Tag: anekal

  • Anekal | ಸೂಟ್‌ಕೇಸ್‌ನಲ್ಲಿ ಅಪರಿಚಿತ ಬಾಲಕಿ ಶವ ಪತ್ತೆ

    Anekal | ಸೂಟ್‌ಕೇಸ್‌ನಲ್ಲಿ ಅಪರಿಚಿತ ಬಾಲಕಿ ಶವ ಪತ್ತೆ

    ಆನೇಕಲ್: ಸೂಟ್‌ಕೇಸ್‌ನಲ್ಲಿ (Suitcase) ಅಪರಿಚಿತ ಬಾಲಕಿ ಶವ ಪತ್ತೆಯಾಗಿರುವ ಘಟನೆ ಬೆಂಗಳೂರು (Bengaluru) ಹೊರವಲಯ ಆನೇಕಲ್ (Anekal) ತಾಲೂಕಿನ ಚಂದಾಪುರ (Chandapura) ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ.

    ಹೊಸೂರು ಮುಖ್ಯರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು ಹತ್ತು ವರ್ಷದ ಬಾಲಕಿಯ ಮೃತದೇಹವಿದ್ದ ಸೂಟ್‌ಕೇಸ್ ಪತ್ತೆಯಾಗಿದೆ. ಚಲಿಸುವ ರೈಲಿನಿಂದ ಸೂಟ್‌ಕೇಸ್ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಗೃಹ ಸಚಿವ ಪರಂ ಕೇಸ್‌ಗೆ ರನ್ಯಾರಾವ್ ಲಿಂಕ್?

    ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರ ಆಗಮನದ ಬಳಿಕ ಸೂಟ್‌ಕೇಸ್ ಪರಿಶೀಲನೆ ನಡೆಯಲಿದೆ. ಇದನ್ನೂ ಓದಿ: ಬಲೂಚಿಸ್ತಾನದಲ್ಲಿ ಆರ್ಮಿ ಸ್ಕೂಲ್ ಬಸ್ ಮೇಲೆ ಬಾಂಬ್ ದಾಳಿ – 4 ಮಕ್ಕಳು ಸಾವು

  • ವಿದೇಶದಲ್ಲಿ ಓದು ಮುಗಿಸಿ ಮನೆಗೆ ಬಂದಿದ್ದ ಯುವಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    ವಿದೇಶದಲ್ಲಿ ಓದು ಮುಗಿಸಿ ಮನೆಗೆ ಬಂದಿದ್ದ ಯುವಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    ಆನೇಕಲ್: ವಿದೇಶದಲ್ಲಿ ಓದು ಮುಗಿಸಿ ಇತ್ತೀಚೆಗಷ್ಟೇ ಮನೆಗೆ ಬಂದಿದ್ದ ಯುವಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ(Hoskote) ಸಮೀಪದ ದೇವಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಬೈಯೇಶ್ (28) ಆತ್ಮಹತ್ಯೆಗೆ ಶರಣಾದ ಯುವಕ. ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ ಬೈಯೇಶ್ ಮನೆಯಲ್ಲಿದ್ದ ತಂದೆಯ ಸಿಂಗಲ್ ಬ್ಯಾರಲ್ ಗನ್‌ನಿಂದ ಫೈರಿಂಗ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರ ಯಶಸ್ಸಿಗೆ ಕಾರಣರಾದ ಸೈನಿಕರಿಗೆ ಸೆಲ್ಯೂಟ್‌: ಮೋದಿ

    ಇಂದು ಮುಂಜಾನೆ ಮನೆಯವರು ಕುಟುಂಬಸ್ಥರೊಂದಿಗೆ ತಿರುಪತಿಗೆ ತೆರಳಿದ್ದರು. ಈ ವೇಳೆ ಬೈಯೇಶ್ ನನಗೆ ಕೆಲಸ ಇದೆ ಎಂದು ಹೇಳಿ ಮನೆಯಲ್ಲೇ ಉಳಿದುಕೊಂಡಿದ್ದ. ಬೆಳಗ್ಗೆ 7 ಗಂಟೆ ಸುಮಾರಿಗೆ ಬೈಯೇಶ್ ತೋಟದ ಮನೆಗೆ ತೆರಳಿ ತಂದೆಯ ಸಿಂಗಲ್ ಬ್ಯಾರಲ್ ಗನ್‌ನಿಂದ ತಲೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಭಾರತ, ಪಾಕ್‌ ಮಧ್ಯೆ ನಡೆಯಬಹುದಾಗಿದ್ದ ಪರಮಾಣು ಸಂಘರ್ಷ ನಿಲ್ಲಿಸಿದ್ದೇವೆ: ಟ್ರಂಪ್‌

    ತೋಟದ ಮನೆಯಿಂದ ಜೋರಾದ ಗುಂಡಿನ ಶಬ್ದ ಬರ್ತಿದ್ದಂತೆ ಕೆಲಸದವರು ಹಾಗೂ ಅಕ್ಕಪಕ್ಕದವರೆಲ್ಲಾ ಓಡಿಬಂದಾಗ ಗುಂಡು ಬೈಯೇಶ್ ತಲೆಯನ್ನು ಸೀಳಿತ್ತು. ಬೈಯೇಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣವೇ ಸ್ಥಳೀಯರು ಪೊಲೀಸರಿಗೆ ಹಾಗೂ ಬೈಯೇಶ್ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ನೆರವೇರಿದ ರಾಕೇಶ್ ಪೂಜಾರಿ ಅಂತ್ಯಕ್ರಿಯೆ

    ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬ ಮಾತನಾಡಿ, ತಿರುಮಲಶೆಟ್ಟಿಹಳ್ಳಿ ಬಳಿ ಇಂದು ಈ ಘಟನೆ ನಡೆದಿದೆ. ಮೃತ ಬೈಯೇಶ್ ಯುವಕ ಲೈಸೆನ್ಸ್ ಗನ್‌ನಿಂದ ಸೂಸೈಡ್ ಮಾಡಿಕೊಂಡಿದ್ದಾನೆ. ಶೂಟ್ ಮಾಡಿಕೊಂಡು ಸೂಸೈಡ್ ಮಾಡ್ಕೊಂಡಿದ್ದಾರಾ ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗ್ತಿದೆ. ಇತ್ತೀಚೆಗೆ ಅವರ ತಂದೆ ಕೂಡ ಯುವಕನಿಗೆ 30 ಲಕ್ಷ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ. ಹಣದ ವಿಚಾರವಾಗಿ ನಷ್ಟ ಆಗಿದ್ದರಿಂದ ಶೂಟ್ ಮಾಡಿಕೊಂಡಿರುವ ಶಂಕೆ ಇದೆ. ಅವರ ತಂದೆ ನೀಡಿರುವ ದೂರಿನಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಪಹಲ್ಗಾಮ್ ದಾಳಿ ಹಿಂದೆ ಪಾಪಿ ಪಾಕ್ ಕೈವಾಡಕ್ಕೆ ಸಾಕ್ಷ್ಯ – ಅಮೆರಿಕದಿಂದ 3 ಲಕ್ಷಕ್ಕೆ ಸ್ಯಾಟ್‌ಲೈಟ್ ಚಿತ್ರ ಪಡೆದಿದ್ದ ಉಗ್ರರು?

