Tag: anekal

  • ಆನೇಕಲ್ | ಟ್ಯೂಷನ್‌ಗೆ ಹೋಗ್ತಿದ್ದ ಬಾಲಕನ ಕಿಡ್ನ್ಯಾಪ್ ಮಾಡಿ ಬರ್ಬರ ಹತ್ಯೆ

    ಆನೇಕಲ್ | ಟ್ಯೂಷನ್‌ಗೆ ಹೋಗ್ತಿದ್ದ ಬಾಲಕನ ಕಿಡ್ನ್ಯಾಪ್ ಮಾಡಿ ಬರ್ಬರ ಹತ್ಯೆ

    – 5 ಲಕ್ಷ ರೂ. ಹಣಕ್ಕೆ ಸಹಾಯಕ ಪ್ರಾಧ್ಯಾಪಕನಿಗೆ ಡಿಮ್ಯಾಂಡ್ ಇಟ್ಟಿದ್ದ ಕಿಡ್ನ್ಯಾಪರ್ಸ್

    ಬೆಂಗಳೂರು: ಟ್ಯೂಷನ್‌ಗೆ ಹೋಗ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆನೇಕಲ್ (Anekal) ಬಳಿ ನಡೆದಿದೆ.

    13 ವರ್ಷದ ನಿಶ್ಚಿತ್ ಹತ್ಯೆಯಾದ ಬಾಲಕ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಅರಕೆರೆ ಶಾಂತಿನಿಕೇತನ ಬಡಾವಣೆ ಬಳಿ ಟ್ಯೂಷನ್‌ನಿಂದ ಬರುತ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದರು. ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ – ಪ್ರಿಯಕರನ ಜೊತೆಗೂಡಿ ಪತಿಯನ್ನೇ ಕೆರೆಗೆ ತಳ್ಳಿ ಕೊಂದ ಪತ್ನಿ

    ಬಾಲಕನ ತಂದೆ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದರಿಂದ ಕಿಡ್ನ್ಯಾಪರ್ಸ್ ಕರೆ ಮಾಡಿ 5 ಲಕ್ಷ ರೂ. ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಕಿಡ್ನ್ಯಾಪರ್ಸ್ ಕಡೆಯಿಂದ ಫೋನ್ ಬರ್ತಿದ್ದಂತೆ ಬಾಲಕ ಪೋಷಕರು ಹುಳಿಮಾವು (Hulimavu Police) ಠಾಣೆಗೆ ದೂರು ನೀಡಿದ್ದರು. ಇದನ್ನೂ ಓದಿ: ಟೇಕಾಫ್‌ ಆಗ್ಬೇಕಿದ್ದ ಫ್ಲೈಟ್‌ನಲ್ಲಿ ತಾಂತ್ರಿಕ ದೋಷ – ದೆಹಲಿಯಿಂದ ಲಂಡನ್‌ಗೆ ಹೊರಟಿದ್ದ ಬೋಯಿಂಗ್ ವಿಮಾನ ರದ್ದು

    ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಿಡ್ನ್ಯಾಪರ್ಸ್‌ಗಾಗಿ ಹುಡುಕಾಟ ಆರಂಭಿಸಿದ್ದರು. ಪೊಲೀಸರು ಲೊಕೇಶನ್ ಟ್ರೇಸ್ ಮಾಡಿ ಕಿಡ್ನ್ಯಾಪರ್ಸ್‌ಗಾಗಿ ಹುಡುಕಾಟ ನಡೆಸಿದ್ದರು. ಮತ್ತೊಂದೆಡೆ 5 ಲಕ್ಷ ರೂ. ಹಣವನ್ನು ಕೈಯಲ್ಲಿಡಿದು ಪೋಷಕರು ಕಾದು ಕುಳಿತ್ತಿದ್ದರು.

    ಆದರೆ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಕಗ್ಗಲೀಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಬಾಲಕನ ಮೃತದೇಹ ಸುಟ್ಟ ರೀತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್ ಹಾಗೂ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಹುಳಿಮಾವು ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

  • ರೋಡ್ ಹಂಪ್ಸ್ ಕಾಣದೇ 2 ಲಾರಿ, ಬೊಲೆರೋ ನಡುವೆ ಭೀಕರ ಅಪಘಾತ – ಮೂವರು ಗಂಭೀರ

    ರೋಡ್ ಹಂಪ್ಸ್ ಕಾಣದೇ 2 ಲಾರಿ, ಬೊಲೆರೋ ನಡುವೆ ಭೀಕರ ಅಪಘಾತ – ಮೂವರು ಗಂಭೀರ

    ಆನೇಕಲ್: ರಸ್ತೆಯಲ್ಲಿರುವ ಹಂಪ್ಸ್ (Road Humps) ಕಾಣದೇ ಎರಡು ಲಾರಿ (Lorry) ಹಾಗೂ ಬೊಲೆರೋ (Bolero) ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು-ಚೆನೈ ರಾಷ್ಟ್ರೀಯ ಹೆದ್ದಾರಿಯ ಬೊಮ್ಮಸಂದ್ರ (Bommasandra) ಸಮೀಪದ ಹೆನ್ನಾಗರ ಗೇಟ್ (Hennagara Gate) ಬಳಿ ನಡೆದಿದೆ.

