Tag: Anirudh

  • ಸಮಾಜದಲ್ಲಿ ಮಹಿಳೆಯಾಗಿ ಇರುವುದೇ ಅಪರಾಧನಾ?: ಅನುಷ್ಕಾ ಶೆಟ್ಟಿ ಆಕ್ರೋಶ

    ಸಮಾಜದಲ್ಲಿ ಮಹಿಳೆಯಾಗಿ ಇರುವುದೇ ಅಪರಾಧನಾ?: ಅನುಷ್ಕಾ ಶೆಟ್ಟಿ ಆಕ್ರೋಶ

    ಹೈದರಾಬಾದ್: ತೆಲಂಗಾಣದಲ್ಲಿ ನಡೆದ ಪಶುವೈದ್ಯೆ ಹತ್ಯೆ ಪ್ರಕರಣ ಇಡೀ ದೇಶವನ್ನೇ ನಡುಗಿಸಿತ್ತು. ಪಶುವೈದ್ಯೆಯ ಹತ್ಯೆಯ ವಿರುದ್ಧ ನಟಿ ಅನುಷ್ಕಾ ಶೆಟ್ಟಿ ಸೇರಿದಂತೆ ದಕ್ಷಿಣ ಭಾರತದ ಕಲಾವಿದರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ನಟಿ ಅನುಷ್ಕಾ ಶೆಟ್ಟಿ ತಮ್ಮ ಇನ್‍ಸ್ಟಾದಲ್ಲಿ, ಅಮಾಯಕಿ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರ ನಡೆಸಿ ಕೊಲ್ಲಲಾಗಿದೆ. ಇದು ಇಡೀ ಮನುಕುಲವನ್ನೇ ಕದಲಿಸುವ ವಿಚಾರ. ಪೈಶಾಚಿಕ ಕೃತ್ಯವೆಸಗಿ ಪ್ರಿಯಾಂಕಾಳನ್ನು ಕೊಂದ ಪಾಪಿಗಳನ್ನು ಪ್ರಾಣಿಗಳಿಗೆ ಹೋಲಿಸಿದರೆ ಅವು ಕೂಡ ನಾಚಿಕೆ ಪಟ್ಟುಕೊಳ್ಳುತ್ತವೆ ಎಂದಿದ್ದಾರೆ. ಅಲ್ಲದೆ ಈ ಸಮಾಜದಲ್ಲಿ ಮಹಿಳೆಯಾಗಿ ಇರುವುದೇ ಅಪರಾಧನಾ ಎಂದು ಪ್ರಶ್ನಿಸಿದ್ದಾರೆ. ಶಿಕ್ಷೆ ಆಗೋವರೆಗೂ ಹೋರಾಟ ನಡೆಸೋಣ ಎಂದು ಪಶುವೈದ್ಯೆಯ ದಾರುಣ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಪಶುವೈದ್ಯೆಯನ್ನ ಗ್ಯಾಂಗ್‍ರೇಪ್ ಮಾಡಿ, ಕೊಲೆ – 25 ಕಿ.ಮೀ ದೂರ ಶವವೊಯ್ದು ಸುಟ್ಟರು

     

    View this post on Instagram

     

    #RIPPriyankaReddy ????

