Tag: anganwadi worker

  • ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ, ಕಸಿದುಕೊಂಡ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಸಸ್ಪೆಂಡ್‌

    ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ, ಕಸಿದುಕೊಂಡ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಸಸ್ಪೆಂಡ್‌

    ಕೊಪ್ಪಳ: ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಅನ್ನೋ ಕಾರಣಕ್ಕೆ ಸರ್ಕಾರ ಅಂಗನವಾಡಿ ಮಕ್ಕಳಿಗೆ (Anganwadi childrens) ನಿತ್ಯ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದ್ರೆ ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ (Egg) ವಂಚನೆ ಎಸಗಿರುವ ಆರೋಪ ಕೊಪ್ಪಳ (Koppal) ಜಿಲ್ಲೆಯಲ್ಲಿ ಕೇಳಿಬಂದಿದೆ.

    ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯನ್ನು ವಾಪಸ್‌ ಕಸಿದುಕೊಂಡು ವಂಚನೆ ಎಸಗುತ್ತಿದ್ದ ಆರೋಪದ ಮೇಲೆ ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮಿ, ಸಹಾಯಕಿ ಶೈನಜಾಬೇಗಂ ಅವರನ್ನ ಅಮಾನತು ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಘಟನೆ ನಡೆದಿದ್ದು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಇಬ್ಬರನ್ನೂ ಅಮಾನತುಗೊಳಿಸಿ ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಶೀಘ್ರವೇ ಭಾರತದ ದೊಡ್ಡ ಸುದ್ದಿ: ಬ್ರೇಕಿಂಗ್‌ ನ್ಯೂಸ್‌ ಕೊಟ್ಟ ಹಿಂಡನ್‌ಬರ್ಗ್‌

    ವಿಡಿಯೋ ವೈರಲ್‌:
    ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ವಿತರಿಸುವ ಮೊಟ್ಟೆಯಲ್ಲಿ ಗೋಲ್ಮಾಲ್ ನಡೆದಿದೆ. ಕಾರ್ಯಕರ್ತೆಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಲೆತಗ್ಗಿಸುವಂತ ಕೆಲಸ ಮಾಡಿದ್ದಾರೆ. ಮಕ್ಕಳಿಗೆ ಮೊಟ್ಟೆ ಕೊಟ್ಟು ಫೋಟೋ ಕ್ಲಿಕ್ಕಿಸಿ, ಮಕ್ಕಳು ಬಾಯಿಗಿಡುವ ಮುನ್ನವೇ ಮೊಟ್ಟೆ ಕಸಿದುಕೊಂಡಿದ್ದಾರೆ. ಈ ಅಮಾನವೀಯ ಘಟನೆ ವೀಡಿಯೋದಲ್ಲಿ ಸೆರೆಯಾಗಿದೆ. ಈ ಕೃತ್ಯದ ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾರ್ಯಕರ್ತೆ, ಸಹಾಯಕಿಯನ್ನು ಅಮಾನತು ಮಾಡಲಾಗಿದೆ. ಇನ್ನು ಸ್ಥಳೀಯರು ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದ ವೀಡಿಯೋಗಾಗಿ ಮುಂದೆ ನೋಡಿ… ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬಕ್ಕೆ ʻಗೃಹಲಕ್ಷ್ಮಿʼಯರಿಗೆ ಕೊಂಚ ನಿರಾಸೆ – ಎರಡ್ಮೂರು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ದುಡ್ಡು!

  • ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಮಾಲೀಕ

    ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಮಾಲೀಕ

    ಬೆಳಗಾವಿ: ಮಕ್ಕಳು ಹೂ ಕಿತ್ತಿದ್ದಕ್ಕೆ ಗಾರ್ಡನ್‌ನ ಮಾಲೀಕ, ಅಂಗನವಾಡಿ ಸಹಾಯಕಿಯ ಮೂಗನ್ನೇ ಕತ್ತರಿಸಿರುವ ಅಮಾನವೀಯ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸ್ವಕ್ಷೇತ್ರದಲ್ಲೇ ಈ ಘಟನೆ ನಡೆದಿದೆ. ಸುಗಂಧಾ ಮೋರೆ ಸಂತ್ರಸ್ತ ಮಹಿಳೆ. ಕಲ್ಯಾಣಿ ಮೋರೆ ಹಲ್ಲೆ ನಡೆಸಿದ ಆರೋಪಿ. ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ ಮಾಡಿ ಕತ್ತು ಹಿಸುಕಿ ಹತ್ಯೆ ಮಾಡಿದ ಪೊಲೀಸ್ ಪೇದೆ

    ಸುಗಂಧಾ ಮೋರೆ ಅವರು ಬಾಸುರ್ತಿ ಗ್ರಾಮದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಮೂರು ದಿನದ ಹಿಂದೆ ಇವರ ಮೇಲೆ ಹಲ್ಲೆ ನಡೆಸಲಾಗಿದೆ. ಮಕ್ಕಳು ಶಾಲೆಯ ಆವರಣದ ಪಕ್ಕದಲ್ಲಿರುವ ಗಾರ್ಡನ್‌ನಲ್ಲಿರುವ ಹೂ ಕಿತ್ತಿದ್ದಕ್ಕೆ, ಅಂಗನವಾಡಿ ಸಹಾಯಕಿ ಸುಗಂಧಾ ಮೇಲೆ ಹಲ್ಲೆ ನಡೆಸಲಾಗಿದೆ. ಅದೇ ಗ್ರಾಮದ ಗಾರ್ಡನ್‌ನ ಮಾಲೀಕ ಕಲ್ಯಾಣಿ ಮೋರೆ ಎಂಬಾತ ಹಲ್ಲೆ ನಡೆಸಿದ್ದಾನೆ.

    ಹಲ್ಲೆಗೊಳಗಾದ ಸುಗಂಧಾರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಶ್ರೀಕಾಂತ್ ಪೂಜಾರಿ ವಿರುದ್ಧ ಅಕ್ರಮ ಸಾರಾಯಿ, ಮಟ್ಕಾ, ಜೂಜಾಟ ಸೇರಿ 16 ಕೇಸ್‌ಗಳಿವೆ: ಹು-ಧಾ ಪೊಲೀಸ್ ಕಮಿಷನರ್

    ಘಟನೆ ನಡೆದು ಮೂರು ದಿನಗಳಾದರೂ ಸಹ ತಲೆ ಮರೆಸಿಕೊಂಡಿರುವ ಆರೋಪಿ ಕಲ್ಯಾಣಿ ಇನ್ನೂ ಅರೆಸ್ಟ್ ಆಗಿಲ್ಲ. ಸುಗಂಧಾ ಕುಟುಂಬದವರು ಬಡವರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗನವಾಡಿ ಸಹಾಯಕಿಯ ಕುಟುಂಬಕ್ಕೆ ಆಸ್ಪತ್ರೆಯ ಬಿಲ್ ಸಹ ಕಟ್ಟಲು ಸಾಧ್ಯವಾಗದ ಸ್ಥಿತಿ ಇದೆ. ಹೀಗಾಗಿ ಕುಟುಂಬಸ್ಥರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಬಳಿ ನೆರವಿಗೆ ಮನವಿ ಮಾಡಿದ್ದಾರೆ. ಮಹಿಳೆಗೆ ಸಹಾಯ ಮಾಡಬೇಕು. ಇಲಾಖೆಯಿಂದ ಸಹಾಯ ಮಾಡಬೇಕು ಎಂದು ಕೋರಿದ್ದಾರೆ.

  • ಒಟ್ಟಿಗೆ ಓದಿದ್ರೂ ಅತ್ಯಾಚಾರ ಮಾಡಲು ಸಹಾಯ- ಕೃತ್ಯದ ವೀಡಿಯೋ ಅತ್ತೆಗೆ ಕಳಿಸಿದ ಕಿರಾತಕರು

    ಲಕ್ನೋ: ಮಹಿಳೆಯ ಮೇಲೆ ನಾಲ್ವರು ಅತ್ಯಾಚಾರ ಮಾಡಿ, ಅದನ್ನು ವೀಡಿಯೋ ಮಾಡಿರುವ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ನಡೆದಿದೆ.