    ಸ್ಥಳಕ್ಕೆ ತಿರುಮಲಶೆಟ್ಟಿಹಳ್ಳಿ(Tirumala Shetty Halli Police) ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಘಟನೆಯ ಕುರಿತು ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪ್ರೀತಿ ಬೇಕೆಂದು ಬಂದವಳನ್ನು ಮಗುವಿನ ಮುಂದೆಯೇ ಕೊಂದ ಪತಿ

    ಪ್ರೀತಿ ಬೇಕೆಂದು ಬಂದವಳನ್ನು ಮಗುವಿನ ಮುಂದೆಯೇ ಕೊಂದ ಪತಿ

    ಆನೇಕಲ್: ಆತ ಪ್ರೀತಿ ನೆಪದಲ್ಲಿ ಕೈಗೊಂದು ಕೂಸು ಕೊಟ್ಟು ಬೆಂಗಳೂರು ಸೇರಿಕೊಂಡಿದ್ದ. ಆಕೆ ದೂರದ ಒಡಿಶಾದಿಂದ ಹೆತ್ತವರ ಧಿಕ್ಕರಿಸಿ ಪತಿಗಾಗಿ ತವರು ಬಿಟ್ಟಿದ್ದಳು. ಆದರೆ, ತನಗಾಗಿ ಬಂದವಳನ್ನು ಪುಟ್ಟ ಮಗುವಿನ ಮುಂದೆಯೇ ತಡರಾತ್ರಿ ಪತಿಯೇ ಕೊಂದು ಮುಗಿಸಿ ಪರಾರಿಯಾಗಿದ್ದಾನೆ.

    ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ವಾಬಸಂದ್ರ ಬಳಿಯ ನಂಜಾರೆಡ್ಡಿ ಬಡಾವಣೆಯಲ್ಲಿ ತಡರಾತ್ರಿ ನಡೆದಿದೆ. ಒಡಿಶಾ ಮೂಲದ ಬರ್ಸಾ ಪ್ರಿಯದರ್ಶಿನಿ ಮೃತ ದುರ್ದೈವಿ. ಬಿಹಾರ ಮೂಲದ ಸೋಹನ್ ಕುಮಾರ್ ಪತ್ನಿಯನ್ನು ಕೊಂದ ಪಾಪಿ ಪತಿ. ಆರೋಪಿ ಸೋಹನ್ ಕುಮಾರ್ ಜೊತೆ ಬಾಳ್ವೆ ನಡೆಸಲು ಬರ್ಸಾ ಪ್ರಿಯದರ್ಶಿನಿ ಕಳೆದ ಶನಿವಾರ ಒಡಿಶಾದಿಂದ ಬಂದಿದ್ದಳು. ಆದರೆ, ನಿನ್ನೆ ರಾತ್ರಿ ಕಂಠಪೂರ್ತಿ ಮದ್ಯ ಸೇವನೆ ಮಾಡಿದ್ದ ಆರೋಪಿ ಪತ್ನಿ ಜೊತೆ ಜಗಳ ತೆಗೆದಿದ್ದಾನೆ. ಕುಡಿದ ನಶೆಯಲ್ಲಿ ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ. ಆದರೆ, ಪುಟ್ಟ ಮಗು ಜೋರಾಗಿ ಅಳುತ್ತಿರುವುದನ್ನು ಗಮನಿಸಿ ಮನೆಯ ಮಾಲಕಿ ಹೊರ ಬಂದಿದ್ದು, ಆರೋಪಿ ಸೋಹನ್ ಕುಮಾರ್ ಪರಾರಿಯಾಗಿದ್ದಾನೆ.

    ಮೃತ ಬರ್ಸಾ ಪ್ರಿಯದರ್ಶಿನಿ ಮತ್ತು ಸೋಹನ್ ಕುಮಾರ್ ಪರಸ್ಪರ ಪ್ರೀತಿಸಿ ತಮಿಳುನಾಡಿನಲ್ಲಿ ವಿವಾಹವಾಗಿದ್ದರು. ವಿವಾಹದ ಬಳಿಕ ಸೋಹನ್ ಕುಮಾರ್ ಸ್ವಗ್ರಾಮ ಬಿಹಾರಕ್ಕೆ ತೆರಳಿದ್ದರು. ಆದರೆ, ಸೋಹನ್ ಕುಮಾರ್ ಪೋಷಕರು ಬರ್ಸಾ ಪ್ರಿಯದರ್ಶಿನಿಯನ್ನು ತಮ್ಮ ಸೊಸೆಯಾಗಿ ಒಪ್ಪಿಕೊಳ್ಳಲು ತಯಾರಿರಲಿಲ್ಲ. ಅಲ್ಲಿಂದ ಪತ್ನಿ ತವರೂರು ಒಡಿಶಾಗೆ ಬಂದಿದ್ದ ಸೋಹನ್ ಕುಮಾರ್ ಆರೇ ತಿಂಗಳಿಗೆ ಬೆಂಗಳೂರಿಗೆ ಬಂದು ಬಿಟ್ಟಿದ್ದ. ಪತ್ನಿಗೆ ಗಂಡು ಮಗು ಜನಿಸಿದರೂ, ಅತ್ತ ತಲೆ ಕೂಡ ಹಾಕಿರಲಿಲ್ಲ. ಇದರಿಂದ ಬೇಸರಗೊಂಡಿದ್ದ ಬರ್ಸಾ ಪ್ರಿಯದರ್ಶಿನಿ ಪೋಷಕರು ಬೇರೆ ಮದುವೆ ಆಗುವಂತೆ ಒತ್ತಾಯಿಸಿದ್ದರು. ಆದರೆ, ಪತಿಯೇ ಬೇಕು ಎಂದು ಹೆತ್ತವರ ಧಿಕ್ಕರಿಸಿ ಬೆಂಗಳೂರಿಗೆ ಬಂದು ಕೊಲೆಯಾಗಿ ಹೋಗಿದ್ದಾಳೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಜಿಗಣಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಆಕ್ಸ್‌ಫರ್ಡ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿ ಆರೋಪಿಗಾಗಿ ಹುಡುಕಾಡುತ್ತಿದ್ದಾರೆ.

