Tag: anganwadi

  • ಇನ್ನು ಮುಂದೆ ಅಂಗನವಾಡಿ ಕೇಂದ್ರಗಳಲ್ಲೇ LKG, UKG – ಮಾಂಟೆಸ್ಸರಿಗಳಾಗಿ ಪರಿವರ್ತನೆ

    ಇನ್ನು ಮುಂದೆ ಅಂಗನವಾಡಿ ಕೇಂದ್ರಗಳಲ್ಲೇ LKG, UKG – ಮಾಂಟೆಸ್ಸರಿಗಳಾಗಿ ಪರಿವರ್ತನೆ

    – ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

    ಬೆಂಗಳೂರು: ಅಂಗನವಾಡಿ ಕೇಂದ್ರಗಳನ್ನು (Anganwadi Centres) ಮಾಂಟೆಸ್ಸರಿಗಳನ್ನಾಗಿ (Montessori) ಮೇಲ್ದರ್ಜೆಗೆ ಏರಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಚಿವರ ಜತೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಯಿತು.

    ಸಭೆ ಬಳಿಕ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸರ್ಕಾರಿ ಶಾಲೆಗಳಲ್ಲಿ LKG, UKG ಪ್ರಾರಂಭಕ್ಕೆ ಅಂಗನವಾಡಿ ಕಾರ್ಯಕರ್ತೆಯರು ವಿರೋಧ ಮಾಡುತ್ತಿದ್ದಾರೆ. ಈ ಸಂಬಂಧ ಶಿಕ್ಷಣ ಇಲಾಖೆ, ನಮ್ಮ ಇಲಾಖೆ ಜತೆ ಸಿಎಂ ಸಭೆ ಮಾಡಿದರು. ಗುಣಮಟ್ಟದ ಶಿಕ್ಷಣ ಕೊಡಲು ಸರ್ಕಾರಿ ಶಾಲೆಗಳಲ್ಲಿ LKG, UKG ಪ್ರಾರಂಭ ಮಾಡಲಾಗ್ತಿದೆ. ಇದು ಅಂಗನವಾಡಿ ಕಾರ್ಯಕರ್ತರ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಜೊತೆ ಸಭೆ ಮಾಡಿದ್ದು ಈಗ ಆದೇಶ ಹೊರಡಿಸಿರುವ ಶಾಲೆಗಳಲ್ಲಿ ಬಿಟ್ಟು ಹೊಸದಾಗಿ LKG, UKG ಪ್ರಾರಂಭ ಮಾಡದಂತೆ ಮಾತುಕತೆ ನಡೆದಿದೆ. ಮುಂದಿನ ಪ್ರಕ್ರಿಯೆ ಮಾಡಲು ತಜ್ಞರ ಸಮಿತಿ ನೇಮಕ ಮಾಡಲಾಗುತ್ತಿದೆ ಎಂದರು.

    ಅಂಗನವಾಡಿಗಳನ್ನು ಅಪ್ ಗ್ರೇಡ್ ಮಾಡಲು ಸಿಎಂ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸಿಎಂ ಇದಕ್ಕೆ ಒಪ್ಪಿದ್ದಾರೆ. ಅಂಗನವಾಡಿಗಳನ್ನ ಇನ್ನು ಮುಂದೆ ಸರ್ಕಾರಿ ಮಾಂಟೆಸ್ಸರಿಗಳಾಗಿ ಅಪ್ ಗ್ರೇಡ್ ಮಾಡಲಾಗುತ್ತದೆ. ಇಲ್ಲಿ LKG, UKG ತರಗತಿಗಳನ್ನು ಕನ್ನಡ, ಇಂಗ್ಲಿಷ್ ಮಾಧ್ಯಮಗಳಲ್ಲಿ ಪ್ರಾರಂಭ ಮಾಡಲು ತೀರ್ಮಾನ ಮಾಡಲಾಗಿದೆ. ಮೊದಲ ಹಂತದಲ್ಲಿ 9 ಸಾವಿರ ಅಂಗನವಾಡಿಗಳನ್ನ ಮಾಂಟೆಸ್ಸರಿಗಳಾಗಿ ಅಪ್ ಗ್ರೇಡ್ ಮಾಡಲು ತೀರ್ಮಾನ ಮಾಡಲಾಗಿದೆ. ಮಾಂಟೆಸ್ಸರಿಗಳಲ್ಲಿ ಸಮವಸ್ತ್ರ, ಶೂ, ಬ್ಯಾಗ್‌ಗಳನ್ನು ನೀಡಲಾಗುತ್ತದೆ. ಎಲ್ಲಾ ಸಿದ್ದತೆ ಮಾಡಿಕೊಂಡು ಆರ್ಥಿಕ ಇಲಾಖೆ ಜೊತೆ ಮಾತನಾಡಲಾಗುವುದು ಎಂದು ಹೇಳಿದರು.

    ಅಂಗನವಾಡಿ ಕಾರ್ಯಕರ್ತೆಯರ ಜೊತೆ ಈಗಾಗಲೇ ಮಾತುಕತೆ ನಡೆದಿದೆ. ಸರ್ಕಾರಿ ಶಾಲೆಗಳಲ್ಲಿ LKG, UKG ಪ್ರಾರಂಭ ಮಾಡಿದರೂ ಅಂಗನವಾಡಿ ಕಾರ್ಯಕರ್ತೆಯರನ್ನ ಕೆಲಸದಿಂದ ತೆಗೆಯುವುದಿಲ್ಲ. ಅಂಗನವಾಡಿಗಳನ್ನ ರೀ ಡೆಸಿಗ್ನೇಷನ್ ಮಾಡೋದಾಗಿ ಹೇಳಿದ್ದು ಅದಕ್ಕೂ ಅಂಗನವಾಡಿ ಕಾರ್ಯಕರ್ತರು ಒಪ್ಪಿಕೊಂಡಿದ್ದಾರೆ. ಅಂಗನವಾಡಿಗಳನ್ನ ಅಪ್ ಗ್ರೇಡ್ ಮಾಡುವ ಬೇಡಿಕೆ ಇತ್ತು. ಯಾರನ್ನೂ ಕೆಲಸದಿಂದ ತೆಗೆಯುವುದಿಲ್ಲ. ಗುಣಮಟ್ಟದ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

     

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಕೊಡಗಿನ ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಕೊಡಗಿನ ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ

    ಮಡಿಕೇರಿ: ವಿದ್ಯುತ್ ಬಿಲ್ (Electricity Bill) ಬಾಕಿ ಉಳಿಸಿಕೊಂಡಿರುವ ಅಂಗನವಾಡಿಗಳ (Anganwadi) ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸದಂತೆ ಜಿಲ್ಲೆಯ ಅಧಿಕಾರಿಗಳಿಗೆ ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವರಾದ ಎನ್‌ಎಸ್ ಬೋಸರಾಜು (NS Boseraju) ಅವರು ಸೂಚನೆ ನೀಡಿದ್ದಾರೆ.

    ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಅಂಗನವಾಡಿಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತಿದೆ ಎನ್ನುವ ಪಬ್ಲಿಕ್ ಟಿವಿ (Public Tv) ವರದಿಯ ನಂತರ ಸಚಿವರು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದರ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಒಲವು ಕಂಡು ಮೋದಿಗೆ ನೋವಾಗಿದೆ: ಚಲುವರಾಯ ಸ್ವಾಮಿ

    ವಿದ್ಯುತ್ ಇಲಾಖೆಯ ಅಧಿಕಾರಿಗಳೊಂದಿಗೆ ಹಾಗೂ ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿ ಸಮಸ್ಯೆ ಪರಿಹರಿಸುವಂತೆ ಸಚಿವರ ಕಾರ್ಯಾಲಯಕ್ಕೂ ಸೂಚನೆ ನೀಡಿದ್ದರು. ಸೂಚನೆಯ ಹಿನ್ನೆಲೆಯಲ್ಲಿ ಸಚಿವರ ಆಪ್ತ ಕಾರ್ಯದರ್ಶಿಗಳಾದ ವೀರಭದ್ರಪ್ಪ ಹಂಚಿನಾಳ ಅವರು ಜಿಲ್ಲೆಯ ಅಧಿಕಾರಿಗಳು, ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇತರೆ ಅಧಿಕಾರಿಗಳೊಂದಿಗೆ ಮಾತನಾಡಿ ಅಂಗನವಾಡಿಗಳ ವಿದ್ಯುತ್ ಸಂಪರ್ಕವನ್ನು ಮರು ಸ್ಥಾಪಿಸಲು ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಉಚಿತ ಭಾಗ್ಯದಿಂದ ಪರಿಶಿಷ್ಟರ ಅಂತ್ಯಕ್ರಿಯೆಗೂ ಸರ್ಕಾರದ ಬಳಿ ದುಡ್ಡಿಲ್ಲ: ಬಿಎಸ್‌ವೈ

  • ಚಿಣ್ಣರ ಅಂಗಳ ಅಂಗನವಾಡಿಗಳಿಗೆ ಆಸರೆಯಾಗಲು ಮುಂದಾದ ಗುಂಡೂರಾವ್ ಪುತ್ರಿ ಅನನ್ಯ ರಾವ್

    ಚಿಣ್ಣರ ಅಂಗಳ ಅಂಗನವಾಡಿಗಳಿಗೆ ಆಸರೆಯಾಗಲು ಮುಂದಾದ ಗುಂಡೂರಾವ್ ಪುತ್ರಿ ಅನನ್ಯ ರಾವ್

    ಬೆಂಗಳೂರು: ಬಡ ಮಕ್ಕಳ ನಲಿ ಕಲಿ ತಾಣ ಚಿಣ್ಣರ ಅಂಗನವಾಡಿಗಳಿಗೆ (Anganwadi) ಚೆಂದದ ರೂಪ ನೀಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರ ಪುತ್ರಿ ಅನನ್ಯ ರಾವ್ (Ananya Rao) ಮಹತ್ವದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.‌ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಫೌಂಡೇಶನ್ ವತಿಯಿಂದಲೇ ಅಂಗನವಾಡಿಗಳಿಗೆ ಕಾಯಕಲ್ಪ ನೀಡಲು ಯೋಜನೆ ರೂಪಿಸಿದ್ದಾರೆ.

    ಗಾಂಧಿನಗರದ 85 ಅಂಗನವಾಡಿಗಳನ್ನ ಗುರುತಿಸಲಾಗಿದ್ದು, ಪ್ರತಿಯೊಂದು ಅಂಗನವಾಡಿಗಳನ್ನ ಸುವ್ಯವಸ್ಥೆಗೆ ತರಲು ನಿರ್ಧರಿಸಲಾಗಿದೆ.‌ ದುಸ್ಥಿಯಲ್ಲಿರುವ ಅಂಗನವಾಡಿಗಳನ್ನ ಆದ್ಯತೆಯ ಮೇರೆಗೆ ಮೊದಲು ಪುನಶ್ಚೇತನಗೊಳಿಸಲು ಯೋಜಿಸಲಾಗಿದೆ. ಅದಕ್ಕಾಗಿ ಪ್ರತಿ ಅಂಗನವಾಡಿಗೆ ತಗುಲುವ 2 ಲಕ್ಷದ ವರೆಗಿನ ವೆಚ್ಚವನ್ನ ಆರ್ ಗುಂಡೂರಾವ್ ಫೌಂಡೇಶನ್ ವತಿಯಿಂದಲೇ ಭರಿಸಲು ಅನನ್ಯ ರಾವ್ ಮುಂದಾಗಿದ್ದಾರೆ. ಇದನ್ನೂ ಓದಿ: Chandrayaan-3ಕ್ಕೆ ಇಂದು ಕ್ಲೈಮ್ಯಾಕ್ಸ್; ಸಂಜೆ 6:04ಕ್ಕೆ ಸಾಫ್ಟ್ ಲ್ಯಾಂಡಿಂಗ್