    A post shared by Anushka Shetty (@anushkashettyofficial) on

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಕೂಡ ತಮ್ಮ ಟ್ವಿಟ್ಟರಿನಲ್ಲಿ, ಸುರಕ್ಷತೆ ಎಲ್ಲಿದೆ? ಕೆಟ್ಟ ವಿಷಯಗಳು ಹಾಗೂ ಹಿಂಸಾಚಾರವನ್ನು ನಿರ್ಲಕ್ಷ್ಯಿಸುವುದರಿಂದ ಪರಿಹಾರ ಸಿಗುವುದಿಲ್ಲ. ನಿಮಗೆ ಅಸುರಕ್ಷತೆ ಎನಿಸಿದಾಗ ದಯವಿಟ್ಟು ಸಹಾಯಕ್ಕಾಗಿ ತಲುಪಿ. ಹಾಗೆಯೇ ನಿಮ್ಮ ಸಹಾಯದ ಅಗತ್ಯ ಇರುವವರ ಜೊತೆ ಇರಿ ಎಂದು ತೆಲಂಗಾಣ ರಾಜ್ಯದ ಪ್ರತಿ ಜಿಲ್ಲೆಯ ಪೊಲೀಸ್ ಠಾಣೆ ಫೋನ್ ನಂಬರ್ ಹಾಗೂ ಇಮೇಲ್ ಐಡಿ ಇರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಪಶುವೈದ್ಯೆಯನ್ನ ಕೊಲೆಗೈದ ಜಾಗದ ಸಮೀಪದಲ್ಲೇ ಸಿಕ್ತು ಮತ್ತೋರ್ವ ಮಹಿಳೆ ಶವ

    ನಟ ಅನಿರುದ್ಧ್ ಅವರು ಕೂಡ ತಮ್ಮ ಎಫ್‍ಬಿಯಲ್ಲಿ, ವಿಕೃತ ಮನಸ್ಸುಗಳು ಬದಲಾಗುವವರೆಗೂ ಇಂತಹ ಹೇಯ ಕೃತ್ಯ ನಿಲ್ಲದು. ಹೆಣ್ಣನ್ನು ನೋಡಿದಾಗ ಹೆತ್ತವಳು ನೆನಪಾಗಬೇಕೇ ಹೊರತು ಕೆಟ್ಟ ಆಲೋಚನೆಗಳಲ್ಲ. ಅಕ್ಕ- ತಂಗಿಯರ ಮನಸ್ಸು, ದೇಹ ಸುಟ್ಟು ಅದ್ಯಾವ ಸುಖವ ಪಡೆವರೋ. ಆ ದಿನ ರಾತ್ರಿ ಆ ಹೆಣ್ಣು ಮಗಳು ಇದ್ದ ಸ್ಥಿತಿಯ ಅರೆ ಕ್ಷಣ ಊಹಿಸಿಕೊಂಡರೂ ಮುಂದಿನ ಕ್ಷಣದ ಊಹೆ ಬೇಡವೆನಿಸುವುದು. ಹೆಣ್ಣೆಂದರೆ ಪೂಜಿಸುವ ಪವಿತ್ರವಾದ ದೇವರ ಸೃಷ್ಟಿಯೇ ಹೊರತು ತಿಂದು ಬಿಸಾಡುವ ಹಣ್ಣಲ್ಲ.

    ಆ ಹೆಣ್ಣು ಮಗಳ ಮತ್ತೆ ಬದುಕಿಸಲು ಯಾರಿಂದಲೂ ಸಾಧ್ಯವಿಲ್ಲವೆಂಬುದು ತಿಳಿದಿದೆ. ಆದರೆ ಕನಿಷ್ಟ ಪಕ್ಷ ಕಠಿಣ ಶಿಕ್ಷೆಯಿಂದಾದರೂ ಬೇರೆ ಕ್ರೂರ ಮನಸ್ಸುಗಳ ಒಳಗೆ ಭಯ ಮೂಡಿ ಮುಂದೆಂದೂ ಇಂತಹ ಹೇಯ ಕೃತ್ಯ ನಡೆಯದಿರಲಿ. ಹೆತ್ತವಳು ಹೆಣ್ಣು. ಜೊತೆಯಲ್ಲಿ ಹುಟ್ಟುವವಳು ಹೆಣ್ಣು. ಜೊತೆಯಾಗುವವಳು ಹೆಣ್ಣು. ನಮ್ಮ ಪ್ರತಿರೂಪವ ಹಡೆವವಳು ಹೆಣ್ಣು. ರಸ್ತೆಯಲ್ಲಿ ಒಬ್ಬ ಹೆಣ್ಣನ್ನು ನೋಡಿದಾಗ ಪ್ರತಿಯೊಬ್ಬ ಗಂಡು ಅಣ್ಣನಾಗಿ ನಿಂತರೆ ಯಾವ ಹೆಣ್ಣಿಗೂ ಇಂತಹ ಸ್ಥಿತಿ ಬಾರದು. ಕೆಟ್ಟ ಮನಸ್ಸುಗಳು ಬದಲಾಗಲಿ. ಕೆಟ್ಟ ಆಲೋಚನೆಗಳು ಬದಲಾಗಲಿ. ಕಷ್ಟವಾದರೂ, ಆ ತಂದೆ ತಾಯಿಗೆ ನೋವ ತಡೆಯುವ ಶಕ್ತಿ ನೀಡಿ ಬಿಡಲಿ ಭಗವಂತ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

