ಅಂತೆಯೇ ನಾನು ಕಳುಹಿಸುವ ಮೆಸೇಜ್‍ನ ಗಂಡನ ನಂಬರ್‍ನಿಂದ ಫಾರ್ವರ್ಡ್ ಮಾಡು ಅಂತ ಸೂಚನೆ ಕೊಟ್ಟಿದ್ದನು.  ಇದನ್ನೂ ಓದಿ: ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರದ ಚೆಕ್ ವಿತರಣೆ

    ಡಿಸೆಂಬರ್ 5ರಂದು ಆರ್‍ಡಿಎಕ್ಸ್ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕುವ ಮೆಸೇಜ್ ಅನ್ನು ಕಿರಣ್ ನಂಬರ್‍ನಿಂದ ತನಿಖಾ ಸಂಸ್ಥೆಗಳಿಗೆ ರವಾನಿಸುವಂತೆ ಹೇಳುತ್ತಾನೆ. ಪ್ರಿಯಕರನ ಮಾತನ್ನು ನಂಬಿದ ವಿದ್ಯಾರಾಣಿ ಖುದ್ದು ಪೊಲೀಸ್ ಮತ್ತು ಕೇಂದ್ರ ತನಿಖಾ ಸಂಸ್ಥೆಗೆ ಕಳುಹಿಸಿದ್ದಳು. ಬಳಿಕ ಗಂಡನ ಮೊಬೈಲ್‍ನಿಂದ ಮೆಸೇಜ್ ಡಿಲೀಟ್ ಮಾಡಿದ್ದಳು.

    ಇತ್ತ ಮೆಸೇಜ್ ಬಂದಿದ್ದ ನಂಬರ್ ನ ಮೂಲ ಹುಡುಕಿ ಹೊರಟಿದ್ದ ತನಿಖಾ ಸಂಸ್ಥೆಗಳು, ಮನೆಗೆ ಬಂದು ಇಬ್ಬರನ್ನು ವಿಚಾರಣೆಗೊಳಪಡಿಸಿದಾಗ ಸತ್ಯ ಬಯಲಿಗೆ ಬಂದಿದೆ. ಈ ಸಂಬಂಧ ಆನೇಕಲ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

  • ಮಲಗಿದ್ದಾಗ ತಲೆಗೆ ದೊಣ್ಣೆಯಿಂದ ಹೊಡೆದು ಪತ್ನಿ ಕೊಂದ ಪತಿ

    ಮಲಗಿದ್ದಾಗ ತಲೆಗೆ ದೊಣ್ಣೆಯಿಂದ ಹೊಡೆದು ಪತ್ನಿ ಕೊಂದ ಪತಿ

    ಆನೇಕಲ್: ಅಕ್ರಮ ಸಂಬಂಧ (Illicit Relationship) ಶಂಕೆಯ ಮೇಲೆ ಪತಿ ದೊಣ್ಣೆಯಿಂದ ಹೊಡೆದು ಪತ್ನಿಯನ್ನು ಹತ್ಯೆಗೈದ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ತಮ್ಮನಾಯಕನಹಳ್ಳಿಯಲ್ಲಿ ನಡೆದಿದೆ.

    ಲಕ್ಷ್ಮಮ್ಮ (40) ಪತಿಯಿಂದ ಕೊಲೆಯಾದ ಮಹಿಳೆ. ಮಹದೇವಯ್ಯ (45) ಪತ್ನಿಯನ್ನು ಹತ್ಯೆಗೈದ ಪತಿ. ಇವರಿಬ್ಬರಿಗೆ ಆರು ಜನ ಮಕ್ಕಳಿದ್ದರು. ಮಹದೇವಯ್ಯ ಆನೇಕಲ್‌ನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಪತ್ನಿ ಲಕ್ಷ್ಮಮ್ಮ ಗಾರೆ ಕೆಲಸ ಮಾಡಿಕೊಂಡಿದ್ದರು. ಗಾರೆ ಕೆಲಸ ಮಾಡುವ ವ್ಯಕ್ತಿಯ ಜೊತೆ ಲಕ್ಷ್ಮಮ್ಮ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಪತಿ ಶಂಕಿಸಿದ್ದು, ಈ ಬಗ್ಗೆ ಹಲವು ಬಾರಿ ಲಕ್ಷ್ಮಮ್ಮಹಾಗೂ ಮಹದೇವಯ್ಯ ನಡುವೆ ಗಲಾಟೆ ನಡೆದಿತ್ತು. ಇದನ್ನೂ ಓದಿ: ಕುಡಿದ ನಶೆಯಲ್ಲಿ ಟ್ರಕ್‌ನ ರೈಲ್ವೆ ಹಳಿಯಲ್ಲಿ ಬಿಟ್ಟ ಚಾಲಕ – ತಪ್ಪಿದ ಭಾರೀ ದುರಂತ