  • ಬಾರ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ – ಚಾಕುವಿನಿಂದ ಇರಿದು ಓರ್ವನ ಕೊಲೆ

    ಬಾರ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ – ಚಾಕುವಿನಿಂದ ಇರಿದು ಓರ್ವನ ಕೊಲೆ

    ಆನೇಕಲ್: ಬಾರ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬನ್ನೇರುಘಟ್ಟ (Bannerughatta) ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚಗಯ್ಯನದೊಡ್ಡಿಯಲ್ಲಿ ರಾತ್ರಿ ನಡೆದಿದೆ.

    ಕೆಂಚಗಯ್ಯನದೊಡ್ಡಿ ನಿವಾಸಿ ಸುರೇಶ್ ಕೊಲೆಯಾದ ವ್ಯಕ್ತಿ. ಕಾಂತರಾಜು ಹಾಗೂ ಆತನ ಗ್ಯಾಂಗ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್ – ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

    ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್, ಶುಕ್ರವಾರ ರಾತ್ರಿ ಮದ್ಯ ಸೇವಿಸಲು ಸ್ನೇಹಿತರ ಜೊತೆ ಶ್ಯಾನುಭೋಗನಹಳ್ಳಿ ತರಂಗಿಣಿ ಬಾರ್‌ಗೆ ತೆರಳಿದ್ದ. ಅದೇ ಬಾರ್‌ನಲ್ಲಿ ಆರೋಪಿ ಕಾಂತರಾಜು ಹಾಗೂ ಆತನ ಗ್ಯಾಂಗ್ ಜೋರಾಗಿ ಮಾತನಾಡುತ್ತಾ ಮದ್ಯಸೇವನೆ ಮಾಡುತ್ತಿದ್ದರು. ಇದನ್ನೂ ಓದಿ: ಕಲಬುರಗಿ| ಎಸ್‌ಬಿಐ ಎಟಿಎಂ ದರೋಡೆಕೋರರ ಕಾಲಿಗೆ ಪೊಲೀಸರ ಗುಂಡೇಟು

    ಆಗ ಅಲ್ಲೇ ಮದ್ಯ ಸೇವಿಸುತ್ತಿದ್ದ ಸುರೇಶ್, ನಿಧಾನಕ್ಕೆ ಮಾತನಾಡಿ ಎಂದು ಹೇಳಿದ್ದ. ಆಗ ಕಾಂತರಾಜು ನೀನು ಯಾರು ಕೇಳೋಕೆ ಎಂದು ಹೇಳಿದ್ದ. ಈ ವೇಳೆ ಕಾಂತರಾಜು ಮತ್ತು ಸುರೇಶ್ ನಡುವೆ ನೂಕಾಟ-ತಳ್ಳಾಟ ನಡೆದಿದೆ.

    ಇದಾದ ಬಳಿಕ ಸುರೇಶ್ ಮನೆಗೆ ತೆರಳಿದ್ದ. ಕಾಂತರಾಜು ಹಾಗೂ ಆತನ ಗ್ಯಾಂಗ್ ಸುರೇಶ್‌ನನ್ನು ಹಿಂಬಾಲಿಸಿಕೊಂಡು ಬಂದಿದ್ದು, ಆತನ ಮನೆಗೆ ನುಗ್ಗಿ ಪತ್ನಿ ಮುಂದೆಯೇ ಹೊಟ್ಟೆ ಮತ್ತು ಎದೆ ಭಾಗಕ್ಕೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದರು. ಇದನ್ನೂ ಓದಿ: ಶಿಮ್ಲಾ ಒಪ್ಪಂದಕ್ಕೆ ಸಹಿ ಹಾಕಿದ್ದ ಮೇಜಿಂದ ಪಾಕ್ ಧ್ವಜ ತೆಗೆದು ಹಾಕಿದ ಭಾರತ

    ಗಾಯಾಳು ಸುರೇಶನನ್ನು ಕೂಡಲೇ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ನಾಗೇಶ್ ಕುಮಾರ್, ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ಮತ್ತು ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಚಾಮರಾಜನಗರ| ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

    ಘಟನೆ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

  • ಆನೇಕಲ್ | ನಿಯಂತ್ರಣ ತಪ್ಪಿ ಬೇಕರಿಗೆ ನುಗ್ಗಿದ ಬಿಎಂಟಿಸಿ ಬಸ್

    ಆನೇಕಲ್ | ನಿಯಂತ್ರಣ ತಪ್ಪಿ ಬೇಕರಿಗೆ ನುಗ್ಗಿದ ಬಿಎಂಟಿಸಿ ಬಸ್

    ಆನೇಕಲ್: ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ಬಸ್‌ವೊಂದು (BMTC) ಬೇಕರಿಗೆ ನುಗ್ಗಿದ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ ತಾಲೂಕಿನ ಜಿಗಿಣಿಯಲ್ಲಿ  ನಡೆದಿದೆ.

    ಬಿಎಂಟಿಸಿ ಬಸ್ ಮುಂಜಾನೆ ಬನ್ನೇರಘಟ್ಟದಿಂದ ಜಿಗಣಿ ಕಡೆಗೆ ಬರುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿ ಬೇಕರಿಗೆ ನುಗ್ಗಿದೆ. ಬೆಳಗ್ಗೆ ಯಾರೂ ಗ್ರಾಹಕರಿಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಜೊತೆಗೆ ಬೇಕರಿ ಇನ್ನೂ ಓಪನ್ ಮಾಡದ ಹಿನ್ನೆಲೆ ಗ್ರಾಹಕರು ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಇದನ್ನೂ ಓದಿ: ಪತ್ನಿ ಕಿರುಕುಳಕ್ಕೆ ಬೇಸತ್ತು, ವೀಡಿಯೋ ಮಾಡಿಟ್ಟು ಟೆಕ್ಕಿ ಆತ್ಮಹತ್ಯೆ

    ಇನ್ನು ಚಾಲಕ ಬಹುಶಃ ನಿದ್ದೆ ಮಂಪರಿನಲ್ಲಿ ಅಪಘಾತ ಸಂಭವಿಸಿರುವ ಸಾಧ್ಯತೆಯಿದೆ. ಸದ್ಯ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಸ್ಥಳೀಯರು ಚಾಲಕನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಿದ್ದಾರೆ. ಈ ಸಂಬಂಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: `ಕೈ’ ಸರ್ಕಾರ ಬಂದ್ಮೇಲೆ ಜನಿವಾರ, ಶಿವದಾರ, ಉಡುದಾರಕ್ಕೂ ಕತ್ತರಿ ಬೀಳ್ತಿದೆ, ಹಿಜಬ್‌ಗೆ ಬಹುಪರಾಕ್ ನಡೀತಿದೆ: ಆರ್.ಅಶೋಕ್

