Tag: Anjeyanadri Hill

  • ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿದ ಚಂದನ್ ಶೆಟ್ಟಿ

    ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿದ ಚಂದನ್ ಶೆಟ್ಟಿ

    ಕೊಪ್ಪಳ: ರ‍್ಯಾಪರ್ ಹಾಗೂ ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿದ್ದಾರೆ.

    ಚಂದನ್ ಶೆಟ್ಟಿ ಹೊಸಪೇಟೆಯಲ್ಲಿ ನೂತನ ಸಿನಿಮಾ ಪ್ರೊಡಕ್ಷನ್ ಹೌಸ್ ಓಪನಿಂಗ್‍ಗೆ ಬಂದಿದ್ದರು. ಈ ವೇಳೆ ಅವರು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಹನುಮ ಜನಿಸಿದ ನಾಡು ಎಂದೇ ಪ್ರಖ್ಯಾತಿ ಪಡೆದಿರುವ ಅಂಜನಾದ್ರಿ ಬೆಟ್ಟಕ್ಕೆ ಒಟ್ಟು 575 ಮೆಟ್ಟಿಲುಗಳಿದೆ. ಚಂದನ್ ಈ ಬೆಟ್ಟ ಹತ್ತಿ ಹನುಮನ ದರ್ಶನ ಪಡೆದಿದ್ದಾರೆ.

    ಕಳೆದ ತಿಂಗಳಷ್ಟೇ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಕೂಡ ಅಂಜನಾದ್ರಿ ಬೆಟ್ಟಗೆ ಭೇಟಿ ನೀಡಿ ಹನುಮನ ದರ್ಶನ ಪಡೆದಿದ್ದರು. ಅಂಜನಾದ್ರಿ ಬೆಟ್ಟಕ್ಕೆ ಈ ಹಿಂದೆ ಪ್ರಮುಖ ರಾಜಕಾರಣಿಗಳು ಹಾಗೂ ಸಿನಿಮಾ ಕಲಾವಿದರು ಗಳು ಭೇಟಿ ನೀಡಿದ್ದರು.

    ಸೋಮವಾರ ಚಂದನ್ ಶೆಟ್ಟಿ ತಮ್ಮ ಆತ್ಮೀಯ ಗೆಳತಿ ಬಾರ್ಬಿ ಗರ್ಲ್ ನಿವೇದಿತಾ ಗೌಡ ಜೊತೆ ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಶುಭ ಸಮಾರಂಭದಲ್ಲಿ ಎರಡೂ ಕುಟುಂಬದ ಸದಸ್ಯರು ಹಾಗೂ ಆಪ್ತರಷ್ಟೇ ಭಾಗಿಯಾಗಿದ್ದರು.

    ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಅಭಿಮಾನಿಗಳ ಮುಂದೆ ಗೆಳತಿ ನಿವೇದಿತಾರಿಗೆ ಪ್ರಪೋಸ್ ಮಾಡಿದ್ದರು. ವೇದಿಕೆಯಲ್ಲಿಯೇ ರಿಂಗ್ ತೊಡಿಸಿ ತಮ್ಮ ಪ್ರೇಮ ವಿಚಾರವನ್ನು ಚಂದನ್ ಅಧಿಕೃತವಾಗಿ ಹೇಳಿಕೊಂಡಿದ್ದರು. ಸೋಮವಾರ ಚಂದನ್, ನಿವೇದಿತಾಗೆ ಮತ್ತೊಮ್ಮೆ ರಿಂಗ್ ತೊಡಿಸಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

  • ಪ್ರಧಾನಿ ಮೋದಿ ಹಾದಿ ಅನುಸರಿಸಿದ ಸಚಿವ ಸುರೇಶ್ ಕುಮಾರ್

    ಪ್ರಧಾನಿ ಮೋದಿ ಹಾದಿ ಅನುಸರಿಸಿದ ಸಚಿವ ಸುರೇಶ್ ಕುಮಾರ್

    ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅನುಸರಿಸುತ್ತಿದ್ದಾರಾ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡಿದೆ.