    ಪಶುವೈದ್ಯೆಯ ಹತ್ಯೆಗೆ ಭಾರತೀಯ ಚಿತ್ರರಂಗದ ಕಲಾವಿದರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

  • ವಿಷ್ಣು ಸ್ಮಾರಕ ಅಭಿಮಾನಿಗಳಿಗೆ ಅರ್ಪಣೆ – ಭಾರತಿ ವಿಷ್ಣುವರ್ಧನ್

    ವಿಷ್ಣು ಸ್ಮಾರಕ ಅಭಿಮಾನಿಗಳಿಗೆ ಅರ್ಪಣೆ – ಭಾರತಿ ವಿಷ್ಣುವರ್ಧನ್

    ಮೈಸೂರು: ಜಿಲ್ಲೆಯ ಹಾಲಾಳು ಗ್ರಾಮದಲ್ಲಿ ನಿರ್ಮಾಣವಾಗಲಿರುವ ವಿಷ್ಣು ಸ್ಮಾರಕವನ್ನು ವಿಷ್ಣುವರ್ಧನ್ ಅವರ ಅಭಿಮಾನಿಗಳಿಗೆ ಅರ್ಪಣೆ ಮಾಡುತ್ತಿದ್ದೇವೆ. ವಿಷ್ಣುವರ್ಧನ್ ಕನಸು ಕೂಡ ಇದೆ ಆಗಿತ್ತು ಎಂದು ಹಿರಿಯ ನಟಿ, ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ.

    ಮೈಸೂರಿನ ಹಾಲಾಳು ಗ್ರಾಮದಲ್ಲಿ ನಿರ್ಮಾಣವಾಗಲಿರುವ ವಿಷ್ಣು ಸ್ಮಾರಕ ಪ್ರದೇಶವನ್ನು ಭಾರತಿ ವಿಷ್ಣುವರ್ಧನ್ ವೀಕ್ಷಿಸಿದರು. ಸುಮಾರು 5 ಎಕರೆ ವ್ಯಾಪ್ತಿಯ 11 ಕೋಟಿ ವೆಚ್ಚದಲ್ಲಿ ಈ ಸ್ಮಾರಕ ನಿರ್ಮಾಣವಾಗುತ್ತಿದೆ. ಕಳೆದ 10 ವರ್ಷದಿಂದ ಈ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಪುನಃ ಆರಂಭವಾಗಿರುವ ಕಾಮಗಾರಿಯನ್ನು ನೋಡಲು ಬಂದ ಭಾರತಿ ಅವರು ಸ್ಥಳೀಯರು ಹಾಗೂ ಅಧಿಕಾರಿಗಳ ಜೊತೆ ಸ್ಮಾರಕ ನಿರ್ಮಾಣದ ಕುರಿತು ಮಾಹಿತಿ ಪಡೆದರು.

    ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 11 ಕೋಟಿ ವೆಚ್ಚದಲ್ಲಿ ಸ್ಮಾರಕ ಹಾಗೂ ಮ್ಯೂಸಿಯಂ ನಿರ್ಮಾಣವಾಗುತ್ತಿದೆ. ಸರ್ಕಾರದಿಂದ ಈ ಹಣ ಹಂತ ಹಂತವಾಗಿ ಬಿಡುಗಡೆ ಆಗಲಿದೆ. ಮೊದಲು ನಾವು ಈ ಜಾಗದಲ್ಲಿದ್ದವರಿಗೆ ಮಾನವೀಯತೆಯಿಂದ ಹಣ ಕೊಡುತ್ತೇವೆ ಎಂದು ಹೇಳಲಾಗಿತ್ತು. ಆದರೆ ಸ್ಥಳೀಯರು ಇಂದು ಆಗೋದಿಲ್ಲ ಹೋರಾಟ ಮಾಡುತ್ತೀವಿ ಎಂದರು. ಆದರೆ ಈಗ ಇದು ಸರ್ಕಾರದ ಜಾಗವಾಗಿದೆ. ಹಾಗಾಗಿ ಈಗ ಅವರಿಗೆ ಮಾನವೀಯತೆಯಿಂದ ಹಣ ಕೊಡುವ ಅವಶ್ಯಕತೆ ಇಲ್ಲ. ನಾವು ಕೊಡೋದಿಲ್ಲ, ಸರ್ಕಾರವೂ ಕೊಡಲ್ಲ. ಈ ಸ್ಮಾರಕ ಅಭಿಮಾನಿಗಳು ಹಾಗೂ ವಿಷ್ಣು ಅವರಿಗೆ ಅರ್ಪಿಸುತ್ತೇವೆ. ವಿಷ್ಣುವರ್ಧನ್ ಅವರ ಕನಸು ಕೂಡ ಇದೆ ಆಗಿತ್ತು ಎಂದು ಹೇಳಿದ್ದಾರೆ.

    ಈ ವೇಳೆ ಮಾತನಾಡಿದ ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ್ ಮಾತನಾಡಿ, ಮೈಸೂರಿನಲ್ಲಿ ಸ್ಮಾರಕ ಆಗ್ತಿರೋದು ತುಂಬಾನೇ ಖುಷಿಯಾಗಿದೆ. ಅಪ್ಪಾಜಿಯವರ ಕನಸು ಕೂಡ ಇದೇ ಆಗಿತ್ತು. ಇದು ಕೇವಲ ಸ್ಮಾರಕವಲ್ಲ, ಇದೊಂದು ರಾಜ್ಯದ ಮಾಡೆಲ್. ರಂಗ ತರಬೇತಿಯಿಂದ ಹಿಡಿದು ಸಿನಿಮಾಗೆ ಸಂಬಂಧಿಸಿದ ಎಲ್ಲ ರೀತಿಯ ಟ್ರೈನಿಂಗ್ ಇಲ್ಲಿ ಇರುತ್ತದೆ. ದಕ್ಷಿಣ ಭಾರತದಲ್ಲಿ ಇದೊಂದು ಉತ್ತಮವಾದ ಮ್ಯೂಸಿಯಂ ಆಗಬೇಕಿದೆ. 10 ವರ್ಷಗಳ ಕಾಲ ನಡೆದ ಹೋರಾಟದ ಫಲ ಇಂದು ದೊರಕಿದೆ. ಎರಡು ವರ್ಷದಲ್ಲಿ ಸ್ಮಾರಕ ಹಾಗೂ ಮ್ಯೂಸಿಯಂ ಮುಕ್ತಾಯವಾಗಲಿದೆ ಎಂದು ತಿಳಿಸಿದರು.

  • ಅಪ್ಪಾಜಿಯನ್ನ ವಿರೋಧಿಸಿದವರೇ ನಮ್ಮನ್ನು ಕಡೆಗಣಿಸುತ್ತಿದ್ದಾರೆ: ವಿಷ್ಣು ಪುತ್ರಿ

    ಅಪ್ಪಾಜಿಯನ್ನ ವಿರೋಧಿಸಿದವರೇ ನಮ್ಮನ್ನು ಕಡೆಗಣಿಸುತ್ತಿದ್ದಾರೆ: ವಿಷ್ಣು ಪುತ್ರಿ

    ಬೆಂಗಳೂರು: ಅಪ್ಪಾಜಿ ಅವರನ್ನು ವಿರೋಧಿಸುತ್ತಿದ್ದವರೇ ಈಗ ಅವರ ಕುಟುಂಬವನ್ನು ಕಡೆಗಣಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಷ್ಣುವರ್ಧನ್ ಪುತ್ರಿ ಕೀರ್ತಿ ಅನಿರುದ್ಧ್ ಗಂಭೀರವಾಗಿ ಆರೋಪಿಸಿದರು.

    ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಪ್ಪನ ಬಗ್ಗೆ ಗೊತ್ತಿರುವವರು ನಮ್ಮ ಕುರಿತು ಹಗುರವಾಗಿ ಮಾತನಾಡುತ್ತಿರಲಿಲ್ಲ. ಕೆ.ಮಂಜು ಅವರು ಮಾಧ್ಯಮಗಳ ಮುಂದೆ ಮಾತ್ರ ಮಾತನಾಡುತ್ತಾರೆ. ನಮ್ಮ ಬಳಿಗೆ ಬಂದು ಯಾವತ್ತೂ ಚರ್ಚೆ ಮಾಡಿಲ್ಲ. ತಮಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

    ಅಪ್ಪ ಏನು ಅಂತಾ ನನಗೆ ಗೊತ್ತು. ಅವರ ಪ್ರತಿ ಅಭಿಮಾನಿಗಳ ಬಗ್ಗೆ ಮಾಹಿತಿಯಿದೆ. ನಮ್ಮನ್ನು ಯಾಕೆ ಇಷ್ಟು ದ್ವೇಷಿಸುತ್ತಿದ್ದಾರೆ, ಗುರಿ ಮಾಡುತ್ತಿದಾರೆ ಎನ್ನುವುದೇ ಅರ್ಥವಾಗುತ್ತಿಲ್ಲ ಎಂದ ಅವರು, ವೀರಕಪುತ್ರ ಶ್ರೀನಿವಾಸ್ ಅವರನ್ನು ನಾನು ನೇರವಾಗಿ ನೋಡಿಲ್ಲ. ಆದರೂ ಸ್ಮಾರಕ ವಿಚಾರದಲ್ಲಿ ಮಾಧ್ಯಮಗಳ ಮುಂದೆ ಮಾತನಾಡುತ್ತಿದ್ದಾರೆ ಎಂದು ದೂರಿದರು. ಇದನ್ನು ಓದಿನಿಮಗೆ ಏನು ಅನ್ನಿಸುತ್ತೆ ಹಾಗೆಯೇ ಮಾಡಿ: ಭಾರತಿ ವಿಷ್ಣುವರ್ಧನ್

    ಕಳೆದ 9 ವರ್ಷಗಳಿಂದ ಮುಖ್ಯಮಂತ್ರಿಗಳಿಗೆ ಮನವಿ ಪತ್ರಗಳನ್ನು ನೀಡುತ್ತಲೇ ಬಂದಿದ್ದೇವೆ. ಅಪ್ಪನ ಸ್ಮಾರಕದ ಯಾರೊಬ್ಬರೂ ಮಾತನಾಡಲಿಲ್ಲ. ಸಿಎಂ ಗಳು ಬದಲಾಗುತ್ತಾ ಬಂದರೇ ಹೊರತು, ಯಾರೊಬ್ಬರೂ ಸ್ಮಾರಕದ ಬಗ್ಗೆ ಯೋಚನೆ ಮಾಡಲಿಲ್ಲ. ಕುಮಾರಸ್ವಾಮಿ ಅವರು ಈಗ ನೀಡಿರುವ ಭರವಸೆಯನ್ನು ಈ ಹಿಂದೆಯೇ ನೀಡಬಹುದಿತ್ತು. ನಮ್ಮನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸಿದರು ಎಂದು ಕಿಡಿಕಾರಿದರು.

