Tag: anitha kumaraswamy

  • ಕಾಂಗ್ರೆಸ್ ಸರ್ಕಾರದಲ್ಲಿ ಯಾರನ್ನು ಯಾವಾಗ ಏನ್ ಬೇಕಾದ್ರು ಮಾಡ್ತಾರೆ: ಹೆಚ್‌ಡಿಕೆ

    ಕಾಂಗ್ರೆಸ್ ಸರ್ಕಾರದಲ್ಲಿ ಯಾರನ್ನು ಯಾವಾಗ ಏನ್ ಬೇಕಾದ್ರು ಮಾಡ್ತಾರೆ: ಹೆಚ್‌ಡಿಕೆ

    ಬೆಂಗಳೂರು: ಐಶ್ವರ್ಯ ಗೌಡ ಕೇಸ್‌ನಲ್ಲಿ (Aishwarya Gowda Case) ನಿಖಿಲ್, ಅನಿತಾ ಕುಮಾರಸ್ವಾಮಿ ಹೆಸರು ಪ್ರಸ್ತಾಪ ಆಗುತ್ತಿರುವ ವಿಚಾರಕ್ಕೆ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ರಾಜ್ಯದಲ್ಲಿ ಚಿನ್ನ, ಬೆಳ್ಳಿ ಕೇಸ್ ನಡೆಯುತ್ತಿದೆ. ನಿಖಿಲ್, ಅನಿತಾ ಕುಮಾರಸ್ವಾಮಿ ಪರಿಚಯ ಅಂತ ಹೇಳಿ ನಿನ್ನೆ ಮೊನ್ನೆಯಿಂದ ಸುದ್ದಿ ಬರುತ್ತಿದೆ. ಐಶ್ವರ್ಯ ಗೌಡ ನಿಖಿಲ್, ಅನಿತಾ ಅವರನ್ನ ಯಾವಾಗ ಭೇಟಿ ಮಾಡಿದ್ರು? ಈ ಸರ್ಕಾರದಲ್ಲಿ ಎಷ್ಟರ ಮಟ್ಟಿಗೆ ತನಿಖೆ ನಡೆಯುತ್ತಿದೆ ಅನ್ನೋದು ಗೊತ್ತಿದೆ. ಮಾಧ್ಯಮಗಳಲ್ಲಿ ಬಂದ ಮೇಲೆ ನಾನು ಮಾಹಿತಿ ಪಡೆದುಕೊಂಡಿದ್ದೇನೆ. ಕೇಸ್ ಹಿನ್ನೆಲೆ ತಿಳಿದಿಕೊಂಡಿದ್ದೇನೆ ಎಂದರು. ಇದನ್ನೂ ಓದಿ: ಕ್ಯಾಲಿಫೋರ್ನಿಯಾದಲ್ಲಿ ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನ; 2 ಸಾವು

    2016ರಲ್ಲಿ ದೂರು ಕೊಟ್ಟಿರೋದು, ವ್ಯವಹಾರ ನಡೆದಿರೋದು. ನಿಖಿಲ್, ಅನಿತಾ ಹೆಸರನ್ನು ಇದರಲ್ಲಿ ಎಳೆದಿದ್ದಾರೆ ಅಂತ ಮಾಹಿತಿ ತರಿಸಿದ್ದೇನೆ. ಈ ಸರ್ಕಾರ ಯಾರನ್ನು, ಯಾವಾಗ, ಏನು ಬೇಕಾದ್ರು ಮಾಡುತ್ತಾರೆ. ಸರ್ಕಾರದಲ್ಲಿ ಅಧಿಕಾರ ವರ್ಗವನ್ನು ಯಾವ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. 2016ರಲ್ಲಿ ಪ್ರಕರಣ ಆಗಿರೋದು. 2018ರಲ್ಲಿ ನಾನೇ ಸಿಎಂ ಇದ್ದೆ. ಆಗ ಯಾಕೆ ನನ್ನ ಬಳಿ ಅನ್ಯಾಯ ಅಂತ ಇವರು ಬರಲಿಲ್ಲ ದೂರು ಕೊಡಲಿಲ್ಲ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಉತ್ತರ ಭಾರತದ ರಾಜ್ಯಗಳಲ್ಲಿ ದಟ್ಟವಾದ ಮಂಜು – ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

    ನಿಖಿಲ್, ಅನಿತಾ ಕುಮಾರಸ್ವಾಮಿ ಅವರ ಮುಖಗಳನ್ನೇ ನೊಡಿಲ್ಲ. ಹೇಗೆ ಅವರ ಪರಿಚಯ ಅಂತ ಸುದ್ದಿ ಮಾಡಿಸುತ್ತಿದ್ದೀರಿ? ಇದರ ಹಿಂದೆ ಯಾರಿದ್ದಾರೆ? ನಿಖಿಲ್, ಅನಿತಾ ಕುಮಾರಸ್ವಾಮಿಯವರನ್ನ ಯಾಕೆ ಈ ಪ್ರಕರಣದಲ್ಲಿ ತಂದ್ರಿ? ಇದನ್ನ ಸರ್ಕಾರ ಅಂತ ಕರೆಯುತ್ತೀರಾ? ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬೇರೆ ರೂಟ್‌ಗೆ ಕರೆದೊಯ್ದ ಚಾಲಕ – ಭಯಗೊಂಡು ಚಲಿಸುತ್ತಿದ್ದ ಆಟೋದಿಂದ ಜಿಗಿದ ಮಹಿಳೆ

  • ನಿಖಿಲ್ ಚುನಾವಣೆಯಲ್ಲಿ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ: ಅನಿತಾ ಕುಮಾರಸ್ವಾಮಿ

    ನಿಖಿಲ್ ಚುನಾವಣೆಯಲ್ಲಿ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ: ಅನಿತಾ ಕುಮಾರಸ್ವಾಮಿ

    ಬೆಂಗಳೂರು: ನನ್ನ ಮಗ ಮೂರನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ. ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ ಎಂದು ಅನಿತಾ ಕುಮಾರಸ್ವಾಮಿ (Anitha Kumaraswamy) ಪುತ್ರ ನಿಖಿಲ್‌ ಕುಮಾರಸ್ವಾಮಿಗೆ ಧೈರ್ಯ ತುಂಬಿದ್ದಾರೆ.

    ಚನ್ನಪಟ್ಟಣ ಕ್ಷೇತ್ರದ ಫಲಿತಾಂಶದ ನಂತರ ಇದೇ ಮೊದಲ ಬಾರಿಗೆ ಎಕ್ಸ್ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿರುವ ಅವರು ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ.

    ಟ್ವೀಟ್ ಏನು?
    ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ (Nikhil Kumaraswamy), ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಪರಾಜಯ ಹೊಂದಿದ್ದಾನೆ, ಒಪ್ಪುತ್ತೇನೆ. ಚುನಾವಣೆ ವ್ಯವಸ್ಥೆಯಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ ಹಾಗೂ ಒಬ್ಬರು ಗೆಲ್ಲಬೇಕಾದರೆ ಇನ್ನೊಬ್ಬರು ಸೋಲಲೇಬೇಕಾಗುತ್ತದೆ. ಆದರೆ ಸೋಲಿಗೆ ಅನೇಕ ಕಾರಣಗಳಿರುತ್ತವೆ. ಹಾಗೆಂದು ನಿಖಿಲ್ ಸೋಲಿನ ಕಾರಣಗಳ ಬಗ್ಗೆ ಚರ್ಚಿಸುವುದು ನನ್ನ ಉದ್ದೇಶವಲ್ಲ.

    ರಾಜಕಾರಣದಲ್ಲಿ ನನಗಾಗಲಿ, ನನ್ನ ಪತಿಗಾಗಲಿ ಅಥವಾ ನನ್ನ ಪೂಜ್ಯ ಮಾವನವರಿಗೇ ಆಗಲಿ ಗೆಲುವು, ಸೋಲು ಹೊಸದೇನಲ್ಲ. ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದೇವೆ. ಗೆದ್ದಾಗ ಬೀಗಿಲ್ಲ, ಸೋತಾಗ ಕುಗ್ಗಿಲ್ಲ. ಸೋತ ಹತಾಶೆಯಲ್ಲಿ ಅನ್ಯರನ್ನು ಹೀಗಳೆದಿಲ್ಲ. ನನ್ನ ಮಗನಿಗೂ ಇದೇ ಅನ್ವಯ ಆಗುತ್ತದೆ.

