ಕಾರವಾರ: ಉತ್ತರಕನ್ನಡ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಜಯಗಳಿಸಿದ್ದಾರೆ. ಆದರೆ ಅಧಿಕೃತವಾಗಿ ಇನ್ನಷ್ಟೇ ಘೋಷಣೆ ಮಾಡಬೇಕಿದೆ.
ಹೌದು. ಮತ ಎಣಿಕೆ ಆರಂಭವಾದಾಗಿನಿಂದಲೂ ಕಾಗೇರಿಯವರು ಮುನ್ನಡೆ ಕಾಯ್ದುಕೊಂಡಿದ್ದರು. ಇದೀಗ ನಿಂಬಾಳ್ಕರ್ (Anjali Nimbalkar) ವಿರುದ್ಧ ಕಾಗೇರಿಯವರು ಗೆದ್ದು ಬೀಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ವಿರುದ್ಧ ಕಾಗೇರಿಯವರು 7,76,968 ಇವಿಎಂ ಮತ, 3,526 ಪೋಸ್ಟಲ್ ಮತ ಸೇರಿ 7,80,494 ಮತಗಳಿಂದ ಜಯಗಳಿಸಿದ್ದಾರೆ. ನಿಂಬಾಳ್ಕರ್ ಅವರು 4,42,622 ಮತಗಳನ್ನು ಪಡೆದುಕೊಳ್ಳುವ ಮೂಲಕ ಸೋಲನುಭವಿಸಿದರು. ಒಟ್ಟಿನಲ್ಲಿ ಕಾಗೇರಿಯವರು 3,37,872 ಮತಗಳ ಅಂತರದಿಂದ ಅಭೂತಪೂರ್ವ ಗೆಲುವು ತನ್ನದಾಗಿಸಿಕೊಂಡಿದ್ದಾರೆ. 10,139 ನೋಟಾ ಮತಗಳು ದಾಖಲಾಗಿವೆ.
ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರಲ್ಲಿ ಮುಗಿಲು ಮುಟ್ಟಿದೆ. ಕುಮಟಾ ಬಿಜೆಪಿ ಕಚೇರಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಸಿಹಿ ತಿನ್ನಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಇದೇ ವೇಳೆ ಘೋಷಣೆಗಳನ್ನು ಕೂಗುವ ಮೂಲಕ ಕಾರ್ಯಕರ್ತರು, ಮುಖಂಡರು ಗೆಲುವನ್ನ ಸಂಭ್ರಮಿಸಿದರು.
ತಮ್ಮ ಗೆಲುವಿನ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕಾಗೇರಿಯವರು, ನನ್ನ ಗೆಲುವನ್ನು ಕಾರ್ಯಕರ್ತರು ಮತದಾರಿಗೆ ಅರ್ಪಣೆ ಮಾಡುತ್ತೇನೆ. ನನ್ನ ಸೋಲಿಸಬೇಕು ಎಂದು ಪ್ರಯತ್ನಿಸಿದ ವ್ಯಕ್ತಿಗಳು ಈಗಲಾದರೂ ಆತ್ಮಾವಲೋಕನ ಮಾಡಿಕೊಳ್ಳಲಿ. ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಜಿಲ್ಲೆಯ ಕಾರ್ಯಕರ್ತರು ತೋರಿಸಿಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಸಂಸದ ಅನಂತಕುಮಾರ್ ಹೆಗಡೆ, ಶಾಸಕ ಶಿವರಾಮ್ ಹೆಬ್ಬಾರ್ ಗೆ ಟಾಂಗ್ ನೀಡಿದರು.
ಬೆಳಗಾವಿ: ಡಿಹೆಚ್‍ಒಗೆ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ ಕುರಿತಾಗಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಬೆಳಗಾವಿ ಡಿಹೆಚ್‍ಒ ಡಾ.ಮಹೇಶ್ ಕೋಣಿ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರದಲ್ಲಿ ಏನಿದೆ?:
ತಾಲೂಕು ಆಸ್ಪತ್ರೆಯಿಂದ ಬೆಳಗಾವಿಯ ಬಿಮ್ಸ್‌ಗೆ ನಿಯೋಜನೆಗೊಂಡ ತಜ್ಞ ವೈದ್ಯರು ಹಾಗೂ ಇತರ ಸಿಬ್ಬಂದಿ ಪಟ್ಟಿ ಸಮೇತ ಪತ್ರ ಬರೆದಿದ್ದಾರೆ. ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್ ಅವರ ಪತ್ರಗಳ ಹಾಗೂ ಮೌಖಿಕ ಆದೇಶಗಳ ಅನ್ವಯ ವೈದ್ಯರು ಹಾಗೂ ಸಿಬ್ಬಂದಿ ಬಿಮ್ಸ್‌ಗೆ ನಿಯೋಜಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ. ಆಯಾ ತಾಲೂಕು ಕೇಂದ್ರಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೈದ್ಯರು ಹಾಗೂ ಸಿಬ್ಬಂದಿಯನ್ನು ಬಿಮ್ಸ್‌ಗೆ ನಿಯೋಜನೆ ಮಾಡಿದ್ದರಿಂದ ಆಯಾ ಕ್ಷೇತ್ರದ ಜನಪ್ರತಿನಿಧಿಗಳು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ತಜ್ಞ ವೈದ್ಯರು ಹಾಗೂ ಸಿಬ್ಬಂದಿಯನ್ನು ತಾಲೂಕು ಕೇಂದ್ರಗಳಿಂದ ಬಿಮ್ಸ್‌ಗೆ ನಿಯೋಜನೆ ಮಾಡುವುದರಿಂದ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಆಗುತ್ತಿಲ್ಲ. ತಮ್ಮದೇನು ತಪ್ಪು ಇಲ್ಲದೇ ಇದ್ದರೂ ಜನಪ್ರತಿನಿಧಿಗಳು ತಮಗೆ ಕರೆ ಮಾಡಿ ತರಾಟೆ ತಗೆದುಕೊಳ್ಳುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಿದ್ದಾಗ ಅಧಿಕಾರದಲ್ಲಿದ್ದು ಏನು ಸಾರ್ಥಕ: ರೇಣುಕಾಚಾರ್ಯ
ಬಿಮ್ಸ್‌ಗೆ ನಿಯೋಜನೆಗೊಂಡ ಸಿಬ್ಬಂದಿಯನ್ನು ಮೂಲ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವಂತೆ ಆದೇಶಿಸಲು ಸೂಚಿಸಿರುತ್ತಾರೆ. ಹೀಗಾಗಿ ನಿಯೋಜಿತ ಅಧಿಕಾರಿಗಳು, ಸಿಬ್ಬಂದಿ ಬಿಮ್ಸ್‌ಗೆ ಕಳುಹಿಸುವುದರಿಂದ ಆಗುತ್ತಿರುವ ತೊಂದರೆ ನಿವಾರಿಸುವಂತೆ ಮನವಿ ಮಾಡಿದ್ದಾರೆ. ಆರೋಗ್ಯ ಇಲಾಖೆ ಮೂಲಗಳ ಪ್ರಕಾರ ಬೆಳಗಾವಿ ಜಿಲ್ಲೆಯಲ್ಲಿ 60ಕ್ಕೂ ಹೆಚ್ಚು ತಜ್ಞ ವೈದ್ಯರ ಕೊರತೆ ಇದೆ. ಈ ಮಧ್ಯೆ ತಾಲೂಕು ಕೇಂದ್ರಗಳಿಗೆ ನೇಮಕಗೊಂಡ ತಜ್ಞ ವೈದ್ಯರನ್ನು ಜಿಲ್ಲಾ ಕೇಂದ್ರಕ್ಕೆ ಕಳುಹಿಸಿದರೆ ತಾಲೂಕು ಆಸ್ಪತ್ರೆಗಳಿಗೆ ಬರುವ ಹಳ್ಳಿ ಜನರ ಪಾಡೇನು? ಈ ಬಗ್ಗೆ ಸರ್ಕಾರ ಸೂಕ್ತ ಗಮನ ಹರಿಸಲಿ, ಹಳ್ಳಿ ಜನರ ಆರೋಗ್ಯದ ಕಡೆ ಗಮನ ಹರಿಸಲಿ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಇದನ್ನೂ ಓದಿ: ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಿದ್ದಾಗ ಅಧಿಕಾರದಲ್ಲಿದ್ದು ಏನು ಸಾರ್ಥಕ: ರೇಣುಕಾಚಾರ್ಯ
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಡೆದ ಸಭೆಗೆ ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅಂಜಲಿ ನಿಂಬಾಳ್ಕರ್ ಗೈರಾಗಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲೂ ಬಣ ರಾಜಕೀಯ ಶುರುವಾಗಿರುವ ಅನುಮಾನ ಮೂಡುತ್ತಿದೆ. ಇನ್ನೂ ಕಾಂಗ್ರೆಸ್ ಪಕ್ಷದಿಂದ ಮೇ 25ಕ್ಕೆ ನಾಮಪತ್ರ ಸಲ್ಲಿಕೆಗೆ ನಿರ್ಧರಿಸಲಾಗಿದೆ. ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ, ಪದವೀಧರ ಕ್ಷೇತ್ರದ ಅಭ್ಯರ್ಥಿ ಸುನಿಲ್ ಸಂಕ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇದನ್ನೂ ಓದಿ: ಸದ್ಗುರು ಜೊತೆ ಮಂಡಿ ನೋವಿನ ಬಗ್ಗೆ ಹೇಳಿಕೊಂಡ ಸಿಎಂ
ಇನ್ನು ನಾಮಪತ್ರ ಸಲ್ಲಿಕೆ ವೇಳೆ ಪಾಲ್ಗೊಳ್ಳುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಗುತ್ತದೆ. ಇಂದಿನ ಸಭೆಯಲ್ಲಿ ಮತದಾರರನ್ನು ಸೆಳೆಯಲು ಏನೆಲ್ಲಾ ರೂಪು ರೇಷೆಗಳನ್ನು ಸಿದ್ಧಪಡಿಸಬೇಕು ಎಂಬುದರ ಬಗ್ಗೆ ಚರ್ಚಿಸಲಾಯಿತು.
ಬೆಳಗಾವಿ: ಹಿಂದೂ ಧರ್ಮವನ್ನು ಯಾರಿಂದಲೂ ಟಚ್ ಮಾಡಲು ಸಾಧ್ಯವಾಗಿಲ್ಲ. ಅಂದು ಹಿಂದೂ ಧರ್ಮ ಇತ್ತು, ಇಂದು ಸಹ ಹಾಗೇ ಇದೆ. ಶಿವಾಜಿ ಮಹಾರಾಜರು ಹಿಂದವೀ ಸ್ವರಾಜ್ ಸ್ಥಾಪನೆ ಮಾಡಿದ್ದಾರೆ. ಬಿಜೆಪಿಯವರು ಈಗ ಏನ್ ಹೊಸ ಹಿಂದೂ ರಾಷ್ಟ್ರ ಮಾಡಲು ಹೊರಟ್ಟಿದ್ದಾರೆ ಎಂದು ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಶ್ನಿಸಿದ್ದಾರೆ.
ಬೆಳಗಾವಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಮೇಲೆ ಮೊಘಲರು, ಬ್ರಿಟಿಷರು ದಾಳಿ ಮಾಡಿದ್ದಾರೆ. ಆದರೂ ಹಿಂದೂ ಧರ್ಮವನ್ನು ಯಾರಿಂದಲೂ ಟಚ್ ಮಾಡಲು ಸಾಧ್ಯವಾಗಿಲ್ಲ. ಹಿಂದೂ ಧರ್ಮದ ಮೇಲೆ ಯಾರಿಂದಲೂ ಆಕ್ರಮಣ ಮಾಡಲು ಆಗಲ್ಲ ಎಂದು ಆರ್‌ಎಸ್‌ಎಸ್ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಪುಸ್ತಕದಿಂದ ತೆಗೆದರೂ ಭಾರತೀಯರ ಹೃದಯದಲ್ಲಿ ಟಿಪ್ಪು ಸದಾ ನೆಲೆಸಿರುತ್ತಾರೆ: ಹೆಚ್.ವಿಶ್ವನಾಥ್
ಬಿಜೆಪಿ ಕೇವಲ ವೋಟ್ ಬ್ಯಾಂಕ್‍ಗಾಗಿ ಧರ್ಮ, ಜಾತಿ ಆಧಾರದ ಮೇಲೆ ರಾಜಕೀಯ ಮಾಡುತ್ತಿದೆ. ಶಿವಾಜಿ ಮಹಾರಾಜರು ಹಿಂದವೀ ಸ್ವರಾಜ್ ಸ್ಥಾಪನೆ ಮಾಡಿದ್ದಾರೆ. ಈಗ ಏನ್ ಹೊಸ ಹಿಂದು ರಾಷ್ಟ್ರ ಮಾಡಲು ಹೊರಟ್ಟಿದ್ದಾರೆ. ಆರ್‌ಎಸ್‌ಎಸ್‌ನ ಹಿಂದೂ ರಾಷ್ಟ್ರವನ್ನು ನಾವು ಒಪ್ಪಲ್ಲ. ಹಿಂದೂ ಧರ್ಮದ ಬಗ್ಗೆ ಆರ್‌ಎಸ್‌ಎಸ್ ಮೊದಲು ತಿಳಿದುಕೊಳ್ಳಬೇಕು. ಹಿಂದೂ ಧರ್ಮದಲ್ಲಿ ಬ್ರಾಹ್ಮಣ, ದಲಿತ, ಮುಸ್ಲಿಮರು ಎಲ್ಲರೂ ಇದ್ದಾರೆ. ಹಿಂದೂ ಧರ್ಮದ ಸಂಸ್ಕೃತಿ ಬಹಳ ದೊಡ್ಡದಿದೆ. ಅದನ್ನು ತಿಳಿದುಕೊಳ್ಳುವ ಕೆಲಸ ಮಾಡಬೇಕು ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಅಮಿತಾಭ್, ಅಕ್ಷಯ್ ಪ್ರತಿಕೃತಿ ದಹಿಸಿ ಬೆಲೆ ಏರಿಕೆಗೆ ಕಾಂಗ್ರೆಸ್ ಪ್ರತಿಭಟನೆ
ಬೆಳಗಾವಿ: ಖಾನಾಪೂರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಬೃಹತ್ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ಲ್ಯಾಬ್ ಕಾಮಗಾರಿಗೆ ಪೂಜೆ ಸಲ್ಲಿಸಿ ಕಾಂಕ್ರೀಟ್ ಹಾಕುವ ಮೂಲಕ ಶಾಸಕಿ ಅಂಜಲಿ ನಿಂಬಾಳ್ಕರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾನಾಪೂರ ತಾಲೂಕಿಗೆ ಹೆಮ್ಮೆಯ ವಿಷಯವಾದ ಈ ಎಂಸಿಎಚ್ ಆಸ್ಪತ್ರೆಯ ಕೆಲಸ ಚಾಲನೆ ಇದೆ. 15 ಕೋಟಿ ರೂ. ವೆಚ್ಚದಲ್ಲಿ 60 ಬೆಡ್ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಈ ಕೆಲಸದ ಸ್ಲ್ಯಾಬ್ ಹಾಕುವ ಕಾರ್ಯಕ್ರಮದ ಪೂಜೆ ನೇರವಿರಿಸಿದ್ದೇವೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ, ಆಶೀರ್ವಾದಬೇಕು. ಏಕೆಂದರೆ ಇದು ತಾಲೂಕಿಗೆ ಹೆಮ್ಮೆಯ ವಿಷಯ ದೊಡ್ಡ ಆಸ್ಪತ್ರೆ ನಾನು ಒಬ್ಬ ಸ್ತ್ರೀ ವೈದ್ಯೆಯಾಗಿರುವುದರಿಂದ ನನಗೂ ಹೆಮ್ಮೆಯ ವಿಷಯ ಎಂದಿದ್ದಾರೆ. ಇದನ್ನೂ ಓದಿ: ನಾಳೆಯಿಂದ ಥಿಯೇಟರ್ ಹೌಸ್ ಫುಲ್- ಸರ್ಕಾರದಿಂದ ಅನುಮತಿ
ಖಾನಾಪೂರ ತಾಲೂಕಿನಲ್ಲಿ ಬಡಜನರಿದ್ದಾರೆ. ಅವರಿಗೆ ಬೆಳಗಾವಿಗೆ ಹೋಗಿ ಹೆರಿಗೆ ಮಾಡಿಸಿಕೊಳ್ಳಲು ಕಷ್ಟವಾಗುತ್ತಿತ್ತು. ಇದನ್ನು ಗಮನಿಸಿ ಈ ಸುಸಜ್ಜಿತವಾದ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ವೈದ್ಯೆಯಾಗಿರುವ ನನಗೆ ಜನ ಶಾಸಕಿ ಮಾಡಿ ಆಶಿರ್ವಾದ ನೀಡಿದ್ದಾರೆ. ಅವರು ನೀಡಿದ ಆಶಿರ್ವಾದಕ್ಕೆ ಚಿರಋಣಿ. ಇನ್ನು ಸ್ವಲ್ಪ ತಿಂಗಳಿನಲ್ಲಿ ಇದನ್ನು ಲೋಕಾರ್ಪಣೆ ಮಾಡಿ ಸಾರ್ವಜನಿಕರಿಗೆ ಸಮರ್ಪಿಸಲಾಗುವುದು. ಈ ಮೂಲಕ ತಾಯಿ ಮತ್ತು ಮಕ್ಕಳ ಆರೈಕೆಗೆ ಹೆಚ್ಚಿನ ಒತ್ತು ನೀಡುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಕ್ಸಲ್ ನಿಗ್ರಹ ದಳ ಸಿಬ್ಬಂದಿಗೆ ವಿಶೇಷ ಆಹಾರ ಭತ್ಯೆ ಹೆಚ್ಚಿಸಿದ ಸರ್ಕಾರ
ಬೆಳಗಾವಿ: ಮರಾಠಿ ಭಾಷೆಯಲ್ಲಿ ಮಾಹಿತಿ ನೀಡಲು ಸೂಚನೆ ನೀಡಿದ ಖಾನಾಪುರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ವಿರುದ್ಧ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಗ್ರಾಮ ಒನ್ ಕೇಂದ್ರದ ಉದ್ಘಾಟನೆ ವೇಳೆ ಶಾಸಕಿ ಅಂಜಲಿ ನಿಂಬಾಳ್ಕರ್ ಮರಾಠಿ ಭಾಷೆಯಲ್ಲಿ ಮಾಹಿತಿ ನೀಡಲು ಸೂಚನೆ ನೀಡಿರುವ ವೀಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕಿಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
It’s Simple…
All schemes of Govt. to be displayed in Kannada as well as Marathi language at all Gram One centres in Khanapur Taluka.
