Tag: Anish Tejeshwar

  • ಅನೀಶ್ ನಟನೆಯ ‘ಮಾಯಾನಗರಿ’ ಚಿತ್ರದ ಲಚ್ಚಿ ಸಾಂಗ್ ರಿಲೀಸ್

    ಅನೀಶ್ ನಟನೆಯ ‘ಮಾಯಾನಗರಿ’ ಚಿತ್ರದ ಲಚ್ಚಿ ಸಾಂಗ್ ರಿಲೀಸ್

    ವಿಭಿನ್ನ ಶೈಲಿಯ ಹಾರರ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಾಯಾನಗರಿ (Mayanagari) ಚಿತ್ರದ ಲಚ್ಚಿ ಲಚ್ಚಿ ಹಾಡಿನ (Song) ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ರೀಲ್ಸ್ ನಲ್ಲೇ ಫೇಮಸ್ ಆಗಿ, ಲಕ್ಷಾಂತರ ಫಾಲೋವರ್ಸ್ ಹೊಂದಿರುವ  5 ವರ್ಷದ ಮಗು  ನಿಶಿತಾ ಕೈಲಿ ಲಚ್ಚಿ ಹಾಡನ್ನು ಬಿಡುಗಡೆಗೊಳಿಸಲಾಯಿತು.

    ಅನೀಶ್ ತೇಜೇಶ್ವರ್ (Anish Tejeshwar), ತೇಜು ಹಾಗೂ ಶ್ರಾವ್ಯರಾವ್ (Shravya Rao) ಪ್ರಮುಖ  ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ  ಶಂಕರ್ ಆರಾಧ್ಯ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರರಂಗದಲ್ಲಿ ನಡೆಯುವ ಒಂದಷ್ಟು ಸತ್ಯ ಘಟನೆಗಳನ್ನಿಟ್ಟುಕೊಂಡು ಶಂಕರ್ ಆರಾಧ್ಯ ಈ ಚಿತ್ರವನ್ನು ನಿರೂಪಿಸಿದ್ದಾರೆ. ಮಾಯಾನಗರಿ ಇದೀಗ ಬಿಡುಗಡೆಗೆ ಸಿದ್ದವಾಗಿದ್ದು ಇತ್ತೀಚೆಗಷ್ಟೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿ ವೈರಲ್ ಆಗಿದೆ.

    ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಶಂಕರ್, ಈ ಹಾಡು ನಮ್ಮ ಚಿತ್ರಕ್ಕೆ ಟ್ರಂಪ್ ಕಾರ್ಡ್ ಆಗುತ್ತೆ ಅಂತ ಕಲರ್ ಫುಲ್ ಆಗಿಯೇ ಶೂಟ್  ಮಾಡಿದ್ದೇವೆ. ಕಂಠೀರವ ಸ್ಟುಡಿಯೋ ಹಾಗೂ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ 6 ದಿನ ಇದನ್ನು ಚಿತ್ರೀಕರಿಸಿದ್ದೇವೆ. ಹಾರರ್, ಆ್ಯಕ್ಷನ್, ಫ್ಯಾಮಿಲಿ ಸೆಂಟಿಮೆಂಟ್ ಕಥೆ ಇದಾಗಿದ್ದು, ಚಿತ್ರದಲ್ಲಿ ನಾಯಕ ಶಂಕರ್ ನಾಗ್  ಅಭಿಮಾನಿ, ಚಿತ್ರರಂಗದಲ್ಲಿ ದೊಡ್ಡ ನಿರ್ದೇಶಕನಾಗಬೇಕೆಂದು ಹೋರಾಟ ನಡೆಸುವ ಆತನಿಗೆ ಕೊನೆಗೂ ಒಂದು ಅವಕಾಶ ಸಿಕ್ಕಿ, ಮಾಯಾನಗರಿ ಎಂಬ ಸ್ಥಳಕ್ಕೆ ಹೋಗಬೆಕಾಗುತ್ತದೆ. ಆ ಊರಿಗೆ ಬರುವ ಆತ ಅಲ್ಲಿ ತಾನೇ ಪಾತ್ರವಾಗಬೇಕಾಗುತ್ತದೆ. ಹೀಗೆ ಕುತೂಹಲಕಾರಿಯಾಗಿ ಸಾಗುವ ಈ ಚಿತ್ರಕ್ಕೆ ಬೆಂಗಳೂರು, ಶಿವಮೊಗ್ಗ, ಸಾಗರ, ಚಿಕ್ಕಮಗಳೂರು, ಭದ್ರಾವತಿ ಸುತ್ತಮುತ್ತ ಸುಮಾರು 65 ದಿನಗಳ‌ ಕಾಲ ಚಿತ್ರೀಕರಣ ಮಾಡಿದ್ದೇವೆ. ವಿಶೇಷವಾಗಿ ಹಿರಿಯ ನಟ ದ್ವಾರಕೀಶ್ ಅವರು ರಿಯಲ್ ಲೈಫ್ ಪಾತ್ರವನ್ನೇ ಮಾಡಿದ್ದಾರೆ ಎಂದು ಹೇಳಿದರು.