    ಆರ್. ಗುಂಡೂರಾವ್ ಫೌಂಡೇಶನ್ ಕಾರ್ಯಗಳನ್ನ ನೋಡಿಕೊಳ್ಳುತ್ತಿರುವ ಅನನ್ಯ ರಾವ್, ಅಂಗನವಾಡಿಗಳಿಗೆ ಆಸರೆಯಾಗಬೇಕು ಎಂಬ ಆಲೋಚನೆಯನ್ನ ತಮ್ಮ ತಂದೆ ದಿನೇಶ್ ಗುಂಡೂರಾವ್ ಬಳಿ ವ್ಯಕ್ತಪಡಿಸಿದ್ದರು. ಅಲ್ಲದೇ ಆರ್. ಗುಂಡೂರಾವ್ ಅವರ 30 ನೇ ಪುಣ್ಯ ಸ್ಮರಣೆಯ ಅಂಗವಾಗಿ ಮಾದರಿ ಅಂಗನವಾಡಿಯನ್ನೂ ದಿನೇಶ್ ಗುಂಡೂರಾವ್ ಅವರಿಂದ ಲೋಕಾರ್ಪಣೆಗೊಳಿಸಿದ್ದಾರೆ.

    ಚಿಣ್ಣರ ಅಂಗಳ ಅಂಗನವಾಡಿಗಳು ಚೆಂದವಾಗಿರಬೇಕು. ಅಂಗನವಾಡಿಗಳು ಉತ್ತಮಗೊಂಡಷ್ಟೂ, ಮಕ್ಕಳಲ್ಲಿ ಆರಂಭದಲ್ಲಿಯೇ ಕಲಿಕಾ ಮನೋಭಾವ ಬೆಳೆಸಬಹುದು ಎಂಬ ಅಭಿಪ್ರಾಯವನ್ನ ಅನನ್ಯ ಅವರು ದಿನೇಶ್ ಗುಂಡೂರಾವ್ ಅವರ ಬಳಿ ವ್ಯಕ್ತಪಡಿಸಿದ್ದರು.

    ಅಲ್ಲದೇ ಈ ಕಾರ್ಯಕ್ಕೆ ರಾಜ್ಯದ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಕೂಡ ಪ್ರೇರಣೆಯಾಗಿದ್ದಾರೆ. ಸಾಮಾನ್ಯ ಶಿಕ್ಷಕ ಕುಟುಂಬದಲ್ಲಿ ಜನಿಸಿದ್ದ ಆರ್. ಗುಂಡೂರಾವ್ ಶಿಕ್ಷಣದ ವಿಚಾರಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದರು. ಅವರ ಸ್ಮರಣೆಯಲ್ಲಿ ಅಂಗನವಾಡಿಗಳಿಂದಲೇ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನ ಅವರ ಹೆಸರಿನ ಫೌಂಡೇಷನ್ ನಿಂದ ನೆರವೇರಿಸಬೇಕು ಎಂಬ ಅನನ್ಯ ಅವರ ಆಶಯಕ್ಕೆ ಸಚಿವ ದಿನೇಶ್ ಗುಂಡೂರಾವ್ ಬೆನ್ನುತಟ್ಟಿ ಬೆಂಬಲಿಸಿದ್ದಾರೆ.

    ಅಂಗನವಾಡಿಗಳ ದುರಸ್ಥಿ ಕಾರ್ಯ ಕೈಗೆತ್ತಿಕೊಳ್ಳುವುದರ ಜೊತೆಗೆ, ಗೋಡೆಗಳಿಗೆ ಬಣ್ಣದರ್ಪಣ, ಚೆಂದದ ಚಿತ್ತಾರಗಳನ್ನ ಬಿಡಿಸಲು ಸಲಹೆ ನೀಡಿದ್ದಾರೆ.‌ ಪ್ರತಿ ಅಂಗನವಾಡಿಗಳಿಗೂ ಅಗತ್ಯ ಪರಿಕರಗಳು, ಆಟೋಪಕರಣಗಳನ್ನ ಫೌಂಡೇಶನ್ ವತಿಯಿಂದ ನೀಡಲು ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

    ವಿಶೇಷವಾಗಿ ಸೃಜನಾತ್ಮಕ ಗುಣಮಟ್ಟದ ಶಿಕ್ಷಣ ಅಗತ್ಯ. ಅಂಗನವಾಡಿಗಳಿಗೆ 15 ರಿಂದ 20 ಮಕ್ಕಳು ಬಂದರು, ಅವರು ಬಡ ಕುಟುಂಬಗಳಿಂದ ಬಂದವರಾಗಿದ್ದು, ಗುಣಮಟ್ಟದ ಶಿಕ್ಷಣದಿಂದ ಹಿಂದುಳಿಯಬಾರದು. ವಿಭಿನ್ನ ತಂತ್ರಗಳ ಮೂಲಕ ಹೆಸರಾಂತ ಶಿಕ್ಷಣ ಸಂಸ್ಥೆಗಳಲ್ಲಿ ಸಿಗುವ ಶಿಕ್ಷಣ ಬಡ ಮಕ್ಕಳಿಗೂ ಸಿಗಬೇಕು.

    ಈ ನಿಟ್ಟಿನಲ್ಲಿ ಅಗತ್ಯ ಪಾಠೋಪಕರಣಗಳನ್ನ ನೀಡುವುದರ ಜೊತೆಗೆ, ಶಿಕ್ಷಕರಿಗೂ ತರಬೇತಿ ನೀಡುವಂತೆ ದಿನೇಶ್ ಗುಂಡೂರಾವ್ ಫೌಂಡೇಷನ್ ಗೆ ಸಲಹೆ ನೀಡಿದ್ದಾರೆ. ನೂರಿತ ತಜ್ಞರನ್ನ ಕರೆಸಿ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ಕಾರ್ಯಕ್ರಮಗಳನ್ನೂ ಆರ್. ಗುಂಡೂರಾವ್ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲು ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಇದನ್ನೂ ಓದಿ: ಟಾಟಾ ಸಮೂಹಕ್ಕೆ ಮಾಯಾ ಉತ್ತರಾಧಿಕಾರಿ – ಶೀಘ್ರದಲ್ಲೇ ಘೋಷಣೆ ಸಾಧ್ಯತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 4 ದಿನಗಳ ಅಂತರದಲ್ಲಿ 2ನೇ ಪ್ರಕರಣ ಬಯಲಿಗೆ – ಗರ್ಭಿಣಿ, ಮಕ್ಕಳಿಗೆ ಕೊಳೆತ ಮೊಟ್ಟೆ ವಿತರಣೆ