    ಮಹಿಳೆಯೊಬ್ಬಳು ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ಅರ್ಜಿ ತುಂಬಲು ಸಾರ್ವಜನಿಕ ಸೇವಾ ಕೇಂದ್ರಕ್ಕೆ ಹೋಗುತ್ತಿದ್ದಾಗ ಕೇಂದ್ರದ ನಿರ್ವಾಹಕರು, ಕಂಪ್ಯೂಟರ್ ಆಪರೇಟರ್, ಅಂಗಡಿ ಮಾಲೀಕರು ಹಾಗೂ ಮತ್ತೊಬ್ಬರು ಸೇರಿ ಆಕೆಯ ಮೇಲೆ ಅತ್ಯಾಚಾರ ಮಾಡಿಕೊಂಡಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ವೀಡಿಯೋವನ್ನು ಮಾಡಿಕೊಂಡಿದ್ದು, ಆರೋಪಿಗಳಲ್ಲಿ ಒಬ್ಬಾತ ಆ ವೀಡಿಯೋವನ್ನು ಆಕೆಯ ಅತ್ತೆಗೆ ಕಳುಹಿಸಿದ್ದಾನೆ. ಆಗ ಈ ವಿಷಯ ಬೆಳಕಿಗೆ ಬಂದಿದ್ದು, ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಫ್ಲ್ಯಾಶ್‌ಲೈಟ್‌ನಲ್ಲಿ ಇಸಿಜಿ ಟೆಸ್ಟ್ ಮಾಡಿದ ಸರ್ಕಾರಿ ಆಸ್ಪತ್ರೆ ವೈದ್ಯರು

    ಘಟನೆ ಸಂಬಂಧಿಸಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ನಾಲ್ವರಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ವೇಳೆ ಘಟನೆಯಲ್ಲಿ ಭಾಗಿಯಾಗಿದ್ದ ಆರೋಪಿಗಳೆಲ್ಲರೂ ಮಹಿಳೆಯ ಪೋಷಕರು ವಾಸಿಸುತ್ತಿದ್ದ ಅಲಿಗಢ ಜಿಲ್ಲೆಗೆ ಸೇರಿದ ಹಳ್ಳಿಯವರಾಗಿದ್ದಾರೆ. ಮಹಿಳೆ ಹಾಗೂ ಆರೋಪಿಗಳು ಒಟ್ಟಿಗೆ ಓದಿದ್ದರು ಎಂಬುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಗುಂಡನನ್ನು ಹುಡುಕಿಕೊಟ್ಟವರಿಗೆ 30 ಸಾವಿರ ರೂ. ಬಹುಮಾನ – ಮಗನಂತೆ ಸಾಕಿದ್ದ ಶ್ವಾನಕ್ಕಾಗಿ ಮಹಿಳೆ ಕಣ್ಣೀರು

    Live Tv
    [brid partner=56869869 player=32851 video=960834 autoplay=true]

  • ಒಂಟಿ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಕತ್ತು ಕೊಯ್ದ ಕಿರಾತಕರು – ಕೊಲೆಯ ಹಿಂದೆ ಅನುಮಾನದ ಹುತ್ತ

    ಒಂಟಿ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಕತ್ತು ಕೊಯ್ದ ಕಿರಾತಕರು – ಕೊಲೆಯ ಹಿಂದೆ ಅನುಮಾನದ ಹುತ್ತ