    ನಾಯಕ  ಅನೀಶ್ ಮಾತನಾಡುತ್ತ ನಾನು ತುಂಬಾ ಇಷ್ಟಪಟ್ಟು ಮಾಡಿದಂಥ ಪಾತ್ರವಿದು. ದ್ವಾರಕೀಶ್ ರಂಥ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿದ್ದು ನನ್ನ ಅದೃಷ್ಟ. ಡೈರೆಕ್ಟರ್ ಆಗಬೇಕೆಂದು ಕನಸು ಕಾಣೋ ಹುಡುಗನ ಪಾತ್ರ ಮಾಡಿದ್ದೇನೆ ಎಂದರು.

    ನಟಿ ಶ್ರಾವ್ಯ ರಾವ್ ಮಾತನಾಡಿ ಚಿತ್ರದಲ್ಲಿ ನಾನು ಮಲ್ಲಿಕಾ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ನನ್ನ‌ ಕರಿಯರ್ ನಲ್ಲೇ ಒಂದು ಬೆಸ್ಟ್ ಪಾತ್ರ. ತುಂಬಾ ಶೇಡ್ಸ್ ಇದೆ ಎಂದರು. ಮತ್ತೊಬ್ಬ‌ ನಟ ಭರತ್ ಮಾತನಾಡಿ ತನ್ನ ಪಾತ್ರ ಪರಿಚಯಿಸಿಕೊಂಡರು. ಚಿತ್ರದಲ್ಲಿ ಇನ್ನೂ ಹಲವಾರು ವಿಶೇಷತೆಗಳಿದ್ದು, ಅದನ್ನು ಹಂತ ಹಂತವಾಗಿ ಪರಿಚಯಿಸುವ ಆಲೋಚನೆ ಶಂಕರ್ ಅವರಿಗಿದೆ. ಸ್ಯಾಂಡಲ್ ವುಡ್ ಪಿಕ್ಚರ್ಸ್ ಬ್ಯಾನರ್ ಅಡಿ, ನಿರ್ಮಾಣವಾಗಿರುವ ಈ ಚಿತ್ರಕ್ಕೆ ಶ್ವೇತಾ ಶಂಕರ್ ಸಹ ನಿರ್ಮಾಣವಿದೆ.

     

    ತಾಂತ್ರಿಕವಾಗಿ  ಅದ್ಧೂರಿಯಾಗಿ ಮೂಡಿ ಬಂದಿರುವ ಈ ಚಿತ್ರಕ್ಕೆ  ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿಕ್ರಮ್ ಮೋರ್  ಫೈಟ್ ಕಂಪೋಸ್ ಮಾಡಿದ್ದಾರೆ. ಮದನ್ – ಹರಿಣಿ ಹಾಗೂ ಮುರಳಿ ನೃತ್ಯ ನಿರ್ದೇಶನ, ವಿಜಯ್ ಎಂ ಕುಮಾರ್ ಸಂಕಲನ, ಶ್ರೀನಿವಾಸ್ ಕ್ಯಾಮೆರಾ ಕೈಚಳಕ ಈ ಚಿತ್ರಕ್ಕಿದೆ. ಶರತ್ ಲೋಹಿತಾಶ್ವ, ಅವಿನಾಶ್, ಸುಚೇಂದ್ರ ಪ್ರಸಾದ್, ಎಡಕಲ್ಲು ಗುಡ್ಡದ ಚಂದ್ರಶೇಖರ್, ಚಿಕ್ಕಣ್ಣ, ಗಿರಿ ದಿನೇಶ್ ಹಾಗೂ ನಿಹಾರಿಕಾ  ಚಿತ್ರದ ತಾರಬಳಗದಲ್ಲಿದ್ದಾರೆ.