    ಈ ವಿಚಾರ ಇಡೀ ತಮ್ಮನಾಯಕನಹಳ್ಳಿ ಗ್ರಾಮದ ಜನಕ್ಕೆ ತಿಳಿದಿತ್ತು. ಜನರು ಅಕ್ರಮ ಸಂಬಂಧದ ಬಗ್ಗೆ ಮಾತನಾಡಿಕೊಳ್ಳುತ್ತಿದ್ದರು. ಇದರಿಂದ ಮನನೊಂದ ಮಹದೇವಯ್ಯ ಪತ್ನಿ ಲಕ್ಷ್ಮಮ್ಮತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಮನೆಯಲ್ಲಿ ಮಲಗಿದ್ದಾಗಲೇ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ್ದು, ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕಂಬಳ ನೋಡಿ ವಾಪಸ್ಸಾಗ್ತಿದ್ದ ವೇಳೆ ಭೀಕರ ಅಪಘಾತ- ಇಬ್ಬರು ಸಾವು, ಮೂವರು ಗಂಭೀರ

  • ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ – ಮಗಳ ಮನೆಗೆ ತೆರಳುತ್ತಿದ್ದ ಮಹಿಳೆ ದಾರುಣ ಸಾವು

    ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ – ಮಗಳ ಮನೆಗೆ ತೆರಳುತ್ತಿದ್ದ ಮಹಿಳೆ ದಾರುಣ ಸಾವು

    ಆನೇಕಲ್: ಟಿವಿಎಸ್ ಎಕ್ಸೆಲ್ ಬೈಕ್‌ಗೆ (Bike) ಖಾಸಗಿ ಬಸ್ (Private Bus) ಡಿಕ್ಕಿಯಾದ ಪರಿಣಾಮ ಮಹಿಳೆ (Woman) ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು-ಬನ್ನೇರುಘಟ್ಟ ಮುಖ್ಯರಸ್ತೆಯ ಮೀನಾಕ್ಷಿ ದೇವಾಲಯದ ಬಳಿ ನಡೆದಿದೆ.

    ಹುಳಿಮಾವು (Hulimavu) ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ (Accident) ಸಂಭವಿಸಿದ್ದು, ಘಟನೆಯಲ್ಲಿ ಶ್ಯಾನಭೋಗನಹಳ್ಳಿ ನಿವಾಸಿ ಸೆಲ್ವಿ (೪೮) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತಿ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದ ಸಂದರ್ಭ ಅವಘಡ ಸಂಭವಿಸಿದೆ. ಸೆಲ್ವಿ ಪತಿ ಮಾರತಹಳ್ಳಿಯಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದರು. ಮಗಳನ್ನು ಸಹಾ ಮಾರತಹಳ್ಳಿಗೆ ಮದುವೆ ಮಾಡಿಕೊಡಲಾಗಿತ್ತು. ಇದನ್ನೂ ಓದಿ: ಬೆಂಗ್ಳೂರಲ್ಲಿ 30ಕ್ಕೂ ಹೆಚ್ಚು ಕಾರ್‌ಗಳ ಗ್ಲಾಸ್ ಪುಡಿಗೈದಿದ್ದ ಪುಂಡರು ಅರೆಸ್ಟ್

    ಮಾರತಹಳ್ಳಿಯ ಮಗಳ ಮನೆಗೆಂದು ಪತಿ ಜೊತೆ ಹೊರಟಿದ್ದ ಸಂದರ್ಭ ಅತಿವೇಗವಾಗಿ ಬಂದ ಖಾಸಗಿ ಬಸ್ ಟಿವಿಎಸ್ ಎಕ್ಸೆಲ್ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಯಲ್ಲಿ ಬಿದ್ದ ಮಹಿಳೆ ಮೇಲೆ ಬಸ್ ಹರಿದಿದ್ದು, ಸ್ಥಳದಲ್ಲೇ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹುಳಿಮಾವು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ರವಾನೆ ಮಾಡಿ ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: 10 ಕೋಟಿ ಆಸ್ತಿ ಆಸೆಗೆ ಪತ್ನಿಯನ್ನೇ ಕೊಂದು ಸಹಜ ಸಾವೆಂದು ನಾಟಕವಾಡಿ ಸಿಕ್ಕಿಬಿದ್ದ ಪತಿ

  • ಹೊಳೆಯಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್- ಆಂಟಿ ಪ್ರೀತಿಗೆ ಬಿತ್ತು ಹೆಣ!

    ಹೊಳೆಯಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್- ಆಂಟಿ ಪ್ರೀತಿಗೆ ಬಿತ್ತು ಹೆಣ!

    ಆನೇಕಲ್ (ಬೆಂಗಳೂರು): ಆನೇಕಲ್ (Anekal) ಮುಗಳೂರು ಹೊಳೆಯಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

    ಕೋಲಾರ (Kolar) ಮಾಲೂರು ತಾಲೂಕಿನ ಅಯ್ಯಪ್ಪನಗರ ಚೇತನ್ ಕೊಲೆಯಾದ ಯುವಕ. ಈತ ಅಯ್ಯಪ್ಪನಗರದ ಪ್ರಕಾಶ್ ರೆಡ್ಡಿ ಮಗನಾಗಿದ್ದು, ಈತನನ್ನು ಮಾಲೂರು ಸೊನ್ನಾಪುರ ಗ್ರಾಮದ ಸತೀಶ್ ಕೊಲೆ ಮಾಡಿದ್ದಾನೆ.

    ಕಳೆದ ತಿಂಗಳು 26 ರಂದು ದಕ್ಷಿಣ ಪಿನಾಕಿನಿ ಹೊಳೆಯಲ್ಲಿ ಶವ ಪತ್ತೆಯಾಗಿತ್ತು. ಬ್ರಿಡ್ಜ್‍ನ ತಡೆಗೋಡೆ ಮೇಲೆ ರಕ್ತದ ಕಲೆಗಳು ಪತ್ತೆಯಾಗಿತ್ತು. ಈ ಸಂಬಂಧ ಸತೀಶ್, ಶಶಿ ಹಾಗೂ ಶೋಭಾ ಎಂಬ ಮೂವರು ಆರೋಪಿಗಳನ್ನು ಸರ್ಜಾಪುರ ಪೊಲೀಸರು ಬಂಧಿಸಿದ್ದರು. ತನಿಖೆಯ ವೇಳೆ ಆರೋಪಿಗಳು ಸತ್ಯ ಬಾಯಿಬಿಟ್ಟಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ವೃತ್ತಕ್ಕೆ ಸಿಎಂ ಹೆಸರು – ನಾಮಫಲಕ ತೆರವು ಮಾಡಿದ ಪೊಲೀಸರು

    ಕಳೆದು ತಿಂಗಳು 7 ರಂದು ಶೋಭಾ ಮೂಲಕ ಚೇತನ್, ಸತೀಶ್ ಪರಿಚಯವಾಗಿದೆ. ಪರಿಚಯದ ನಂತರ ಒಂದು ದಿನ ಎಣ್ಣೆ ಪಾರ್ಟಿ ನಡೆದಿದೆ. ಹೊಸಕೋಟೆ ಐಶ್ವರ್ಯ ಬಾರ್ ನಲ್ಲಿ ಎಣ್ಣೆ ಪಾರ್ಟಿ ಮುಗಿಸಿ ಮಧ್ಯರಾತ್ರಿ 2 ಗಂಟೆಗೆ ಚೇತನ್‍ನನ್ನು ಮಚ್ಚಿನಿಂದ ಹೊಡೆದು ಮುಗಳೂರು ಹೊಳೆಗೆ ಎಸೆದಿರುವುದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

    ಈ ಹಿಂದೆ ಅತ್ತಿಬೆಲೆ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದ ಆರೋಪಿ ಶೋಭಾ, ಈ ಬಾರಿ ತನ್ನ ಮಾಸ್ಟರ್ ಪ್ಲಾನ್ ನಿಂದಾಗಿ ಇಬ್ಬರ ಭವಿಷ್ಯ ಹಾಳು ಮಾಡಿದ್ದಾಳೆ. ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.