    ಚಿಕ್ಕಬಳ್ಳಾಪುರ: ಅಂಗವಾಡಿಯಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡ್ತಿದ್ದ ಒಂಟಿ ಮಹಿಳೆ ಮನೆಗೆ ನುಗ್ಗಿ ಕಿರಾತಕರು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಾಯನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ವೆಂಕಟಲಕ್ಷ್ಮಮ್ಮ(50) ಕೊಲೆಯಾದ ದುರ್ದೈವಿ. ಗಂಡನಿಂದ ದೂರವಾಗಿ ಕಳೆದ ಕೆಲವು ವರ್ಷಗಳಿಂದ ವೆಂಕಟಲಕ್ಷ್ಮಮ್ಮ ಒಬ್ಬಂಟಿ ಜೀವನ ಸಾಗಿಸ್ತಿದ್ದರು. ಮನೆಯ ಕೆಲಸಗಳನ್ನು ಮುಗಿಸಿ ಅಂಗನವಾಡಿಗೆ ಹೋಗಬೇಕು ಎಂದು ಮನೆಯಿಂದ ಹೊರ ಹೋಗುವಷ್ಟರಲ್ಲಿ ದುಷ್ಕರ್ಮಿಗಳು ಮನೆಗೆ ನುಗ್ಗಿ ವೆಂಕಟಲಕ್ಷ್ಮಮ್ಮನ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿ ಹೋಗಿದ್ದಾರೆ. ಕೊಲೆಯ ಹಿಂದೆ ಹಲವಾರು ಅನುಮಾನಗಳು ಮೂಡಿವೆ. ಇದನ್ನೂ ಓದಿ: ಪ್ರೇಯಸಿಯನ್ನು ಚಾಕುವಿನಿಂದ ಇರಿದು ಪೊಲೀಸರಿಗೆ ಶರಣಾದ

    ಹಿನ್ನೆಲೆ ಏನು?
    ವೆಂಕಟಲಕ್ಷ್ಮಮ್ಮ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ನಾಯನಹಳ್ಳಿ ಗ್ರಾಮದ ನಿವಾಸಿ. ಇವರಿಗೆ ಮದುವೆಯಾಗಿ ಮಗಳು ಇದ್ದಾಳೆ. ವೆಂಕಟಲಕ್ಷ್ಮಮ್ಮ ನಾಯನಹಳ್ಳಿ ಗ್ರಾಮದ ಪಕ್ಕದಲ್ಲೆ ಇರುವ ಚೊಕ್ಕನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡ್ತಿದ್ದರು. ನಿನ್ನೆ ಅಂಗನವಾಡಿಗೆ ಹೋಗಲು ರೆಡಿಯಾಗಿ ಇನ್ನೇನು ಮನೆಯಿಂದ ಆಚೆ ಹೋಗಬೇಕಿತ್ತು, ಅಷ್ಟರಲ್ಲೆ ದುಷ್ಕರ್ಮಿಗಳ ಕೈಗೆ ಸಿಲುಕಿ ಕೊಲೆಯಾಗಿದ್ದಾರೆ.

    1991 ರಲ್ಲಿ ವೆಂಕಟಲಕ್ಷ್ಮಮ್ಮ ಅವರಿಗೆ ಪಕ್ಕದ ಗ್ರಾಮ ಕತ್ತರಿಗುಪ್ಪೆಯ ಟಿ.ಆಂಜಪ್ಪನ ಜೊತೆ ಮದುವೆಯಾಗಿ ಮಗಳಿದ್ದಳು. ಆಂಜಪ್ಪ 1998ರಲ್ಲಿ ಹೆಂಡತಿಯನ್ನು ಬಿಟ್ಟು, ಬೇರೆ ಮದುವೆಯಾಗಿ ಬೇರೆ ಗ್ರಾಮದಲ್ಲಿ ಇದ್ದಾನೆ. ಮೃತಳಿಗೆ ಓರ್ವ ಮಗಳಿದ್ದು ಆಕೆ ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ಗಂಡನ ಜೊತೆ ವಾಸವಿದ್ದಾಳೆ. ಕಳೆದ ಎರಡು ದಿನಗಳಿಂದ ವೆಂಕಟಲಕ್ಷ್ಮಮ್ಮ ಅವರಿಗೆ ಆರೋಗ್ಯ ಸಮಸ್ಯೆ ಇದ್ದ ಕಾರಣ ಮಗಳು ಮತ್ತು ಅಳಿಯ ಆಸ್ಪತ್ರೆಗೆ ತೋರಿಸಿ ಮನೆಗೆ ಬಿಟ್ಟಿದ್ದಾರೆ. ಈ ವೇಳೆ ವೆಂಕಟಲಕ್ಷ್ಮಮ್ಮ ಔಷಧಿ ತೆಗೆದುಕೊಳ್ಳುವಂತೆ ನೆನಪಿಸಲು ಅವರಿಬ್ಬರು ಫೋನ್‌ ಮಾಡಿದ್ದಾರೆ.