    ನನ್ನ ಮಗನ ಬಗ್ಗೆ ರಾಜ್ಯದ ಜನತೆಗೆ ಹೆಚ್ಚೇನೂ ಹೇಳುವ ಅಗತ್ಯವಿಲ್ಲ. ಅವನು ಒಳ್ಳೆಯ ಮಗ, ಒಳ್ಳೆಯ ಪತಿ, ಒಳ್ಳೆಯ ತಂದೆ. ರಾಜಕಾರಣಕ್ಕೆ ಬರುವ ಮುನ್ನ ಒಳ್ಳೆಯ ನಾಯಕ ನಟ. ಅವನಂಥ ಒಳ್ಳೆಯ ಮಗನನ್ನು ಪಡೆದಿದ್ದಕ್ಕಾಗಿ ನಾನೂ ನನ್ನ ಪತಿ ಹೆಮ್ಮೆಪಡುತ್ತೇವೆ.

    ತಾಯಿಯಾಗಿ ಅವನ ಯಶಸ್ಸನ್ನು ಸಂಭ್ರಮಿಸುತ್ತೇನೆ. ಅವನಿಗೆ ಕಷ್ಟ ಎದುರಾದಾಗ ಕಣ್ಣೀರಿಟ್ಟಿದ್ದೇನೆ. ನನ್ನ ಕರುಳಬಳ್ಳಿಯ ಮೇಲೆ ನನಗಷ್ಟು ಮಮಕಾರ ಇರುತ್ತದಲ್ಲವೇ? ನನ್ನಂತಹ ಎಲ್ಲಾ ತಾಯಂದಿರಿಗೂ ನನ್ನ ಭಾವನೆಗಳು ಅರ್ಥವಾಗುತ್ತವೆ ಎನ್ನುವ ವಿಶ್ವಾಸ ನನ್ನದು.

    ನನ್ನ ಮಗ 3ನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ, ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ. ಅವನ ಮನಸ್ಸು, ಹೃದಯ ವೈಶಾಲ್ಯತೆ ಏನೆಂದು ತಾಯಿಯಾಗಿ ನನಗೆ ಚನ್ನಾಗಿ ಗೊತ್ತು.

    ನಾನು ಸದಾ ಆ ಭಗವಂತನಲ್ಲಿ ನಂಬಿಕೆ ಇಟ್ಟಿದ್ದೇನೆ. ನನ್ನ ಮಗನ ಮೇಲೆ ಆ ದೈವದ ಕರುಣೆ, ಅನುಗ್ರಹವಿದೆ ಹಾಗೂ ಚನ್ನಪಟ್ಟಣ ಜನತೆಯ ಪ್ರೀತಿ ವಿಶ್ವಾಸವೂ ಸದಾ ಅವನ ಮೇಲಿರುತ್ತದೆ. ಇಂದಲ್ಲ ನಾಳೆ ಜನಸೇವೆ ಮಾಡುವ ಅವಕಾಶ ಅವನಿಗೆ ಸಿಕ್ಕೇ ಸಿಗುತ್ತದೆ ಎನ್ನುವ ಅಚಲ ನಂಬಿಕೆ ನನ್ನದು ಎಂದು ಅನಿತಾ ಕುಮಾರಸ್ವಾಮಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

  • ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ರಿಲೀಸ್‌ – ಹೆಚ್‌ಡಿಡಿ, ಹೆಚ್‌ಡಿಕೆ, ಅನಿತಾ ಕುಮಾರಸ್ವಾಮಿಗೆ ಸ್ಥಾನ

    ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ರಿಲೀಸ್‌ – ಹೆಚ್‌ಡಿಡಿ, ಹೆಚ್‌ಡಿಕೆ, ಅನಿತಾ ಕುಮಾರಸ್ವಾಮಿಗೆ ಸ್ಥಾನ

    – ಜಿಟಿಡಿಗೆ ಕೊಕ್, ಪುತ್ರ ಹರೀಶ್‌ಗೌಡಗೆ ಸ್ಥಾನ

    ಬೆಂಗಳೂರು: ಇದೇ ನವೆಂಬರ್ 13ರಂದು ರಾಜ್ಯದ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉಪಚುನಾವಣೆ (BY Election) ನಡೆಯಲಿದೆ. ಈ ಹಿನ್ನೆಲೆ ಭರ್ಜರಿ ಪ್ರಚಾರ ನಡೆಸಲು ಜೆಡಿಎಸ್‌ (JDS) ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

    40 ಜನರ ಸ್ಟಾರ್‌ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವರು ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆದ ಹೆಚ್‌.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ಚುನಾವಣಾ ಆಯೋಗಕ್ಕೂ ಪಟ್ಟಿಯನ್ನ ರವಾನೆ ಮಾಡಿದ್ದಾರೆ. ಆದ್ರೆ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರಿಗೆ ಕೊಕ್‌ ನೀಡಲಾಗಿದೆ. ಇದನ್ನೂ ಓದಿ: ಭಾರತದಲ್ಲಿ ವಾಯು ಮಾಲಿನ್ಯದಿಂದ ವರ್ಷಕ್ಕೆ 33,000 ಸಾವು – ಬೆಂಗ್ಳೂರಿನ ಸ್ಥಿತಿ ಏನು? 

    ಇತ್ತೀಚೆಗೆ ಮುಡಾ ಪ್ರಕರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕೆಂಬ ಒತ್ತಾಯದ ವಿಚಾರಕ್ಕೆ ಸಂಬಂಧಿಸಿದಂತೆ ಜಿ.ಟಿ ದೇವೇಗೌಡರು ದಸರಾ ಉದ್ಘಾಟನಾ ವೇದಿಕೆಯಲ್ಲಿ ಮಾತನಾಡಿದ್ದರು. ಕುಮಾರಸ್ವಾಮಿ ವಿರುದ್ಧವೇ ವಾಗ್ದಾಳಿ ನಡೆಸಿದ್ದ ಜಿಟಿ ದೇವೇಗೌಡ ಅವರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಉಪಚುನಾವಣೆಗೆ ಸ್ಟಾರ್ ಪ್ರಚಾರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ವಕ್ಫ್ ಕ್ಯಾತೆ ವಿರೋಧಿಸಿ ರೈತರ ಹೋರಾಟ – ರಾತ್ರೋರಾತ್ರಿ ಪ್ರತಿಭಟನೆಗೆ ಧುಮುಕಿದ ರೈತರು

    ಜಿ.ಟಿ ದೇವೇಗೌಡರನ್ನು ಕೈಬಿಟ್ಟು, ಪುತ್ರ ಜಿ.ಡಿ ಹರೀಶ್‌ ಗೌಡ ಸೇರಿ 40 ಜನ ಪಟ್ಟಿಯಲ್ಲಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ – ಭಾರಿ ಹೈಡ್ರಾಮಾ ಬಳಿಕ ಎನ್‌ಸಿಪಿ ಅಭ್ಯರ್ಥಿಯಾಗಿ ನವಾಬ್‌ ಮಲಿಕ್‌ ಅಖಾಡಕ್ಕೆ