  • ಮತ್ತೊಂದು ಗೋಲ್ಡನ್‌ ಚಾನ್ಸ್‌ ಗಿಟ್ಟಿಸಿಕೊಂಡ ಶರಣ್ಯ ಶೆಟ್ಟಿ

    ಮತ್ತೊಂದು ಗೋಲ್ಡನ್‌ ಚಾನ್ಸ್‌ ಗಿಟ್ಟಿಸಿಕೊಂಡ ಶರಣ್ಯ ಶೆಟ್ಟಿ

    1980, ಹುಟ್ಟುಹಬ್ಬದ ಶುಭಾಶಯಗಳು, ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ‘ಗಟ್ಟಿಮೇಳ’ (Gattimela) ನಟಿ ಶರಣ್ಯ ಶೆಟ್ಟಿ ಅವರು ಇತ್ತೀಚಿಗೆ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಟನೆಯ ಸಿನಿಮಾಗೆ ನಾಯಕಿಯಾಗುವ ಮೂಲಕ ಸಿಹಿಸುದ್ದಿ ನೀಡಿದ್ರು. ಈಗ ‘ಅಕಿರ’ ಹೀರೋ ಅನೀಶ್ ತೇಜೇಶ್ವರ್‌ಗೆ (Anish Tejeshwar) ಹೀರೋಯಿನ್ ಆಗಿದ್ದಾರೆ.

    ಕಿರುತೆರೆಯ ಜನಪ್ರಿಯ ‘ಗಟ್ಟಿಮೇಳ’ ಧಾರಾವಾಹಿಯಲ್ಲಿ ವಿಲನ್ ಆಗಿ ವೇದಾಂತ್- ಅಮೂಲ್ಯಗೆ ಟಕ್ಕರ್ ಕೊಡ್ತಿದ್ದರು. ಅವರ ಪಾತ್ರ ಮುಕ್ತಾಯವಾಗುತ್ತಿದ್ದಂತೆ ಬೆಳ್ಳಿಪರದೆಯಲ್ಲಿ ಮಿಂಚಲು ಸಜ್ಜಾಗಿದ್ದರು. ಪ್ರಿಯಾಂಕಾ ಉಪೇಂದ್ರ ಅವರ ಜೊತೆ ‘1980’ ಚಿತ್ರದಲ್ಲಿ ನಟಿ ಗಮನ ಸೆಳೆದರು. ಈಗ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ನಟಿ ಒಪ್ಪಿಕೊಳ್ತಿದ್ದಾರೆ. ಒಂದು ಸಿನಿಮಾದಿಂದ ಮತ್ತೊಂದು ಸಿನಿಮಾಗೆ ಡಿಫರೆಂಟ್ ರೋಲ್‌ಗಳನ್ನ ನಟಿ ಓಕೆ ಅಂತಿದ್ದಾರೆ.

    ‘ಕೃಷ್ಣಂ ಪ್ರಣಯ ಸಖಿ’ ಗೋಲ್ಡನ್ ಹೀರೋಗೆ ಸೆಕೆಂಡ್ ಹೀರೋಯಿನ್ ಆಗಿದ್ದರು ಶರಣ್ಯ ಪಾತ್ರಕ್ಕೆ ಮಹತ್ವವಿದೆ. ಮಾಡ್ರನ್ ಅವತಾರದಲ್ಲಿ ಶರಣ್ಯ ನಟಿಸಿದ್ದಾರೆ. ಗಣೇಶ್‌ಗೆ ಮಾಲಿವುಡ್ ನಟಿ ಮಾಳವಿಕಾ ಮತ್ತು ಶರಣ್ಯ ಶೆಟ್ಟಿ (Sharanya Shetty) ನಾಯಕಿಯರಾಗಿದ್ದಾರೆ. ಭಿನ್ನವಾಗಿರುವ ತ್ರಿಕೋನ ಪ್ರೇಮಕಥೆಯನ್ನ ಇಲ್ಲಿ ನೋಡಬಹುದಾಗಿದೆ. ಈ ಬೆನ್ನಲ್ಲೇ ಮತ್ತೊಂದು ಬ್ರೇಕಿಂಗ್ ಅಪ್‌ಡೇಟ್ ಸಿಕ್ಕಿದೆ. ಇದನ್ನೂ ಓದಿ:‘ಲೈಗರ್‌’ ನಟಿ ಜೊತೆ ಆದಿತ್ಯ ಕಪೂರ್ ಕಣ್ ಕಣ್ ಸಲಿಗೆ