    ಹಂಪ್ಸ್ ಕಾಣದೆ ಮುಂಬದಿ ಹೋಗುತ್ತಿದ್ದ ಲಾರಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆ. ಇದೇ ವೇಳೆ ಬೊಲೆರೋ ವಾಹನಕ್ಕೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದ್ದು, ಎರಡು ಲಾರಿಗಳ ಮಧ್ಯೆ ಬೊಲೆರೋ ವಾಹನ ಸಿಲುಕಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೊಲೆರೋ ವಾಹನದಲ್ಲಿದ್ದ ಮುಷ್ತಾಕ್ (37), ಸಾಧಿಕ್ (45) ಹಾಗೂ ಮುದಾಸಿರ್ (30) ಗಂಭೀರ ಗಾಯಗೊಂಡಿದ್ದಾರೆ. ಇನ್ನುಳಿದಂತೆ ಲಾರಿಯಲ್ಲಿದ್ದ ಮೂರ್ನಾಲ್ಕು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಧರ್ಮಸ್ಥಳ ಫೈಲ್ಸ್; ಪ್ರಮುಖ ಘಟ್ಟ ತಲುಪಿದ ತನಿಖೆ – ಇಂದು ಮತ್ತಷ್ಟು ಜಾಗಗಳ ಗುರುತು

    ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ತಂಡ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಬೊಲೆರೋ ವಾಹನದಲ್ಲಿದ್ದ ಗಾಯಾಳುಗಳನ್ನ ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ. ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಅಕ್ರಮ ಸಂಬಂಧ; ಟಾಪ್‌-20 ನಗರಗಳ ಪಟ್ಟಿ ರಿಲೀಸ್‌; ಬೆಂಗಳೂರಿಗೆ ಎಷ್ಟನೇ ಸ್ಥಾನ? – ನಂ.1 ನಗರ ಯಾವುದು?

  • ಬ್ರೇಕಪ್‌ ಕೊಲೆ ಕೇಸ್‌ಗೆ ಟ್ವಿಸ್ಟ್‌ – ಕೇವಲ 2 ಸಾವಿರಕ್ಕಾಗಿ ಬಿತ್ತು ಹೆಣ!

    ಬ್ರೇಕಪ್‌ ಕೊಲೆ ಕೇಸ್‌ಗೆ ಟ್ವಿಸ್ಟ್‌ – ಕೇವಲ 2 ಸಾವಿರಕ್ಕಾಗಿ ಬಿತ್ತು ಹೆಣ!

    – ಆರೋಪಿಗಳ ಆಡಿಯೋ ವೈರಲ್‌

    ಆನೇಕಲ್: ಕೆಲಸದ ನಿಮಿತ್ತ ರಾಮನಗರಕ್ಕೆ (Ramanagar) ಹೋಗುವುದಾಗಿ ಹೇಳಿ ಹೋಗಿದ್ದ ಯುವಕನ ಹತ್ಯೆಗೆ ಟ್ವಿಸ್ಟ್‌ ಸಿಕ್ಕಿದೆ. ಮೊದಲು ಲವ್ ಬ್ರೇಕಪ್ ವಿಚಾರಕ್ಕೆ ಕೊಲೆ ನಡೆದಿದೆ ಎನ್ನಲಾಗಿತ್ತು. ಆದರೆ ಆರೋಪಿಗಳು ಅರೆಸ್ಟ್ ಆದ ಬೆನ್ನಲ್ಲೇ ವೈರಲ್ ಆಗಿರುವ ಆಡಿಯೋ ಬೇರೆಯದೇ ಕಥೆ ಹೇಳುತ್ತಿದೆ!

    ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ಪಟ್ಟಣದ ವಿನಾಯಕ ನಗರದಲ್ಲಿ ಶುಕ್ರವಾರ ರಾತ್ರಿ ರವಿ ಕುಮಾರ್ ಕೊಲೆಯಾಗಿತ್ತು. ಆರಂಭದಲ್ಲಿ ಯುವಕ ರವಿ ಕೊಲೆಗೆ ಯುವತಿಯೊಬ್ಬಳ ಜೊತೆಗಿನ ಲವ್ ಬ್ರೇಕಪ್ ಕಾರಣ ಎನ್ನಲಾಗಿತ್ತು. ಪ್ರಕರಣದ ಆರೋಪಿಗಳಾದ ಆನೇಕಲ್ ಪಟ್ಟಣದ ಮನೋಜ್, ಸೋಲೂರಿನ ಮನೀಷ್ ಮತ್ತು ಮನ್ಮಥ ಅರೆಸ್ಟ್ ಆದ ಬೆನ್ನಲ್ಲೇ ಆಡಿಯೋ ವೈರಲ್ ಆದ ಬಳಿಕ, ಕೊಲೆಗೆ ಕೇವಲ 2 ಸಾವಿರ ರೂ. ಕಾರಣ ಎಂಬುದು ಬಯಲಾಗಿದೆ. ಇದನ್ನೂ ಓದಿ: ಅಂಗಡಿ ಬಳಿ ಕುಳಿತವನ ಮೇಲೆ ಡೆಡ್ಲಿ ಅಟ್ಯಾಕ್ – ಚಿಕಿತ್ಸೆ ಫಲಿಸದೇ ಯುವಕ ಸಾವು

    ಪ್ರಕರಣದ ‌ಪ್ರಮುಖ ಆರೋಪಿ ಮನ್ಮಥ ತನ್ನ ಸ್ನೇಹಿತನ ಜೊತೆ ನಡೆಸಿರುವ ಸಂಭಾಷಣೆಯ ಆಡಿಯೋ ಇದಾಗಿದ್ದು, ಕೇವಲ ಎರಡು ಸಾವಿರ ಹಣದ ವಿಚಾರ ಮಾತನಾಡಲು ಮನೀಷ್ ಮತ್ತು ಮನೋಜ್‌ನನ್ನು ಕರೆದೊಯ್ದಿದ್ದೆ. ಆದರೆ ಮನೀಷ್ ಮತ್ತು ಮನೋಜ್ ಕಾರ್ಪೆಂಟರ್ ಅಂಗಡಿ ಬಳಿ ಸಿಕ್ಕ ರೀಪ್‌ ಪೀಸ್ ಮತ್ತು ದೊಣ್ಣೆಯಿಂದ ಹಲ್ಲೆ ಮಾಡಿದರು. ತಡೆಯಲು ಕೂಡ ಅವಕಾಶ ನೀಡಲಿಲ್ಲ ಎಂದು ಕೃತ್ಯದ ಇಂಚಿಂಚೂ ಮಾಹಿತಿಯನ್ನು ಆರೋಪಿ ಮನ್ಮಥ ಬಿಚ್ಚಿಟ್ಟಿದ್ದಾನೆ.