    ಪ್ರಮುಖ ಸ್ಟಾರ್‌ ಪ್ರಚಾರಕರು:
    ದೇವೇಗೌಡ – ರಾಷ್ಟ್ರೀಯ ಅಧ್ಯಕ್ಷ
    ಕುಮಾರಸ್ವಾಮಿ – ಕೇಂದ್ರ ಸಚಿವ, ರಾಜ್ಯಾಧ್ಯಕ್ಷ.
    ಸುರೇಶ್ ಬಾಬು – ಶಾಸಕಾಂಗ ನಾಯಕ
    ಅನಿತಾ ಕುಮಾರಸ್ವಾಮಿ – ಮಾಜಿ ಶಾಸಕಿ.
    ಸಾ.ರಾ. ಮಹೇಶ್- ಮಾಜಿ ಸಚಿವ
    ಪುಟ್ಟರಾಜು – ಮಾಜಿ ಸಚಿವ
    ಹರೀಶ್ ಗೌಡ – ಶಾಸಕ, ಜಟಿಡಿ ಪುತ್ರ
    ಮಲ್ಲೇಶ್ ಬಾಬು – ಸಂಸದ

  • ಅನಿತಾ ಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ: ಅಶ್ವಥ್ ನಾರಾಯಣ್

    ಅನಿತಾ ಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ: ಅಶ್ವಥ್ ನಾರಾಯಣ್

    ರಾಮನಗರ: ರೇಷ್ಮೆನಾಡು ರಾಮನಗರದ (Ramanagara) ನೂತನ ತಾಲೂಕು ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ನಡೆದಿದ್ದ ಬಿಜೆಪಿ-ಜೆಡಿಎಸ್ ನಡುವಿನ ಟಾಕ್ ಫೈಟ್ ಮುಂದುವರಿದಿದೆ. ಬಹಿರಂಗ ವಾಕ್ಸಮರ ಬಳಿಕ ಇದೀಗ ಟ್ವೀಟ್ ವಾರ್ ಆರಂಭವಾಗಿದೆ.

    ಈ ಬಗ್ಗೆ ಜೆಡಿಎಸ್‌ ಶಾಸಕಿ ಅನಿತಾ ಕುಮಾರಸ್ವಾಮಿ (Anitha Kumaraswamy) ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದರು. ಉಸ್ತುವಾರಿ ಸಚಿವರು ಸ್ಥಳೀಯ ಶಾಸಕಿಯನ್ನು ಬಿಟ್ಟು ನೂತನ ತಾಲೂಕು ಕೇಂದ್ರ ಉದ್ಘಾಟನೆ ಮಾಡಿದ್ದಾರೆ. ಇದು ಶಿಷ್ಟಾಚಾರ ಉಲ್ಲಂಘನೆ ಹಾಗೂ ಓರ್ವ ಮಹಿಳಾ ಜನಪ್ರತಿನಿಧಿಗೆ ಮಾಡಿರುವ ಅವಮಾನ, ಈ ಬಗ್ಗೆ ಸಭಾಧ್ಯಕ್ಷರಿಗೆ ದೂರು ನೀಡುವುದಾಗಿ ವಾಗ್ದಾಳಿ ನಡೆಸಿದ್ದರು. ಇದೀಗ ಇದಕ್ಕೆ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್ (Ashwath Narayan) ತಿರುಗೇಟು ನೀಡಿ ಕೌಂಟರ್ ಟ್ವೀಟ್ ಮಾಡಿದ್ದಾರೆ.

    ಟ್ವೀಟ್‌ನಲ್ಲಿ ಏನಿದೆ?: ಹಾರೋಹಳ್ಳಿ ನೂತನ ತಾಲೂಕು ಕಚೇರಿ ಉದ್ಘಾಟನೆ ವೇಳೆ ಅನಿತಾ ಕುಮಾರಸ್ವಾಮಿ ಅವರಿಗೆ ಅಪಮಾನಿಸಲಾಗಿದೆ ಎಂಬರ್ಥದ ಮಾತನ್ನು ಕೇಳಿ ಆಶ್ಚರ್ಯವಾಯಿತು. ಕಾರ್ಯಕ್ರಮ ಶಿಷ್ಟಾಚಾರದ ಪ್ರಕಾರವೇ ಜರುಗಿದರೂ ನಿಗದಿತ ಸಮಯಕ್ಕೆ ಹಾಜರಾಗದೇ, ಈ ರೀತಿ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ ಎನ್ನುವುದನ್ನು ಅವರೇ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಅಭಿವೃದ್ಧಿ ಮಾಡಿದ್ದು ಯಾರು? – ವೇದಿಕೆಯಲ್ಲೇ ಅಶ್ವಥ್ ನಾರಾಯಣ್ Vs ಅನಿತಾ ಕುಮಾರಸ್ವಾಮಿ ವಾಗ್ವಾದ

    ನಮ್ಮ ರಾಮನಗರ ಜಿಲ್ಲೆಯ ಜನತೆಯ ಶ್ರೇಯವೇ ನನ್ನ ಆದ್ಯತೆ. ಕ್ಷುಲ್ಲಕ ರಾಜಕಾರಣ, ಕುಟುಂಬ ರಾಜಕಾರಣದ ಬಗ್ಗೆ ನನಗೆ ಆಸಕ್ತಿಯಿಲ್ಲ. ಬಿಜೆಪಿ ಸರ್ಕಾರ ಬರುವ ಮೊದಲು ಅಭಿವೃದ್ಧಿ ಹೇಗೆ ಕುಂಠಿತವಾಗಿತ್ತು. ನಮ್ಮ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಕೆಲಸ ಆಗಿವೆ. ಇದು ಜನರಿಗೂ ಗೊತ್ತಿದೆ, ದಾಖಲೆಗಳೂ ಹೇಳುತ್ತವೆ ಎಂದರು. ಇದನ್ನೂ ಓದಿ: 1 ರೂ. ಚಿಲ್ಲರೆ ನೀಡದ ಕಂಡಕ್ಟರ್- ನ್ಯಾಯಾಲಯದ ಮೆಟ್ಟಿಲೇರಿದ ಪ್ರಯಾಣಿಕ

    ಹಾರೋಹಳ್ಳಿ ಪ್ರತ್ಯೇಕ ತಾಲೂಕು ರಚನೆಯಲ್ಲಿ ಕುಮಾರಸ್ವಾಮಿ ಅವರ ಕೊಡುಗೆಯ ಬಗ್ಗೆ ವೇದಿಕೆಯಲ್ಲಿ ಹೇಳಿದ್ದೇನೆ. ಇನ್ನೊಬ್ಬರ ಕೆಲಸಕ್ಕೆ ಕ್ರೆಡಿಟ್‌ ತೆಗೆದುಕೊಳ್ಳುವ ದುರ್ಬುದ್ಧಿಯಾಗಲಿ, ಕೆಲಸವನ್ನೇ ಮಾಡದೇ ನಾನೇ ಮಾಡಿದ್ದು ಎನ್ನುವ ಕುಬುದ್ಧಿಯಾಗಲಿ ನನ್ನಲ್ಲಿಲ್ಲ. ನೇರ ನುಡಿ, ಅಭಿವೃದ್ಧಿಪರ ರಾಜಕಾರಣ ನನ್ನದು ಟ್ವೀಟ್ ಮಾಡಿ ಅನಿತಾ ಕುಮಾರಸ್ವಾಮಿ ವಿರುದ್ಧ ಗುಡುಗಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಭಿವೃದ್ಧಿ ಮಾಡಿದ್ದು ಯಾರು? – ವೇದಿಕೆಯಲ್ಲೇ ಅಶ್ವಥ್ ನಾರಾಯಣ್ Vs ಅನಿತಾ ಕುಮಾರಸ್ವಾಮಿ ವಾಗ್ವಾದ

    ಅಭಿವೃದ್ಧಿ ಮಾಡಿದ್ದು ಯಾರು? – ವೇದಿಕೆಯಲ್ಲೇ ಅಶ್ವಥ್ ನಾರಾಯಣ್ Vs ಅನಿತಾ ಕುಮಾರಸ್ವಾಮಿ ವಾಗ್ವಾದ

    – ಘೋಷಣೆ ಮಾಡುವುದಲ್ಲ ಕೆಲಸ ಮಾಡಬೇಕು ಎಂದ ಸಚಿವ
    – ಬುರುಡೇ ಬಿಡುವುದಲ್ಲ, ಮಲ್ಲೇಶ್ವರಂನಲ್ಲಿ ಅಭಿವೃದ್ಧಿ ಮಾಡಲಿ

