ಬೆಂಗಳೂರು: ಪಶು ಸಂಗೋಪನೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಮಾಡಿದ ಶಿಕ್ಷಕನನ್ನು ಪೊಲಿಸರು ಬಂಧಿಸಿದ್ದಾರೆ.
ಬಂಧತನನ್ನು ಜ್ಞಾನದೇವ್ ಜಾಧವ್ ಎಂದು ಗುರುತಿಸಲಾಗಿದ್ದು, ಈತನನ್ನು ಸಂಜಯ್ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪಶು ಸಂಗೋಪನೆ ಸಚಿವರು ನನಗೆ ಆಪ್ತರು ಅಂತಾ ಹೇಳಿ ಅಭ್ಯರ್ಥಿಗಳಿಗೆ ವಂಚಿಸಿದ್ದಾನೆ.
ಜ್ಞಾನದೇವ್ ಜಾಧವ್ ಇಲಾಖೆಯ ಎಫ್‍ಡಿಎ, ಎಸ್‍ಡಿಎ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ನಕಲಿ ಆದೇಶ ಪ್ರತಿ ಸೃಷ್ಟಿ ಮಾಡಿದ್ದ. ಅಲ್ಲದೆ ಪಶುಸಂಗೋಪನೆ ಇಲಾಖೆಯ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಆದೇಶ ಮತ್ತು ಹೆಸರನ್ನ ನಕಲಿ ಮಾಡಿ ದಾಖಲೆ ಸೃಷ್ಟಿಸಿದ್ದ. ನೇಮಕಾತಿ ಪ್ರಕ್ರಿಯೆ ಯನ್ನ ಥೇಟ್ ಸರ್ಕಾರಿ ನೇಮಕಾತಿ ಯಂತೆ ನಡೆಸಿದ್ದ.
ಜುಲೈ 30ರ ಒಳಗೆ ಅಕ್ಷೇಪಗಳಿದ್ದರೆ ಅರ್ಜಿ ಸಲ್ಲಿಸುವಂತೆ ಇಲಾಖೆ ಹೆಸರಿನಲ್ಲಿ ಆದೇಶ ಹೊರಡಿಸಿದ್ದ. ಹೀಗೆ ಹುದ್ದೆಗೆ ಅರ್ಜಿ ಸಲ್ಲಿಸಿದ 63 ಅಭ್ಯರ್ಥಿಗಳಿಂದ ತಲಾ 2 ಲಕ್ಷ ಹಣ ಪಡೆದಿದ್ದ. ಕೆಲ ಅಭ್ಯರ್ಥಿಗಳು ಇಲಾಖೆಯನ್ನ ಸಂಪರ್ಕಿಸಿದಾಗ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ಜಾಧವ್ ವಿರುದ್ಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು:ಹಲವು ಗದ್ದಲಗಳ ನಡುವೆಯೂ ದೋಸ್ತಿ ಸರ್ಕಾರದ ಸಿಎಂ ಹೆಚ್.ಡಿ.ಕುಮಾರಸ್ವಾಮಿ 2019-20ರ ಸಾಲಿನ ಅಯವ್ಯಯವನ್ನು ಮಂಡಿಸಿದ್ದಾರೆ.
ರೇಷ್ಮೆ ವಲಯದ ಸುಧಾರಣೆಗೆ ರೂಪಿಸಲಾದ ಯೋಜನೆಗಳು:
* ಪ್ರಗತಿಪರ ರೇಷ್ಮೆ ಕೃಷಿಕರ ಮೂಲಕ ರೇಷ್ಮೆ ವಿಸ್ತರಣಾ ಕಾರ್ಯಕ್ರಮಕ್ಕೆ 2 ಕೋಟಿ ರೂ. ಅನುದಾನ.
* ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಬಲಪಡಿಸಲು 10 ಕೋಟಿ ರೂ. ಅನುದಾನ.
* ಸಂತೇಮರಹಳ್ಳಿ ರೇಷ್ಮೆ ಕಾರ್ಖಾನೆ ಆಧುನೀಕರಣ ಹಾಗೂ ಯುವಕರಿಗೆ ತರಬೇತಿ ನೀಡಲು 2 ಕೋಟಿ ರೂ. ಅನುದಾನ.
* ಚಾಮರಾಜನಗರ ರೇಷ್ಮೆ ಕಾರ್ಖಾನೆಯ ಪುನಶ್ಚೇತನಕ್ಕೆ 5 ಕೋಟಿ ರೂ. ಅನುದಾನ.
* ರಾಮನಗರ ಮತ್ತು ಹಾವೇರಿ ರೇಷ್ಮೆ ಮಾರುಕಟ್ಟೆ ಆಧುನೀಕರಣ ಮತ್ತು ಬಲವರ್ಧನೆಗೆ 10 ಕೋಟಿ ರೂ. ಅನುದಾನ.
* ಚನ್ನಪಟ್ಟಣದ ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೋರೇಷನ್‍ನ ಫಿಲೇಚರ್ ಕಾರ್ಖಾನೆ ಆವರಣದ ಎಂಪೋರಿಯಂನಲ್ಲಿ ಕರ್ನಾಟಕದ ರೇಷ್ಮೆ ವಲಯದ ಸಾಧನೆಗಳ ಪ್ರದರ್ಶನ ಹಾಗೂ ರೇಷ್ಮೆ ಉತ್ಪನ್ನಗಳ ಮಾರಾಟಕ್ಕೆ ಉತ್ತೇಜನ ನೀಡಲು 10 ಕೋಟಿ ರೂ. ಅನುದಾನ.