    ಅಕಿರ, ರಾಮಾರ್ಜುನ, ವಾಸು ನಾನು ಪಕ್ಕಾ ಕಮರ್ಷಿಯಲ್, ಚಿತ್ರಗಳ ಮೂಲಕ ಸಂಚಲನ ಮೂಡಿಸಿರುವ ಅನೀಶ್ ತೇಜೇಶ್ವರ್‌ಗೆ ನಾಯಕಿಯಾಗಿ ಶರಣ್ಯ ಶೆಟ್ಟಿ ಸೆಲೆಕ್ಟ್ ಆಗಿದ್ದಾರೆ. ಈ ಸಿನಿಮಾದಲ್ಲಿ ಪಕ್ಕಾ ಸಂಪ್ರಾದಾಯಿಕ್ ಲುಕ್‌ನಲ್ಲಿ ಕಾಣಿಸಿಕೊಳ್ತಿದ್ದಾರೆ. ನಟನೆಗೆ ಹೆಚ್ಚು ಒತ್ತಿರುವ ವಿಭಿನ್ನ ರೋಲ್‌ಗೆ ನಟಿ ಜೀವತುಂಬುತ್ತಿದ್ದಾರೆ. ಹೆಸರಿಡದ ಈ ಹೊಸ ಪ್ರಾಜೆಕ್ಟ್, ಜುಲೈ 18ರಿಂದ ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಣ ನಡೆಯುತ್ತಿದೆ. ಸಾಂಗ್ ಶೂಟ್ ಥೈಲ್ಯಾಂಡ್‌ನಲ್ಲಿ ನಡೆಯಲಿದೆ. ‘ಬ್ರಹ್ಮಚಾರಿ’ ಸಿನಿಮಾ ನಿರ್ದೇಶಕ ಚಂದ್ರ ಮೋಹನ್‌ (Chandra Mohan) ಈ ಚಿತ್ರಕ್ಕೆ ನಿರ್ದೇಶನ ಮಾಡ್ತಿದ್ದಾರೆ.

    ಸ್ಟಾರ್ ನಟರ ಸಿನಿಮಾಗಳಿಗೆ ನಾಯಕಿಯಾಗುವ ಮೂಲಕ ಶರಣ್ಯ ಶೆಟ್ಟಿ ಬಂಪರ್ ಆಫರ್ಸ್ ಗಿಟ್ಟಿಸಿಕೊಳ್ತಿದ್ದಾರೆ. ಚಿತ್ರರಂಗದಲ್ಲಿ ಮೊದಲೇ ಶೆಟ್ರ ಹವಾ ಜೋರಾಗಿದೆ. ಶರಣ್ಯ ಶೆಟ್ಟಿ ಅವರು ಅದೆಷ್ಟರ ಮಟ್ಟಿಗೆ ಮೋಡಿ ಮಾಡುತ್ತಾರೆ ಅಂತಾ ಕಾಯಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಆರಾಮ್ ಅರವಿಂದ್ ಸ್ವಾಮಿ’ ಬಳಗ ಸೇರಿದ ಬಾಬಾ ಭಾಸ್ಕರ್ ಮಾಸ್ಟರ್

    ‘ಆರಾಮ್ ಅರವಿಂದ್ ಸ್ವಾಮಿ’ ಬಳಗ ಸೇರಿದ ಬಾಬಾ ಭಾಸ್ಕರ್ ಮಾಸ್ಟರ್

    ರಾಮ್ ಅರವಿಂದ ಸ್ವಾಮಿ (Aram Aravinda Swamy)  ಸೆಟ್ಟೇರಿದ ದಿನದಿಂದಲೂ ಬಹಳಷ್ಟು ಸದ್ದು ಮಾಡುತ್ತಿರುವ ಸಿನಿಮಾ. ಸಖತ್ ಕ್ರಿಯೇಟಿವ್ ಆಗಿರುವ ಪ್ರಮೋಷನಲ್ ವಿಡಿಯೋ ಮೂಲಕ ಗಮನ ಸೆಳೆಯುತ್ತಿರುವ ಈ ಸಿನಿ ಬಳಗಕ್ಕೀಗ ಖ್ಯಾತ ನೃತ್ಯ ಸಂಯೋಜಕ ಬಾಬಾ ಭಾಸ್ಕರ್ (Baba Bhaskar) ಎಂಟ್ರಿ ಕೊಟ್ಟಿದ್ದಾರೆ.