    ರಾಮನಗರ: ರೇಷ್ಮೆನಾಡು ರಾಮನಗರದಲ್ಲಿ (Ramanagara) ಬಿಜೆಪಿ, ಜೆಡಿಎಸ್ ನಡುವಿನ ಟಾಕ್ ಫೈಟ್ ಮುಂದುವರಿದಿದೆ. ಹಾರೋಹಳ್ಳಿ ನೂತನ ತಾಲೂಕು ಕೇಂದ್ರ ಉದ್ಘಾಟನಾ ಸಮಾರಂಭ ಮತ್ತೊಂದು ಮಾತಿನ ಜಟಾಪಟಿಗೆ ಸಾಕ್ಷಿಯಾಗಿದೆ. ಸಚಿವ ಅಶ್ವಥ್ ನಾರಾಯಣ್ (Ashwath Narayan) ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ (Anitha Kumaraswamy) ನಡುವೆ ಅಭಿವೃದ್ಧಿ ವಿಚಾರದ ಬಗ್ಗೆ ಕ್ರೆಡಿಟ್ ವಾರ್ ನಡೆದಿದ್ದು ವೇದಿಕೆ ಮೇಲೆಯೇ ಇಬ್ಬರು ವಾಗ್ವಾದ ನಡೆಸಿದ್ದಾರೆ.

    ಹಾಲಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಬಿಟ್ಟು ಕಚೇರಿ ಉದ್ಘಾಟನೆ ನಡೆಸಿದ್ದ ಜೆಡಿಎಸ್ (JDS) ಕಾರ್ಯಕರ್ತರನ್ನ ಕೆರಳಿಸಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೂ ಕಿಡಿಕಾರಿದ್ದಾರೆ.

    ನೂತನ ತಾಲೂಕು ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್, ನಮ್ಮ ಸರ್ಕಾರದಲ್ಲಿ ಈಗ ಎರಡು ತಾಲೂಕು ಕೇಂದ್ರ ಮಾಡಿದ್ದೇವೆ. ತಾಲೂಕು ಕೇಂದ್ರಕ್ಕೆ ಪೋಸ್ಟ್ ಸ್ಯಾಂಕ್ಷನ್ ಮಾಡಿದ್ದೇವೆ. ಇದು ಕೇವಲ ಒಂದು ದಿನದಲ್ಲಿ ಆಗುವ ಕೆಲಸ ಅಲ್ಲ. ಚುನಾವಣೆ ಸಮಯದಲ್ಲಿ ವೇಗವಾಗಿ ಕೆಲಸ ಮಾಡಿ ತಾಲೂಕು ರಚನೆ ಆಗಿದೆ. ರಾಮನಗರ ಜಿಲ್ಲೆಗೆ ಶೈಕ್ಷಣಿಕ ಯೋಜನೆ ನೀಡಲಾಗುತ್ತಿದೆ. ಹಿಂದೆ ಬೇಸಿಗೆ ಅರಂಭ ಆದರೆ ಜಿಲ್ಲೆಯಲ್ಲಿ ಕುಡಿಯಲು ನೀರು ಇರುತ್ತಿರಲಿಲ್ಲ. 450 ಕೋಟಿ ರೂ. ವೆಚ್ಚದ ಜಲಜೀವನ್ ಮಿಷನ್ ಮೂಲಕ ನೀರು ನೀಡಿದ್ದು ನಮ್ಮ ಸರ್ಕಾರ. 1800 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ತಂದಿದ್ದೇವೆ ಎಂದರು.

    ಈ ಹೇಳಿಕೆ ಬರುತ್ತಿದ್ದಂತೆ ವೇದಿಕೆಯಲ್ಲೇ ಶಾಸಕಿ ಅನಿತಾ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು. ನಮ್ಮ ಕಾಲದಲ್ಲೇ ಘೋಷಣೆ ಆಗಿತ್ತು ಎಂದು ಅನಿತಾ ಕುಮಾರಸ್ವಾಮಿ ಹೇಳಿದರು. ಮಾತು ಮುಂದುವರಿಸಿದ ಸಚಿವ ಅಶ್ವಥ್ ನಾರಾಯಣ್, ಆಗಲಿ‌ ಮೇಡಂ ನಿಮ್ಮ ಸರದಿ ಬಂದಾಗ ಬಂದು ಹೇಳಿ. ಘೋಷಣೆ ಎಲ್ಲರೂ ಮಾಡುತ್ತಾರೆ. ಆದರೆ ಕೆಲಸ ಮಾಡಬೇಕು ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಇಬ್ಬರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ- ಐಪಿಎಸ್ ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವರ್ಗಾವಣೆ

    ನಂತರ ಕಾರ್ಯಕ್ರಮದ ಉದ್ದೇಶಿಸಿ ಮಾತನಾಡಿದ ಶಾಸಕಿ ಅನಿತಾ ಕುಮಾರಸ್ವಾಮಿ, ಅಧ್ಯಕ್ಷತೆಗೆ ನನ್ನ ಹೆಸರು ಹಾಕಿ ನಾನು ಬರುವುದಕ್ಕೂ ಮುನ್ನವೇ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದಾರೆ. ಕಾಟಾಚಾರಕ್ಕೆ ನನ್ನನ್ನ ಕರೆದಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ಈ ಹಾರೋಹಳ್ಳಿ ತಾಲೂಕು ರಚನೆಗೆ ನನ್ನ ಶ್ರಮ ಇದೆ. ಸದನದಲ್ಲಿ ಈ ಬಗ್ಗೆ ಚರ್ಚೆ ಮಾಡಿ ನೂತನ ತಾಲೂಕುಗೆ ಅನುಮೋದನೆ ಪಡೆದಿದ್ದೇನೆ. ಈಗ ಪೋಸ್ಟ್‌ಗಳ  ಅನುಮೋದನೆ ಮಾಡುವ ಬಗ್ಗೆಯೂ ಸರ್ಕಾರಕ್ಕೆ ಪತ್ರ ಬರೆದು ಕೆಲಸ ಮಾಡಿಸಿದ್ದೇನೆ. ಉಸ್ತುವಾರಿ ಸಚಿವರು ಈಗ ಹೇಳಿದ ನೀರಾವರಿ ಯೋಜನೆ ಆಗಿದ್ದೂ ಕುಮಾರಸ್ವಾಮಿ ಕಾಲದಲ್ಲಿ. ಈ ಕಾರ್ಯಕ್ರಮಕ್ಕೆ ಕುಮಾರಸ್ವಾಮಿ ಅವರನ್ನು ನಾನು ಕರೆದಿದ್ದೆ. ಆದರೆ ಅವರು ಪಂಚರತ್ನ ಕಾರ್ಯಕ್ರಮದಲ್ಲಿ ಬ್ಯುಸಿ ಇದ್ದಾರೆ‌ ಎಂದರು.

    ಕುಮಾರಸ್ವಾಮಿ ಬಂದಿದ್ದರೆ ಬೇರೆ ಯಾರೂ ಮಾತನಾಡ್ತಿರಲಿಲ್ಲ ಎಂದು ಉಸ್ತುವಾರಿ ಸಚಿವರಿಗೆ ಅನಿತಾ ಕುಮಾರಸ್ವಾಮಿ ಟಾಂಗ್ ನೀಡಿದ್ರು. ಅಲ್ಲದೇ ಉಸ್ತವಾರಿ ಸಚಿವರಿಗೆ ಬರೀ ಬುರುಡೆ ಬಿಡೋದಷ್ಟೇ ಮಾತ್ರ ಇವರಿಗೆ ಗೊತ್ತು. ಸಚಿವರು ಮೊದಲು ಮಲ್ಲೇಶ್ವರಂಗೆ ಹೋಗಿ ಅಭಿವೃದ್ಧಿ ಮಾಡಲಿ. ನಾನು‌ ಶಿವನ ಭಕ್ತೆ, ಮಲ್ಲೇಶ್ವರಂನ ಕಾಡುಮಲ್ಲೇಶ್ಚರ ದೇವಸ್ಥಾನಕ್ಕೆ ಹೋಗುತ್ತಿರುತ್ತೇನೆ. ಅಲ್ಲಿಯ ಅಭಿವೃದ್ಧಿಯನ್ನೂ ನೋಡಿದ್ದೇನೆ. ಕಾರ್ಯಕ್ರಮ ಮಗಿಯೋವರೆಗೂ ಸಚಿವರು ಇರಬೇಕಿತ್ತು. ಅವರ ಸಾಧನೆ ಬಗ್ಗೆ ಹೇಳುತ್ತಿದ್ದೆ ಎಂದು ಕಾರ್ಯಕ್ರಮದಿಂದ ಅರ್ಧಕ್ಕೆ ಹೋದ ಸಚಿವ ಅಶ್ವಥ್ ನಾರಾಯಣ್‌ಗೆ  ತಿರುಗೇಟು ನೀಡಿದರು.

