Tag: Anil Swarup

  • ಸಿಬಿಎಸ್‍ಇ 12 ನೇ ತರಗತಿಯ ಫಲಿತಾಂಶ ಶನಿವಾರ ಪ್ರಕಟ

    ಸಿಬಿಎಸ್‍ಇ 12 ನೇ ತರಗತಿಯ ಫಲಿತಾಂಶ ಶನಿವಾರ ಪ್ರಕಟ

    ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‍ಇ) 12 ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ನಾಳೆ ಪ್ರಕಟ ಮಾಡಲಿದೆ.

    2017-18 ನೇ ಶೈಕ್ಷಣಿಕ ವರ್ಷದ ಸಿಬಿಎಸ್ ಇ 12 ನೇ ತರಗತಿಯ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಕೇಂದ್ರ ಶಾಲಾ ಶಿಕ್ಷಣ ಕಾರ್ಯದರ್ಶಿ ಅನಿಲ್ ಸ್ವರೂಪ್ ಟ್ವಿಟರ್ ನಲ್ಲಿ ಹೇಳಿದ್ದಾರೆ.

    ಫಲಿತಾಂಶವನ್ನು ಸಮಚಿತ್ತದಿಂದ ಸ್ವೀಕಾರ ಮಾಡಿ. ಈ ಫಲಿತಾಂಶವೇ ಜಗತ್ತಿನ ಕೊನೆಯಲ್ಲ. ಚೆನ್ನಾಗಿ ಪರೀಕ್ಷೆ ಬರೆದಿದ್ದಲ್ಲಿ ಆತ್ಮ ವಿಶ್ವಾಸದಿಂದಿರಿ. ಫಲಿತಾಂಶದಲ್ಲಿ ಏರುಪೇರಾದರೂ ಮುಂದಿನ ಭವಿಷ್ಯಕ್ಕೆ ಮಾರ್ಗದರ್ಶನ ದೊರೆಯುತ್ತದೆ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

    ಸುಮಾರು 11,86,306 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ. ಭಾರತದ 4,138 ಕೇಂದ್ರಗಳಲ್ಲಿ, ವಿದೇಶದ 71 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

     cbse.examresults.net, cbseresults.nic.in, results.gov.in  ವೆಬ್ ಸೈಟ್ ಗಳಲ್ಲಿ ಫಲಿತಾಂಶ ನೋಡಬಹುದಾಗಿದೆ.