    ಮನ್ಮಥನ ತಮ್ಮ ನಂದನ್ ಬಳಿ‌ ಹತ್ಯೆಯಾದ ರವಿ ಕುಮಾರ್ 2 ಸಾವಿರ ಕೈಸಾಲ ಪಡೆದಿದ್ದ. ಹಲವು ಸಲ ಕೇಳಿದ್ರೂ, ಕೊಡದೇ ಸತಾಯಿಸಿಸುತ್ತಿದ್ದ. ಈ ವಿಚಾರವನ್ನು ನಂದನ್ ಅಣ್ಣನಿಗೆ ತಿಳಿಸಿದ್ದ. ಇದೇ ವಿಚಾರ ಮಾತನಾಡಲು ಮನೀಷ್ ಮತ್ತು ಮನೋಜ್‌ನನ್ನು ರವಿ ಬಳಿ ಕರೆದೊಯ್ದಾಗ ಕೊಲೆ ನಡೆದಿದೆ ಎಂಬ ವಿಚಾರ ಬಯಲಾಗಿದೆ. ಇದನ್ನೂ ಓದಿ: ತೆಲಂಗಾಣ | ಡಿವೈಡರ್‌ಗೆ ಪೊಲೀಸ್ ವಾಹನ ಡಿಕ್ಕಿ – ಇಬ್ಬರು ಡಿಎಸ್ಪಿ ಸಾವು

  • ಅಂಗಡಿ ಬಳಿ ಕುಳಿತವನ ಮೇಲೆ ಡೆಡ್ಲಿ ಅಟ್ಯಾಕ್ – ಚಿಕಿತ್ಸೆ ಫಲಿಸದೇ ಯುವಕ ಸಾವು

    ಅಂಗಡಿ ಬಳಿ ಕುಳಿತವನ ಮೇಲೆ ಡೆಡ್ಲಿ ಅಟ್ಯಾಕ್ – ಚಿಕಿತ್ಸೆ ಫಲಿಸದೇ ಯುವಕ ಸಾವು

    – ದಾಳಿಗೆ ಕಾರಣವಾಯ್ತಾ ಲವ್ ಬ್ರೇಕಪ್?

    ಆನೇಕಲ್: ಸ್ನೇಹಿತರ ಜೊತೆ ಮಾತನಾಡುತ್ತಾ ಅಂಗಡಿ ಬಳಿ ಕುಳಿತ್ತಿದ್ದ ಯುವಕನ ಮೇಲೆ ಅಪರಿಚಿತ ಗ್ಯಾಂಗೊಂದು ಹಲ್ಲೆ ಮಾಡಿದ ಪರಿಣಾಮ ಚಿಕಿತ್ಸೆ ಫಲಿಸದೇ ಯುವಕ ಮೃತಪಟ್ಟಿರುವ ಘಟನೆ ಆನೇಕಲ್‌ನಲ್ಲಿ (Anekal) ನಡೆದಿದೆ.

    ಆನೇಕಲ್ ಪಟ್ಟಣದ ವಾರ್ಡ್ 9ರ ನಿವಾಸಿ ರವಿಕುಮಾರ್ ಮೃತ ಯುವಕ. ರವಿಕುಮಾರ್ ರಾತ್ರಿ 9:30ರ ಸುಮಾರಿಗೆ ಸ್ನೇಹಿತರ ಜೊತೆ ವಿನಾಯಕ ನಗರ ಸುಂದರ್ ರಾಜ್ ಬಡಾವಣೆಯ ಅಂಗಡಿ ಬಳಿ ಕುಳಿತಿದ್ದ. ಈ ವೇಳೆ ಬೈಕ್‌ನಲ್ಲಿ ಬಂದ ಮೂವರು ದೊಣ್ಣೆಯಿಂದ ರವಿಕುಮಾರ್ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ಇನ್ಸ್ಟಾದಲ್ಲಿ ಬೆಂಗಳೂರಿಗರ ಬಗ್ಗೆ ನಾಲಗೆ ಹರಿಬಿಟ್ಟ ಒಡಿಶಾ ಯುವತಿ

    ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ರವಿಕುಮಾರ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ರವಿಕುಮಾರ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಇದನ್ನೂ ಓದಿ: Mysuru | ಸಿಡಿಮದ್ದು ಸ್ಫೋಟ – ಮಹಿಳೆಗೆ ಗಾಯ

    ಅಮೆಜಾನ್‌ನಲ್ಲಿ ಕೆಲಸ ಮಾಡುತ್ತಿದ್ದ ರವಿಕುಮಾರ್ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ಇತ್ತೀಚೆಗೆ ಅವರಿಬ್ಬರಿಗೂ ಬ್ರೇಕಪ್ (Breakup) ಆಗಿತ್ತು. ಇದೇ ವಿಚಾರಕ್ಕೆ ರವಿಕುಮಾರ್ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ತಮ್ಮ ಮತ್ತು ಗ್ಯಾಂಗ್ ದಾಳಿ ನಡೆಸಿ ಸೇಡು ತೀರಿಸಿಕೊಂಡಿದೆ ಎನ್ನಲಾಗಿದೆ. ಇದನ್ನೂ ಓದಿ: Bengaluru | ಬಾಗಿಲು ಮುಚ್ಚುವ ವೇಳೆ ಗನ್ ಹಿಡಿದು ಬಂದು ಚಿನ್ನದಂಗಡಿ ದರೋಡೆ

    ಈಗಾಗಲೇ ಘಟನಾ ಸ್ಥಳದಿಂದ ಎಫ್‌ಎಸ್‌ಎಲ್ ತಂಡ ಸಾಕ್ಷ್ಯಾಧಾರಗಳನ್ಮು ಸಂಗ್ರಹಿಸಿದ್ದು, ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರ ತಂಡ ರಚನೆ ಮಾಡಲಾಗಿದೆ. ಶೀಘ್ರ ಆರೋಪಿಗಳ ಬಂಧನ ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ವೆಂಕಟೇಶ್ ಪ್ರಸನ್ನ ಹೇಳಿಕೆ ನೀಡಿದ್ದಾರೆ.

  • ಮಾತುಕತೆಗೆ ಕರೆಸಿ ಸಿನಿಮಾ ಸ್ಟೈಲ್‌ಲ್ಲಿ ಗನ್ ತೋರಿಸಿ ಕಿಡ್ನ್ಯಾಪ್ – ಲಾಯರ್ & ಗ್ಯಾಂಗ್‍ನಿಂದ ಕೃತ್ಯ!

    ಮಾತುಕತೆಗೆ ಕರೆಸಿ ಸಿನಿಮಾ ಸ್ಟೈಲ್‌ಲ್ಲಿ ಗನ್ ತೋರಿಸಿ ಕಿಡ್ನ್ಯಾಪ್ – ಲಾಯರ್ & ಗ್ಯಾಂಗ್‍ನಿಂದ ಕೃತ್ಯ!

    ಬೆಂಗಳೂರು: ಗನ್ ತೋರಿಸಿ ಸಿನಿಮಾ ಸ್ಟೈಲ್‍ನಲ್ಲಿ ವ್ಯಕ್ತಿಯೊಬ್ಬನನ್ನು ಕಿಡ್ನ್ಯಾಪ್ (Kidnap) ಮಾಡಿದ ಘಟನೆ ಆನೇಕಲ್ (Anekal) ಕೋರ್ಟ್ (Court) ಬಳಿ ನಡೆದಿದೆ.

    ವಾಬಸಂದ್ರ ನಿವಾಸಿ ಶ್ರೀನಿಧಿ (29) ಕಿಡ್ನ್ಯಾಪ್ ಆದ ವ್ಯಕ್ತಿ. ಆನೇಕಲ್ ಕೋರ್ಟ್ ಬಳಿಯ ವಕೀಲ ನಂದೀಶ್ ಕಛೇರಿ ಬಳಿ ಅಪಹರಣವಾಗಿದೆ. ಜು.4 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಆಸ್ತಿ ವಿವಾದ ಸಂಬಂಧ ಮಾತುಕತೆಗೆ ವಕೀಲ ನಂದೀಶ್, ಶ್ರೀನಿಧಿಯವರನ್ನು ಕರೆಸಿದ್ದರು. ಮಾತುಕತೆ ಮುಗಿಸಿ ಹೊರ ಬರುತ್ತಿದ್ದಂತೆ ಸ್ಕಾರ್ಪಿಯೋ ಕಾರಿನಲ್ಲಿ ಅವರನ್ನು ಅಪಹರಿಸಲಾಗಿತ್ತು. ಅಪಹರಣದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌ – 6 ಮಾವೋವಾದಿಗಳ ಹತ್ಯೆ

    ಕಣ್ಣಿಗೆ ಬಟ್ಟೆ ಕಟ್ಟಿ ಬಡಾವಣೆಯೊಂದಕ್ಕೆ ಕರೆದೊಯ್ದು ಹಲ್ಲೆ ನಡೆಸಲಾಗಿದೆ. ಅಲ್ಲದೇ ಗನ್ ತೋರಿಸಿ ನಿನ್ನ ಜಮೀನನ್ನು ಪದ್ಮನಾಭ ರಾವ್‍ಗೆ ರಿಜಿಸ್ಟರ್ ಮಾಡಬೇಕು. ಇಲ್ಲದಿದ್ದರೆ ನಿನ್ನ ಮತ್ತು ತಂದೆ ರಾಮಣ್ಣನ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

    ಜೀವ ಭಯದಿಂದ ರಿಜಿಸ್ಟರ್ ಮಾಡಿಕೊಡಲು ಒಪ್ಪಿಕೊಂಡಿದ್ದರು. ಇತ್ತ ಸರ್ಜಾಪುರ ಸಬ್ ರಿಜಿಸ್ಟರ್ ಕಚೇರಿಯಲ್ಲಿ ತನ್ನದೇ ಅಕೌಂಟ್ ನಿಂದ ಹಣ ಪಾವತಿಸಿ ವಕೀಲ ನಂದೀಶ್ ರಿಜಿಸ್ಟರ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದ.

    ತನ್ನ ಮೇಲ್ ಐಡಿಯಿಂದ ದಾಖಲೆಗಳನ್ನು ಅಪ್ಲೋಡ್ ಮಾಡಿ, ಕಿಡ್ನ್ಯಾಪರ್ಸ್‍ಗಾಗಿ ನಂದೀಶ್ & ಗ್ಯಾಂಗ್ ಕಾಯುತ್ತಿತ್ತು. ಶ್ರೀನಿಧಿಯವರನ್ನು ಕರೆತರುತ್ತಿದ್ದಂತೆ ತುಟಿ ಬಿಚ್ಚದೇ ಜಮೀನು ರಿಜಿಸ್ಟರ್ ಮಾಡುವಂತೆ ತಾಕೀತು ಮಾಡಿದ್ದರು. ಸಬ್ ರಿಜಿಸ್ಟರ್ ಒಳ ಹೋಗುತ್ತಿದ್ದಂತೆ ಕ್ಲರ್ಕ್ ಕೊಠಡಿಗೆ ಹೋಗಿ ನನ್ನನ್ನು ಕಿಡ್ನಾಪ್ ಮಾಡಿದ್ದು, ಪೊಲೀಸರಿಗೆ ಮಾಹಿತಿ ನೀಡಿ ಎಂದು ಶ್ರಿನಿಧಿ ಕಿರುಚಾಡಿದ್ದಾರೆ.