    ತಾಲೂಕು ಕೇಂದ್ರದ ಶಿಲಾನ್ಯಾಸ ಫಲಕದಲ್ಲಿ ಕುಮಾರಸ್ವಾಮಿ ಹೆಸರನ್ನು ಸಣ್ಣದಾಗಿ ಹಾಕಿದ್ದಾರೆ. ರೇಷ್ಮೆ ನಿಗಮ ಮಂಡಳಿ ಅಧ್ಯಕ್ಷ ಗೌತಮ್ ಗೌಡ ಹೆಸರನ್ನು ದಪ್ಪಕ್ಷರಗಳಿಂದ ಹಾಕಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಬಳಿಕ ಕಾರ್ಯಕರ್ತರನ್ನ ಪೊಲೀಸರು ಸಮಾಧಾನ ಪಡಿಸಿದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದೇವರ ಮೇಲೆ ಬಿಜೆಪಿಯವರಿಗಿಂತ ನಮಗೆ ಭಕ್ತಿ ಹೆಚ್ಚು – ದೇವೇಗೌಡರಿಗಿಂತ ದೊಡ್ಡ ದೈವಾರಾಧಕರು ಯಾರೂ ಇಲ್ಲ: ಅನಿತಾ ಕುಮಾರಸ್ವಾಮಿ

    ದೇವರ ಮೇಲೆ ಬಿಜೆಪಿಯವರಿಗಿಂತ ನಮಗೆ ಭಕ್ತಿ ಹೆಚ್ಚು – ದೇವೇಗೌಡರಿಗಿಂತ ದೊಡ್ಡ ದೈವಾರಾಧಕರು ಯಾರೂ ಇಲ್ಲ: ಅನಿತಾ ಕುಮಾರಸ್ವಾಮಿ

    ರಾಮನಗರ: ಬಿಜೆಪಿಯವರಿಗಿಂತ (BJP) ನಮಗೆ ದೇವರ ಮೇಲೆ ಭಕ್ತಿ ಹೆಚ್ಚಾಗಿದೆ. ದೇವೇಗೌಡರಿಗಿಂತ (H.D DeveGowda) ದೊಡ್ಡ ದೈವಾರಾಧಕರು ಯಾರೂ ಇಲ್ಲ. ನಾವು ಸದಾ ದೇವರಲ್ಲಿ ನಂಬಿಕೆ ಇಟ್ಟಿದ್ದೇವೆ. ಅದಕ್ಕಾಗಿಯೇ ರಾಮನಗರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಮಾಡಿಸಿ ಲಕ್ಷಾಂತರ ಜನರಿಗೆ ದೇವರ ದರ್ಶನ ಮಾಡಿಸಿದ್ದೆವು. ಭಕ್ತಿಗೆ ಇದಕ್ಕಿಂತ ಇನ್ನೊಂದು ನಿದರ್ಶನ ಬೇಕಿಲ್ಲ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ (Anitha Kumaraswamy) ಅಭಿಪ್ರಾಯಪಟ್ಟರು.

    ತಾಲೂಕಿನ ಕೈಲಂಚಾ ಹೋಬಳಿ ಕವಣಾಪುರದಲ್ಲಿ ಸಮುದಾಯ ಭವನ ನಿರ್ಮಾಣ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಜಾತಿ, ಧರ್ಮದ ವಿಷ ಬೀಜ ಬಿತ್ತುವ ಕೆಲಸ ಫಲ ನೀಡುವುದಿಲ್ಲ. ಎಲ್ಲ ಸಮುದಾಯದವರು ಒಂದೇ ಎಂಬ ಭಾವನೆಯಲ್ಲಿ ಅಣ್ಣ ತಮ್ಮಂದಿರಂತೆ ಜೀವನ ನಡೆಸಬೇಕು. ಕ್ಷೇತ್ರದ ಜನರು ಸಹೋದರರಂತೆ ಸಹ ಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಇಲ್ಲಿ ಯಾರೂ ಜಾತಿ, ಮತ, ಧರ್ಮದ ಆಧಾರಿತ ರಾಜಕೀಯಕ್ಕೆ ಮನ್ನಣೆ ನೀಡುವುದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಕರ್ನಾಟಕದ ಸಹಕಾರಿ ಕ್ಷೇತ್ರದಿಂದ ಇಡೀ ದೇಶಕ್ಕೆ ಸಂದೇಶ ರವಾನೆ – ಅಮಿತ್‌ ಶಾ ಬಣ್ಣನೆ

    ಈ ಹಿಂದೆ ಕುಮಾರಸ್ವಾಮಿಯವರು (H.D Kumaraswamy) ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತಿರುಪತಿ ದೇವಾಲಯ ಟ್ರಸ್ಟ್‌ನವರು ರಾಮನಗರದಲ್ಲಿ ದೇವಾಲಯ ನಿರ್ಮಿಸಲು ಮುಂದಾಗಿ ಸ್ಥಳವನ್ನು ಹುಡುಕುತ್ತಿದ್ದರು. ಆಗ 10 ಎಕರೆ ಜಾಗ ಗುರುತಿಸುವ ಕೆಲಸ ನಡೆದಿತ್ತು. ನಾವು ಹೆಚ್ಚು ಮಾತನಾಡುವುದಿಲ್ಲ, ಕೆಲಸ ಮಾಡಿ ತೋರಿಸುತ್ತೇವೆ. ವಿರೋಧಿಗಳಿಗೆ ಅಭಿವೃದ್ಧಿ ಕೆಲಸಗಳ ಮೂಲಕವೇ ಪ್ರತ್ಯುತ್ತರ ನೀಡುತ್ತೇವೆ. ನಮ್ಮದು ಅಭಿವೃದ್ಧಿ ರಾಜಕಾರಣ ಮಾತ್ರ. ಕೆಲವರು ಓಡಾಡಿಕೊಂಡು ಕೆಲಸ ಮಾಡುವವರ ವಿರುದ್ಧ ಟೀಕೆ ಮಾಡುವುದು ಸುಲಭ. ಆದರೆ, ಕ್ಷೇತ್ರದ ಹಲವು ಅಭಿವೃದ್ದಿ ಕಾರ್ಯಗಳನ್ನು ಮಾಡುವ ನಿಟ್ಟಿನಲ್ಲಿ ನಾನು ಗಮನ ಹರಿಸಿಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಡಿ.31ರ ರಾತ್ರಿ ನಂದಿ ಬೆಟ್ಟಕ್ಕೆ ನೋ ಎಂಟ್ರಿ – ಪಾರ್ಟಿ ಪ್ರಿಯರಿಗೆ ನಿರಾಸೆ

    Live Tv
    [brid partner=56869869 player=32851 video=960834 autoplay=true]

  • ನಾನು ಕನಸಿನಲ್ಲೂ ಯೋಚನೆ ಮಾಡಿರಲಿಲ್ಲ: ನಿಖಿಲ್‌ ಕುಮಾರಸ್ವಾಮಿ

    ನಾನು ಕನಸಿನಲ್ಲೂ ಯೋಚನೆ ಮಾಡಿರಲಿಲ್ಲ: ನಿಖಿಲ್‌ ಕುಮಾರಸ್ವಾಮಿ

    ರಾಮನಗರ: ತಾಯಿ ಇದ್ದಕ್ಕಿದ್ದಂತೆ ಘೋಷಣೆ ಮಾಡಿದ್ದಾರೆ. ನಾನು ಕನಸಿನಲ್ಲೂ ಯೋಚನೆ ಮಾಡಿರಲಿಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ(Nikhil Kumaraswamy) ಹೇಳಿದ್ದಾರೆ.