    ಪ್ರಧಾನಿ ಮೋದಿ 2019ರ ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಕೇದಾರನಾಥ ದೇವಾಲಯ ಬಳಿಯ ಗುಹೆಯಲ್ಲಿ ಧ್ಯಾನ ಮಾಡಿದ್ದರು. ಈಗ ಸಚಿವ ಸುರೇಶ್ ಕುಮಾರ್ ಅವರು ಐತಿಹಾಸಿಕ ಹಿನ್ನೆಲೆಯುಳ್ಳ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತದ ಗುಹೆಯಲ್ಲಿ ಧ್ಯಾನ ಮಾಡಿದ್ದಾರೆ.

    ಸುರೇಶ್ ಕುಮಾರ್ ಅವರು ಶಿಕ್ಷಕರ ದಿನಾಚರಣೆ ನಿಮಿತ್ತ ಶುಕ್ರವಾರ ಕೊಪ್ಪಳದ ಗಂಗಾವತಿಗೆ ಆಗಮಿಸಿದ್ದರು. ಕಾರ್ಯಕ್ರಮದ ಬಳಿಕ ಸಚಿವರು ನೇರವಾಗಿ ಅಂಜನಾದ್ರಿ ಪರ್ವತದ ಕಡೆ ಪ್ರಯಾಣ ಬೆಳೆಸಿದರು. ಸಚಿವರು ಜೈ ಶ್ರೀರಾಮ್ ಎನ್ನುತ್ತ 575 ಮೆಟ್ಟಿಲುಗಳನ್ನು ಹತ್ತಿ ಆಂಜನೇಯನ ದರ್ಶನ ಪಡೆದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಹೆಸರಲ್ಲಿ ಪೂಜೆ ಸಲ್ಲಿಸಿದರು. ನಂತರ  ಅಂಜನಾದ್ರಿ ಬೆಟ್ಟದ ಮೇಲಿರುವ ಗುಹೆಯಲ್ಲಿ ಸುಮಾರು ಹತ್ತು ನಿಮಿಷಗಳ ಕಾಲ ಧ್ಯಾನ ಮಾಡಿದರು.

    ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಇದು ಐತಿಹಾಸಿಕ ಹಿನ್ನಲೆಯುಳ್ಳ ಸ್ಥಳವಾಗಿದ್ದು. ಹನುಮನ ಜನ್ಮಸ್ಥಳ ಕಿಷ್ಕಿಂದಾ ಎಂದೇ ಕರೆಯಲ್ಪಡುತ್ತದೆ. ತುಂಗಭದ್ರಾ ತೀರದಲ್ಲಿರುವ ಅಂಜನಾದ್ರಿ ಬೆಟ್ಟ ಗುಹೆಯಲ್ಲಿ ಧ್ಯಾನ ಮಾಡಿದರೆ ಸಕಲವು ಒಳ್ಳೆದಾಗುತ್ತದೆ ಎನ್ನುವ ಪ್ರತೀತಿ ಇದೆ. ಈ ಹಿಂದೆ ನರೇಂದ್ರ ಮೋದಿ ಅವರು ಪ್ರಧಾನಿ ಆಗುವ ಮುನ್ನ ಅವರ ಪತ್ನಿ ಜಶೋಧಾ ಬೇನ್ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ಇದು ಭಾರೀ ಸುದ್ದಿಯಾಗಿತ್ತು.

    ಜಿಲ್ಲೆಗೆ ಬರುವ ಬಹುತೇಕ ರಾಜಕಾರಣಿಗಳು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಆಂಜನೇಯನ ದರ್ಶನ ಪಡೆಯುತ್ತಾರೆ. ಈ ಹಿಂದೆ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಭೇಟಿ ನೀಡಿ, ಆಂಜನೇಯನ ದರ್ಶನ ಪಡೆದಿದ್ದರು.