    ಸ್ಮಾರಕ ನಿರ್ಮಾಣ ಮಾಡಿದರೆ ನಮಗೆ ಏನು ಸಿಗುತ್ತದೆ. ನಾವೇನು ಅಲ್ಲಿಯೇ ಇರುತ್ತೀವಾ? ಕೆಲವರು ಅಪ್ಪಾಜಿಯನ್ನು ಕಡೆಗಣಿಸುತ್ತಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡುವವರು ನಮ್ಮ ಜೊತೆಗೆ ಕುಳಿತು ಚರ್ಚೆ ಮಾಡಲಿ. ಪರಿಸ್ಥಿತಿ ಏನು ಎನ್ನುವುದು ಅರ್ಥವಾಗುತ್ತದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ನಿಮಗೆ ಏನು ಅನ್ನಿಸುತ್ತೆ ಹಾಗೆಯೇ ಮಾಡಿ: ಭಾರತಿ ವಿಷ್ಣುವರ್ಧನ್

    ನಿಮಗೆ ಏನು ಅನ್ನಿಸುತ್ತೆ ಹಾಗೆಯೇ ಮಾಡಿ: ಭಾರತಿ ವಿಷ್ಣುವರ್ಧನ್

    -ಭಗವಂತನ ಇಚ್ಛೆ ಏನ್ ಇದೆಯೋ ಅದೇ ಆಗಲಿ

    ಬೆಂಗಳೂರು: ನಿಮಗೆ ಏನು ಎನಿಸುತ್ತದೆ ಹಾಗೆಯೇ ಮಾಡಿ ಎಂದು ಸರ್ಕಾರಕ್ಕೆ ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿಷ್ಣುಗೆ ಸ್ಮಾರಕವೇ ಬೇಕಿಲ್ಲ. ಕುಲಕೋಟಿ ಅಭಿಮಾನಿಗಳ ಪ್ರೀತಿ ಸಿಕ್ಕಿದೆ ಅಷ್ಟೇ ಸಾಕು ಎಂದು ಮಾತು ಶುರು ಮಾಡುತ್ತಲೇ ಭಾರತಿ ವಿಷ್ಣುವರ್ಧನ್  ಭಾವುಕರಾದರು.

    ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಅಂತ್ಯಸಂಸ್ಕಾರದ ಬಳಿಕ ಸ್ಮಾರಕದ ಬಗ್ಗೆ ಯಾರು ಮಾತನಾಡಿರಲಿಲ್ಲ. ಇದರಿಂದಾಗಿ ನನಗೆ ತುಂಬಾ ಸಂಕಟವಾಗಿತ್ತು. ಬಳಿಕ ನಾನೇ 7 ಲಕ್ಷ ರೂ, ಖರ್ಚು ಮಾಡಿ ಸ್ವಂತ ಹಣದಲ್ಲಿ ಪುಣ್ಯಭೂಮಿ ನಿರ್ಮಿಸಿದ್ದೇವು. ಅಲ್ಲಿ ಆರೋಗ್ಯ ಶಿಬಿರ, ಸಾಂಸ್ಕೃತಿಕ ಚಟುವಟಿಕೆ ನಡೆಸಿ ವಿಷ್ಣುವರ್ಧನ್ ಪುಣ್ಯಭೂಮಿ ಇದೆ ಅಂತಾ ಜನರಿಗೆ ಗೊತ್ತಾಯಿತು ಎಂದು ಹೇಳಿದರು.

    ಅಭಿಮಾನಿಗಳು ಈಗ ಸ್ಮಾರಕದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ರೆಬಲ್ ಸ್ಟಾರ್ ಅಂಬರೀಶ್ ಅವರು ಹಿರಿಯ ಕಲಾವಿದರಿಗೆ ಗೌರವ ಸಲ್ಲಿಸಬೇಕು. ಹೀಗಾಗಿ ವಿಷ್ಣುವರ್ಧನ್ ಅವರ ಸ್ಮಾರಕ ಭವನ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದು ತಿಳಿಸಿದರು.