    ನಟ ಅನೀಶ್ ತೇಜೇಶ್ವರ್ (Anish Tejeshwar) ಹಾಗೂ ನಿರ್ದೇಶಕ ಅಭಿಷೇಕ್ ಶೆಟ್ಟಿ (Abhishek Shetty) ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರದ ಕ್ಯಾರೆಕ್ಟರ್ ಇಂಟ್ರೂಡಕ್ಷನ್ ಸಾಂಗ್ ಕೆಲಸ ಭರದಿಂದ ಸಾಗುತ್ತಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದು, ಅರ್ಜುನ್ ಜನ್ಯ ಟ್ಯೂನ್ ಹಾಕಿರುವ ಈ ಹಾಡಿನಲ್ಲಿ ಅನೀಶ್ ಕುಣಿಸೋದಿಕ್ಕೆ ತಮಿಳಿನ ಖ್ಯಾತ ಕೊರಿಯೋಗ್ರಾಫರ್ ಬಾಬಾ ಭಾಸ್ಕರ್ ಎಂಟ್ರಿ ಕೊಟ್ಟಿದ್ದಾರೆ.

    ಸಖತ್ ಸ್ಟೈಲೀಶ್ ಆಗಿ ತಯಾರಾಗುತ್ತಿರುವ ಕ್ಯಾರೆಕ್ಟರ್ ಇಂಟ್ರೂಡಕ್ಷನ್ ಸಿಂಗಿಂಗ್ ಮಸ್ತಿಗೆ ಬಾಬಾ ಭಾಸ್ಕರ್ ಕೊರಿಯೋಗ್ರಫಿ ಮಾಡ್ತಿದ್ದಾರೆ. ಈ ಹಿಂದೆ ಅನೀಶ್ ನಟನೆಯ ‘ವಾಸು ನನ್ ಪಕ್ಕ ಕಮರ್ಷಿಯಲ್’ ಸಿನಿಮಾದ ಹೀರೋ ಇಂಟ್ರೂಡಕ್ಷನ್ ಸಾಂಗ್ ಗೆ ನೃತ್ಯ ಸಂಯೋಜನೆ ಮಾಡಿದ್ದ ಭಾಸ್ಕರ್ ಮತ್ತೊಮ್ಮೆ ಅನೀಶ್ ಸಿನಿಮಾಗೆ ಕೊರಿಯೋಗ್ರಫಿ ಮಾಡುತ್ತಿದ್ದಾರೆ. ಇದನ್ನೂ ಓದಿ:ಛತ್ರಪತಿ ಶಿವಾಜಿಯ ಸೊಸೆ ಪಾತ್ರಕ್ಕೆ ರಶ್ಮಿಕಾ ಮಂದಣ್ಣ ಫೈನಲ್?‌

    ರೋಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ‘ಆರಾಮ್ ಅರವಿಂದ್ ಸ್ವಾಮಿ’ ಸಿನಿಮಾದ ಟಾಕಿ ಭಾಗದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಎರಡು ಹಾಡುಗಳ ಚಿತ್ರೀಕರಣವಷ್ಟೇ ಬಾಕಿ ಇದೆ. ನಮ್ ಗಣಿ ಬಿಕಾಂ ಪಾಸ್, ಗಜಾನನ ಅಂಡ್ ಗ್ಯಾಂಗ್ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ  ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೂರನೇ ಸಿನಿಮಾವಿದು.

    ಅನೀಶ್ ತೇಜೇಶ್ವರ್ ಗೆ ಜೋಡಿಯಾಗಿ ಮಿಲನ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ನಟಿಸುತ್ತಿದ್ದಾರೆ. ಅಕಿರ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಸಾಗರ್ ಛಾಯಾಗ್ರಹಣ, ಉಮೇಶ್ ಸಂಕಲನ ಚಿತ್ರಕ್ಕಿದೆ.

  • ‘ಆರಾಮ್ ಅರವಿಂದ್ ಸ್ವಾಮಿ’ಯ ಫಸ್ಟ್ ಲುಕ್ ರಿಲೀಸ್ ಮಾಡಿದ ಅಶ್ವಿನಿ

    ‘ಆರಾಮ್ ಅರವಿಂದ್ ಸ್ವಾಮಿ’ಯ ಫಸ್ಟ್ ಲುಕ್ ರಿಲೀಸ್ ಮಾಡಿದ ಅಶ್ವಿನಿ

    ನಟ ಅನೀಶ್ ತೇಜೇಶ್ವರ್ (Anish Tejeshwar) ನಿರ್ದೇಶಕ ಅಭಿಷೇಕ್ ಶೆಟ್ಟಿ (Abhishek Shetty) ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ಸಿನಿಮಾ ‘ಆರಾಮ್ ಅರವಿಂದ್ ಸ್ವಾಮಿ’. ರೊಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ಚಿತ್ರದ ಫಸ್ಟ್ ಲುಕ್ (First Look) ಪೋಸ್ಟರ್ ಬಿಡುಗಡೆಯಾಗಿದೆ. ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini PuneethRajkumar) ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ತಂಡಕ್ಕೆ ಶುಭ ಹಾರೈಸಿ ಸಾಥ್ ನೀಡಿದ್ದಾರೆ.