    ಆದರೆ ವೆಂಕಟಲಕ್ಷ್ಮಮ್ಮ ಅವರು ಫೋನ್ ರಿಸೀವ್ ಮಾಡಿಲ್ಲ. ಇದ್ರಿಂದ ಅನುಮಾನಗೊಂಡ ಮಗಳು ಮತ್ತು ಅಳಿಯ ಮನೆಗೆ ಬಂದು ನೋಡಿದ್ದಾರೆ. ಆಗ ಮನೆಯ ಬಾಗಿಲು ಸ್ವಲ್ಪ ಓಪನ್ ಆಗಿತ್ತು. ಒಳ ಹೋಗಿ ನೋಡಿದ್ರೆ ಮಂಚದ ಮೇಲೆ ವೆಂಕಟಲಕ್ಷ್ಮಮ್ಮ ಅವರ ಶವ ಕಾಣಿಸಿದೆ. ಇದರಿಂದ ಗಾಬರಿಗೊಂಡ ಅವರು ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ.

    ವೆಂಕಟಲಕ್ಷ್ಮಮ್ಮ ಅವರ ಮುಖ ಹಾಗೂ ಕತ್ತಿಗೆ ಮಾರಕಾಸ್ತ್ರಗಳಿಂದ ತಿವಿದು ಕೊಲೆ ಮಾಡಲಾಗಿದೆ. ಇದ್ರಿಂದ ಯಾರೊ ಪರಿಚಯಸ್ಥರು, ತನ್ನ ಪತ್ನಿಯ ಬಳಿ ಇದ್ದ ಚಿನ್ನಾಭರಣದ ದುರಾಸೆಗೆ ಕೊಲೆ ಮಾಡಿರಬಹುದು ಎಂದು ಮೃತನ ಪತಿ ಅಂಜಪ್ಪ ಹೇಳ್ತಿದ್ದಾರೆ. ಇದನ್ನೂ ಓದಿ: 1,231 ಮಂದಿಗೆ ಕೊರೊನಾ – ಸಿಲಿಕಾನ್ ಸಿಟಿಯಲ್ಲಿಯೇ 1,124 ಪ್ರಕರಣ 

    ವೆಂಕಟಲಕ್ಷ್ಮಮ್ಮ ಕೊಲೆ ಸುದ್ದಿ ತಿಳಿಯುತ್ತಿದ್ದಂತೆ, ಚಿಂತಾಮಣಿ ಗ್ರಾಮಾಂತರ ಪೊಲೀಸರು ಹಾಗೂ ಚಿಕ್ಕಬಳ್ಳಾಪುರ ಎಸ್‍ಪಿ ನಾಗೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗ ಮಹಿಳೆಯ ಕೊಲೆಯ ಸುತ್ತ ಅನುಮಾನಗಳ ಹುತ್ತ ಬೆಳೆದಿದೆ. ಪರಿಚಯಸ್ಥರೆ ವೆಂಕಟಲಕ್ಷ್ಮಮ್ಮ ಕೊಲೆ ಮಾಡಿರುವ ಬಗ್ಗೆ ಸಂಶಯ ಇರುವ ಹಿನ್ನೆಲೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೈಕ್‍ನಿಂದ ಬಿದ್ದು ಕೊರೊನಾ ವಾರಿಯರ್ ಸಾವು- ಪರಿಹಾರಕ್ಕಾಗಿ ಗ್ರಾಮಸ್ಥರ ಆಗ್ರಹ