    ಪೊಲೀಸರು ಬರುತ್ತಿದ್ದಂತೆ ವಕೀಲ ನಂದೀಶ್ & ಗ್ಯಾಂಗ್ ಪರಾರಿಯಾಗಿದೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಪ್ರವಾಸಿ ಬಸ್‌ ಪಲ್ಟಿ – 25 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

  • ಬೆಂಗಳೂರು | ಅಪ್ರಾಪ್ತೆಯನ್ನು ಕರೆದೊಯ್ದು ಮದುವೆಗೆ ಯತ್ನ – ಆರೋಪಿ ಅರೆಸ್ಟ್

    ಬೆಂಗಳೂರು | ಅಪ್ರಾಪ್ತೆಯನ್ನು ಕರೆದೊಯ್ದು ಮದುವೆಗೆ ಯತ್ನ – ಆರೋಪಿ ಅರೆಸ್ಟ್

    ಆನೇಕಲ್: ಅಪ್ರಾಪ್ತ ಬಾಲಕಿಯನ್ನು ಕರೆದುಕೊಂಡು ಹೋಗಿ ಮದುವೆ (Marriage) ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರು ಹೊರ ವಲಯದ ಆನೇಕಲ್ ಪೋಲಿಸ್ ಠಾಣಾ (Anekal Police Station) ವ್ಯಾಪ್ತಿಯಲ್ಲಿ ನಡೆದಿದೆ.

    ಕೋರಮಂಗಲ (Koramangala) ಮೂಲದ ನಿವಾಸಿ ಸೊಸೆರಾಜು ಬಂಧಿತ ಆರೋಪಿ. ಬೆಂಗಳೂರಿನ ಕೋರಮಂಗಲದಲ್ಲಿರುವ ಅಜ್ಜಿಯ ಮನೆಗೆಂದು ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಆರೋಪಿ ಕರೆದುಕೊಂಡು ಓಡಿ ಹೋಗಿದ್ದ. ಇದನ್ನೂ ಓದಿ: ಮಂಗಳೂರು | ಲವ್-ಸೆಕ್ಸ್ ದೋಖಾ ಕೇಸ್‌ – ಬಿಜೆಪಿ ಪ್ರಭಾವಿ ಮುಖಂಡನ ಪುತ್ರ ಅರೆಸ್ಟ್‌

    ವಿಚಾರ ತಿಳಿಯುತ್ತಿದ್ದಂತೆ ಅಪ್ರಾಪ್ತೆಯ ತಂದೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ಮಗಳು ಕಾಣೆಯಾಗಿರುವುದಾಗಿ ದೂರು ನೀಡಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು ಆರೋಪಿಯನ್ನು ಬಂಧಿಸಿ ಆನೇಕಲ್ ಠಾಣೆಗೆ ಕರೆತಂದಿದ್ದಾರೆ. ಇದನ್ನೂ ಓದಿ: ಉದ್ಯಮಿ ನೀರವ್ ಮೋದಿ ಸಹೋದರ ನೇಹಲ್ ಮೋದಿ ಬಂಧನ

    ಈ ಪ್ರಕರಣ ಸಂಭವಿಸಿ ಎರಡು ದಿನ ಕಳೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಆನೇಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

  • ಶಾಲಾ ಬಸ್, ಲಾರಿ ನಡುವೆ ಸಿಲುಕಿ ಆಟೋ ಅಪ್ಪಚ್ಚಿ – ಪವಾಡ ಸದೃಶವಾಗಿ ಚಾಲಕ ಪಾರು

    ಶಾಲಾ ಬಸ್, ಲಾರಿ ನಡುವೆ ಸಿಲುಕಿ ಆಟೋ ಅಪ್ಪಚ್ಚಿ – ಪವಾಡ ಸದೃಶವಾಗಿ ಚಾಲಕ ಪಾರು

    -ರೀಲ್ಸ್ ನೋಡಿಕೊಂಡು ಲಾರಿ ಚಲಾಯಿಸಿದ್ದು ಘಟನೆಗೆ ಕಾರಣ ಎಂದು ಆರೋಪ

    ಆನೇಕಲ್: ಶಾಲಾ ಬಸ್ ಹಾಗೂ ಲಾರಿ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿದ್ದು, ಚಾಲಕ ಪವಾಡ ಸದೃಶವಾಗಿ ಪಾರಾಗಿರುವ ಘಟನೆ ಹೊಸೂರು (Hosuru) ಮುಖ್ಯರಸ್ತೆಯ ಕೂಡ್ಲು ಗೇಟ್ (Kudlu Gate) ಬಳಿ ನಡೆದಿದೆ.

    ಕೂಡ್ಲು ಗೇಟ್ ಬಳಿ ಹೋಗುತ್ತಿದ್ದಾಗ ಶಾಲಾ ಬಸ್‌ನ ಚಾಲಕ ದಿಢೀರ್ ಬ್ರೇಕ್ ಹಾಕಿದ್ದಾನೆ. ಇದರಿಂದ ಹಿಂದೆ ಇದ್ದ ಆಟೋ ಚಾಲಕ ಕೂಡ ತಕ್ಷಣ ಬ್ರೇಕ್ ಹಾಕಿದ್ದಾನೆ. ಆದರೆ ಆಟೋ ಹಿಂದಿದ್ದ ಲಾರಿ ಚಾಲಕ ಬ್ರೇಕ್ ಹಾಕದೇ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಶಾಲಾ ಬಸ್ ಹಾಗೂ ಲಾರಿ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿದೆ.ಇದನ್ನೂ ಓದಿ: ನಮ್ಮ ಸರ್ಕಾರ 5 ವರ್ಷ ಬಂಡೆ ರೀತಿ ಇರುತ್ತೆ: ಒಟ್ಟಾಗಿಯೇ ಇದ್ದೇವೆ ಎಂದು ಹೇಳಿ ಡಿಕೆಶಿಯ ಕೈ ಎತ್ತಿದ ಸಿಎಂ

    ಇದೆಲ್ಲದರ ನಡುವೆ ಆಟೋ ಚಾಲಕ ಸಿಲುಕಿ ನರಳಾಡಿದ್ದು, ಸ್ಥಳೀಯರು ಬಂದು ರಕ್ಷಣೆ ಮಾಡಿದ್ದಾರೆ. ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸಣ್ಣ-ಪುಟ್ಟ ಗಾಯಗಳಿಂದ ಆಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

    ಲಾರಿ ಚಾಲಕ ರೀಲ್ಸ್ ನೋಡಿಕೊಂಡು ವಾಹನ ಚಲಾಯಿಸಿದ್ದು, ಘಟನೆಗೆ ಕಾರಣ ಎಂದು ಆರೋಪ ಕೇಳಿಬಂದಿದೆ.ಇದನ್ನೂ ಓದಿ: 70 ಲಕ್ಷದ ಕಾರು, 800 ಗ್ರಾಂ ಚಿನ್ನ ನೀಡಿದ ಬಳಿಕವೂ ವರದಕ್ಷಿಣೆ ಕಿರುಕುಳ – ನವವಿವಾಹಿತೆ ಆತ್ಮಹತ್ಯೆ

  • ಆನೇಕಲ್‌ | ಹಾಡಹಗಲೇ ಮೈಕೈ ಮುಟ್ಟಿ ಯುವತಿಗೆ ಲೈಂಗಿಕ ಕಿರುಕುಳ – ಐವರ ವಿರುದ್ಧ ದೂರು

    ಆನೇಕಲ್‌ | ಹಾಡಹಗಲೇ ಮೈಕೈ ಮುಟ್ಟಿ ಯುವತಿಗೆ ಲೈಂಗಿಕ ಕಿರುಕುಳ – ಐವರ ವಿರುದ್ಧ ದೂರು

    ಆನೇಕಲ್‌: ಅಂಗಡಿಗೆ ಹೊರಟಿದ್ದ ಯುವತಿಗೆ ಮೈ ಕೈ ಮುಟ್ಟಿ ಹಾಡಹಗಲೇ ಲೈಂಗಿಕ ಕಿರುಕುಳ (Sexual harassment) ನೀಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ (Anekal) ತಾಲ್ಲೂಕಿನ ಮೈಲಸಂದ್ರ ಬಳಿಯಲ್ಲಿ ನಡೆದಿದೆ.

    ಭಾನುವಾರ (ನಿನ್ನೆ) ಸಂಜೆ 4 ಗಂಟೆ ಸುಮಾರಿಗೆ ಬನ್ನೇರುಘಟ್ಟ ಪೊಲೀಸ್ ಠಾಣಾ (Bannerghatta Police Station) ವ್ಯಾಪ್ತಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ಗಾಂಜಾ ನಶೆಯಲ್ಲಿದ್ದ ಐದಾರು ಮಂದಿ ಕೃತ್ಯ ಎಸಗಿದ್ದಾರೆ. ಅಲ್ಲದೇ ಪ್ರತಿರೋಧ ತೋರಿದ ಯುವತಿ ಮೇಲೆ ಹಲ್ಲೆ ಕೂಡ ಮಾಡಿದ್ದಾರೆ. ಇದನ್ನೂ ಓದಿ: ಸಾಂಬಾರ್ ಮಾಡುವ ವಿಚಾರಕ್ಕೆ‌ ಸ್ನೇಹಿತರ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ

    ಸಂತ್ರಸ್ತ ಯುವತಿ ದಿನಸಿ ತರಲು ಹೋಗಿದ್ದರು. ಈ ವೇಳೆ ಗಾಂಜಾ (Ganja) ನಶೆಯಲ್ಲಿದ್ದ ಕಿರಾತಕರು ಅಡ್ಡಗಟ್ಟಿ ಆಕೆಯ ಮೈಕೈ ಮುಟ್ಟಿ ಎಳೆದಾಡಿದ್ದಾರೆ. ಯುವತಿ ಪ್ರತಿರೋಧ ತೋರಿದ್ದಕ್ಕೆ ನಡುರಸ್ತೆಯಲ್ಲೇ ಹಲ್ಲೆ ಕೂಡ ಮಾಡಿದ್ದಾರೆ. ಹೇಗೋ ಆಕೆ ಸ್ಥಳೀಯರ ನೆರವಿನಿಂದ ತಪ್ಪಿಸಿಕೊಂಡಿದ್ದಾಳೆ. ಈ ವೇಳೆ ಸ್ಥಳೀಯರ ಮೇಲೂ ಹಲ್ಲೆ ನಡೆಸಿದ ಕಿಡಿಗೇಡಿಗಳು ಯುವತಿಯ ಮನೆಗೆ ನುಗ್ಗಿ ಹಲ್ಲೆ ನಡೆಸಲು ಯತ್ನಿಸಿದ್ದಾರೆ.