    ವಿಷ್ಣುಗೆ ಮೈಸೂರು ಅಂದರೆ ತುಂಬಾ ಇಷ್ಟ ಹೀಗಾಗಿ ಮೈಸೂರಿನಲ್ಲಿ ಸ್ಮಾರಕ ಮಾಡಿ ಅಂತ ಕೇಳಿಕೊಳುತ್ತಿದ್ದೇವೆ ಅಷ್ಟೇ. ಅಭಿಮಾನ್ ಸ್ಟುಡಿಯೋದಲ್ಲಿ ಜಾಗ ಸಿಗದ ಕಾರಣಕ್ಕೆ ಸರ್ಕಾರವೇ ಮೈಸೂರಿನಲ್ಲಿ ಜಾಗ ಗೊತ್ತುಪಡಿಸಿದೆ. ಹೀಗಾಗಿ ನಾವು ಮೈಸೂರಿನಲ್ಲಿ ಸ್ಮಾರಕ ನಿರ್ಮಾಣಕ್ಕೆ ಒಪ್ಪಿಕೊಂಡಿದ್ದೇವೆ. ಅಲ್ಲಿಯೂ ಕೂಡ ಅಡ್ಡಿಯಾಗುತ್ತಿದೆ. ಈ ಜಾಗ ನಮಗೆ ಜಾಗಬೇಕು ಎಂದು ರೈತರು ಅಂತಿದ್ದಾರೆ. ಯಾರೊಬ್ಬರೂ ಕಾಳಜಿ ತೆಗೆದುಕೊಳ್ಳದಿದ್ದರೆ ಹೇಗೆ ಸಮಸ್ಯೆ ಬಗೆಹರಿಯುತ್ತದೆ ಎಂದು ಸರ್ಕಾರವನ್ನ ಪ್ರಶ್ನೆ ಮಾಡಿದರು.

    ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಿಕೊಡುವುದಕ್ಕೆ ಆಗಲ್ಲ ಅಂದರೆ ಅಭಿಮಾನ್ ಸ್ಟುಡಿಯೋದಲ್ಲಿಯೇ ಮಾಡಿ ತೊಂದರೆಯಿಲ್ಲ. ನಾನು ಯಾವುದೇ ಒತ್ತಾಯವನ್ನು ಸರ್ಕಾರದ ಮೇಲೆ ಹೇರುವುದಿಲ್ಲ. ಸರ್ಕಾರ ನಿಗದಿಪಡಿಸಿದ ಜಾಗದಲ್ಲೇ ಆಗಲಿ. ಸ್ಮಾರಕದ ವಿಚಾರದಲ್ಲಿ ನಾವು ವಾದ ಮಾಡುವುದಿಲ್ಲ. ಅವರ ಇಚ್ಚೆ ಭಗವಂತನ ಇಚ್ಚೆ ಏನಿದೆಯೋ ಹಾಗೆಯೇ ಆಗಲಿ. ನಿಜವಾದ ಅಭಿಮಾನಿಗಳು ನಮ್ಮ ಜೊತೆ ಇದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಷ್ಣು ಸ್ಮಾರಕದ ಕುರಿತು ಉತ್ತಮ ಸ್ಪಂದನೆ ನೀಡುತ್ತಾರೆಂಬ ನಂಬಿಕೆಯಿದೆ ಅಂತ ಅಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ತಮಿಳು ಗಾಯಕಿಯಿಂದ ಧನುಷ್, ಹನ್ಸಿಕಾ, ರಾಣಾ, ತ್ರಿಶಾ ಖಾಸಗಿ ಫೋಟೋ ಲೀಕ್

