Tag: Anganwadi Center

  • ಪ್ರತಿಷ್ಠೆಗಾಗಿ ಅಂಗನವಾಡಿ ಕೇಂದ್ರಕ್ಕೆ ಬೀಗ- ಪುಟಾಣಿಗಳು ಕಂಗಾಲು

    ಪ್ರತಿಷ್ಠೆಗಾಗಿ ಅಂಗನವಾಡಿ ಕೇಂದ್ರಕ್ಕೆ ಬೀಗ- ಪುಟಾಣಿಗಳು ಕಂಗಾಲು

    ನೆಲಮಂಗಲ: ರಿಯಲ್ ಎಸ್ಟೇಟ್ ಮಾಫಿಯಾದ ವ್ಯಕ್ತಿಯೊಬ್ಬರು ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿರುವುದರಿಂದ ಪುಟಾಣಿಗಳು ಕಂಗಾಲಾಗಿರುವ ಘಟನೆ ನೆಲಮಂಗಲ ಶಾಸಕ ಡಾ.ಕೆ. ಶ್ರೀನಿವಾಸಮೂರ್ತಿ ಹುಟ್ಟೂರಿನಲ್ಲಿ ನಡೆದಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಓಬಳಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ ನಾಲ್ಕೈದು ದಿನಗಳಿಂದ ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿದ್ದು, 30 ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಿದೆ. ಶಾಸಕರ ಬೆಂಬಲಿಗ ವ್ಯಕ್ತಿಯಿಂದ ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿರುವ ಆರೋಪ ಕೇಳಿಬರುತ್ತಿದೆ. ಇದಕ್ಕೆ ಶಾಸಕರ ಕುಮ್ಮಕ್ಕು ಇದೆ ಎಂಬ ಗಂಭೀರವಾದ ಆರೋಪವನ್ನು ಸಾರ್ವಜನಿಕರು ಮಾಡುತ್ತಿದ್ದಾರೆ.

    ಅಂಗನವಾಡಿ ಕೇಂದ್ರದ ಜಾಗ ವಿವಾದ ಎಂದು ಬೀಗ ಹಾಕಲಾಗಿದೆ. ಎಲ್ಲಾ ದಾಖಲೆಗಳು ಸರಿಯಿದ್ದರು ಅಂಗನವಾಡಿ ಕೇಂದ್ರವನ್ನು ತೆರೆಯಲು ಅಧಿಕಾರಿಗಳ ಮೀನಾಮೇಷ ಮಾಡುತ್ತಿದ್ದಾರೆ. ಅಧಿಕಾರಿಗಳು ಶಾಸಕರ ಒತ್ತಡಕ್ಕೆ ಮಣಿದಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ರಾಮಸ್ಥರು ದೂರು ನೀಡಿದರು, ಯಾವುದೇ ಪ್ರಯೋಜನವಾಗಿಲ್ಲ ಎಂದು ನೆಲಮಂಗಲ ಮಹಿಳಾ ಮತ್ತು ಮಕ್ಕಳ ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಾರ್ಚ್ 25ಕ್ಕೆ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ- ಪ್ರಧಾನಿ ಭಾಗಿ

    ನೆಲಮಂಗಲ ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧಿಕಾರಿಗಳ ನಡೆಯಿಂದ ಸಾಕಷ್ಟು ಅನುಮಾನ ವ್ಯಕ್ತವಾಗುತ್ತಿದೆ. ಘಟನೆ ಬಗ್ಗೆ ಮಾಹಿತಿ ಇದ್ದರೂ, ಮಕ್ಕಳ ಶಾಲೆ ತೆರೆಯಲು ಮೀನಾಮೇಷ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡ್ತೀವಿ: ಗುಲಾಂ ನಬಿ ಅಜಾದ್

  • ಕಲಿಕೆಯ ಮೆಟ್ಟಿಲಾಗಿರುವ ಅಂಗನವಾಡಿ ಕೇಂದ್ರವನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಬೇಕು: ಜೊಲ್ಲೆ

    ಕಲಿಕೆಯ ಮೆಟ್ಟಿಲಾಗಿರುವ ಅಂಗನವಾಡಿ ಕೇಂದ್ರವನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಬೇಕು: ಜೊಲ್ಲೆ

    ಚಿಕ್ಕೋಡಿ: ಮಕ್ಕಳ ಮೊದಲ ಕಲಿಕೆಯ ಮೆಟ್ಟಿಲಾಗಿರುವ ಅಂಗನವಾಡಿ ಕೇಂದ್ರವನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಿ, ಮೂಲಸೌಕರ್ಯಗಳ ವ್ಯವಸ್ಥೆ ಮಾಡಿ, ಅನುಕೂಲ ಕಲ್ಪಿಸಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

    ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮತಕ್ಷೇತ್ರದ ಲಖನಾಪುರ ಗ್ರಾಮದಲ್ಲಿ, ನಬಾರ್ಡ್ ಆರ್‍ಐಡಿಎಫ್-25 ಯೋಜನೆಯಡಿ 17 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ರಾಮದ ಪುಟಾಣಿಗಳ ಏಳಿಗೆಗಾಗಿ ಈ ಕೇಂದ್ರ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ:  ಮಹಾರಾಷ್ಟ್ರದ ಮಾಂತ್ರಿಕನಿಂದ ಕೃಷ್ಣಾ ಕಿತ್ತೂರಿನಲ್ಲಿ ವಾಮಾಚಾರ..! 