    4 ದಿನಗಳ ಅಂತರದಲ್ಲಿ 2ನೇ ಪ್ರಕರಣ ಬಯಲಿಗೆ – ಗರ್ಭಿಣಿ, ಮಕ್ಕಳಿಗೆ ಕೊಳೆತ ಮೊಟ್ಟೆ ವಿತರಣೆ

    ಹಾಸನ: ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಅಂಗನವಾಡಿ ಕೇಂದ್ರದಲ್ಲಿ (Anganwadi) ಕೊಳೆತ ಮೊಟ್ಟೆಗಳನ್ನು (Rotten Eggs) ವಿತರಣೆ ಮಾಡಿರುವ ಘಟನೆ ಹಾಸನ (Hassan) ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಲಕ್ಷ್ಮಿಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.

    ಅಂಗನವಾಡಿ ಕೇಂದ್ರದಲ್ಲಿ ನೀಡಿದ ಮೊಟ್ಟೆಗಳನ್ನು ಪಡೆದು ಮನೆಯಲ್ಲಿ ಬೇಯಿಸಿ ಸಿಪ್ಪೆ ಸುಲಿದಾಗ ಮೊಟ್ಟೆಗಳು ಕೊಳೆತಿರುವುದು ಬೆಳಕಿಗೆ ಬಂದಿದೆ. ಕೂಡಲೇ ಅಂಗವಾಡಿ ಕೇಂದ್ರಕ್ಕೆ ಬಂದ ಗರ್ಭಿಣಿಯರು ಮೊಟ್ಟೆ ಪೂರೈಕೆ ಮಾಡುತ್ತಿರುವ ಗುತ್ತಿದಾರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಹಳೆಯ ಹಾಗೂ ಕಳಪೆ ಗುಣಮಟ್ಟದ ಮೊಟ್ಟೆಗಳನ್ನು ವಿತರಣೆ ಮಾಡುತ್ತಿದ್ದಾರೆ. ಒಂದು ವೇಳೆ ಸಣ್ಣ ಮಕ್ಕಳು ಮೊಟ್ಟೆ ತಿಂದಿದ್ದರೆ ಏನಾದರೂ ಅನಾಹುತ ಸಂಭವಿಸುತ್ತಿತ್ತು. ಕೂಡಲೇ ಮೊಟ್ಟೆ ಪೂರೈಕೆ ಮಾಡುತ್ತಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವರನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಇಂಗ್ಲಿಷ್ ಇರೋದೇ ತಪ್ಪು ಮಾತಾಡೋಕೆ, ಕನ್ನಡ ಇರೋದು ಸರಿಯಾಗಿ ಮಾತನಾಡಲು: ಪ್ರದೀಪ್ ಈಶ್ವರ್

    ಗುತ್ತಿಗೆದಾರರೊಂದಿಗೆ ಅಧಿಕಾರಿಗಳು ಶಾಮೀಲಾಗಿದ್ದಾರೆ. ಮೊಟ್ಟೆಗಳನ್ನು ಪರಿಶೀಲನೆ ಮಾಡದೆ ತೆಗೆದುಕೊಳ್ಳುತ್ತಿದ್ದಾರೆ. ಕೂಡಲೇ ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

    ಕೇವಲ 4 ದಿನಗಳ ಅಂತರದಲ್ಲಿ ಹೊಳೆನರಸೀಪುರದಲ್ಲಿ 2ನೇ ಪ್ರಕರಣ ನಡೆದಿದೆ. ಕಳೆದ ಗುರುವಾರ ಹೊಳೆನರಸೀಪುರ ಪಟ್ಟಣದ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ ಹಾಗೂ ಪುಟಾಣಿ ಮಕ್ಕಳಿಗೆ ಕೆಟ್ಟ ಮೊಟ್ಟೆಗಳನ್ನು ವಿತರಿಸಲಾಗಿತ್ತು. ಇದೀಗ ಹೊಳೆನರಸೀಪುರ ತಾಲೂಕಿನಲ್ಲಿ ಮತ್ತೊಂದು ಅಂಗನವಾಡಿ ಕೇಂದ್ರದಲ್ಲಿ ಕೊಳೆತ ಮೊಟ್ಟೆ ವಿತರಣೆ ಮಾಡಿದ್ದು ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಆಧಾರ್‌ನಲ್ಲಿ ಹೆಸರು ಲಕ್ಷ್ಮೀ, ಲಿಂಗ ಪುರುಷ ಅಂತ ಇರೋದನ್ನ ಕಂಡು ಕಕ್ಕಾಬಿಕ್ಕಿಯಾದ ಕಂಡಕ್ಟರ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • NEP ನೇಮಕಾತಿ ಮಾನದಂಡ – ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು

    NEP ನೇಮಕಾತಿ ಮಾನದಂಡ – ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು

    ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಅಂಗನವಾಡಿ (Anganwadi) ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಗೆ (NEP) ಅನುಗುಣವಾಗಿ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗೆ ಮಾನದಂಡ ಬದಲಾವಣೆ ಮಾಡಿರೋದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

    ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಅಂಗನವಾಡಿ ನೇಮಕಾತಿಗೆ ಮಾನದಂಡವನ್ನು ಬದಲಾವಣೆ ಮಾಡಿ, ಆದೇಶ ಹೊರಡಿಸಿದೆ. ಈ ಹೊಸ ಆದೇಶದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಕೆಂಡ ಉಗುಳುತ್ತಿದ್ದು, ಸರ್ಕಾರದ ವಿರುದ್ಧ ಹೋರಾಡಲು ಸಜ್ಜಾಗುತ್ತಿದ್ದಾರೆ. ಅಂಗನವಾಡಿ ಟೀಚರ್ ಆಗಲು ಪಿಯುಸಿ, ಡಿಪ್ಲೋಮಾ ಆಗಿರಲೇಬೇಕು ಮತ್ತು ಸಹಾಯಕರ ಹುದ್ದೆಗಳಿಗೆ SSLC ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಇತ್ತೀಚೆಗೆಷ್ಟೇ ಆದೇಶ ಹೊರಡಿಸಿತ್ತು. ಇದೀಗ ಈ ಆದೇಶವನ್ನು ಹಿಂಪಡೆಯುವಂತೆ ಅಂಗನವಾಡಿ ಕಾರ್ಯಕರ್ತೆಯರು ಒತ್ತಾಯಿಸುತ್ತಿದ್ದಾರೆ. ಇದನ್ನೂ ಓದಿ: ಟೀ, ಸಿಗರೇಟ್‍ಗೆ ಸಾಲ ಕೊಡಲಿಲ್ಲವೆಂದು ಬಡ ಅಂಗಡಿ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ

    ಟೀಚರ್ಸ್‍ಗಳಿಗೆ ಪಿಯುಸಿ ಕಡ್ಡಾಯ ಮಾಡಿರೋದು ಸರಿ, ಆದ್ರೆ ಸಹಾಯಕಿಯರಿಗೆ ಎಸ್‍ಎಸ್‍ಎಲ್‍ಸಿ ನಿಯಮ ಬೇಡ ಅಂತಾ ಅಂಗನವಾಡಿ ಕಾರ್ಯಕರ್ತೆಯರ ಸಂಘ ಒತ್ತಾಯಿಸಿದೆ. ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರಗಳಲ್ಲಿ SSLC ಮಾಡಿರುವ ಹೆಲ್ಪರ್‌ಗಳು ಸಿಗೋದು ಕಷ್ಟ. ಇಂತಹ ಸ್ಥಳಗಳಲ್ಲಿ ಯಾರನ್ನು ನೇಮಕ ಮಾಡೋದು? ಅನೇಕ ವರ್ಷಗಳಿಂದ ಕೆಲಸ ಮಾಡಿಕೊಂಡ ಬಂದ ಸಹಾಯಕಿಯರಿಗೆ ಪಿಯುಸಿ ಕಡ್ಡಾಯ ಅಂದ್ರೆ ಹೇಗೆ? ಪಿಯುಸಿ ಮಾಡದಿದ್ರೆ, ಅವರು ಬಡ್ತಿ ಪಡೆಯದೇ, ಹಾಗೇ ನಿವೃತ್ತಿ ಆಗ್ಬೇಕಾ? ಇದು ಯಾವ ರೀತಿಯ ನ್ಯಾಯ? ಸರ್ಕಾರದ ಈ ಆದೇಶ ಕೈಬಿಡಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ. ಇದನ್ನೂ ಓದಿ: ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ- ನಮೋ ಸ್ವಾಗತಕ್ಕೆ ಭರ್ಜರಿ ಸಿದ್ದತೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಂಗನವಾಡಿ ಮಕ್ಕಳ ಆಹಾರದಲ್ಲಿ ಹಲ್ಲಿಯ ಬಾಲ ಪತ್ತೆ – 12 ಮಕ್ಕಳು ಅಸ್ವಸ್ಥ

    ಅಂಗನವಾಡಿ ಮಕ್ಕಳ ಆಹಾರದಲ್ಲಿ ಹಲ್ಲಿಯ ಬಾಲ ಪತ್ತೆ – 12 ಮಕ್ಕಳು ಅಸ್ವಸ್ಥ

    ಬೀದರ್: ವಿಷಕಾರಿ ಆಹಾರ ಸೇವಿಸಿ ಅಂಗನವಾಡಿಯ (Anganwadi) 12 ಪುಟ್ಟ ಮಕ್ಕಳು (Childrens) ಅಸ್ವಸ್ಥಗೊಂಡ ಘಟನೆ ಬೀದರ್ (Bidar) ಜಿಲ್ಲೆಯ ಭಾಲ್ಕಿ ತಾಲೂಕಿನ ತರನಳ್ಳಿ ಗ್ರಾಮದಲ್ಲಿ ನಡೆದಿದೆ.

    ಅಂಗನವಾಡಿಯ 50ಕ್ಕೂ ಹೆಚ್ಚು ಮಕ್ಕಳು ಇಂದು ವಿಷಕಾರಿ ಆಹಾರ ಸೇವಿಸಿದ್ದು, ಈ ಪೈಕಿ 12 ಮಂದಿ ಪುಟ್ಟ ಮಕ್ಕಳು ತೀವ್ರ ಅಸ್ವಸ್ಥರಾಗಿದ್ದಾರೆ. ಮಕ್ಕಳಿಗೆ ಭಾಲ್ಕಿ ತಾಲೂಕಿನ ಹಲಬರ್ಗಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಅಂತ್ಯಕ್ರಿಯೆಗೆ ಸಂಬಂಧಿಕರ ಹಿಂದೇಟು- ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದ ಮಗಳು

    ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆ ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿದ ಅಧಿಕಾರಿಗಳಿಗೆ ಮಕ್ಕಳು ಸೇವಿಸಿದ ಆಹಾರದಲ್ಲಿ ಹಲ್ಲಿಯ ಬಾಲ ಪತ್ತೆಯಾಗಿದೆ. ಮಕ್ಕಳು ಅಸ್ವಸ್ಥರಾಗಲು ಅಂಗನವಾಡಿ ಕಾರ್ಯಕರ್ತೆ ಹಾಗೂ ಅಡುಗೆ ಸಹಾಯಕಿಯ ನಿರ್ಲಕ್ಷ್ಯವೇ ಕಾರಣ ಎಂದು ಪಾಲಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಕೈಕೊಟ್ಟ ಲವರ್‌ಗೆ ಠಕ್ಕರ್ ಕೊಡಲು ಆಕೆಯ ಮೊದಲ ಅಕ್ಷರ ಬಳಸಿ ಚಹಾ ಅಂಗಡಿ ತೆರೆದ ಪ್ರೇಮಿ

    Live Tv
    [brid partner=56869869 player=32851 video=960834 autoplay=true]