— ???? | Prasad | ಪ್ರಸಾದ್ | ಘನ ನೀಲಿ ???????? | ???? (@Manjina_Hani) January 30, 2022
ಖಾನಾಪುರ ತಾಲೂಕಿನಲ್ಲಿ ಮರಾಠಿ, ಕನ್ನಡ ಎರಡು ಭಾಷೆಯ ಜನರಿದ್ದಾರೆ. ಸಾಕಷ್ಟು ಜನರಿಗೆ ಕನ್ನಡ ಭಾಷೆ ಅರ್ಥ ಆಗಲ್ಲ. ಅವರು ಈಗ ಕನ್ನಡ ಅಭ್ಯಾಸ ಮಾಡುತ್ತಿದ್ದಾರೆ, ಕಲಿಯಲು ಸಹ ಮುಂದೆ ಬಂದಿದ್ದಾರೆ. ನಾವು ಜನ ಸೇವೆ ಮಾಡುತ್ತಿದ್ದು ಜನರಿಗೆ ತಿಳಿಯುವ ಭಾಷೆಯಲ್ಲಿ ಹೇಳಬೇಕು. ಅದಕ್ಕೆ ಕನ್ನಡ ಭಾಷೆ ಜೊತೆ ಮರಾಠಿ ಭಾಷೆಗಳ ಫಲಕ ಹಾಕಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಆರೋಗ್ಯ ಕಾರ್ಯಕರ್ತರು ಸೇನಾನಿಗಳಂತೆ ಕೆಲಸ ಮಾಡಿದ್ದಾರೆ: ಕೋವಿಂದ್
ಮೇಡಂ ನಿಮಗೆ ನಮ್ಮ ಕೆಲ ಪ್ರಶ್ನೆಗಳಿವೆ :
– ಕಳೆದ ಅರವತ್ತು ವರ್ಷಗಳಿಂದ ಕರ್ನಾಟಕದಲ್ಲಿದ್ದು ಕನ್ನಡ ಕಲಿಯದೇ ಇರುವುದು ಯಾರ ತಪ್ಪು ?
– ಮರಾಠಿ ಮಾಧ್ಯಮದಲ್ಲಿ ಓದಿದವರು, ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿತಿರುತ್ತಾರೆ. ಹಾಗಾದ್ರೆ ಅವರಿಗೆ ಕನ್ನಡ ಬರಲ್ವಾ ಅಥವಾ ಕನ್ನಡ ಬಂದ್ರು ಮಾತನಾಡದೇ ಇರೋದಾ?
ಇದೀಗ ಶಾಸಕಿ ಅಂಜಲಿ ನಿಂಬಾಳ್ಕರ್ ವೀಡಿಯೋ ಟ್ವೀಟ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಶಾಸಕಿಯನ್ನು ತರಾಟೆಗೆ ತೆಗೆದುಕೊಂಡಿರುವ ಕನ್ನಡಿಗರು ಕಳೆದ 60 ವರ್ಷಗಳಿಂದ ಕರ್ನಾಟಕದಲ್ಲಿ ಇದ್ದು ಕನ್ನಡದಲ್ಲಿ ಕಲಿಯದೇ ಇರೋದು ಯಾರ ತಪ್ಪು ಎಂದು ಟೀಕಿಸಿದ್ದಾರೆ. ಮಹಾರಾಷ್ಟ್ರದ ಕನ್ನಡ ಪ್ರದೇಶಗಳಲ್ಲಿ ಮಹಾರಾಷ್ಟ್ರ ಸರ್ಕಾರ ಕನ್ನಡದಲ್ಲಿ ಸೇವೆ ನೀಡುತ್ತಿದ್ದಾರಾ? ಮಹಾರಾಷ್ಟ್ರದಲ್ಲಿ ಕನ್ನಡ ಶಾಲೆಗಳ ಮೇಲೆ ಯಾವ ರೀತಿ ದರ್ಪ ತೋರುತ್ತಿದ್ದಾರೆ ನಿಮಗೆ ಗೊತ್ತಾ ಎಂದು ಹಲವರು ಪ್ರಶ್ನಿಸಿದ್ದಾರೆ.
ಬೆಳಗಾವಿ: ಖಾನಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿ, ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಖಾನಾಪುರದಿಂದ ಬೆಳಗಾವಿ ಸುವರ್ಣವಿಧಾನಸೌಧವರೆಗೆ 40 ಕಿ.ಮೀ. ಪಾದಯಾತ್ರೆ ನಡೆಸಿದರು. ಅಂಜಲಿ ನಿಂಬಾಳ್ಕರ್ ಅವರ ಹೋರಾಟಕ್ಕೆ ಇಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ, ಪುತ್ರ ಯತೀಂದ್ರ ಸಿದ್ದರಾಮಯ್ಯ, ಶಾಸಕ ಗಣೇಶ್ ಹುಕ್ಕೇರಿ ಸೇರಿದಂತೆ ವಿವಿಧ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.