    ‘ನಮ್ ಗಣಿ ಬಿಕಾಂ ಪಾಸ್, ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ನಿರ್ದೇಶನದ ಸಿನಿಮಾವಿದು. ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ಮಿಲನ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ಅನೀಶ್ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಚಿತ್ರದ ಫಸ್ಟ್  ಲುಕ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಗಮನ ಸೆಳೆಯುತ್ತಿದೆ. ಇದನ್ನೂ ಓದಿ: Biffes 2023- ಇಂದು ಸಂಜೆ 4.30ಕ್ಕೆ ಬೆಂಗಳೂರು ಚಿತ್ರೋತ್ಸವಕ್ಕೆ ಚಾಲನೆ

    ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರ್ತಿದ್ದು, ‘ಅಕಿರ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬೆಂಗಳೂರು ಸುತ್ತಮುತ್ತ ಎರಡು ಶೆಡ್ಯೂಲ್ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಮೂರನೇ ಶೆಡ್ಯೂಲ್ ಕೇರಳದಲ್ಲಿ ಸೆರೆ ಹಿಡಿಯಲು ಪ್ಲ್ಯಾನ್ ಮಾಡಿಕೊಂಡಿದೆ. ಚಿತ್ರಕ್ಕೆ ಸಾಗರ್ ಛಾಯಾಗ್ರಹಣ, ಉಮೇಶ್ ಸಂಕಲನವಿದೆ.

  • ಗೆಳೆಯನ ಸಿನಿಮಾಕ್ಕೆ ನಿರ್ಮಾಪಕನಾದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

    ಗೆಳೆಯನ ಸಿನಿಮಾಕ್ಕೆ ನಿರ್ಮಾಪಕನಾದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

    ಚಂದನವನದ ಪ್ರತಿಭಾವಂತ ನಾಯಕ ನಟರಾದ ಅನೀಶ್ ತೇಜೇಶ್ವರ್ ಹಾಗೂ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇಬ್ಬರ ಸ್ನೇಹ ಹಲವು ವರ್ಷಗಳದ್ದು. ನಮ್ ಏರಿಯಾಲ್ ಒಂದಿನ ಚಿತ್ರದ ಮೂಲಕ ಶುರುವಾದ ಇವರ ಸಿನಿಮಾ ಜರ್ನಿ ಇಬ್ಬರನ್ನು ಸ್ನೇಹಿತರನ್ನಾಗಿ ಬೆಸೆಯಿತು. ಇದೀಗ ಇವರ ಸ್ನೇಹ ಪ್ರೊಫೆಷನಲ್ ಲೈಫ್ ನಲ್ಲೂ ಮುಂದುವರಿದಿದ್ದು ಗೆಳೆಯ ಅನೀಶ್ ತೇಜೇಶ್ವರ್ ಚಿತ್ರಕ್ಕೆ ನಿರ್ಮಾಪಕನಾಗುವ ಮೂಲಕ ರಕ್ಷಿತ್ ಶೆಟ್ಟಿ ಸಾಥ್ ನೀಡಿದ್ದಾರೆ.

    ಅನೀಶ್ ತೇಜೇಶ್ವರ್ ನಿರ್ದೇಶಿಸಿ ನಟಿಸುತ್ತಿರುವ ‘ರಾಮಾರ್ಜುನ’ ಚಿತ್ರ ಗಾಂಧಿ ನಗರದಲ್ಲಿ ಸದ್ದು ಮಾಡುತ್ತಿದೆ. ಚಿತ್ರದ ತುಣುಕುಗಳು ಪ್ರಾಮಿಸಿಂಗ್ ಆಗಿ ಮೂಡಿಬಂದಿದ್ದು, ಶೂಟಿಂಗ್ ಕಂಪ್ಲೀಟ್ ಮಾಡಿ ರಿಲೀಸ್ ಹಂತದಲ್ಲಿರುವ ಗೆಳೆಯನ ಸಿನಿಮಾವನ್ನು ಸಿಂಪಲ್ ಸ್ಟಾರ್ ನೋಡಿ ಮೆಚ್ಚಿಕೊಂಡಿದ್ದಾರೆ. ಅಷ್ಟೇ ಅಲ್ಲ, ತಾವೂ ಕೂಡ ಚಿತ್ರದ ನಿರ್ಮಾಪಕರಲೊಬ್ಬರಾಗಲು ನಿರ್ಧರಿಸಿದ್ದು, ತಮ್ಮ ಪರಂವಃ ಸ್ಟುಡಿಯೋಸ್ ಮೂಲಕ ‘ರಾಮಾರ್ಜುನ’ ಸಿನಿಮಾ ಬಿಡುಗಡೆ ಮಾಡಲು ಸಜ್ಜಾಗಿದ್ದಾರೆ ರಕ್ಷಿತ್ ಶೆಟ್ಟಿ.