    ಅಷ್ಟೆ ಅಲ್ಲದೇ ಕ್ಷೇತ್ರದ ಅಂಗನವಾಡಿ ಕೇಂದ್ರಗಳ ಸವಾರ್ಂಗೀಣ ಅಭಿವೃದ್ದಿಗೆ ಶ್ರಮಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಇದನ್ನೂ ಓದಿ:  ಗಣಪತಿಯ ಕುತ್ತಿಗೆಗೆ ಸುತ್ತಿಕೊಂಡ ನಾಗರ

  • ಮಗನನ್ನು ಅಂಗನವಾಡಿಗೆ ಸೇರಿಸುವ ಮೂಲಕ ಮಾದರಿಯಾದ ಜಿಲ್ಲಾಧಿಕಾರಿ

    ಮಗನನ್ನು ಅಂಗನವಾಡಿಗೆ ಸೇರಿಸುವ ಮೂಲಕ ಮಾದರಿಯಾದ ಜಿಲ್ಲಾಧಿಕಾರಿ

    ಡೆಹ್ರಾಡೂನ್: ಉತ್ತರಾಖಂಡ್ ನ ಚಮೋಲಿ ಜಿಲ್ಲೆಯ ಜಿಲ್ಲಾಧಿಕಾರಿ ಸ್ವಾತಿ ಭಡೌರಿಯಾ ತನ್ನ ಮಗನನ್ನು ಗೋಪೇಶ್ವರ್ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಸೇರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

    ಚಮೋಲಿ ಜಿಲ್ಲೆಯ ಜಿಲ್ಲಾಧಿಕಾರಿ ಸ್ವಾತಿ ಭಡೌರಿಯಾರವರು ತಮ್ಮ ಎರಡೂವರೆ ವರ್ಷದ ಮಗ ಅಭ್ಯುದಯ್ ನನ್ನು ಅಂಗನವಾಡಿ ಶಾಲೆಗೆ ದಾಖಲಿಸಿದ್ದಾರೆ. ಅಲ್ಲದೇ ಉನ್ನತ ಹುದ್ದೆಯಲ್ಲಿಯರುವವರು, ತಮ್ಮ ಮಕ್ಕಳನ್ನು ಎಂದಿಗೂ ಹೈ-ಫೈ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ ಸಂಗತಿ. ಆದರೆ ಚಮೋಲಿ ಜಿಲ್ಲೆಯ ಜಿಲ್ಲಾಧಿಕಾರಿ ಅದಕ್ಕೆ ಅಪವಾದವೆಂಬಂತೆ ನಡೆದುಕೊಂಡಿದ್ದಾರೆ. ಖುದ್ದು ತನ್ನ ಮಗನನ್ನು ಸರ್ಕಾರಿ ಅಂಗನಾಡಿ ಕೇಂದ್ರಕ್ಕೆ ದಾಖಲಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸರ್ಕಾರ ನಡೆಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಅಲ್ಲದೇ ಮಕ್ಕಳ ವಿದ್ಯಾಭ್ಯಾಸವನ್ನು ಸರಿಯಾಗಿ ಕೊಡುತ್ತಿಲ್ಲ ಎನ್ನುವ ಆರೋಪವನ್ನು ತೆಗೆದು ಹಾಕಲು ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಶಿಕ್ಷಣ, ಆಟ ಹಾಗೂ ಊಟ-ಉಪಚಾರಗಳು ಒಂದೇ ರೀತಿ ಇರುತ್ತದೆ. ಅಂಗನವಾಡಿಗಳ ಕುರಿತು ತಪ್ಪು ಕಲ್ಪನೆ ಬೆಳೆಸಿಕೊಳ್ಳುವುದು ಸರಿಯಲ್ಲ ಎಂದರು.