    ರಾಮನಗರದ ಹಳೇ ಬಸ್ ನಿಲ್ದಾಣದಲ್ಲಿ ಪಂಚರತ್ನ ಯಾತ್ರೆ‌ಯನ್ನು ಉದ್ದೇಶಿಸಿ ಮಾತನಾಡಿದ್ದ ಅನಿತಾ ಕುಮಾರಸ್ವಾಮಿ(Anitha Kumaraswamy) ರಾಮನಗರ(Ramangara) ಕ್ಷೇತ್ರದಿಂದ ಪುತ್ರ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾನೆ ಎಂದು ಘೋಷಣೆ ಮಾಡಿದ್ದರು.

    ತನ್ನ ಹೆಸರನ್ನು ಘೋಷಣೆ ಮಾಡಿದ ಬಳಿಕ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ತಾಯಿ ಬಹಳ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಇವತ್ತಿಗೂ ನನ್ನ ಅಭಿಪ್ರಾಯದಲ್ಲಿ ರಾಮನಗರಕ್ಕೆ ಸೂಕ್ತ ಅಭ್ಯರ್ಥಿ ಅಂದ್ರೆ ಅದು ಕುಮಾರಣ್ಣ. ನಮ್ಮ ತಂದೆ ಜನತೆ ಪರವಾಗಿ ಧ್ವನಿ ಎತ್ತಿ ಕೆಲಸ ಮಾಡಿದ್ದಾರೆ ಎಂದು ಹೇಳಿ ಅವರು ಗದ್ಗದಿತರಾದರು. ಇದನ್ನೂ ಓದಿ: ಪುತ್ರನಿಗಾಗಿ ಅನಿತಾ ಕುಮಾರಸ್ವಾಮಿ ತ್ಯಾಗ – ರಾಮನಗರದಿಂದ ನಿಖಿಲ್‌ ಸ್ಪರ್ಧೆ

    ನನ್ನ ಸ್ಪರ್ಧೆ ಪಕ್ಷಕ್ಕೆ ಬಿಟ್ಟ ತೀರ್ಮಾನ. ನನಗೆ ಪಕ್ಷದ ಸಂಘಟನೆ ಜವಾಬ್ದಾರಿ ನೀಡಲಾಗಿದೆ. ಯುವಘಟಕದ ರಾಜ್ಯಾಧ್ಯಕ್ಷನ್ನಾಗಿ ಮಾಡಿದ್ದಾರೆ. ನಾನೂ ರಾಜ್ಯಾದ್ಯಂತ ಪ್ರವಾಸ ಮಾಡಿ ಸಂಘಟನೆ ಮಾಡುತ್ತಿದ್ದೇನೆ. ಕುಮಾರಣ್ಣ ಪಂಚರತ್ನ ರಥಯಾತ್ರೆ ಮಾಡುತ್ತಿದ್ದಾರೆ. ಹಾಗಾಗಿ ರಾಮನಗರ ಜಿಲ್ಲೆಯಾದ್ಯಂತ ಹೆಚ್ಚು ಸಂಚಾರ ಮಾಡ್ತಿದ್ದೇನೆ. ಎರಡೂ ರಾಷ್ಟ್ರೀಯ ಪಕ್ಷಗಳ ಮೇಲೆ ಜನರಿಗೆ ನಂಬಿಕೆ ಇಲ್ಲ ಎಂದರು.

    ಹಿಂದೆ ದೇವೇಗೌಡರ ಪರವಾಗಿ ನಿಂತಿದ್ದೀರಿ. ನಂತರ ಎರಡು ಬಾರಿ ಕುಮಾರಸ್ವಾಮಿ(HD Kumaraswamy) ಪರ ನಿಂತಿದ್ದೀರಿ. ಕುಮಾರಣ್ಣನನ್ನು ರಾಜಕೀಯವಾಗಿ ಬೆಳೆಸಿದ್ದೀರಿ. ಈಗ ತಾಯಿ ಬಹಳ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ನನಗೆ ನಿಮ್ಮ ಸೇವೆ ಮಾಡಲು ಅವಕಾಶ ನೀಡಿ ಎಂದು ಬೇಡಿಕೊಂಡರು.

    ನನಗೆ ಮಂಡ್ಯ ಜಿಲ್ಲೆಗೆ ಅನ್ಯಾಯ ಮಾಡಿಲ್ಲ. ನನ್ನ ಕೊನೆ ಉಸಿರು ಇರುವವರೆಗೂ ನಾನು ಮಂಡ್ಯದ(Mandya) ಋಣ ತೀರಿಸಲು ಆಗುವುದಿಲ್ಲ. ರೈತರಿಗೆ ಯುವಕರಿಗೆ ಮಹಿಳೆಯರಿಗೆ ಬದುಕು ಕಟ್ಟಿಕೊಡುವ ಕೆಲಸ ಆಗಬೇಕು. ಅದಕ್ಕಾಗಿ ಕುಮಾರಣ್ಣ ನೇತೃತ್ವದಲ್ಲಿ ಸ್ವತಂತ್ರ ಸರ್ಕಾರ ರಚನೆಯಾಗಬೇಕು. ಸರ್ವ ಜನಾಂಗದ ಶಾಂತಿಯ ತೋಟದಂತೆ ನಾವು ಆಡಳಿತ ನೀಡುತ್ತೇವೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಭರವಸೆ ನೀಡಿದರು.

    Live Tv
    [brid partner=56869869 player=32851 video=960834 autoplay=true]

  • ಪುತ್ರನಿಗಾಗಿ ಅನಿತಾ ಕುಮಾರಸ್ವಾಮಿ ತ್ಯಾಗ – ರಾಮನಗರದಿಂದ ನಿಖಿಲ್‌ ಸ್ಪರ್ಧೆ

    ಪುತ್ರನಿಗಾಗಿ ಅನಿತಾ ಕುಮಾರಸ್ವಾಮಿ ತ್ಯಾಗ – ರಾಮನಗರದಿಂದ ನಿಖಿಲ್‌ ಸ್ಪರ್ಧೆ

    ರಾಮನಗರ: ಪುತ್ರನಿಗಾಗಿ  ತಾಯಿ ಅನಿತಾ ಕುಮಾರಸ್ವಾಮಿ(Anitha Kumaraswamy) ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ(Ramangara) ಕ್ಷೇತ್ರದಿಂದ ಪುತ್ರ ನಿಖಿಲ್‌(Nikhil Kumaraswamy) ಸ್ಪರ್ಧಿಸಲಿದ್ದಾನೆ ಎಂದು ಅನಿತಾ ಕುಮಾರಸ್ವಾಮಿ ಘೋಷಿಸಿದ್ದಾರೆ.

    ರಾಮನಗರದ ಹಳೇ ಬಸ್ ನಿಲ್ದಾಣದಲ್ಲಿ ಪಂಚರತ್ನ ಯಾತ್ರೆ‌ಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಖಿಲ್ ರಾಮನಗರದ ಅಭ್ಯರ್ಥಿ ಎಂದು ಪ್ರಕಟಿಸಿದ್ದಾರೆ. ನಿಖಿಲ್ ಹೆಸರು ಘೋಷಣೆ ಆಗುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಘಾರ ವ್ಯಕ್ತಪಡಿಸಿದ್ದಾರೆ.  ಇದನ್ನೂ ಓದಿ: ಸಿಕ್ಸರ್, ಬೌಂಡರಿಗಳ ಸುರಿಮಳೆ – ಭಾರತಕ್ಕೆ ಅಂಧರ ವಿಶ್ವಕಪ್

    ನಾನು ದೇವರ ಮುಂದೆ ನಿಂತಾಗ ನನ್ನ ಪತಿ ಹಾಗೂ ಪುತ್ರನ ಏಳಿಗೆಯನ್ನು ಬಯಸುತ್ತೇನೆ. ಕೆಲವರು ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಯಾವುದೇ ಗೊಂದಲಕ್ಕೂ ಎಡೆಮಾಡಿಕೊಡಬೇಡಿ ಎಂದು ಹೇಳಿ ಅನಿತಾ ಕುಮಾರಸ್ವಾಮಿ ಭಾವುಕರಾದರು.