    ಮಹಿಳೆ ಮತ್ತು ಸ್ಥಳೀಯರ ಮೇಲಿನ ಹಲ್ಲೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿ. ಈ ಸಂಬಂಧ ಬನ್ನೇರುಘಟ್ಟ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: Gadag | ಶಾಲಾ ಮೇಲ್ಛಾವಣಿ ಪದರ ಕುಸಿತ – ಓರ್ವ ಶಿಕ್ಷಕ, ಐವರು ವಿದ್ಯಾರ್ಥಿಗಳಿಗೆ ಗಾಯ

    ಸಂತ್ರಸ್ತ ಯುವತಿ ಒಂದು ವಾರದ ಹಿಂದೆಯಷ್ಟೇ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ಬಾಡಿಗೆ ಮನೆಗೆ ಬಂದಿದ್ದಳು. ಅಣ್ಣ ವಾಸವಿದ್ದ ಮನೆ ಸಮೀಪದಲ್ಲೇ ಬಾಡಿಗೆ ಮನೆ ಪಡೆದು ವಾಸಿಸುತ್ತಿದ್ದಳು. ನಿನ್ನೆ ಸಂಜೆ ಒಬ್ಬಂಟಿಯಾಗಿ ಸಾಗುವಾಗ ಕಿಡಿಗೇಡಿಗಳು ನೀಚ ಕೃತ್ಯ ಎಸಗಿದ್ದಾರೆ. ಈ ಸಂಬಂಧ ನಿನ್ನೆ ಸಂಜೆಯೇ ದೂರು ನೀಡಿದ್ದರೂ ಪೊಲೀಸರು ಪ್ರಕರಣ ದಾಖಲಿಸಿಲ್ಲ, ಆರೋಪಿಗಳನ್ನು ವಶಕ್ಕೆ ಪಡೆಯುವ ಕೆಲಸವನ್ನೂ ಮಾಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕದನ ಭೂಮಿಯಿಂದ ಓಡಿಹೋಗಲ್ಲ, ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ: ಬಿಆರ್ ಪಾಟೀಲ್

  • ಆನೇಕಲ್‌ | ಆಟವಾಡ್ತಿದ್ದಾಗ ಕರೆಂಟ್ ಶಾಕ್‌ ತಗುಲಿ 11 ವರ್ಷದ ಬಾಲಕಿ ಸಾವು

    ಆನೇಕಲ್‌ | ಆಟವಾಡ್ತಿದ್ದಾಗ ಕರೆಂಟ್ ಶಾಕ್‌ ತಗುಲಿ 11 ವರ್ಷದ ಬಾಲಕಿ ಸಾವು

    ಆನೇಕಲ್‌: ಆಟವಾಡ್ತಿದ್ದಾಗ ವಿದ್ಯುತ್‌ ಶಾಕ್‌ (Electric Shock) ತಗುಲಿ 11 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ (Anekal) ತಾಲೂಕಿನ ನಾರಾಯಣಘಟ್ಟದಲ್ಲಿ ನಡೆದಿದೆ.

    ನಾರಾಯಣಘಟ್ಟ ಗ್ರಾಮದ ತನಿಷ್ಕಾ(11) ಮೃತ ಬಾಲಕಿ. ಶಾಲೆಗೆ ರಜೆ ಇದ್ದ ಕಾರಣ ತನಿಷ್ಕಾ ಮನೆ ಬಳಿಯೇ ಆಟವಾಡುತ್ತಿದ್ದಳು. ವಿದ್ಯುತ್‌ ಕಂಬದ ಬಳಿ ಆಟವಾಡುತ್ತಿದ್ದಾಗ ಕರೆಂಟ್‌ ಶಾಕ್‌ ತಗುಲಿದೆ. ಇದನ್ನೂ ಓದಿ: ಲವ್ವರ್‌ ಜೊತೆಯೇ ಓಡಿ ಹೋಗಬಹುದಿತ್ತು, ನನ್ನ ಅಣ್ಣನನ್ನು ಯಾಕೆ ಕೊಂದ್ಲು?- ಹತ್ಯೆಯಾದ ರಘುವಂಶಿ ಸಹೋದರಿ ಕಣ್ಣೀರು

    ವಿದ್ಯುತ್‌ ಶಾಕ್‌ನಿಂದ ಗಾಯಗೊಂಡಿದ್ದ ತನಿಷ್ಕಾಳನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: `ನಾ ವಿಧವೆಯಾಗ್ತೀನಿ, ನಿನ್ನನ್ನೇ ಮದ್ವೆಯಾಗ್ತೀನಿ’ ಅಂದಿದ್ಳಂತೆ ಸೋನಂ ರಘುವಂಶಿ..!

    ಇದರಿಂದ ಬೆಸ್ಕಾಂ ಅಧಿಕಾರಿಗಳ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಆಸ್ಪತ್ರೆ ಮುಂಭಾಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸೂರ್ಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸ್ನಾನ ಮಾಡಲು ನದಿಗೆ ಇಳಿದಿದ್ದ 8 ಮಂದಿ ಸಾವು – ಮೂವರ ರಕ್ಷಣೆ

  • ಪ್ರಿಯರಕನೊಂದಿಗೆ ಚಕ್ಕಂದವಾಡ್ತಾ ಸಿಕ್ಕಿಬಿದ್ದ ಪತ್ನಿ – ಆಕೆಯನ್ನ ಕೊಂದು ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದ ಪತಿ

    ಪ್ರಿಯರಕನೊಂದಿಗೆ ಚಕ್ಕಂದವಾಡ್ತಾ ಸಿಕ್ಕಿಬಿದ್ದ ಪತ್ನಿ – ಆಕೆಯನ್ನ ಕೊಂದು ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದ ಪತಿ

    ಆನೇಕಲ್‌: ಪ್ರಿಯಕರನೊಂದಿಗೆ (Lover) ಚಕ್ಕಂದವಾಡುತ್ತಾ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಪತ್ನಿಯನ್ನ ಕೊಂದು, ಆಕೆಯ ರುಂಡದೊಂದಿಗೆ ಪತಿ ಪೊಲೀಸ್‌ ಠಾಣೆಗೆ ತೆರೆಳಿ ಶರಣಾಗಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್‌ ತಾಲೂಕಿನ ಹೀಲಲಿಗೆಯಲ್ಲಿ ನಡೆದಿದೆ.

    ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ ಘಟನೆ ನಡೆದಿದೆ. ಹೆನ್ನಾಗರ ಸಮೀಪದ ಕಾಚನಾಯಕನಹಳ್ಳಿ ನಿವಾಸಿ ಶಂಕರ್ (28) ಪತ್ನಿಯ ರುಂಡ ಕಡಿದ ಆರೋಪಿ. ಹೆಬ್ಬಗೋಡಿ ನಿವಾಸಿ ಮಾನಸ (26) ಕೊಲೆಯಾದ ಮಹಿಳೆ. ಪತ್ನಿ ಬೇರೊಬ್ಬ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆ‌ ಪತಿ ಆಕೆಯ ರುಂಡ ಕಡಿದು ಸೂರ್ಯನಗರ ಠಾಣೆಗೆ ಕೊಂಡೊಯ್ದಿದ್ದಾನೆ. ಬಳಿಕ ಪೊಲೀಸರು ಆತನನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಪರ ಪುರುಷನೊಂದಿಗೆ ಸರಸಕ್ಕೆ ಅಡ್ಡಿ – ಅನ್ನಕ್ಕೆ ವಿಷ ಹಾಕಿ ಇಡೀ ಕುಟುಂಬವನ್ನೇ ಮುಗಿಸಲು ಯತ್ನಿಸಿದ್ದಾಕೆ ಅರೆಸ್ಟ್‌

    ಮಾನಸ ಮತ್ತು ಶಂಕರ್‌ ಪ್ರೀತಿಸಿ ಮದುವೆಯಾಗಿದ್ದರು. ತಿಂಗಳ ಹಿಂದಷ್ಟೇ ಹೀಲಲಗೆ ಗ್ರಾಮದ ಬಾಡಿಗೆ ಮನೆಗೆ ಶಿಫ್ಟ್‌ ಆಗಿದ್ದರು. ಇದೇ ತಿಂಗಳ 3ನೇ ತಾರೀಖು ಶಂಕರ್‌ ಕೆಲಸದ ನಿಮಿತ್ತ ತೆರಳಿದ್ದ, ಹೊರಡುವಾಗ ಮಾರನೆ ದಿನ ಬರುವುದಾಗಿ ಹೇಳಿದ್ದ. ಆದ್ರೆ ಕೆಲಸ ಬೇಗ ಮುಗಿದ ಹಿನ್ನೆಲೆ ಪತ್ನಿ ಒಬ್ಬಳೆ ಇರ್ತಾಳೆಂದು ತಡರಾತ್ರಿಯೇ ವಾಪಸ್‌ ಆಗಿದ್ದ. ಆದ್ರೆ ಗಂಡನ ಚಿಂತೆಯೇ ಇಲ್ಲದೇ ಪತ್ನಿ ಪ್ರಿಯಕರನೊಂದಿಗೆ ಚಕ್ಕಂದವಾಡ್ತಾ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಳು. ಇದನ್ನೂ ಓದಿ: Stampede Case | ಡಿಸಿ ನೇತೃತ್ವದ ತನಿಖೆ ಚುರುಕು – 25ಕ್ಕೂ ಹೆಚ್ಚು ಗಾಯಾಳುಗಳಿಗೆ ನೋಟಿಸ್, ಜೂ.11ಕ್ಕೆ ವಿಚಾರಣೆ

    ಇದರಿಂದ ಆಕ್ರೋಶಗೊಂಡ ಪತಿ ಶಂಕರ್‌ ಇಬ್ಬರ ಮೇಲೂ ಹಲ್ಲೆ ಮಾಡಿದ್ದಾನೆ. ನೀನು ನನಗೆ ಬೇಡ ಅಂತ ಪ್ರಿಯಕರನ ಜೊತೆಗೇ ಕಳಿಸಿದ್ದ. ಆದ್ರೆ ಪತ್ನಿ ಮಾನಸ ಮಾತ್ರ ಪದೇ ಪದೇ ಟಾರ್ಚರ್‌ ಮಾಡುತ್ತಿದ್ದಳಂತೆ. ನಿನ್ನೆ ರಾತ್ರಿ ಸಹ ಮನೆಗೆ ಬಂದು ಗಲಾಟೆ ಮಾಡಿದ್ದಳಂತೆ. ಇದರಿಂದ ಬೇಸತ್ತ ಪತಿ ಆಕೆಯ ತಲೆ ಕಡೆದು ಠಾಣೆಗೆ ಸೂರ್ಯನಗರ ಪೊಲೀಸ್‌ ಠಾಣೆಗೆ ತೆಗದುಕೊಂಡು ಬಂದಿದ್ದಾನೆ. ನಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ:  ಚಿನ್ನಸ್ವಾಮಿ ಸ್ಟೇಡಿಯಂ ಸಿಬ್ಬಂದಿಯಿಂದ ಅಭಿಮಾನಿಗಳ ಮೇಲೆ ಪೈಪ್‌ನಿಂದ ಹಲ್ಲೆ – ಬಹಳ ಭಯಾನಕವಾಗಿದೆ ಕಾಲ್ತುಳಿತದ ದೃಶ್ಯ

    ಸದ್ಯ ಆರೋಪಿಯನ್ನ ಬಂಧಿಸಿ ಪ್ರಕರಣ ದಾಖಲಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.