    ಅಂಗನವಾಡಿ ಕೇಂದ್ರದಲ್ಲಿ ತಮ್ಮ ಮಗ ಇತರರೊಂದಿಗೆ ಹಂಚಿ ತಿನ್ನುವ ಅಭ್ಯಾಸವನ್ನು ಬೆಳೆಸಿಕೊಳ್ಳುತ್ತಿದ್ದಾನೆ. ಇತರ ಮಕ್ಕಳ ಜೊತೆ ತುಂಬಾ ಚೆನ್ನಾಗಿ ಆಟವಾಡುತ್ತಿದ್ದಾನೆ. ಈ ಕೇಂದ್ರಗಳಲ್ಲಿ ಮಕ್ಕಳು ಬೌದ್ಧಿಕವಾಗಿ ಹೆಚ್ಚು ಕಲಿಯುತ್ತಾರೆ. ಎಲ್ಲರೊಂದಿಗೆ ಬೆರೆಯುತ್ತಾರೆ. ದೈಹಿಕ ಮತ್ತು ಮಾನಸಿಕವಾಗಿಯೂ ಸದೃಢರಾಗುತ್ತಾರೆ. ಅಂಗನವಾಡಿ ಕೇಂದ್ರಗಳನ್ನು ನೋಡುವ ರೀತಿ ಬದಲಾಗಬೇಕು ಎಂದು ಹೇಳಿದ್ದಾರೆ.

    ಸ್ವಾತಿ ಭಡೌರಿಯಾರ ಪತಿ ಕೂಡ ಐಎಎಸ್ ಅಧಿಕಾರಿಯಾಗಿದ್ದು, ಅವರು ಸಹ ಉತ್ತರಾಖಂಡ್‍ನ ಅಲ್ಮೋರಾ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳ ಮೇಲಿರುವ ಅಪನಂಬಿಕೆಯನ್ನು ಜನರಿಂದ ಹೋಗಲಾಡಿಸಬೇಕು. ಹೀಗಾಗಿ ಮಗನನ್ನು ಅಂಗನವಾಡಿಗೆ ಸೇರಿಸಿದ್ದೇವೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಗು ಮೂತ್ರ ಮಾಡಿದ್ದಕ್ಕೆ ಕಾಲಿಗೆ ಬರೆ ಎಳೆದ ಅಂಗನವಾಡಿ ಸಹಾಯಕಿ!

    ಮಗು ಮೂತ್ರ ಮಾಡಿದ್ದಕ್ಕೆ ಕಾಲಿಗೆ ಬರೆ ಎಳೆದ ಅಂಗನವಾಡಿ ಸಹಾಯಕಿ!

    ಮೈಸೂರು: ಅಂಗನವಾಡಿಯಲ್ಲಿ ಮಗು ಮೂತ್ರ ಮಾಡಿದ್ದರಿಂದ ಸಿಟ್ಟುಗೊಂಡ ಸಹಾಯಕಿಯೊಬ್ಬರು ಬರೆ ಹಾಕಿರುವ ಅಮಾನವೀಯ ಘಟನೆ ನಗರದ ದೇವಯ್ಯನ ಹುಂಡಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ನಗರದ ದೇವಯ್ಯನ ಹುಂಡಿಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಅಂಗನವಾಡಿಯಲ್ಲಿ ಪುಟ್ಟ ಮಗುವೊಂದು ಮೂತ್ರ ಮಾಡಿತ್ತು. ಕೋಪಗೊಂಡ ಆಯಾ ನೀಲಮ್ಮ ಗ್ಯಾಸ್ ಸ್ಟೌವ್‍ನಲ್ಲಿ ಚಾಕು ಕಾಯಿಸಿ ಮಗುವಿನ ಕಾಲಿಗೆ ಬರೆ ಹಾಕಿದ್ದಾಳೆ. ಇದನ್ನೂ ಓದಿ: ಅಮ್ಮ ಬೇಕು ಅಂತ ಹಠಹಿಡಿದಿದ್ದ 4ರ ಕಂದಮ್ಮನ ಬೆನ್ನಿಗೆ ಬರೆ ಎಳೆದ ಶಿಕ್ಷಕ, ಆಯಾ!

    ವಿಷಯ ತಿಳಿಯುತ್ತಿದ್ದಂತೆಯೇ ಅಂಗನವಾಡಿ ಕೇಂದ್ರಕ್ಕೆ ಆಗಮಿಸಿದ ಪೋಷಕರು ಆಯಾ ನೀಲಮ್ಮರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಆಯಾ ಮಕ್ಕಳ ಮೇಲೆ ಯಾವಾಗಲೂ ಇದೇ ರೀತಿ ದೌರ್ಜನ್ಯ ನಡೆಸುತ್ತಾಳೆ ಎಂದು ಆರೋಪಿಸಿರುವ ಗ್ರಾಮಸ್ಥರು, ಕೂಡಲೇ ಆಯಾರನ್ನು ಅಮಾನತು ಮಾಡುವಂತೆ ಅಂಗನವಾಡಿ ಬಳಿ ಪ್ರತಿಭಟನೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv