Tag: anitha kumaraswamy

  • ರಾಮನಗರ ಉಪಚುನಾವಣೆ- ಅನಿತಾ ಕುಮಾರಸ್ವಾಮಿ ಸ್ಫರ್ಧೆ ಬಹುತೇಕ ಖಚಿತ

    ರಾಮನಗರ ಉಪಚುನಾವಣೆ- ಅನಿತಾ ಕುಮಾರಸ್ವಾಮಿ ಸ್ಫರ್ಧೆ ಬಹುತೇಕ ಖಚಿತ

    ರಾಮನಗರ: ಮುಖ್ಯಮಂತ್ರಿಯವರ ರಾಜೀನಾಮೆಯಿಂದ ತೆರವಾಗಿರುವ ರಾಮನಗರ ಕ್ಷೇತ್ರಕ್ಕೆ ಪತ್ನಿ ಅನಿತಾ ಅವರನ್ನು ಕಣಕ್ಕೆ ಇಳಿಸಲು ಕುಮಾರಸ್ವಾಮಿ ಪ್ಲಾನ್ ಮಾಡಿದ್ದಾರೆ.

    ಇನ್ನು ಕೆಲವೇ ದಿನಗಳಲ್ಲಿ ರಾಮನಗರಕ್ಕೆ ಉಪಚುನಾವಣೆ ನಡೆಯಲಿದ್ದು, ಪತ್ನಿ ಅನಿತಾ ಅವರನ್ನು ಕಣಕ್ಕೆ ಇಳಿಸಲು ಸಿಎಂ ಕುಮಾರಸ್ವಾಮಿ ಒಲವು ತೋರಿದ್ದಾರೆ. ಮಗ ನಿಖಿಲ್ ಅಥವಾ ಅನಿತಾ ಅವರು ಕಣಕ್ಕೆ ಇಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿತ್ತು. ಇದೀಗ ಅನಿತಾ ಅವರು ಕಣಕ್ಕೆ ಇಳಿಯುವುದು ಬಹುತೇಕ ಅಂತಿಮವಾಗಿದ್ದು, ಚುನಾವಣೆ ಘೋಷಣೆ ಬಳಿಕ ಅನಿತಾ ಕುಮಾರಸ್ವಾಮಿ ಅವರ ಹೆಸರನ್ನು ಜೆಡಿಎಸ್ ಅಧಿಕೃತ ಮಾಡಲಿದೆ ಎನ್ನಲಾಗಿದೆ.

    ರಾಮನಗರ ವಿಧಾನಸಭಾ ಕ್ಷೇತ್ರದಿಂದ ಹೆಚ್.ಡಿ.ಕುಮಾರಸ್ವಾಮಿ ಗೆಲುವು ಸಾಧಿಸಿದ್ರು. ಆದ್ರೆ ಇತ್ತ ಚನ್ನಪಟ್ಟಣದಲ್ಲಿಯೂ ಗೆಲುವು ಸಾಧಿಸಿದ್ದರಿಂದ ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಈ ಮೊದಲು ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹೆಚ್.ಲೀಲಾವತಿ ಸ್ಪರ್ಧೆ ಮಾಡಿದ್ದರು. ಚುನಾವಣೆಗೂ ಮುನ್ನವೇ ಸಿ.ಪಿ ಯೋಗೇಶ್ವರ್ ರಾಮನಗರದತ್ತ ಒಲವು ತೋರಿದ್ದರು.

    ಇತ್ತ ಅನಿತಾ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದಂತೆಯೇ ದೇವೇಗೌಡರ ಮುಂದೆ ಭವಾನಿ ರೇವಣ್ಣ ಅವರು ಹೆಚ್‍ಡಿಕೆ ವಿರುದ್ಧ ಅಸಮಧಾನ ಹೊರಹಾಕಿದ್ದರು. ಈ ಹಿಂದೆ ನಮ್ಮ ಕುಟುಂಬದಿಂದ ಇಬ್ಬರು ಮಾತ್ರ ಸ್ಪರ್ಧೆ, ಯಾರು ಸ್ಪರ್ಧೆಯಿಲ್ಲ ಎಂದಿದ್ದರು. ಹಾಗಾಗಿಯೇ ನನ್ನ ಮಗ ವಿಧಾನಸಭಾ ಚುನಾವಣೆಗೆ ನಿಲ್ಲೋದು ತಪ್ಪಿತ್ತು. ಈಗ ರಾಮನಗರದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಯಾವ ಲೆಕ್ಕದಿಂದ ಅಂತ ಪ್ರಶ್ನಿಸಿದ್ದಾರೆ ಎಂದು ಹೇಳಲಾಗಿದೆ.

    ನನ್ನ ಮಗ ಪ್ರಜ್ವಲ್ ಭವಿಷ್ಯಕ್ಕೆ ಕಲ್ಲು ಹಾಕುವ ಪ್ರಯತ್ನ ನಡೆಯುತ್ತಿದೆ. ನೀವು ನೋಡಿದ್ರೆ ಲೋಕಸಭೆ ಚುನಾವಣೆ ಅಂತೇಳಿ ಸಮಾಧಾನ ಮಾಡಿದ್ದೀರಾ. ಹಿಂಗೆ ಆದ್ರೆ ನಾವು ಎಲ್ಲಿಗೆ ಹೋಗಬೇಕು, ನನ್ನ ಮಗನಿಗೆ ಅವಕಾಶ ಮಾಡಿಕೊಡಿ ಅಂತ ದೇವೇಗೌಡರ ಮುಂದೆಯೇ ಪ್ರಜ್ವಲ್ ಪರ ಭವಾನಿ ರೇವಣ್ಣ ಬ್ಯಾಟಿಂಗ್ ಮಾಡಿದ್ದರು ಎಂಬುದಾಗಿ ಮೂಲಗಳಿಂದ ತಿಳಿದುಬಂದಿತ್ತು.

  • ಎಚ್‍ಡಿಡಿ ಮುಂದೆಯೇ ಎಚ್‍ಡಿಕೆ ವಿರುದ್ಧ ಅಸಮಾಧಾನ ಹೊರಹಾಕಿದ್ರು ಭವಾನಿ ರೇವಣ್ಣ!

    ಎಚ್‍ಡಿಡಿ ಮುಂದೆಯೇ ಎಚ್‍ಡಿಕೆ ವಿರುದ್ಧ ಅಸಮಾಧಾನ ಹೊರಹಾಕಿದ್ರು ಭವಾನಿ ರೇವಣ್ಣ!

    ಬೆಂಗಳೂರು: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಕುಟುಂಬದಲ್ಲೀಗ ಹೋಮ್ ಫೈಟ್ ನಡೆಯುತ್ತಿದೆ. ಮನೆಯ ಕಾದಾಟದಿಂದ ಗೌಡರಿಗೆ ಹೊಸ ತಲೆನೋವೊಂದು ಶುರುವಾಗಿದೆ.

    ಹೌದು. ದೊಡ್ಡ ಗೌಡರ ಮನೆಯಲ್ಲಿ ಭವಾನಿ ರೇವಣ್ಣ ಅವರು ಮತ್ತೆ ಅಖಾಡಕ್ಕೆ ಇಳಿದಿದ್ದಾರೆ. ರಾಮನಗರ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿ ಕಣಕ್ಕಿಳಿಯವುದಕ್ಕೆ ಭವಾನಿ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

    ಗೌಡರ ಮುಂದೆಯೇ ಭವಾನಿ ರೇವಣ್ಣ ಅವರು ಹೆಚ್‍ಡಿಕೆ ವಿರುದ್ಧ ಅಸಮಧಾನ ಹೊರಹಾಕಿದ್ದಾರೆ. ಈ ಹಿಂದೆ ನಮ್ಮ ಕುಟುಂಬದಿಂದ ಇಬ್ಬರು ಮಾತ್ರ ಸ್ಪರ್ಧೆ, ಯಾರು ಸ್ಪರ್ಧೆಯಿಲ್ಲ ಎಂದಿದ್ದರು. ಹಾಗಾಗಿಯೇ ನನ್ನ ಮಗ ವಿಧಾನಸಭಾ ಚುನಾವಣೆಗೆ ನಿಲ್ಲೋದು ತಪ್ಪಿತ್ತು. ಈಗ ರಾಮನಗರದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಯಾವ ಲೆಕ್ಕದಿಂದ ಅಂತ ಪ್ರಶ್ನಿಸಿದ್ದಾರೆ ಎಂದು ಹೇಳಲಾಗಿದೆ.

    ನನ್ನ ಮಗ ಪ್ರಜ್ವಲ್ ಭವಿಷ್ಯಕ್ಕೆ ಕಲ್ಲು ಹಾಕುವ ಪ್ರಯತ್ನ ನಡೆಯುತ್ತಿದೆ. ನೀವು ನೋಡಿದ್ರೆ ಲೋಕಸಭೆ ಚುನಾವಣೆ ಅಂತೇಳಿ ಸಮಾಧಾನ ಮಾಡಿದ್ದೀರಾ. ಹಿಂಗೆ ಆದ್ರೆ ನಾವು ಎಲ್ಲಿಗೆ ಹೋಗಬೇಕು, ನನ್ನ ಮಗನಿಗೆ ಅವಕಾಶ ಮಾಡಿಕೊಡಿ ಅಂತ ದೇವೇಗೌಡರ ಮುಂದೆಯೇ ಪ್ರಜ್ವಲ್ ಪರ ಭವಾನಿ ರೇವಣ್ಣ ಬ್ಯಾಟಿಂಗ್ ಮಾಡಿದ್ದಾರೆ ಎನ್ನಲಾಗಿದೆ.

  • ಅನಿತಾ ಕುಮಾರಸ್ವಾಮಿ ಸ್ಪರ್ಧೆ ಅಧಿಕೃತ- ಚನ್ನಪಟ್ಟಣ ಕ್ಷೇತ್ರದಲ್ಲಿ ಯೋಗೇಶ್ವರ್‍ ಗೆ ಪೈಪೋಟಿ

    ಅನಿತಾ ಕುಮಾರಸ್ವಾಮಿ ಸ್ಪರ್ಧೆ ಅಧಿಕೃತ- ಚನ್ನಪಟ್ಟಣ ಕ್ಷೇತ್ರದಲ್ಲಿ ಯೋಗೇಶ್ವರ್‍ ಗೆ ಪೈಪೋಟಿ

    ರಾಮನಗರ: ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಎಚ್‍ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವುದು ಅಧಿಕೃತವಾಗಿ ಘೋಷಣೆಯಾಗಿದೆ.

    ಅನಿತಾ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್ ವರಿಷ್ಠರು ಗ್ರೀನ್ ಸಿಗ್ನಲ್ ನೀಡಿದ್ದು, ತಾಲೂಕು ಜೆಡಿಎಸ್ ಮುಖಂಡರು ಅಭ್ಯರ್ಥಿ ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್ ಮುಖಂಡರು ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಅವರನ್ನ ಘೋಷಿಸಿದ್ರು.

    ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಜೊತೆ ಮಂಗಳವಾರದಂದು ಮುಖಂಡರು ಅಂತಿಮ ಮಾತುಕತೆ ನಡೆಸಿ ಎಚ್‍ಡಿಕೆಯವರ ಅನುಮತಿ ಪಡೆದು ಅಭ್ಯರ್ಥಿ ಘೋಷಣೆ ಮಾಡಿದ್ದಾರೆ.

    ಚನ್ನಪಟ್ಟಣ ಮುಖಂಡರಾದ ಮಾಜಿ ಶಾಸಕ ಎಂ.ಸಿ ಅಶ್ವಥ್, ಒಕ್ಕಲಿಗರ ಸಂಘದ ನಿರ್ದೇಶಕ ಜಯಮುತ್ತು ಹಾಗೂ ಬಮೂಲ್ ನಿರ್ದೇಶಕ ಲಿಂಗೇಶ್ ಕುಮಾರ್ ರಿಂದ ಅಭ್ಯರ್ಥಿ ಘೋಷಣೆಯಾಗಿದೆ. ಈಗಾಗಲೇ ಕಾರ್ಯಕರ್ತರ ಜೊತೆಗೆ ಪ್ರಮುಖ ಮುಖಂಡರು ಸಭೆ ನಡೆಸಿದ್ದಾರೆ.

    ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿರುವ ಯೋಗೇಶ್ವರ್ ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ನೀಡಲಿದೆ ಎನ್ನುವ ಮಾತುಗಳು ಕೇಳಿಬಂದಿವೆ. ಹೀಗಾಗಿ ಈ ಚುನಾವಣೆಯಲ್ಲಿ ಯೋಗೇಶ್ವರ್ ಅವರನ್ನು ಸೋಲಿಸಲು ಡಿಕೆಶಿ ಸರ್ವಪ್ರಯತ್ನ ನಡೆಸುತ್ತಿದ್ದು, ಈ ತಂತ್ರದ ಭಾಗವಾಗಿ ಅನಿತಾ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಿದರೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೇ ಅನಿತಾರನ್ನೇ ಬೆಂಬಲಿಸುವ ಸಾಧ್ಯತೆ ಇದೆ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

    2013ರ ವಿಧಾನಸಭಾ ಚುನಾವಣೆಯಲ್ಲಿ ಯೋಗೇಶ್ವರ್ ಅವರು ಅನಿತಾ ಕುಮಾರಸ್ವಾಮಿ ವಿರುದ್ಧ 6,464 ಮತಗಳ ಅಂತರಿಂದ ಗೆದ್ದಿದ್ದರು. ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದ ಯೋಗೇಶ್ವರ್ ಅವರಿಗೆ 80,099 ಮತಗಳು ಬಿದ್ದಿದ್ದರೆ, ಅನಿತಾ ಕುಮಾರಸ್ವಾಮಿ ಅವರಿಗೆ 73,635 ಮತಗಳು ಬಿದ್ದಿತ್ತು. ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಸದತ್ ಅಲಿ ಖಾನ್ ಅವರಿಗೆ 8,134 ಮತಗಳು ಸಿಕ್ಕಿತ್ತು.

    2014ರ ಲೋಕಸಭಾ ಚುನಾವಣೆ ವೇಳೆ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದೇ ಅಕ್ಟೋಬರ್ ನಲ್ಲಿ ಪಕ್ಷದ ವರಿಷ್ಠರ ನಿರ್ಧಾರದಿಂದ ಬೇಸತ್ತು ನಾನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಯೋಗೇಶ್ವರ್ ತಿಳಿಸಿದ್ದರು.

    ಕೆಲ ದಿನಗಳಿಂದ ಪದೇ ಪದೇ ಚನ್ನಪಟ್ಟಣಕ್ಕೆ ಭೇಟಿ ನೀಡುತ್ತಿರುವ ಅನಿತಾ ಕುಮಾರಸ್ವಾಮಿ ಮುಂದಿನ ವಿಧಾನಸಭೆ ಚುನಾವಣೆಗೆ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವ ಆಸೆ ಇದೆ. ಕ್ಷೇತ್ರದ ಜನರು ಕೂಡ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದು ಈ ಹಿಂದೆ ಪಬ್ಲಿಕ್ ಟಿವಿ ಗೆ ನೀಡಿದ್ದ ಎಕ್ಸ್ ಕ್ಲೂಸೀವ್ ಸಂದರ್ಶನದಲ್ಲಿ ತಿಳಿಸಿದ್ದರು.

    ಕಳೆದ ಬಾರಿ ಇದೇ ಕ್ಷೇತ್ರದಿಂದ ಕಡಿಮೆ ಅಂತರದಿಂದ ಸೋತಿದ್ದೆ. ಹಾಗಾಗಿ ಈ ಬಾರಿ ನೀವು ನಿಲ್ಲಬೇಕು ಅಂತಾ ಅಲ್ಲಿನ ಜನರ ಒತ್ತಾಯವಿದ್ದು, ನನಗೂ ಅಲ್ಲಿಂದಲೇ ಸ್ಪರ್ಧಿಸುವ ಆಸೆ ಇದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಆಭ್ಯರ್ಥಿಗಳು ಇಲ್ಲ. ನನ್ನ ಬೆಂಬಲಕ್ಕೆ ನಿಂತಿರುವ ಕಾರ್ಯಕರ್ತರ ಹಿತಕ್ಕಾಗಿಯಾದ್ರು ನಾನು ಸ್ಪರ್ಧೆ ಮಾಡ್ತೀನಿ. ಇದರ ಬಗ್ಗೆ ಅಂತಿಮವಾಗಿ ನಮ್ಮ ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಅಂದು ಪ್ರತಿಕ್ರಿಯಿಸಿದ್ದರು.

    ಇದನ್ನೂ ಓದಿ: ಚುನಾವಣೆ ಬರುತ್ತಿದ್ದಂತೆ ರಾಜ್ಯದಲ್ಲಿ ಶುರುವಾಯ್ತಾ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್?

  • ಇಲ್ಲ ಇಲ್ಲ ಎನ್ನುತ್ತಲೇ ದೇವೇಗೌಡರ ಕುಟುಂಬದಿಂದ ನಾಲ್ವರ ಸ್ಪರ್ಧೆ?

    ಇಲ್ಲ ಇಲ್ಲ ಎನ್ನುತ್ತಲೇ ದೇವೇಗೌಡರ ಕುಟುಂಬದಿಂದ ನಾಲ್ವರ ಸ್ಪರ್ಧೆ?

    ಬೆಂಗಳೂರು: ಇಲ್ಲ ಇಲ್ಲ ಎನ್ನುತ್ತಲೇ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರ ಕುಟುಂಬದಿಂದ ನಾಲ್ವರು ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧೆ ಮಾಡೋಕೆ ಮುಂದಾಗಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.

    ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ತಮ್ಮ ಕುಟುಂಬದಿಂದ ಇಬ್ಬರೇ ಸ್ಪರ್ಧಿಸೋದು ಎಂದು ಕಡ್ಡಿ ಮುರಿದಂತೆ ಹೇಳಿದ್ದರು. ಆದ್ರೆ ಕುಟುಂಬದಿಂದ ಮೂರನೇ ಅಭ್ಯರ್ಥಿಯ ಹೆಸರು ಇಂದೇ ಘೋಷಣೆಯಾಗೋ ಸಾಧ್ಯತೆಯಿದೆ.

    ಮುಂದಿನ ವಿಧಾನಸಭೆಗೆ ತಮ್ಮ ಕುಟುಂಬದಿಂದ ಇಬ್ಬರೇ ಸ್ಪರ್ಧೆ ಮಾಡೋದು ಎಂದು ವರಿಷ್ಠರು ಹೇಳಿದ್ದರು. ಈಗಲೂ ಕುಟುಂಬದಿಂದ ನಾವಿಬ್ಬರೇ ಚುನಾವಣೆ ಎದುರಿಸೋದು ಎಂದು ಹೆಚ್‍ಡಿಕೆ ಹೇಳ್ತಿದ್ದಾರೆ. ಆದ್ರೆ ಕಾರ್ಯಕರ್ತರು, ಕ್ಷೇತ್ರದ ಮುಖಂಡರ ಮೂಲಕ ಮೂರನೇ ಅಭ್ಯರ್ಥಿಯ ಘೋಷಣೆಯಾಗಲಿದೆ ಎಂಬ ಮಾತುಗಳು ಕೇಳಿಬರ್ತಿವೆ.

     

    ಚನ್ನಪಟ್ಟಣದಲ್ಲಿ ಅನಿತಾ ಕುಮಾರಸ್ವಾಮಿ ಅಭ್ಯರ್ಥಿಯಾಗಿ ಘೋಷಣೆ ಆಗಲಿದ್ದು, ಸ್ಥಳೀಯ ಮುಖಂಡರು ಈ ಘೋಷಣೆ ಮಾಡಲಿದ್ದಾರೆ. ಆ ಬಳಿಕ ಮತ್ತೊಂದು ಸೀನ್ ನಡೆಯಲಿದ್ದು, ಪ್ರಜ್ವಲ್ ರೇವಣ್ಣ ಅವರ ಟಿಕೆಟ್ ವಿಚಾರದಲ್ಲೂ ಇದೇ ಪ್ಲಾನ್ ಆಗಲಿದೆ ಎಂದು ಹೇಳಲಾಗ್ತಿದೆ. ಪ್ರಜ್ವಲ್ ಬೇಲೂರಿನಿಂದ ಸ್ಪರ್ಧೆ ಮಾಡೋ ಸಾಧ್ಯತೆ ಇದೆ.

    ಕಾರ್ಯಕರ್ತರ ಆಗ್ರಹಕ್ಕೆ ಮಣಿಯದಿದ್ದರೆ ಕುಟುಂಬದಲ್ಲಿ ಅಸಮಾಧಾನ ಸ್ಫೋಟಗೊಳ್ಳಲಿದ್ದು, ಅನಿತಾ ಅವರಿಗೆ ಟಿಕೆಟ್ ಕೊಟ್ಟ ಮೇಲೆ ಪ್ರಜ್ವಲ್ ಗೆ ಅವಕಾಶ ಯಾಕಿಲ್ಲ ಎಂಬ ಪ್ರಶ್ನೆ ಉಸ್ಭವಿಸಲಿದೆ. ಹೀಗಾಗಿ ಇಲ್ಲ ಇಲ್ಲ ಎನ್ನುತ್ತಲೇ ದೇವೇಗೌಡರ ಕುಟುಂಬದ ನಾಲ್ವರು ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

  • ಅಡ್ಜಸ್ಟ್ ಮೆಂಟ್ ರಾಜಕೀಯ ವದಂತಿಗೆ ಹೆಚ್‍ಡಿಡಿ ಸ್ಪಷ್ಟನೆ

    ಅಡ್ಜಸ್ಟ್ ಮೆಂಟ್ ರಾಜಕೀಯ ವದಂತಿಗೆ ಹೆಚ್‍ಡಿಡಿ ಸ್ಪಷ್ಟನೆ

    ಕೋಲಾರ: ಕಾಂಗ್ರೆಸ್ ಜೊತೆ ಜೆಡಿಎಸ್ ಹೊಂದಾಣಿಕೆ ನಡೆಸುತ್ತಿದೆ ಅಂತ ಕೆಲವರಿಗೆ ಅನುಮಾನ ಕಾಡ್ತಿದೆ. ಆದ್ರೆ ಕಾಂಗ್ರೆಸ್‍ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲ್ಲ ಅಂತಾ ಮಾಜಿ ಪ್ರಧಾನಿ ಹೆಚ್‍ಡಿಡಿ ಸ್ಪಷ್ಟಪಡಿಸಿದ್ದಾರೆ.

    ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜೆಡಿಎಸ್ ಪಕ್ಷದ ನೂತನ ಕಚೇರಿ ಹಾಗು ಸಮಾವೇಶದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಸಂಘಟನೆ ಮತ್ತು ಮುಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿಯನ್ನು ಪ್ರಜ್ವಲ್ ರೇವಣ್ಣಗೆ ನೀಡಿದ್ದೇವೆ. ಚನ್ನಪಟ್ಟಣದಿಂದ ಸ್ಪರ್ಧಿಸುವಂತೆ ಅನಿತಾ ಕುಮಾರಸ್ವಾಮಿಗೆ ಎಲ್ಲರೂ ಒತ್ತಡ ಹೇರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ತೀವಿ ಅಂದ್ರು.

    ಅನಿತಾ ಕುಮಾರಸ್ವಾಮಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರೊಂದಿಗೆ ವೇದಿಕೆ ಹಂಚಿಕೊಂಡಿರುವುದರಿಂದ ಬೇರೆ ಬೇರೆ ಆಪಾದನೆಗಳು ಕೇಳಿಬಂದಿವೆ. ಜೊತೆಗೆ ಬೆಂಗಳೂರಿನ ಕೆಂಪೇಗೌಡ ಜಯಂತಿಯಲ್ಲಿ ಶಿವಕುಮಾರ್ ನನ್ನ ಕಾಲಿಗೆರಗಿದ್ದಕ್ಕೂ ಕೂಡ ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ ಎಂದು ಸಾಕಷ್ಟು ಅನುಮಾನ ಕೆಲವರಿಗೆ ಕಾಡ್ತಿದೆ. ಆದ್ರೆ ಜೆಡಿಎಸ್ ಕಾಂಗ್ರೆಸ್ ನೊಂದಿಗೆ ಯಾವುದೇ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಅದು ರಾಜ್ಯದ 224 ಕ್ಷೇತ್ರ, ಅದರಲ್ಲೂ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರ ಕ್ಷೇತ್ರ ಒಳಗೊಂಡಂತೆ ಯಾವುದೇ ಕ್ಷೇತ್ರದಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಅಂತ ಸ್ಪಷ್ಟಪಡಿಸಿದ್ರು.

    ಕೋಲಾರ ಹಾಗೂ ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳಲ್ಲಿ 9 ಜನ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದ್ರು.

    ಇದನ್ನೂ ಓದಿ: ಅನಿತಾ ಕುಮಾರಸ್ವಾಮಿ ನನ್ನನ್ನು ಅಣ್ಣ ಅಂತ ತಿಳಿದುಕೊಂಡಿದ್ದಾರೆ- ಅಡ್ಜಸ್ಟ್ ಮೆಂಟ್ ರಾಜಕಾರಣ ಸುದ್ದಿಗೆ ಡಿಕೆಶಿ ಸ್ಪಷ್ಟನೆ

    ಇದನ್ನೂ ಓದಿ: ಚುನಾವಣೆ ಬರುತ್ತಿದ್ದಂತೆ ರಾಜ್ಯದಲ್ಲಿ ಶುರುವಾಯ್ತಾ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್?

    ಇದನ್ನೂ ಓದಿ: ಅನಿತಾ ಕುಮಾರಸ್ವಾಮಿ ಚನ್ನಪಟ್ಟಣದಿಂದ ಸ್ಪರ್ಧಿಸುತ್ತಾರಾ: ಎಚ್‍ಡಿಕೆ ಹೇಳಿದ್ದು ಹೀಗೆ

  • ಚುನಾವಣೆ ಬರುತ್ತಿದ್ದಂತೆ ರಾಜ್ಯದಲ್ಲಿ ಶುರುವಾಯ್ತಾ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್?

    ಚುನಾವಣೆ ಬರುತ್ತಿದ್ದಂತೆ ರಾಜ್ಯದಲ್ಲಿ ಶುರುವಾಯ್ತಾ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್?

    ರಾಮನಗರ: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದಲ್ಲಿ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ಶುರುವಾಯ್ತಾ? ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೂಕ್ತವಾದ ಅಭ್ಯರ್ಥಿ ಇಲ್ವಾ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.

    ಹೌದು. ಈ ಪ್ರಶ್ನೆ ಹುಟ್ಟಿಕೊಳ್ಳಲು ಕಾರಣವಾಗಿದ್ದು ಭಾನುವಾರ ಚನ್ನಪಟ್ಟಣದಲ್ಲಿ ನಡೆದ ಕನಕನ ಹಬ್ಬ ಕಾರ್ಯಕ್ರಮ. ಈ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ್ದ ಯೋಗೇಶ್ವರ್ ಅವರನ್ನು ತೆಗಳಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಅಷ್ಟೇ ಅಲ್ಲದೇ ಅನಿತಾ ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ, ಟೆಂಪರರಿ ನಾಯಕರು ಬರುತ್ತಾರೆ ಹೋಗುತ್ತಾರೆ. ಆದರೆ ನಿಮ್ಮ ಜೊತೆ ನಾವು ಶಾಶ್ವತವಾಗಿ ಇರುತ್ತೇವೆ ಎಂದು ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

    ಅನಿತಾ ಕುಮಾರಸ್ವಾಮಿಯವರು ನಿಮ್ಮಲ್ಲೆರನ್ನು ನಂಬಿ ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ. ನಿಮ್ಮ ಜೊತೆಯಲ್ಲಿ ಯಾರು ಇಲ್ಲದೇ ಇದ್ದರೂ ನಾವಿದ್ದೇವೆ. ನಿಮ್ಮ ಹೆಣವನ್ನು ಹೊರುವವರು ನಾವೇ. ನಿಮ್ಮ ಪಲ್ಲಕ್ಕಿಯನ್ನ ಹೊರುವವರು ನಾವೇ ಎಂದು ಹೇಳುವ ಮೂಲಕ ಶಾಸಕ ಯೋಗೇಶ್ವರ್ ಅವರಿಗೆ ವೇದಿಕೆಯಲ್ಲೇ ಡಿಕೆಶಿ ಟಾಂಗ್ ನೀಡಿದರು.

    ಕೆರೆ ಬಾಗಿನ ಕಾರ್ಯಕ್ರಮಗಳಲ್ಲಿ ಅವರ ಒಂದು ಫೋಟೋ ಕೂಡ ಹಾಕಿಲ್ಲ. ನಮಗೆ ಯಾರು ಸಹಾಯ ಮಾಡಿರುತ್ತಾರೆ ಅವರನ್ನು ನೆನೆಯಬೇಕು. ಸಹಾಯ ಮಾಡಿದವರನ್ನು ಸ್ಮರಿಸಬೇಕು. ನಾಲಿಗೆ ತಪ್ಪಬಾರದು ಆವಾಗ ಒಳ್ಳೆಯ ಮನುಷ್ಯ ಎನ್ನುತ್ತಾರೆ ಎಂದರು.

    ನಾನು ರಾಜಕೀಯವನ್ನು ಬಿಡುವುದಿಲ್ಲ, ಚನ್ನಪಟ್ಟಣವನ್ನು ಬಿಡುವುದಿಲ್ಲ. ಯಾಕೆಂದರೆ ಚನ್ನಪಟ್ಟಣವನ್ನು ರಾಜಕೀಯವಾಗಿ ಮದುವೆ ಮಾಡಿಕೊಂಡಿದ್ದೇನೆ. ‘ನಾನು’ ಎಂದ ಎಲ್ಲಾ ಚಕ್ರವರ್ತಿಗಳು ಬಿದ್ದು ಹೋಗಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿ ಮತ್ತೊಮ್ಮೆ ಯೋಗೇಶ್ವರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

    ಅನಿತಾ ಕುಮಾರಸ್ವಾಮಿ ಅಭ್ಯರ್ಥಿ?
    ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿರುವ ಯೋಗೇಶ್ವರ್ ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ನೀಡಲಿದೆ ಎನ್ನುವ ಮಾತುಗಳು ಕೇಳಿಬಂದಿವೆ. ಹೀಗಾಗಿ ಈ ಚುನಾವಣೆಯಲ್ಲಿ ಯೋಗೇಶ್ವರ್ ಅವರನ್ನು ಸೋಲಿಸಲು ಡಿಕೆಶಿ ಸರ್ವಪ್ರಯತ್ನ ನಡೆಸುತ್ತಿದ್ದು, ಈ ತಂತ್ರದ ಭಾಗವಾಗಿ ಅನಿತಾ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಿದರೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೇ ಅನಿತಾರನ್ನೇ ಬೆಂಬಲಿಸುವ ಸಾಧ್ಯತೆ ಇದೆ ಎನ್ನುವ ಮಾತುಗಳು ಕೇಳಿಬಂದಿದೆ. ಇದಕ್ಕೆ ಪುಷ್ಠಿ ಎನ್ನುವಂತೆ ಡಿಕೆಶಿ ಕಾರ್ಯಕ್ರಮದಲ್ಲಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ ಎನ್ನುವ ಮಾತು ರಾಜಕೀಯ ವಲಯದಿಂದ ಕೇಳಿಬಂದಿದೆ.

    ಇದನ್ನೂ ಓದಿ: ದೇವೇಗೌಡ್ರ ಕುಟುಂಬದಲ್ಲಿ ಮತ್ತೊಬ್ರು ಕಣಕ್ಕಿಳಿಯಲು ಸಿದ್ಧತೆ- ತೆರೆಮರೆಯಲ್ಲಿ ಸಜ್ಜಾಗುತ್ತಿದ್ದಾರಾ ಅನಿತಾ ಕುಮಾರಸ್ವಾಮಿ?

    2013ರ ವಿಧಾನಸಭಾ ಚುನಾವಣೆಯಲ್ಲಿ ಯೋಗೇಶ್ವರ್ ಅವರು ಅನಿತಾ ಕುಮಾರ ಸ್ವಾಮಿ ವಿರುದ್ಧ 6,464 ಮತಗಳ ಅಂತರಿಂದ ಗೆದ್ದಿದ್ದರು. ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದ ಯೋಗೇಶ್ವರ್ ಅವರಿಗೆ 80,099 ಮತಗಳು ಬಿದ್ದಿದ್ದರೆ, ಅನಿತಾ ಕುಮಾರಸ್ವಾಮಿ ಅವರಿಗೆ 73,635 ಮತಗಳು ಬಿದ್ದಿತ್ತು. ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಸದತ್ ಅಲಿ ಖಾನ್ ಅವರಿಗೆ 8,134 ಮತಗಳು ಸಿಕ್ಕಿತ್ತು.

    2014ರ ಲೋಕಸಭಾ ಚುನಾವಣೆ ವೇಳೆ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದೇ ಅಕ್ಟೋಬರ್ ನಲ್ಲಿ ಪಕ್ಷದ ವರಿಷ್ಠರ ನಿರ್ಧಾರದಿಂದ ಬೇಸತ್ತು ನಾನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಯೋಗೇಶ್ವರ್ ತಿಳಿಸಿದ್ದರು.

    ಕೆಲ ದಿನಗಳಿಂದ ಅನಿತಾ ಕುಮಾರಸ್ವಾಮಿ ಅವರು ಪದೇ ಪದೇ ಚನ್ನಪಟ್ಟಣಕ್ಕೆ ಭೇಟಿ ನೀಡುತ್ತಿದ್ದು, ಪಬ್ಲಿಕ್ ಟಿವಿಗೆ ನೀಡಿದ ಸಂದರ್ಶನದಲ್ಲಿ ಚನ್ನಪಟ್ಟಣದಿಂದ ಕಣಕ್ಕೆ ಇಳಿಯುವ ಆಸೆ ಇದೆ ಎಂದು ತಿಳಿಸಿದ್ದರು.

  • ದೇವೇಗೌಡ್ರ ಕುಟುಂಬದಲ್ಲಿ ಮತ್ತೊಬ್ರು ಕಣಕ್ಕಿಳಿಯಲು ಸಿದ್ಧತೆ- ತೆರೆಮರೆಯಲ್ಲಿ ಸಜ್ಜಾಗುತ್ತಿದ್ದಾರಾ ಅನಿತಾ ಕುಮಾರಸ್ವಾಮಿ?

    ದೇವೇಗೌಡ್ರ ಕುಟುಂಬದಲ್ಲಿ ಮತ್ತೊಬ್ರು ಕಣಕ್ಕಿಳಿಯಲು ಸಿದ್ಧತೆ- ತೆರೆಮರೆಯಲ್ಲಿ ಸಜ್ಜಾಗುತ್ತಿದ್ದಾರಾ ಅನಿತಾ ಕುಮಾರಸ್ವಾಮಿ?

    ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ಪಕ್ಷಕ್ಕೆ ತಲೆನೋವಾಗಿ ಪರಿಣಮಿಸಿದೆ. ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ ದೇವೇಗೌಡರವರು ತಮ್ಮ ಕುಟುಂಬದಲ್ಲಿ ಕೇವಲ ಇಬ್ಬರು ಮಾತ್ರವೇ ಚುನಾವಣೆಯಲ್ಲಿ ಸ್ಪರ್ಧಿಸ್ತಾರೆ ಅಂತಿದ್ದಾರೆ.

    ಆದ್ರೆ ಚನ್ನಪಟ್ಟಣದ ಜೆಡಿಎಸ್ ಮುಖಂಡರು ಮಾತ್ರ ಶಾಸಕ ಯೋಗೇಶ್ವರ್ ವಿರುದ್ಧ ಅನಿತಾ ಕುಮಾರಸ್ವಾಮಿಯವರನ್ನ ಕಣಕ್ಕೆ ಇಳಿಸುವಂತೆ ಒತ್ತಡ ಹಾಕುತ್ತಿದ್ದಾರೆ. ಇದರ ನಡುವೆ ಅನಿತಾ ಕುಮಾರಸ್ವಾಮಿಯವರು ಇತ್ತೀಚೆಗೆ ಪದೇ ಪದೇ ಚನ್ನಪಟ್ಟಣಕ್ಕೆ ಭೇಟಿ ನೀಡುತ್ತಿದ್ದಾರೆ.

    ಇದನ್ನೂ ಓದಿ: ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವ ಆಸೆ ಇದೆ: ಅನಿತಾ ಕುಮಾರಸ್ವಾಮಿ

    ಶನಿವಾರ ಜೆಡಿಎಸ್ ನಗರ ಘಟಕದ ಅಧ್ಯಕ್ಷ ರಾಂಪುರ ರಾಜಣ್ಣರವರ ಮನೆಗೆ ಭೇಟಿ ನೀಡಿ ಕೆಲವು ಮುಖಂಡರ ಜೊತೆ ಚರ್ಚೆ ನಡೆಸಿದ್ದರು. ಅಲ್ಲದೇ ಅಲ್ಪಸಂಖ್ಯಾತ ಕಾರ್ಯಕರ್ತರ ಸಭೆ ಕೂಡಾ ನಡೆಸಿದ್ದರು. ಇನ್ನು ಸಂಕ್ರಾಂತಿ ವೇಳೆಗೆ ಅಭ್ಯರ್ಥಿಗಳ ಪಟ್ಟಿ ಹೊರಬೀಳಲಿದ್ದು ಅಲ್ಲಿಯ ತನಕ ಕಾದು ನೋಡುವಂತೆ ಅನಿತಾ ಕುಮಾರಸ್ವಾಮಿಯವರೇ ತಿಳಿಸಿದ್ದಾರೆ.

    ಇದನ್ನೂ ಓದಿ: ನಿಖಿಲ್ ಕುಮಾರಸ್ವಾಮಿ ರಾಜಕೀಯಕ್ಕೆ ಬರ್ತಾರಾ?- ದೇವೇಗೌಡ್ರು ಹೇಳಿದ್ದೇನು?

    https://www.youtube.com/watch?v=CIggbVSEiYQ

  • ಗ್ರಾಮ ವಾಸ್ತವ್ಯಕ್ಕೆ ಹೊಸ ಟಚ್ ಕೊಟ್ಟ ಜೆಡಿಎಸ್

    ಗ್ರಾಮ ವಾಸ್ತವ್ಯಕ್ಕೆ ಹೊಸ ಟಚ್ ಕೊಟ್ಟ ಜೆಡಿಎಸ್

    ಬೆಂಗಳೂರು: ಚುನಾವಣಾ ತಂತ್ರವಾಗಿ ಹೊಸ ಪ್ಲಾನ್ ಮಾಡಿರೋ ಜೆಡಿಎಸ್, ಬಿಜೆಪಿ-ಕಾಂಗ್ರೆಸ್‍ಗೆ ಸೆಡ್ಡು ಹೊಡೆಯಲು ಮತ್ತೆ ಹಳ್ಳಿಗೆ ಕಡೆ ಹೊರಟಿದೆ.

    ಗ್ರಾಮ ವಾಸ್ತವ್ಯಕ್ಕೆ ಹೊಸ ಟಚ್ ಕೊಟ್ಟಿರೋ ಜೆಡಿಎಸ್ ಒಂದೂವರೆ ತಿಂಗಳು ಉತ್ತರ ಕರ್ನಾಟಕ, ಹೈದರಬಾದ್ ಕರ್ನಾಟಕ ಭಾಗಗಳ ಹಳ್ಳಿಗಳಲ್ಲಿ ಬೀಡಾರ ಹೂಡಲಿದ್ದಾರಂತೆ. ಯಾದಗಿರಿಯಿಂದ ಪಾದ ಯಾತ್ರೆ, ಬಿಜಾಪುರ ಭಾಗದಲ್ಲಿ ಬಹೃತ್ ರೈತ ಸಮಾವೇಶ ಮಾಡೋ ಉದ್ದೇಶವೂ ಇದೆ.

    ಕೃಷ್ಣೆಯ ಭಾಗದ ರಾಜಕೀಯವನ್ನ ಹೆಚ್‍ಡಿ ಕುಮಾರಸ್ವಾಮಿ ನೋಡಿಕೊಂಡ್ರೆ, ಕಾವೇರಿ ಭಾಗದ ರಾಜಕೀಯವನ್ನ ಅನಿತಾ ಕುಮಾರಸ್ವಾಮಿ ಅವರ ಹೆಗಲಿಗೆ ಹೊರಿಸೋ ಪ್ಲಾನ್ ಕೂಡ ರೆಡಿ ಇದೆ ಎಂದು ಹೇಳಲಾಗಿದೆ.