    ಅನೀಶ್ ಚೊಚ್ಚಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ‘ರಾಮಾರ್ಜುನ’ ಚಿತ್ರ ಪಕ್ಕಾ ಮಾಸ್ ಸಬ್ಜೆಕ್ಟ್ ಒಳಗೊಂಡಿದ್ದು, ಎರಡು ಭಿನ್ನ ಶೇಡ್ ನಲ್ಲಿ ಅನೀಶ್ ಇಲ್ಲಿ ಕಾಣಸಿಗಲಿದ್ದಾರೆ. ಇನ್ನು ಚಿತ್ರದಲ್ಲಿ ನಾಯಕಿಯಾಗಿ ನಿಶ್ವಿಕಾ ನಾಯ್ಡು ಸ್ಕ್ರೀನ್ ಶೇರ್ ಮಾಡಿದ್ದು, ರಂಗಾಯಣ ರಘು, ಪ್ರಮೋದ್ ಶೆಟ್ಟಿ, ಹರೀಶ್ ರಾಜ್, ಅರುಣಾ ಬಾಲರಾಜ್ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ವಿಂಕ್ ವಿಷಲ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗಿದ್ದು, ನವೀನ್ ಕುಮಾರ್ ಛಾಯಾಗ್ರಹಣ, ಆನಂದ್ ರಾಜವಿಕ್ರಮ್ ಸಂಗೀತ ನಿರ್ದೇಶನ ರಾಮಾರ್ಜುನ ಚಿತ್ರಕ್ಕಿದೆ

  • ಹಳ್ಳಿಯತ್ತ ಹೊರಟ ಕಮರ್ಷಿಯಲ್ ವಾಸು!

    ಹಳ್ಳಿಯತ್ತ ಹೊರಟ ಕಮರ್ಷಿಯಲ್ ವಾಸು!

    ಬೆಂಗಳೂರು: ವಾಸು ನಾನ್ ಪಕ್ಕಾ ಕಮರ್ಷಿಯಲ್ ಚಿತ್ರದ ಮೂಲಕ ಗೆಲುವೊಂದನ್ನು ತಮ್ಮದಾಗಿಸಿಕೊಂಡ ಅನೀಶ್ ತೇಜೇಶ್ವರ್ ಪಕ್ಕಾ ಹಳ್ಳಿ ಲುಕ್ಕಿನಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಇನ್ನಷ್ಟೇ ಟೈಟಲ್ ಪಕ್ಕಾ ಆಗಬೇಕಿರೋ ಈ ಚಿತ್ರವನ್ನು ಯಶಸ್ವಿ ಸಂಭಾಷಣೆಕಾರ ಪ್ರಶಾಂತ್ ರಾಜಪ್ಪ ನಿರ್ದೇಶನ ಮಾಡಲಿದ್ದಾರೆ.

    ಇದುವರೆಗಿನ ಚಿತ್ರಗಳಲ್ಲಿ ಸ್ಟೈಲಿಶ್ ಲುಕ್ಕಿನಲ್ಲಿ ಕಾಣಿಸಿಕೊಂಡಿದ್ದ ಅನೀಶ್ ಈ ಚಿತ್ರದಲ್ಲಿ ಸಂಪೂರ್ಣವಾಗಿ ಹಳ್ಳಿ ಗೆಟಪ್ಪಿನಲ್ಲಿ ಕಾಣಿಸಿಕೊಳ್ಳಲಿರೋ ಸಂಭ್ರಮದಲ್ಲಿದ್ದಾರೆ. ಈಗಾಗಲೇ ಪ್ರಶಾಂತ್ ರಾಜಪ್ಪ ಸಂಭಾಷಣೆಕಾರರಾಗಿ ಗೆದ್ದಿದ್ದಾರೆ. ಅವರ ಕಾಮಿಡಿ ಕಿಕ್ಕಿಗೆ ಪ್ರೇಕ್ಷಕರೂ ಫಿದಾ ಆಗಿದ್ದಾರೆ. ಅಷ್ಟಕ್ಕೂ ಇದೀಗ ಸಂಭಾಷಣೆಕಾರರಾಗಿ ಗುರುತಿಸಿಕೊಂಡಿರುವ ಪ್ರಶಾಂತ್ ಅವರ ಪ್ರಧಾನ ಉದ್ದೇಶವಾಗಿದ್ದದ್ದು ನಿರ್ದೇಶನ. ಈಗ ಅದಕ್ಕೆ ಕಾಲ ಕೂಡಿ ಬಂದಿದೆ.