  • ಎಲ್ಲರ ಗಮನ ಸೆಳೆದ ಗುಹೆಗಳ ಮಾದರಿ ಅಂಗನವಾಡಿ ವಿನ್ಯಾಸ

    ಎಲ್ಲರ ಗಮನ ಸೆಳೆದ ಗುಹೆಗಳ ಮಾದರಿ ಅಂಗನವಾಡಿ ವಿನ್ಯಾಸ

    ಚಿಕ್ಕಬಳ್ಳಾಪುರ: ಅಂಗನವಾಡಿಗಳು ಅಂದ್ರೆ ಸಾಕು ಸೋರೋ ಕಟ್ಟಡಗಳು, ಬಿರುಕು ಬಿಟ್ಟ ಗೋಡೆಗಳು, ಪಾಳು ಬೀಳೋ ಹಂತಕ್ಕೆ ತಲುಪಿರೋ ಕಟ್ಟಡಗಳೇ ಜಾಸ್ತಿ. ಇಂತಹ ಅಂಗನವಾಡಿಗಳ ಮಧ್ಯೆ ರಾಜ್ಯದಲ್ಲೇ ಮಾದರಿ ಎಂಬಂತೆ ಅಂಗನವಾಡಿಯೊಂದು ತಲೆ ಎತ್ತಿದೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ಗುಹೆಯ ಮಾದರಿಯಲ್ಲಿ ನಿರ್ಮಾಣ ಆಗಿರೋ ಮಾಡೆಲ್ ಅಂಗನವಾಡಿ ಫಸ್ಟ್ ಲುಕ್ ಅಲ್ಲೇ ಎಲ್ಲರ ಗಮನ ಸೆಳೆಯುತ್ತಿದೆ. ಇದನ್ನೂ ಓದಿ: ಸಿಎಂ ನೋಡಲು ಡಿಸೇಂಟ್ ಆದರೆ, ನಿರ್ಣಯಗಳು ತುಂಬಾ ಸ್ಟ್ರಾಂಗ್: ಸುಧಾಕರ್

    ಅಂದಹಾಗೆ ಗ್ರಾಮದಲ್ಲಿದ್ದ ಹಳೆಯ ಅಂಗನವಾಡಿ ಸೋರೋಕೆ ಶುರುವಾಗಿ ಈಗಲೋ, ಆಗಲೋ ಕುಸಿದು ಬೀಳುವ ಹಂತಕ್ಕೆ ಬಂದು ನಿಂತಿತ್ತು. ಇದ್ರಿಂದ ಎಚ್ಚೆತ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳು ಈಗ ನೂತನ ಅಂಗನವಾಡಿ ಕಟ್ಟಡ ಲೋಕಾರ್ಪಣೆ ಮಾಡಲು ಸಕಲ ಸಿದ್ಧತೆಗಳನ್ನ ನಡೆಸಿದ್ದಾರೆ.

    ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿನ ಏಜಾಕ್ಸ್ ಸಂಸ್ಥೆಯ ಸಹಯೋಗದೊಂದಿಗೆ ಸಿಎಸ್‍ಆರ್ ಅನುದಾನದಡಿಯಲ್ಲಿ ಈ ಹೊಚ್ಚ ಹೊಸ ಹೈಟೆಕ್ ಮಾದರಿಯ ಅಂಗನವಾಡಿಯನ್ನ ನಿರ್ಮಿಸಲಾಗಿದೆ. 22 ಲಕ್ಷ ರೂ. ವೆಚ್ಚದಲ್ಲಿ ಮೂರು ಕೊಠಡಿಗಳುಳ್ಳ ಗುಹೆಗಳ ಮಾದರಿಯ ಕಟ್ಟಡ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ಅನಿತಾ ತಿಳಿಸಿದ್ದಾರೆ.

    ಕಟ್ಟಡದ ವಿನ್ಯಾಸವೇ ವಿಚಿತ್ರವಾಗಿದ್ದು, ವಿಭಿನ್ನ ಎಂಬಂತಿದೆ. ಮೂರು ಗುಹೆಗಳ ಮಾದರಿಯ ಕೊಠಡಿಗಳಲ್ಲಿ ಒಂದು ಪಾಠ ಪ್ರವಚನಕ್ಕೆ, ಮತ್ತೊಂದು ಅಡುಗೆ ಕೋಣೆ, ಮಗದೊಂದರಲ್ಲಿ ಶೌಚಾಲಯ ಹಾಗೂ ವಿಶ್ರಾಂತಿಧಾಮವಿದೆ. ಥೇಟ್ ವಿಲ್ಲಾಗಳಂತೆ ಹೈಟೆಕ್ ಆಗಿರೋ ಈ ಆಂಗನವಾಡಿ ಪುಟಾಣಿ ಮಕ್ಕಳನ್ನ ಆಕರ್ಷಿಸೋದೆ ಅಷ್ಟೇ ಅಲ್ಲದೆ ನೋಡುಗರ ಗಮನವನ್ನ ಸೆಳೆಯುತ್ತಿದೆ. ಇಂತಹ ಮಾಡೆಲ್ ಅಂಗನವಾಡಿಗಳಿಗೆ ಮತ್ತಷ್ಟು ಬೇಡಿಕೆ ಬರ್ತಿದೆ. ಇದನ್ನೂ ಓದಿ:  ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕಾನ್ಸ್‌ಟೇಬಲ್ ಅರೆಸ್ಟ್ 

    ಅಂಗನವಾಡಿ ಕಟ್ಟಡ ನಿರ್ಮಾಣ ಅಂತಿಮವಾಗಿ ಉದ್ಗಾಟನೆಗೆ ದಿನಗಣನೆ ಶುರುವಾಗಿದ್ದು ಅಧಿಕಾರಿಗಳು ಅಂತಿಮ ಹಂತದ ಸಿದ್ದತೆಗಳನ್ನ ಮಾಡಿಕೊಳ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಂಗನವಾಡಿಯಲ್ಲಿ ಅನ್ನದ ಬಿಸಿಗಂಜಿ ಬಿದ್ದು ಆಸ್ಪತ್ರೆಗೆ ಸೇರಿದ ಮಕ್ಕಳು

    ಅಂಗನವಾಡಿಯಲ್ಲಿ ಅನ್ನದ ಬಿಸಿಗಂಜಿ ಬಿದ್ದು ಆಸ್ಪತ್ರೆಗೆ ಸೇರಿದ ಮಕ್ಕಳು

    ರಾಯಚೂರು: ಮಂಗಳವಾರಪೇಟೆ ಅಂಗನವಾಡಿ ಕೇಂದ್ರದಲ್ಲಿ ಸಿಬ್ಬಂದಿ ಯಡವಟ್ಟಿನಿಂದ ಅನ್ನದ ಗಂಜಿ ಬಿದ್ದು ಮಕ್ಕಳು ಹಾಗೂ ಆಯಾ ಆಸ್ಪತ್ರೆಗೆ ಸೇರಿದ್ದಾರೆ.