  • ಆನೇಕಲ್ | ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಪೋಸ್ಟ್ ಮಾಡಿ ವ್ಯಕ್ತಿ ಆತ್ಮಹತ್ಯೆ

    ಆನೇಕಲ್ | ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಪೋಸ್ಟ್ ಮಾಡಿ ವ್ಯಕ್ತಿ ಆತ್ಮಹತ್ಯೆ

    – ಕೆಲ ವ್ಯಕ್ತಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಆರೋಪ
    – ವಿಡಿಯೋದಲ್ಲಿ ಸಾವಿನ ಕಾರಣವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ವ್ಯಕ್ತಿ

    ಆನೇಕಲ್: ವ್ಯಕ್ತಿಯೊಬ್ಬರು ಫೇಸ್ಬುಕ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ಪಟ್ಟಣದ ಖಾಸಗಿ ಶಾಲೆ ಬಳಿ ನಡೆದಿದೆ.

    ಪ್ರವೀಣ್ ಗೌಡ ಬೇಲೂರು (35) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೃತ ಪ್ರವೀಣ್ ಫೇಸ್ಬುಕ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಕೆಲ ವ್ಯಕ್ತಿಗಳ ಟಾರ್ಚರ್‌ನಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆಯುತ್ತಿದ್ದ ಯುವಕ ಅರೆಸ್ಟ್

    ಬಿಜೆಪಿ ಕಾರ್ಯಕರ್ತನಾಗಿದ್ದ ಪ್ರವೀಣ್ ಗೌಡ ಬೇಲೂರು, ಫೇಸ್ಬುಕ್‌ನಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ಸಾವಿಗೆ ಕಾರಣ ಏನು ಅನ್ನೋದನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕಳೆದ ಎರಡು ತಿಂಗಳಿನಿಂದ ಮಾನಸಿಕವಾಗಿ ನೊಂದಿದ್ದೇನೆ. ನನ್ನ ಸಾವಿಗೆ ಕೆಲವರು ನೇರ ಕಾರಣರಾಗಿದ್ದಾರೆ. ಸಮಂದರ್ ಕಿರಣ್, ಗೋಕುಲ್ ಫ್ಯಾಷನ್ ಹರೀಶ್, ಭಾಸ್ಕರ್ ನಾರಾಯಣಪ್ಪ, ದೊಡ್ಡಹಾಗಡೆ ಮಧುಗೌಡ ಜೊತೆಗೆ ಸರವಣ ಇವರೆಲ್ಲಾ ನನ್ನ ಸಾವಿಗೆ ಕಾರಣಕರ್ತರು ಎಂದು ವೀಡಿಯೋದಲ್ಲಿ ಆರೋಪಿಸಿದ್ದಾರೆ.

    ಪೊಲೀಸರು, ಯಾರನ್ನೂ ಬಿಟ್ಟರೂ ಕಿರಣ್ ಗೌಡನನ್ನು ದಯವಿಟ್ಟು ಬಿಡಬೇಡಿ. ಕಿರಣ್ ತುಂಬಾ ಹೆಣ್ಣುಮಕ್ಕಳಿಗೆ ಫೋನ್ ಮಾಡಿ ಟಾರ್ಚರ್ ಕೊಡುತ್ತಾನೆ. ಇವನು ಮಾಡಿರುವ ಇಂತಹ ಕೆಲಸಗಳೆಲ್ಲಾ ನನ್ನ ಮೇಲೆ ಬಂದಿದೆ ಎಂದಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಕ್ಷಣ; ಯುನೆಸ್ಕೋದ ʻಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ʼಗೆ ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆ

    ಹಣದ ಮಾತುಕತೆಗೆ ಕರೆದು ಹಲ್ಲೆ ನಡೆಸಿರುವ ಬಗ್ಗೆಯೂ ವಿಡಿಯೋದಲ್ಲಿ ಆರೋಪಿಸಿದ್ದಾರೆ. ಆನೇಕಲ್ ಬಿಜೆಪಿ ಮಂಡಲದ ಅಧ್ಯಕ್ಷ ನಾಯನಹಳ್ಳಿ ಮುನಿರಾಜು ಗೌಡ ಅವರು ಹಣದ ಮಾತುಕತೆಗೆ ಮನೆ ಕರೆದಿದ್ದರು. ಆ ವೇಳೆ ಅಲ್ಲಿ ಆನೇಕಲ್ ಕೌನ್ಸಿಲರ್ ಭಾಗ್ಯಮ್ಮ ಮತ್ತು ಅವರ ಪತಿ ಶ್ರೀನಿವಾಸ್ ಸಹ ಇದ್ದರು. ಭಾಗ್ಯಮ್ಮ ಶ್ರೀನಿವಾಸ್ ಏಕಾಏಕಿ ಹತ್ತಾರು ಮಂದಿಯನ್ನ ಕರೆಸಿ, ಮೊಬೈಲ್ ಕಿತ್ತುಕೊಂಡು 2 ಗಂಟೆಗಳ ಕಾಲ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸುಂಕ ಸಮರದ ನಡುವೆ ಯುಎಸ್‌ ಅಧ್ಯಕ್ಷರನ್ನ ಭೇಟಿಯಾದ ಇಟಲಿ ಪ್ರಧಾನಿ – ಮೆಲೊನಿ ಶ್ರೇಷ್ಠ ಪ್ರಧಾನಿ ಎಂದ ಟ್ರಂಪ್‌

    ಅವರು ಮನಸೋ ಇಚ್ಛೆ ನನ್ನ ಮೇಲೆ ಹಲ್ಲೆ ನಡೆಸಿದ್ದು, ನಾನು ಸತ್ತ ಮೇಲೆ ನನ್ನ ದೇಹದ ಮೇಲಿರುವ ಗಾಯದ ಗುರುತನ್ನ ಪರಿಶೀಲಿಸಬೇಕು. ಪೊಲೀಸರು ನ್ಯಾಯ ದೊರಕಿಸಿ ಕೊಡಬೇಕೆಂದು ಮನವಿ ಮಾಡಿಕೊಂಡು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ವಿಡಿಯೋವನ್ನ ಫೇಸ್ಬುಕ್‌ನಲ್ಲಿ ಪೋಸ್ಟ್ ಮಾಡಿ, ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಆನೇಕಲ್ ಪೊಲೀಸರು (Anekal Police) ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಲಾಂಗ್ ಹಿಡಿದು ಸಿಕ್ಕ ಸಿಕ್ಕ ವಾಹನದ ಗ್ಲಾಸ್ ಹೊಡೆದ ಪುಡಿ ರೌಡಿ!