    ಸಂಪೂರ್ಣವಾಗಿ ಹಳ್ಳಿಯಲ್ಲೇ ನಡೆಯುವ ಮಜವಾದ ಕಥೆಯೊಂದನ್ನು ಪ್ರಶಾಂತ್ ರಾಜಪ್ಪ ರೆಡಿ ಮಾಡಿಕೊಂಡಿದ್ದಾರೆ. ಈ ಕಥೆ ಹಳ್ಳಿಯ ಆಸುಪಾಸಿನ ಸಣ್ಣ ಪುಟ್ಟ ಪೇಟೆ ಬಿಟ್ರೆ ನಗರದ ಛಾಯೆಯಿಂದ ಸಂಪೂರ್ಣವಾಗಿ ಮುಕ್ತವಾಗಿರಲಿದೆಯಂತೆ. ಈಗಾಗಲೇ ತಾಂತ್ರಿಕ ವರ್ಗದವರ ಆಯ್ಕೆ ಕಾರ್ಯ ಮುಗಿದಿದೆ. ಗಣೇಶನ ಹಬ್ಬದಂದು ಟೈಟಲ್ ಲಾಂಚ್ ಆಗಲಿದೆ. ಬೆಂಗಳೂರು ಸುತ್ತ ಮುತ್ತಲ ಹಳ್ಳಿಗಳಲ್ಲಿಯೇ ಚಿತ್ರೀಕರಣ ನಡೆಸಲು ಯೋಜಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮುಂದಿನ ತಿಂಗಳು ಬರುತ್ತೆ ‘ವಾಸು ನಾನ್ ಪಕ್ಕಾ ಕಮರ್ಷಿಯಲ್’

    ಮುಂದಿನ ತಿಂಗಳು ಬರುತ್ತೆ ‘ವಾಸು ನಾನ್ ಪಕ್ಕಾ ಕಮರ್ಷಿಯಲ್’

    ಬೆಂಗಳೂರು: ‘ವಾಸು ನಾನ್ ಪಕ್ಕಾ ಕಮರ್ಷಿಯಲ್’ ಚಿತ್ರದ ಮೊದಲ ಪ್ರತಿ ಸಿದ್ಧವಾಗಿದ್ದು, ಮುಂದಿನ ತಿಂಗಳು ಚಿತ್ರ ಬಿಡುಗಡೆಯಾಗಲಿದೆ. ಅಜಿತ್ ವಾಸನ್ ಉಗ್ಗಿನ – ನಿರ್ದೇಶನ, ಛಾಯಾಗ್ರಹಣ-ದಿಲೀಪ್ ಚಕ್ರವರ್ತಿ, ಸಂಗೀತ- ಅನೀಷ್ ಲೋಕನಾಥ, ಸಂಕಲನ – ಶ್ರೀಕಾಂತ್, ಸಾಹಸ- ವಿಕ್ರಂ ಮೋರ್, ನೃತ್ಯ – ಬಾಬಾ ಭಾಸ್ಕರ್, ಶೇಖರ್, ಶರತ್‍ಗೌಡ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

    ಈ ಚಿತ್ರದಲ್ಲಿ ಅನೀಶ್ ತೇಜೇಶ್ವರ್, ನಿಶ್ವಿಕಾ ನಾಯ್ಡು, ಅವಿನಾಶ್, ಮಂಜುನಾಥ ಹೆಗಡೆ, ಅರುಣ ಬಾಲರಾಜ್, ಗಿರೀಶ್, ದೀಪಕ್ ಶೆಟ್ಟಿ ಮುಂತಾದವರಿದ್ದರೆ. ವಿಂಕ್ ವಿಷಲ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣಗೊಳ್ಳುತ್ತಿದೆ.

     

    ‘ವಾಸು ನಾನ್ ಪಕ್ಕಾ ಕಮರ್ಷಿಯಲ್’ ಚಿತ್ರದ ಟ್ರೇಲರ್ ಇಲ್ಲಿದೆ ನೋಡಿ.