    ಅನ್ನ ಬಸಿಯಲು ಪಾತ್ರೆ ತೆಗೆದುಕೊಂಡು ಹೋಗುವಾಗ ಅನ್ನದ ಗಂಜಿ ಕೇಳಗೆ ಬಿದ್ದಿದೆ. ಈ ವೇಳೆ ಅಲ್ಲೇ ಇದ್ದ ನಾಲ್ಕು ಮಕ್ಕಳು ಹಾಗೂ ಆಯಾಗೆ ಸುಟ್ಟಗಾಯಗಳಾಗಿವೆ.

    ಆರಾನ್, ಹೀಬಾ, ಮೋಹಮದ್, ಶೇಕ್ ಅದ್ನಾನ್, ಶೇಕ್ ಮಾರಿಯಮ್ ಮಕ್ಕಳಿಗೆ ಗಾಯವಾಗಿದೆ. ಆಯಾ ಲಕ್ಷ್ಮಿಗೂ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ದೊಡ್ಡ ಪ್ರಕರಣವಲ್ಲ, ಕಿರುಕುಳ ನೀಡಲು ವಿಚಾರಣೆ ನಡೆಸುತ್ತಿದ್ದಾರೆ: ಡಿಕೆಶಿ 

    ಚಿಕ್ಕ ಬಾಡಿಗೆ ಕೋಣೆಯಲ್ಲಿ ಅಂಗನವಾಡಿ ಕೇಂದ್ರ ನಡೆಸಲಾಗುತ್ತಿದ್ದು, ಅಡುಗೆ ಮಾಡುವ ಸ್ಥಳದ ಪಕ್ಕದಲ್ಲೇ ಮಕ್ಕಳು ಕುಳಿತುಕೊಂಡಿದ್ದಾರೆ. ಸಿಬ್ಬಂದಿ ನಿರ್ಲಕ್ಷ್ಯದಿಂದ ಪಾತ್ರೆ ಬಿದ್ದು, ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ಮುಂದುವರೆದಿದೆ.

    Live Tv

  • ಅಂಗನವಾಡಿ ಶಿಕ್ಷಕಿಯಾಗಿ ದಲಿತೆ ನೇಮಕವಾಗಿದ್ದಕ್ಕೆ ಮಕ್ಕಳನ್ನು ಕಳುಹಿಸದ ಮೇಲ್ಜಾತಿ ಪಾಲಕರು!

    ಅಂಗನವಾಡಿ ಶಿಕ್ಷಕಿಯಾಗಿ ದಲಿತೆ ನೇಮಕವಾಗಿದ್ದಕ್ಕೆ ಮಕ್ಕಳನ್ನು ಕಳುಹಿಸದ ಮೇಲ್ಜಾತಿ ಪಾಲಕರು!

    ಬೀದರ್: 12ನೇ ಶತಮಾನದಲ್ಲಿ ಬಸವಾದಿ ಶರಣರು ಅಸ್ಪೃಶ್ಯತೆ ವಿರುದ್ಧ ಹೋರಾಡಿದ ನೆಲದಲ್ಲೇ ಇನ್ನೂ ಕೂಡ ಅಸ್ಪೃಶ್ಯತೆ ಜೀವಂತವಾಗಿದೆ.

    ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹತ್ಯಾಳ ಗ್ರಾಮದಲ್ಲಿ ಅಂಗನವಾಡಿಗೆ ದಲಿತ ಮಹಿಳೆಯರು ನೇಮಕವಾಗಿರುವ ಹಿನ್ನೆಲೆ ಮೇಲ್ಜಾತಿ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೌರಿಂಗ್, ಲೇಡಿ ಕರ್ಜನ್ ಆಸ್ಪತ್ರೆಗೆ ವಕ್ಫ್ ಮಹಿಳಾ ಪರಿಷತ್ತಿನಿಂದ 5 ಲಕ್ಷ ಸಹಾಯಧನ

    ಅಂಗನವಾಡಿ ಶಿಕ್ಷಕಿಯಾಗಿ ದಲಿತ ಸಮುದಾಯದ ಸುಮಿತ್ರಾ ಬಾಯಿ ನೇಮಕವಾಗಿದ್ದರೆ, ಶಾಲೆಯ ಸಹಾಯಕಿಯೂ ದಳಿತ ಮಹಿಳೆಯಾಗಿದ್ದಾರೆ. ಈ ಹಿನ್ನೆಲೆ ಮೇಲ್ಜಾತಿಯ ಜನರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕಿದ್ದಾರೆ.

    ಗ್ರಾಮದ 3 ಅಂಗನವಾಡಿ ಕೇಂದ್ರಗಳ ಪೈಕಿ 2 ಅಂಗನವಾಡಿಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಆದರೆ ಸಾಮಾನ್ಯ ವಾರ್ಡಿನ ಅಂಗನವಾಡಿ ಕೇಂದ್ರ ಅಸ್ಪೃಶ್ಯತೆಯ ವಿವಾದಕ್ಕೀಡಾಗಿದೆ. 2 ವರ್ಷಗಳಿಂದ ಕೋವಿಡ್ ಕಾರಣದಿಂದ ಬಂದ್ ಆಗಿದ್ದ ಅಂನವಾಡಿ ಇದೀಗ ಅಸ್ಪೃಶ್ಯತೆ ಕಾರಣಕ್ಕೆ ಮಕ್ಕಳೇ ಮರಳದಂತಾಗಿದೆ. ಇದನ್ನೂ ಓದಿ: ಅಗ್ನಿಫಥ್‌ನಿಂದ ಹೆಚ್ಚಿದ ಕಿಚ್ಚು- ನಾಲ್ಕೇ ದಿನಗಳಲ್ಲಿ 200 ಕೋಟಿ ಆಸ್ತಿ ನಷ್ಟ

    Live Tv

  • ಮಕ್ಕಳಿಗೆ ಪೌಷ್ಟಿಕ ಆಹಾರದ ಹೆಸರಲ್ಲಿ ಅವಧಿ ಮೀರಿದ ಚಿಕ್ಕಿ ವಿತರಣೆ

    ಮಕ್ಕಳಿಗೆ ಪೌಷ್ಟಿಕ ಆಹಾರದ ಹೆಸರಲ್ಲಿ ಅವಧಿ ಮೀರಿದ ಚಿಕ್ಕಿ ವಿತರಣೆ

    ಹಾಸನ: ಸರ್ಕಾರ ಅಂಗನವಾಡಿ ಮೂಲಕ ಮಕ್ಕಳಿಗೆ ಮತ್ತು ಬಾಣಂತಿಯರಿಗೆ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಲು ಕೋಟಿ, ಕೋಟಿ ರೂ. ಹಣ ಖರ್ಚು ಮಾಡುತ್ತಿದೆ. ಹೀಗೆ ಸರ್ಕಾರ ನೀಡುವ ಪೌಷ್ಟಿಕ ಆಹಾರಗಳಲ್ಲಿ ಚಿಕ್ಕಿಯೂ ಒಂದು. ಆದರೆ ಹಾಸನ ಜಿಲ್ಲೆಯ ಅಂಗನವಾಡಿಗಳಲ್ಲಿ ಅವಧಿ ಮೀರಿದ ಚಿಕ್ಕಿ ವಿತರಣೆಯಾಗುತ್ತಿದ್ದು, ಮಕ್ಕಳು ಹಾಗೂ ಬಾಣಂತಿಯರ ಆರೋಗ್ಯದ ದೃಷ್ಟಿಯಿಂದ ಆತಂಕಕ್ಕೆ ಕಾರಣವಾಗಿದೆ.

    ಅವಧಿ ಮೀರಿದ ಆಹಾರ ವಿತರಣೆ ಆಗುತ್ತಿದ್ದರೂ ಇವೆಲ್ಲ ಕಂಡು ಕಾಣದಂತೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಕೆಡಿಪಿ ಸದಸ್ಯ ಇಸ್ಮಾಯಿಲ್‌ಗೆ ಮಾಹಿತಿ ನೀಡಿದ್ದು, ಇದರಿಂದ ಅರಕಲಗೂಡು ತಾಲೂಕಿನ ಹಲವೆಡೆ ಅಂಗನವಾಡಿಗಳಿಗೆ ಇಸ್ಮಾಯಿಲ್ ದಿಢೀರ್ ಭೇಟಿ ನೀಡಿದ್ದಾರೆ. ಈ ವೇಳೆ ಅಂಗನವಾಡಿಗಳಲ್ಲಿ ಅವಧಿ ಮೀರಿದ ಚಿಕ್ಕಿ ಇರುವುದು ಪತ್ತೆಯಾಗಿದೆ. ಇದನ್ನೂ ಓದಿ: ಆರೋಪ ಮಾಡುವುದೇ ಬಿಜೆಪಿ ಕೆಲಸ: ಸತೀಶ್‌ ಜಾರಕಿಹೊಳಿ

    ಹಣ ಹೊಡೆಯುವ ಉದ್ದೇಶದಿಂದ ಅವಧಿ ಮೀರಿದ ಚಿಕ್ಕಿಯನ್ನು ವಾಪಸ್ ಕಳುಹಿಸದೇ, ಮಕ್ಕಳು ಹಾಗೂ ಬಾಣಂತಿಯರಿಗೆ ವಿತರಿಸುತ್ತಾರೆ ಎಂಬ ಗಂಭಿರ ಆರೋಪ ಕೇಳಿ ಬಂದಿದೆ. ಈ ಅವಧಿ ಮೀರಿದ ಚಿಕ್ಕಿಯನ್ನೇ ಮಕ್ಕಳಿಗೆ ನೀಡುತ್ತಿರುವುದರ ಹಿಂದೆ ಅಧಿಕಾರಿಗಳು, ಗುತ್ತಿಗೆದಾರರ ಕೈವಾಡ ಇರುವುದಾಗಿಯೂ ಆರೋಪ ಕೇಳಿ ಬಂದಿದೆ. ಈ ಅವಧಿ ಮೀರಿದ ಚಿಕ್ಕಿಯನ್ನು ತಿಂದರೆ ಮಕ್ಕಳು ಹಾಗೂ ಬಾಣಂತಿಯರ ಆರೋಗ್ಯದ ಪರಿಸ್ಥಿತಿ ಏನಾಗಬೇಕು ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಯಲ್ಲಿ ನಿಯಮ ಉಲ್ಲಂಘನೆ ಆರೋಪ – ಸಿದ್ದರಾಮಯ್ಯಗೆ ಸಮನ್ಸ್

    ಸರ್ಕಾರವೇನೋ ಮಕ್ಕಳು, ಬಾಣಂತಿಯರಿಗೆ ಪೌಷ್ಟಿಕ ಆಹಾರ ನೀಡುವ ಹೆಸರಲ್ಲಿ ಕೋಟಿ ಕೋಟಿ ರೂ. ಹಣ ಖರ್ಚು ಮಾಡುತ್ತಿದೆ. ಆದರೆ ಅವಧಿ ಮೀರಿದ ಆಹಾರ ನೀಡಿದರೆ ಅದು ಹೇಗೆ ಪೌಷ್ಟಿಕ ಆಹಾರವಾಗುತ್ತೆ? ಆ ರೀತಿಯ ಆಹಾರದಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು. ಇನ್ನಾದರೂ ಸರ್ಕಾರ ಮತ್ತು ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿದರೆ ಒಳ್ಳೆಯದು.