    ಬೈಕ್‍ನಿಂದ ಬಿದ್ದು ಕೊರೊನಾ ವಾರಿಯರ್ ಸಾವು- ಪರಿಹಾರಕ್ಕಾಗಿ ಗ್ರಾಮಸ್ಥರ ಆಗ್ರಹ

    ಬಾಗಲಕೋಟೆ: ಕೋವಿಡ್-19 ಕರ್ತವ್ಯಕ್ಕೆ ಆಗಮಿಸುವ ವೇಳೆ ಬೈಕ್‍ನಿಂದ ಬಿದ್ದ ಅಂಗನವಾಡಿ ಕಾರ್ಯಕರ್ತೆ ಮೃತಟಪಟ್ಟ ಘಟನೆ ಬದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದಲ್ಲಿ ನಡೆದಿದೆ.

    ನಂದಿಕೇಶ್ವರ ಗ್ರಾಮದ ಪ್ರಭಾವತಿ ಪೂಜಾರಿ (52) ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆ. ಪ್ರಭಾವತಿ ಅವರು ಬಾದಾಮಿ ಪಟ್ಟಣದಲ್ಲಿ ಮನೆ ಮಾಡಿ ಕೊಂಡಿದ್ದರು. ನಿತ್ಯವೂ ಕೆಲಸಕ್ಕಾಗಿ ನಂದಿಕೇಶ್ವರ ಗ್ರಾಮಕ್ಕೆ ಬರುತ್ತಿದ್ದರು. ಮೇ 18ರಂದು ನಂದಿಕೇಶ್ವರ ಗ್ರಾಮಕ್ಕೆ ಬೈಕ್‍ನಲ್ಲಿ ತೆರಳುವ ವೇಳೆ ಮೂರ್ಛೆ ಹೋಗಿ ಬಿದ್ದು ತಲೆಗೆ ಗಂಭೀರ ಪೆಟ್ಟಾಗಿತ್ತು.

    ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಮೃತ ಮಹಿಳೆಗೆ ನಾಲ್ಕು ಜನ ಹೆಣ್ಣು ಮಕ್ಕಳಿದ್ದು, ಕೋವಿಡ್-19 ಕೆಲಸದ ವೇಳೆ ಮೃತಪಟ್ಟ ಹಿನ್ನೆಲೆ ಪರಿಹಾರ ನೀಡುವಂತೆ ನಂದಿಕೇಶ್ವರ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

  • ಬಾಲಕಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಅಂಗನವಾಡಿ ಕಾರ್ಯಕರ್ತೆ ಅಮಾನತು

    ಬಾಲಕಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಅಂಗನವಾಡಿ ಕಾರ್ಯಕರ್ತೆ ಅಮಾನತು

    ಕೊಪ್ಪಳ: ಬಾಲಕಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಅಂಗನವಾಡಿ ಕಾರ್ಯಕರ್ತೆಯನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

    ಕನಕಗಿರಿ ಯೋಜನೆಯ ಗುಂಡೂರು ಗ್ರಾಮದ ಅಂಗನವಾಡಿಯ ಸಂಗಮ್ಮ ವಸ್ತ್ರದ್ ಅಮಾನತುಗೊಂಡ ಕೇಂದ್ರದ ಕಾರ್ಯಕರ್ತೆ. ಸಂಗಮ್ಮ ಪುಟಾಣಿ ಬಾಲಕಿ ಮೇಲೆ ಅಮಾನವೀಯವಾಗಿ ಥಳಿಸಿದ್ದರು. ಈ ಸಂಬಂಧ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತುಕೊಂಡ ಕನಕಗಿರಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆದರೆ ಸಂಗಮ್ಮ ಅಂಗನವಾಡಿಯಲ್ಲಿ ಹಾಗೂ ಗ್ರಾಮದಲ್ಲಿ ಇಲ್ಲದಿರುವ ಕುರಿತು ಅಂಗನವಾಡಿ ಸಹಾಯಕಿ ಹಾಗೂ ಗ್ರಾಮಸ್ಥರಿಂದ ತಿಳಿದು ಬಂದಿದೆ. ಬಳಿಕ ಅಧಿಕಾರಿಗಳು, ಕಾರ್ಯಕರ್ತೆಯನ್ನು ಅಂಗನವಾಡಿಗೆ ಹಾಜರು ಪಡಿಸಿಕೊಳ್ಳದಂತೆ ನಿರ್ಬಂಧ ವಿಧಿಸಿದ್ದಾರೆ.