    ಆತ್ಮಹತ್ಯೆಗೆ ಶರಣಾದ ಪ್ರವೀಣ್ ಅವರ ಸಹೋದರಿ ಸೌಮ್ಯ ಮಾತನಾಡಿ, ಶ್ವೇತಾ ಎಂಬಾಕೆಗೆ ಪ್ರವೀಣ್ ಸಾಲ ನೀಡಿದ್ದ. ಬಳಿಕ ಶ್ವೇತಾಗೆ ಹಣ ವಾಪಸ್ ಮಾಡುವಂತೆ ಕೇಳಿದ್ದ. ಸಾಕಷ್ಟು ದಿನವಾದರೂ ಹಣ ನೀಡದೇ ಇದ್ದಾಗ ಮನೆ ಬಳಿ ಹೋಗಿ ಪ್ರವೀಣ್ ಕೇಳಿದ್ದ. ಶ್ವೇತಾ ಸಂಬಂಧಿಯಾಗಿದ್ದ ಪುರಸಭೆ ಸದಸ್ಯೆ ಭಾಗ್ಯಮ್ಮ ಶ್ರೀನಿವಾಸ್ ದುಡ್ಡಿನ ವಿಚಾರವಾಗಿ ಬಿಜೆಪಿ ಮುಖಂಡ ನಾಯನಹಳ್ಳಿ ಮುನಿರಾಜು ಗೌಡ ಮನೆಯಲ್ಲಿ ಮಾತುಕತೆಗೆ ಕರೆದಿದ್ದರು. ಈ ವೇಳೆ ಶ್ವೇತಾ ಕಡೆಯ ಇಪ್ಪತ್ತಕ್ಕೂ ಹೆಚ್ಚು ಮಂದಿ ಪ್ರವೀಣ್ ಫೋನ್ ಕಿತ್ತುಕೊಂಡು ಹಲ್ಲೆ ಮಾಡಿದ್ದರು ಎಂದು ಬಿಜೆಪಿ ಮುಖಂಡ ಮುನಿರಾಜು ಗೌಡ, ಶ್ರೀನಿವಾಸ್, ಪುರಸಭೆ ಸದಸ್ಯೆ ಭಾಗ್ಯಮ್ಮ ಮೇಲೆ ಆರೋಪಿಸಿದ್ದಾರೆ. ಇದನ್ನೂ ಓದಿ: ರಾಯಚೂರು | ಭೀಕರ ಅಪಘಾತಕ್ಕೆ ನಾಲ್ವರು ಬಲಿ

    ಶ್ವೇತಾ ಸ್ನೇಹಿತ ಕಿರಣ್ ಕೂಡ ಪ್ರವೀಣ್‌ಗೆ ಪೋನ್ ಮಾಡಿ ಅವಾಜ್ ಹಾಕಿದ್ದ. ಶ್ವೇತಾ ವಿಚಾರಕ್ಕೆ ಬಾರದಂತೆ ಕಿರಣ್ ಗೌಡ, ಹರೀಶ್, ಭಾಸ್ಕರ್ ನಾರಾಯಣಪ್ಪ, ಮಧುಗೌಡ, ಸರವಣ ಸೇರಿ ಪ್ರವೀಣ್‌ಗೆ ಟಾರ್ಚರ್ ನೀಡುತ್ತಿದ್ದರು. ಇದೇ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡುತ್ತಿದ್ದೇವೆ ಎಂದು ಹೇಳಿದರು.

  • ಆನೇಕಲ್‌ನಲ್ಲಿ ಅದ್ಧೂರಿಯಾಗಿ ನಡೆದ ಒಣ ಕರಗ ಮಹೋತ್ಸವ

    ಆನೇಕಲ್‌ನಲ್ಲಿ ಅದ್ಧೂರಿಯಾಗಿ ನಡೆದ ಒಣ ಕರಗ ಮಹೋತ್ಸವ

    ಆನೇಕಲ್: ಹಸಿ ಕರಗದ ಬಳಿಕ ಆನೇಕಲ್‌ನಲ್ಲಿ (Anekal) ಎರಡನೇ ದಿನ ನಡೆಯುವ ಇತಿಹಾಸ ಪ್ರಸಿದ್ಧ ಧರ್ಮರಾಯಸ್ವಾಮಿ ದೇವಾಲಯದ ಒಣ ಕರಗ (Karaga) ಮಹೋತ್ಸವ ಅದ್ಧೂರಿಯಾಗಿ ನೆರವೇರಿದೆ.

    ಒಣ ಕರಗವನ್ನು ಹೊತ್ತು ಸಾಗಿದ ಅರ್ಚಕ ರಮೇಶ್ ಆನೇಕಲ್‌ನ ರಾಜಬೀದಿಗಳಲ್ಲಿ ನರ್ತನ ಮಾಡುತ್ತಾ ಗತವೈಭವ ನೆನೆಪಿಗೆ ಬರುವಂತೆ ಮಾಡಿದ್ದಾರೆ. ಕರಗ ಮಂಡಿಯೂರಿ ದೇವಾಲಯದಿಂದ ಹೊರ ಬಂದಿದ್ದು, ನಂತರ ಸಂತೆಮಾಳ ಸಮೀಪ ಕೆಂಡದ ಮೇಲೆ ಕರಗ ಹೊತ್ತ ರಮೇಶ್ ನರ್ತನ ಮಾಡಿ, ಬಳಿಕ ವೀರ ವಸಂತನ ಶಿರಶ್ಛೇಧನ ಮುಗಿಸಿ ಆನೇಕಲ್ ಪಟ್ಟಣದ ತಿಲಕ್ ವೃತ್ತ, ಉಳಿ ತಿಗಳರ ಬೀದಿ, ಅಂಬೇಡ್ಕರ್ ಕಾಲೋನಿ, ಕೆಇಬಿ ಕಚೇರಿ, ತಾಲೂಕು ಕಚೇರಿ ರಸ್ತೆ ಮಾರ್ಗವಾಗಿ ಮರಳಿ ದೇವಾಲಯದ ಬಳಿ ಬಂದು ಅಲ್ಲಿ ಕರಗ ನರ್ತನ ನಡೆಯಿತು. ಕರಗ ಸಾಗುತ್ತಿದ್ದ ದಾರಿಯುದ್ದಕ್ಕೂ ಸಾವಿರಾರು ಮಂದಿ ಭಕ್ತಾದಿಗಳು ಕರಗವನ್ನು ನೋಡಿ ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಯುಎಸ್-ಚೀನಾ ಟಾರಿಫ್ ವಾರ್ ಮತ್ತಷ್ಟು ಜೋರು – ಚೀನಾ ಉತ್ಪನ್ನಗಳಿಗೆ 245% ಸುಂಕ ವಿಧಿಸಿದ ಅಮೆರಿಕ