ನಿನ್ನೆ ಮಧ್ಯಾಹ್ನ 3ಕ್ಕೆ ಖಾನಾಪುರ ಪಟ್ಟಣದಿಂದ ಪಾದಯಾತ್ರೆ ಆರಂಭಿಸಿದ್ದ ಅಂಜಲಿ ನಿಂಬಾಳ್ಕರ್ ಅವರು ಯಳ್ಳೂರು ಗ್ರಾಮದ ಸರ್ಕಾರಿ ಮರಾಠಿ ಶಾಲೆಯಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ಯಳ್ಳೂರು ಗ್ರಾಮದಿಂದ ಮತ್ತೆ ಪಾದಯಾತ್ರೆ ಮುಂದುವರಿಸಿದ ಅವರು ಬೆಳಗಾವಿಯ ಹಲಗಾ ಕ್ರಾಸ್ ತಲುಪುತ್ತಿದ್ದಂತೆಯೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸಾಥ್ ನೀಡಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಬಳಿಕ ಲವ್ ಜಿಹಾದ್ ನಿಷೇಧ ಕಾಯ್ದೆ: ಸುನಿಲ್ ಕುಮಾರ್
ಎನ್‍ಹೆಚ್ 4 ಸರ್ವೀಸ್ ರಸ್ತೆ ಮೂಲಕ ಸುವರ್ಣಸೌಧದತ್ತ ಸಾಗಿರುವ ಪಾದಯಾತ್ರೆಯಲ್ಲಿ ಕಾರ್ಯಕರ್ತರು, ಸಿದ್ದರಾಮಯ್ಯ ಪರ ಘೋಷಣೆ ಹಾಕಿ, ಬಿಜೆಪಿ ಸರ್ಕಾರ ವಿರುದ್ಧ ಘೋಷಣೆ ಕೂಗಿದರು.
ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ, ಅಂಜಲಿ ನಿಂಬಾಳ್ಕರ್ ಕ್ಷೇತ್ರದ ಸಮಸ್ಯೆಗಳನ್ನು ಮುಂದಿಟ್ಟುಕೊಟ್ಟು ಪಾದಯಾತ್ರೆ ಮಾಡುತ್ತಿದ್ದಾರೆ. ನಿನ್ನೆಯಿಂದ ಪಾದಯಾತ್ರೆ ಆರಂಭವಾಗಿದೆ. ಸರ್ಕಾರದ ಗಮನ ಸೆಳೆಯಲು ಪಾದಯಾತ್ರೆ ಮಾಡುತ್ತಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಕ್ಷೇತ್ರದ ಜನರಿಗೆ ಪರಿಹಾರವನ್ನು ಕೊಡಿಸಲು, ನಿದ್ದೆ ಮಾಡುತ್ತಿರುವ ಸರ್ಕಾರವನ್ನು ಎಚ್ಚರಿಸಲು ಪಾದಯಾತ್ರೆ ಮಾಡುತ್ತಿದ್ದಾರೆ. ನಾನು ಹೋರಾಟದಲ್ಲಿ ಭಾಗಿಯಾಗಿ ಪಾದಯಾತ್ರೆಗೆ ಬೆಂಬಲ ಕೊಡುತ್ತಿದ್ದೇನೆ ಎಂದರು.
ಪೊಲೀಸರ ತಡೆ:
ಶಾಸಕಿ ಅಂಜಲಿ ನಿಂಬಾಳ್ಕರ್ ಜೊತ ಪಾದಯಾತ್ರೆ ಹೊರಟ ಸಿದ್ದರಾಮಯ್ಯ ಅವರನ್ನು ಸುವರ್ಣ ಗಾರ್ಡನ್ ಬಳಿ ಪೊಲೀಸರು ತಡೆದರು. ಆಗ ಪೊಲೀಸರಿಗೆ ಕ್ಲಾಸ್ ತಗೆದುಕೊಂಡ ಸಿದ್ದರಾಮಯ್ಯ ಅವರು ಹೋರಾಟ ತಡೆಹಿಡಿಯದಂತೆ ಎಚ್ಚರಿಸಿದರು. ಇದನ್ನೂ ಓದಿ: ಉಭಯ ಸದನಗಳಲ್ಲೂ ‘ಅಪ್ಪು’ ಗುಣಗಾನ
ಪುತ್ರ ಹಾಗೂ ಶಾಸಕ ಯತೀಂದ್ರಗೆ ತಳ್ಳಾಟ ಮಾಡಿದ ವೇಳೆ ಪ್ರತಿಭಟನಾಕಾರರ ತಡೆದ ಪೊಲೀಸರಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ, ಮ್ಯಾನ್ ಹ್ಯಾಂಡ್ಲಿಂಗ್ ಮಾಡ್ತೀಯಾ. ಸದನದಲ್ಲಿ ನಿನ್ನ ವಿರುದ್ದ ಹಕ್ಕುಚ್ಯುತಿ ಮಂಡನೆ ಮಾಡ್ತೀನಿ ಎಂದರು. ಬಳಿಕ ಸುವರ್ಣ ಗಾರ್ಡನ್ ಬಳಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಸಿದ್ದರಾಮಯ್ಯ ಹಾಗೂ ಅಂಜಲಿ ನಿಂಬಾಳ್ಕರ್ ಭಾಷಣ ಮಾಡಿದರು.
ರಾಜ್ಯ ಸರ್ಕಾರ ನಿದ್ದೆ ಮಾಡುತ್ತಿದೆ – ಸಿದ್ದರಾಮಯ್ಯ:
ಖಾನಾಪುರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳ್ಕರ್ ಸುವರ್ಣಸೌಧದವರೆಗೂ ಸುವರ್ಣಸೌಧ ಚಲೋ ಮೂಲಕ ಪಾದಯಾತ್ರೆ ಮಾಡಿದ್ದಾರೆ. ರಾಜ್ಯದಲ್ಲಿ ಇವತ್ತು ನಿದ್ರೆ ಮಾಡುತ್ತಿರುವ ಸರ್ಕಾರ ಇದೆ. ಎಷ್ಟೇ ಸಾರಿ ಸಮಸ್ಯೆಗಳನ್ನ ಸರ್ಕಾರದ ಗಮನಕ್ಕೆ ತಂದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಖಾನಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಶಾಸಕಿ @DrAnjaliTai ಅವರು ಹಮ್ಮಿಕೊಂಡಿದ್ದ ಖಾನಾಪುರದಿಂದ ಸುವರ್ಣ ಸೌಧದವರೆಗಿನ ಪಾದಯಾತ್ರೆಯಲ್ಲಿ ಭಾಗವಹಿಸಿದೆ. ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಗಣೇಶ್ ಹುಕ್ಕೇರಿ ಸೇರಿದಂತೆ ಹಲವು ಮಂದಿ ಪಾಲ್ಗೊಂಡು ಹೋರಾಟಕ್ಕೆ ಬೆಂಬಲ ಸೂಚಿಸಿದರು. pic.twitter.com/VMoSZuCarK
ಬಿಜೆಪಿಯವರು ಅಧಿಕಾರಕ್ಕೆ ಬಂದ ಮೇಲೆ ಪ್ರವಾಹ, ಅತಿವೃಷ್ಠಿ ಹಾಗೂ ಬರ ರಾಜ್ಯವನ್ನು ಕಾಡ್ತಾ ಇದೆ. 2019ರಲ್ಲಿ ಬಿಎಸ್‍ವೈ ಸಿಎಂ ಆದ ವೇಳೆ ಅತಿ ದೊಡ್ಡ ಪ್ರವಾಹ ಬಂತು. ಕಳೆದ ಮೂರು ವರ್ಷದಿಂದ ಸತತವಾಗಿ ಪ್ರವಾಹ ಬಂದಿದೆ. ನಾನು ಸಹ ಖಾನಾಪುರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದೆ. ಪ್ರವಾಹ ಪೀಡಿತರಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದೆವು. ಆದ್ರೆ 31 ಜಿಲ್ಲೆಗಳ ಪೈಕಿ 21 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿ ಹಾನಿಯಾಗಿದೆ. 31 ಲಕ್ಷ ಎಕರೆ ಪ್ರದೇಶದಲ್ಲಿನ ಬೆಳೆ ನಷ್ಟ ಆಗಿದೆ. ಶೇಕಡಾ 75 ರಷ್ಟು ಬೆಳೆ ಹಾನಿಯಾಗಿದೆ. ಭತ್ತ, ರಾಗಿ, ಶೇಂಗಾ ಬೆಳೆ ಹಾನಿಗೀಡಾಗಿದೆ ಎಂದರು.
ನಮ್ಮ ಸರ್ಕಾರ ಇದ್ದಾಗ ಎಲ್ಲ ಬೆಳೆ ಹಾನಿಗೆ ಪರಿಹಾರ ನೀಡಿದ್ದೇವೆ. ಈಗ ಬಿಡಿಗಾಸು ಪರಿಹಾರ ನೀಡುತ್ತಿದ್ದಾರೆ. ಪರಿಹಾರ ವಿತರಣೆಗೆ ಸರ್ಕಾರದಿಂದ ಒಂದೇ ಒಂದು ರೂಪಾಯಿ ಬಂದಿಲ್ಲ. ಇವರ ಸರ್ಕಾರ ಬಂದ ಮೇಲೆ 2019ರಲ್ಲಿ ಬಿದ್ದ ಮನೆಗಳಿಗೂ ಪರಿಹಾರ ಬಂದಿಲ್ಲ. ಸರಿಯಾದ ರೀತಿಯಲ್ಲಿ ಸರ್ವೆ ಸಹ ಮಾಡುತ್ತಿಲ್ಲ. ನಾವು ಮಾಡಿದ ಯೋಜನೆಗಳನ್ನ ಈ ಸರ್ಕಾರ ನಿಲ್ಲಿಸಿಬಿಟ್ಟಿದೆ. ನಮ್ಮ ಸರ್ಕಾರ ಇದ್ದಾಗ ಜಾರಿ ಮಾಡಿದ ಭಾಗ್ಯಗಳನ್ನ ಈ ಸರ್ಕಾರ ಬಂದ್ ಮಾಡಿದೆ. ಈ ಸರ್ಕಾರ ಕಿವುಡರ ರೀತಿ ವರ್ತಿಸುತ್ತಿದೆ. ಈ ಸರ್ಕಾರದ್ದು ದಪ್ಪ ಚರ್ಮ ಇದೆ. ಇದು ಲಜ್ಜೆಗೆಟ್ಟ ಸರ್ಕಾರ ಎಂದು ಹೇಳಿ, ಪ್ರವಾಹ ಪರಿಸ್ಥಿತಿಯ ಬಗ್ಗೆ ಸದನದಲ್ಲಿ ಮಾತನಾಡುತ್ತೇನೆ ಎಂದರು. ಇದನ್ನೂ ಓದಿ: ಬೆಳಗಾವಿಯಿಂದ ‘ಸುಶಾಸನ ಸಂಗಮ’ಕ್ಕೆ ವಾರಾಣಸಿಗೆ ಹೊರಟ ಸಿಎಂ ಬೊಮ್ಮಾಯಿ
ಖಾನಾಪುರ ಜನರಿಗೆ ನ್ಯಾಯ ಒದಗಿಸಿಕೊಂಡಲು ಹೋರಾಟ ಮಾಡುವೆ. ಭಂಡರ ತರಹ ಇವರು ಕುರ್ಚಿಗೆ ಅಂಟಿಕೊಂಡಿದ್ದಾರೆ. ಕುರ್ಚಿ ಬಿಟ್ಟು ತೊಲಗಿ ಎಂದು ರಾಜ್ಯ ಸರ್ಕಾರಕ್ಕೆ ತಿವಿದರು.
ಇದೇ ವೇಳೆ ಮಾತನಾಡಿದ ಶಾಸಕಿ ಅಂಜಲಿ ನಿಂಬಾಳ್ಕರ್, ಖಾನಾಪುರ ಕ್ಷೇತ್ರದ ವಿವಿಧ ಬೇಡಿಕೆಗಳನ್ನ ಈಡೇರಿಸಬೇಕು. ರೈತರ ಬೆಳೆ ಹಾನಿಗೆ ಪ್ರತಿ ಎಕರೆಗೆ 50 ಸಾವಿರ ರೂಪಾಯಿ ಪರಿಹಾರ ನೀಡಬೇಕು. ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಪ್ರವಾಹ ಸಂದರ್ಭದಲ್ಲಿ ಬಿದ್ದ ಮನೆಗಳಿಗೆ ಪರಿಹಾರ ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ನಾಳೆ ಬೆಳಗಾವಿ ಬಂದ್‍ಗೆ MES ಕರೆ – ಬಂದ್‍ಗೆ ಅವಕಾಶ ಕೊಡಲ್ಲ ಎಂದ ಕರ್ನಾಟಕ ಪೊಲೀಸ್
ಅಂಜಲಿ ನಿಂಬಾಳ್ಕರ್ ಪಾದಯಾತ್ರೆಗೆ ತಡವಾಗಿ ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಹಸಿರು ಶಾಲು ಹಾಕಿ ಅಂಜಲಿ ನಿಂಬಾಳ್ಕರ್ ಸ್ವಾಗತಿಸಿದರು. ವಿಪಕ್ಷ ನಾಯಕ ಸಿದ್ದರಾಮಯ್ಯ ಸದನದ ಒಳಗೆ ಗಮನ ಸೆಳೆಯೋದಾಗಿ ಹೇಳಿದ್ದಾರೆ. ಸ್ಮಾರ್ಟ್ ಸಿಟಿಯಲ್ಲಿ ಆದ ಅವ್ಯವಹಾರ ಬಗ್ಗೆ ಸರ್ಕಾರ ಗಮನ ಸೆಳೆಯಲು ನಮ್ಮ ಎಲ್ಲಾ ಶಾಸಕರು ಪ್ರಯತ್ನ ಮಾಡುತ್ತೇವೆ. ನೆರೆ ಪರಿಹಾರಕ್ಕೆ ಪಕ್ಷಾತೀತವಾಗಿ ಎಲ್ಲಾ ಶಾಸಕರ ಹೋರಾಟ ಮಾಡುತ್ತೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿ: ದಸರಾ ಹಿನ್ನೆಲೆ ಜಿಲ್ಲೆಯ ಜಳಗಾ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ದುರ್ಗಾದೇವಿ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಖಾನಾಪುರ ಶಾಸಕಿ ಅಂಜಳಿ ನಿಂಬಾಳ್ಕರ್ ಮಹಿಳೆಯರೊಂದಿಗೆ ದಾಂಡಿಯಾ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದಾರೆ.
ದಸರಾ ಪ್ರಯುಕ್ತ ಜಳಗಾ ಗ್ರಾಮದಲ್ಲಿ ದುರ್ಗಾದೇವಿಯನ್ನು ಪ್ರತಿಷ್ಠಾಪಿಸಲಾಗಿತ್ತು. ನವರಾತ್ರಿ ಹಬ್ಬದ ಹತ್ತನೇ ದಿನ ವಿಜಯ ದಶಮಿಯನ್ನು ಆಚರಿಸಲಾಗುತ್ತದೆ. 10 ದಿನಗಳ ಕಾಲ ದುರ್ಗಾದೇವಿಯನ್ನು ಪೂಜಿಸಿ ಇಂದು ವಿಸರ್ಜನೆ ಕಾರ್ಯಕ್ರಮ ಗ್ರಾಮದಲ್ಲಿ ನಡೆಯುತ್ತಿತ್ತು. ಈ ಕಾರ್ಯಕ್ರಮದಲ್ಲಿ ನಿಂಬಾಳ್ಕರ್ ಭಾಗವಹಿಸಿದ್ದಾರೆ. ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರಿನ ಜಂಬೂಸವಾರಿ ಆರಂಭ
ದುರ್ಗಾದೇವಿಯ ವಿಸರ್ಜನಾ ಮೆರವಣಿಗೆಯಲ್ಲಿ ಮಹಿಳೆಯರು ದಾಂಡಿಯ ನೃತ್ಯ ಮಾಡುತ್ತಿದ್ದರು. ಈ ವೇಳೆ ಅವರೊಂದಿಗೆ ಸೇರಿಕೊಂಡ ಅಂಜಲಿ ನಿಂಬಾಳ್ಕರ್ ಕೂಡ ದಾಂಡಿಯಾ ಸ್ಟೆಪ್ಸ್ ಹಾಕಿ ಮೆರವಣಿಗೆಯಲ್ಲಿ ಪಾಲ್ಗೊಂಡರು. ಇದನ್ನೂ ಓದಿ: 16 ಕೆ.ಜಿ ಚಿನ್ನದ ಸೀರೆ ಉಡಿಸಿ ಮಹಾಲಕ್ಷ್ಮಿ ದೇವಿಗೆ ಅಲಂಕಾರ
ಬೆಳಗಾವಿ: ಮದುವೆಯಾದ ಬಳಿಕ ಒಂಟಿಯಾಗಿ ಜೀವಿಸುತ್ತಿರುವುದು ಅವರ ನಾಯಕ. ಒಂಟಿಯಾಗಿ ಜೀವಿಸುವ ಅವರ ನಾಯಕ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಏನಾದರೂ ಪ್ರತಿಕ್ರಿಯೆಗಳಿವೆಯಾ ಎಂದು ಸಚಿವ ಡಾ. ಕೆ ಸುಧಾಕರ್ ಅವರಿಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಶ್ನಿಸಿದ್ದಾರೆ.
ಆಧುನಿಕ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವರ ವಿರುದ್ಧ ಅಂಜಲಿ ನಿಂಬಾಳ್ಕರ್ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಇಂತಹ ಪುರುಷರಿಗೆ ಆಪ್ತ ಸಮಾಲೋಚನೆಯ ಅವಶ್ಯವಿದೆ. ವಿಶ್ವ ಮಾನಸಿಕ ಆರೋಗ್ಯ ದಿನದಂದು ಆಪ್ತ ಸಮಾಲೋಚನೆಯ ಅವಶ್ಯವಿದೆ. ಆಧುನಿಕ ಮಹಿಳೆ ತನಗೆ ಇಷ್ಟ ಬಂದಂತೆ ಜೀವಿಸಲಿ. ಇದನ್ನ ಬೇರೆಯವರು ನಿರ್ಧರಿಸೋದಲ್ಲ ಆಕೆಯೇ ನಿರ್ಧರಿಸಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಆಧುನಿಕ ಮಹಿಳೆಯರು ಮದುವೆ ಆದ್ರೆ ಮಕ್ಕಳನ್ನು ಹೆರಲು ಬಯಸಲ್ಲ: ಸುಧಾಕರ್
ಸುಧಾಕರ್ ಹೇಳಿದ್ದೇನು..?
ಭಾನುವಾರ ನಿಮ್ಹಾನ್ಸ್ ನಲ್ಲಿ ನಡೆದ ಅಂತರರಾಷ್ಟ್ರೀಯ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಚಿವರು, ಕೂಡು ಕುಟುಂಬಗಳ ನಶಿಸುವಿಕೆ ವಿಚಾರ ಪ್ರಸ್ತಾಪ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.
Seriously!!! These men need counselling on World Mental Health Day.
Let her live with her choices no one can decide for her but herself…
ಮುತ್ತಾತ-ಮುತ್ತಜ್ಜಿ ಇರುವುದು ಬಿಡಿ, ನಾವು ನಮ್ಮ ಹೆತ್ತವರು ನಮ್ಮ ಜೊತೆಗೆ ಇರಲು ಬಯಸಲ್ಲ. ಇವತ್ತು ಇದನ್ನು ಹೇಳಲು ಬೇಸರ ಆಗುತ್ತೆ. ಭಾರತದಲ್ಲಿ ಬಹಳಷ್ಟು ಅಧುನಿಕ ಮಹಿಳೆಯರು ಒಂಟಿಯಾಗಿರಲು ಬಯಸ್ತಾರೆ. ಒಂದು ವೇಳೆ ಅವರು ಮದುವೆ ಆದರೂ ಅವರು ಜನ್ಮ ನೀಡಲು ಬಯಸಲ್ಲ. ಅವರು ಬೇರೆಯವರಿಂದ ಮಗು ಹೆರಲು ಇಷ್ಟಪಡುತ್ತಾಳೆ. ಹೀಗಾಗಿ ನಮ್ಮ ಆಲೋಚನೆಯಲ್ಲಿ ವಿಚಿತ್ರ ಬದಲಾವಣೆ ಆಗಿದೆ, ಅದು ಒಳ್ಳೆಯದಲ್ಲ ಎಂದಿದ್ದರು. ಇದನ್ನೂ ಓದಿ: ಕೊಟ್ಟ ಮಾತಿನಂತೆ ನಡೆದುಕೊಂಡ ರೇಣುಕಾಚಾರ್ಯ – ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಸಹಾಯ
ಬಹಳ ಮಹಿಳೆಯರು ಮದುವೆಯಾದರೂ ಮಕ್ಕಳಿಗೆ ಜನ್ಮ ಕೊಡಲು ಹಿಂಜರಿಯುತ್ತಾರೆ. ಅದರ ಬದಲು ಬಾಡಿಗೆ ತಾಯಂದಿರಿಂದ ಮಕ್ಕಳನ್ನು ಪಡೆಯುತ್ತಾರೆ. ಅವರ ಆಲೋಚನೆಯ ದೃಷ್ಟಿಕೋನವೇ ಸಂಪೂರ್ಣ ಬದಲಾಗಿದೆ. ಇಂತಹ ದೃಷ್ಟಿಕೋನ ಸೂಕ್ತವಲ್ಲ ಎಂದು ಸಚಿವರು ಹೇಳಿದ್ದರು.
ಬೆಳಗಾವಿ: ಕಳೆದ ಮೂರು ವರ್ಷಗಳ ಹಿಂದೆ ಖಾನಾಪೂರ ತಾಲೂಕಿಗೆ ಮಂಜೂರಾಗಿದ್ದ ಡಿಗ್ರಿ ಕಾಲೇಜು, ಗದಗಿಗೆ ಸ್ಥಳಾಂತರಗೊಂಡಿತ್ತು. ಅದನ್ನು ಮತ್ತೆ ಖಾನಾಪೂರ ತಾಲೂಕಿಗೆ ತಂದು ವಿದ್ಯಾರ್ಥಿಗಳಿಗೆ ಸಮರ್ಪಣೆ ಮಾಡುವುದರಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಯಶಸ್ವಿ ಆಗಿದ್ದಾರೆ.
ಈ ಹಿಂದೆ ಖಾನಾಪುರ ತಾಲೂಕಿಗೆ ಮಂಜೂರಾಗಿದ್ದ ಸರ್ಕಾರಿ ಡಿಗ್ರಿ ಕಾಲೇಜು ಗದಗ್‍ಗೆ ಸ್ಥಳಾಂತರಗೊಂಡಿತ್ತು. ಅದನ್ನು ಮಾಜಿ ಸಚಿವ ಎಚ್.ಕೆ ಪಾಟೀಲ್ ಸಹಾಯದಿಂದ ಮತ್ತೆ ಖಾನಾಪುರ ತಾಲೂಕಿಗೆ ತರುವಲ್ಲಿ ಡಾ. ಅಂಜಲಿ ನಿಂಬಾಳ್ಕರ್ ಯಶಸ್ವಿಯಾಗಿದ್ದಾರೆ.
ಈ ಕುರಿತು ಸ್ವತಃ ಅಂಜಲಿ ನಿಂಬಾಳ್ಕರ್ ಮಾತನಾಡಿ, ತಾಲೂಕಿನ ಬೀಡಿ ಗ್ರಾಮದ ಹೊರವಲಯದಲ್ಲಿ ಡಿಗ್ರಿ ಕಾಲೇಜು ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಂದರ್ಭದಲ್ಲಿ, ಎರಡು ಕೋಟಿಯ ಅನುದಾನ ಕೂಡಾ ಮಂಜುರಾತಿ ಮಾಡಿಸಿಕೊಂಡು ಬಂದಿರುವುದಾಗಿ ಹೇಳಿದರು. ಇದನ್ನೂ ಓದಿ: ಯುಕೆ ಮಾರ್ಗಸೂಚಿ ಬದಲಾವಣೆ – ಅ.11ರಿಂದ ಲಸಿಕೆ ಪಡೆದ ಭಾರತೀಯರಿಗಿಲ್ಲ ಕ್ವಾರಂಟೈನ್