    ತಮಿಳು ಗಾಯಕಿಯಿಂದ ಧನುಷ್, ಹನ್ಸಿಕಾ, ರಾಣಾ, ತ್ರಿಶಾ ಖಾಸಗಿ ಫೋಟೋ ಲೀಕ್

    ಚೆನ್ನೈ: ತಮಿಳು ನಟಿ ಕಮ್ ಗಾಯಕಿ ಸುಚಿತ್ರಾ ಕಾರ್ತಿಕ್ ಖಾತೆಯಿಂದ ಸಂಚಿತಾ ಶೆಟ್ಟಿ ವಿಡಿಯೋ ಮಾತ್ರವಲ್ಲ, ಕಾಲಿವುಡ್ ನಟರಾದ ಧನುಷ್, ಹನ್ಸಿಕಾ, ಆಂಡ್ರಿಯಾ ಜರ್ಮಿಯಾ, ದಗ್ಗುಬಾಟಿ ರಾಣಾ, ತ್ರಿಶಾ, ಅನಿರುದ್ಧ್ ಅವರ ಬಣ್ಣವು ಬಯಲಾಗಿದೆ.

    ಧನುಷ್‍ನಿಂದ ನಾನು ಲೈಂಗಿಕ ಕಿರುಕುಳ ಒಳಗಾಗಿದ್ದೇನೆ. ಧನುಷ್ – ಅನಿರುದ್ಧ್ ನೀವು ಅಂದುಕೊಂಡಷ್ಟು ಒಳ್ಳೆಯವರಲ್ಲ ಎನ್ನುವ ಬರಹವಿರುವ ಟ್ವೀಟ್ ಸುಚಿತ್ರಾ ಖಾತೆಯಿಂದ ಪ್ರಕಟವಾಗಿದೆ. ಅಷ್ಟೇ ಅಲ್ಲದೇ ದಗ್ಗುಬಾಟಿ ರಾಣಾ ನಟಿ ತ್ರಿಶಾಗೆ ಮುತ್ತು ನೀಡುತ್ತಿರುವ ಫೋಟೋ ಸುಚಿತ್ರಾ ಖಾತೆಯಿಂದ ಟ್ವೀಟ್ ಆಗಿದೆ.

    ಈ ಬಗ್ಗೆ ತಮಿಳು ನಟಿ ಕಮ್ ಗಾಯಕಿ ಸುಚಿತ್ರಾ ಪತಿ ಕಾರ್ತಿಕ್ ಸ್ಪಷ್ಟನೆ ನೀಡಿ, ತನ್ನ ಪತ್ನಿಯ ಟ್ವಿಟ್ಟರ್ ಅಕೌಂಟ್ ಯಾರೋ ಹ್ಯಾಕ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

    ಈಗ ಸುಚಿತ್ರಾ ಕಾರ್ತಿಕ್ ಟ್ವೀಟ್‍ಗಳು ಡಿಲೀಟ್ ಆಗಿದೆ. ಈ ಟ್ವೀಟ್‍ಗಳು ಡಿಲೀಟ್ ಆಗಿದ್ದರೂ ಸುಚಿತ್ರಾ ಖಾತೆಯಿಂದ ಪ್ರಕಟವಾದ ಟ್ವೀಟ್‍ಗಳ ಸ್ಕ್ರೀನ್ ಶಾಟ್‍ಗಳನ್ನು ಜನ ತೆಗೆದು ಶೇರ್ ಮಾಡುತ್ತಿದ್ದು ಈಗ ವೈರಲ್ ಆಗಿದೆ.

    ಇದನ್ನೂ ಓದಿ: ತಮಿಳು ಗಾಯಕಿ ರಿಲೀಸ್ ಮಾಡಿದ ಹಸಿ ಬಿಸಿ ವೀಡಿಯೋ ಸ್ಯಾಂಡಲ್‍ವುಡ್ ನಟಿಯದ್ದಾ..?

    ಇಲ್ಲಿ ಸುಚಿತ್ರಾ ಖಾತೆಯಿಂದ ಪ್ರಕಟವಾಗಿರುವ ಫೋಟೋ ಮತ್ತು ಅವರ ಟ್ವೀಟ್ ಗಳನ್ನು ನೀಡಲಾಗಿದೆ.