    ರಾಜ ಬೀದಿಗಳಲ್ಲಿ ಸಂಚಾರ ಮಾಡಿದ ದ್ರೌಪತಮ್ಮ ದೇವಿ ಕರಗ ಮುಂಜಾನೆ 5:56 ಗಂಟೆಗೆ ಮರಳಿ ಮಂಡಿಯೂರಿ ನರ್ತನ ಮಾಡುತ್ತಾ ದೇವಾಲಯದ ಒಳಗೆ ತಲುಪಿದೆ. ಸಾಕಷ್ಟು ವಿವಾದಗಳಿಂದ ಕೂಡಿದ್ದ ಕರಗಕ್ಕೆ ಈ ಬಾರಿ ಹೈಕೋರ್ಟ್ ತೆರೆ ಎಳೆದಿದ್ದು, ಮುಂದಿನ ಬಾರಿ ಇನ್ನಷ್ಟು ವಿಜೃಂಭಣೆಯಿಂದ ಕರಗ ಮಹೋತ್ಸವ ನಡೆಯುವ ನಿರೀಕ್ಷೆ ಇದೆ. ಕರಗ ಸಾಗುವ ರಸ್ತೆಯುದ್ದಕ್ಕೂ ಹೂವಿನ ಅಲಂಕಾರ ಮಾಡಲಾಗಿತ್ತು. ಇದನ್ನೂ ಓದಿ: ಭಾರತದ ಮೊದಲ ಆನ್-ಬೋರ್ಡ್ ಎಟಿಎಂ ಪ್ರಯೋಗ ಯಶಸ್ವಿ – ಇನ್ಮುಂದೆ ರೈಲಿನಲ್ಲೂ ಇರಲಿದೆ ಎಟಿಎಂ!

  • 30 ಅಡಿ ಆಳದ ಬಾವಿಗೆ ಬಿದ್ದ ಎರಡು ಕಾಡಾನೆ – ರಾತ್ರಿ ಇಡೀ ಕಾರ್ಯಾಚರಣೆ ನಡೆಸಿ ರಕ್ಷಣೆ

    30 ಅಡಿ ಆಳದ ಬಾವಿಗೆ ಬಿದ್ದ ಎರಡು ಕಾಡಾನೆ – ರಾತ್ರಿ ಇಡೀ ಕಾರ್ಯಾಚರಣೆ ನಡೆಸಿ ರಕ್ಷಣೆ

    ಆನೇಕಲ್: 30 ಅಡಿ ಆಳದ ಬಾವಿಗೆ ಬಿದ್ದು ನರಳಾಡುತ್ತಿದ್ದ ಎರಡು ಕಾಡಾನೆಗಳನ್ನು ರಾತ್ರಿ ಇಡೀ ಕಾರ್ಯಾಚರಣೆ ನಡೆಸಿ ತಮಿಳುನಾಡು ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

    ತಮಿಳುನಾಡಿನ ಕುಂಡಲಂ ಗ್ರಾಮದ ಬಳಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಜವಳಗೆರೆ ಕಾಡಿನಿಂದ ಆಹಾರ ಹರಿಸಿ ರೈತರ ಜಮೀನುಗಳಿಗೆ ನುಗ್ಗಿದ್ದವು. ಸಂಜೆಯಾದರೂ ಕಾಡಿನತ್ತ ಮುಖ ಮಾಡದೇ ಅಲ್ಲಿಯೇ ಉಳಿದಿದ್ದ ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ರೈತರು ಪಟಾಕಿ ಸಿಡಿಸಿದ್ದರಿಂದ ರೈತರ ತೋಟಗಳಿಗೆ ನುಗ್ಗಿದ್ದವು. ಈ ವೇಳೆ ಆಯಾತಪ್ಪಿ ಮರಿ ಆನೆ ಹಾಗೂ ಸಲಗ 30 ಅಡಿ ಆಳದ ಬಾವಿಗೆ ಬಿದ್ದಿದ್ದವು.ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಧೂಳಿನ ಬಿರುಗಾಳಿ – ಧರೆಗುರುಳಿದ ಮರಗಳು, 15 ವಿಮಾನಗಳ ಮಾರ್ಗ ಬದಲಾವಣೆ

    ಉಳಿದ ಕಾಡಾನೆಗಳು ಕಾಡಿನತ್ತ ಹೊರಟು ಹೋದರೆ ಮರಿ ಆನೆಗಾಗಿ ಬಾವಿ ಬಳಿಯೇ ತಾಯಿ ಆನೆ ರೋಧಿಸುತ್ತಾ ನಿಂತ್ತಿತ್ತು. ಕಾಡಾನೆಯ ರೋಧನೆಯನ್ನು ಕೇಳಿದ ಅರಣ್ಯ ಇಲಾಖೆ ಸಿಬ್ಬಂದಿ ಬಾವಿ ಬಳಿ ತೆರಳಿದ್ದು, ಬಾವಿಯಿಂದ ಹೊರಬರಲು ಹರಸಾಹಸಪಡುತ್ತಿರುವುದನ್ನು ಗಮನಿಸಿದ್ದಾರೆ.

    ಕೂಡಲೇ ಎರಡು ಜೆಸಿಬಿಗಳ ಮೂಲಕ ತಡರಾತ್ರಿಯವರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ತಾಯಿ ಆನೆಯ ಅಡಚಣೆ ನಡುವೆಯೂ ದಾರಿ ಮಾಡಿ ಬಾವಿಯಿಂದ ಸಲಗ ಮತ್ತು ಮರಿ ಆನೆಗೆ ಹೊರಬರಲು ವ್ಯವಸ್ಥೆ ಮಾಡಿದ್ದಾರೆ. ಸಲಗದ ಜೊತೆ ಮರಿ ಆನೆ ಹೊರಬರುತ್ತಿದ್ದಂತೆ ತಾಯಿ ಆನೆ ಮರಿಯನ್ನು ಕಾಡಿನತ್ತ ಕರೆದೊಯ್ದಿದ್ದು, ಅರಣ್ಯ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ.ಇದನ್ನೂ ಓದಿ: ರಾಜ್ಯದ ಹಲವೆಡೆ ವರುಣಾರ್ಭಟ; ಸಿಡಿಲಿಗೆ ಮೂವರು ಬಲಿ

  • ದುಡ್ಡಿಲ್ಲ ಎಂದಿದ್ದಕ್ಕೆ ಕೆನ್ನೆಗೆ ಬಾರಿಸಿದ್ದ ನೇಪಾಳಿ ಮಂಜ – ಇದೇ ಸಿಟ್ಟಿಗೆ ನಡೆದಿತ್ತು ಮರ್ಡರ್!

    ದುಡ್ಡಿಲ್ಲ ಎಂದಿದ್ದಕ್ಕೆ ಕೆನ್ನೆಗೆ ಬಾರಿಸಿದ್ದ ನೇಪಾಳಿ ಮಂಜ – ಇದೇ ಸಿಟ್ಟಿಗೆ ನಡೆದಿತ್ತು ಮರ್ಡರ್!

    ಯುಗಾದಿ ದಿನವೇ ಕೊಲೆ – ಹಂತಕರು ಅರೆಸ್ಟ್

    ಆನೇಕಲ್: ರೌಡಿಶೀಟರ್ ನೇಪಾಳಿ ಮಂಜನನ್ನು (Nepali Manja) ಹತ್ಯೆ ಮಾಡಿದ್ದ ಆರೋಪಿಗಳನ್ನು ಹೆಬ್ಬಗೋಡಿ ಪೊಲೀಸರು (Police) ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಜಗದೀಶ್, ಮಹೇಶ್, ದಿನೇಶ್, ನಂದನ್, ಮಂಜುನಾಥ್, ರವಿ ಮತ್ತು ಬುಲೆಟ್ ಬಾಬು ಎಂದು ಗುರುತಿಸಲಾಗಿದೆ. ಬೆಂಗಳೂರು ಹೊರವಲಯದ ಆನೇಕಲ್ (Anekal) ತಾಲೂಕಿನ ಹೆಬ್ಬಗೋಡಿ ಬಳಿ ಮಾ.31 ರಂದು ಯುಗಾದಿ ಹಬ್ಬದ ದಿನವೇ ಆರೋಪಿಗಳು ನೇಪಾಳಿ ಮಂಜನನ್ನು ಹತ್ಯೆ ಮಾಡಿದ್ದರು. ಇನ್ನೂ ನೇಪಾಳಿ ಮಂಜ ಆರೋಪಿಗಳ ಅಣ್ಣನಾದ ಮಹೇಶನ ಕೆನ್ನೆಗೆ ಹೊಡೆದಿದ್ದಕ್ಕೆ ಕೊಲೆ ಮಾಡಿದ್ದಾರೆ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಇದನ್ನೂ ಓದಿ: ಯುಗಾದಿಯಂದೇ ರೌಡಿಶೀಟರ್ ಬರ್ಬರ ಹತ್ಯೆ – ರೌಡಿಸಂ ಬಿಟ್ಟು ಊರು ಸೇರಿದ್ದ ನೇಪಾಳಿ ಮಂಜ!

    ಹತ್ಯೆಗೀಡಾದ ಮಂಜ ಇಸ್ಪೀಟ್ ಆಡಲು ಮಹೇಶ್ ಬಳಿ 5,000 ರೂ. ಹಣ ಕೇಳಿದ್ದ. ನನ್ನ ಬಳಿ ಹಣ ಇಲ್ಲ ಎಂದು ಆತ ಹೇಳಿದ್ದಕ್ಕೆ ಮಂಜ ಕೆನ್ನೆಗೆ ಹೊಡೆದಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಹಲ್ಲೆಯ ವಿಚಾರ ತಿಳಿದು ಜಗ್ಗ ಸಿಟ್ಟಿಗೆದ್ದು, ನೇಪಾಳಿ ಮಂಜನನ್ನು ಮುಗಿಸಲು ಸಂಚು ರೂಪಿಸಿದ್ದ. ಪ್ಲ್ಯಾನ್‍ನಂತೆ ಆತ ಎಣ್ಣೆ ಪಾರ್ಟಿ ಮಾಡುವ ಸ್ಥಳಕ್ಕೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು, ಪರಾರಿಯಾಗಿದ್ದರು.

    ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳಿಸಿದ್ದಾರೆ. ಇದನ್ನೂ ಓದಿ: ಇನ್‌ಸ್ಟಾ ಲವ್ | ಎರಡನೇ ಮದುವೆಯಾದ ಪತ್ನಿ – ವಿಡಿಯೋ ನೋಡಿ ಮೊದಲ ಪತಿ ಶಾಕ್

  • ಜಿಗಣಿಯಲ್ಲಿ ಆಪರೇಷನ್ ಚಿರತೆ ಕೊನೆಗೂ ಸಕ್ಸಸ್ – 6 ಗಂಟೆ ಕಾರ್ಯಾಚರಣೆ ಬಳಿಕ ಸೆರೆ

    ಜಿಗಣಿಯಲ್ಲಿ ಆಪರೇಷನ್ ಚಿರತೆ ಕೊನೆಗೂ ಸಕ್ಸಸ್ – 6 ಗಂಟೆ ಕಾರ್ಯಾಚರಣೆ ಬಳಿಕ ಸೆರೆ

    – ಮನೆಗೆ ನುಗ್ಗಿದ ಚಿರತೆಯನ್ನ ಲಾಕ್‌ ಮಾಡಿದ್ದ ದಂಪತಿ
    – ಇಡೀ ಗ್ರಾಮವನ್ನೇ ಬೆಚ್ಚಿ ಬೀಳಿಸಿದ್ದ ಚಿರತೆ

    ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಜಿಗಣಿ (Jigani) ಗ್ರಾಮದಲ್ಲಿ ಇಡೀ ಗ್ರಾಮವನ್ನೇ ಬೆಚ್ಚಿಬೀಳಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು (Forest Department Officials )ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

    ಇದಕ್ಕೂ ಮುನ್ನ ಚಿರತೆ (Leopard) ಮನೆಯ ಒಳಕ್ಕೆ ಬಂದಾಗ ಮನೆಯಲ್ಲೇ ಕೂತಿದ್ದ ವೆಂಕಟೇಶ ಮತ್ತು ವೆಂಕಟ ಲಕ್ಷ್ಮಿ ದಂಪತಿಯ ಸಮಯ ಪ್ರಜ್ಞೆ ದೊಡ್ಡ ಅನಾಹತುವನ್ನ ತಡೆದಿದೆ. ಚಿರತೆ ಮನೆಗೆ ಹೊಕ್ಕುತ್ತಿದ್ದಂತೆ ಭಯಭೀತಿಯಿಂದ ಮನೆಯಿಂದ ಹೊರ ಬಂದು ಬಾಗಿಲು ಲಾಕ್ ಮಾಡಿ ಚಿರತೆಯನ್ನ ಕೂಡಿಹಾಕಿದ್ದಾರೆ. ಸತತ 6 ಗಂಟೆಗಳ ಕಾಲ ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಚರಣೆ ಬಳಿಕ ಚಿರತೆಯನ್ನ ಸೆರೆಹಿಡಿದು ಅರಣ್ಯಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ಕುಟುಂಬ ರಾಜ್ಯಾಧ್ಯಕ್ಷ ಸ್ಥಾನದಿಂದ ಮುಕ್ತಿ ಆಗೋವರೆಗೂ ನಾನು ಬಿಜೆಪಿಗೆ ವಾಪಸ್ ಆಗಲ್ಲ – ಯತ್ನಾಳ್ ಶಪಥ