    Live Tv
    [brid partner=56869869 player=32851 video=960834 autoplay=true]

  • ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಸಾಲ ಮನ್ನಾ ಮಾಡಿ – ಹೆಚ್‍ಡಿಕೆಗೆ ಪತ್ನಿ ಅನಿತಾ ಸಲಹೆ

    ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಸಾಲ ಮನ್ನಾ ಮಾಡಿ – ಹೆಚ್‍ಡಿಕೆಗೆ ಪತ್ನಿ ಅನಿತಾ ಸಲಹೆ

    ರಾಮನಗರ: ಹಿಂದೆ ಪತಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ರೈತರ ಸಾಲ ಮನ್ನಾ ಮಾಡಿದರು. ಮತ್ತೆ ಅಧಿಕಾರಕ್ಕೆ ಬಂದರೆ ಮಹಿಳೆಯರ ಸಾಲ ಮನ್ನಾ ಮಾಡಬೇಕು ಎಂದು ಪತ್ನಿ, ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಹೆಚ್‍ಡಿಕೆಗೆ ಸಲಹೆ ನೀಡಿದರು.

    ‘ಜನತಾ ಪರ್ವ 1.O’/’ಮಿಷನ್ 123’ ಗುರಿಯೊಂದಿಗೆ ಬಿಡದಿಯ ತೋಟದಲ್ಲಿ ಆಯೋಜಿಸಲಾಗಿರುವ ಜೆಡಿಎಸ್ ಸಂಘಟನಾ ಕಾರ್ಯಗಾರ ಮಹಿಳಾ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಸಾಲ ಮನ್ನಾ ಮಾಡಿ ಎಂದು  ಕೇಳುತ್ತಿದ್ದಾರೆ. ಕಷ್ಟದಲ್ಲಿ ಇರುವ ಮಹಿಳೆಯರ ನೆರವಿಗೆ ಧಾವಿಸಬೇಕು ಎಂದರು.

    ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಆಗಮಿಸಿದ್ದ ಮಹಿಳಾ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಿಳೆಯರಿಗೆ ವಿಶೇಷವಾದ ಕಾರ್ಯಕ್ರಮ ಕೊಡಿ. ಇದು ನಾನು ಕುಮಾರಸ್ವಾಮಿ ಅವರಿಗೆ ನೀಡುವ ಮುಖ್ಯವಾದ ಸಲಹೆ. ರೈತರು ಮಾಡಿದ ಸಾಲ ಮನ್ನಾ ಕ್ರಾಂತಿಕಾರಿ ಕ್ರಮ. ಹಾಗೆಯೇ ಕುಟುಂಬ ನಿರ್ವಹಣೆಗೆ, ಮಕ್ಕಳ ಶಿಕ್ಷಣಕ್ಕೆ ಮಹಿಳೆಯರು ಸಾಲ ಮಾಡಿಕೊಂಡಿದ್ದಾರೆ. ಮುಂದೆ ನೀವು ಅಧಿಕಾರಕ್ಕೆ ಬಂದರೆ ಅಂತಹ ಮಹಿಳೆಯರ ಸಾಲವನ್ನೂ ಮನ್ನಾ ಮಾಡಿ. ಪಂಚರತ್ನ ಯೋಜನೆ ರೂಪಿಸುವ ಯೋಚನೆ ಶ್ಲಾಘನೀಯ. ಇದರ ಜತೆಗೆ ಉಚಿತ ಶಿಕ್ಷಣ ನೀಡಿದರೆ ಸಮಾಜಕ್ಕೆ, ರಾಜ್ಯಕ್ಕೆ ಇನ್ನೂ ಒಳ್ಳೆಯದು ಎಂದರು. ಇದನ್ನೂ ಓದಿ: ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಪ್ರಕಟಿಸಿದ ಹೈಕೋರ್ಟ್

    ಫ್ರೀ ಹೆಲ್ತ್ ಸ್ಕೀಮ್ ಮಾಡಿದರೆ ಒಳ್ಳೆಯದು. ಈ ಮೂಲಕ ಬಡಜನರ ಆರೋಗ್ಯ ಬವಣೆ ತಪ್ಪುತ್ತದೆ. ಉತ್ತಮ ಆರೋಗ್ಯ ಇದ್ದರೆ ಉತ್ತಮ ಸಮಾಜ ನಿರ್ಮಾಣ ಆಗುತ್ತದೆ. ಮಹಿಳೆಯರಿಗೆ ಉತ್ತಮ ಅವಕಾಶಗಳಿವೆ. ಎಲ್ಲರೂ ಪ್ರೋತ್ಸಾಹ ನೀಡಬೇಕು. ಚುನಾವಣಾ ಅಭ್ಯರ್ಥಿಗಳು ಮಹಿಳೆಯರನ್ನು ಗೌರವದಿಂದ ನಡೆಸಿಕೊಳ್ಳಬೇಕು. ಸ್ವತಂತ್ರವಾಗಿ ಮಹಿಳೆಯರು ಕೆಲಸ ನಿಭಾಯಿಸಲು ಕಲಿಯಬೇಕು. ದೇವರು ಈ ಅವಕಾಶ ಕೊಟ್ಟಿದ್ದಾನೆ. ಸ್ವತಂತ್ರವಾಗಿ ಬದುಕಬೇಕು, ನಿರ್ಧಾರಗಳನ್ನು ಕೈಗೊಳ್ಳುವ ದಿಟ್ಟತನ ತೋರಬೇಕು ಎಂದು ಹೇಳಿದರು.

    ಮೊದಲು ಯಜಮಾನರನ್ನು ಕೇಳಬೇಕು ಅನ್ನೋದನ್ನು ಬಿಡಿ. ಸ್ವತಂತ್ರವಾಗಿ ಆಲೋಚನೆ ಮಾಡಿ. ಮಹಿಳೆಯರು ಯಾವುದರಲ್ಲೂ ಕಡಿಮೆ ಇಲ್ಲ. ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಇದ್ದಾರೆ. ನೀವೆಲ್ಲರೂ ಮುಂದೆ ಹೇಗೆ ಬೆಳೆಯಬೇಕು ಎಂಬುದನ್ನು ತೀರ್ಮಾನ ಮಾಡಿ. ಅನೇಕ ಮಹಿಳೆಯರು ಉತ್ತಮ ಸಾಧನೆ ಮಾಡಿದ್ದಾರೆ. ಸಾನಿಯಾ ಮಿರ್ಜಾ ಕೂಡ ಅನೇಕ ಸವಾಲುಗಳನ್ನು ಮೆಟ್ಟಿ ನಿಂತು ದೊಡ್ಡ ಸಾಧನೆ ಮಾಡಿದ್ದಾರೆ. ಪುರುಷ ಪ್ರಧಾನ ಸಮಾಜ ನಮ್ಮದು. ಮಹಿಳೆಯರಿಗೆ ಅವಕಾಶ ಸಿಗೋದು ಕಡಿಮೆ. ಆದರೆ ನಾವು ಇಂಡಿಪೆಂಡೆಂಟ್ ಆಗಿ ಇರಬೇಕು. ಮಹಿಳೆಯರ ಬಗ್ಗೆ ಟೀಕೆ ಟಿಪ್ಪಣಿ ಹೆಚ್ಚು. ಅದರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದು ತಿಳಿಸಿದರು. ಇದನ್ನೂ ಓದಿ: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರ – ಶಿವನ ಭಕ್ತನಾಗಿದ್ದ ಗಾಂಜಾ ಆರೋಪಿ

    ಕುಮಾರಸ್ವಾಮಿಯವರು ಮಾನವೀಯ ಗುಣವುಳ್ಳ ನಾಯಕರು. ಎರಡು ಬಾರಿ ಸಿಎಂ ಆದಾಗಲೂ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅನೇಕ ಹೊಸ ಹೊಸ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಯಾವೊಬ್ಬ ಮುಖ್ಯಮಂತ್ರಿ ಮಾಡದೇ ಇರುವ ಕಾರ್ಯಕ್ರಮ ನೀಡಿದ್ದಾರೆ. ಜನತಾ ದರ್ಶನದ ಮೂಲಕ  ಜನಮನದಲ್ಲಿ ನೆಲೆಸಿದ್ದಾರೆ. ನಮಗೆಲ್ಲ ನಿಜವಾದ ಸ್ಪೂರ್ತಿ ಎಂದರೆ ದೇವೇಗೌಡರು. ನಾವು ನಾಚಿಕೊಳ್ಳುವ ರೀತಿ ಪಾದರಸ ರೀತಿ ಓಡಾಡುತ್ತಾರೆ. ಪ್ರತಿಯೊಂದು ವಿಷಯಕ್ಕೂ ಯೋಚನೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅವರೇ ನಮಗೆಲ್ಲ ಸ್ಪೂರ್ತಿ. ಮೀಸಲಾತಿ ವಿಚಾರದಲ್ಲಿ ದೇವೇಗೌಡರ ಕೊಡುಗೆ ಅಪಾರ. ನಾನು ರಾಜಕಾರಣ ಏನಾದರೂ ತಿಳಿದುಕೊಂದಿದ್ದರೆ ಅದು ದೇವೇಗೌಡರಿಂದ ಎಂದರು.

    ನಾನು ಅವರ ಸೊಸೆ ಎಂಬುದು ಒಂದು ಕಡೆಯಾದರೆ, ಇನ್ನೊಂದೆಡೆ ಅವರ ಅಪ್ಪಟ ಅಭಿಮಾನಿ. ಯಾವುದೇ ಒಂದು ವಿಚಾರಕ್ಕೆ ಬೇಜಾರಾದರೆ ಅವರ ಜೀವನವನ್ನು ಒಮ್ಮೆ ಮೆಲುಕು ಹಾಕಿದರೆ ಸಾಕು. ಏನೋ ಒಂದು ರೀತಿಯಾದ ಸಮಾಧಾನ ಆಗುತ್ತದೆ. ಈಗ ಬದಲಾವಣೆ ಪರ್ವ ಬಂದಿದೆ ಅನ್ನುವ ಭಾವನೆ ನನಗಿದೆ. ಜನರೂ ಕೂಡ ಬದಲಾವಣೆ ಬಯಸುತ್ತಿದ್ದಾರೆ. ಬಡವರ, ರೈತರ ಪರ ಸರ್ಕಾರ ರಚನೆ ಮಾಡಬೇಕು. ದೂರದೃಷ್ಟಿ ಇರುವ ರಾಜಕಾರಣಿಗಳಾಗಿ ನಾವೆಲ್ಲ ಬೆಳೆಯಬೇಕು ಎಂದು ಹೇಳಿದರು.

    ಈ ವೇಳೆ ಜೆಡಿಎಸ್ ರಾಜ್ಯ ಮಹಿಳಾ ಅಧ್ಯಕ್ಷೆ ಲೀಲಾದೇವಿ ಆರ್ ಪ್ರಸಾದ್, ದೇವದುರ್ಗ ಮುಂದಿನ ಚುನಾವಣೆ ಅಭ್ಯರ್ಥಿ ಕರಿಯಮ್ಮ, ಬೆಂಗಳೂರು ನಗರದ ಮಹಿಳಾ ಜೆಡಿಎಸ್ ಅಧ್ಯಕ್ಷೆ ರುತ್ ಮನೋರಮಾ ಹಾಗೂ ಕೆ.ಷರೀಫಾ ಹಾಜರಿದ್ದರು.

  • ನಾನು ಒಬ್ಬ ಮಹಿಳೆ ಇದ್ದೇನೆ, ನಂಗೂ ಸಹಕಾರ ಕೊಡಿ: ಅನಿತಾ ಕುಮಾರಸ್ವಾಮಿ ಮನವಿ

    ನಾನು ಒಬ್ಬ ಮಹಿಳೆ ಇದ್ದೇನೆ, ನಂಗೂ ಸಹಕಾರ ಕೊಡಿ: ಅನಿತಾ ಕುಮಾರಸ್ವಾಮಿ ಮನವಿ

    ರಾಮನಗರ: ಸುಮ್ಮನೆ ನಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಬೇಡಿ. ನಾನು ಒಬ್ಬ ಮಹಿಳೆ ಇದ್ದೇನೆ, ನನಗೂ ಸಹಕಾರ ಕೊಡಿ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಮನವಿ ಮಾಡಿದರು.

    ರಾಮನಗರದ ರಾಜೀವ್ ಗಾಂಧಿಪುರದಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ಮಾಡಲು ಆಗಮಿಸಿದ್ದರು. ನಂತರ ಅಲ್ಲಿನ ಜನರ ಕಷ್ಟಸುಖಗಳನ್ನ ಆಲಿಸಿದ ಬಳಿದ ಮಾಧ್ಯಮದವರಿಗೆ ಜೊತೆಗೆ ಮಾತನಾಡುತ್ತಾ ಗರಂ ಆದರು. ನಾನು ರಾಜಕಾರಣ ಮಾಡಲು ಬಂದಿಲ್ಲ, ಸಮಾಜಸೇವೆ ಮಾಡಲು ಬಂದಿದ್ದೇನೆ. ಬಡವರು ಅಂದರೆ ನಾನು ಪಕ್ಷ ನೋಡದೆ ಸಹಾಯ ಮಾಡಿದ್ದೇನೆ. ರಾಜಕಾರಣದ ಸಮಯದಲ್ಲಿ ರಾಜಕೀಯ, ಆದರೆ ಬಡವರ ವಿಚಾರದಲ್ಲಿ ರಾಜಕೀಯ ಮಾಡಿಲ್ಲ ಎಂದರು.

    ಕೊರೋನಾ ಸಂದರ್ಭದಲ್ಲಿ ನಾನು, ಪತಿ ಕುಮಾರಸ್ವಾಮಿ, ಮಗ ನಿಖಿಲ್ ಜೊತೆಗೆ ಸೊಸೆಯೂ ಬಂದಿದ್ದರು. ಬಡವರಿಗೆ ಫುಡ್ ಕಿಟ್ ಜೊತೆಗೆ ಹೆಲ್ತ್ ಕಿಟ್ ಕೂಡ ಕೊಟ್ಟಿದ್ದೇವೆ. ಜೊತೆಗೆ ರಾಮನಗರದ ಎಪಿಎಂಸಿ, ರೇಷ್ಮೆ ಮಾರ್ಕೆಟ್ ನಲ್ಲಿ ಸ್ಯಾನಿಟೈಜರ್ ಟನಲ್ ಹಾಕಿಸಿದ್ದೆವು. ಇಷ್ಟೆಲ್ಲ ಕೆಲಸ ಬೇರೆ ಯಾವ ತಾಲೂಕಿನಲ್ಲಿ ಆಗಿದೆ ಹೇಳಿ ಎಂದು ಮಾಧ್ಯಮದವರನ್ನು ಪ್ರಶ್ನೆ ಮಾಡಿದರು.

    ಇದೇ ವೇಳೆ ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರೆಲ್ಲರೂ ನಮ್ಮ ಮನೆಯವರು. ಯಾರು ಕೂಡ ಪಕ್ಷ ಬಿಡುವುದಿಲ್ಲ ಎಂದು ಅನಿತಾ ವಿಶ್ವಾಸ ವ್ಯಕ್ತಪಡಿಸಿದರು.