ಪಶುಸಂಗೋಪನೆ:
* ರಾಜ್ಯದ 15 ಜಿಲ್ಲೆಗಳಲ್ಲಿ ಸುಸಜ್ಜಿತ ಪಶುಚಿಕಿತ್ಸಾ ವಾಹನ ಒದಗಿಸಲು 2 ಕೋಟಿ ರೂ. ಅನುದಾನ.
* 5 ಕೋಟಿ ರೂ. ವೆಚ್ಚದಲ್ಲಿ 10,000 ಬಡ ನಿರುದ್ಯೋಗಿ ಯುವಕ-ಯುವತಿಯರಿಗೆ ‘ನಾಟಿ ಕೋಳಿ ಸಾಕಾಣಿಕೆ’ಗೆ ಪ್ರೋತ್ಸಾಹ.
* ದೇಶೀಯ ಕುರಿ ತಳಿಗಳಲ್ಲಿ ಅವಳಿ-ಜವಳಿ ಸಂತಾನೋತ್ಪತ್ತಿಯನ್ನು ಅಭಿವೃದ್ಧಿಗೊಳಿಸುವ ಯೋಜನೆಗೆ ಪ್ರಯೋಗಾಲಯ ಸ್ಥಾಪನೆಗೆ 2 ಕೋಟಿ ರೂ. ಅನುದಾನ. ರಾಜ್ಯದಲ್ಲಿ ಮಂಗನ ಕಾಯಿಲೆಯ ಲಸಿಕೆ ತಯಾರಿಕೆಗೆ ಬೆಂಬಲ ನೀಡಲು 5 ಕೋಟಿ ರೂ. ಅನುದಾನ.
* ರಾಜ್ಯದಲ್ಲಿ ಹಾಲು ಉತ್ಪಾದಕರ ಪ್ರೋತ್ಸಾಹ ಧನ 5 ರೂ. ನಿಂದ 6 ರೂ. ಗಳಿಗೆ ಹೆಚ್ಚಳ
* 1459 ಕೋಟಿ ರೂ. ವೆಚ್ಚ. ಕ್ಷೀರಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ 638 ಕೋಟಿ ರೂ. ಹಾಗೂ ಅಂಗನವಾಡಿ ಮಕ್ಕಳಿಗೆ 405 ಕೋಟಿ ರೂ. ವೆZ್ಚÀ.
* ಹಾಲು ಉತ್ಪಾದಕರ ಕ್ಷೇಮಾಭಿವೃದ್ಧಿಗೆ ಒಟ್ಟು 2502 ಕೋಟಿ ರೂ. ವಿನಿಯೋಗ.
ಮೀನುಗಾರಿಕೆ:
* ಮೀನುಗಾರಿಕೆ ದೋಣಿಗಳಿಗೆ ಇಸ್ರೋ ಅಧಿಕೃತಗೊಳಿಸಿರುವ ಡಿ.ಎ.ಟಿ. ಉಪಕರಣ ಅಳವಡಿಸಿಕೊಳ್ಳಲು ಶೇ.50 ರಷ್ಟು ಸಹಾಯಧನ 3 ಕೋಟಿ ರೂ. ಅನುದಾನ.
* ಒಳನಾಡು ಮತ್ತು ಹಿನ್ನೀರು ಜಲಸಂಪನ್ಮೂಲದಲ್ಲಿ ಸಿಗಡಿ ಮತ್ತು ಮೀನು ಕೃಷಿಗೆ ಪ್ರೋತ್ಸಾಹ. 400 ಘಟಕಗಳಿಗೆ ಸಹಾಯಧನ ನೀಡಲು 2 ಕೋಟಿ ರೂ. ಅನುದಾನ.
* ಒಳನಾಡಿನ ಕೆರೆಗಳಲ್ಲಿನ ಮೀನುಗಾರಿಕೆ ಗುತ್ತಿಗೆಗಳನ್ನು ಸಂಘ-ಸಂಸ್ಥೆಗಳ ಬದಲು ಸ್ಥಳೀಯ ಮೀನುಗಾರರಿಗೆ ಮೀಸಲಿಡುವ ಕುರಿತು ಪರಿಶೀಲನೆ.
* ಮತ್ಸ್ಯಾಶ್ರಯ ಯೋಜನೆ ಮುಂದುವರಿಕೆ; ಪ್ರಗತಿಯಲ್ಲಿರುವ 2500 ಮನೆಗಳನ್ನು ಪೂರ್ಣಗೊಳಿಸಲು ಕ್ರಮ.
* ಉಡುಪಿ ಜಿಲ್ಲೆಯ ಮಲ್ಪೆ ಕಡಲು ತೀರದ ಮೀನುಗಾರಿಕೆ ಚಟುವಟಿಕೆಗಳ ಅಭಿವೃದ್ಧಿಗೆ ಜೆಟ್ಟಿ ನಿರ್ಮಾಣ, ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಇತರೆ ನೈರ್ಮಲ್ಯ ಸೌಲಭ್ಯಗಳನ್ನು ಅಭಿವೃದ್ಧಿಗೆ 15 ಕೋಟಿ ರೂ. ಅನುದಾನ.
* ರಾಜ್ಯದಲ್ಲಿ ಡೀಸಲ್ ಮತ್ತು ಸೀಮೆಎಣ್ಣೆ ಪಾಸ್‍ಬುಕ್ ಪಡೆದಿರುವ ದೋಣಿಗಳಿಗೆ ಡೀಸಲ್ ಮತ್ತು ಸೀಮೆಎಣ್ಣೆ ಸಬ್ಸಿಡಿ ನೀಡಲು 148.5 ಕೋಟಿ ರೂ. ಅನುದಾನ.