    ಏನಾಗಿತ್ತು?
    ಇಡೀ ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಜಿಗಣಿ ಗ್ರಾಮಸ್ಥ ವೆಂಕಟೇಶ್ ಎಂಬವರ ಮನೆಗೆ ನುಗ್ಗಿತ್ತು. ದಂಪತಿ ಚಿರತೆಯನ್ನ ಮೆನಯೊಳಗೆ ಕೂಡಿಹಾಕಿದ್ದಾರೆ. ಇದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಬಳಿಕ ಅರಣ್ಯಾಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ. ಅಷ್ಟರಲ್ಲಾಗಲೇ ಸಾವಿರಾರು ಸಂಖ್ಯೆಯಲ್ಲಿ ಜನ ನೆರೆದಿದ್ದರು. ಚಿರತೆ ಸೆರೆ ಹಿಡಿಯುವ ಅರಣ್ಯ ಇಲಾಖೆ ಕಾರ್ಯಾಚರಣೆಯನ್ನು ತಮ್ಮ ಮೊಬೈಲ್‌ಗಳಲ್ಲಿ ಸೆರೆ ಹಿಡಿಯುತ್ತಿದ್ದರು. ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಬೋನ್ ಮತ್ತು ಬಲೆಗಳ ಸಿದ್ಧತೆ ಮಾಡಿಕೊಂಡ ಅರಣ್ಯ ಇಲಾಖೆ ಸಿಬ್ಬಂದಿ, ಬಳಿಕ ಅರಿವಳಿಕೆ ತಜ್ಞರಿಂದ ಮದ್ದು ಕೊಡಿಸಿ ಚಿರತೆಯನ್ನು ಸೆರೆ ಹಿಡಿಯಲಾಯಿತು.  ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ಚುರುಕುಗೊಂಡ ಚಂಡಮಾರುತ – ಒಂದು ವಾರ ರಾಜ್ಯದಲ್ಲಿ ಗಾಳಿ ಸಹಿತ ಮಳೆ

    ಈ ಕುರಿತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಣೇಶ್ ಮಾತನಾಡಿ, ಜಿಗಣಿಯ ಮನೆಯಲ್ಲಿ ಚಿರತೆ ಸೇರಿಕೊಂಡಿದೆ ಎನ್ನುವ ಮಾಹಿತಿ ಬೆಳಗ್ಗೆ ಬಂತು. ಚಿರತೆ ಕಾರ್ಯಪಡೆ ತಂಡಕ್ಕೆ ಮಾಹಿತಿ ರವಾನೆ ಆಯ್ತು. ಕೂಡಲೇ ಸ್ಥಳಕ್ಕೆ ಹೋಗಿ ಚಿರತೆ ಕಾರ್ಯಾಚರಣೆ ನಡೆಸಲಾಗಿದೆ. ಒಂದೂವರೆ ಕಿಲೋಮೀಟರ್ ಜನವಸತಿ ಪ್ರದೇಶದಿಂದ ಚಿರತೆ ಬಂದಿದೆ. ಮನೆಯಲ್ಲಿ ಜನರು ಇರುವಾಗ್ಲೇ ಹೋಗಿ ಅವಿತುಕೊಂಡಿರೋದು ಆಶ್ಚರ್ಯಕರ. ಜನನಿಬಿಡ ಪ್ರದೇಶದಲ್ಲಿ ಚಿರತೆ ಬರೋದು ನಿಜಕ್ಕೂ ಆಶ್ಚರ್ಯ. ಇದೊಂದು ಅರಣ್ಯ ಇಲಾಖೆಗೆ ಬಿಗ್ ಟಾಸ್ಕ್ ಆಗಿತ್ತು. ಚಿರತೆ ಮನೆಯೊಳಗೆ ಹೋದ ಕೂಡಲೇ ಸಮಯಪ್ರಜ್ಞೆಯಿಂದ ಬಾಗಿಲು ಹಾಕಿದ್ದಾರೆ. ಮನೆಯಲ್ಲಿದ್ದವರ ಸಮಯ ಪ್ರಜ್ಞೆ ಮೆಚ್ಚಬೇಕಿದೆ. ಕಿರಿದಾದ ರೂಮಿನೊಳಗೆ ಮೊಬೈಲ್ ಕ್ಯಾಮರಾ ಬಳಸಿ ಚಿರತೆ ಇರೋದು ಪತ್ತೆಹಚ್ಚಲಾಯಿತು ಎಂದು ತಿಳಿಸಿದ್ದಾರೆ.

    ಬಳಿಕ ಡಾ.ಕಿರಣ್ ನೇತೃತ್ವದಲ್ಲಿ ಚಿರತೆಗೆ ಅರವಳಿಕೆ ನೀಡಲಾಯಿತು. ಒಂದು ಅರವಳಿಕೆ ಡಾಟ್ ಮಾಡಿದಾಗ ಅದು ಮೈಮೇಲೆ ಚಿರತೆ ಎರಗಲು ಬಂತು. ಮತ್ತೆ ಡೋಸ್ ಹೆಚ್ಚಳ ಮಾಡಿ ಮತ್ತೊಂದು ಅರವಳಿಕೆ ನೀಡಲಾಯಿತು. ಒಟ್ಟು ಎರಡು ಅರವಳಿಕೆ ಇಂಜೆಕ್ಷನ್ ಡಾಟ್ ಮಾಡಲಾಗಿದೆ. ಪ್ರಜ್ಞೆ ತಪ್ಪಿದ ನಂತರ ಅದರ ಆರೋಗ್ಯ ಪರಿಶೀಲನೆ ಮಾಡಲಾಗಿದೆ. ಆರೇಳು ವರ್ಷದ ಹೆಣ್ಣು ಚಿರತೆ ಇದಾಗಿದೆ. ಆ ಚಿರತೆಯನ್ನ ಕೇಜ್ ಮುಖಾಂತರ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಶಿಫ್ಟ್ ಮಾಡಲಾಯಿತು. ಅಲ್ಲಿ ಮತ್ತೆ ಅದರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.