    ಬಾಲಕಿರ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ವೈದ್ಯಕೀಯ ತಪಾಸಣೆ ಮಾಡಿಸಿ, ಆರೋಗ್ಯವಾಗಿರುವ ಬಗ್ಗೆ ಖಚಿತಪಡಿಸಿಕೊಂಡಿದ್ದಾರೆ. ಕುಟುಂಬದವರಿಗೆ ಸಾಂತ್ವನ ಹೇಳಿ ಮಗುವನ್ನು ಪುನಃ ಅಂಗನವಾಡಿಗೆ ಹಾಜರಾಗುವಂತೆ ಕ್ರಮವಹಿಸಲಾಗಿದೆ. ಅಂಗನವಾಡಿಯಲ್ಲಿ ಪಾಲಕರ ಸಭೆ ನಡೆಸಿ ನಿಯಮಾನುಸಾರ ಕ್ರಮವಹಿಸುವ ಕುರಿತು ಅಧಿಕಾರಿಗಳು ತಿಳಿಸಿದರು.

    ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ಯಕರ್ತೆಯನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಮ್ಮ ಕರ್ತವ್ಯವನ್ನು ಎಚ್ಚರಿಕೆಯಿಂದ ನಿರ್ವಹಿಸಲು ಸೂಚನೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಹೇಳಿದರು.

  • ಭಾರತ್ ಬಂದ್ ಪ್ರತಿಭಟನೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಸಾವು

    ಭಾರತ್ ಬಂದ್ ಪ್ರತಿಭಟನೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಸಾವು

    ಕಾರವಾರ: ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದಿದೆ.

    ಮುಂಡಗೋಡು ತಾಲೂಕಿನ ಶಿಡ್ಲಗುಂಡಿ ಗ್ರಾಮದ ಶಾಂತಾ ಬಸವಣ್ಣೆಪ್ಪ ಚಕ್ರಸಾಲಿ (57) ಸಾವನ್ನಪ್ಪಿದ ಅಂಗನವಾಡಿ ಕಾರ್ಯಕರ್ತೆ. ಕಾರ್ಮಿಕ ಸಂಘಟನೆಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕರೆ ನೀಡಿದ್ದ ಭಾರತ ಬಂದ್‍ನಲ್ಲಿ ಶಾಂತಾ ಅವರು ಭಾಗವಹಿಸಿದ್ದರು.

    ಪ್ರತಿಭಟನಾಕಾರರು ನಗರದಲ್ಲಿ ಮೆರವಣಿಗೆ ಕೈಗೊಂಡಿದ್ದರು. ಈ ವೇಳೆ ಮೆರವಣಿಗೆ ತಾಲೂಕು ಪಂಚಾಯತಿ ಸಮೀಪಕ್ಕೆ ಬರುತ್ತಿದ್ದಂತೆ ಶಾಂತಾ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

    ಆಸ್ಪತ್ರೆ ಎದುರು ಅಂಗನವಾಡಿ, ಆಶಾ ಕಾರ್ಯಕರ್ತೆಯರು ಭಾರೀ ಸಂಖ್ಯೆಯಲ್ಲಿ ಸೇರಿದ್ದಾರೆ. ಈ ಕುರಿತು ಮಾಹಿತಿ ಪಡೆಯುತ್ತಿದ್ದಂತೆ ಸಿಪಿಐ ಶಿವಾನಂದ ಚಲವಾದಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv